Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿಗೆ ಜನರು ಮಾನವೀಯತೆ ಅನ್ನುವುದನ್ನೇ ಮರೆತಿದ್ದಾರೆ. ಮನುಷ್ಯ-ಮನುಷ್ಯ ನಡುವೆ ಮಾನವೀಯತೆ ಇಲ್ಲ, ಇನ್ನು ಮನುಷ್ಯ ಪ್ರಾಣಿಗಳ ನಡುವೆ ಎಲ್ಲಿ ಮಾನವೀಯತೆ ಬರುತ್ತದೆ? ಇದೀಗ ಬೆಂಗಳೂರಿನಲ್ಲಿ ರಸ್ತೆಯ ಮೇಲೆ ತನ್ನ ಪಾಡಿಗೆ ತಾನು ಹಾಯಾಗಿ ಮಲಗಿದ್ದ ನಾಯಿಯ ಮೇಲೆ ಕೀಚಕನೊಬ್ಬ ಕಾರುಹರಿಸಿ ಕೊಲೆ ಮಾಡಿರುವ ಅಮಾನುಷ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸದ್ಯ ಪೊಲೀಸರು ಚಾಲಕರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಜೆ.ಪಿ.ನಗರ 8ನೇ ಹಂತದ ರಘವನಪಾಳ್ಯ ನಿವಾಸಿ ಮಂಜುನಾಥ(35) ಬಂಧಿತ ಕಾರು ಚಾಲಕ. ಡಿ.31ರಂದು ಸಂಜೆ ಸುಮಾರು 4.30ಕ್ಕೆ ರಘವನಪಾಳ್ಯದ ಶೇಖರ್ ಲೇಔಟ್ 1ನೇ ಮುಖ್ಯ ರಸ್ತೆಯ 1ನೇ ಅಡ್ಡರಸ್ತೆಯಲ್ಲಿ ಸುಮಾರು 4 ತಿಂಗಳ ಬೀದಿ ನಾಯಿ ಮಲಗಿತ್ತು. ಈ ವೇಳೆ ಆರೋಪಿ ಮಂಜು ನಾಥ ತನ್ನ KA02 MS 2781 ನೋಂದಣಿ ಸಂಖ್ಯೆಯ ಕೆಂಪು ಬಣ್ಣದ ಮಹೀಂದ್ರ ಫಾರ್ ಕಾರನ್ನು ನಾಯಿ ಮೇಲೆ ಹತ್ತಿಸಿಕೊಂಡು ತೆರಳಿದ್ದ. ದೇಹದ…
ಬೆಂಗಳೂರು : ಮಹಿಳಾ ಉದ್ಯೋಗಿಗಳಿಗೆ ಸುರಕ್ಷಿತ ನಗರಗಳ ಸಾಲಿನಲ್ಲಿ ಬೆಂಗಳೂರು ಮೊದಲ ಸ್ಥಾನವನ್ನು ಪಡೆದಕೊಂಡಿದೆ. ಮಹಿಳೆಯರ ಕೌಶಲ್ಯಾಭಿವೃದ್ಧಿ, ಉದ್ಯೋಗಾವಕಾಶ, ಮೂಲಸೌಕರ್ಯ ಕ್ಷೇತ್ರಗಳಲ್ಲಿ ದೇಶದಲ್ಲಿಯೇ ಉತ್ತಮ ವ್ಯವಸ್ಥೆಯನ್ನು ಬೆಂಗಳೂರು ಹೊಂದಿದೆ ಎಂದು ಅವತಾರ್ ಗ್ರೂಪ್ ಸಿದ್ಧಪಡಿಸಿರುವ ವರದಿ ಹೇಳಿದೆ. ಹೌದು ಅವತಾರ್ ಗ್ರೂಪ್ ತಯಾರಿಸಿರುವ ಟಾಪ್ ಸಿಟೀಸ್ ಫಾರ್ ವುಮೆನ್‌ಇನ್ ಇಂಡಿಯಾದ ಮೂರನೇ ಆವೃತ್ತಿಯಲ್ಲಿ ಬೆಂಗಳೂರಿಗೆ ಅಗ್ರಪಟ್ಟ ದೊರೆತಿದೆ. ಇದರ ನಂತರದಲ್ಲಿ ಚೆನ್ನೈ, ಮುಂಬೈ, ಹೈದರಾಬಾದ್, ಪುಣೆ, ಕೋಲ್ಕತಾ ಮತ್ತು ಅಹಮದಾಬಾದ್ ಸ್ಥಾನ ಪಡೆ ದುಕೊಂಡಿವೆ. ಆದರೆ ಉತ್ತರಭಾರತದ ನಗರಗಳು ಮಹಿಳೆಯರ ಸುರಕ್ಷತೆಯಲ್ಲಿ ಹಿಂದೆ ಉಳಿದಿವೆ ಎಂದು ವರದಿ ಹೇಳಿದೆ. ಕಳೆದ ವರ್ಷ ಫೆಬ್ರವರಿಯಿಂದ ನವೆಂಬರ್‌ವರೆಗೆ ನಡೆಸಿದ ಅಧ್ಯಯ ನದಲ್ಲಿ ಸಾಮಾಜಿಕ ಸೇರ್ಪಡೆ, ಕೈಗಾರಿಕಾ ಸೇರ್ಪಡೆ ಮತ್ತು ಜನರ ಅನುಭವ ಎಂಬ ಮೂರು ಅಂಶಗಳ ಆಧಾರದ ಮೇಲೆ ಮೌಲ್ಯಮಾಪನ ನಡೆಸಲಾಗಿದೆ. ಇದರಲ್ಲಿ ಬೆಂಗಳೂರು ನಗರವು ಮೂಲ ಭೂತ ಸೌಕರ್ಯ, ಕೌಶಲ್ಯಾಭಿವೃದ್ಧಿ, ಸಾರಿಗೆ ಮತ್ತು ಮಹಿಳಾ ಉದ್ಯೋಗಾ ವಕಾಶಗಳಲ್ಲಿ ಮುಂದಿದೆ. ದಕ್ಷಿಣದ ಬಹುತೇಕ ನಗರಗಳು…
