Author: kannadanewsnow05

ಬೆಂಗಳೂರು : ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಮಳೆ ಆರಂಭವಾಗುತ್ತದೆ. ಆದರೆ ಇದೀಗ ಮೇ 24ರವರೆಗೆ ಕೇರಳ ಕರ್ನಾಟಕ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಆಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡದೆ. ಹೌದು ಮುಂಚಿತವಾಗಿ ಮೇ 24ರವರೆಗೆ ಕೇರಳ, ತಮಿಳುನಾಡು, ಕರ್ನಾಟಕ, ಪುದುಚೇರಿ, ಕಾರೈಕಲ್, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ನೈಋತ್ಯ ಮಾನ್ಸೂನ್ (Monsoon 2025) ಮುಂದಿನ 4ರಿಂದ 5 ದಿನಗಳಲ್ಲಿ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಪ್ರತಿ ವರ್ಷ ಜೂನ್ ತಿಂಗಳ ಆರಂಭದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗುತ್ತಿತ್ತು. ಆದರೆ, ಅದಕ್ಕೂ 2-3 ದಿನಗಳು ಮುಂಚಿತವಾಗಿಯೇ ಮಾನ್ಸೂನ್ ಆಗಮನವಾಗುವ ಸಾಧ್ಯತೆಯಿದೆ. ಮುಂಚಿತವಾಗಿ ಮಳೆಯಾಗುವುದರಿಂದ ಬಿಸಿಲಿನ ಬೇಗೆ ಕಡಿಮೆಯಾಗಲಿದೆ.

Read More

ಬೆಂಗಳೂರು : ಈಗಾಗಲೇ ಸಿಂಗಾಪುರ್ ಮತ್ತು ಹಾಂಕಾಂಗ್ ನಲ್ಲಿ ಕೊರೋನಾ ಹೊಸ ತಳಿ ಸೋಂಕು ಹೆಚ್ಚಾಗಿದ್ದು, ಈ ಒಂದು ಕೊರೋನಾ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕದಲ್ಲಿ ಇದೀಗ 8 ಪ್ರಕರಣಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ. ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ 69, ಮಹಾರಾಷ್ಟ್ರ 44, ತಮಿಳುನಾಡು 34, ಗುಜರಾತ್, ದೆಹಲಿ, ಹರ್ಯಾಣ, ರಾಜಸ್ಥಾನ, ಸಿಕ್ಕಿಂನಲ್ಲೂ ಪಾಸಿಟಿವ್ ಕೇಸ್‌ಗಳಿವೆ. ಸದ್ಯ ಯಾವುದೇ ರೀತಿಯ ಗಂಭೀರವಾದ ಗುಣಲಕ್ಷಣಗಳು ಕಾಣಿಸಿಕೊಂಡಿಲ್ಲ. ಹೀಗಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ನಿರ್ಲಕ್ಷ್ಯ ಬೇಡ ಎಂದು ಆರೋಗ್ಯ ಇಲಾಖೆ ತಿಳಿಸಿದ್ದು, ಎಲ್ಲ ಕಡೆ ಸಂದೇಶ ರವಾನಿಸಿದ್ದು, ಕಟ್ಟೆಚ್ಚರ ವಹಿಸಿದೆ. ಈಗಾಗಲೇ ಸಿಂಗಾಪುರ ಮತ್ತು ಹಾಂಗ್‌ಕಾಂಗ್‌ನಲ್ಲಿ ಅಲರ್ಟ್ ಘೋಷಿಸಲಾಗಿದೆ. ಸಿಂಗಾಪುರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಮೇ 03 ರಿಂದ ಮೆ…

Read More

ಉತ್ತರಕನ್ನಡ : ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ಅವಧಿಗೂ ಮುನ್ನವೇ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದು ಈ ನೆಲೆಯಲ್ಲಿ ನಾಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋಷಣೆ ಮಾಡಿದೆ ಹಾಗಾಗಿ ನಾಳೆ ಉತ್ತರಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಹೌದು ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ರಜೆ ಘೋಷಿಸಿ ಉತ್ತರ ಕನ್ನಡದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆ ಮತ್ತು ನಾಡಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Read More

