Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ಅತಿಯಾದ ವೇಗದ ಚಾಲನೆ ಜೀವಕ್ಕೆ ಅಪಾಯಕಾರಿ ಎಂಬಂತೆ ಮಗನೋಬ್ಬ ಬೈಕಿನಲ್ಲಿ ತನ್ನ ತಾಯಿಯನ್ನು ಕೂಡಿಸಿಕೊಂಡು ತೆರಳುತ್ತಿದ್ದ ವೇಳೆ ಟೋಲ್ ಗೇಟ್ ಬಳಿ ತಡೆಗಂಬ ಬಡಿದು ತಾಯಿ ಸ್ಥಳದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನಲ್ಲಿ ನಡೆದಿದೆ. ಹೌದು ಬೈಕ್ ಸವಾರನ ನಿರ್ಲಕ್ಷಕ್ಕೆ ಆತನ ತಾಯಿ ಬಲಿಯಾಗಿದ್ದಾಳೆ. ಟೋಲ್ ಗೇಟ್ ಹಾಕಿದರೂ ಕೂಡ ಸವಾರ ನಿರ್ಲಕ್ಷದಿಂದ ಬೈಕ್ ಚಾಲನೆ ಮಾಡಿದ್ದಾನೆ. ಇ ವೇಳೆ ಹಿಂದೆ ಕುಳಿತಿದ್ದ ಸವಾರನ ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಣೇಬೆನ್ನೂರು ತಾಲೂಕಿನ ಚಳಗೇರಿಯಲ್ಲಿ ಈ ಒಂದು ಘಟನೆ ನಡೆದಿದೆ ಟೋಲ್ ಗೇಟ್ ತಡೆಗಂಬ ಬಡಿದು ಮಹಿಳೆ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ ಸರ್ಕಾರದ ವಿರುದ್ಧ ಎಚ್ ಡಿ ಕುಮಾರಸ್ವಾಮಿ 60% ಕಮಿಷನ್ ಆರೋಪ ಮಾಡಿರುವ ವಿಚಾರವಾಗಿ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಉಪಚುನಾವಣೆಗೆ ಪುತ್ರನನ್ನು ನಿಲ್ಲಿಸಿದಾಗ 100 ಕೋಟಿ ಖರ್ಚು ಮಾಡಿದರು. 100 ಕೋಟಿ ಹಣವನ್ನು ಆಲುಗಡ್ಡೆ ಬೆಳೆದು ಸಂಪಾದನೆ ಮಾಡಿದ್ರಾ? ಎಂದು ಬೆಂಗಳೂರಿನಲ್ಲಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಎಸ್‌ಟಿ ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನೀವು ನಿಂತಾಗ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿದ್ರಿ. ರಾಮನಗರದಲ್ಲೂ ಕೂಡ ಸ್ಪರ್ಧಿಸಿದಾಗ ಕೋಟ್ಯಾಂತರ ಹಣ ಖರ್ಚು ಮಾಡಿದ್ರಿ. ಎಲ್ಲಿಂದ ಬಂತು ಅಷ್ಟು ಹಣ? ಮೊದಲು ಅದನ್ನು ಹೇಳಿ ಎಂದು ಸೋಮಶೇಖರ್ HD ಕುಮಾರಸ್ವಾಮಿಗೆ ಸವಾಲು ಹಾಕಿದರು. ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯಕ್ಕೆ ತೆಗೆದುಕೊಂಡು ಬನ್ನಿ. ವಾರಕ್ಕೆ ಒಂದು ದಿನ ಇಲ್ಲಿಗೆ ಬಂದು ಸುದ್ದಿಗೋಷ್ಠಿ ನಡೆಸಿ ಹೋಗುವುದಲ್ಲ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸುಮ್ಮನೆ…
ಹಾಸನ : 50 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ನಗರಸಭೆಯ ಆಯುಕ್ತ ಹಾಗೂ ಎಇಇ ಅಧಿಕಾರಿಯು ಒಬ್ಬ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹೌದು 50 ಸಾವಿರ ಲಂಚ ಸ್ವೀಕರಿಸುವ ವೇಳೆ ಹಾಸನ ನಗರಸಭೆ ಆಯುಕ್ತ ಹಾಗೂ ಎಇಇ ಬಲೆಗೆ ಬಿದ್ದಿದ್ದಾರೆ. 50 ಸಾವಿರ ಸ್ವೀಕರಿಸುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.ಆಯುಕ್ತ ನರಸಿಹಮೂರ್ತಿ, ಎಇಇ ವೆಂಕಟೇಶ್ ಕೆ ಆರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಂತಹ ಅಧಿಕಾರಿಗಳ ರಕ್ಷಣೆಗೆ ಕೌನ್ಸಿಲರ್ ಗಳು ನಿಂತಿದ್ದಾರೆ. ವೆಂಕಟೇಶ್ವರ ನಗರಸಭೆಯ ಸದಸ್ಯರು ವಕಾಲತ್ತು ವಹಿಸಿದರು. 50,000 ಲಂಚ ಪಡೆದಿದ್ದರಲ್ಲಿ ಎಇಇ ವೆಂಕಟೇಶ್ ಪಾತ್ರ ಏನು ಇಲ್ಲ ನಗರಸಭೆ ಆಯುಕ್ತರ ಸೂಚನೆ, ಮೇರೆಗೆ ಲಂಚ ಪಡೆದಿದ್ದಾರೆ ಎಂದು ಸದಸ್ಯರು ಹೇಳಿದರು. ಈ ವೇಳೆ ಲೋಕಾಯುಕ್ತ ಪಿಐ ಬಾಲು ನಗರಸಭೆ ಸದಸ್ಯರಿಗೆ ಎಚ್ಚರಿಕೆ ನೀಡಿದರು. ನಾವು ಅಮಾಯಕರ ಮೇಲೆ ದಾಳಿ ಮಾಡಿಲ್ಲ. ಲಂಚ…
ನವದೆಹಲಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಎಫ್‌ಡಿಎ ನೇಮಕಾತಿಯಲ್ಲಿ ಅಕ್ರಮ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಕರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಪ್ರಕರಣಕ್ಕೆ ಸಂಧಿಸಿದಂತೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾಮೀನು ನಿರಾಕರಿಸಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಆರ್‌ಡಿ ಪಾಟೀಲ್ ಸುಪ್ರೀಂ ಕೋರ್ಟ್ ಮೊರೆಹೋಗಿದ್ದ. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಿಆರ್ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ನಿರಾಕರಿಸಿ ಆದೇಶ ಪ್ರಕಟಿಸಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ FDA ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಏನಿದು ಪ್ರಕರಣ? ಕರ್ನಾಟಕದಾದ್ಯಂತ 2023 ರ ಅಕ್ಟೋಬರ್ 28 ರಂದು ಕೆಪಿಎಸ್ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆದಿತ್ತು. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಬ್ಲೂಟೂತ್…
ಬೆಂಗಳೂರು : ಕಳೆದ ಡಿಸೆಂಬರ್ 19 ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ದೂರು ನೀಡಿದಂತ ಮೂವರು ಎಂಎಲ್‌ಸಿಗಳಿಗೂ ಕೂಡ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಹೌದು ಸುವರ್ಣ ಸೌಧದಲ್ಲಿ ಎಂಎಲ್ಸಿ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪದ ಹಿನ್ನೆಲೆಯಲ್ಲಿ ದೂರುದಾರರಿಗೂ ಕೂಡ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಎಸ್ ವಿ ಸಂಕನೂರು, ಡಿ ಎಸ್ ಅರುಣ್ ಹಾಗೂ ಕಿಶೋರ್ ಕುಮಾರ್ ಪುತ್ತೂರು ಅವರಿಗೂ ಕೂಡ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇಂದು ಸಂಜೆ 4:30ಕ್ಕೆ ವಿಚಾರಣೆಗೆ ಹಾಜರಾಗುವ ಸೂಚನೆ ನೀಡಿದ್ದು, ಮೂವರು ಎಂಎಲ್ಸಿ ಗಳು ಸಹ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ಹಿರಿಯ IPS ಅಧಿಕಾರಿ ಚಂದ್ರಶೇಖರ್ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಪ್ರಕರಣಕ್ಕೆ ಸಂಭಂದಿಸಿದಂತೆ ಎಚ್ ಡಿ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ಬಳಿಕ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಜನೆವರಿ 30 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೋರಡಿಸಿತು. ಹೌದು ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಧ್ಯಂತರ ರಿಲೀಫ್ ವಿಸ್ತರಿಸಿದ ಹೈಕೋರ್ಟ್, ಜನವರಿ 30 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಎಚ್ ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ಅರ್ಜಿ ಸಲ್ಲಿಸಿದ್ದರು. ಎಫ್ಐಆರ್ ಆಧರಿಸಿ ಹಳೆಯ ನಿರೀಕ್ಷಣಾ ಜಾಮೀನು, ರದ್ದು ಪಡಿಸುವಂತಿಲ್ಲ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ಇದೀಗ ನಿರ್ಬಂಧ ವಿಸ್ತರಣೆ ಮಾಡಿದೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂಬ ಎಸ್ ಪಿ ಪಿ ಹೇಳಿಕೆಯನ್ನು…
BREAKING : ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ : ಜಾಮೀನು ರದ್ದತಿಗೆ ಸುಪ್ರೀಂಕೋರ್ಟಿಗೆ 7 ಪ್ರಮುಖ ಕಾರಣ ನೀಡಿದ ಸರ್ಕಾರ
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ಧತಿ ಮಾಡುವಂತೆ ಮೇಲ್ಮನವಿ ಸಲ್ಲಿಸಿತ್ತು. ರಾಜ್ಯ ಸರ್ಕಾರ ನಟ ದರ್ಶನ್ ಅವರಿಗೆ ಜಾಮೀನು ರದ್ದತಿ ಮಾಡುವಂತೆ 7 ಪ್ರಮುಖ ಕಾರಣಗಳನ್ನು ನೀಡಿದೆ. ಹೌದು ಜಾಮೀನು ರದ್ದತಿಗೆ ರಾಜ್ಯ ಸರ್ಕಾರ 7 ಕಾರಣ ನೀಡಿದೆ. ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಮೇಲ್ಮನವಿಯಲ್ಲಿ ಉಲ್ಲೇಖಿಸಿದೆ. ಪವಿತ್ರಗೌಡ, ನಟ ದರ್ಶನ್, ಜಗದೀಶ್, ಅನು ಕುಮಾರ್, ನಾಗರಾಜ್, ಲಕ್ಷ್ಮಣ್ ಹಾಗೂ ಪ್ರದೋಶ್ ಜಾಮೀನು ರದ್ಧತಿಗೆ ಮನವಿ ಸಲ್ಲಿಸಲಾಗಿದೆ. ರಾಜ್ಯದ ಒಳಗೆ ಮತ್ತು ಹೊರಗೆ ನಟ ದರ್ಶನ್ ಅವರು ಅಭಿಮಾನಿಗಳನ್ನು ಅಪಾರ ಹೊಂದಿದ್ದಾರೆ. ಸೆಲೆಬ್ರಿಟಿ ಆಗಿರುವುದರಿಂದ ಸಾಕ್ಷಿ ತಿರುಚುವ ಸಾಧ್ಯತೆ ಇದೆ. ಹೈಕೋರ್ಟ್ ಇದನ್ನು ಪರಿಗಣಿಸಿಲ್ಲ ಆರೋಪ ಪಟ್ಟಿಯಲ್ಲಿ 262 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ. ವಿಚಾರಣೆ ವಿಳಂಬ ಆಗಿದ್ದಕ್ಕೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ಹೈಕೋರ್ಟ್ ಹೇಳಿದೆ. ಹೈಕೋರ್ಟ್ ನ ಈ ಅಭಿಪ್ರಾಯವೂ ಕೂಡ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಜೆಂಡ ಏನಿದೆ ಎಂಬುದು ಗೊತ್ತಿಲ್ಲ. ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಎಸ್‌ಸಿ, ಎಸ್‌ಟಿ ಸಮಾವೇಶದ ಕುರಿತು ಕರೆದಿದ್ದ ಸಭೆ ಮುಂದೂಡಲು ಅನೇಕ ಕಾರಣಗಳಿವೆ. ಎಐಸಿಸಿ ವರಿಷ್ಟರು ಭಾಗವಹಿಸುವುದಾಗಿ ತಿಳಿಸಿದ್ದರಿಂದ ಮುಂದೂಡಲಾಗಿದೆ. ಎಐಸಿಸಿ ನಮ್ಮ ಮೇಲೆ ನಂಬಿಕೆ ಇಟ್ಟಿಲ್ಲ ಎಂಬ ಪ್ರಶ್ನೆ ಈಗ ಬರುವುದಿಲ್ಲ. ನೀವೆ ಬೆಳಗ್ಗೆ ಒಂದು, ಸಂಜೆ ಒಂದು ನಂಬಿಕೆಯ ಪ್ರಶ್ನೆ ಹುಟ್ಟು ಹಾಕುತ್ತಿದ್ದೀರಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಕಾರ್ಯದರ್ಶಿಗಳಾದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರು ನನ್ನ ಹತ್ತಿರ ಮಾತನಾಡಿದ್ದಾರೆ. ಗೌಪ್ಯ ಸಭೆ ಏನು ಇಲ್ಲ. ನಮ್ಮ ಸಮಸ್ಯೆಗಳನ್ನು ಚರ್ಚಿಸಬೇಕು ಅಂತ ಸಭೆ ಸೇರುತ್ತಿದ್ದೇವೆ. ಅದಕ್ಕೆ ನೀವೆ ಬನ್ನಿ ಎಂದು ಕರೆದಿದ್ದೇನೆ. ಅವರು ದಿನಾಂಕ ಸೂಚಿಸುವುದಾಗಿ ತಿಳಿಸಿದ್ದಾರೆ. ನಂತರ ಸಭೆ ಮಾಡುತ್ತೇವೆ ಎಂದರು. ಸ್ಪಷ್ಟವಾದ ಸಭೆಯ ಬಗ್ಗೆ ಕೆಲವರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಮಾಧ್ಯಮದವರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,…
ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿಗೆ ಸಿಐಡಿ ನೋಟಿಸ್ ನೀಡಿದೆ. ನೋಟಿಸ್ ಗುರುತು ಪ್ರತಿಕ್ರಿಯೆಸಿದ ಅವರು ಸಿಐಡಿನ ನನಗೆ ನೋಟಿಸ್ ಬಂದಿದ್ದು ವಿಚಾರಣೆಗೆ ಹಾಜರಾಗಿ ಸತ್ಯ ಏನಿದೆಯೋ ಅದನ್ನು ಹೇಳುತ್ತೇನೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಐಡಿ ಇಂದ ನನಗೆ ನೋಟಿಸ್ ಬಂದಿದ್ದು ವಿಚಾರಣೆಗೆ ಹಾಜರಾಗಿ ಸತ್ಯ ಏನು ಇದೆಯೋ ಅದನ್ನು ಹೇಳುತ್ತೇನೆ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಹೇಳಿಕೆ ನೀಡಿದರು ಸಭಾಪತಿಗಳು ತನಿಖೆ ನಡೆಸಬೇಕು ಎಂದು ಪೊಲೀಸರಿಗೆ ಸೂಚಿಸಿದ್ದರು ಅರುಣ್ ಕಿಶೋರ್ ಕುಮಾರ್ ಕೊಟ್ಟಿದ್ದ ದೂರು ಸಂಬಂಧ ನೋಟಿಸ್ ನೀಡಲಾಗಿತ್ತು. ನಾನು ಊರಿನಲ್ಲಿ ಇಲ್ಲದೆ ಇದ್ದಾಗ ಮೊದಲ ನೋಟೀಸ್ ಬಂದಿತ್ತು ಎಂದರು. ಇನ್ನು ನಿನ್ನೆ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ 6 ಜನ ನಕ್ಸಲರು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗತಿಯಾದ…
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.ಕಾರಣ ಏನೆಂದರೆ ಅತ್ಯಾಚಾರ ಆರೋಪ ನಿಗದಿ ಪಡಿಸಲು ಟ್ರಯಲ್ ನಡೆಸ ಬೇಕಾಗಿತ್ತು. ಆದರೆ ಇದೀಗ ಹೈಕೋರ್ಟ್ ಆರೋಪ ನಿಗದಿ ಮಾಡದಂತೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ ಹೌದು ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಒಂದು ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ನಿಗದಿ ಮಾಡದಂತೆ ತಡೆ ನೀಡಿ ಆದೇಶ ಹೊರಡಿಸಿದೆ.ಇದೇ ಜನವರಿ 13 ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಆರೋಪ ನಿಗದಿ ಪ್ರಕ್ರಿಯೆ ಆರಂಭಿಸಲು ದಿನಾಂಕ ನಿಗದಿಯಾಗಿತ್ತು. ಆದರೆ, ಇದೀಗ ಹೈಕೋರ್ಟ್‌ನೊಂದ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಜನವರಿ 13ರಂದು ಆರಂಭವಾಗಬೇಕಿದ್ದ ಆರೋಪ ನಿಗದಿ ಪ್ರಕ್ರಿಯೆ ಸದ್ಯ ತಾತ್ಕಾಲಿಕ…














