Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಬಿಹಾರ ಮೂಲದ ವ್ಯಕ್ತಿ ಒಬ್ಬ ಹಸುಗಳ ಕೆಚ್ಚಲು ಕೊಯ್ದಿದ್ದ ಘಟನೆ ನಡೆದಿತ್ತು. ಘಟನೆ ಸಂಭಂದ ಪೊಲೀಸರು ಈಗಾಗಲೇ ಆರೋಪಿಯನ್ನು ಅರೆಸ್ಟ್ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೀಗ ಈ ಒಂದು ಘಟನೆ ಮಹೋತ್ಸವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ಹೊಟ್ಟೆ ಬಗೆದ ಸ್ಥಿತಿಯಲ್ಲಿ 7 ತಿಂಗಳ ಕರುವಿನ ಶವ ಪತ್ತೆಯಾಗಿದೆ. ಹೌದು ಹುಬ್ಬಳ್ಳಿ ನಗರದ ಬಣಗಾರ ಲೇಔಟ್‌ನಲ್ಲಿ ಹೊಟ್ಟೆ ಬಗೆದ ಸ್ಥಿತಿಯಲ್ಲಿ ಏಳು ತಿಂಗಳ ಕರುವಿನ ಶವ ಪತ್ತೆಯಾಗಿದೆ. ಕರು ಶರಣಪ್ಪ ಬಾರಕೇರ ಎಂಬುವವರಿಗೆ ಸೇರಿದ್ದು, ಕರುವಿನ ಸಾವಿನ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಕೆಚ್ಚಲು ಕೊಯ್ದ ಪ್ರಕರಣದ ಚರ್ಚೆಗಳು ಇನ್ನೂ ಸಹ ನಡೆಯುತ್ತಿರುವಾಗಲೇ ಇಂತಹದ್ದೇ ಮತ್ತೊಂದು ಕ್ರೌರ್ಯದ ಪ್ರಕರಣ ನಡೆದದ್ದು ಬೆಚ್ಚಿ ಬೀಳಿಸಿದೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪಶು ವೈದ್ಯರು ಸಹ ಭೇಟಿ ನೀಡಿ, ಸತ್ತ ಕರುವಿನ ಶವವನ್ನು ಪರೀಕ್ಷೆ ಮಾಡಿದ್ದಾರೆ.…
ಕೊಪ್ಪಳ : ಒಂದು ಕಡೆ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಯಿಸಿ ಎಂದು ಹೇಳಿಕೆ ನೀಡಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಸಿಎಂ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದರು. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಬಂದಿದೆ. ಕೊಪ್ಪಳದಲ್ಲಿ ಬಿಜೆಪಿ ಇದನ್ನು ಹೇಳಿದರೆ ಭವಿಷ್ಯ ನುಡಿಯುತ್ತಾರಾ ಅಂತ ಕೇಳುತ್ತಾರೆ. ಆದರೆ ನಮಗೆ ಸಿದ್ದರಾಮಯ್ಯ ಮೇಲೆ ಯಾವುದೇ ದ್ವೇಷವಿಲ್ಲ. ರಾಜ್ಯದ ಜನರು ಭ್ರಷ್ಟ ಕಾಂಗ್ರೆಸ್ ಪಕ್ಷಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ರಾಜ್ಯದಲ್ಲಿ ದರಿದ್ರ ಸರ್ಕಾರ ಬಂದಿದೆ ಆಡಳಿತ ಪಕ್ಷದ ಶಾಸಕರಿಗೂ ಇದೇ ಭಾವನೆ ಇದೆ ಎಂದರು. ಅಭಿವೃದ್ಧಿಗೆ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಮೊನ್ನೆ 10 ಕೋಟಿ ರೂಪಾಯಿ ಕೊಡುವುದಾಗಿ ಹೇಳಿದ್ದಾರೆ. ಆದರೆ 10 ಕೋಟಿ ಹಣ ನಮ್ಮ ಕ್ಷೇತ್ರಕ್ಕೆ ಬರಲು ಎಷ್ಟು ತಿಂಗಳು ತೆಗೆದುಕೊಳ್ಳುತ್ತದೆ ಗೊತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ…
