Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ಕಳೆದ ಎರಡು ದಿನಗಳ ಹಿಂದೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದಲ್ಲಿ ಆಲಮಟ್ಟಿ ಎಡದಂಡೆ ಕಾಲುವೆಗೆ ತಾಯಿಯೊಬ್ಬಳು ತನ್ನ ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾನು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮಕ್ಕಳನ್ನು ಕಾಲುವೆಗೆ ತಳ್ಳಿದ್ದು ತಾಯಿ ಅಲ್ಲ ತಂದೆ ಎಂದು ಸ್ಪೋಟಕ ವಿಚಾರ ಬಯಲಾಗಿದೆ. ಹೌದು ಈ ಒಂದು ಘಟನೆಯಲ್ಲಿ ತಾಯಿ ಭಾಗ್ಯ ಬದುಕುಳಿದಿದ್ದು, ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಚೇತರಿಸಿಕೊಂಡ ಭಾಗ್ಯ ತನ್ನ ಗಂಡನ ಕರಾಳ ಮುಖವನ್ನು ತೆರೆದಿಟ್ಟಿದ್ದು. ಭಾಗ್ಯಳ ಗಂಡ ನಿಂಗರಾಜ್ ಹಾಗು ಆತನ ಅಣ್ಣತಮ್ಮಂದಿರ ನಡುವೆ ಅಸ್ತಿಯ ವಿಚಾರವಾಗಿ ಆಗಾಗ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ಪತಿ ನಿಂಗರಾಜ್ ತನ್ನ ಮಕ್ಕಳನ್ನು ಕಾಲುವೆಗೆ ತಳ್ಳಿ ಬಳಿಕ ನನ್ನನ್ನು ಕೂಡ ಕಾಲವೆಗೆ ತಳ್ಳಿದ್ದ ಎಂದು ನಿಂಗರಾಜ್ ಭಜಂತ್ರಿಯ ಪತ್ನಿ ಭಾಗ್ಯ ಇದೀಗ ಪತಿಯ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದಾಳೆ. ಮೃತ ಮಕ್ಕಳು ಕೊಲ್ಹಾರ ತಾಲೂಕಿನ…
ಬಳ್ಳಾರಿ : ನಿನ್ನೆ ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕನೊಬ್ಬ ಭೀಕರವಾಗಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿ ಅಪರಿಚಿತನೊಬ್ಬ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಹೌದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಐದು ವರ್ಷದ ಬಾಲಕಿ ಮೇಲೆ ಸೋಮವಾರ ಅಪರಿಚಿತನೊಬ್ಬ ಅತ್ಯಾಚಾರವೆಸಗಿದ್ದಾನೆ.ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆಂದು ಹತ್ತು ವರ್ಷಗಳ ಹಿಂದೆ ತೋರಣಗಲ್ಲಿಗೆ ಬಂದು ನೆಲೆಸಿದ್ದ ಉತ್ತರ ಭಾರತ ದಂಪತಿಯ ಮಗು ಸೋಮವಾರ ಮಕ್ಕಳೊಂದಿಗೆ ಮನೆ ಬಳಿ ಆಟವಾಡುತ್ತಿತ್ತು. ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ದೌರ್ಜನ್ಯ ವೆಸಗಿದ್ದಾನೆ. ಲೈಂಗಿಕ ದಾಳಿಯಿಂದಾಗಿ ಮಗುವಿಗೆ ಆಂತರಿಕ ಗಾಯವಾಗಿದ್ದು, ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಬಳ್ಳಾರಿಯ ಸರ್ಕಾರಿ ಆರೋಗ್ಯ ಸಂಸ್ಥೆಯೊಂದಕ್ಕೆ ಮಗುವನ್ನು ದಾಖಲಿಸಲಾಯಿತು ಎಂದು ಗೊತ್ತಾಗಿದೆ. ಸೋಮವಾರ ರಾತ್ರಿಯೇ ಮಗುವಿಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದ್ದು ಮಗು ಅಪಾಯದಿಂದ ಪಾರಾಗಿದೆ.ಘಟನೆ ಸಂಬಂಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ…