ಬೆಂಗಳೂರು : ಕಳೆದ ವರ್ಷ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಒಂದು ದಾಖಲೆ ನಿರ್ಮಾಣ ಮಾಡಿದ್ದು, ಏನಪ್ಪಾ ಅದು ದಾಖಲೆ ಅಂದರೆ ಕಳೆದ ಒಂದೇ ವರ್ಷದಲ್ಲಿ ಸುಮಾರು 4.07 ಕೋಟಿ ಜನರು ಪ್ರಯಾಣಿಸಿದ್ದಾರೆ ಎನ್ನಲಾಗಿದೆ. 2023ಕ್ಕೆ ಹೋಲಿಸಿದರೆ ಶೇ.9ರಷ್ಟು ಬೆಳವಣಿಗೆಯಾಗಿದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ತಿಳಿಸಿದೆ. ಹೌದು ದೇಶದ ಮೂರನೇ ದೊಡ್ಡ ವಿಮಾನ ನಿಲ್ದಾಣವಾಗಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದೇ ವರ್ಷದಲ್ಲಿ 4 ಕೋಟಿ ಜನ ಮೈಲುಗಲ್ಲು ಸಾಧಿಸಿದ ಕಾರಣ ಬೆಂಗಳೂರು ವಿಮಾನ ನಿಲ್ದಾಣವು ಅಂ ತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿ (ಎಸಿಐ) ಅನ್ವಯ ‘ದೊಡ್ಡ ವಿಮಾನ ನಿಲ್ದಾಣ’ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ 2024 ಅಕ್ಟೊಬರ್ 5 ರಂದು ಒಂದೇ ದಿನ 1,26,532 ಜನರು ಪ್ರಯಾಣಿಸಿರುವುದು ಒಂದೇ ದಿನದ ದಾಖಲೆ. ಅ.17ರಂದು ಗರಿಷ್ಠ 782 ವಿಮಾನಗಳು ಸಂಚರಿಸಿವೆ. ಡಿ.31ರವರೆಗೆ ಬೆಂಗಳೂರು 75 ದೇಶೀಯ ಮತ್ತು 30 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಜೊತೆ ನೇರ…
ಬೆಂಗಳೂರು : ಬಂಡೀಪುರ ಅರಣ್ಯದಲ್ಲಿ ರಾತ್ರಿ ವೇಳೆ ಕೇವಲ ಎರಡು ಬಸ್ ಹಾಗು ಆಂಬುಲೆನ್ಸ್ ಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದ್ದು, ರಾತ್ರಿ 9 ಗಂಟೆಯವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ. ಬಳಿಕ, ಕೇರಳದಿಂದ ಕರ್ನಾಟಕದ ಕಡೆ 2 ಬಸ್ಗಳಿಗೆ ಮತ್ತು 1 ಆ್ಯಂಬುಲೆನ್ಸ್ಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿವೆ. ಇದಕ್ಕೆ ಸಚಿವ ಈಶ್ವರ್ ಖಂಡ್ರೆ ತಿರುಗೇಟು ನೀಡಿದ್ದು, ಬಂಡೀಪುರ ಅರಣ್ಯದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ನಮ್ಮ ಸರ್ಕಾರ ಯಾವುದೇ ಹೊಸ ಅನುಮತಿ ನೀಡಿಲ್ಲ. ಹೀಗಾಗಿ, ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ಎರಡು ಬಸ್ ಸೇವೆಗಳನ್ನು ಅನುಮತಿಸಿರುವ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಪ್ರಮಾಣಿಕ ಆರೋಪಗಳನ್ನು ಮಾಡುತ್ತಿವೆ ಮತ್ತು ಜನರಿಗೆ ತಪ್ಪು ಮಾಹಿತಿ ಹರಡಲು ಪ್ರಯತ್ನಿಸುತ್ತಿವೆ. ಹಳೆ ನೀತಿ ಮುಂದುವರಿಯುತ್ತಿರುವುದನ್ನೇ ಸುಳ್ಳು ಆರೋಪ ಮಾಡಿ, ಕಾಂಗ್ರೆಸ್…
ಬಾಗಲಕೋಟೆ : ಬ್ಯಾಂಕ್ ನಲ್ಲಿ ಸಾಲ ಪಡೆದುಕೊಂಡಿದ್ದು ಆ ಸಾಲವನ್ನು ತೀರಿಸಲ್ಲವೆಂದು ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿ ಮಠ್ ವಿರುದ್ಧ ಈ ಒಂದು ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆಗೆ ಒಳಗಾದಂತಹ ಆನಂದ್ ಮುತ್ತಗಿ ಎನ್ನುವವರು ಬಾಗಲಕೋಟೆಯ ಶಹರ ಪೊಲೀಸ್ ಠಾಣೆಯಲ್ಲಿ ಚರಂತಿಮಠ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ಚರಂತಿಮಠ ಬೀಳೂರು ಗುರುಬಸವ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿದ್ದಾರೆ. ಇದೇ ಸಹಕಾರ ಸಂಘದಿಂದ ಆನಂದ ಮುತ್ತಗಿ 35 ಲಕ್ಷ ರೂಪಾಯಿ ಸಾಲ ಪಡೆದಿದ್ದರು. 2018ರಿಂದ ಸಾಲ ಮರುಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದ್ದರು. ಇದೀಗ ಸಾಲದ ಹಣ ಕಟ್ಟದಿದ್ದಕ್ಕೆ ವೀರಣ್ಣ ಚರಂತಿಮಠ ಹಲ್ಲೆ ಮಾಡಿದ್ದಾರೆಂದು ಆರೋಪ ಮಾಡಿದ್ದಾರೆ. ಈ ಕುರಿತು ಹಲ್ಲೆಗೆ ಒಳಗಾದ ಆನಂದ್ ಮುತ್ತಗಿ ಅವರು ಮಾತನಾಡಿ, ಬ್ಯಾಂಕ್ ನಲ್ಲಿ ಪಡೆದ 35 ಲಕ್ಷ ಪಾವತಿ ಸೇರಲು ಆಗಿರಲಿಲ್ಲ ಜಮೀನು ಮಾರಿ ಹಣ ಪಾವತಿಸಲು ನಿರ್ಧರಿಸಿದೆ. ಸಹಕಾರ ಸಂಘದ…
ಮಹಾರಾಷ್ಟ್ರ : ಪ್ರೀತಿ ನಿರಾಕರಿಸಿದಳೆಂದು ಸಹೋದ್ಯೋಗಿ ಯುವತಿಯನ್ನೇ ಹಾಡು ಹಗಲೇ ನೂರಾರು ಜನರ ಮುಂದೆ ಯುವಕನೊಬ್ಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಯರವಾಡ ಎಂಬಲ್ಲಿ ಒಂದು ಘಟನೆ ನಡೆದಿದೆ. ಹೌದು ಕೊಲೆಯಾದ ಯುವತಿ ಹಾಗೂ ಪಾಪಿ ಯುವಕ ಇಬ್ಬರೂ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಹುಡುಗನ ಪ್ರೀತಿ ನಿವೇದನೆಯನ್ನು