Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಳಗಾವಿ : ಬೆಳಗಾವಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬೆಳೆದಿದ್ದ 441 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬೆಳಗಾವಿಯ ಸೈಬರ್ ಮತ್ತು ರಾಯಭಾಗ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸುಮಾರು 22 ಲಕ್ಷ ಮೌಲ್ಯದ 441 ಕೆಜಿ ಗಾಂಚಾ ಜತ್ತಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಸಿಂಗಾಡಿ ಹಿರೇಕೋಡಿ (45) ಎಂದು ತಿಳಿದುಬಂದಿದೆ. ನಿಡುಗುಂದಿ ಗ್ರಾಮದ ಬಳಿ ಜಮೀನಿನಲ್ಲಿ ಆರೋಪಿ ಗಾಂಜಾ ಬೆಳೆದಿದ್ದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ಭಾಗದ ಯುವಕರೇ ಈತನ ಟಾರ್ಗೆಟ್ ಆಗಿದ್ದಾರೆ. ಒಂದು ಎಕರೆ ಕಬ್ಬಿನ ಗದ್ದೆಯಲ್ಲಿ ಸಿಂಗಾಡಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ. ಅಂದಾಜು 22 ಲಕ್ಷ ರೂಪಾಯಿ ಮೌಲ್ಯದ ಸುಮಾರು 441 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಆರೋಪಿ ಸಿಂಗಾಡಿ ಹಿರೇಕೋಡಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿ ಜೈಲಿಗಟ್ಟಿದ್ದಾರೆ. ಜಂಟಿ ಕಾರ್ಯಾಚರಣೆಗೆ ಬೆಳಗಾವಿ ಎಸ್ಪಿ ಡಾ.ಭೀಮಶಂಕರ್ ಗುಳೇದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ : ಕರ್ತವ್ಯದಲ್ಲಿ ನಿರ್ಲಕ್ಷ, ಲಂಚಕ್ಕೆ ಬೇಡಿಕೆ ಆರೋಪ ಹಿನ್ನೆಲೆಯಲ್ಲಿ, ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ಈ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ ಮೇರೆಗೆ ಲೋಕಾಯುಕ್ತ ಪೊಲೀಸರು, ಶಿವಮೊಗ್ಗದ ತಹಶೀಲ್ದಾರ್ ಕಚೇರಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ದಾವಣಗೆರೆ, ಚಿತ್ರದುರ್ಗದಿಂದ ಬಂದಿದ್ದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನಾಲ್ಕು ತಂಡ ಹಾಗೂ ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಅಧಿಕಾರಿಗಳನ್ನೊಳಗೊಂಡ ನಾಲ್ಕು ತಂಡ ಕಾರ್ಯಾಚರಣೆ ನಡೆಸಿದೆ. ಇನ್ನು ದಾಳಿಯ ವೇಳೆ ಪರಿಹಾರವಾಗದೇ ಇರುವ ಸಾರ್ವಜನಿಕರ ಅಹವಾಲು, ಕಚೇರಿಯಲ್ಲಿ ಸಿಬ್ಬಂದಿ ಹಾಜರಾತಿ ವಿವರ, ಬಾಕಿ ಇರುವ ಕಡತಗಳು, ಸುದೀರ್ಘ ಕಾಲದಿಂದ ಬಾಕಿ ಉಳಿಸಿಕೊಂಡಿರುವುದಕ್ಕೆ ಕಾರಣ, ಹಕ್ಕು ಬದಲಾವಣೆ, ಭೂ ಮಂಜೂರಾತಿ, ಭೂಮಿ, ಬಗರ್‌ಹುಕುಂ, ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸಂಬಂಧಿಸಿದಂತೆ ವಿಲೇವಾರಿಯಾಗದೇ ಉಳಿದಿರುವ ಅರ್ಜಿಗಳ ಪರಿಶೀಲನೆ ನಡೆಸಿದರು.
ಹಾಸನ : ಹಾಸನದಲ್ಲಿ ಜಿಲ್ಲಾ ಆಸ್ಪತ್ರೆ ವೈದ್ಯರ ಮಹಾ ಎಡವಟ್ಟು ಮಾಡಿದ್ದು, ಎಡಗಾಲು ಬದಲು ಬಲಗಾಲಿಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಬಲಗಾಲು ಕೊಯ್ದಿರುವ ಜಿಲ್ಲಾಸ್ಪತ್ರೆಯ ವೈದ್ಯ ಸಂತೋಷ, ಜ್ಯೋತಿ ಅನ್ನುವವರ ಬಲಗಾಲು ಕುಯ್ದಿದ್ದಾರೆ. ಅಪಘಾತ ಹಿನ್ನೆಲೆಯಲ್ಲಿ ಜ್ಯೋತಿ ಅವರ ಎಡಗಾಲಿಗೆ ರಾಡ್ ಅಳವಡಿಕೆ ಮಾಡಿದ್ದಾರೆ. ಎರಡುವರೆ ವರ್ಷದ ಹಿಂದೆ ಎಡಗಾಲಿಗೆ ರಾಡ್ ಅಳವಡಿಕೆ ಮಾಡಿದ್ದರು ಮತ್ತೆ ಕಾಲು ನೋವು ಹಿನ್ನೆಲೆ ಆಸ್ಪತ್ರೆಗೆ ಜ್ಯೋತಿ ಬಂದಿದ್ದರು. ಆದರೆ ಬಲಗಾಲಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು ಎಡಗಾಲನ್ನು ಕೊಯ್ದು ರಾಡು ಅಳವಡಿಸಿದ್ದರು. ಬಳಿಕ ತಮ್ಮ ತಪ್ಪಿನ ಅರಿವಾದ ನಂತರ ಎಡಗಾಲಿನ ರಾಡ್ ತೆಗೆದು ಮತ್ತೆ ಇದೀಗ ಬಲಗಾಲಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ವೈದ್ಯರ ಎಡವಟ್ಟಿಗೆ ಮಹಿಳೆ ಜ್ಯೋತಿ ಆಘಾತಕ್ಕೆ ಒಳಗಾಗಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಬೂಚನಹಳ್ಳಿಯ ಕಾವಲು ಗ್ರಾಮದ ನಿವಾಸಿಯಾಗಿದ್ದಾರೆ. ಎರಡುವರೆ ವರ್ಷದ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದರು. ತೀವ್ರ ಪೇಟ್ಟಾಗಿದ್ದರಿಂದ ವೈದ್ಯರು ಎಡಗಾಲಿಗೆ ಅಳವಡಿಸಿದ್ದರು.ಇತ್ತೀಚಿಗೆ ಕಾಲಿಗೆ ಅಳವಡಿಸಿದ್ದ ರಾಡ್ ನಿಂದ ಜ್ಯೋತಿಗೆ ನೋವು ಕಾಣಿಸಿಕೊಂಡಿತ್ತು. ಹಿಮ್ಸ್ ಆಸ್ಪತ್ರೆಯ…
ಬೆಂಗಳೂರು : ರಸ್ತೆಯಲ್ಲಿ ಮೊಬೈಲ್ ನೋಡಿಕೊಂಡು ಹೋಗುವವರೇ ಈ ಸುದ್ದಿಯನ್ನು ಒಮ್ಮೆ ಓದಲೇಬೇಕು. ಹೌದು ರಸ್ತೆಯಲ್ಲಿ ತೆರಳುವಾಗ ಖದೀಮರು ಮೈ ಮರೆತರೆ ಹೊಂಚು ಹಾಕಿ, ಮೊಬೈಲ್ ಕಳ್ಳತನ ಮಾಡುತ್ತಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ಇದೀಗ ಮೊಬೈಲ್ ಕಳವು ಆಗಿದೆ. ರಸ್ತೆಯಲ್ಲಿ ಬರುತ್ತಿದ್ದವನಿಂದ ಮೊಬೈಲ್ ಕದ್ದು ಖದೀಮರು ಪರಾರಿಯಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ಸ್ಕೂಟರ್ ನಲ್ಲಿ ಬಂದ ಇಬ್ಬರು ಖದೀಮರು ರಸ್ತೆಯಲ್ಲಿ ಯುವಕನು ಮೊಬೈಲ್ ನೋಡಿಕೊಂಡು ಹೋಗುತ್ತಿದ್ದ. ಈ ವೇಳೆ ಆತನ ಕೈಯಿಂದ ಮೊಬೈಲ್ ಕಸಿದು ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾರೆ. ಸೆಪ್ಟೆಂಬರ್ 17ರಂದು ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯಕ್ಕೆ ಪೊಲೀಸರು ಮೊಬೈಲ್ ಕದ್ದ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
