Author: kannadanewsnow05

ಬೆಂಗಳೂರು : ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿಯಾಗಿ ಇಬ್ಬರು ಓಂಶಕ್ತಿ ಮಾಲಾಧಾರಿಗಳು ಗಂಭೀರ ಗಾಯಗೊಂಡ ಘಟನೆ ನೆಲಮಂಗಲದ ಬೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ಸಂಭವಿಸಿದೆ. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಚಾಲಕನ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ ಆರೋಪದ ಅಡಿ ಇದೀಗ FIR ದಾಖಲಾಗಿದೆ. ಅಪಘಾತಕ್ಕೆ ಇಳದಂತಹ KA  55 P 0003 ನಂಬರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಹಿನ್ನಲೆ ಇಂದು ಬೆಳಿಗ್ಗೆ ಬೆಂಗಳೂರು ತುಮಕೂರು ಹೆದ್ದಾರಿಯಲ್ಲಿ ಶಾಸಕರು ಸಂಚರಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆಸಿದೆ.ಮೂರು ಮಂದಿ ಮಾಲಾಧಾರಿಗಳಿಗೆ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಮಾಲಾಧಾರಿಗೆ ಗಂಭೀರ ಹಾನಿಯಾಗಿದೆ ಎನ್ನಲಾಗಿದೆ. ಶಾಸಕರು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಾಸಕರು ಚಿತ್ರದುರ್ಗದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದರು. ನೆಲಮಂಗಲ ಸಮೀಪ ಪಾದಯಾತ್ರೆ ಮೂಲಕ ಓಂ…

Read More

ಮಂಗಳೂರು : ಇತ್ತೀಚಿಗೆ ಚಿಕ್ಕ ಮಕ್ಕಳಿಂದ ಹಿಡಿದು ಯುವಕರು ವಯೋ ವೃದ್ಧರೆನ್ನದೇ ಹೃದಯಘಾತ, ಹೃದಯ ಸ್ತಂಭದಂತಹ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಆಟವಾಡುತ್ತಲೇ ಯುವಕನೋರ್ವ ಹೃದಯಘಾತಕ್ಕೀಡಾಗಿ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹೌದು ಮೃತ ಯುವಕನನ್ನು ಅತ್ತಾವರ್ ಐವರಿ ಟವರ್ ನಿವಾಸಿಯಾಗಿದ್ದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ ಎಂದು ತಿಳಿದುಬಂದಿದ್ದು, ಈತ ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಶಹೀಮ್ ಗೆಳೆಯರೊಂದಿಗೆ ಬುಧವಾರ ಶಟ್ಲ ಬ್ಯಾಡ್ಮಿಂಟನ್ ಆಟ ಆಡುತ್ತಿದ್ದರು ಎಂಗು ಹೇಳಲಾಗಿದ್ದು, ಈ ವೇಳೆ ಏಕಾಏಕಿ ಕೋರ್ಟ್ ಮೇಲೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಶಹೀಮ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶಹೀಮ್ ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದರು.

