Subscribe to Updates
Get the latest creative news from FooBar about art, design and business.
Author: kannadanewsnow05
ಬಾಗಲಕೋಟೆ : ರಾಜಸ್ಥಾನದಲ್ಲಿ ಕರ್ತವ್ಯ ನಿರತದಲ್ಲಿದ್ದ ಬಾಗಲಕೋಟೆ ಮೂಲದ ಯೋಧರು ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತ ಯೋಧರನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಎಂದು ತಿಳಿದುಬಂದಿದೆ.ಮಾಗೊಂಡಯ್ಯ ಕಳೆದ 14 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬೆಳಗಾವಿ ಮರಾಠಾ ಇನ್‌ಫೆಂಟ್ರಿ ಯುನಿಟ್ 19 ಮೆಕ್ಯಾನಿಕ್ ಸಿ/ಒ 56 ಎಪಿಒ ಬಿಕಾನರ್ ಕಾಂಟ್ ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತ ಯೋಧ ಮಾಗೊಂಡಯ್ಯ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಮಕ್ಕಳೊಂದಿಗೆ ಯೋಧ ರಾಜಸ್ಥಾನದಲ್ಲಿ ನೆಲೆಸಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಜ. 15ರಂದು ನಂದಿಕೇಶ್ವರ ಗ್ರಾಮದಲ್ಲಿ ಯೋಧನ ಅಂತ್ಯಕ್ರಿಯೆ ನಡೆಯಲಿದೆ.
ಹಾಸನ : ರಸ್ತೆ ಬದಿಯ ಕ್ಯಾಂಟೀನ್ ಗೆ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದು ಉಳಿದ ಮೂವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗುಳಗಳಲೇ ಎಂಬಲ್ಲಿ ನಡೆದಿದೆ. ಹೌದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗುಳಗಳಲೆ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗುಳಗಳಲೇ ಗ್ರಾಮದಲ್ಲಿ ರಸ್ತೆ ಬರಿಯ ಕ್ಯಾಂಟೀನ್ ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಮೂಲದ ವೀರೇಶ್ ಹಾಗೂ ಲಾರಿಯಲ್ಲಿದ್ದ ವ್ಯಕ್ತಿ ಸಾವನಪ್ಪಿದ್ದಾನೆ. ಘಟನೆಯಲ್ಲಿ ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು ಕೂಡಲೇ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಹೆಚ್ಚಿನ ಚಿಕಿತ್ಸೆಗಾಗಿ ಗಾಯಗೊಂಡ ಮೂವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಕುರಿತು ಸಕಲೇಶಪುರ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ : ಕಳೆದ ವರ್ಷ ಬೆಂಗಳೂರಿನಲ್ಲಿ ಪತ್ನಿಯ ಕಿರುಕುಳಕ್ಕೆ ಬೇಸತ್ತು ಟಕ್ಕಿ ಅಥವಾ ಶುಭಾಶಯ ಮಾಡಿಕೊಂಡಿದ್ದರು ಇದೀಗ ಧಾರವಾಡದಲ್ಲೂ ಇಂತಹದ್ದೇ ಘಟನೆ ನಡೆದಿದ್ದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಶಿವರಾಜ್ ಎತ್ತಿನಗುಡ್ಡ (35) ಎಂದು ತಿಳಿದುಬಂದಿದೆ. ಕಳೆದ ನವೆಂಬರ್ 16ರಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೊದಲಿಗೆ ಗರಗ ಪೊಲೀಸರು ಇದೊಂದು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಡೆತ್‌ನೋಟ್ ಶಿವರಾಜನೇ ಬರೆದಿದ್ದು ಎಂದು ಎಫ್‌ಎಸ್‌ಎಲ್ ವರದಿ ಬಂದ ಹಿನ್ನೆಲೆಯಲ್ಲಿ ಪತ್ನಿಯೇ ಸಾವಿಗೆ ಕಾರಣ ಎಂದು ಗರಗ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. ಶಿವರಾಜ್ ಎತ್ತಿನಗುಡ್ಡ ಕಳೆದ 2024 ರ ಜುಲೈನಲ್ಲಿ ಮದುವೆಯಾಗಿದ್ದರು. ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಹೈಸ್ಕೂಲ್ ಶಿಕ್ಷಕಿ ಯಲ್ಲವ್ವ ಬೆಂಗೇರಿ ಎಂಬುವವಳ ಜೊತೆ ಮದುವೆಯಾಗಿದ್ದರು.ಮದುವೆಯಾದ 15 ದಿನದಲ್ಲೇ ಯಲ್ಲವ್ವ ಪೋಷಕರ ಮನೆಗೆ ಹೋಗಿದ್ದರು. ಶಿವರಾಜ್ ಆಗ ಪತ್ನಿಗೆ ಮನೆಗೆ ಕರೆ ತರಲು ಸಾಕಷ್ಟು…
BREAKING : ಹುಬ್ಬಳ್ಳಿಯಲ್ಲಿ ‘ಮುಸ್ಲಿಂ’ ಧರ್ಮಕ್ಕೆ ಮತಾಂತರವಾಗುವಂತೆ ಕಿರುಕುಳ : ಪತಿಯ ವಿರುದ್ಧ ಪತ್ನಿ ದೂರು ದಾಖಲು!