ಮೈಸೂರು : ನಿನ್ನೆ ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸಿ ಖ್ಯಾತ ಸಾಹಿತಿ ಬಾನು ಮುಷ್ತಾಕ್ ದಸರಾ ಉದ್ಘಾಟಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ನಿನ್ನೆ ಆಹಾರ ಮಳಿಗೆ ಸೇರಿದಂತೆ ಕುಸ್ತಿ ಪಂದ್ಯಾಟಗಳಿಗೆ ಚಾಲನೆ ನೀಡಿದರು. ಇದೀಗ ಇಂದು ಯುವ ದಸರಾ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ. ಹೌದು ಮೈಸೂರು ದಸರಾದಲ್ಲಿ ಇಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ. ಬೆಳಗ್ಗೆ 7:30ಕ್ಕೆ ಅರಮನೆ ಮುಂಭಾಗ ರಂಗೋಲಿ ಸ್ಪರ್ಧೆ ಕಾರ್ಯಕ್ರಮ, ಬೆಳಗ್ಗೆ 10.30 ಕ್ಕೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಪಂಚಕಾವ್ಯದ ಕವಿಗೋಷ್ಠಿ, ಮೈಸೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನಪೀಠದಲ್ಲಿ ಈ ಒಂದು ಕವಿಗೋಷ್ಠಿ ನಡೆಯಲಿದೆ. ಬಳಿಕ ಬೆಳಿಗ್ಗೆ 11 ಗಂಟೆಗೆ ಜೆಕೆ ಮೈದಾನದಲ್ಲಿ ಮಹಿಳಾ ದಸರಾಗೆ ಚಾಲನೆ ನೀಡಲಾಗುತ್ತದೆ. ಮಹಿಳಾ ದಸರಾವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದಲ್ಲಿ ಮಕ್ಕಳ ದಸರಾಕ್ಕೆ ಚಾಲನೆ ನೀಡಲಾಗುತ್ತಿದೆ ಮಕ್ಕಳ ದಸರಾದಲ್ಲಿ ಸಚಿವ ಮಧು ಬಂಗಾರಪ್ಪ ಸಹ ಭಾಗಿಯಾಗಲಿದ್ದಾರೆ. ಸಂಜೆ…
ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ವಿಪರೀತ ಮಳೆ ಆಗುತ್ತಿದೆ. ಇದೀಗ ರಾಜಧಾನಿ ಬೆಂಗಳೂರು ನಗರ ಸೇರಿದಂತೆ ಮತ್ತೆ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದ್ದು ರಾಜ್ಯದ ಈ 7 ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಅಷ್ಟೇ ಅಲ್ಲದೆ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರ ಬಳಿಕ ಭಾರಿ ಮಳೆಯಾಗಲಿದೆ.
ಮೈಸೂರು : ನಿನ್ನೆಯಿಂದ ಇಡೀ ದೇಶದಾದ್ಯಂತ ಜಿಎಸ್‌ಟಿ ದರ ಕಡಿತಗೊಳಿಸಿ ಹೊಸ ದರ ಜಾರಿಗೆ ಆಗಿರುವ ಹಿನ್ನೆಲೆಯಲ್ಲಿ, ಗ್ರಾಹಕರ ದಿನಬಳಕೆ ವಸ್ತುಗಳು ಸೇರಿದಂತೆ ವಾಹನ ಬೈಕ್ ಹಲವು ವಸ್ತುಗಳ ಮೇಲಿನ ಬೆಲೆ ಇಳಿಕೆಯಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಹಿಂದೆ ಜಿಎಸ್‌ಟಿ ಜಾರಿ ಮಾಡಿದ್ದು ಅವರೇ, ಜಿಎಸ್‌ಟಿ ದರ ಹೆಚ್ಚಳ ಮಾಡಿದ್ದು, ಅವರೇ ಈಗ ಜಿಎಸ್‌ಟಿ ದರ ಕಡಿತಗೊಳಿಸಿ ತಮಗೆ ತಾವೇ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಈ ಕುರಿತು ಟ್ವೀಟ್ ನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಮಹಾನ್ ಡೋಂಗಿ. ಜಿಎಸ್‌ಟಿ ಜಾರಿ ಮಾಡಿದ್ದೂ ಅವರೇ, ಜಿಎಸ್‌ಟಿ ಹೆಚ್ಚೆಚ್ಚು ವಿಧಿಸಿದ್ದೂ ಅವರೇ, ಈಗ ಕಡಿಮೆ ಮಾಡಿ ಬೆನ್ನು ತಟ್ಟಿಕೊಳ್ತಾ ಇರೋದೂ ಅವರೇ. ಹಾಗಾದರೆ ಇಷ್ಟು ವರ್ಷ ಹೆಚ್ಚು ಜಿಎಸ್‌ಟಿ ಹಾಕಿ ಜನರನ್ನು ಸುಲಿಗೆ ಮಾಡುವಾಗ ನಿಮ್ಮ ಈ ಕಾಳಜಿ ಎಲ್ಲಿಹೋಗಿತ್ತು? ಎಂಟು ವರ್ಷ ವಿಪರೀತ ಜಿಎಸ್‌ಟಿ ವಸೂಲಿ…
