Author: kannadanewsnow05

ಬೆಂಗಳೂರು : ಮಾರ್ಚ್ 28 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ಹೈದ್ರಾಬಾದ್ ನಡುವೆ ಬೆಂಗಳೂರು ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದೆ. ಇನ್ನು ಪಂದ್ಯದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣಕ್ಕೆ ನಾಗರಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸಾಮಾನ್ಯ ದಿನಗಳಿಗಿಂತ ದ್ವಿಗುಣ ಪ್ರಮಾಣದಲ್ಲಿ ಪ್ರಯಾಣಿಕರು ಮೆಟ್ರೋ ಬಳಸಿದ್ದಾರೆ ಎಂದು ಬಿಎಂಆರ್​ಸಿಎಲ್ ಮೂಲಗಳು ತಿಳಿಸಿವೆ. ಪಂದ್ಯ ಮುಗಿದ ಕೇವಲ 50 ನಿಮಿಷಗಳ ಅವಧಿಯಲ್ಲಿ ಸುಮಾರು 22,000 ಜನರು ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ನಿಲ್ದಾಣಗಳಿಂದ ಸುರಕ್ಷಿತವಾಗಿ ಪ್ರಯಾಣ ಬೆಳೆಸಿದ್ದಾರೆ. ಈ ಬಾರಿ ಸಂಚಾರ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆ ತಪ್ಪಿಸಲು ಬಿಎಂಆರ್‌ಸಿಎಲ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಿತ್ತು. ಮೆಜೆಸ್ಟಿಕ್ ಕಡೆಗೆ 13 ಹಾಗೂ ವೈಟ್‌ಫೀಲ್ಡ್ ಕಡೆಗೆ 9 ರೈಲುಗಳು ಸೇರಿದಂತೆ ಒಟ್ಟು 39 ರೌಂಡ್ ಟ್ರಿಪ್‌ಗಳನ್ನು ಕಾರ್ಯಾಚರಣೆ ಮಾಡಲಾಗಿದೆ. ಪರ್ಪಲ್ ಲೈನ್‌ನಲ್ಲಿ 18, ಗ್ರೀನ್ ಲೈನ್‌ನಲ್ಲಿ 15 ಮತ್ತು ಯಲ್ಲೋ ಲೈನ್‌ನಲ್ಲಿ 6 ಹೆಚ್ಚುವರಿ ಸಂಚಾರಗಳನ್ನು ನಡೆಸುವ ಮೂಲಕ ಪ್ರಯಾಣಿಕರ ದಟ್ಟಣೆಯನ್ನು ಯಶಸ್ವಿಯಾಗಿ…

Read More

ಮುಂಬೈ: ಜಾಗತಿಕ ರಾಜಕೀಯ ಉದ್ವಿಗ್ನತೆ, ವಿಶೇಷವಾಗಿ ಇರಾನ್ ಮತ್ತು ಇಸ್ರೇಲ್/ಅಮೆರಿಕ ನಡುವೆ ನಡೆಯುತ್ತಿರುವ ಸಂಘರ್ಷವು ಭಾರತೀಯ ಷೇರು ಮಾರುಕಟ್ಟೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಸೋಮವಾರದ ವಹಿವಾಟು ಆರಂಭವಾಗುತ್ತಿದ್ದಂತೆ ಸೆನ್ಸೆಕ್ಸ್ ಮತ್ತು ನಿಫ್ಟಿ ಭಾರೀ ಕುಸಿತ ಕಂಡಿದ್ದು, ಕಳೆದ ಆರು ವರ್ಷಗಳಲ್ಲೇ ಮಾರುಕಟ್ಟೆ ಅತ್ಯಂತ ಕೆಟ್ಟ ಮಾಸಿಕ ನಷ್ಟವನ್ನು ಅನುಭವಿಸುವ ಹಾದಿಯಲ್ಲಿದೆ. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ (Sensex) ಸುಮಾರು 1,100 ಪಾಯಿಂಟ್‌ಗಳಿಗೂ ಹೆಚ್ಚು ಕುಸಿತ ಕಂಡರೆ, ನಿಫ್ಟಿ (Nifty 50) 22,500 ಮಟ್ಟಕ್ಕಿಂತ ಕೆಳಕ್ಕೆ ಇಳಿದಿದೆ.ಈ ಮಾರ್ಚ್ ತಿಂಗಳಲ್ಲಿ ಮಾರುಕಟ್ಟೆಯು ಸುಮಾರು 10.5% ರಷ್ಟು ನಷ್ಟ ಅನುಭವಿಸಿದೆ. ಇದು 2020ರ ಕೊರೊನಾ ಲಾಕ್‌ಡೌನ್ ನಂತರದ ಅತಿದೊಡ್ಡ ಮಾಸಿಕ ಕುಸಿತ ಎನ್ನಲಾಗಿದೆ. ಯುದ್ಧದ ಕಾರಣದಿಂದಾಗಿ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ವಿದೇಶಿ ಹೂಡಿಕೆದಾರರು (FII) ಭಾರತೀಯ ಮಾರುಕಟ್ಟೆಯಿಂದ ಬೃಹತ್ ಪ್ರಮಾಣದಲ್ಲಿ ಹಣವನ್ನು ಹಿಂತೆಗೆದುಕೊಳ್ಳುತ್ತಿರುವುದು ಈ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಯುದ್ಧವು ಜಾಗತಿಕ ಆರ್ಥಿಕತೆಯ ಮೇಲೆ ಕಪ್ಪುಛಾಯೆ…

