Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿಗೆ ರಾಜ್ಯ ಸರ್ಕಾರ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿಯವರು ಇಂದು ಭೇಟಿ ನೀಡಿ ಪ್ರಕರಣದ ಮಾಹಿತಿ ನೀಡಿದರು. ಅದಾದ ಬಳಿಕ ಗೃಹ ಸಚಿವ ಜಿ.ಪರಮೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿ ಧರ್ಮಸ್ಥಳದ ತನಿಖೆ ಕುರಿತು ಚರ್ಚಿಸಿದ್ದಾರೆ. ನಂತರ SIT ಮುಖ್ಯಸ್ಥ ಪ್ರಣವ್ ಮೋಹಂತಿ ಜೊತೆಗೆ ಮೀಟಿಂಗ್ ಮಾಡಿದ ಸಿಎಂ ಸಿದ್ದರಾಮಯ್ಯ ಪ್ರಕರಣದ ಕುರಿತು ಪ್ರಣವ್ ಸಿಎಂ. ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು. ಧರ್ಮಸ್ಥಳ ಬುರುಡೆ ಪ್ರಕರಣದ ಕುರಿತಂತೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮಹಾಂತಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ತನಿಖಾ ಪ್ರಗತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧಪಟ್ಟ ಆರೋಪಿ ಚಿನ್ನಯ್ಯ ಪರ ವಕೀಲರು ಸುಪ್ರೀಂಕೋರ್ಟಿಗೆ ಪಿಐಎಲ್ ಸಲ್ಲಿಸಿದರು. ನಿನ್ನೆ ಸುಪ್ರೀಂಕೋರ್ಟ್ ಪಿಐಎಲ್ ಅನ್ನು ವಜಾ ಗೊಳಿಸಿತ್ತು.…
ವರದಿ : ಸುರೇಶ್ ಹಾಸಿಲ್ಕರ್ ಮೈಸೂರು : ಪದ್ಮಶ್ರೀ, ಪದ್ಮವಿಭೂಷಣ ಪುರಸ್ಕೃತ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು, ಇಂದು ಪಂಚಭೂತಗಳಲ್ಲಿ ಲೀನವಾದರು. ಮೈಸೂರು ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು. ಇಬ್ಬರು ಪುತ್ರರಾದ ರವಿ ಶಂಕರ್ ಹಾಗು ಉದಯ್ ಶಂಕರ್ ಅಂತಿಮ ವಿಧಿ ವಿಧಾನದ ಬಳಿಕ ಅಂತ್ಯಕ್ರಿಯೆ ನೆರವೇರಿಸಿದರು. ಪುತ್ರಿ ಸಹನಾ ವಿಜಯಕುಮಾರ್, ಸಚಿವರಾದ ಡಾ.ಎಚ್ ಸಿ ಮಹದೇವಪ್ಪ. ವೆಂಕಟೇಶ್. ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ. ನಿನ್ನೆ ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗಿದ್ದು, ಮೈಸೂರಿನ ಕಲಾಮಂದಿರದ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಜೆಎಸ್‌ಎಸ್ ಆಸ್ಪತ್ರೆಗೆ ಪಾರ್ಥಿವ ಶರೀರ ರವಾನಿಸಲಾಗಿತ್ತು. ಇಂದು ಬೆಳಗ್ಗೆ 8:30 ಕ್ಕೆ ಭೈರಪ್ಪ ಅವರ ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಸಿ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ…
ಬಳ್ಳಾರಿ : ಬಳ್ಳಾರಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಸಾವನ್ನಪ್ಪಿದೆ. ಬಳ್ಳಾರಿ ಜಿಲ್ಲೆಯ ಕುರಿಕೊಪ್ಪ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಚರಂಡಿಯಲ್ಲಿ ಮಗು ಒದ್ದಾಡಿ, ನರಳಾಡಿ, ಪ್ರಾಣಬಿಟ್ಟ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯ ಮುಂದೆ ಅರವಿಂದ್ ಎನ್ನುವ ಬಾಲಕ ಆಟವಾಡುತ್ತಿದ್ದ. ಈ ವೇಳೆ ಕಾಲು ಜಾರಿ ಚರಂಡಿಗೆ ಬಿದ್ದು ಒದ್ದಾಡಿ ನರಳಾಡಿ ಮಗು ಪ್ರಾಣ ಬಿಟ್ಟಿದೆ. ರಾತ್ರಿ ಇಡಿ ಮಗುವಿಗಾಗಿ ಕುಟುಂಬ ಹುಡುಕಾಡಿದೆ. ಚರಂಡಿಯಲ್ಲಿ ಬಿದ್ದಿದ್ದು ಕುಟುಂಬಸ್ಥರಿಗೆ ಗೊತ್ತಾಗಿಲ್ಲ. ಆದರೆ ಬೆಳಿಗ್ಗೆ ಚರಂಡಿಯಲ್ಲಿ ನೋಡಿದಾಗ ಮಗುವಿನ ಮೃತ ದೇಹ ಪತ್ತೆಯಾಗಿದೆ. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬಾಗಲಕೋಟೆ : ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!
ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ದುರಂತ ಒಂದು ನಡೆದಿದ್ದು, ಹಾಸ್ಟೆಲ್ ನಲ್ಲಿ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ಅನುಮಾನಾಸ್ಪದವಾಗಿ ಸಾವನಪ್ಪಿದ್ದಾಳೆ. ಸೀಮಾ ರಾಥೋಡ್ (17) ಎನ್ನುವ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಬಾಗಲಕೋಟೆ ನಗರದ ವಿದ್ಯಗಿರಿಯಲ್ಲಿರುವ ಹಾಸ್ಟೆಲ್ನಲ್ಲಿ ಈ ಒಂದು ಘಟನೆ ನಡೆದಿದೆ. ನಿನ್ನೆ ಸಂಜೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಸೀಮಾ ರಾಠೋಡ್ ಶವ ಪತ್ತೆಯಾಗಿದೆ. ನೇಣು ಬಿಗಿದಿರುವ ಸ್ಥಿತಿ ಕಂಡು ಇತರೆ ವಿದ್ಯಾರ್ಥಿನಿಯರು ಹೆದರಿದ್ದಾರೆ. ಹಾಸ್ಟೆಲ್ನಿಂದ ಕೂಡಲೇ ಹೊರಗಡೆ ಬಂದಿದ್ದಾರೆ. ಪ್ರಥಮ ಪಿಯುಸಿ ಓದುತ್ತಿದ್ದ ಸೀಮಾ ಬಾಗಲಕೋಟೆಯ ವಾಗ್ದೇವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜಿಗೆ ಸೇರಿದ ಹಾಸ್ಟೆಲ್ ನಲ್ಲಿಯೇ ಸೀಮಾ ಉಳಿದುಕೊಂಡಿದ್ದಾಳೆ . ನಿನ್ನೆ ಸಂಜೆ ಸೀಮಾ ಪೋಷಕರಿಗೆ ಹಾಸ್ಟೆಲ್ ಇಂದ ಕರೆ ಹೋಗಿದೆ. ನಿಮ್ಮ ಮಗಳಿಗೆ ಪಿಟ್ಸ್ ಬಂದಿದೆ ಎಂದು ಪೋಷಕರಿಗೆ ಕರೆ ಹೋಗಿದೆ. ಈಗ ನೇಣು ಹಾಕು ಹಾಕಿಕೊಂಡಿದ್ದಾಳೆ ಅಂತಿದ್ದಾರೆ ಅಂತ ಪೋಷಕರು ಹೇಳಿದ್ದಾರೆ. ಹಾಗಾಗಿ ಮಗಳ ಸಾವಿನ ಬಗ್ಗೆ ಪೋಷಕರಿಗೆ ಅನುಮಾನ…
ಗದಗ : ರಾಜ್ಯದಲ್ಲಿ ಬೀದಿ ನಾಯಿಗಳ ದಾಳಿ ಮುಂದುವರೆದಿದ್ದು, ಇದೀಗ ಗದಗದಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಗಳು ಬಾಲಕಿಯ ಮೇಲೆ ಭೀಕರವಾದ ದಾಳಿ ನಡೆಸಿವೆ. ನಾಯಿಗಳ ದಾಳಿಯಿಂದ ಏಳು ವರ್ಷದ ಬಾಲಕಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡ ಬಾಲಕಿಯನ್ನು ಶ್ರೇಯ (7) ಎಂದು ತಿಳಿದುಬಂದಿದೆ. ಗದಗ್ ಬಸ್ ನಿಲ್ದಾಣದ ಹಿಂಭಾಗದಲ್ಲಿ 7 ವರ್ಷದ ಬಾಲಕಿಯ ಮೇಲೆ ಏಕಾಏಕಿ ನಾಯಿಗಳು ದಾಳಿ ನಡೆಸಿವೆ. 