Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಮೀನಿಗೆ ಬಲೆ ಹಾಕಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನಪ್ಪಿದ್ದಾರೆ. ಬೆಂಗಳೂರು ಹೊರವಲಯದ ಹೆಸರಘಟ್ಟದ ಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ. ಕೆರೆಯಲ್ಲಿ ಮುಳುಗಿ ಆನಂದ (32) ಹಾಗೂ ಅನಂತ (27) ಮೃತರು ಎಂದು ತಿಳಿದು ಬಂದಿದೆ. ಮೀನಿಗೆ ಬಲೆ ಹಾಕಲು ಇಬ್ಬರು ತೆಪ್ಪದಲ್ಲಿ ಕೆರೆಯ ಮಧ್ಯೆ ತೆರಳಿದ್ದಾರೆ. ಕೆರೆಯ ಮಧ್ಯದಲ್ಲಿ ತೆಪ್ಪದ ಹುಟ್ಟು ಕೈ ತಪ್ಪಿ ಕೆರೆಗೆ ಬಿದ್ದಿತ್ತು. ಈ ವೇಳೆ ಆನಂದ ನೀರಿಗೆ ಧುಮುಕಿ ತೆಪ್ಪವನ್ನು ಹಿಡಿದುಕೊಂಡಿದ್ದ. ಆನಂದ ನನ್ನ ಮೇಲೆ ಎತ್ತಲು ಅನಂತ ಸಹ ನೀರಿಗೆ ಧುಮುಕಿದ್ದಾನೆ. ಈ ವೇಳೆ ಆನಂದ್ ಮತ್ತು ಅನಂತ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಸ್ಥಳಕ್ಕೆ ಸೋಲದೇವನಹಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು : ಬಾಲಕಿಯರನ್ನ ವೇಶ್ಯಾವಾಟಿಕೆಗೆ ತಳುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೈಸೂರಿನ ವಿಜಯನಗರ ಠಾಣೆ ಪೋಲಿಸರಿಂದ ಇಬ್ಬರು ಆರೋಪಿಗಳ ಬಂಧನವಾಗಿದೆ. ಶೋಭಾ ಹಾಗೂ ತುಳಸಿಕುಮಾರ್ ಎನ್ನುವ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಒಡನಾಡಿ ಸಂಸ್ಥೆಯ ಮಾಹಿತಿಯನ್ನು ಆಧರಿಸಿ ವಿಜಯನಗರ ಠಾಣೆ ಪೋಲೀಸರು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ.ವಾಟ್ಸಪ್ ವಿಡಿಯೋ ಮೂಲಕ ಬಾಲಕಿಯನ್ನು ಆರೋಪಿಗಳು ತೋರಿಸಿದ್ದರು.ಆರೋಪಿಗಳು 12 ರಿಂದ 13 ವರ್ಷದ ಬಾಲಕಿ ತೋರಿಸಿ 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಪೊಲೀಸರು ಇಬ್ಬರು ಬಾಲಕಿಯರನ್ನು ರಕ್ಷಿಸಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 7.69 ಕೋಟಿ ಅಂದಾಜು ಮೌಲ್ಯದ ಒಟ್ಟು 5 ಎಕರೆ 0.07.20 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು. ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗುಂಡುತೋಪು, ಸ್ಮಶಾನ, ಸರ್ಕಾರಿ ಓಣಿ, ಬಿಳಿಕೆರೆ ಜಾಜಿಮುಳಗಡೆ, ಖರಾಬು, ಗೋಮಾಳ ಮತ್ತು ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು. ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ದೇವಗೆರೆ ಗ್ರಾಮದ ಸ.ನಂ 71 ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.22 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.0.50 ಲಕ್ಷಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ದೊಡ್ಡೇರಿ ಗ್ರಾಮದ ಸ.ನಂ 62 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.0.19 ಲಕ್ಷಗಳಾಗಿರುತ್ತದೆ. ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ…