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ನಿನ್ನೆ ಬೆಂಗಳೂರಿನಲ್ಲಿ ಮಹಾಮಳೆಗೆ ಒಂದೇ ದಿನ ಮೂವರು ಬಲಿಯಾಗಿದ್ದಾರೆ. ವೈಟ್ ಫೀಲ್ಡ್ ನಲ್ಲಿ ಗೋಡೆ ಕುಸಿದು ಓರ್ವ ಮಹಿಳೆ ಸಾವನ್ನಪ್ಪಿದ್ದರೆ, ಬಿಟಿಎಂ ಲೇಔಟ್ ನಲ್ಲಿ ಅಪಾರ್ಟ್ಮೆಂಟ್ ಬೇಸ್ಮೆಂಟ್ ನಲ್ಲಿದ್ದ ನೀರು ಹೊರ ಹಾಕುವಾಗ ವಿದ್ಯುತ್ ಶಾಕ್ ನಿಂದ ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನಪ್ಪಿದ್ದಾರೆ. ಹಾಗಾಗಿ ಇಂದು ಬಿಟಿಎಂ ಲೇಔಟ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿದ್ದಾರೆ. ಮಧುವನ ಅಪಾರ್ಟ್ಮೆಂಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾರ್ಟ್ಮೆಂಟ್ನ ಬೇಸ್ಮೆಂಟ್ ನಲ್ಲಿ ಮಳೆ ನೀರು ಸಂಗ್ರಹವಾಗಿತ್ತು. ನೀರು ಹೊರ ಹಾಕಲು ಯತ್ನಿಸುವಾಗ ವಿದ್ಯುತ್ ಶಾಕ್ ನಿಂದ ನಿನ್ನೆ ಇಬ್ಬರು ಸಾವನಪ್ಪಿದ್ದರು. ಮನಮೋಹನ್ ಕಾಮತ್ ಹಾಗೂ 9 ವರ್ಷದ ಬಾಲಕ ದಿನೇಶ್ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದ್ದರು. ಮೃತಪಟ್ಟ ಕುಟುಂಬಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಸಾಂತ್ವನ ಹೇಳಿದ್ದಾರೆ. ಮನಮೋಹನ್ ಕಾಮತ್ ಕುಟುಂಬಕ್ಕೆ 5 ಲಕ್ಷ ರೂಪಾಯಿ…

Read More

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಯಾಗಿದ್ದರಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿತ್ತು. ಅಲ್ಲದೇ ಬಿಟಿಎಂ ಲೇಔಟ್ ನಲ್ಲಿ , ಅಪಾರ್ಟ್ಮೆಂಟಿನ ಬೇಸ್ಮೆಂಟ್ ನಲ್ಲಿದ್ದ ನೀರನ್ನು ಮೋಟಾರ್ ಮೂಲಕ ಹೊರ ಹಾಕುವ ವೇಳೆ ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದರು. ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರಿನ ಹಲವಡೆ ಕೆರೆಯ ಅಕ್ಕಪಕ್ಕದಲ್ಲಿ ಮನೆ ಕಟ್ಟಿದ್ದಾರೆ.ಕೆರೆಯ ಅಕ್ಕ ಪಕ್ಕದಲ್ಲಿ ಮನೆ ನಿರ್ಮಿಸಿರುವುದರಿಂದ ಸಮಸ್ಯೆಯಾಗುತ್ತಿದೆ. ಮುಂದೆ ಇಂತಹ ಘಟನೆಗಳು ಆಗದಂತೆ ಹೊಸ ಕಾನೂನು ತರುತ್ತೇವೆ. ಇನ್ನು ಮುಂದೆ ಮನೆ ಕಟ್ಟಬೇಕಾದರೆ ಬೇಸ್ಮೆಂಟ್ ಮಾಡಬಾರದು ಎಂದರು. ಇನ್ಮುಂದೆ ಗ್ರೌಂಡ್ ಫ್ಲೋರ್ ನಲ್ಲಿ ಪಾರ್ಕಿಂಗ್ ಇರಬೇಕು. ಬೇಸ್ಮೆಂಟ್ ಬಗ್ಗೆ ಹೊಸ ಕಾನೂನು ತರುತ್ತೇವೆ. ಬೇಸ್ಮೆಂಟ್ ನಲ್ಲಿ ಪಾರ್ಕಿಂಗ್ ಮಾಡುವಂತಿಲ್ಲ ಕಟ್ಟುವಂತಿಲ್ಲ. ಇದರಿಂದ ಸಾಕಷ್ಟು ಅನಾಹುತವಾಗುತ್ತಿದೆ. ಬೇಸ್ಮೆಂಟ್ ಬಗ್ಗೆ ಪ್ರತ್ಯೇಕ ಕಾನೂನು ತರುತ್ತೇವೆ ಎಂದು ಉಪಮುಖ್ಯಮಂತ್ರಿಯ ಡಿಕೆ…