7 ವರ್ಷದ ಬಾಲಕಿಯ ಆಟೋದಿಂದ ಇಳಿದು ಮನೆಗೆ ಹೋಗುತ್ತಿದ್ದಳು. ಈ ವೇಳೆ ಬಾಲಕಿಯ ಮೇಲೆ ಬೀದಿ ನಾಯಿಗಳು ಅಟ್ಯಾಕ್ ಮಾಡಿವೆ ತಲೆ ಕಣ್ಣು ಮುಖ ಮತ್ತು ಕೈಕಾಲು ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ. ನಾಯಿಗಳ ದಾಳಿಗೆ ಶ್ರೇಯ ತೀವ್ರವಾಗಿ ಗಾಯಗೊಂಡಿದ್ದಾಳೆ. ಸದ್ಯ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗ : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಈ ಒಂದು ಸಮೀಕ್ಷೆ ನಡೆಸಲು ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಕರ್ತವ್ಯಕ್ಕೆ ಗೈರು ಆಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ. ಹೌದು ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯಾದ್ಯಂತ ಈಗಾಗಲೇ ಆರಂಭವಾಗಿದೆ. ಕರ್ತವ್ಯಕ್ಕೆ ಗೈರು ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹೊಸನಗರ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿ ಎಂ.ರಂಗನಾಥ್ ಅಮಾನತು ಮಾಡಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ. ಸಮೀಕ್ಷೆ ನಡೆಯುತ್ತಿದ್ದರು ಕೂಡ ಎಂ ರಂಗನಾಥ ಕೆಲಸಕ್ಕೆ ರಜೆ ಹಾಕಿದ್ದಾರೆ. ಸಮೀಕ್ಷೆ ಮಾಡುವ ಒಂದಿಷ್ಟು ಜವಾಬ್ದಾರಿ ಹೊಂದಿದ್ದಾರೆ. ರಂಗನಾಥ್ ಬಿ ಆರ್ ಎಸ್ ಕೇಂದ್ರದ ಸಮನ್ವಯ ಅಧಿಕಾರಿಯಾಗಿದ್ದಾರೆ. ರಜೆ ಹಾಕಿ ಅಧಿಕಾರಿಗಳ ದೂರವಾಣಿ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ರಂಗನಾಥ್ ಅಮಾನತುಗೊಳಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ.…