ದಾವಣಗೆರೆ : ದಾವಣಗೆರೆಯಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ವಿದ್ಯುತ್ ಅವಘಡದಿಂದ ಮನೆಯಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕಟ್ಟದಲ್ಲಿದ್ದ ತಾಯಿ ಮಗಳನಿ ರಕ್ಷಣೆ ಮಾಡಲಾಗಿದೆ. ಈ ಒಂದು ಘಟನೆ ಘಟನೆ ದಾವಣಗೆರೆಯ ಅರುಣಾ ಸರ್ಕಲ್, ಬಳಿಯ ರೈಲ್ವೆ ಗೇಟ್ ನ ಸಮೀಪದ ಮನೆಯಲ್ಲಿ ಈ ಒಂದು ಅಗ್ನಿ ಅವಗಡ ಸಂಭವಿಸಿದೆ. ಕಟ್ಟಡದ ಎರಡನೇ ಫ್ಲೋರ್ ನಲ್ಲಿ ಸಿಲುಕಿದ್ದ ಗೀತಾ ಗಂಗಾಧರ್ ಮತ್ತು ಪುತ್ರಿ ಮಧು ರಕ್ಷಣೆ ಮಾಡಲಾಗಿದೆ. ವಿದ್ಯುತ್ ಅವಘಡದಿಂದ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ತಾಯಿ ಮಗಳನ್ನು ರಕ್ಷಣೆ ಮಾಡಲಾಗಿದೆ. ಏಣಿಯ ಸಹಾಯದಿಂದ ತಾಯಿ ಮತ್ತು ಮಗಳನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಿಸಿದ್ದಾರೆ. ವಿದ್ಯುತ್ ಅವಘಡದಿಂದ ಮೂರು ಮಹಡಿಯ ಮನೆ ಸಂಪೂರ್ಣವಾಗಿ ಭಸ್ಮವಾಗಿದೆ. ಮನೆಯಲ್ಲಿದ್ದ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಘಟನೆ ಕುರಿತು ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಪ್ಲ್ಯಾಟ್ನಲ್ಲಿ 12 ಕೆ.ಜಿ ಗಾಂಜಾ ಶೇಖರಿಸಿಟ್ಟು ಸರಬರಾಜು ಮಾಡಲು ಯೋಜಿಸಿದ್ದ ಕೇರಳದ 11 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ಅದ್ವೈತ್ ಶ್ರೀಕಾಂತ್, ಮುಹಮ್ಮದ್ ಅಪ್ಸಿನ್, ಮುಹಮ್ಮದ್ ಸ್ವಾನೀದ್, ನಿಬಿನ್.ಟಿ. ಕುರಿಯನ್, ಮುಹಮ್ಮದ್ ಕೆ.ಕೆ., ಮುಹಮ್ಮದ್ ಹನಾನ್, ಮುಹಮ್ಮದ್ ಶಾಮಿಲ್, ಅರುಣ್ ತೋಮಸ್, ಮುಹಮ್ಮದ್ ನಿಹಾಲ್ ಸಿ, ಮೊಹಮ್ಮದ್ ಜಾಸೀಲ್ ವಿ ಮತ್ತು ಸಿದಾನ್.ಪಿ. ಎಂದು ತಿಳಿದುಬಂದಿದೆ. ಸೆ.26ರಂದು ಅದ್ವೈತ್ ಶ್ರೀಕಾಂತ್, ಮುಹಮ್ಮದ್ ಅಫ್ಸಿನ್, ಮೊಹಮ್ಮದ್ ಸ್ವಾನೀದ್ ಹಾಗೂ ಇತರರು ಗಾಂಜಾವನ್ನು ವಾಣಿಜ್ಯ ಪ್ರಮಾಣದಲ್ಲಿ ಖರೀದಿಸಿಕೊಂಡು ಬಂದಿದ್ದರು. ಇದನ್ನು ಸಾರ್ವಜನಿಕರಿಗೆ ಮಾರಾಟ ಮಾಡುವ ಸಲುವಾಗಿ ಮಂಗಳೂರು ನಗರದ ಅತ್ತಾವರ ಕಾಪಿಗುಡ್ಡೆ ಮಸೀದಿ ಬಳಿಯಿರುವ ಕಿಂಗ್ಸ್ ಕೋರ್ಟ್ ಅಪಾರ್ಟ್‌ಮೆಂಟ್‌ನ ಪ್ಲಾಟ್ನಲ್ಲಿ ಇರಿಸಿದ್ದರು. ಈ ಕುರಿತು ಮಾಹಿತಿ ಪಡೆದ ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳೆಲ್ಲರೂ ಮಂಗಳೂರಿನ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಬಿ.ಎ ವ್ಯಾಸಂಗ ಮಾಡುತ್ತಿದ್ದಾರೆ. ಒಡಿಶಾ ಮೂಲಕ ಖರೀದಿಸಿ ತಂದಿದ್ದ 2,45,280 ರೂ. ಅಂದಾಜು…
ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಪೌಡರ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ನೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಗಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಂತ್ರಕ್ಕೆ ಸಿಲುಕಿ ಬಿಹಾರ ಮೂಲದ ರಾಜು ಪಾಸ್ವಾನ್ (23) ಎನ್ನುವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಸಂತೋಷ್ ಎಂಬವರಿಗೆ ಸೇರಿದ ಪೌಡರ್ ಕಂಪನಿಯಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಇಂದು ಮಧ್ಯಾಹ್ನ 12:30 ಕಂಪನಿಯಲ್ಲಿ ರಾಜು ಕೆಲಸ ಮಾಡುತ್ತಿದ್ದ ವೇಳೆ ಪೌಡರ್ ಮಿಕ್ಸಿಂಗ್ ಮಾಡುವ ಯಂತ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಾಗಲಕುಂಟೆ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಬಾಗಲಕೋಟೆ : ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಅದರಲ್ಲೂ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಿಂದಾಗಿ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಇದೀಗ ಬಾಗಲಕೋಟೆಯಲ್ಲಿ ಮನೆಯ ಮೇಲ್ಚಾವಣಿ ಕುಸಿದು ವೃದ್ದೆ ಸಾವನಪ್ಪಿದ್ದಾರೆ. ನಗರದ ಕಿಲ್ಲಾ ಓಣಿಯಲ್ಲಿ ಭಾರಿ ಮಳೆಯಿಂದಾಗಿ ಮನೆಗಳು ಕುಸಿದು ಬಿದ್ದಿದ್ದು, ಈ ವೇಳೆ ಮನೆಯ ಮೇಲ್ಚಾವಣಿ ಕುಸಿದು ವೃದ್ದೆ ಒಬ್ಬರಿಗೆ ತಲೆಗೆ ಮತ್ತು ಕೈಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಶಶಿಕಲಾ ದಾಬಡೆ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿದ್ದು, ಪುತ್ರ ವೆಂಕಟೇಶ್ ಸ್ವಲ್ಪದರಲ್ಲಿ ಬಚಾವ್ ಆಗಿದ್ದಾರೆ. ಇದುವರೆಗೂ ಬಾಗಲಕೋಟೆ ಜಿಲ್ಲೆಯ ಅದ್ಯಂತ 340ಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿವೆ ಎಂದು ವರದಿಯಾಗಿದೆ.
ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಕಲ್ಬುರ್ಗಿ ಸುತ್ತಮುತ್ತಲಿನ ನದಿಗಳು ಸಹ ಭಾರಿ ಪ್ರಮಾಣದಲ್ಲಿ ತುಂಬಿ ಹರಿಯುತ್ತಿವೆ ಇದೀಗ ಕಲ್ಬುರ್ಗಿ ಜಿಲ್ಲೆಯಲ್ಲಿ ಕಾಗಿನಾ ನದಿ ತುಂಬಿ ಹರಿಯುತ್ತಿದ್ದರಿಂದ ಜಿಲ್ಲೆಯ ಮಳಕೇಡದಉತ್ತರಾದಿ ಮಠದಲ್ಲಿರುವ ಜಯತೀರ್ಥರ ಮೂಲ ಬೃಂದಾವನ ಸಂಪೂರ್ಣವಾಗಿ ಜಲಾವೃತವಾಗಿದೆ. ಹೌದು ಕಲ್ಬುರ್ಗಿಯಲ್ಲಿ ಭಾರಿ ಪ್ರವಾಹಕ್ಕೆ ಮಳಖೇಡದ ಉತ್ತರಾದಿ ಮಠದ ಜಯತೀರ್ಥರ ಮೂಲ ಬೃಂದಾವನ ಜಲಾವೃತವಾಗಿದೆ. ಕಾಗಿನಾ ನದಿ ತಡದಲ್ಲಿರುವ ಈ ಒಂದು ಉತ್ತರಾದಿ ಮಠಕ್ಕೆ ಮಠದ ಆವರಣದಲ್ಲಿ ಸಂಪೂರ್ಣವಾಗಿ ನದೀ ನೀರು ತುಂಬಿ ಹರಿಯುತ್ತಿದೆ ಈ ಹಿನ್ನಲೆಯಲ್ಲಿ ಭಕ್ತರಿಗೆ ಪ್ರವೇಶ ನಿರ್ಭಂಧಿಸಲಾಗಿದೆ.
