Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಹಾಸನ : ಹಾಸನದಲ್ಲಿ ಹೆಜ್ಜೇನು ದಾಳಿಗೆ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹಾಸನದ ಕೆಂಚಟ್ಟಹಳ್ಳಿ ಬಳಿ ವಿಶ್ವ ವಿದ್ಯಾಲಯದಲ್ಲಿ ಘಟನೆ ನಡೆದಿದೆ. ಕಬ್ಬಡ್ಡಿ ಪಂದ್ಯಾವಳಿಗೆ ವಿದ್ಯಾರ್ಥಿಗಳಿಗೆ ಆಯ್ಕೆ ವೇಳೆ ಘಟನೆ ನಡೆದಿದೆ. ಹೆಜ್ಜೇನು ದಾಳಿಯಾಗುತ್ತಿದ್ದಂತೆ ಚೆಲ್ಲಾಪಿಲ್ಲಿಯಾಗಿದ್ದಾರೆ. ತಕ್ಷಣ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಇದೀಗ ಮತ್ತೆ ಚುರುಕುಗೊಂಡಿದೆ. ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ತೀವ್ರ ಮಳೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಶೇಷವಾಗಿ 14 ಜಿಲ್ಲೆಗಳು ಗಂಭೀರ ಮಳೆ ಅಪಾಯ ವಲಯದಲ್ಲಿ ಸೇರಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಮುಂತಾದವು.
ದಾವಣಗೆರೆ : ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಜಿಲ್ಲಾಧಿಕಾರಿಗೆ ವಂಚಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮೂರ್ತಿ ಅಲಿಯಾಸ್ ಅಭಿಷೇಕ್ ದೊಡ್ಡಮನಿ (20) ಬಂಧಿತ ಆರೋಪಿ. ತಾನು ಸಚಿವ ಬೈರತಿ ಸುರೇಶ್ ಆಪ್ತ ಸಹಾಯಕ ಎಂದು ಡಿಸಿಗೆ ಕರೆ ಮಾಡಿದ್ದ ಅಭಿಷೇಕ್ ದೊಡ್ಡಮನಿ, ಸರ್ಕಾರಿ ಸೌಲಭ್ಯ ದುರುಪಯೋಗ ಪಡಿಸಿಕೊಂಡ ಹಿನ್ನೆಲೆ ಬಂಧಿಸಲಾಗಿದೆ. ಬಂಧಿತ ಆರೋಪಿ ಕಾರವಾರದವನಾಗಿದ್ದು, ದಾವಣಗೆರೆಗೆ ಆಗಮಿಸಿ ಈ ಕೃತ್ಯ ಎಸಗಿದ್ದ. ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರ್ ಸ್ವಾಮಿ ಅವರಿಗೆ ಕರೆ ಮಾಡಿದ್ದ ಅಭಿಷೇಕ್ ದೊಡ್ಡಮನಿ, ನಾನು ಬೈರತಿ ಸುರೇಶ್ ಅವರ ಆಪ್ತ ಸಹಾಯಕನಾಗಿದ್ದು ಬೆಳಗಾವಿಗೆ ತೆರಳಬೇಕಾಗಿದೆ, ತನಗೆ ಒಂದು ಕಾರಿನ ವ್ಯವಸ್ಥೆ ಮಾಡಿಕೊಡುವಂತೆ ತಿಳಿಸಿದ್ದಾನೆ. ಆದರೆ ಜಿಲ್ಲಾಧಿಕಾರಿ ಹಿಂದೆ ಮುಂದೆ ಯೋಚಿಸದೆ ಆರೋಪಿ ಅಭಿಷೇಕ್ ದೊಡ್ಡಮನಿಗೆ ಸರ್ಕಾರಿ ಕಾರು, ಅದಕ್ಕೆ ಇಂಧನ ತುಂಬಿಸಿ ಕಾರು ಚಾಲಕನನ್ನು ಕಳುಹಿಸಿಕೊಟ್ಟಿದ್ದರು. ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಂಡ ಬಗ್ಗೆ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಇವತ್ತಿನಿಂದ ಸರ್ವೆ ಕಾರ್ಯ ಚುರುಕಾಗಿ ಆಗಲಿದೆ. ಯಾವುದೇ ಕಾರಣಕ್ಕೂ ಸಮೀಕ್ಷೆಯ ಅವಧಿ ವಿಸ್ತರಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿಂದು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು. ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ…
ಬೆಂಗಳೂರು : ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡಗಳ ಹಾವಳಿ ಇನ್ನು ನಿಂತಿಲ್ಲ. ಸಂಪೂರ್ಣವಾಗಿ ನಿಯಮ ಉಲ್ಲಂಘಿಸಿ 5 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈಗ ಬೆಂಗಳೂರಿನಲ್ಲಿ 5 ಅಂತಸ್ತಿನ ಕಟ್ಟಡ ಒಂದು ವಾಲಿದೆ. ಬೆಂಗಳೂರಿನ ಕೋರಮಂಗಲದ ವೆಂಕಟಾಪುರದಲ್ಲಿ ಈ ಒಂದು ಘಟನೆ ನಡೆದಿದೆ. ಸುಮಾರು 750 ಚದರ ಅಡಿ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ನಿಯಮ ಗಾಳಿಗೆ ತೂರಿ ಐದು ಅಂತಸ್ತು ಕಟ್ಟಡ ನಿರ್ಮಾಣ ಮಾಡಲಾಗಿದೆ ಕೋರಮಂಗಲದ ವೆಂಕಟಪುರದಲ್ಲಿ ಇದೀಗ ಆತಂಕ ಸೃಷ್ಟಿಯಾಗಿದೆ. 