ಬೆಂಗಳೂರು : ಪಕ್ಷ ವಿರೋಧಿ ಹಾಗೂ ಪಕ್ಷಕ್ಕೆ ಮುಜುಗರ ತರುವಂತಹ ಹೇಳಿಕೆ ನೀಡಿದ್ದರಿಂದ ಈ ಹಿಂದೆ ಮಾಜಿ ಸಚಿವ ಕೆ. ಎನ್ ರಾಜಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದರ ಬೆನ್ನಲ್ಲೇ ಇದೀಗ ಪಕ್ಷವಿರೋಧಿ ಹಾಗೂ ಮುಜುಗರ ತರುವಂತ ಹೇಳಿಕೆ ನೀಡಿದ್ದರಿಂದ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ತೆಗೆದುಹಾಕಲಾಗಿದೆ ಎಂದು ಹೇಳಲಾಗುತ್ತಿತ್ತು. ಆದರೆ ಸಿಎಂ ಸಿದ್ದರಾಮಯ್ಯ ನಿಗಮ ಸ್ಥಾನದಿಂದ ನಿಮ್ಮನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಹೌದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರ ಪಟ್ಟಿಯಲ್ಲಿ ಇದೀಗ ಗೊಂದಲ ಉಂಟಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದಾರೆ. ಎಐಸಿಸಿ ಬಿಡುಗಡೆಗೊಳಿಸಿದ ಪಟ್ಟಿಯಲ್ಲಿ ಅರುಣ್ ಪಾಟೀಲ್ ಹೆಸರು ಉಲ್ಲೇಖವಾಗಿದೆ. ನಿನ್ನೆ ರಾಜು ಕಾಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದ್ದಾರೆ. ನಿಗಮದ…
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿಗೆ ರಾಜ್ಯ ಸರ್ಕಾರ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿಯವರು ಇಂದು ಭೇಟಿ ನೀಡಿ ಪ್ರಕರಣದ ಮಾಹಿತಿ ನೀಡಿದರು. ಹೌದು ಧರ್ಮಸ್ಥಳ ಬುರುಡೆ ಪ್ರಕರಣದ ಕುರಿತಂತೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮಹಾಂತಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ತನಿಖಾ ಪ್ರಗತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧಪಟ್ಟ ಆರೋಪಿ ಚಿನ್ನಯ್ಯ ಪರ ವಕೀಲರು ಸುಪ್ರೀಂಕೋರ್ಟಿಗೆ ಪಿಐಎಲ್ ಸಲ್ಲಿಸಿದರು. ನಿನ್ನೆ ಸುಪ್ರೀಂಕೋರ್ಟ್ ಪಿಐಎಲ್ ಅನ್ನು ವಜಾ ಗೊಳಿಸಿತ್ತು. ಅರ್ಜಿ ಸಲಿಸಿದ್ದನ್ನು ಚಿನ್ನಯ್ಯ ಮತ್ತು ಬುರುಡೆ ಗ್ಯಾಂಗ್ ಮುಚ್ಚಿಟ್ಟಿತ್ತು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಈ ಒಂದು ಬ್ಯಾಂಕ್ ಮುಜುಗರ ತಂದಿತ್ತು ಈ ಬಗ್ಗೆ ಪ್ರಣವ್ ಮೋಹಂತಿ ದಾಖಲೆ ಸಮೇತ ಜಿ ಪರಮೇಶ್ವರ್ ಅವರಿಗೆ ಮಾಹಿತಿ ನೀಡಿದರು.