ವಿಜಯಪುರ : ಕಳೆದ ಎರಡು ದಿನಗಳ ಹಿಂದೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದಲ್ಲಿ ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿಡಗುಂದಿ ಠಾಣೆಯಲ್ಲಿ ತಾಯಿ ಭಾಗ್ಯಶ್ರೀ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ. ಹೌದು ಎರಡು ದಿನಗಳ ಹಿಂದೆ ನಿಡಗುಂದಿಯ ಬೇನಾಳ್ ಗ್ರಾಮದಲ್ಲಿ ಆಲಮಟ್ಟಿ ಎಡದಂಡೆಯಲ್ಲಿ ತಾಯಿಯೊಬ್ಬಳು ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ನಡೆದಿತ್ತು. ಇದೀಗ ಪ್ರತ್ಯಕ್ಷದರ್ಶಿಯಾದ ಫಾರೆಸ್ಟ್ ಗಾರ್ಡ್ ನಾಗೇಶ್ ಹೇಳಿಕೆಯನ್ನು ಪಡೆದಿರುವ ಪೊಲೀಸರು ನಿಡಗುಂದಿ ಠಾಣೆಯಲ್ಲಿ ಸೆಕ್ಷನ್ 302ರ ಅಡಿ ಕೊಲೆ ಕೇಸ್ ದಾಖಲಿಸಿದ್ದಾರೆ.
ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಸಂಭವಿಸಿದ್ದು ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮೈಸೂರು ನಾಗನಹಳ್ಳಿ ಗ್ರಾಮದ ಎಸ್ ಶ್ರೇಯಸ್ ಎಂದು ತಿಳಿದುಬಂದಿದೆ. ಈತ ಪಾಲಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿ.ಇ ಓದುತ್ತಿದ್ದ. ಮೂವರು ಸ್ನೇಹಿತರ ಜೊತೆಗೆ ಬಲಮುರಿಗೆ ಈಜಲೆಂದು ತೆರಳಿದ್ದ ವೇಳೆ ಘಟನೆ ನಡೆದಿದೆ. ಮೂವರು ಸ್ನೇಹಿತರೊಂದಿಗೆ ತೆರಳಿದ ಶ್ರೇಯಸ್ ನನಗೆ ಈಜಲು ಬರುತ್ತದೆ ಎಂದು ನದಿಗೆ ಇಳಿದಿದ್ದ. ಈ ವೇಳೆ ಇಬ್ಬರು ಸ್ನೇಹಿತರು ನದಿ ದರದಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ ನದಿಯಲ್ಲಿನ ಸುಳಿಗೆ ಸಿಲುಕಿ ಶ್ರೇಯಸ್ ಒದ್ದಾಡಿ ಪ್ರಾಣ ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಕೆ ಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ನಿನ್ನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ 6 ವರ್ಷದ ಬಾಲಕಿಯ ಮೇಲೆ ಬಿಹಾರ್ ಮೂಲದ ವ್ಯಕ್ತಿ ಒಬ್ಬ ಅತ್ಯಾಚಾರ ಮಾಡಿದ್ದು ಅಲ್ಲದೆ ಭೀಕರವಾಗಿ ಕೊಲೆ ಮಾಡಿದ್ದ. ಇದೀಗ ಈ ಒಂದು ಘಟನೆ ವಾಸುವ ಮುನ್ನವೇ ಮತ್ತೊಂದು ಹೀನ ಕೃತ್ಯ ನಡೆದಿದ್ದು, ಬೆಳಗಾವಿಯಲ್ಲಿ ಇಬ್ಬರು ಬಾಲಕಿಯರ ಮೇಲೆ ಮೂವರು ರಾಕ್ಷಸರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ವರದಿಯಾಗಿದೆ. ಹೌದು ಈ ಒಂದು ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ನಡೆದಿದೆ.ಅಭಿಷೇಕ್, ಆದಿಲ್ ಜಮಾದಾರ್ ಮತ್ತು ಚಾಲಕ ಕೌತುಕ್ ಬಡಿಗೇರ ಬಂಧಿತರು. ಆರೋಪಿ ಅಭಿಷೇಕ್ ಇನ್‌ಸ್ಟಾಗ್ರಾಂ ಮೂಲಕ ಓರ್ವ ಬಾಲಕಿಗೆ ಪರಿಚಯವಾಗಿದ್ದ. ಸವದತ್ತಿಗೆ ಹೋಗುತ್ತಿದ್ದೇನೆ ನೀನು ಬಾ ಎಂದು ಬಾಲಕಿಗೆ ಪುಸಲಾಯಿಸಿದ್ದಾನೆ. ಈತನ ಮಾತು ನಂಬಿ, ಬಾಲಕಿ ತನ್ನ ಸ್ನೇಹಿತೆಯನ್ನು ಕರೆದುಕೊಂಡು ಹಾರೂಗೇರಿ ಬಸ್ ನಿಲ್ದಾಣದಕ್ಕೆ ಹೋಗಿದ್ದಾರೆ.ಅಲ್ಲಿ ಆರೋಪಿ ಅಭಿಷೇಕ ಬಾಲಕಿಯರನ್ನು ಎರ್ಟಿಗಾ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಎರ್ಟಿಗಾ ಕಾರಿನಲ್ಲಿ ಮೂರೂ ಜನ ಆರೋಪಿಗಳಿದ್ದರು.…
ಕೋಲಾರ : ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಈ ಹಿಂದೆ ಒತ್ತುವರಿ ಮಾಡಿಕೊಂಡಂತಹ ಜಮೀನು ಸರ್ವೆ ಮಾಡಲು ಹೈಕೋರ್ಟ್ ಆದೇಶ ಹೊರಡಿಸಿತ್ತು. ಈ ಹಿನ್ನೆಲೆ ಇಂದು ಡಿಸಿ ನೇತೃತ್ವದಲ್ಲಿ ಸರ್ವೇ ಕಾರ್ಯ ಆರಂಭವಾಗಿದೆ. ಸ್ಥಳದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಉಪಸ್ಥಿತಿಯಿದ್ದು, ಜಿಲ್ಲಾಧಿಕಾರಿ ಎಂ.ಆರ್.ರವಿ ನೇತೃತ್ವದಲ್ಲಿ ಸರ್ವೆ ಕಾರ್ಯ ನಡೆದಿದೆ.ಸರ್ವೆ ಕೆಲಸಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ರಮೇಶ್ ಕುಮಾರ್ ಹೇಳಿದ್ದಾರೆ.ಹೈಕೋರ್ಟ್ ನಲ್ಲಿ 2002 ರಲ್ಲಿ ನಾನೇ ಜಂಟಿ ಸರ್ವೆ ಮಾಡಿ ಜಾಗ ಗುರುತಿಸಿ ಕೊಡುವಂತೆ ಮನವಿ ಮಾಡಿದ್ದೇನೆ ನನಗೆ ಒಂದು ಇಂಚು ಅರಣ್ಯ ಭೂಮಿ ಬೇಡ.ನೀವು ಸರ್ವೆ ಮಾಡಿ ಜಾಗ ಗುರುತಿಸಿ ಎಂದು ರಮೇಶ್ ಕುಮಾರ್ ಹೇಳಿದ್ದಾರೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಅರಣ್ಯ ವಲಯದ ಜಿನಗಲಕುಂಟೆ ಗ್ರಾಮದಲ್ಲಿ 64 ಎಕರೆ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಲಾಗಿದೆ. ಸಮೀಕ್ಷೆ ಸಂಖ್ಯೆಯ ಅಡಿಯಲ್ಲಿ ಭೂಮಿಯ ಮೇಲೆ ಜಂಟಿ…