Read More

ಕೊಪ್ಪಳ : ಸಮಾಜದಲ್ಲಿ ಎಂತೆಂತ ವಿಕೃತ ಮನಸ್ಸು ಇರೋರು ಇರ್ತಾರೆ ಅಂದರೆ ಇದೀಗ ಮನೆಯ ಗೋಡೆ ಹಾರಿ ವಿಕೃತ ಕಾಮಿಯೊಬ್ಬ ಮಹಿಳೆಯರ ಒಳಉಡುಪನ್ನು ಕಳ್ಳತನ ಮಾಡಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಪ್ರತಿಷ್ಠಿತ ಏರಿಯಾದಲ್ಲಿ ಮಹಿಳೆಯರ ಒಳಉಡಪು ಕಳ್ಳತನ ಮಾಡಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮನೆಯ ಗೋಡೆ ಹಾರಿ ವಿಕೃತ ಕಾಮಿ ಮಹಿಳೆಯರ ಒಳ ಉಡುಪು ಕಳ್ಳತನ ಮಾಡಿದ್ದಾನೆ. ಮಹಿಳೆಯರ ಒಳಉಡುಪು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಂಗವಾತಿಯ ಸಿಬಿಎಸ್ ಬಡಾವಣೆಯ ಸುತ್ತಮುತ್ತ ಮಹಿಳೆಯರ ಒಳ ಉಡುಪು ಕಳ್ಳತನವಾಗಿದೆ. ಇದರಿಂದಾಗಿ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು : ಹೋಟೆಲ್ ಗಳಿಗೆ ಹೆಚ್ಚುವರಿ ಅಡುಗೆ ಅನಿಲ ನೀಡುವ ಬಗ್ಗೆ ಮಂಗಳವಾರ ಸಭೆ ನಡೆಯಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ಅಡುಗೆ ಅನೀಲ ಅಭಾವದಿಂದ ಹೋಟೆಲ್‌ಗಳು ಬಂದ್‌ ಆಗ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 20% ಅಡುಗೆ ಅನಿಲ ಹೋಟೆಲ್ ಗೆ ಕೊಡ್ತಾ ಇದ್ದೀವಿ. ಹಾಸ್ಪಿಟಲ್‌ಗಳಿಗೆ 100% ಕೊಡ್ತಿದ್ದೇವೆ. ನಿನ್ನೆ ನರೇಂದ್ರ ಮೋದಿ ಹಾಗೂ ಪೆಟ್ರೋಲಿಯಂ ಸಚಿವರೊಂದಿಗೆ ಸಭೆ ಆಗಿದೆ. ಮಂಗಳವಾದಿಂದ ಇಂಪ್ಲಿಮೆಂಟ್ ಆದ್ರೆ ಹೋಟೆಲ್‌ಗಳಿಗೆ ಇನ್ನೂ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಸಾಧ್ಯವಾದಷ್ಟು ಹೋಟೆಲ್ ಗಳಿಗೆ ಹೆಚ್ಚುವರಿ ಸಿಲಿಂಡರ್‌ ಕೊಡೋಕೆ ಹೇಳಿದ್ದೇವೆ. ಮಂಗಳವಾರ ಮತ್ತೊಂದು ಸುತ್ತಿನ ಸಭೆಯಿದೆ. ಆ ದಿನ ಇನ್ನೂ ಹೆಚ್ಚುವರಿ ಸಿಲಿಂಡರ್‌ ಕೊಡುವ ಬಗ್ಗೆ ನಿರ್ಧಾರ ಮಾಡ್ತೀವಿ. ವಿನಾಃಕಾರಣ ಜನ ಆತಂಕಕ್ಕೆ ಒಳಗಾಗೋದು ಬೇಡ ಡೊಮೆಸ್ಟಿಕ್ ಅವರಿಗೆ ನಗರದಲ್ಲಿ 25 ದಿನಕ್ಕೆ 1 ಸಿಲಿಂಡರ್ (LPG Cylinder) ಕೊಡ್ತಿದ್ದೀವಿ. ಹಳ್ಳಿಗಳಲ್ಲಿ 45 ದಿನಕ್ಕೆ 1 ಸಿಲಿಂಡರ್ ಕೊಡ್ತಿದ್ದೇವೆ.…

