Subscribe to Updates
Get the latest creative news from FooBar about art, design and business.
Author: kannadanewsnow05
ಕೊಪ್ಪಳ : ಇದು ಕರ್ನಾಟಕ ರಾಜ್ಯದಲ್ಲಿಯೇ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಭಕ್ತರು ಸೇರಿ ನಡೆಸುವಂತಹ ಅತೀ ದೊಡ್ಡ ಜಾತ್ರೆ. ಇದು ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿಯಾಗಿದೆ. ಅದುವೇ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ. ಹೌದು ಈಗಾಗಲೇ ಕೊಪ್ಪಳದ ಐತಿಹಾಸಿಕ ಗವಿಸಿದ್ದೇಶ್ವರ ಜಾತ್ರೆಗೆ ಭರ್ಜರಿ ಸಿದ್ಧತೆ ನಡೆದಿದೆ. ಕೊಪ್ಪಳದ ಐತಿಹಾಸಿಕ ಗವಿಸಿದ್ದೇಶ್ವರ ಜಾತ್ರೆಗೆ ಭರ್ಜರಿ ಸಿದ್ಧತೆ ನಡೆದಿದೆ. ಸ್ವತಃ ಶ್ರೀಗಳೆ ಮುಂದೆ ನಿಂತು ಎಲ್ಲಾ ಸಿದ್ಧತಾ ಕಾರ್ಯವನ್ನ ನೋಡಿಕೊಳ್ಳುತ್ತಿದ್ದಾರೆ. ಪ್ರತಿವರ್ಷ ನಡೆಯುವ ಕೊಪ್ಪಳದ ಸುಪ್ರಸಿದ್ದ ಗವಿಸಿದ್ದೇಶ್ವರ ಮಠದ ಜಾತ್ರೆಯನ್ನು, ದಕ್ಷಿಣ ಭಾರತದ ಕುಂಬಮೇಳ ಅಂತಲೇ ಕರೆಯುತ್ತಾರೆ. ಈ ವರ್ಷ ಜನವರಿ 15 ರಂದು ಗವಿಮಠದ ರಥೋತ್ಸವ ನಡೆಯುತ್ತದೆ. ಜನವರಿ 12 ರಿಂದ ಮಠದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗುತ್ತವೆ. ನಾಡಿನ ಅನೇಕ ಕಡೆಯಿಂದ ಬರುವ ಭಕ್ತರು ಗವಿಸಿದ್ದೇಶ್ವರ ಮಠದ ಜಾತ್ರೆಯನ್ನು ಕಣ್ತುಂಬಿಕೊಂಡು, ಕೃತಾರ್ಥರಾಗುತ್ತಾರೆ.ಇನ್ನು ಮತ್ತೊಂದು ಮಾದರಿ ಹೆಜ್ಜೆ ಇಟ್ಟಿರೋ ಶ್ರೀಗಳು ವಿಶೇಷ ಚೇತನರಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ. ವಿಶೇಷ ಚೇತನರಿಗೆ…
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಕಾರ್ಖಾನೆಯಲ್ಲಿ ವಿಷಕಾರಿ ರಸಾಯನಿಕ ಸೋರಿಕೆಯಾಗಿ, ಸುಮಾರು 12ಕ್ಕೂ ಹೆಚ್ಚು ಜನ ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿ ಇಂಡಸ್ಟ್ರಿಸ್ ಕಾರ್ಖಾನೆಯಲ್ಲಿ ನಡೆದಿದೆ ಹೌದು ಕಾರ್ಖಾನೆಯಲ್ಲಿ ರಸಾಯನಿಕ ಸೋರಿಕೆಯಿಂದ 11ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಆದಿತ್ಯ ಬಿರ್ಲಾ ಗ್ರೂಪ್ನ ಗ್ರಾಸಿಮ್ ಇಂಡಸ್ಟ್ರಿಯಲ್ಲಿ ಈ ಒಂದು ಘಟನೆ ನಡೆದಿದೆ.ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿಯ ಇಂಡಸ್ಟ್ರೀಸ್ ನಲ್ಲಿ ಈ ಒಂದು ದುರಂತ ಸಂಭವಿಸಿದೆ. ಅಸ್ವಸ್ಥ ಕಾರ್ಮಿಕರಿಗೆ ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಕಾಸ್ಟಿಕ್ ಸೋಡಾ ಉತ್ಪಾದಿಸುವ ಗ್ರಾಸಿಂ ಇಂಡಸ್ಟ್ರೀಸ್ ನಲ್ಲಿ ಘಟನೆ ನಡೆದಿದ್ದು, ಕೆಲ ದಿನಗಳ ಹಿಂದೆ ಕ್ಲೋರಿನ್ ಸೋರಿಕೆಯಿಂದಾಗಿ, ಬಿಣಗಾ ಗ್ರಾಮದ ನಿವಾಸಿ ನಾಗರಾಜ್ ಎಂಬವರು ಮೃತಪಟ್ಟಿದ್ದರು. ಸದ್ಯ ಡಿವೈಎಸ್ಪಿ ಗಿರೀಶ್ ಹಾಗೂ ಪೊಲೀಸರ ತಂಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದೆ. ಈ ವೇಳೆ ಡಿವೈಎಸ್ಪಿ ಗಿರೀಶ್ ಕಾರ್ಮಿಕರಿಂದ ಘಟನೆ…
ಬೆಂಗಳೂರು : ಕನ್ನಡದ ಖ್ಯಾತ ರ‍್ಯಾಪರ್ ಚಂದನ್ ಶೆಟ್ಟಿ ಅವರು ಕಾಟನ್ ಕ್ಯಾಂಡಿ ಸಾಂಗ್ ನಲ್ಲಿ ಈ ಹಿಂದೆ ಇದ್ದಂತಹ ಇನ್ನೊಂದು ಹಾಡಿನ ಟ್ಯೂನ್ ಕಾಪಿ ಮಾಡಿದ್ದಾರೆ ಎಂದು ರ‍್ಯಾಪರ್ ಯುವರಾಜ್ ಚಂದನ್ ಶೆಟ್ಟಿ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದಾರೆ.ಇದೀಗ ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಯುವರಾಜ್ ತಿಳಿಸಿದ್ದಾರೆ. ಹೌದು ಕಾಟನ್ ಕ್ಯಾಂಡಿ ಹಾಡಿನಲ್ಲಿ ಟ್ಯೂನ್ ಬಳಸಿರುವ ಆರೋಪ ಕೇಳಿ ಬಂದಿದೆ.ಆರು ವರ್ಷದ ಹಿಂದೆಯೇ ಯುವರಾಜ್ ‘ವೈಬುಲ್’ ಸಾಂಗ್ ಕಂಪೋಸ್ ಮಾಡಿದ್ದರು. ಯುವರಾಜ್ ಮಾಡಿದ ಸಾಂಗ್ ಅನ್ನು ಚಂದನ್ ಶೆಟ್ಟಿ ಹಾಡಿನ ಟ್ಯೂನ್ ಕದ್ದ ಆರೋಪ ಕೇಳಿ ಬಂದಿದೆ. ಚಂದನ್ ಶೆಟ್ಟಿ ವಿರುದ್ಧ ಕಾಟನ್ ಕ್ಯಾಂಡಿ ಟ್ಯೂನ್ ಕದ್ದಿರುವ ಆರೋಪ ಕೇಳಿ ಬಂದಿದೆ. ನನ್ನ ಸಾಂಗ್ ಅನ್ನು ಪಲ್ಲವಿ ಹಾಗೂ ಚರಣ್ ಕಾಪಿ ಮಾಡಿದ್ದರು. ನನ್ನ ಹಾಡು ಚಂದನ್ ಶೆಟ್ಟಿ ಮಾಡಿರುವ ಹಾಡನ್ನು ಒಮ್ಮೆ ನೋಡಿ. ಚಂದನ್ ಶೆಟ್ಟಿ ಕೇಳಿದರೆ ನಾನೇ ಬಿಟ್ಟುಕೊಡುತ್ತಿದ್ದೆ. ನಾನು ಬಡವ 12 ಲಕ್ಷ ರೂಪಾಯಿ…
