Author: kannadanewsnow05

ಬೆಂಗಳೂರು : ಕಳೆದ ಮಾರ್ಚ್ 21ರಂದು ಬಿಬಿಎಂಪಿ ಕಸದ ಲಾರಿ ಬೈಕ್ಗೆ ಗುದ್ದಿದ ಪರಿಣಾಮ 10 ವರ್ಷದ ಬಾಲಕ ಸ್ಥಳದಲ್ಲೇ ಸಾವನಪ್ಪಿದ್ದ ಬಳಿಕ ಸ್ಥಳೀಯರು ಆಕ್ರೋಶ ಕಂಡು ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ 10ಕ್ಕೂ ಹೆಚ್ಚು ಜನರ ವಿರುದ್ಧ FIR ದಾಖಲಾಗಿದೆ. ಹೌದು ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 10ಕ್ಕೂ ಹೆಚ್ಚು ಜನರ ವಿರುದ್ಧ FIR ದಾಖಲಾಗಿದೆ. ಮಾರ್ಚ್ 29 ರಂದು ಕಸದ ಲಾರಿ ಬೈಕಿಗೆ ಗುದ್ಧಿದ್ದರಿಂದ 10 ವರ್ಷದ ಬಾಲಕ ಮೃತಪಟ್ಟಿದ್ದ. ಇದರಿಂದ ಆಕ್ರೋಶಗೊಂಡು ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿದ್ದರು. ಹಾಗಾಗಿ ಹತ್ತಕ್ಕೂ ಹೆಚ್ಚು ಜನರ ವಿರುದ್ಧ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ

Read More

ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾರಾವ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಇತ್ತೀಚಿಗೆ ಕೋರ್ಟ್ ವಜಾ ಗೊಳಿಸಿತ್ತು. ಇದರ ಬೆನ್ನಲ್ಲೇ ರನ್ಯಾರಾವ್ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು ಪತಿ ಜತಿನ್ ಹುಕ್ಕೇರಿ ನಟಿ ರನ್ಯಾರಾವ್ ಳಿಂದ ದೂರವಾಗಿದ್ದು ವಿಚ್ಛೇದನ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ವಿಚ್ಚೇದನ ಕೋರಿ ಪತಿ ಜತಿನ್ ಹುಕ್ಕೇರಿ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಇದೀಗ ಅವರಿಗೆ ಮತ್ತೊಂದು ಶಾಕ್ ಎದುರಾಗಿದೆ. ಜಾಮೀನು ಅರ್ಜಿ ವಜಾ ಬೆನ್ನಲ್ಲೇ ರನ್ಯಾಗೆ ಮತ್ತೊಂದು ಶಾಕ್ ಎದುರಾಗಿದೆ. ರನ್ಯಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಪತಿ ಜತೀನ್ ಹುಕ್ಕೇರಿ ರನ್ಯಾಳಿಂದ ದೂರವಾಗಲು ವಿಚ್ಛೇದನ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮದುವೆಯಾದಗಿನಿಂದ ರನ್ಯಾ ಜೊತೆಗೆ…

Read More

ಬೆಳಗಾವಿ : ಬೆಳಗಾವಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ರಜೆ ಕೊಡದಿದ್ದಕ್ಕೆ ಮನನೊಂದ ಕೆಎಸ್ಆರ್ಟಿಸಿ ಚಾಲಕನೊಬ್ಬ ಬಸ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಇಲ್ಲಿನ ಹಳೆ ಗಾಂಧಿ‌ನಗರದ ನಿವಾಸಿ ಬಾಲಚಂದ್ರ ಶಿವಪ್ಪ ಹುಕ್ಕೋಜಿ (47) ಸಾವಿಗೆ ಶರಣಾದವರು. ಶಹಾಪುರ ನಾಕಾದಿಂದ ವಡಗಾವಿಗೆ ಸಂಚರಿಸುವ ಬಸ್ಸಿನಲ್ಲಿ ಅವರು ಚಾಲಕರಾಗಿದ್ದರು. ಮನೆಯಲ್ಲಿ ಬಾಲಚಂದ್ರ ಅವರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ ಕೊಡುವಂತೆ ಡಿಪೊ‌ ಮ್ಯಾನೇಜರ್ ಬಳಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ರಜೆ ಕೊಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಅಮಾನವೀಯ ಘಟನೆ ನಡೆದಿದ್ದು ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದಾರೆ ಎಂದು ಪೋಷಕರು ಮುಖ್ಯ ಶಿಕ್ಷಕ ಅಭಿವ್ರಿದ್ದ ಆಕ್ರೋಶ ಹೊರಹಾಕಿದ್ದು, ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ.