Read More

ಬೆಂಗಳೂರು : ಗೃಹ ಬಳಕೆ ಸಿಲೆಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದವರ ವಿರುದ್ಧ ಕ್ರಮ ಕೈಗೊಂಡಿದ್ದು, LPG ಸಿಲಿಂಡರ್ ಅಕ್ರಮ ದಾಸ್ತಾನು ಸಂಬಂಧ 1169 ಪ್ರಕರಣ ದಾಖಲಾಗಿವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ವಾಣಿಜ್ಯ ಉದ್ದೇಶಕ್ಕೆ ಬಳಸ್ತಿದ್ದ 1603 ಸಿಲಿಂಡರ್ ವಶಪಡಿಸಿಕೊಳ್ಳಲಾಗಿದೆ. LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆ ಸೌದೆ ಒಲೆ ಬಳಸಿ ಎಂದು ಮನವಿ ಮಾಡಿದ್ದಾರೆ. ಅಡುಗೆ ಅನೀಲ ಅಭಾವದಿಂದ ಹೋಟೆಲ್‌ಗಳು ಬಂದ್‌ ಆಗ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 20% ಅಡುಗೆ ಅನಿಲ ಹೋಟೆಲ್ ಗೆ ಕೊಡ್ತಾ ಇದ್ದೀವಿ. ಹಾಸ್ಪಿಟಲ್‌ಗಳಿಗೆ 100% ಕೊಡ್ತಿದ್ದೇವೆ. ನಿನ್ನೆ ನರೇಂದ್ರ ಮೋದಿ ಹಾಗೂ ಪೆಟ್ರೋಲಿಯಂ ಸಚಿವರೊಂದಿಗೆ ಸಭೆ ಆಗಿದೆ. ಮಂಗಳವಾದಿಂದ ಇಂಪ್ಲಿಮೆಂಟ್ ಆದ್ರೆ ಹೋಟೆಲ್‌ಗಳಿಗೆ ಇನ್ನೂ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ವಾಣಿಜ್ಯ ಸಿಲಿಂಡರ್ ಸಿಗದೇ ಹೋಟೆಲ್, ಕೈಗಾರಿಕೆಗಳು ಥಂಡಾ ಹೊಡೆದಿವೆ. ಜನರು ಖಾಲಿ ಗ್ಯಾಸ್​ ಸಿಲಿಂಡರ್​ ಹಿಡಿದು ಏಜೆನ್ಸಿಗಳತ್ತ ಧಾವಿಸುತ್ತಿದ್ದಾರೆ. ಈ ಮಧ್ಯೆ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ, ಸಿಲಿಂಡರ್​ ಅಭಾವ…