ಮುಂಬೈ : ಸಾಮಾನ್ಯವಾಗಿ ಯಾವುದಾದರೂ ಸಭೆ ಸಮಾರಂಭಗಳಿಗೆ ಹೋಗಬೇಕಾದರೆ ಪರ್ಫ್ಯೂಮ್ ಬಳಸುವುದು ಸಹಜ. ಆದರೆ ಇಲ್ಲಿ ಪರ್ಫ್ಯೂಮ್ ಬಾಟಲ್ ಒಂದು ಸ್ಪೋಟಗೊಂಡ ಪರಿಣಾಮ ಒಂದೇ ಕುಟುಂಬದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮುಂಬೈನ ಹೊರವಲಯದ ನಾಲಾಸುಪಾರದಲ್ಲಿ ನಡೆದಿದೆ. ಹೌದು ಪರ್ಫ್ಯೂಮ್ ಬಾಟಲಿಯ ಎಕ್ಸ್‌ಪೈರಿ ಡೇಟ್ ಬದಲಿಸುವ ಪ್ರಯತ್ನದಲ್ಲಿರುವಾಗ ಈ ಸ್ಫೋಟ ಸಂಭವಿಸಿದೆ. ಸ್ಪೋಟದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಬೈನಾ ರೋಶಿನಿ ಅಪಾರ್ಟ್‌ಮೆಂಟ್ ಒಂದರ 112ನೇ ಮನೆಯಲ್ಲಿಈ ಘಟನೆ ನಡೆದಿದೆ. ಕುಟುಂಬ ಸದಸ್ಯರು ಪರ್ಫ್ಯೂಮ್ ಬಾಟಲಿಯ ಎಕ್ಸ್‌ಪೈರಿ ಡೇಟ್ ಬದಲಿಸುವ ಪ್ರಯತ್ನದಲ್ಲಿರುವಾಗ ಈ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆಯಲ್ಲಿ 41 ವರ್ಷದ ಮಹಾವೀರ್ ವಾದರ್, 38 ವರ್ಷದ ಸುನೀತಾ ವಾದರ್ , ಮಕ್ಕಳಾದ 9 ವರ್ಷದ ಕುಮಾರ್ ಹರ್ಷವರ್ಧನ್ ವಾದರ್ ಹಾಗೂ 14 ವರ್ಷದ ಕುಮಾರಿ ಹರ್ಷದಾ ವಾದರ್ ಗಾಯಗೊಂಡಿದ್ದಾರೆ. ಸ್ಫೋಟದ ಸದ್ದು ಕೇಳಿ ಅಕ್ಕ ಪಕ್ಕದ ಮನೆಯವರು ಧಾವಿಸಿದ್ದಾರೆ. ಬಳಿಕ ಗಾಯಗೊಂಡಿದ್ದವರನ್ನು ಆಸ್ಪತ್ರೆ…
ಹುಬ್ಬಳ್ಳಿ : ದೇಶದಲ್ಲಿ ಕಾಂಗ್ರೆಸ್ ಅಯೋಮಯ ಸ್ಥಿತಿಗೆ ತಲುಪಿದೆ. ದೆಹಲಿ ವಿಧಾನಸಭೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಲಿದೆ. ಕಾಂಗ್ರೆಸ್ ಪ್ರಾದೇಶಿಕ ಪಕ್ಷ ಆಗುವ ಹಂತಕ್ಕೆ ತಲುಪಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಒಳ ಜಗಳದಿಂದ ಆಡಳಿತದ ಮೇಲೆ ಪರಿಣಾಮ ಬೀರಿದೆ. ಈ ಸರ್ಕಾರದಲ್ಲಿ ಅನೇಕ ಭ್ರಷ್ಟಾಚಾರ ಹಗರಣಗಳು ನಡೆಯುತ್ತಿವೆ. ಸರ್ಕಾರ ಆಡಳಿತ ಯಂತ್ರದ ನಿಯಂತ್ರಣ ಕಳೆದುಕೊಂಡಿದೆ. ಕೆಎಸ್ಆರ್ಟಿಸಿ ಅಂಗ ಸಂಸ್ಥೆಗಳು ಬಾಗಿಲು ಹಾಗೂ ಹಂತಕ್ಕೆ ಬಂದಿವೆ. ಅಲ್ಲದೆ ಕಲಬುರ್ಗಿಯಲ್ಲಿ ಗುತ್ತಿಗೆದಾರನ ಆತ್ಮಹತ್ಯೆಯಾಗಿದೆ. ಬಸ್ ಅದರ ಏರಿಸಿ ಜನರ ಮೇಲೆ ಹೊರೆ ಹೊರೆಸಿದ್ದಾರೆ ಎಂದರು. ಡಿಸಿಎಂ ಡಿಕೆ ಶಿವಕುಮಾರ್ ಶತ್ರುಸಂಹಾರ ಮಾಡುತ್ತಾರೆ. ಹಾಗಾದರೆ ಅವರ ಪ್ರಕಾರ ಅವರ ಶತ್ರುಗಳು ಯಾರು? ರಾಜಕಾರಣದಲ್ಲಿ ಯಾರು ಶತ್ರುಗಳಲ್ಲ ಎಲ್ಲರೂ ಪ್ರತಿಸ್ಪರ್ಧಿಗಳು. ಶತ್ರುಗಳು ಯಾರು ಅಂತ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಬೇಕು. ಸಿಎಂ ಸಿದ್ದರಾಮಯ್ಯನವರ, ಡಾ. ಜಿ ಪರಮೇಶ್ವರರಾ?…