15 ಎಂಟು ಐವತ್ತು ಅಡಿ ಅಥವಾ 750 ಚದರ ಅಡಿ ಜಾಗದಲ್ಲಿ 5 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗಿದೆ. ನೆಲಮಹಡಿ ಸೇರಿದಂತೆ 5 ಮಹಡಿಯ ಕಟ್ಟದ ನಿರ್ಮಾಣ ಮಾಡಲಾಗಿದ್ದು ಕೋರಮಂಗಲ ಒಂದನೇ ಬ್ಲಾಕ್ ನಲ್ಲಿರುವ ವೆಂಕಟಪುರದಲ್ಲಿ ಈ ಒಂದು ಕಟ್ಟಡ ನಿರ್ಮಿಸಲಾಗಿದೆ. ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವೆಂಕಟಪುರದಲ್ಲಿ ಅಪಾಯಕಾರಿ ಕಟ್ಟಡ ನಿರ್ಮಾಣ ಹಿನ್ನೆಲೆ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಸದ್ಯ ಮಡಿವಾಳ ಠಾಣೆ ಪೊಲೀಸರು ಸ್ಥಳದಲ್ಲೇ…
ಮಂಗಳೂರು : ಧರ್ಮಸ್ಥಳ ಬುರುಡೆ ಕೇಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದರು. ಬಳಿಕ ಗೃಹ ಸಚಿವ ಜಿ ಪರಮೇಶ್ವರ್ ಅವರು ಧರ್ಮಸ್ಥಳ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಇನ್ನು ಈ ಪ್ರಕರಣದ ಕುರಿತು, ಎಸ್ಐಟಿ ತನಿಖೆಯಿಂದ ಸತ್ಯ ಹೊರ ಬರುತ್ತಿದ್ದು, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳ ದೇಗುಲ ಬೇರೆ ಅಲ್ಲ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ಅಂತ ನೀವು ನೋಡಿದ್ದೀರಿ. ನನ್ನ ಮೇಲೆ ಯಾಕೆ ಇಷ್ಟು ದ್ವೇಷ ಇದೆ ಎಂದು ಗೊತ್ತಾಗಿಲ್ಲ. ನಾವು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಕೂಡ ಮಾಡಿಲ್ಲ. ಹೀಗಿದ್ದರೂ ಇಷ್ಟು ಶತ್ರುತ್ವ ಯಾಕೆ ಎಂಬುದು ಅರ್ಥವಾಗ್ತಿಲ್ಲ. ನಾವು ತಪ್ಪು ಮಾಡದ ಕಾರಣ ಆತ್ಮವಿಶ್ವಾಸವಿದ್ದು, ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಯೇ…
ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ನಡೆಸುತ್ತಿದ್ದು ಈ ವೇಳೆ ಸರ್ವರ್ ಸಮಸ್ಯೆ ಹಾಗೂ ಮೊಬೈಲ್ ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದರು. ಡಿಸಿಗಳು ಹಾಗು ಸಿಇಒಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದೇನೆ. ಸಮೀಕ್ಷೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ನಿವಾರಣೆ ಮಾಡಬೇಕು ವಿಡಿಯೋ ಸಂವಾದ್ದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಇದುವರೆಗೆ ಶೇಕಡ 4 ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ. ಸಮೀಕ್ಷೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಲು ಸೂಚನೆ ಕೊಟ್ಟಿದ್ದೇನೆ ಹಿಂದಿನ ಸರ್ವೆ ಗೌರವ ಧನ ಬಿಡುಗಡೆ ಮಾಡಿದ್ದೇವೆ ಬೆಂಗಳೂರು ಸೇರಿ ಎಲ್ಲಾ ಮನೆಗಳಲ್ಲೂ ಸಮೀಕ್ಷೆ ಮಾಡಬೇಕು. ಇನ್ನುಳಿದ ದಿನಗಳಲ್ಲಿ ಸಮೀಕ್ಷೆಯ ಕಾರ್ಯ ಕವರ್ ಮಾಡಬೇಕು ಪ್ರತಿದಿನ ಶೇಕಡ 10 ರಷ್ಟು ಸಮೀಕ್ಷೆ ಆಗಲೇಬೇಕು ನಾವು ಮಾಡುತ್ತೇವೆ ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಶಿಕ್ಷಕರ ಕೆಲವು ತಪ್ಪು ಕಲ್ಪನೆಗಳಿಂದ ಸಮೀಕ್ಷೆಗೆ ಸಮಸ್ಯೆ ಆಗಿತ್ತು. ಈಗ ಎಲ್ಲರೂ ಕೂಡ ಒಪ್ಪಿಕೊಂಡು ಸಮೀಕ್ಷೆ…
ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ನಡೆಸುತ್ತಿದ್ದು ಈ ವೇಳೆ ಸರ್ವರ್ ಸಮಸ್ಯೆ ಹಾಗೂ ಮೊಬೈಲ್ ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದರು. ಡಿಸಿಗಳು ಹಾಗು ಸಿಇಒಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದೇನೆ. ಸಮೀಕ್ಷೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ನಿವಾರಣೆ ಮಾಡಬೇಕು ವಿಡಿಯೋ ಸಂವಾದ್ದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಕಳೆದ ನಾಲ್ಕು ದಿನಗಳಿಂದ ಸರ್ವೆ ಕಾರ್ಯ ಕುಂಠಿತವಾಗಿತ್ತು. ಆದರೆ ಇಂದಿನಿಂದ ಸರ್ವೆ ಕೆಲಸ ಚುರುಕಾಗುತ್ತಿದೆ ಡಿಸಿಗಳು ಹೇಳುವ ಪ್ರಕಾರ 90% ತಾಂತ್ರಿಕ ಸಮಸ್ಯೆ ಪರಿಹಾರವಾಗಿದೆ. ಏನೇನು ತೊಡಕು ಇದ್ದಾವೆ ಅದನ್ನೆಲ್ಲ ನಿವಾರಿಸುವಂತೆ ಸೂಚಿಸಿದ್ದೇನೆ. ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿಚಾರವಾಗಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ ಅವರಿಗೆ ಸಮೀಕ್ಷೆ ಕಾರ್ಯ ಮುಗಿಸಲು ತೀರ್ಮಾನಿಸಲಾಗಿದೆ ಎಂದುಳಿದ ವರ್ಗಗಳ ಆಯೋಗ ಕೂಡ ಅದೇ ತೀರ್ಮಾನ ಮಾಡಿತ್ತು ಆದರೆ ಕಳೆದ ನಾಲ್ಕು ದಿನಗಳಿಂದ ಸಮೀಕ್ಷೆ ಸರಿಯಾಗಿ ನಡೆದಿಲ್ಲ.…
ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಸರ್ಕಾರಿ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿದ್ದು, ಓರ್ವ ಪ್ರಯಾಣಿಕನ ಕಾಲು ಮುರಿದಿದೆ. ಇನ್ನು 8 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಬಸ್ ಇದಾಗಿದೆ. ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್ ಅನ್ನು ಎಡಕ್ಕೆ ತಿರುವಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ ಎಂದು ಹೇಳಲಾಗುತ್ತಿದೆ. ಬಸ್ಸಿನಲ್ಲಿ ಚಾಲಕ, ನಿರ್ವಾಹಕ ಸೇರಿ 16 ಜನರಿದ್ದರು. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ಪಲ್ಟಿಯಿಂದ ಬಸ್ನಲ್ಲಿ ಓರ್ವ ಪ್ರಯಾಣಿಕನ ಕಾಲು ಸಿಲುಕಿ ಒದ್ದಾಡಿದ್ದಾನೆ. ಪೊಲೀಸರು, ಸ್ಥಳೀಯರ ಸಹಾಯದಿಂದ ಪ್ರಯಾಣಿಕನನ್ನು ಹೊರತೆಗೆದು ಆಂಬ್ಯುಲೆನ್ಸ್ ಮೂಲಕ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಅಲ್ಲದೇ ಬಸ್‌ನಲ್ಲಿದ್ದ ಸುಮಾರು 8 ಜನರಿಗೆ ಸಣ್ಣ ಪುಟ್ಟ…
ಬೆಂಗಳೂರು : ಬಿಜೆಪಿ ಶಾಸಕ ದಿನಕರ ಶೆಟ್ಟಿ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಇದೀಗ ವಜಾಗೊಂಡಿದೆ. ಹೈಕೋರ್ಟ್ ಜೆಡಿಎಸ್ ಅಭ್ಯರ್ಥಿ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ. ಕುಮಟಾ ಬಿಜೆಪಿ ಶಾಸಕ ದಿನಕರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿ ಆದೇಶ ಹೊರಡಿಸಿದೆ. ಎರಡು ವರ್ಷದ ಹಿಂದೆ ಜೆಡಿಎಸ್ ಅಭ್ಯರ್ಥಿ ಈ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲು ಏರಿದ್ದರು. ಅಭ್ಯರ್ಥಿ ಸೂರಜ್ ಸೋನಿ ಸಲ್ಲಿಸಿದ ಅರ್ಜಿ ಇದೀಗ ವಜಾಗೊಳಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ದಿನಕರ ಶೆಟ್ಟಿ ಗೆದ್ದಿದ್ದರು. ಇವರ ಈ ಒಂದು ಆಯ್ಕೆಯನ್ನು ಪ್ರಶ್ನಿಸಿ ಸೂರಜ್ ಸೋನಿ ಎರಡು ವರ್ಷದ ಹಿಂದೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಸೂರಜ್ ಸೋನಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದೆ.