Read More

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿ ಭರ್ತಿ ಒಂದು ತಿಂಗಳು ಆಯ್ತು. ಆದರೆ ಸಮರ ಕ್ಷಿಣಿಸುವ ಲಕ್ಷಣ ಕಾಣುತ್ತಿಲ್ಲ. ಇತ್ತ ರಾಜ್ಯದಲ್ಲಿ ಗ್ಯಾಸ್​ ಸಿಲಿಂಡರ್​ ಅಭಾವದಿಂದ ಜನರ ಪರದಾಟ ಮುಂದುವರೆದಿದೆ. ಹೀಗಿರುವಾಗ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಸೌದೆ ಒಲೆ ಬಳಸುಂತೆ ಮನವಿ ಮಾಡಿದ್ದಾರೆ. ಅಡುಗೆ ಅನೀಲ ಅಭಾವದಿಂದ ಹೋಟೆಲ್‌ಗಳು ಬಂದ್‌ ಆಗ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 20% ಅಡುಗೆ ಅನಿಲ ಹೋಟೆಲ್ ಗೆ ಕೊಡ್ತಾ ಇದ್ದೀವಿ. ಹಾಸ್ಪಿಟಲ್‌ಗಳಿಗೆ 100% ಕೊಡ್ತಿದ್ದೇವೆ. ನಿನ್ನೆ ನರೇಂದ್ರ ಮೋದಿ ಹಾಗೂ ಪೆಟ್ರೋಲಿಯಂ ಸಚಿವರೊಂದಿಗೆ ಸಭೆ ಆಗಿದೆ. ಮಂಗಳವಾದಿಂದ ಇಂಪ್ಲಿಮೆಂಟ್ ಆದ್ರೆ ಹೋಟೆಲ್‌ಗಳಿಗೆ ಇನ್ನೂ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ವಾಣಿಜ್ಯ ಸಿಲಿಂಡರ್ ಸಿಗದೇ ಹೋಟೆಲ್, ಕೈಗಾರಿಕೆಗಳು ಥಂಡಾ ಹೊಡೆದಿವೆ. ಜನರು ಖಾಲಿ ಗ್ಯಾಸ್​ ಸಿಲಿಂಡರ್​ ಹಿಡಿದು ಏಜೆನ್ಸಿಗಳತ್ತ ಧಾವಿಸುತ್ತಿದ್ದಾರೆ. ಈ ಮಧ್ಯೆ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ, ಸಿಲಿಂಡರ್​ ಅಭಾವ ಇರುವುದರಿಂದ ಸೌದೆ ಒಲೆ ಬಳಸುವಂತೆ ಕರೆ ನೀಡಿದ್ದಾರೆ. ಸಿಲಿಂಡರ್​ ಅಭಾವ ಇರುವುದರಿಂದ ಹಳ್ಳಿ…

