Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಎಸ್ಸಿ ಎಸ್ಟಿ ಮತ್ತು ಹಿಂದುಳಿದ ವರ್ಗಗಳ ಸರ್ಕಾರಿ ನೌಕರರಿಗೆ ಮುಂಬಡ್ತಿಯಲ್ಲಿ ನಿಯಮ ಪಾಲನೆ ಆಗುತ್ತಿಲ್ಲ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೆಲವು ಇಲಾಖೆಗಳು ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ಸರ್ಕಾರಿ ಎಸ್.ಸಿ. ಎಸ್.ಟಿ. ನೌಕರರ ಸಂಘದವರು ಎಸ್.ಸಿ.ಎಸ್.ಟಿ ನೌಕರರಿಗೆ ಮುಂಬಡ್ತಿಯನ್ನು ನೀಡುವಲ್ಲಿ ರೋಸ್ಟ‌ರ್ ಬಿಂದುವನ್ನು ಸರ್ಕಾರದ ಆದೇಶದ ಪ್ರಕಾರ ನಗದಿಪಡಿಸಿದ್ದರೂ, ಅದನ್ನು ಕಟುನಿಟ್ಟಾಗಿ ಪಾಲನೆ ಮಾಡಬೇಕೆಂಬ ನಿರ್ದೇಶನವಿದ್ದರೂ ಕೆಲವು ಇಲಾಖೆಗಳ ಅಧಿಕಾರಿಗಳು ಪಾಲನೆ ಮಾಡದಿರುವ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ಕೆಲವು ಪ್ರಮುಖ ಅಂಶಗಳ ಜೊತೆಗೆ…

Read More

ಬೆಂಗಳೂರು : ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿದ್ದ ಬಹುಭಾಷಾ ಹಿರಿಯ ನಟಿ ಬಿ ಸರೋಜಾ ದೇವಿ ಅವರು ನಿನ್ನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಡೀ ಕನ್ನಡ ಚಿತ್ರರಂಗದ ಎಲ್ಲಾ ಕಲಾವಿದರು ಸರೋಜಾ ದೇವಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯಾತಿ ಗಣ್ಯರು ಇದೀಗ ಬಿ.ಸರೋಜಾದೇವಿಯವರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸರೋಜಾ ದೇವಿಯವರ ಅಂತಿಮ ದರ್ಶನ ಪಡೆಯದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ಬಹಳ ಚಿಕ್ಕ ವಯಸ್ಸಿನಲ್ಲಿ ಸರೋಜಾ ದೇವಿಯವರು ಸಿನಿಮಾರಂಗ ಪ್ರವೇಶಿಸಿದ್ದರು. ಕನ್ನಡ ಚಲನಚಿತ್ರರಂಗ ಬೆಳೆಯಲು ಸರೋಜಾ ದೇವಿ ಅವರ ಕೊಡುಗೆ ಅಪಾರ. ಹಿರಿಯ ನಟಿ ಬಿ ಸರೋಜಾ ದೇವಿ ನಿಧನದಿಂದ ಅಪಾರ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ನಟಿ ಸರೋಜಾದೇವಿ ಅವರಿಗೆ ಚಿರಶಾಂತಿ ಸಿಗಲಿ ನಾನು ಈ ಹಿಂದೆ ಹಲವು…