ಬೆಂಗಳೂರು : ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂದು ನಿನ್ನೆ ಪ್ರಿಯಕರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಇದರಿಂದ ಮನನೊಂದ ವಿವಾಹಿತೆ ಪ್ರಿಯತಮೆ ಒಬ್ಬಳು ಇಂದು ತಾನು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಮೃತ ಹಳ್ಳಿಯಲ್ಲಿ ನಡೆದಿದೆ. ಹೌದು ಅಮೃತಹಳ್ಳಿಯ ಶ್ರೀರಾಮಪುರದಲ್ಲಿ ಪ್ರಿಯತಮೆ ದಿಲ್ಶಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿನ್ನೆ ಆಕೆಯ ಪ್ರಿಯಕರ ಜಾನ್ಸನ್ (25) ಆತ್ಮಹತ್ಯೆ ಮಾಡಿಕೊಂಡಿದ್ದು ಇಂದು ದಿಲ್ಶಾದ್ (23) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಿಲ್ಶಾದ್ ಈಗಾಗಲೇ ಮದುವೆಯಾಗಿತ್ತು. ಜಾನ್ಸನ್ಗೆ ಮದುವೆಯಾಗಿರಲಿಲ್ಲ. ಆದರೂ ಕೂಡ ಪರಸ್ಪರವಾಗಿ ಜಾನ್ಸನ್ ಹಾಗೂ ದಿಲ್ಶಾದ್ ಪ್ರೀತಿಸುತ್ತಿದ್ದರು. ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂದು ನಿನ್ನೆ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದ. ರಾಜೇನಹಳ್ಳಿಯಲ್ಲಿ ನಿನ್ನೆ ಪ್ರಿಯಕರ ಜಾನ್ಸನ್ ನೇಣಿಗೆ ಶರಣಾಗಿದ್ದ. ಜಾನ್ಸನ್ ಸಾವಿನ ವಿಚಾರ ತಿಳಿದು ಇಂದು ದಿಲ್ಶಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಕುರಿತು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮುಡಾದಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ತಮ್ಮ ಮಗಳು ಅಳಿಯನ ಹೆಸರಲ್ಲಿ ಅಕ್ರಮ ಸೈಟ್ ಖರೀದಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಇಂದು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಇದೇ ವಿಚಾರವಾಗಿ ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು, ಸ್ನೇಹಮಹಿ ಕೃಷ್ಣ ಅವರಿಗೆ ಯಶಸ್ಸು ಸಿಗಲಿ ಎಂದು ತಿಳಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ನಮ್ಮ ಹುಡುಗನೇ, ಒಳ್ಳೆ ಕೆಲಸ ಮಾಡುತ್ತಿದ್ದಾನೆ. ರಾಜಕಾರಣಿಗಳು ಅಧಿಕಾರಿಗಳು ತಪ್ಪು ಮಾಡಿದ್ದರೆ ಶಿಕ್ಷೆ ಆಗಬೇಕು ಅಂತ ಹೇಳುತ್ತಾನೆ. ತಪ್ಪು ಮಾಡದೆ ಇದ್ದರೂ ಕೂಡ ಎಚ್ಚರಿಕೆಯಿಂದ ಹೋಗಲಿ ಎನ್ನುವ ರೀತಿ ಕೆಲಸ ಮಾಡುತ್ತಿದ್ದಾನೆ. ಅವನಿಗೆ ಯಶಸ್ಸು ಸಿಗಲಿ ಎಂದು ಶುಭ ಹಾರೈಸುತ್ತೇನೆ ಎಂದರು. ನನ್ನ ಮಗಳು ಅನ್ನಪೂರ್ಣ ಅಳಿಯ ವಿಶ್ವೇಶ್ವರಯ್ಯ ಅವರು ನಿವೇಶನ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ನಾನು ನೋಡಿರಲಿಲ್ಲ ಈಗ ತೋರಿಸಿದ್ದಾರೆ ಯಾರು 50:50 ಅನುಪಾತದಲ್ಲಿ ಜಮೀನ್ದಾರರು ಸೈಟ್ ತೆಗೆದುಕೊಂಡಿದ್ದಾರೋ ಅವರಿಂದ ವೇಟ್ ಮನಿ ಕೊಟ್ಟು ಖರೀದಿಸಿದ್ದಾರೆ…
ಚಿಕ್ಕಮಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾಲಿಟಿಕ್ಸ್ ಭಾರಿ ಸದ್ದು ಮಾಡುತ್ತಿದ್ದು, ಇದರ ನಡುವೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಶಿವಕುಮಾರ್ ಅವರು ಮುಂದಿನ ಸಿಎಂ ಎಂದು ಘೋಷಣೆ ಕೂಗಿದ ಘಟನೆ ಜರುಗಿತು. ಇಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆ ಪೀಠಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಠದಲ್ಲಿ ಆಯೋಜನೆ ಮಾಡಿದಂತಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕರ್ತರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಜೈ ಕಾಂಗ್ರೆಸ್ ಪಕ್ಷಕ್ಕೆ ಜೈ ಎಂದು ಘೋಷಣೆ ಕೂಗಿದರು. ಇದಕ್ಕೂ ಮುನ್ನ ಮೆಣಸೆ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾರ ಬೆಂಬಲವೂ ಕೂಡ ಬೇಡ ಯಾವ ಘೋಷಣೆಯೂ ಬೇಡ. ಹೈಕಮಾಂಡ್ ಸೂಚಿಸಿದಂತೆ ನಾವು ನಡೆದುಕೊಳ್ಳುತ್ತೇವೆ. ನಮ್ಮ ಸರ್ಕಾರ ಜನರ ಪರವಾಗಿ ಕೆಲಸ ಮಾಡುತ್ತದೆ.ಪಕ್ಷಕ್ಕಾಗಿ ನಾನು ಕೆಲಸ ಮಾಡುತ್ತೇನೆ ಪ್ರತಿಫಲ ನೀಡುವುದು ದೇವರಿಗೆ ಬಿಟ್ಟಿರುವ ವಿಷಯ ಎಂದು ತಿಳಿಸಿದರು.