ಹುಬ್ಬಳ್ಳಿ : ಮುಸ್ಲಿಂ ಯುವಕನನ್ನು ಮದುವೆಯಾಗಿದ್ದ ಹಿಂದೂ ಯುವತಿಗೆ ಪತಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಕಿರುಕುಳ ನೀಡಿದ್ದಾನೆ ಈ ವಿಚಾರವಾಗಿ ಪತ್ನಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ಇದೀಗ ದೂರು ದಾಖಲಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪತಿ ಶಫಿ ಅಹ್ಮದ್ ಕರ್ನೂಲ್ ವಿರುದ್ಧ ಪತ್ನಿ ಲಕ್ಷ್ಮೀ ಕಿರುಕುಳ ಆರೋಪ ಮಾಡಿದ್ದಾರೆ. ಈ ಕುರಿತು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ಧ ದೂರನ್ನು ಸಹ ದಾಖಲಿಸಿದ್ದಾರೆ.ಇವರು ಕಳೆದ 2014-15ರಲ್ಲಿ ಪ್ರೀತಿಸಿ ರಿಜಿಸ್ಟರ್ ಮದುವೆಯಾಗಿದ್ದರು. 2017ರಲ್ಲಿ ಅಧಿಕೃತವಾಗಿ ಮದುವೆಯಾಗಿದ್ದರು. ಬಳಿಕ ಶಫಿ ಮತ್ತು ಲಕ್ಷ್ಮೀ ದಂಪತಿ ಹುಬ್ಬಳ್ಳಿಯ ಮಂಟೂರು ರಸ್ತೆ ವಾಸವಾಗಿದ್ದರು. ಅನಿಲ್ ಎಂಬ ಹೆಸರು ಹೇಳಿ ಶಫಿ ಅಹ್ಮದ್ ಮದುವೆಯಾಗಿದ್ದ. ಶಫಿ ಸುಳ್ಳು ಹೇಳಿ ಮದುವೆಯಾಗಿದ್ದಾನೆಂದು, ಮದುವೆ ಬಳಿಕ ಇಸ್ಲಾಂಗೆ ಮತಾಂತರವಾಗುವಂತೆ ಕಿರುಕುಳ ನೀಡುತ್ತಿರುವುದಾಗಿ ಲಕ್ಷ್ಮೀ ಆರೋಪಿಸಿದ್ದಾರೆ. ಸದ್ಯ ಈ ವಿಚಾರವಾಗಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಲಕ್ಷ್ಮೀ ದೂರು ನೀಡಿದ್ದಾರೆ.