Read More

ಬೆಂಗಳೂರು : ಇತ್ತೀಚಿಗೆ ವೇದಿಕೆಯೊಂದರಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಕೋಮು ದ್ವೇಷದ ಭಾಷಣ ಮಾಡಿದ್ದರು. ಬಳಿಕ ಅವರ ವಿರುದ್ಧ FIR ಕೂಡ ದಾಖಲಾಗಿತ್ತು. ಇದೀಗ ಈ ಕೇಸ್ ಆರೋಪ ಸಂಬಂಧ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಹರೀಶ್‌ ಪೂಂಜಾ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂಬುದಾಗಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ತಿಳಿಸಿದ ಹಿನ್ನೆಲೆಯಲ್ಲಿ, ಅರ್ಜಿ ತಿದ್ದುಪಡಿ ಮಾಡುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ಅವಕಾಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಮತ್ತು ಆ ನಂತರ ಕಾನೂನು ಪ್ರಕ್ರಿಯೆ ರದ್ದತಿ ಕೋರಿ ಪೂಂಜಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌. ರಾಚಯ್ಯ ರಜಾಕಾಲದ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರದ ಪರ ವಕೀಲರು, ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಇಂದು ಆರೋಪ ಪಟ್ಟಿಯನ್ನು ಸಕ್ಷಮ ನ್ಯಾಯಾಲಯಕ್ಕೆ ತನಿಖಾಧಿಕಾರಿ ಸಲ್ಲಿಸಿದ್ದಾರೆ ಎಂಬ ಮಾಹಿತಿಯನ್ನು ಒದಗಿಸಲಾಗಿದೆ.…

Read More

ಬೆಂಗಳೂರು : ಜನೌಷಧಿ ಕೇಂದ್ರಗಳ ಸ್ಥಾಪನೆ ವಿಚಾರದಲ್ಲಿ ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಯ ವ್ಯವಹಾರಕ್ಕೆ ಅಡ್ಡಿಯಾಗಲಿದೆ ಎಂಬ ಕಾರಣಕ್ಕಾಗಿ ಮಧ್ಯಪ್ರವೇಶಿಸಲಾಗದು ಎಂದು ಹೈಕೋರ್ಟ್​ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶೀಲಾ ಭಟ್ ಎಂಬುವರಿಗೆ ಜನೌಷಧಿ ಕೇಂದ್ರ ತೆರೆಯಲು ಅನುಮತಿಸಿರುವುದನ್ನು ಪ್ರಶ್ನಿಸಿ, ಅದೇ ಜಿಲ್ಲೆಯ ಪುತ್ತೂರು ತಾಲೂಕಿನ ಸವಿನಯ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅರ್ಜಿದಾರರಾಗಿರುವ ಸವಿನಯ ಎಂಬುವರು ಶೀಲಾ ಭಟ್ ಎಂಬುವರಿಗೆ ಜನೌಷಧ ಕೇಂದ್ರ ತೆರೆಯಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದು, ಆದರೆ, ಸವಿನಯ ಅವರಿಗೆ ಜನೌಷಧಿ ಕೇಂದ್ರ ಸ್ಥಾಪಿಸಲು ತಾತ್ವಿಕ ಒಪ್ಪಿಗೆ ಮಾತ್ರ ನೀಡಲಾಗಿದೆ. ಹೀಗಾಗಿ ತನಗೆ ಮಂಜೂರಾಗಿರುವ ಕೇಂದ್ರಕ್ಕೂ ಶೀಲಾ ಭಟ್​​ಗೆ ಮಂಜೂರಾಗಿರುವ ಕೇಂದ್ರದ ನಡುವಿನ ಅಂತರ ಒಂದು ಕಿಲೋ ಮೀಟರ್ ಒಳಗಿದೆ ಎಂಬುದಾಗಿ ವಾದಿಸುವ ಹಕ್ಕು ಹೊಂದಿಲ್ಲ. ಹೀಗಾಗಿ, ಶೀಲಾ ಭಟ್​ಗೆ ಜನೌಷಧಿ ಕೇಂದ್ರ ತೆರೆಯಲು ಅನುಮತಿಸಿರುವುದರಲ್ಲಿ ಯಾವುದೇ ದೋಷ ಹುಡುಕಲಾಗದು ಎಂದು ಪೀಠ…