Read More

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಘೋರವಾದಂತ ದುರಂತ ಸಂಭವಿಸಿದ್ದು ತೆಂಗಿನಕಾಯಿ ಫ್ಯಾಕ್ಟರಿ ಎಲ್ಲಿ ನೀರಿನ ತ್ಯಾಜ್ಯ ಇರುವ ಗುಂಡಿಗೆ ಎರಡು ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ದುರಂತ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮೀಸೆತಿಮ್ಮನಹಳ್ಳಿ ಬಳಿ ಇರುವ ಮಾನ್ಯಶ್ರೀ ಕೋಕನೆಟ್ ಫ್ಯಾಕ್ಟರಿಯಲ್ಲಿ ನಡೆದಿದೆ. ಮೃತ ಮಗುವನ್ನು ಕುಸುಮ ಕುಮಾರಿ (2) ಎಂದು ತಿಳಿದುಬಂದಿದೆ. ಈಕೆಯು ಬಿಹಾರ ಮೂಲದ ತಂದೆ ಹರೀಂದ್ರಕುಮಾರ್ ಮತ್ತು ತಾಯಿ ರೀನಾದೇವಿ ಮಗಳು ಎಂದು ತಿಳಿದುಬಂದಿದೆ. ಬುಧವಾರ 2 ಗಂಟೆ ಸುಮಾರಿಗೆ ಆಟವಾಡುತ್ತಿದ್ದ ಮಗು ಕಾಣದೇ ಇದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾ. ಈ ಸಂದರ್ಭ ಗುಂಡಿ ಒಳಗೆ ಬಿದ್ದಿರುವುದನ್ನು ಗಮನಿಸಿ ಮಗುವನ್ನು ಮೇಲೆ ಎತ್ತಲಾಗಿದೆ. ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದೆ. ಘಟನೆ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಗದಗ : ಇಬ್ಬರೂ ಯುವಕರು 15 ವರ್ಷದ ಬಾಲಕಿಯ ಬೆನ್ನು ಹಿಂದೆ ಬಿದ್ದು ನನ್ನನ್ನು ಪ್ರೀತಿಸು ಎಂದು ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದ 15 ವರ್ಷದ ಬಾಲಕಿಯು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಬಣಗಾರ ಕಾಲೋನಿಯಲ್ಲಿ ನಡೆದಿದೆ. ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿಯನ್ನು ಖುಷಿ (15) ಎಂದು ತಿಳಿ ಬಂದಿದ್ದು ಹೀಗೆ 9ನೇ ತರಗತಿಯಲ್ಲಿ ಓದುತ್ತಿದ್ದಳು. ಅದೇ ಊರಿನವರ ಯುವಕರಾದ ಮುತ್ತುರಾಜ್ ಮ್ಯಾಗೇರಿ ಹಾಗೂ ಜುನೇದಸಾಬ್ ಕಂದಗಲ್ ಅವರ ಲವ್ ಕಿರುಕುಳದಿಂದ ಖುಷಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಇಬ್ಬರು ಸೇರಿ ಈ ಖುಷಿಯನ್ನು ಲವ್ ಮಾಡ್ತಿದ್ದರು. ಈ ವಿಷಯ ಗೊತ್ತಾಗಿ ಇಬ್ಬರಿಗೂ ತಾಕೀತು ಮಾಡಲಾಗಿತ್ತು. ಆದರೂ ಇಬ್ಬರು ಆಗಾಗ ಭೇಟಿಯಾಗಿ ಮಾತನಾಡಿ ಟಾರ್ಚರ್‌ ನೀಡುತ್ತಿದ್ದರು. ಈ ಟಾರ್ಚರ್‌ನಿಂದ ಬೇಸತ್ತು ಬಾಲಕಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ದೂರಿದ್ದಾರೆ. ಸದ್ಯ ಇಬ್ಬರು ಯುವಕರ…

Read More

ಕಲಬುರಗಿ : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದ ರಸ್ತೆ ಅಪಘಾತವಾಗಿದ್ದು ಚಾಲಕನ ನಿಯಂತ್ರಣ ತಪ್ಪಿ ಕಾರು ಒಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಚಲಿಸುತ್ತಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಯಲ್ಲಮ್ಮ ಗೇಟ್ ಸಮೀಪದಲ್ಲಿ ಬುಧವಾರ ನಡೆದಿದೆ. ಅಪಘಾತದಲ್ಲಿ ಮೃತ ಪಟ್ಟವರನ್ನು ಸೇಡಂ ತಾಲ್ಲೂಕಿನ ಮೀನಹಾಬಾಳ ಗ್ರಾಮದ ಯಲ್ಲಪ್ಪ ಹಳಿಮನಿ (45), ತೊಟ್ನಳ್ಳಿ ಗ್ರಾಮದ ಸದಾಶಿವ (65) ಮತ್ತು ಮೀನಹಾಬಾಳ ಗ್ರಾಮದ ಭೀಮಶಾ (44) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಮೀನಹಾಬಾಳ ಗ್ರಾಮದ ಮೌನೇಶ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ತಿಳಿದು ಬಂದಿದೆ. ನಾಲ್ವರು ಪ್ರಯಾಣಿಕರಿದ್ದ ಕಾರು ಚಿಂಚೋಳಿ ಮಾರ್ಗದಿಂದ ಸೇಡಂ ಕಡೆಗೆ ಹೊರಟಿತ್ತು ಎನ್ನಲಾಗಿದೆ. ವೇಗವಾಗಿ ಕಾರು ಚಲಾಯಿಸಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಪೊಲೀಸ್‌ ವರಿಷ್ಠಾಧಿಕಾರಿ ಅದ್ದೂರು ಶ್ರೀನಿವಾಸಲು, ಸೇಡಂ ಠಾಣೆಯ ಪೊಲೀಸ್…