Read More

ದಾವಣಗೆರೆ : ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿ ಗಲಾಟೆ ವೇಳೆ ಚಾಕುವಿನಿಂದ ಇರಿದು ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಬಳಿಯ ಅಡಿಕೆ ತೋಟದಲ್ಲಿ ಈ ಒಂದು ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಶುರುವಾಗಿ, ಬಳಿಕ ಮೊಹಮ್ಮದ್ ಜಾವೇದ್ (25) ಎನ್ನುವ ಯುವಕ ಕೊಲೆಯಾಗಿದ್ದಾನೆ. ಘಟನೆ ಸಂಭಂದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಕುರಿತು ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನವದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತರಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಹಲವು ಸಚಿವರು ಸಹ ದೆಹಲಿಗೆ ತರಲಿದ್ದು ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ ಸೇರಿದಂತೆ ಹಲವು ಸಚಿವರು ದೆಹಲಿಗೆ ತೆರಳಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಸಚಿವ ಈಶ್ವರ ಖಂಡ್ರೆ ಕಣ್ಣಿಟ್ಟಿದ್ದು ಈ ಕುರಿತು ಚರ್ಚೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ವಾಲ್ಮೀಕಿ ಹಗರಣದಲ್ಲಿ ಸಚಿವ ಬಿ ನಾಗೇಂದ್ರ ಅವರು ಮತ್ತೆ ಸಚಿವ ಸಂಪುಟಕ್ಕೆ ಸೇರುವ ತವಕದಲ್ಲಿದ್ದು, ಹೀಗಾಗಿ ಈ ಒಂದು ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಜೊತೆಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವಾಲ್ಮೀಕಿ ಹಗರಣ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ…

Read More

ಕಲಬುರ್ಗಿ : ಡ್ಯಾಂ ವೀಕ್ಷಣೆ ವೇಳೆ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ನೀರುಪಾಲಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ್ ತಾಲೂಕಿನ ಬೆಳಕೋಟ ಗ್ರಾಮದಲ್ಲಿ ನಡೆದಿದೆ. ನೀರುಪಾಲಾದವರನ್ನು ಆಸಿಫ್ ಅಹಮದ್ ಶೇಕ್ (43) ಹಾಗೂ ಮೊಹಮ್ಮದ್ ನಿಜಾಮ್ ಚೋಟುಮಿಯಾ (30) ಎಂದು ತಿಳಿದುಬಂದಿದೆ. ಕಲ್ಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಬೇಳಕೋಟ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ಡ್ಯಾಮ್ ವೀಕ್ಷಣೆಗೆ ಆರು ಜನ ಸ್ನೇಹಿತರೊಂದಿಗೆ ಕಲ್ಬುರ್ಗಿಯಿಂದ ಬೆಳಕೋಟ ಗ್ರಾಮಕ್ಕೆ ಬಂದಿದ್ದರು. ನೀರು ಪಾಲದವರಿಗಾಗಿ ಇದೀಗ ಅಗ್ನಿಶಾಮಕ ದಳ ಹಾಗೂ SDRF ತಂಡದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ. ಘಟನೆ ಕುರಿತಂತೆ ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಮುಡಾ ಕಮಿಷನರ್ ವಿರುದ್ಧವೇ ವಾಮಾಚಾರ ನಡೆಸುವ ಬೆದರಿಕೆ ಕೇಳಿಬಂದಿದ್ದು, ಬ್ರೋಕರ್ ಗಳ ಅಟ್ಟಹಾಸಕ್ಕೆ ಇದೀಗ ಮಂಗಳೂರಿನ ಮುಡಾ ಕಮಿಷನರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಂಗಳೂರಿನ ಉರ್ವ ಠಾಣೆಗೆ ಮುಡಾ ಕಮಿಷನರ್ ನೂರ್ ಝಹರಾ ಖಾನಂ ದೂರು ನೀಡಿದ್ದಾರೆ. ಕಮಿಷನರ್ ದೂರು ಹಿನ್ನೆಲೆ ಇದೀಗ ಉರ್ವ ಪೊಲೀಸ್ ಠಾಣೆಯಲ್ಲಿ ಇಬ್ಬರು ದಲ್ಲಾಳಿಗಳ ವಿರುದ್ಧ FIR ದಾಖಲಾಗಿದೆ. ಕಚೇರಿಗೆ ದಲ್ಲಾಳಿಗಳಿಗೆ ನಿರ್ಬಂಧ ವಿಧಿಸಿದ್ದಕ್ಕೆ ವಾಮಾಚಾರದ ಬೆದರಿಕೆ ಕೇಳಿ ಬಂದಿದೆ. ಅಲ್ಲದೇ ವಾಟ್ಸಪ್ ಮೂಲಕ ಹಾಗು ಫೋನ್ ಕರೆ ಮೂಲಕ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹಾಗಾಗಿ ಮುಡಾ ಕಮಿಷನರ್ ನೂರ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಇಬ್ಬರು ದಲ್ಲಾಳಿಗಳ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಮಂಗಳೂರಿನ ಊರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಬ್ರೋಕರ್ಗಳಾದ ವಹಾಬ (45) ಸಾಬೀದ್ (25) ಎನ್ನುವವರ ವಿರುದ್ಧ FIR ದಾಖಲಾಗಿದೆ. ಅಲ್ಲದೇ ವಾಟ್ಸಪ್ ಗ್ರೂಪ್ ನಲ್ಲಿ ದಲ್ಲಾಳಿಗಳು ಪ್ರಾಣ…