ಹುಬ್ಬಳ್ಳಿ : ಹುಬ್ಬಳ್ಳಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸ್ಫೋಟಕವಾದ ಹೇಳಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿ ಎಷ್ಟೇ ಪ್ಯಾಚ್ ಅಪ್ ಮಾಡಿದರು ಅದು ಆಗಲ್ಲ. ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಅವರಿಗೆ ಕಂಟಕವಾಗಿದೆ.14 ನಿವೇಶನ ಅಷ್ಟೇ ಅಲ್ಲ ಮುಡಾದಲ್ಲಿ 50ಲ್ ಸಾವಿರ ಕೋಟಿಗೂ ದೊಡ್ಡ ಹಗರಣ ನಡೆದಿದೆ. ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮುಡಾದಲ್ಲಿ ಸಾಕಷ್ಟು ದೊಡ್ಡ ಪ್ರಮಾಣದ ಹಗರಣ ನಡೆದಿದೆ. ಇಂದು ದೆಹಲಿಗೆ ತೆರಳಿದ್ದು ಅಲ್ಲಿ, ಯಾವುದೇ ಪ್ಯಾಚಪ್ ಆಗುವ ಸಾಧ್ಯತೆ ಇಲ್ಲ ಸಿದ್ದರಾಮಯ್ಯ ರಾಜೀನಾಮೆ ಇಡುವ ಕಾಲ ಸನ್ನಿಹಿತವಾಗಿದೆ ಎಂದು ತಿಳಿಸಿದರು. ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ನಿವೇಶನಗಳನ್ನು ಕೊಟ್ಟಿದ್ದಾರೆ. ಸ್ನೇಹಮಯಿ ಕೃಷ್ಣ ಹೋರಾಟ ಮಾಡುತ್ತಿದ್ದಾರೆ. ಪೂರಕವಾದ ತೀರ್ಪು ಬರುತ್ತದೆ ಮುಡಾ ಹಗರಣದ ಬಗ್ಗೆ ಸಿಬಿಐ ತನಿಖೆ ಆಗಬೇಕು.…
SHOCKING : ಕಲಬುರ್ಗಿಯಲ್ಲಿ ಘೋರ ದುರಂತ : ಸ್ನೇಹಿತರ ಜೊತೆ ಮಾತನಾಡುತ್ತ ಕುಳಿತಿದ್ದಾಗಲೇ ವಿದ್ಯಾರ್ಥಿಗೆ ‘ಹೃದಯಾಘಾತ’!
ಕಲಬುರ್ಗಿ : ಇತ್ತೀಚಿಗೆ ಹಾರ್ಟ್ ಅಟ್ಯಾಕ್ ಎನ್ನುವುದು ಸಾಮಾನ್ಯವಾದ ಕಾಯಿಲೆಯಾಗಿಬಿಟ್ಟಿದೆ. ಇದೀಗ ಹೃದಯಾಘಾತದಿಂದ17 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ನಡೆದಿದೆ. ಹೃದಯಾಘಾತದಿಂದ ಮೃತಪಟ್ಟಿರುವ ವಿದ್ಯಾರ್ಥಿಯನ್ನು ನಾಲವಾರ ಗ್ರಾಮದ ಕೊರೇಶ್ ಸಿದ್ದಣ್ಣ ಮದ್ರಿ (17) ಎಂದು ಗುರುತಿಸಲಾಗಿದೆ. ಮೃತ ಸಿದ್ದಣ್ಣ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಗ್ರಾಮದಲ್ಲಿ ಸ್ನೇಹಿತರ ಜೊತೆ ಕುಳಿತಾಗ ಕೋರೇಶ್‌ಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಗೆಳೆಯನೊಬ್ಬ ಕೋರೇಶ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾನೆ. ಈ ಮಧ್ಯೆ ಬೈಕ್ ಮೇಲೆ ತೆರಳುತ್ತಿದ್ದಾಗ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ. ಏಕೈಕ ಮಗನನ್ನು