Read More

ಉಡುಪಿ : ಉಡುಪಿಯಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ನಾಡ ದೋಣಿ ಮಗುಚಿ ಮೂವರುಮರುಕಾರರು. ಮೀನುಗಾರರು ನೀರು ಪಾಲಾಗಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ರಾಜ್ಯದಲ್ಲಿ ಅಪಾರ ಪ್ರಮಾಣದ ಮಳೆಯಾಗುತ್ತಿರುವುದರಿಂದ ಭಾರಿ ಪ್ರಮಾಣದಲ್ಲಿ ಹಳ್ಳಕೊಳ್ಳ ಮತ್ತು ನದಿಗಳು ತುಂಬಿ ಹರಿಯುತ್ತಿದ್ದು, ಆದರೂ ನಿರ್ಲಕ್ಷ ವಹಿಸಿ ಮೀನುಗರಾರು ಮೀನು ಹಿಡಿಯೋದಕ್ಕೆ ತೆರಳಿದ್ದಾರೆ.ನೀರು ಪಾಲಾದ ಮೂವರು ಮೀನುಗಾರರನ್ನು ಸುರೇಶ್ ಖಾರ್ವಿ (45) ರೋಹಿತ್ ಖಾರ್ವಿ (38) ಹಾಗೂ ಜಗ್ಗು ಅಲಿಯಾಸ್ ಜಗದೀಶ್ ಖಾರ್ವಿ (36) ಎಂದು ತಿಳಿದುಬಂದಿದೆ. ಮೀನುಗಾರಿಕೆಗೆ ಮೂವರು ಮೀನುಗಾರರು ಸಮುದ್ರಕ್ಕೆ ಇಳಿದಿದ್ದರು. ಕಡಲಬ್ಬರ ಕಂಡು ಮೀನುಗಾರರು ವಾಪಸ್ ಆಗುತ್ತಿದ್ದರು. ಈ ವೇಳೆ ಓರ್ವ ಮೀನುಗಾರ ಅಲೆಗಳ ಅಬ್ಬರಕ್ಕೆ ಸಮುದ್ರಕ್ಕೆ ಬಿದ್ದಿದ್ದಾನೆ. ನೀರಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಇನ್ನಿಬ್ಬರು ಮುಂದಾಗಿದ್ದಾರೆ. ಈ ವೇಳೆ ಮೂವರು ಸಮುದ್ರ ಪಾಲಾಗಿದ್ದಾರೆ. ನಾ ಪತ್ತೆಯಾದ ಮೂರಿಗಾಗಿ ಸಮುದ್ರದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಈ ಕುರಿತು ಗಂಗೊಳ್ಳಿ ಪೊಲೀಸ್…

Read More

ಬೆಂಗಳೂರು : ಜಾನಪದ ಕಲಾವಿದ ಜೋಗಿಲ ಸಿದ್ದರಾಜುಗೆ ಜಾತಿನಿಂದನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕೆ.ಎಂ ಗಾಯತ್ರಿ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಎಸ್‌ಜೆ ಪಾರ್ಕ್ ಠಾಣೆಯಲ್ಲಿ ಗಾಯತ್ರಿ ಅವರ ವಿರುದ್ಧ FIR ದಾಖಲಾಗಿದೆ. ಜುಲೈ 11ರಂದು ಇಲಾಖೆಯ ನಿರ್ದೇಶಕಿಯನ್ನು ಭೇಟಿಯಾಗಿದ್ದರು. ಪ್ರಾಯೋಜಿತ ತಂಡಗಳ ಸಂಭಾವನೆ ಕೇಳಲು ಸಿದ್ದರಾಜು ಇಲಾಖೆಗೆ ಬಂದಿದ್ದರು. ಸಂಭಾವನೆ ನೀಡುವಂತೆ ಸಿದ್ದರಜು ಮನವಿ ಮಾಡಿದ್ದಾರೆ. ಈ ವೇಳೆ ಜಾತಿ ನಿಂದನೆ ಮಾಡಿದ್ದು ಅಲ್ಲದೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಟೇಬಲ್ ಮೇಲೆ ವಸ್ತುಗಳನ್ನು ಬಿಸಾಡಿ ಹಲ್ಲೆ ಮಾಡಿದ್ದಾರೆ ಎಂದು ಸಿದ್ದರಾಜು ಆರೋಪಿಸಿದ್ದು, ಈ ಸಂಬಂಧ ಸಿದ್ದರಾಜು ಎಸ್ ಜೆ ಪಾರ್ಕ್ ಠಾಣೆಗೆ ದೂರು ನೀಡಿದ್ದರು. ಹಾಗಾಗಿ ಇದೀಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆಎಂ ಗಾಯತ್ರಿ ವಿರುದ್ಧ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.