ಬೆಂಗಳೂರು : ಈಗಾಗಲೇ ಬೀದರ್ ನ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಕೇಸ್ ನಲ್ಲಿ ಗಂಭೀರವಾದ ಆರೋಪ ಎದುರಿಸುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿ ಬರುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶರತ್ ಬಚ್ಚೇಗೌಡ ವಿರುದ್ಧ ಆರೋಪ ಕೇಳಿ ಬಂದಿದೆ. ಈ ಕುರಿತು ದಯಾಮರಣ ಕೋರಿ ವೆಂಡರ್ಸ್ ಗಳು ಇದೀಗ ಪತ್ರ ಬರೆದಿದ್ದಾರೆ. ಹೌದು ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಷನ್ ಈ ಕುರಿತು ಪತ್ರ ಬರೆದಿದ್ದು ವೆಂಡರ್ಸ್ ಗಳು ಆತ್ಮಹತ್ಯೆ ಮಾಡಿಕೊಂಡರೆ ನಾಲ್ವರು ಹೊಣೆ. ಪ್ರಿಯಾಂಕ್ ಖರ್ಗೆ ಸೇರಿ ನಾಲ್ವರು ಹೊಣೆ ಎಂದು ಪತ್ರ ಬರೆದಿದ್ದಾರೆ. ವೆಂಡರ್ಸ್ ಗಳ ಬಾಕಿ ಬಿಲ್ ಪಾವತಿ ಮಾಡುತ್ತಿಲ್ಲ ಒಂದು ವರ್ಷದಿಂದ ತನಿಖೆಯ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ. 400 ರಿಂದ 500 ವೆಂಡರ್ಸ್ ಗಳಿಗೆ ಬಿಲ್ ಪಾವತಿ ಬಾಕಿ ಇದೆ. ಪ್ರಿಯಾಂಕ್ ಖರ್ಗೆ, ಶರತ್ ಬಚ್ಚೇಗೌಡ ಕಷ್ಟವನ್ನು ಆಲಿಸುತ್ತಿಲ್ಲ. ಯಾರಾದರೂ ವೆಂಡರ್ಸ್ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ…
ಉತ್ತರಪ್ರದೇಶ : 144 ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಐತಿಹಾಸಿಕ ಮಹಾ ಕುಂಭಮೇಳ ನಡೆಯುತ್ತಿದ್ದು, ಈ ಒಂದು ಕುಂಭಮೇಳದಲ್ಲಿ ಕರ್ನಾಟಕದ ಬ್ರಾಂಡ್ ನಂದಿನಿ ಹಾಲು ಇದೀಗ ಉತ್ತರಪ್ರದೇಶದಲ್ಲೂ ಧೂಳೆಬ್ಬಿಸಿದೆ. ಹೌದು ಮಹಾಕುಂಭಮೇಳದಲ್ಲಿ 10 ಟೀ ಪಾಯಿಂಟ್ ತೆರೆಯಲು ಕೆಎಂಎಫ್ ಒಪ್ಪಂದ ಮಾಡಿಕೊಂಡಿದೆ. ಮಹಾಕುಂಭಮೇಳದಲ್ಲಿ ಕೆಎಂಎಫ್ ಸಹಭಾಗಿತ್ವದಲ್ಲಿ 10 ಟೀ ಪಾಯಿಂಟ್ ತೆರೆಯಲು ಸಿದ್ಧತೆ ನಡೆಸಲಾಗಿದ್ದು, ಜೊತೆಗೆ ನಂದಿನಿ ಹಾಲಿನ ಬಳಕೆ ಹಾಗೂ ನಂದಿನಿ ಉತ್ಪನ್ನಗಳ ಮಾರಾಟ ನಡೆಯಲಿದೆ. ಈ ಟೀ ಪಾಯಿಂಟ್‌ನಿಂದ ಸುಮಾರು ಒಂದು ಕೋಟಿ ಟೀ ಮಾರಾಟ ಮಾಡುವ ಗುರಿಯನ್ನು ಕೆಎಂಎಫ್ ಹಾಕಿಕೊಂಡಿದೆ. ಈ ಮೂಲಕ ಒಂದು ಮೇಳದಲ್ಲಿ ಅತೀ ಹೆಚ್ಚು ಟೀ ಮಾರಾಟ ಮಾಡಿದ ಸಂಸ್ಥೆಯೆಂದು ಗಿನ್ನಿಸ್ ದಾಖಲೆ ನಿರ್ಮಿಸುವ ಪ್ರಯತ್ನ ಮಾಡಲಿದೆ. ಇನ್ನೂ ಮಾಹಕುಂಭಮೇಳದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ನಾಗ ಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದು, ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯುತ್ತಿದೆ. ಫೆ.26ರ ಮಹಾ ಶಿವರಾತ್ರಿವರೆಗೂ ಮಹಾಕುಂಭಮೇಳ ನಡೆಯಲಿದೆ.ಪ್ರಯಾಗ್‌ರಾಜ್‌ನಲ್ಲಿ…
BREAKING : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿರುವಾಗಲೇ ಅಂಗಳಕ್ಕೆ ನುಗ್ಗಿದ ಚಿರತೆ : ತಪ್ಪಿದ ಭಾರಿ ಅನಾಹುತ!
ಉತ್ತರಕನ್ನಡ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೂ ಚಿರತೆ ನುಗ್ಗಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಾಗೇರಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸದಲ್ಲಿ ಈ ಒಂದು ಘಟನೆ ನಡೆದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿ ಇರುವಾಗಲೇ ಈ ಒಂದು ಘಟನೆ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ವೇಳೆ ಚಿರತೆ ವಿಶ್ವೇಶ್ವರ ಹೆಗಡೆ ಮನೆಗೆ ನುಗ್ಗಿದೆ. ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿದ್ದ ಸಾಕು ನಾಯಿಗಳನ್ನು ಚಿರತೆ ಅಟ್ಟಾಡಿಸಿಕೊಂಡು ಬಂದಿದೆ. ಈ ವೇಳೆ ನಾಯಿಗಳು ಚಿರತೆಯಿಂದ ತಪ್ಪಿಸಿಕೊಂಡು ಓಡಿ ಹೋಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕಲಬುರ್ಗಿ : ಶಾರ್ಟ್ ಸರ್ಕ್ಯೂಟ್ ನಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಕಚೇರಿಯನ್ನು ಆವರಿಸಿದ ಪರಿಣಾಮ ಕಚೇರಿಯಲ್ಲಿದ್ದ ಕಂಪ್ಯೂಟರ್ ಕೆಲವು ಪೀಠೋಪಕರಣಗಳು ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಅಫ್ಜಲ್ಪುರ ತಾಲೂಕಿನ ಬಿ ಇ ಓ ಕಚೇರಿಯಲ್ಲಿ ಈ ಒಂದು ದುರಂತ ಸಂಭವಿಸಿದೆ. ಹೌದು ಕಲಬುರ್ಗಿ ಜಿಲ್ಲೆಯ ಅಫ್ಜಲಪುರ ಪಟ್ಟಣದಲ್ಲಿರುವ ಬಿ ಇ ಓ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಚೇರಿಯಲ್ಲಿನ ಕೆಲ ದಾಖಲಾತಿಗಳು, ಪೀಠೋಪಕರಣಗಳು ಹಾಗೂ ಕಂಪ್ಯೂಟರ್ ಸೇರಿ ಎಲೆಕ್ಟ್ರಿಕಲ್ ಉಪಕರಣಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ತಕ್ಷಣ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಕುರಿತು ಅಫ್ಜಲ್ಪುರ ಪೊಲೀಸ್ ಸ್ಟೇಷನಲ್ಲಿ ಪ್ರಕರಣ ದಾಖಲಾಗಿದೆ.