Read More

ಚಿಕ್ಕಮಗಳೂರು : ಹುಟ್ಟಿದ ಎರಡೇ ದಿನಕ್ಕೆ ಮಗುವೊಂದು ತಾಯಿಗೆ ಬೇಡವಾಗಿದ್ದು, ಪಾಪಿ ತಾಯಿಯೊಬ್ಬಳು ತನ್ನ ಎರಡು ದಿನದ ಪುಟ್ಟ ಕಂದಮ್ಮನನ್ನು ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ. ಹೌದು ಚಂದ್ರಮ್ಮ ಎಂಬುವರ ಮನೆಯ ಪಕ್ಕದಲ್ಲಿರುವ ಕಾಫಿ ತೋಟದಲ್ಲಿ ಹುಟ್ಟಿದ ಎರಡೇ ದಿನಕ್ಕೆ ಪುಟ್ಟ ಕಂದಮ್ಮನನ್ನು ಹೆತ್ತ ತಾಯಿಯೇ ಬಿಟ್ಟು ಹೋಗಿದ್ದು, ಗುರುವಾರ ಬೆಳಗ್ಗಿನ ಜಾವ 6 ಗಂಟೆಯ ಸಮಯದಲ್ಲಿ ಮಗು ಅಳುವ ಸದ್ದು ಕೇಳಿಸಿದೆ. ಸುಮಾರು ಗಂಟೆಗಳವರೆಗೂ ಮಗು ಅಳುತ್ತಿರುವುದು ಕೇಳಿಸಿದೆ. ಈ ವೇಳೆ ಚಂದ್ರಮ್ಮ ತಮ್ಮ ಮಗಳೊಂದಿಗೆ ಸ್ಥಳಕ್ಕೆ ಬಂದು ನೋಡಿದಾಗ ತಾಯಿಯೊಬ್ಬಳು ಎರಡು ದಿನದ ಹಸುಗೂಸನ್ನು ಕಾಫಿ ತೋಟದಲ್ಲಿ ಬಿಟ್ಟಿರುವುದು ಬೆಳಕಿಗೆ ಬಂದಿದೆ. ಮಗುವನ್ನು ಕರೆತಂದು ತಮ್ಮ ಮನೆಯಲ್ಲಿ ಹಾಲು ಕುಡಿಸಿ ಆರೈಕೆ ಮಾಡಿದ್ದಾರೆ. ನಂತರ ಗ್ರಾಮದ ಆಯಾಗೆ ವಿಷಯ ತಿಳಿಸಿ ಸ್ಥಳಕ್ಕೆ ಡಾಕ್ಟರನ್ನು ಕರೆಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.ಸ್ಥಳಕ್ಕೆ ಬಂದ ಅಧಿಕಾರಿಗಳು ಮಗುವನ್ನು…

Read More

ಉಡುಪಿ : ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿಯೊಬ್ಬಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಲ್ಲಿ ನಡೆದಿದೆ.ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಕುಂದಾಪುರದ ಕೊರಗ ಎಂಬವರ ಮಗಳು ಹಾಗೂ ಗಂಗಾನಾಡು ನಿವಾಸಿ ವಿಷ್ಣು ಎಂಬವರ ಪತ್ನಿ ರಂಜಿತಾ (28) ಎಂದು ಗುರುತಿಸಲಾಗಿದೆ.ಇವರು ಜ.13ರಂದು ರಾತ್ರಿ ಮನೆಯಿಂದ ಹೋದವರು ನಾಪತ್ತೆಯಾಗಿದ್ದು, ಹುಡುಕಾಡಿ ದಾಗ ಆಕೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