Read More

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ಶಾಕ್ ಎದುರಾಗಿದ್ದು, ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೆಎಸ್ ದಾಖಲಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಕ್ಷಮ ಪ್ರಾಧಿಕಾರದಿಂದ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಹೌದು ಮುನಿರತ್ನ ವಿರುದ್ಧ ತನಿಖೆಗೆ ಇದೀಗ ಗ್ರೀನ್ ಸಿಗ್ನಲ್ ದೊರಕಿದೆ. ಮುನಿರತ್ನ ವಿರುದ್ಧದ ತನಿಖೆಗೆ ಪ್ರಾಧಿಕಾರ ಅನುಮತಿ ನೀಡಿದೆ. ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿದೆ. 36 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 20 ಲಕ್ಷ ಲಂಚ ಸ್ವೀಕಾರ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1998ರ ಅಡಿ ಪ್ರಕರಣ ದಾಖಲಾಗಿತ್ತು. ಪ್ರಾಥಮಿಕ ಹಂತದ ತನಿಖೆಯಲ್ಲಿ ಆರೋಪ ಸಹ ಸಾಬೀತು ಆಗಿತ್ತು. ಮುನಿರತ್ನ ಅಪರಾಧ ಎಸಗಿರುವುದು ಸಾಬೀತಾಗಿತ್ತು. ಸಿಐಡಿ ಡಿಜಿಪಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿದ್ದರು. ಸಿಐಡಿ ಪೊಲೀಸ್ ಮಹಾನಿರ್ದೇಶಕರ ಕೋರಿಕೆಯ ಮೇರೆಗೆ ಇದೀಗ…

Read More

ಧಾರವಾಡ : ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಬೆಂಗಳೂರು ಮಹಾನಗರ ಸೇರದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಹಲವಾರು ಅವಾಂತರಗಳು ಸೃಷ್ಟಿಯಾಗಿವೆ. ಇದೀಗ ಧಾರವಾಡದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ್ದಾನೆ. ಹಿರೇ ಹರಕುಣಿ ಗ್ರಾಮದ ಮೈಲಾರಪ್ಪ ಕೊಣಕಲ್ (20) ಮೃತ ಯುವಕ ಎಂದು ತಿಳಿದುಬಂದಿದೆ. ಜಾನುವಾರು ಮೈ ತೊಳೆಯಲು ತೆರಳಿದ್ದಾಗ ಸಿಡಿಲು ಬಡಿದಿದೆ. ಈ ವೇಳೆ ಮೈಲಾರಪ್ಪ ಸ್ಥಳದಲ್ಲಿ ಸಾವಣಪ್ಪಿದ್ದಾನೆ.ಘಟನೆ ಕುರಿತಂತೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ 12 ಕೋಟಿ ಮೌಲ್ಯದ 14 ಕೆಜಿಗೂ ಅಧಿಕ ಚಿನ್ನ ಸಾಗಾಟ ಮಾಡಿದ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟಿ ರನ್ಯಾ ರಾವ್ ಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಕೋರ್ಟ್ ಇದೀಗ ನಟಿ ರನ್ಯಾ ರಾವ್ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೌದು ದುಬೈ ನಿಂದ ರನ್ಯಾ ರಾವ್ 12 ಕೋಟಿ ಮೌಲ್ಯದ ಸುಮಾರು 14 ಕೆಜಿ ಚಿನ್ನವನ್ನು ಅಕ್ರಮವಾಗಿ ತಂದಿದ್ದರು ಈ ವೇಳೆ ಖಚಿತ ಮಾಹಿತಿಯ ಮೇರೆಗೆ ಡಿ ಆರ್ ಐ ಅಧಿಕಾರಿಗಳು ಅವರನ್ನು ಅರೆಸ್ಟ್ ಮಾಡಿದ್ದರು. ಇದೀಗ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ನಟಿ ರನ್ಯಾರಾವ್ ಸೇರಿದಂತೆ ಮೂವರು ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಜಾಮೀನು ಸಿಕ್ಕರೂ ಬಿಡುಗಡೆ ಇಲ್ಲ! ಹೌದು ನಟಿ ರಮ್ಯಾಗೆ ಕೋರ್ಟ್ ಇಂದ ಜಾಮೀನು ಸಿಕ್ಕರು ಸದ್ಯಕ್ಕೆ ಬಿಡುಗಡೆ ಇಲ್ಲ. ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಜಾಮೀನು ಸಿಕ್ಕರು ನಟಿ…

Read More