ಚಿಕ್ಕಮಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾಲಿಟಿಕ್ಸ್ ಭಾರಿ ಸದ್ದು ಮಾಡುತ್ತಿದ್ದು, ಒಂದು ಕಡೆಗೆ, ಎಸ್ಸಿ, ಎಸ್ ಟಿ ಸಮುದಾಯದ ಅನ್ಯಾಯ ಆಗುತ್ತಿರುವ ಕುರಿತು ಹಲವು ಕಾಂಗ್ರೆಸ್ ನಾಯಕರು ಸಭೆ ನಡೆಸುತ್ತಿದ್ದರೆ, ಇನ್ನೊಂದು ಕಡೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ದೇವರ ಮೊರೆ ಹೋಗಿದ್ದಾರೆ. ಇದೀಗ ರಾಜಕೀಯದಲ್ಲಿ ಯಾವುದೇ ತಿರುವಿಲ್ಲ ಐದು ವರ್ಷಗಳ ಕಾಲ ನಮ್ಮದೇ ಸರ್ಕಾರ ಇರುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಬಳಿಯ ಮೆಣಸೆ ಹೆಲಿಪ್ಯಾಡ್ ಬಳಿ ಡಿಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ರಾಜಕೀಯದಲ್ಲಿ ಯಾವುದೇ ತಿರುವಿಲ್ಲ. ಜನರು ಅಧಿಕಾರ ನೀಡಿದ್ದಾರೆ. ಐದು ವರ್ಷ ನಮ್ಮ ಸರ್ಕಾರನೇ ಇರುತ್ತದೆ.ನಮ್ಮ ಸರ್ಕಾರ ಜನರ ಪರವಾಗಿ ಕೆಲಸ ಮಾಡುತ್ತದೆ. ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಹೈಕಮಾಂಡ್ ಹೇಳಿದಂತೆ ನಾವೆಲ್ಲರೂ ಕೆಲಸ ಮಾಡುತ್ತೇವೆ ನನಗೆ ಯಾರ ಬೆಂಬಲ ಬೇಡ ಯಾರ ಘೋಷಣೆಯು ಬೇಡ. ಪಕ್ಷಕ್ಕಾಗಿ ನಾನು ಕೆಲಸ ಮಾಡುತ್ತೇನೆ. ಪ್ರತಿಫಲ ನೀಡುವುದು…
ಉತ್ತರಕನ್ನಡ : ಕಳೆದ ಮೂರು ದಿನಗಳ ಹಿಂದೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಜಮೀರ್ ಅಹ್ಮದ್ ದರ್ಗಾವಾಲೆ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮಿಂಚಿನ ಕಾರ್ಯಚರಣೆ ನಡೆಸಿ ಸಿನಿಮಾ ಸ್ಟೈಲ್ ನಲ್ಲಿ ಒಟ್ಟು 10 ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಜಮೀರ್ ಅಹಮದ್ ದರ್ಗಾ ವಲೆ ಕಿಡ್ನಾಪ್ ಕೇಸ್ ಗೆ ಸಂಬಂಧಪಟ್ಟಂತೆ ಸಿನಿಮಾ ಸ್ಟೈಲಲ್ಲಿ 10 ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 18 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಇದೆ ವೇಳೆ ಜಪ್ತಿ ಮಾಡಿಕೊಂಡಿದ್ದಾರೆ. ಶಿರಸಿ ಡಿವೈಎಸ್ಪಿ ಗಣೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಚಿಕ್ಕೋಡಿಯಲ್ಲಿ ನಿನ್ನೆ ಬೆಳಿಗ್ಗೆ 5 ಜನರನ್ನು ಅರೆಸ್ಟ್ ಮಾಡಲಾಗಿದ್ದು, ಇನ್ನು ನಿನ್ನೆ ರಾತ್ರಿ ಯಲ್ಲಾಪುರದ ಬಳಿ ಇನ್ನುಳಿದ ಐವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜಮೀರ್ ಅಹ್ಮದ್ ದರ್ಗಾವಾಲೆ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಹಾಗೂ ಹಣವಿದ್ದ ಕಾರು ಪ್ರತ್ಯೇಕವಾಗಿ ಪರಾರಿಯಾಗಿದ್ದರು. ಸಿಕ್ಕ ಆರೋಪಿಗಳ ಮೂಲಕ ಪ್ರಮುಖ ಆರೋಪಿ ಜಾಗ ಪತ್ತೆಯಾಗಿತ್ತು. ಪ್ರಮುಖ ಆರೋಪಿ…