ಬೆಂಗಳೂರು : ಬೆಂಗಳೂರಿನ ಮಲ್ಲೇಶ್ವರಂ ನ ಫರ್ನಿಚರ್ ಶಾಪ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಸುಟ್ಟು ಭಸ್ಮವಾಗಿವೆ. ಮಲ್ಲೇಶ್ವರಂ ದತ್ತಾತ್ರೇಯ ದೇಗುಲದ ರಸ್ತೆಯಲ್ಲಿರುವ ಫರ್ನಿಚರ್ ಶಾಪ್ ನಲ್ಲಿ ಬೆಂಕಿ ಹತ್ತಿಕೊಂಡಿದೆ. ಪಕ್ಕದ ಅಪಾರ್ಟ್ಮೆಂಟ್ಗು ಕೂಡ ಬೆಂಕಿ ವ್ಯಾಪಿಸಿದೆ ತಕ್ಷಣ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಘಟನಾ ಸ್ಥಳಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ,ರಾತ್ರಿ 3 ಗಂಟೆಗೆ ಈ ಒಂದು ಬೆಂಕಿ ಅವಗಡ ಸಂಭವಿಸಿದೆ. ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಯಾವುದೇ ರೀತಿಯಾದ ಪ್ರಾಣ ಹಾನಿ ಆಗಿಲ್ಲ ಆದರೆ ಫರ್ನಿಚರ್ ಮಾಲೀಕರಿಗೆ ತುಂಬಾ ನಷ್ಟವಾಗಿದೆ. ಅಕ್ಕ ಪಕ್ಕದ ಮನೆಗಳಿಗೂ ಕೂಡ ಬೆಂಕಿ ವ್ಯಾಪಿಸಿದೆ. ಸ್ವಲ್ಪ ಮಟ್ಟಿಗೆ ಅಕ್ಕ ಪಕ್ಕದ ಮನೆಗಳಿಗೂ ಹಾನಿಯಾಗಿದೆ ಸದ್ಯಕ್ಕೆ ಯಾವುದೇ ರೀತಿ ಅನಾಹುತ ಆಗಲಿಲ್ಲ. ಈ ತರಹ ಅನಾಹುತ ಆದಾಗ ತಕ್ಷಣ ಸಾರ್ವಜನಿಕರು ಅಗ್ನಿಶಾಮಕ ಕಚೇರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಬೆಂಗಳೂರು : ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, 10 ದಿನಗಳ ಬಳಿಕ ಹ್ಯಾಕರ್ ಗಳ ಮೂಲ ಇದೀಗ ಪತ್ತೆಯಾಗಿದೆ. ಹ್ಯಾಕರ್ ಮೂಲವನ್ನು ಬೆಂಗಳೂರು ಪೊಲೀಸರು ಪತ್ತೆ ಹಚ್ಚಿದ್ದಾರೆ. ಸದಾಶಿವನಗರ ಠಾಣೆ ಪೊಲೀಸರ ಮೂಲ ಪತ್ತೆ ಹಚ್ಚಿದ್ದಾರೆ. ಮೊದಲು ನಟಿ ಪ್ರಿಯಾಂಕ ಮೊಬೈಲ್ ಅವರ ಹ್ಯಾಕ್ ಆಗುತ್ತೆ. ಬಳಿಕ ನಟ ಉಪೇಂದ್ರ ಅವರ ಮೊಬೈಲ್ ಸಹ ಹ್ಯಾಕ್ ಆಗುತ್ತದೆ. ಈ ಮೊದಲು ಹಲವರ ಮೊಬೈಲ್ ಹ್ಯಾಕ್ ಮಾಡಿ ಹಣವನ್ನು ನಾಲ್ಕು ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಎಲ್ಲಾ ನಕಲಿ ಖಾತೆಗಳಿಗೂ ಹಣ ವರ್ಗಾವಣೆ ಆಗಿದೆ. ಬಳಿಕ ನಳಂದ ಬ್ಯಾಂಕಿಗೆ ಹಣವನ್ನು ಟ್ರಾನ್ಸ್ಯಾಕ್ಷನ್ ಮಾಡಲಾಗಿದೆ 1.65 ಲಕ್ಷ ಹಣವನ್ನು ಸೈಬರ್ ವಂಚಕರು ವರ್ಗಾವಣೆ ಮಾಡಿಕೊಂಡು ನಕಲಿ ಖಾತೆಯನ್ನು ಬ್ಲಾಕ್ ಮಾಡಿದ್ದಾರೆ. ಇನ್ನು ಕೆಲವರು ಡೌಟ್ ಬಂದು ಹಣ ಕಳಿಸಿರಲಿಲ್ಲ. ಅದಾದ ಮೇಲೆ ಉಪೇಂದ್ ಅವರ ಪತ್ನಿಗೆ ನಮ್ಮ ಫೋನ್ ಹ್ಯಾಕ್ ಆಗಿರುವುದು ಗೊತ್ತಾಗಿದೆ. ನಾಲ್ಕೈದು ಜನ ಬಿಹಾರಿ ಗ್ಯಾಂಗ್…