Read More

ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಐವರ ಸಾವಾಗಿದ್ದು, 24 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಲ್ಡಾನ ಜಿಲ್ಲೆಯ ಶೇಗಾಂವ್ ಮತ್ತು ಖಮ್ಗಾಂವ್ ಹೆದ್ದಾರಿಯಲ್ಲಿ ಈ ಒಂದು ಅಪಘಾತ ನಡೆದಿದೆ. ಎರಡು ಖಾಸಗಿ ಬಸ್ಸುಗಳು ಮತ್ತು ಬೋಲೇರೋ ಆಹಾರದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಐವರು ಸಾವನಪ್ಪಿದ್ದು 24 ಜನರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ತುಮಕೂರು : ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್ಸಿ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ತುಮಕೂರು ಡಿವೈಎಸ್ಪಿ ಮಂಜುನಾಥ್ ಅವರ ನೇತೃತ್ವದಲ್ಲಿ ರಚನೆಯಾಗಿದ್ದ ತನಿಖಾ ತಂಡವನ್ನು ಇದೀಗ ಏಕಾಏಕಿ ಬದಲಾಯಿಸಲಾಗಿದೆ. ಹೌದು ಡಿವೈಎಸ್ಪಿ ಮಂಜುನಾಥ್ ತನಿಖಾ ತಂಡದಿಂದ ಕಿಕ್ ಔಟ್ ಮಾಡಲಾಗಿದೆ. ಮಾಗಡಿ ಡಿವೈಎಸ್ಪಿ ಪ್ರವೀಣ್ ಗೆ ತನಿಖಾ ತಂಡದ ಹೊಣೆ ವಹಿಸಲಾಗಿದೆ. ಶಿರಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಘವೇಂದ್ರ, ಕ್ಯಾತ್ಸಂದ್ರ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಬದಲು ಎಸ್ಪಿ ಕಚೇರಿಯ ಇನ್ಸ್ಪೆಕ್ಟರ್ ಅವಿನಾಶ್ ಹಾಗೂ ಕ್ಯಾತ್ಸಂದ್ರ ಸಿಪಿಐ ರಾಮಪ್ರಸಾದ್ ತನಿಖಾ ತಂಡ ಸೇರ್ಪಡೆಯಾಗಿದ್ದಾರೆ. ಮಾರ್ಚ್ 22 ರಂದು ಎಂಎಲ್‌ಸಿ ರಾಜೇಂದ್ರ ಎಸ್ ಪಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ಕ್ಯಾತ್ಸಂದ್ರ ಠಾಣೆಯಲ್ಲಿ ಎಫ್ಐಆರ್ ಎಫ್ ಐ ಆರ್ ದಾಖಲಾದ ಬೆನ್ನಲ್ಲೇ ತನಿಖಾ ತಂಡವನ್ನು ರಚಿಸಲಾಗಿತ್ತು. ಮಧುಗಿರಿ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ತನಿಕಾ ತಂಡ ರಚನೆ ಮಾಡಲಾಗಿತ್ತು. ಕಳೆದ ನಾಲ್ಕು…

Read More