ಕಲಬುರ್ಗಿ : ಕಲ್ಬುರ್ಗಿ ವಿಜಯಪುರ, ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸುರಿಯುತ್ತಿದ್ದು, ಈ ಹಿನ್ನಲೆಯಲ್ಲಿ ಕಲಬುರ್ಗಿಯಲ್ಲಿ ನದಿ ದಡದಲ್ಲಿರುವ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ನದಿ ದಡದಲ್ಲಿರುವ ಹಲವು ಮನೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ತಕ್ಷಣ ಸಚಿವ ಕೃಷ್ಣ ಬೈರೇಗೌಡ ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಒಗಳಿಗೆ ಘಟನಾ ಸ್ಥಳಕ್ಕೆ ತೆರಳಿ, ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೀಮ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿದೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಬೇಕು, ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ. ಶೀಘ್ರದಲ್ಲೇ ನಾನೂ ಸಹ ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮಗಳ ಬಗ್ಗೆ ಪರಿಶೀಲಿಸಲಿದ್ದೇನೆ ಎಂದು ತಿಳಿಸಿದ್ದಾರೆ.
ಕಲಬುರ್ಗಿ : ಕಲ್ಬುರ್ಗಿ ವಿಜಯಪುರ, ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸುರಿಯುತ್ತಿದ್ದು, ಈ ಹಿನ್ನಲೆಯಲ್ಲಿ ಕಲಬುರ್ಗಿಯಲ್ಲಿ ನದಿ ದಡದಲ್ಲಿರುವ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ಇದೀಗ ಕಲ್ಬುರ್ಗಿಯಲ್ಲಿ ಪ್ರವಾಹದ ನೀರು ಕೊಟ್ಟಿಗೆಗೆ ನುಗ್ಗಿ ಸುಮಾರು 42ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿರುವ ಘೋರ ದುರಂತ ಜಿಲ್ಲೆಯ ಚಿಂಚೋಳಿ ತಾಲೂಕಿನ ಜಟ್ಟೂರ್ ಗ್ರಾಮದಲ್ಲಿ ನಡೆದಿದೆ. ಹೌದು ಹಳ್ಳದ ನೀರು ಕೊಟ್ಟಿಗೆಗೆ ನುಗ್ಗಿ ಸುಮಾರು 42ಕ್ಕೂ ಹೆಚ್ಚು ಜಾನುವಾರುಗಳು ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಭಾರಿ ಮಳೆಯಿಂದಾಗಿ ಹಳ್ಳದ ನೀರು ಕೊಟ್ಟಿಗೆಗೆ ನೀರಿಗೆ ನುಗ್ಗಿದೆ. ಚಿಂಚೋಳಿ ತಾಲೂಕಿನ ಜಟ್ಟೂರ್ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಕೊಟ್ಟಿಗೆ ಭಾರಿ ಪ್ರಮಾಣದಲ್ಲಿ ನೀರು ನುಗ್ಗಿ ಸುಮಾರು 42ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಏಕಾಏಕಿ ಪ್ರವಾಹದ ರೀತಿಯಲ್ಲಿ ನೀರು ನುಗ್ಗಿದ್ದರಿಂದ ಜಾನುವಾರುಗಳನ್ನ ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. 42ಕ್ಕೂ ಹೆಚ್ಚು ಹಸುಗಳು ಎತ್ತುಗಳು ಸಾವನ್ನಪ್ಪಿರುವ ಹಿನ್ನೆಲೆ ರೈತ ಕಂಗಾಲಾಗಿದ್ದಾನೆ.