ಕಲಬುರ್ಗಿ : ಬೀದರ್ ನಲ್ಲಿ ರೈಗೆ ತಲೆಕೊಟ್ಟು ಯುವ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಪ್ರಕರಣದ ಪ್ರಮುಖ ಆರೋಪಿಯಾಗಿರುವ ರಾಜು ಕಪನೂರು ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹೌದು ಆರೋಪಿ ರಾಜು ಕಪನೂರು ಮನೆಯ ಮೇಲೆ ಸಿಐಡಿ ದಾಳಿ ಮಾಡಿದೆ. ಇದೆ ವೇಳೆ ರಾಜು ಕಪನೂರ್ ಸೇರಿ ನಾಲ್ವರು ಆರೋಪಿಗಳ ಮೇಲೆ ಮನೆಯ ಮೇಲೆ ಸಿಐಡಿ ದಾಳಿ ಮಾಡಿದೆ ಎಂದು ತಿಳಿದುಬಂದಿದೆ. ಈಗಾಗಲೇ ಬಂಧಿತ ಎಲ್ಲಾ ಆರೋಪಿಗಳನ್ನು 14 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ. ಕಲಬುರ್ಗಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ರಾಜು ಕಪನೂರ್ ನಿವಾಸದ ಮೇಲೆ ದಾಳಿ ಮಾಡಿದ್ದು ಅವರಲ್ಲದೆ ಉಳಿದ ಆರೋಪಿಗಳಾದ ಗೊರಖ್ ನಾಥ್, ರಾಮನಗೌಡ, ನಂದಕುಮಾರ್ ನಾಲ್ವರು ಆರೋಪಗಳ ಮನೆಯಲ್ಲಿ ಸಿಐಡಿ ಇದೀಗ ಶೋಧ ಕಾರ್ಯ ನಡೆಸಿದ್ದಾರೆ ಇಬ್ಬರು ಡಿವೈಎಸ್ಪಿ ಇನ್ಸ್ಪೆಕ್ಟರ್ 40 ಸಿಬ್ಬಂದಿಗಳಿಂದ ಇದೀಗ ತನಿಖೆ ಚುರುಕು ಗೊಳಿಸಿದ್ದಾರೆ.
ಬೆಂಗಳೂರು : ನಟಿ ರಾಗಿಣಿ ದ್ವಿವೇದಿ ಹೆಸರು ಡ್ರಗ್ಸ್ ಕೇಸ್ನಲ್ಲಿ ತಳುಕು ಹಾಕಿಕೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 2020ರ ಸೆಪ್ಟೆಂಬರ್ನಲ್ಲಿ ರಾಗಿಣಿ ಅವರನ್ನು ಬಂಧಿಸಲಾಗಿತ್ತು. ಅವರು ಹಲವು ದಿನ ಜೈಲಿನಲ್ಲೂ ಕೂಡ ಇದ್ದರು. ನಾಲ್ಕು ವರ್ಷಗಳ ಬಳಿಕ ಡ್ರಗ್ಸ್ ಕೇಸ್ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ. ನಟಿಯ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಕೇಸ್ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಇದರಿಂದ ರಾಗಿಣಿ ಅವರು ರಿಲೀಫ್ ಆಗಿದ್ದಾರೆ. ಹೌದು ರಾಗಿಣಿ ವಿರುದ್ಧ ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೆ ಅವಕಾಶ ನೀಡಲಾಗಿತ್ತು ಎನ್ನುವ ಆರೋಪವಿತ್ತು, ಆದರೆ ಆರೋಪದ ಯಾವುದೇ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಿಲ್ಲ. ಕೇವಲ ಸಹ ಆರೋಪಿಗಳ ಹೇಳಿಕೆ ಆಧರಿಸಿ ಕೇಸ್ ದಾಖಲಿಸಲಾಗಿದೆ ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಂಡಿಸಿದ್ದರು.ಪ್ರಕರಣದ ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠದನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ. ಎ. ನಾಲ್ಕು ಆರೋಪಿ ಪ್ರಶಾಂತ್ ರಂಕಾ ವಿರುದ್ಧದ…