Read More

ರಾಯಚೂರು : ಮನೆಯಲ್ಲೇ ಅಕ್ರಮವಾಗಿ ಕೆಮಿಕಲ್ ನಿಂದ ಸೆಂದಿ ತಯ್ಯಾರಿಸುತ್ತಿದ್ದ ವೇಳೆ ಮನೆಯ ಮೇಲೆ ದಾಳಿ ಮಾಡಿದ ಪೊಲೀಸರು ಸುಮಾರು 300 ಲೀಟರ್ ಕೆಮಿಕಲ್ ಹಾಗೂ ಸೆಂದಿ ಜಪ್ತಿ ಮಾಡಿದ್ದು ಅಲ್ಲದೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ನಗರದ ಮಂಗಳವಾರ ಪೇಟೆ ಬಡಾವಣೆಯಲ್ಲಿ ಈ ದಾಳಿ ನಡೆದಿದೆ. ರವಿ, ವಿಶ್ವನಾಥ, ಮಾರೆಪ್ಪ ಎಂಬುವರ ಮನೆಗಳ ಮೇಲೆ ದಾಳಿ ನಡೆಸುವ ಮೂಲಕ ಶೋಧ ಮಾಡಿದ್ದು, ಈ ವೇಳೆ ಕೆಮಿಕಲ್ ಸೇಂದಿ ಪತ್ತೆಯಾಗಿದೆ. ನೀರಿನ ಬಾಟಲ್​ನಲ್ಲಿ ತುಂಬಿ ಇಡಲಾಗಿದ್ದ ಸುಮಾರು 300 ಲೀಟರ್ ಕೆಮಿಕಲ್ ಸೇಂದಿ ಕಂಡು ಬಂದಿದ್ದು, ಸೇಂದಿ ಜಪ್ತಿ ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಬಕಾರಿ ಪೊಲೀಸರು ತಿಳಿಸಿದ್ದಾರೆ.

Read More

ಹಾಸನ : ರೆಸಾರ್ಟ್ ಮಾಲೀಕನೊಬ್ಬ ಕ್ಷುಲ್ಲಕ ಕಾರಣಕ್ಕೆ ಸಿಬ್ಬಂದಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಿಳಿಸಾರೆ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ರೆಸಾರ್ಟ್ ಸಿಬ್ಬಂದಿ ಕಿರಣ್ ಕುಮಾರ್ ಅವರ ಮೇಲೆ ಹಲ್ಲೆಯ ಆರೋಪ ಕೇಳಿಬಂದಿದೆ. ಮಾಲೀಕ ವಿಜಯಕುಮಾರ್ ಎಂಬಾತ ಕಾರ್ಮಿಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಮಾಲೀಕನಿಂದ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದೆ. ಹಾಸನದ ಸಕಲೇಶಪುರದ ಬಿಳಿಸಾರೆ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಹಲ್ಲೆಯ ಸಂಬಂಧ ರೆಸಾರ್ಟ್ ಮಾಲೀಕ ವಿಜಯಕುಮಾರ್ ಮೇಲೆ FIR ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಮುಂಬೈ : ಇಂದು ಬೆಳಗಿನ ಜಾವ ಮುಂಬೈನ ಬಾಂದ್ರಾದ ಸತ್ಗುರು ಶರಣ್ ಕಟ್ಟಡದಲ್ಲಿರುವ ತಮ್ಮ ನಿವಾಸದಲ್ಲಿ  ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ಹಲ್ಲೆ ಮಾಡಿ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಓರ್ವ ಆರೋಪಿಯ ಗುರುತು ಪತ್ತೆಯಾಗಿದೆ ಎಂದು ಮುಂಬೈ ವಲಯ ಡಿಸಿಪಿ ದೀಕ್ಷಿತ್ ಗೆಡಂ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆರೋಪಿಗಳ ಪತ್ತೆಗೆ 10 ತಂಡ ರಚನೆ ಮಾಡಲಾಗಿದೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಓರ್ವನ ಗುರುತು ಪತ್ತೆಯಾಗಿದ್ದು ಆರೋಪಿಗಳು ರಾತ್ರಿ ಸೈಫ್ ಅಲಿಖಾನ್ ಮನೆಗೆ ನುಗ್ಗಿದ್ದಾರೆ. ದಾಳಿ ಬಳಿಕ ಫೈರ್ ಎಕ್ಸಿಟ್ ಮನೆಯ ಮೂಲಕ ಆರೋಪಿಗಳು ಪರಾರಿ ಆಗಿದ್ದಾರೆ.ಮೇಲ್ನೋಟಕ್ಕೆ ಇದು ದರೋಡೆ ರೀತಿ ಕಾಣುತ್ತದೆ ಆರೋಪಿಗಳ ಪತ್ತೆಗೆ 10 ತಂಡ ರಚನೆ ಮಾಡಲಾಗಿದೆ ಎಂದು ತಿಳಿಸಿದರು. ನಟ ಸೈಫ್ ಅಲಿ ಖಾನ್ ಪ್ರಸ್ತುತ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕುಟುಂಬಸ್ಥರು…

Read More