Read More

ದಕ್ಷಿಣಕನ್ನಡ : ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವು ಮುಂದುವರೆದಿದ್ದು ಇಂದು ಬೆಳಿಗ್ಗೆ ತಾನೇ ಬಳ್ಳಾರಿಯಲ್ಲಿ ಶಾಲೆಗೆ ತೆರಳುವಾಗಲೇ ಕುಸಿದುಬಿದ್ದು 6ನೇ ತರಗತಿ ವಿದ್ಯಾರ್ಥಿನಿ ಸಾವನಪ್ಪಿದ್ದಳು. ಇದೀಗ ದಕ್ಷಿಣ ಕನ್ನಡದಲ್ಲಿ ಕಚೇರಿಗೆ ತೆರಳುವಾಗಲೇ FDA ನೌಕರರೊಬ್ಬರು ಕುಸಿದು ಬಿದ್ದು ಸಾವನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹೃದಯಾಘಾತದಿಂದ FDA ನೌಕರ ಬಲಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೃದಯಘಾತದಿಂದ ಹಾಸನ ಮೂಲದ ಸತೀಶ್ (46) ಇದೀಗ ಸಾವನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಸತೀಶ್ ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಳಿಗ್ಗೆ ಮನೆಯಲ್ಲಿ ಸ್ನಾನ ಮಾಡಿ ಬರುವಾಗ ಸತೀಶ್ ಕುಸಿದು ಬಿದ್ದಿದ್ದಾರೆ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಪತ್ನಿ ಜಯಶ್ರೀ ತೆರಳಿದ್ದಾರೆ.ಆಸ್ಪತ್ರೆಗೆ ಹೋದಾಗ ಸತೀಶ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