ಹೊಂದಿದ್ದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ವಿಚಾರಣೆ ನಡೆಸಿದ ಜಡ್ಜ್ ಜನವರಿ 17ರಂದು ಬಿಎಸ್ ಯಡಿಯೂರಪ್ಪ ಪರ ವಕೀಲರ ವಾದಕ್ಕೆ ವಿಚಾರಣೆ ನಿಗದಿ ಪಡಿಸಿ, ಬಿಎಸ್ ಯಡಿಯೂರಪ್ಪ ಅವರ ಖುದ್ದು ಹಾಜರಾತಿಗೆ ನೀಡಿದ ವಿನಾಯಿತಿ ವಿಸ್ತರಿಸಿ ಆದೇಶ ಹೊರಡಿಸಿದರು. ವಿಚಾರಣೆಯ ವೇಳೆ ಪ್ರಾಸಿಕ್ಯೂಷನ್ ಪರವಾಗಿ ಎಸ್‍ಪಿಪಿ ರವಿವರ್ಮ ಕುಮಾರ್ ವಾದ ಮಂಡಿಸಿದ್ದು, ಪೊಲೀಸರಿಗೆ ಬಾಲಕಿಯ ಹೇಳಿಕೆ ಉಲ್ಲೇಖಿಸಿ ವಾದ ಮಂಡನೆ ಆರಂಭಿಸಿದರು. ಹಳೆ ಪೋಕ್ಸೋ ಕೇಸ್ ಬಗ್ಗೆ ನ್ಯಾಯಕ್ಕಾಗಿ ಬಾಲಗೆಯೊಂದಿಗೆ ತಾಯಿ ತೆರಳಿದ್ದರು. ಆಗ ಬಿ ಎಸ್ ಯಡಿಯೂರಪ್ಪ ಬಾಲಕಿಯನ್ನು ರೂಮ್ ಒಳಗೆ ಕರೆದೋಯ್ದು ಲಾಕ್ ಮಾಡಿದರು. ಅವರು ಬಾಲಕಿಯ ಬಳಿ ಬಂದು ಆರೋಪಿಗಳನ್ನು ಪತ್ತೆಹಚ್ಚಲು ಸಾಧ್ಯವೇ ಎಂದರು. ಹಿಂದಿನ ಪೋಕ್ಸೋ ಕೇಸ್ ನಡೆದಾಗ ನಿನಗೆ ವಯಸ್ಸು ಎಷ್ಟು ಎಂದು ಕೇಳಿದರು. ಆರೂವರೆ ವರ್ಷ…
ಬೆಂಗಳೂರು : ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಪಟ್ಟಂತೆ ಗುತ್ತಿಗೆದಾರರು ದಯಾ ಮರಣ ಕೋರಿ ಪತ್ರ ಬರೆದಿರುವ ಕುರಿತಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ನೀವು ಏಕೆ ದಯಮರಣ ಕೋರಿ ಪತ್ರ ಬರೆಯುತ್ತೀರಿ ತಪ್ಪಿರುವುದು ಸರ್ಕಾರದಲ್ಲಿ ಒಂದು ವರ್ಷದವರೆಗೆ ನೀವು ಯಾವುದೇ ಕೆಲಸವನ್ನು ಮಾಡಬೇಡಿ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ರಾಜ್ಯದ ಗುತ್ತಿಗೆದಾರರಿಗೆ ಕರೆ ನೀಡಿದರು. ಬೆಂಗಳೂರಿನಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಯಾರಿಗೂ ಈ ರೀತಿ ತೊಂದರೆ ಕೊಟ್ಟಿಲ್ಲ. ಈ ರಾಜ್ಯವನ್ನು ನೀವು ಉಳಿಸಬೇಕು ಎಂದು ನಿಮ್ಮಲ್ಲಿ ಒಗ್ಗಟ್ಟು ಇದ್ದರೆ ಗುತ್ತಿಗೆದಾರರಿಗೆ ಮನವಿ ಮಾಡುತ್ತೇನೆ ಒಂದು ವರ್ಷದವರೆಗೆ ಕೆಲಸ ಮಾಡಬೇಡಿ ಎಂದು ಅವರು ಕರೆ ನೀಡಿದರು. ಆಂಧ್ರಪ್ರದೇಶದವರನ್ನಾದರೂ ಕರೆದುಕೊಂಡು ಬಂದು ಕೆಲಸ ಮಾಡಿಸಲಿ. ಯಾರನ್ನಾದರೂ ಕರೆದುಕೊಂಡು ಬಂದು ಕೆಲಸ ಮಾಡಿಸಲಿ ನಿಮ್ಮಲ್ಲಿ ಒಡಕು ಬಂದರೆ ನಿಮ್ಮನ್ನು ಉಪಯೋಗಿಸಿಕೊಳ್ಳುತ್ತಾರೆ. ಇವೆಲ್ಲ ಸರಿಯಾಗಬೇಕು ಅಂದರೆ ಗುತ್ತಿಗೆದಾರರು ಕೆಲಸ ಮಾಡಬೇಡಿ. ಒಂದು ವರ್ಷ…