ಬೆಳಗಾವಿ : ರಸ್ತೆ ಮೇಲೆ ನಾಯಿ ಅಡ್ಡ ಬಂದಿದ್ದಕ್ಕೆ ಅದನ್ನು ತಪ್ಪಿಸಲು ಹೋಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿದ್ದು, ಈ ಒಂದು ಅಪಘಾತದಲ್ಲಿ ಅವರ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಈ ಕುರಿತು ಆಸ್ಪತ್ರೆಯ ವೈದ್ಯ ರವಿ ಪಾಟೀಲ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನುಮೂಳೆ ಮುರಿದಿದೆ ಎಂದು ಹೇಳಿಕೆ ನೀಡಿದ್ದಾರೆ. ಬೆಳಗಾವಿಯ ಹಿರಿಯ ಆಸ್ಪತ್ರೆಯ ವೈದ್ಯರದಂತಹ ಡಾ. ರವಿ ಪಾಟೀಲ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಎರಡು ದಿನಗಳ ಬಳಿಕ ಸಚಿವೆ ಹೆಬ್ಬಾಳ್ಕರ್ ಅವರ ಆರೋಗ್ಯದ ಸ್ಥಿತಿ ಪರಿಗಣಿಸಿ ಡಿಸ್ಚಾರ್ಜ್ ಮಾಡಲಾಗುತ್ತದೆ. ಸಚಿವೆ ಹೆಬ್ಬಾಳ್ಕರ್ ಅವರಿಗೆ ಒಂದು ತಿಂಗಳು ಬೆಡ್ ರೆಸ್ಟ್ ಬೇಕಾಗುತ್ತದೆ ಚನ್ನರಾಜಟಿಹೊಳಿ ತಲೆಗೆ ಪೆಟ್ಟಾಗಿದ್ದು ಹೆಚ್ಚಿನ ಗಾಯಗಳಾಗಿಲ್ಲ ಎಂದು ಬೆಳಗಾವಿಯ ವಿಜಯ ರವಿ ಪಾಟೀಲ್ ಕುರಿತು ಹೇಳಿಕೆ ನೀಡಿದರು. ಹೆಬ್ಬಾಳ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು…
ಬೆಂಗಳೂರು : ಕನ್ನಡದ ರಿಯಾಲಿಟಿ ಶೋಗಳಲ್ಲಿ ಅತ್ಯಂತ ಜನಪ್ರಿಯವಾದ ರಿಯಾಲಿಟಿ ಶೋ ಸದ್ಯಕ್ಕೆ ಬಿಗ್ ಬಾಸ್ ಸೀಸನ್ 11. ಈಗಾಗಲೇ ಬಿಗ್ ಬಾಸ್ ಸ್ಪರ್ಧಿ ಹಾಗೂ ಕನ್ನಡ ನಾಡಿನ ಎಲ್ಲ ಜನತೆಗೆ ಮೆಚ್ಚುಗೆಗೆ ಪಾತ್ರವಾದಂತಹ ಹನುಮಂತು ಟಿಕೆಟ್ ಟು ಫಿನಾಲೆ ಟಾಸ್ಕ್ ಗೆದ್ದು ಫಿನಾಲೆಗೆ ಹೋಗಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಿಂದ ಆಚೆ ಹೋಗಿದ್ದಾರೆ. ಇದೆಲ್ಲದರ ಮಧ್ಯ ಮತ್ತೊಂದು ವಿಷಯ ಹರಿದಾಡುತ್ತಿದ್ದು, ಫಿನಾಲೆ ಇನ್ನು ಕೆಲವೇ ದಿನಗಳಿಷ್ಟೇ ಇವೆ. ಈ ನಡುವೆ ವಿಕಿಪಿಡಿಯಾ ಬಿಗ್ ಬಾಸ್ ಸೀಸನ್ -11ರ ವಿನ್ನರ್ ಯಾರೆಂದು ಫಿನಾಲೆಗೂ ಮೊದಲೇ ಹೆಸರು ರಿವೀಲ್ ಮಾಡಿ ಇಕ್ಕಟ್ಟಿಗೆ ಸಿಲುಕಿದೆ. ವಿಕಿಪಿಡಿಯಾದಲ್ಲಿ ಹನುಮಂತು ವಿನ್ನರ್, ತ್ರಿವಿಕ್ರಮ್ ರನ್ನರ್ ಅಪ್ ಎಂದು ವಿಕಿಪಿಡಿಯಾದಲ್ಲಿ ಹಾಕಲಾಗಿದೆ. ಫಿನಾಲೆಗೂ ಮುನ್ನ ಈ ರೀತಿ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಇದನ್ನು ನೋಡಿ ಕೆಲ ವೀಕ್ಷಕರು ಖುಷ್ ಆಗಿದ್ದು, ಇನ್ನು ಕೆಲವರು ಪ್ರಶ್ನೆ ಮಾಡಿದ್ದಾರೆ. ಚೈತ್ರಾ ಆಚೆ ಹೋದ ಬಳಿಕ ಬಿಗ್…