Read More

ಬಳ್ಳಾರಿ : ರಾಜ್ಯದಲ್ಲಿ ಹೃದಯ ಘಾತದಿಂದ ಸರಣಿ ಸಾವುಗಳು ಮುಂದುವರೆದಿದ್ದು ಇದೀಗ ಬಳ್ಳಾರಿಯಲ್ಲಿ ವಿದ್ಯಾರ್ಥಿಯೊಬ್ಬಳು, ಸಾವನ್ನಪ್ಪಿರುವ ಘಟನೆ ನಡೆದಿದ್ದು, ಶಾಲೆಗೆ ತೆರಳುತ್ತಿರುವಾಗಲೇ ಕುಸಿದು ಬಿದ್ದು ವಿದ್ಯಾರ್ಥಿನಿಯೊಬ್ಬಳು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಾಳಂಗೇರಿಯ ದೀಕ್ಷಾ (12) 6ನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಎಂದಿನಂತೆ ಸಿದ್ಧಳಾಗಿ ಶಾಲೆಗೆ ಹೋಗುತ್ತಿದ್ದಳು. ಶಾಲೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದಿದ್ದ ಬಾಲಕಿ ದೀಕ್ಷಾಳನ್ನ ಕೂಡಲೇ ಕುಟುಂಬಸ್ಥರು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲು ಮುಂದಾಗಿದ್ದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ದೀಕ್ಷಾ ಮೃತಪಟ್ಟಿದ್ದಾಳೆ. ದೀಕ್ಷಾ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಬೆಂಗಳೂರು : ಆಟೋ ಚಾಲಕರು ಇದನ್ನು ಗಮನಿಸಲೇಬೇಕು ಏಕೆಂದರೆ, ಬಹಳಷ್ಟು ಆಟೋ ಚಾಲಕರು ಹಣದಾಸೆಗೆ ಹೆಚ್ಚಿನ ಹಣ ಪಡೆಯುವುದುಗೋಸ್ಕರ ಆಟೋ ಹಿಂದೆ ಜಾಹಿರಾತು ಹಾಕಿಕೊಂಡು ಓಡಾಡುತ್ತಾರೆ ಆದರೆ, ಇದೀಗ ಹೇಳಿದ ಕೇಳಿದೆ ತಮ್ಮ ಆಟಗಳ ಹಿಂದೆ ಚಾಲಕರು ಜಾಹೀರಾತು ಪ್ರದರ್ಶನ ಮಾಡಿದರೆ ಅಂತಹ ಆಟೋ ಚಾಲಕರಿಗೆ ಭಾರಿ ದಂಡ ಬೀಳಲಿದೆ. ಹೌದು ನಗರದಲ್ಲಿ ಅನೇಕ ಆಟೋಗಳ ಹಿಂದೆ ಕಲರ್ ಕಲರ್ ಜಾಹೀರಾತು ಹಾಕಿ ಓಡಾಡುತ್ತಿದ್ದ ಆಟೋ ಚಾಲಕರಿಗೆ ಆರ್‌ಟಿಓ ಬಿಸಿ ಮುಟ್ಟಿಸಿದೆ.ಆಟೋಗಳ ಮೇಲೆ ಪೋಸ್ಟರ್ ಅಂಟಿಸಿದವರಿಗೆ ಆರ್‌ಟಿಓ ಫೈನ್ ಅಸ್ತ್ರ ಪ್ರಯೋಗ ಮಾಡಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ 5,000 ರೂ. ದಂಡ ಪ್ರಯೋಗ ಮಾಡಿರುವುದು ಆಟೋ ಚಾಲಕರ ಪಾಲಿಗೆ ಬಿಗ್ ಶಾಕ್ ಆಗಿದೆ. ಸಾರಿಗೆ ಇಲಾಖೆಯ ನಿಯಮದ ಪ್ರಕಾರ ಆಟೋಗಳಲ್ಲಿ ಜಾಹೀರಾತು ಪ್ರದರ್ಶನ ಮಾಡುವುದಕ್ಕೆ ವಾರ್ಷಿಕವಾಗಿ ಅನುಮತಿ ಪಡೆದಿರಬೇಕು. ಏನೇ ಜಾಹೀರಾತು ಅಳವಡಿಕೆ ಮಾಡಿದರೂ ವರ್ಷಕ್ಕೆ 5,000 ರೂ. ಕಟ್ಟಬೇಕು. ಹಾಗೊಮ್ಮೆ ಅನುಮತಿ ಪಡೆದಿದ್ದರೆ, ವರ್ಷವಿಡೀ ಜಾಹೀರಾತು ಅಳವಡಿಕೆಗೆ ಅವಕಾಶ ಇದೆ.…

Read More

ಬೆಳಗಾವಿ : ಬೆಳಗಾವಿಯಲ್ಲಿ ಕೀಟನಾಶಕ ಮಿಶ್ರಿತ ನೀರು ಕುಡಿದು 12 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಎಂಬ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ ಗ್ರಾಮದ ಶಾಲೆಯ ವಾಟರ್ ಟ್ಯಾಂಕಿಗೆ ಕೀಟನಾಶಕ ಬೆರೆಸಿದ ಆರೋಪ ಕೇಳಿ ಬಂದಿದೆ. ಇದನ್ನು ತಿಳಿಯದೆ ಟ್ಯಾಂಕರ್ ನಲ್ಲಿರುವ ನೀರು ಕುಡಿದಿದ್ದ 12 ಮಕ್ಕಳಿಗೆ ತಲೆಸುತ್ತು ಮತ್ತು ವಾಂತಿ ಭೇದಿ ಆಗಿದೆ. ತಕ್ಷಣ ಮಕ್ಕಳನ್ನು ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದ ದುರಂತ ಒಂದು ನಡೆದಿದ್ದು, ನೇಣು ಬಿಗಿದುಕೊಂಡು ತಾಯಿ ಮತ್ತು ಮಗಳು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ನಗೋಂಡನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ತಾಯಿ ರಚಿತಾ ರೆಡ್ಡಿ (46) ಮಗಳು ಶ್ರೀಜಾರೆಡ್ಡಿ (24) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಖಾಸಗಿ ಕಂಪನಿಯಲ್ಲಿ ಶ್ರೀಜರೆಡ್ಡಿ ಡೇಟಾ ಅನಾಲಿಸಿಸ್ ಆಗಿ ಕೆಲಸ ಮಾಡುತ್ತಿದ್ದರು. ಮೃತ ರಚಿತಾ ರೆಡ್ಡಿ ಮತ್ತು ಶ್ರೀಜಾರೆಡ್ಡಿ ಮೂಲತಃ ಆಂಧ್ರಪ್ರದೇಶ ನಿವಾಸಿಗಳು ಎಂದು ತಿಳಿದುಬಂದಿದೆ. ನಾಗೊಂಡನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಮಗಳು ವಾಸವಿದ್ದರು. ಇಂದು ಬೆಳಿಗ್ಗೆ ನೇಣು ಬಿಗಿದುಕೊಂಡು ಪುತ್ರಿ ಶ್ರೀಜಾರೆಡ್ಡಿ ಆತ್ಮಹತ್ಯೆ ಶರಣಾಗಿದ್ದಾರೆ. ಮಗಳ ಆತ್ಮಹತ್ಯೆಯ ಸುದ್ದಿ ರಚಿತಾ ಅಳಿಯನಿಗೆ ತಿಳಿಸಿದ್ದಾರೆ. ಬಳಿಕ ರಚಿತಾ ರೆಡ್ಡಿ ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬದುಕಲು ಇಷ್ಟ ಇಲ್ಲ ಅಂತ ಹೇಳಿ ಅಳಿಯನಿಗೆ ತಿಳಿಸಿದ್ದಾರೆ. ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ…