BIG NEWS : MP ಎಲೆಕ್ಷನ್ ನಲ್ಲಿ ಸಿ.ಎಸ್ ಮಂಜುನಾಥ್ ಪರ ಕೆಲಸ ಮಾಡಿದ್ದೆ ನನಗೆ ಮುಳುವಾಗಿದೆ : ಶಾಸಕ ಮುನಿರತ್ನ ಹೇಳಿಕೆ
ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯಲ್ಲಿ ನಾನು ಡಾ.ಸಿ.ಎನ್. ಮಂಜುನಾಥ್ ಪರ ಕೆಲಸ ಮಾಡಿದ್ದೇ ಮುಳುವಾಗಿದೆ. ಆ ಕಾರಣಕ್ಕಾಗಿ ನನ್ನನ್ನು ರಾಜೆಯವಾಗಿ ಟಾರ್ಗೆಟ್ ಮಾಡಿ ಹಿಂಸಿಸಲಾಗುತ್ತಿದೆ ಎಂದು ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಹೇಳಿಕೊಂಡಿದ್ದಾರೆ. ಸಂಕ್ರಾಂತಿ ಹಬ್ಬದ ಅಂಗವಾಗಿ ಇಂದು ಮಾತನಾಡಿದ ಅವರು, ಅವರು, ಇಂದು ನಾನು ಪ್ರಮಾಣ ಮಾಡುತ್ತಿದ್ದೇನೆ. ನನಗೆ ಬಹಳಷ್ಟು ಕಿರುಕುಳ ಇದೆ.ನನ್ನ ಜೀವಕ್ಕೂ ಕೂಡ ಅಪತ್ತು ಇದೆ.ನಾನು ಲೋಕಸಭಾ ಚುನಾವಣೆಯಲ್ಲಿ ಡಾ.ಸಿ.ಎನ್. ಮಂಜುನಾಥ್ ಪರ ಕೆಲಸ ಮಾಡಿದ್ದೇ ಮುಳುವಾಗಿದೆ. ಆ ಕಾರಣಕ್ಕಾಗಿ ನನ್ನನ್ನು ರಾಜೆಯವಾಗಿ ಟಾರ್ಗೆಟ್ ಮಾಡಿ ಹಿಂಸಿಸಲಾಗುತ್ತಿದೆ ಎಂದು ಮುನಿರತ್ನ ಹೇಳಿಕೊಂಡಿದ್ದಾರೆ. ತಮ್ಮ ಕ್ಷೇತ್ರದ ಜನರಿಗೆ ಪ್ರಮಾಣ ಮಾಡಿದ್ದಾರೆ. ತಮ್ಮ ಕ್ಷೇತ್ರದ ಜನತೆಗೆ ಸಂಕ್ರಾಂತಿ ಶುಭ ಕೋರಿಡಾ ಶಾಸಕ ಮುನಿರತ್ನ ತಮಗೆ ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.ನನಗೆ ಕ್ಷೇತ್ರದಲ್ಲಿ ಇಂದು ಬಲವಿಲ್ಲ, ಮತದಾರ ಬಂಧುಗಳ ಆಶೀರ್ವಾದ ಒಂದೇ ನನಗೆ ಶ್ರೀರಕ್ಷೆಯಾಗಿದೆ.ಮುಂದಿನ ದಿನಗಳಲ್ಲಿ ನಿಮಗೆ ಒಳ್ಳೆಯ ಕೆಲಸವನ್ನು ಮಾಡುವ ಶಕ್ತಿ ಬರಲಿ ಎಂದು…
ಹುಬ್ಬಳ್ಳಿ : ಸದ್ಯ ರಾಜ್ಯ ರಾಜಕಾರಣದಲ್ಲಿ ಒಂದು ಕಡೆ ಡಿನ್ನರ್ ಪಾಲಿಟಿಕ್ಸ್ ಜೋರಾಗಿದ್ದು, ಇದರ ಮಧ್ಯ ಅಧಿಕಾರ ಹಂಚಿಕೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಕೂಗು ಜೋರಾಗಿ ಕೇಳಿ ಬರುತ್ತಿದೆ.ಇದರ ಮಧ್ಯ, ಅಬಕಾರಿ ಇಲಾಖೆಯ ಸಚಿವ ಆರ್.ಬಿ ತಿಮ್ಮಾಪೂರ್ ಅವರು, ಇದೀಗ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಒಂದು ವೇಳೆ ಹೈಕಮಾಂಡ್ ಹೇಳಿದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಹೇಳಿದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪೂರ್ ಹೇಳಿಕೆ ನೀಡಿದರು. ದಲಿತರು ಯಾಕೆ ಸಿಎಂ ಆಗಬಾರದು? ಮುಖ್ಯಮಂತ್ರಿ ಮಾಡಿದರೆ ಯಾರು ಬೇಡ ಅಂತ ಹೇಳುತ್ತಾರೆ ಎಂದರು. ಸಿಎಂ ಆಗಲು ನನಗೆ ಅಷ್ಟು ಶಕ್ತಿ ಇದೆಯೋ ಇಲ್ಲವೋ, ಶಾಸಕಾಂಗ ಪಕ್ಷದ ಸಭೆಯಲ್ಲಿ ನನ್ನ ಒಪ್ಪುತ್ತಾರೋ ಇಲ್ಲವೋ ಅದೆಲ್ಲ ನಂತರದ ಮಾತು. ಆದರೆ ಹೈಕಮಾಂಡ್ ಹೇಳಿದರೆ ನಾನೇ ಸಿಎಂ ಆಗುತ್ತೇನೆ. ದಲಿತರು ಮುಖ್ಯಮಂತ್ರಿ ಆಗಬೇಕೆಂದರೆ…
BREAKING : ಬೆಂಗಳೂರಲ್ಲಿ ಮೊದಲನೇ ಮದುವೆ ಮುಚ್ಚಿಟ್ಟು, ಯುವತಿಗೆ ವಂಚಿಸಿದ ‘BMTC’ ಕಂಡಕ್ಟರ್ : ನ್ಯಾಯಕ್ಕಾಗಿ ಪರದಾಟ!
ಬೆಂಗಳೂರು : ಬೆಂಗಳೂರಿನಲ್ಲಿ ಟಿಕೆಟ್ ಕೊಡುತ್ತಲೇ, ಯುವತಿನ್ನು, ತನ್ನ ಬಲೆಗೆ ಬೀಳಿಸಿಕೊಂಡ ಕಂಡಕ್ಟರ್ ತನಗೆ ಈ ಮುಂಚೆ ಮದುವೆ ಆಗಿರುವುದನ್ನು ಮುಚ್ಚಿಟ್ಟು ಯುವತಿ ಜೊತೆಗೆ ಸುತ್ತಾಡಿ ತಿರುಗಾಡಿ ಮಜಾ ಮಾಡಿದ್ದಾನೆ. ಬಳಿಕ ಆತನಿಗೆ ಮದುವೆಯಾಗಿದೆ ಎಂದು ಯುವತಿಗೆ ತಿಳಿದಿದ್ದೆ ತಡ ನನಗೆ ಯುವತಿ ಬೇಡ ಎಂದು ಕಂಡಕ್ಟರ್ ತಿಳಿಸಿದ್ದಾನೆ. ಹೌದು ಟಿಕೆಟ್ ಕೊಡುತ್ತಲೇ ಯುವತಿಯನ್ನು ಕಂಡಕ್ಟರ್ ಪಟಾಯಿಸಿದ್ದು, ಮದುವೆಯಾದ ಮೂರೇ ತಿಂಗಳಿಗೆ ಕಂಡಕ್ಟರ್‌ನ ಮುಖ ಬಯಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಂ.ಎಸ್.ಪಾಳ್ಯ ಬಿಎಂಟಿಸಿ ಡಿಪೋ ಕಂಡಕ್ಟರ್ ಕಮ್ ಡ್ರೈವರ್ ಆಗಿ ಮಂಜುನಾಥ್ ಕೆಲಸ ಮಾಡುತ್ತಿದ್ದರು. ಪ್ರತಿನಿತ್ಯ ಎಂ.