ಮೈಸೂರು : ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ವನ್ನು ಉದ್ಘಾಟಿಸಿ ಮಾತನಾಡಿದರು. ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲುಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು. ವಿನೇಶ್ ಫೋಗಟ್ ಅವರು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಅಂತರರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ…
ನವದೆಹಲಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ವಾಪಸ್ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ಸೋಮವಾರ ತಿಳಿಸಿದೆ. ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವರು ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರ ನೇತೃತ್ವದ ಪೀಠವು ಇಂದು ಇವುಗಳ ವಿಚಾರಣೆ ನಡೆಸಿತು. ಇದೇ ಪ್ರಕರಣವನ್ನು ಈ ಹಿಂದೆ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿತ್ತು. ಈಗ ಅವರ ಪೀಠಕ್ಕೆ ವಿಚಾರಣೆ ನಡೆಸುವಂತೆ ಅರ್ಜಿಗಳನ್ನು ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿತು. ಈ ವೇಳೆ ಡಿ.ಕೆ.ಶಿವಕುಮಾರ್ ಅವರ ಪರ ಹಿರಿಯ ವಕೀಲರಾದ ಅಭಿಷೇಕ್ ಎಂ. ಸಿಂಘ್ವಿ ಅವರು, ರಾಜಕೀಯ ವಿಷಯಗಳು ಕೋರ್ಟಿನ ಆಚೆಗೆ…
ಬೆಂಗಳೂರು : ಕರ್ತವ್ಯದ ಲೋಪದ ಆರೋಪದ ಮೇರೆಗೆ ನಗರದ ಮತ್ತಿಬ್ಬರು ಪೊಲೀಸ್ ಅಧಿಕಾರಿಗಳು ಅಮಾನತುಗೊಂಡಿದ್ದಾರೆ. ಡಿಸಿಪಿ ಅವರ ಆದೇಶ ಆಧರಿಸಿ ಆಯುಕ್ತ ಸೀಮಂತ್ ಕುಮಾರ್‌ಸಿಂಗ್ ಶಿಸ್ತು ಕ್ರಮ ಜರುಗಿಸಿದ್ದಾರೆ ಎಂದು ತಿಳಿದು ಬಂದಿದೆ. ಹಲಸೂರು ಗೇಟ್ ಠಾಣೆ ಪಿಐ ಹನುಮಂತ ಭಂಜತ್ರಿ ಹಾಗೂ ಕೋರಮಂಗಲ ಠಾಣೆಯ ಪಿಐ ಎಸ್.ಎಲ್.ಆರ್.ರೆಡ್ಡಿ ಅಮಾನತುಗೊಂಡಿವರು. ಕೆಲ ದಿನಗಳ ಹಿಂದಷ್ಟೇ ಡ್ರಗ್ಸ್ ಪೆಡ್ಲರ್‌ಗಳ ಜೊತೆ ಸ್ನೇಹ ಹೊಂದಿದ್ದ ಆರೋಪದ ಮೇರೆಗೆ 11 ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿತ್ತು. ಕಾನೂನು ಸುವ್ಯವಸ್ಥೆ ಅಸಮರ್ಪಕ ನಿರ್ವಹಣೆ ಹಾಗೂ ಅಪರಾಧ ಪ್ರಕರಣಗಳ ಪತ್ತೆದಾರಿಕೆಯಲ್ಲಿ ದೋಷ ಮಾಡಿದ್ದರು ಎಂದು ಹಲಸೂರು ಗೇಟ್ ಠಾಣೆ ಪಿಐ ಹನುಮಂತ ಮೇಲೆ ಆರೋಪ ಬಂದಿತ್ತು. ಹಾಗೆ ತಮ್ಮ ಠಾಣಾ ಸರಹದ್ದಿನಲ್ಲಿ ಪಬ್‌ಗಳು ಅವಧಿ ಮೀರಿ ವಹಿವಾಟು ನಡೆಸಿದ ಹಾಗೂ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ ಮಾಡಿದರು ನಿಯಂತ್ರಿಸದೆ ನಿರ್ಲಕ್ಷ್ಯ ತೋರಿದರು ಎಂಬ ಆಪಾದನೆಗೆ ಕೋರಮಂಗಲ ಠಾಣೆ ಪಿಐ ರೆಡ್ಡಿ ತುತ್ತಾಗಿದ್ದರು ಎನ್ನಲಾಗಿದೆ. ಈ ಸಂಬಂಧ ಆಯುಕ್ತರಿಗೆ ಭಜಂತ್ರಿ ವಿರುದ್ಧ…