ಹುಡುಗಿ ನಿರಾಕರಿಸಿದ್ದಕ್ಕೆ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಇನ್ನೂ ಕೆಲವು ಕಡೆ ಆರ್ಥಿಕ ವಿಚಾರವಾಗಿ ಕೊಲೆ ನಡೆದಿದೆ ಎಂದು ವರದಿಯಾಗಿದೆ. ಪ್ರೀತಿಸೋದಕ್ಕೆ ನಿರಾಕರಿಸಿದ್ದಕ್ಕೆ ಹಾಡು ಹಗಲಿನಲ್ಲಿ ನೂರಾರು ಜನ ನೋಡುತ್ತಿರುವಂತೆಯೇ ಕಂಪನಿಯ ಪಾರ್ಕಿಂಗ್ ಲಾಟ್‌ನಲ್ಲಿಯೇ ಭೀಕರವಾಗಿ ಕೊಲೆ ಮಾಡಿದ್ದಾನೆ.ಎಷ್ಟೋ ಜನ ಘಟನೆಯನ್ನ ನೋಡುತ್ತಾ ನಿಂತರೆ ಹೊರತು ಯಾರು ಕೂಡ ಕೊಲೆಯನ್ನು ತಡೆಯುವ ಕನಿಷ್ಟ ಪ್ರಯತ್ನ ಕೂಡ ಮಾಡಲಿಲ್ಲ. ಸದ್ಯ ಆರೋಪಿಯನ್ನ ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ.
ಬೆಂಗಳೂರು : ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಬೆಂಗಳೂರಿನ ಗ್ರಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದ 6 ಜನ ನಕ್ಸಲರನ್ನು ಪೊಲೀಸರು ಇಂದು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ಜನೆವರಿ 30 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಹೌದು ನಿನ್ನೆ ಸರ್ಕಾರದ ಮುಂದೆ ಶರಣಾಗಿದ್ದ 6 ಜನ ನಕ್ಸಲರಿಹೆ ಇದೀಗ ನ್ಯಾಯಾಂಗ ಬಂಧನ ವಿಧಿಸಿ NIA ವಿಶೇಷ ಕೋಟ್ ಆದೇಶ ಹೊರಡಿಸಿದೆ. ನಿನ್ನೆ ಬೆಂಗಳೂರಿನ ಗ್ರಾಹಕಚೇರಿ ಕೃಷ್ಣಾದಲ್ಲಿ ಆರು ಜನ ನಕ್ಷತ್ರರು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಜಿ ಪರಮೇಶ್ವರ್ ಅವರ ಸಮ್ಮುಖದಲ್ಲಿ ಸರ್ಕಾರಕ್ಕೆ ಶರಣಾಗಿದ್ದರು. ನಕ್ಸಲರು ಶರಣಾದ ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇಂದು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸೋಕು ಮುನ್ನ ವೈದ್ಯಕೀಯ ಪರೀಕ್ಷೆಗೆ ಅವರನ್ನು ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ ಪೊಲೀಸರು ಇದೀಗ ಕೋರ್ಟ್ ಆರು ಜನ…