ಹಾಸನ : ಹಾಸನದಲ್ಲಿ ಚಲಿಸುತ್ತಿದ್ದಂತಹ ಕೆಎಸ್ಆರ್ಟಿಸಿ ಬಸ್ಸಿನ ಚಕ್ರಗಳು ಏಕಾಏಕಿ ಕತ್ತರಿಸಿ ಕಳಚಿ ಬಿದ್ದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಈ ಒಂದು ಅನಾಹುತ ನಡೆದಿದೆ ಆದರೆ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿ ಇದ್ದಂತಹ ಪ್ರಯಾಣಿಕರು ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೌದು ಸಕಲೇಶಪುರ ತಾಲೂಕಿನ ಬ್ಯಾದನೆ ಬಳಿ ಭಾರಿ ಅನಾಹುತ ಒಂದು ತಪ್ಪಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಚಲಿಸುತ್ತಿದ್ದ ಬಸ್ನ ಚಕ್ರಗಳು ಏಕಾಏಕಿ ಕತ್ತರಿಸಿ ಬಿದ್ದಿವೆ. ಸಕಲೇಶಪುರದಿಂದ ಕೆಎಸ್ಆರ್ಟಿಸಿ ಬಸ್ ಬೇಲೂರಿಗೆ ತೆರುಳುತ್ತಿತ್ತು. ಚಕ್ರಗಳು ಕಳಚಿ ಬೀಳುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಡ್ಡಾದಿಡ್ಡಿ ಚಲಿಸಿದೆ. ಕೂಡಲೇ ಚಾಲಕ ಬಸ್ ಅನ್ನು ನಿಲ್ಲಿಸಿ ಪ್ರಯಾಣಿಕರನ್ನು ಪ್ರಾಣಪಾಯದಿಂದ ಪಾರು ಮಾಡಿದ್ದಾನೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಈ ಒಂದು ಭಾರಿ ದುರಂತ ಇದೀಗ ತಪ್ಪಿದೆ. ಘಟನೆ ಕುರಿತಂತೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು : ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಕ್ಷಸನೊಬ್ಬ ರಸ್ತೆಯ ಮೇಲೆ ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ. ಇಂದು ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ. ಈ ಒಂದು ಘಟನೆ ಮಾಸುವ ಮುನವೇ ಚಿಕ್ಕಮಂಗಳೂರಿನಲ್ಲಿ ಸ್ವೀಟ್ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಸ್ವೀಟ್ ಮಾರಾಟ ಮಾಡುವ ನೆಪದಲ್ಲಿ ಇಬ್ಬರು ಆರೋಪಿಗಳು ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಒಂದು ಘಟನೆ ಬೆಳಕಿಗೆ ಬಂದಿದೆ. ಅಸ್ಸಾಮಿನಿಂದ ಬಂದು ಸಂತೆಯಲ್ಲಿ ಸ್ವೀಟ್ ಜೊತೆಗೆ ಗೋಮಾಂಸ ಮಾರಾಟ ಮಾಡಲಾಗುತ್ತಿತ್ತು. ಅಕ್ರಮ ಬಾಂಗ್ಲಾದೇಶ ನಿವಾಸಿಗಳು ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಸ್ವೀಟ್ ಡಬ್ಬದ ಪಕ್ಕದಲ್ಲಿನ ಬ್ಲಾಕ್ ಬ್ಯಾಗ್ ನಲ್ಲಿ ಗೋಮಾಂಸ ಪತ್ತೆಯಾಗಿದೆ. ಗೋಮಾಂಸದ ಸಮೇತ ಪೊಲೀಸರು ಮಾರಾಟಗಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಫಿ ತೋಟದ ಕೆಲಸಕ್ಕೆ ಬಂದಿದ್ದವರಿಂದ ಗೋಮಾಂಸ ಮಾರಾಟ ಮಾಡಲಾಗುತ್ತಿದೆ. ಬಣಕಲ್…