ಎಸ್.ಪಾಳ್ಯ ಟು ಯಲಹಂಕ ಬಿಎಂಟಿಸಿ ಬಸ್‌ನಲ್ಲಿ ಯುವತಿ ಪ್ರಯಾಣಿಸುತ್ತಿದ್ದಳು. ಈ ವೇಳೆ ಟಿಕೆಟ್ ಕೊಡುತ್ತಲೇ ಯುವತಿಯನ್ನು ಪರಿಚಯ ಮಾಡ್ಕೊಂಡು ಮಂಜುನಾಥ್ ನಂಬರ್ ಪಡೆದಿದ್ದ. ಕಂಡಕ್ಟರ್ ತನಗೆ ಮದುವೆಯಾಗಿ, ಇಬ್ಬರು ಮಕ್ಕಳಿರುವುದನ್ನು ಮುಚ್ಚಿಟ್ಟು ಯುವತಿಯನ್ನ ಪ್ರೀತಿಸುವುದಾಗಿ ಹೇಳಿದ್ದ. ಈ ವೇಳೆ ಯುವತಿ ಕೂಡ ತನಗೆ ಮದುವೆಯಾಗಿ ಡಿವೋರ್ಸ್ ಆಗಿತ್ತು ಎಂದು ತಿಳಿಸಿದ್ದಳು. ಈ ವೇಳೆ ನಿನಗೆ…
BIG NEWS : ಹಸುಗಳ ಕೆಚ್ಚಲು ಕುಯ್ದ ಕೇಸ್ : ಎಷ್ಟೇ ಬಲಿಷ್ಠ ವ್ಯಕ್ತಿಗಳಿದ್ದರು ಕಠಿಣ ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕುಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಆರೋಪಿ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು ಮಾನವೀಯ ಇರುವವರು ಯಾರು ಕೂಡ ಇಂತಹ ನೀತಿ ಕೃತ್ಯ ಮಾಡಲ್ಲ. ಆತ ಮಾನಸಿಕ ಅಸ್ವಸ್ಥನೆಂದು ಹೇಳಲಾಗುತ್ತಿದೆ. ಪ್ರಕರಣದ ಹಿಂದೆ ಮತ್ತೆ ಯಾರೋ ಇದ್ದರೆ ಆತ ಬಾಯಿ ಬಿಡುತ್ತಾನೆ. ಆಮೇಲೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನಿಗೆ ವಿರುದ್ಧವಾಗಿ ನಡೆಯುವವರಿಗೆ ಕ್ಷಮೆ ಇಲ್ಲ. ಯಾರನ್ನೋ ಕರೆತಂದು ಅರೆಸ್ಟ್ ಮಾಡುವುದಕ್ಕೆ ಆಗಲ್ಲ ಎಂದು ಬಿಜೆಪಿ ಆರೋಪಕ್ಕೆ ಜಿ. ಪರಮೇಶ್ವರ ಹೇಳಿಕೆ ನೀಡಿದರು. ಸದ್ಯ ಪ್ರಕರಣದ ಆರೋಪಿಯ ಬಗ್ಗೆ ಸಾಕ್ಷಿ ಸಿಕ್ಕಿದ್ದಕ್ಕೆ ಅರೆಸ್ಟ್ ಮಾಡಿದ್ದಾರೆ. ಅವನ ಜೊತೆ ಬೇರೆ ಯಾರಾದರೂ ಇದ್ದಿದ್ದರೆ ಆತ ಬಾಯಿಬಿಡುತ್ತಾನೆ. ಪ್ರಕರಣದಲ್ಲಿ ಎಷ್ಟೇ ದೊಡ್ಡವರಿರ ಲ್ಲಿ ಚಿಕ್ಕವರಿರಲಿ ಕಾನೂನು ವಿರುದ್ಧವಾಗಿ ನಡೆದುಕೊಳ್ಳುವವರಿಗೆ ಕ್ಷಮೆ ಇರಲ್ಲ. ಘಟನೆಯಲ್ಲಿ ಇನ್ಯಾರೋರು…