ಬೆಂಗಳೂರು : ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು.ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ. ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಜೈಲಿಗೆ ಹೋಗ್ತಾರೆ ಅಂತ ಹೇಳಿದ್ದರು. 25 ವರ್ಷಗಳ ಹಿಂದೆ ದ್ವಾರಕಾನಾಥ್ ಗುರೂಜಿ ಹೇಳಿದ್ದರು. ನಿಮ್ ಬಾಸ್, ನಿಮ್ಮ ಗುರು ಜೈಲಿಗೆ ಹೋಗ್ತಾರೆ ಅಂತ ಹೇಳಿದ್ರು.ಜೈಲಿಗೆ ಹೋಗಿ ಬಂದ ಮೇಲೆ ಡಿಕೆ ಸಿಎಂ ಆಗ್ತಾರೆ ಎಂದಿದ್ದರು ಎಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹೇಳಿಕೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರು, ಡಿಕೆ ಹಣೆಬರದಲ್ಲಿ ಬರೆದಿದ್ದರೆ ಮುಖ್ಯಮಂತ್ರಿ ಆಗುತ್ತಾರೆ. ಡಿಕೆ ಶಿವಕುಮಾರ್ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರೇ ಲಾಸ್ಟ್ ಅಂತ ಬರೆದಿದ್ದರೆ ಅದೇ ಕೊನೆ. ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಅವರ ಹೈಕಮಾಂಡ್ ಮತ್ತು ಶಾಸಕರು ತೀರ್ಮಾನ ಮಾಡುತ್ತಾರೆ ಯಾರು ಸಿಎಂ ಆಗಬೇಕು ಅಂತ ತೀರ್ಮಾನ ಮಾಡುತ್ತಾರೆ ಎಂದರು. ಡಿಕೆ ಶಿವಕುಮಾರ್ ಎಲ್ಲರನ್ನು ವಿಶ್ವಾಸ ತೆಗೆದುಕೊಂಡು ತಾಳ್ಮೆಯಿಂದ ಮುಂದೆ ಹೋಗುತ್ತಿರುವುದನ್ನು ಇತ್ತೀಚಿಗೆ ಅವರನ್ನು ನೋಡುತ್ತಿದ್ದೇವೆ. ಅವರು ಎಂಟು ಬಾರಿ ಶಾಸಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ…
ಮಂಡ್ಯ : ಮಂಡ್ಯದಲ್ಲಿ ಜಿಸಿಬಿ ಒಂದನ್ನು ಒವರ್ ಟೆಕ್ ಮಾಡುವ ಭರದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಚಲಿಸುತ್ತಿದ್ದ ಬೈಕ್ ಸವಾರರು ಜೆಸಿಬಿ ಚಕ್ರದ ಅಡಿ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ.ಈ ವೇಳೆ ಓರ್ವ ಸವಾರನ ಸ್ಥಿತಿ ಗಂಭೀರವಾಗಿದೆ. ಹೌದು ಮಂಡ್ಯದಲ್ಲಿ ಚಲಿಸುತ್ತಿದ್ದ ಜೆಸಿಬಿ ಕೆಳಗೆ ಸವಾರರು ಬಿದ್ದಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಬೈಕ್ ಸವಾರ ತಿಮ್ಮೇಗೌಡ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಜೆಸಿಬಿ ಹಿಂದಿಕ್ಕುವ ಜಿದ್ದಾ ಜಿದ್ದಿಗೆ ಬಿದ್ದು ಭೀಕರವಾದ ಅಪಘಾತ ಸಂಭವಿಸಿದೆ. ಭೀಕರ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಕ್ಷಣ ಸವಾರ ತಿಮ್ಮೇಗೌಡನನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.