Read More

ಕಲಬುರ್ಗಿ : ಕಳೆದ ಎರಡು ದಿನಗಳ ಹಿಂದೆ ಕಲ್ಬುರ್ಗಿ ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಹಾಡಹಗಲೇ ಚಿನ್ನದ ಅಂಗಡಿಗೆ ನುಗ್ಗಿ ಮಾಲೀಕನಿಗೆ ಗನ್ ತೋರಿಸಿ 82 ಲಕ್ಷಕ್ಕೂ ಅಧಿಕ ಚಿನ್ನಾಭರಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಲ್ಬುರ್ಗಿ ಪೊಲೀಸ್ರು ಇಬ್ಬರನ್ನು ಅರೆಸ್ಟ್ ಮಾಡಿದ್ದು, ಉಳಿದವರನ್ನು ಬಂಧಿಸಲು ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಇಂಥದ್ದೇ ಚಿನ್ನದಂಗಡಿಯಲ್ಲಿ ದರೋಡೆ ನಡೆಸುವಂತೆ ಸುಪಾರಿ ನೀಡಿದ್ದ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯ ಬೆನ್ನು ಬಿದ್ದಿರುವ ಪೊಲೀಸರು, ಇದೀಗ ಮುಂಬೈ ನಗರದಲ್ಲಿ ಅವಿತು ಕುಳಿತಿರುವ ದರೋಡೆಕೋರರ ಸುಳಿವು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಚಿನ್ನಾಭರಣ ಅಂಗಡಿ ಮಾಲೀಕನ ಹಣೆಗೆ ಗನ್ ಹಿಡಿದು ಬೆದರಿಕೆ ಹಾಕಿ, ಆತನ ಕೈಕಾಲು ಕಟ್ಟಿ ಚಿನ್ನಾಭರಣ ದೋಚಿದ್ದ ದರೋಡೆಕೋರರ ಬೆನ್ನು ಹತ್ತಿರುವ ಕಲಬುರಗಿ ಪೊಲೀಸರು ಈಗಾಗಲೇ ಮುಂಬೈ ತಲುಪಿದ್ದು, ಕಳ್ಳರು ಎಲ್ಲಿ ಅವಿತು ಕುಳಿತಿದ್ದಾರೆ ಎಂಬ ಸುಳಿವು ಸಹ ಪೊಲೀಸರಿಗೆ ಲಭಿಸಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಪ್ರಕರಣದಲ್ಲಿ…

Read More