Read More

ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಸ್ಟೇಷನ್ ಒಂದಕ್ಕೆ ಬಾಗ್ಮನೆ ಹೆಸರು ಇಡಲು ನಿರ್ಧರಿಸಿದ್ದು, ಈ ಹಿನ್ನೆಲೆ ಇದೀಗ BMRCL ಬಾಗ್ಮನೆ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡಿದೆ. ಹೌದು ಬೆಂಗಳೂರಿನ ಔಟರ್ ರಿಂಗ್ ರೋಡ್ ಸ್ಟೇಷನ್ ಒಂದಕ್ಕೆ ಬಾಗ್ಮನೆ ಕಂಪನಿ ಹೆಸರು ಇಡಲು BMRCL ನಿರ್ಧರಿಸಿದೆ. 20 ವರ್ಷಗಳಿಗೆ 40 ಕೋಟಿ ಹಣ ನೀಡಿ ಕಂಪನಿಯಿಂದ ಒಪ್ಪಂದ ಮಾಡಿಕೊಂಡಿದೆ. ಬೆಂಗಳೂರು ಮೆಟ್ರೋ ರೈಲು ನಿಯಮಿತ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. DRDO ಸ್ಪೋರ್ಟ್ಸ್ ಕಾಂಪ್ಲೇಕ್ಸ್ ಸ್ಟೇಷನ್ ಗೆ ಹೆಸರಿಡಲು ಒಪ್ಪಂದ ಮಾಡಿಕೊಂಡಿದೆ. ಸಿಲ್ಕ್ ಬೋರ್ಡ್ ಟು ಕೆ.ಆರ್ ಪುರಂ ಮಾರ್ಗದಲ್ಲಿ ಬರುವ ನಿಲ್ದಾಣಕ್ಕೆ ಬಾಗ್ಮನೆ ಕಂಪನಿ ಜೊತೆ BMRCL ಒಪ್ಪಂದಕ್ಕೆ ಸಹಿ ಹಾಕಿದೆ. BMRCL ವ್ಯವಸ್ಥಾಪಕ ನಿರ್ದೇಶಕ ಡಾ.ಜೆ ರವಿಶಂಕರ್ ಹಾಗು ಬಾಗ್ಮನೆ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ನ ಆದಿತ್ಯ ಬಾಗ್ಮನೆ ಭಾಗಿಯಾಗಿದ್ದರು. ಒಪ್ಪಂದದ 40 ಕೋಟಿ ಹಣದ ಪೈಕಿ ಈಗಾಗಲೇ 20ಕೋಟಿ ಪಾವತಿ ಮಾಡಲಾಗಿದೆ. ಸಿಲ್ಕ್ ಬೋರ್ಡ್ ಟು ಕೆ.ಆರ್.ಪುರಂ 19.75…

Read More

ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದ ಉಂಟಾಗುತ್ತಿರುವ ಸವಾಲುಗಳನ್ನು ಎದುರಿಸಲು ದೇಶದ ಎಲ್ಲ ನಾಗರಿಕರು ಒಗ್ಗೂಡಬೇಕು. ರಾಜ್ಯ ಸರ್ಕಾರಗಳು ಜನತೆಗೆ ಏನೆಲ್ಲ ಸೂಚನೆ, ಮಾಹಿತಿಗಳನ್ನ ಕೊಟ್ಟಿವೆಯೋ ಅವುಗಳ ಮೇಲೆ ವಿಶ್ವಾಸವಿಟ್ಟು ಹೆಜ್ಜೆ ಇಡಬೇಕು ಎಂದು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಮನ್ ಕಿ ಬಾತ್ ಉದ್ದೇಶಿಸಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ದೇಶಗಳಲ್ಲಿ ಕಳೆದ 1 ತಿಂಗಳಿಗೂ ಹೆಚ್ಚು ಕಾಲದಿಂದ ತೀವ್ರ ಯುದ್ಧ ನಡೆಯುತ್ತಿದೆ. ಇದು ನಿಶ್ಚಿತವಾಗಿಯೂ ಸವಾಲಿನ ಸಮಯ. ಇಡೀ ದೇಶದ ಜನತೆ ಒಂದಾದರೆ ಮಾತ್ರ ಈಗಿನ ಸಂಕಷ್ಟದಿಂದ ಹೊರಬರಲು ಸಾಧ್ಯ. ಇಂಥ ಸಂದರ್ಭದಲ್ಲೂ ಕೆಲವರು ರಾಜಕಾರಣ ಮಾಡ್ತಿರೋದು ಸರಿಯಲ್ಲ. ಇದರಲ್ಲಿ ರಾಜಕೀಯದ ಸ್ವಾರ್ಥಕ್ಕೆ ಜಾಗ ಕೊಡಬಾರದು ಎಂದು ತಿಳಿವಳಿಕೆ ನೀಡಿದರು. ಇದು ದೇಶದ 140 ಕೋಟಿ ಜನರಿಗೂ ಸಂಬಂಧಿಸಿದ್ದು, ಇಂಥ ಸಂದರ್ಭದಲ್ಲೂ ಯಾರೆಲ್ಲ ವದಂತಿಗಳನ್ನು ಹಬ್ಬಿಸುತ್ತಿದ್ದಾರೋ, ಅವರು ದೇಶಕ್ಕೆ ದೊಡ್ಡ ನಷ್ಟ ಮಾಡ್ತಿದ್ದಾರೆ. ನಾವು ಎಲ್ಲರೂ ಒಂದಾಗಿ ಈ ಸವಾಲನ್ನು ಎದುರಿಸಬೇಕು. ಎಲ್ಲ ನಾಗರಿಕರು…

Read More

ಚೆನ್ನೈ : ಐಪಿಎಲ್ ಸೀಸನ್ ಶುರುವಾಗುತ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಒಂದು ಬೇಸರದ ಸುದ್ದಿ ಹೊರಬಿದ್ದಿದೆ. ಅಭ್ಯಾಸದ ವೇಳೆ ಕಾಲಿಗೆ ಗಾಯ ಮಾಡಿಕೊಂಡಿರುವ ಮಾಜಿ ನಾಯಕ ಎಂ.ಎಸ್. ಧೋನಿ, ಈ ಸೀಸನ್‌ನ ಮೊದಲ ಆರು ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆ ಇದೆ. 44 ವರ್ಷದ ಧೋನಿಗೆ ಇದು ಕೊನೆಯ ಐಪಿಎಲ್ ಆಗಬಹುದು ಎಂದು ಹೇಳಲಾಗುತ್ತಿದ್ದು, ಈ ಗಾಯದ ಸುದ್ದಿ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದೆ. ಹೌದು ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದರೂ, ಧೋನಿ ಎಲ್ಲಾ ಪಂದ್ಯಗಳನ್ನು ಆಡುವುದು ಅನುಮಾನ. ಗಾಯದ ಹಿನ್ನೆಲೆಯಲ್ಲಿ, ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಸಂಜುಗೆ ಬಿಟ್ಟುಕೊಟ್ಟು, ಬ್ಯಾಟಿಂಗ್ ಮೇಲೆ ಮಾತ್ರ ಗಮನ ಹರಿಸುವ ‘ಇಂಪ್ಯಾಕ್ಟ್ ಸಬ್’ ಆಟಗಾರನಾಗಿ ಧೋನಿಯನ್ನು ಬಳಸಿಕೊಳ್ಳಲು ಮ್ಯಾನೇಜ್‌ಮೆಂಟ್ ಯೋಚಿಸುತ್ತಿದೆ. ಕಳೆದ ಎರಡು ಸೀಸನ್‌ಗಳಲ್ಲಿಯೂ ಧೋನಿ ಕೊನೆಯ ಓವರ್‌ಗಳಲ್ಲಿ ಮಾತ್ರ ಬ್ಯಾಟಿಂಗ್‌ಗೆ ಇಳಿಯುವ ತಂತ್ರ ಅನುಸರಿಸಿದ್ದರು. ಕಳೆದ ಒಂದು ತಿಂಗಳಿಂದ ಧೋನಿ ಚೆನ್ನೈನಲ್ಲಿ ಕಠಿಣ ತಾಲೀಮು ನಡೆಸುತ್ತಿದ್ದರು. ಆದರೆ ಈಗ ಗಾಯದ ಕಾರಣ ಅವರಿಗೆ…

Read More

ಗದಗ : ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ಹುಯಿಲಗೋಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಚಂದ್ರು ಕುರಿ (28) ಮೃತನಾಗಿದ್ದು, ಕುಟುಂಬಸ್ಥರು ಕೊಲೆ ಎಂದು ಆರೋಪಿಸಿದ್ದಾರೆ. ಚಂದ್ರು ಕಳೆದ ಐದು ದಿನಗಳ ಹಿಂದೆ ರಾತ್ರಿ ಸುಮಾರು 12 ಗಂಟೆಗೆ ಮನೆಯಿಂದ ಹೊರಹೋಗಿದ್ದವನು ಮನೆಗೆ ಮರಳಿ ಬಾರದ ಹಿನ್ನೆಲೆ ಗದಗ ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ಶನಿವಾರ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು. ಇದೀಗ ಐದು ದಿನಗಳ ಬಳಿಕ ಸುಟ್ಟ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಚಂದ್ರುನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿ, ನಂತರ ಗುರುತು ಸಿಗದಂತೆ ಮಾಡಲು ಶವವನ್ನು ಸುಟ್ಟು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More