Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ಒಂದು ಕಡೆ ಶಕ್ತಿ ಯೋಜನೆಯಿಂದ ಸಾರಿಗೆ ನೌಕರರಿಗೆ ವೇತನ ಸಿಗುತ್ತಿಲ್ಲ ಎಂದು ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ ಎಂದು ಹೇಳುತ್ತಿದ್ದರೆ, ಇನ್ನೊಂದು ಕಡೆ ಇದೇ ಒಂದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರಿಗೆ ಉಪಯೋಗವಾಗಿದೆ. ಇದೀಗ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಮಹಿಳೆಯೊಬ್ಬರು 5 ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ ಹಣದಿಂದ ಇಡೀ ಗ್ರಾಮಕ್ಕೆ ಹೋಳಿಗೆ ಊಟ ಆಗಿಸಿರುವ ಘಟನೆ ವರದಿಯಾಗಿದೆ. ಹೌದು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾಂಬಾ ಸಮೀಪದ ಗೂಗಿಹಾಳ ಗ್ರಾಮದ ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಾಬೂಬಿ ಅಬ್ಬಾಸಲಿ ಚೌಧರಿ ಅವರು ಗೃಹಲಕ್ಷ್ಮಿ ಹಣ ಉಳಿಸಿ, ಸಿಂದಗಿ ಶಾಸಕ ಅಶೋಕ ಮನಗೂಳಿ ಮತ್ತು ಸಮಸ್ತ ಗ್ರಾಮಸ್ಥರಿಗೆ ಸೋಮವಾರ ಹೋಳಿಗೆ ಊಟ ಮಾಡಿಸಿದರು. ಇದೇ ಸಂದರ್ಭದಲ್ಲಿ ಶಾಸಕ ಅಶೋಕ್ ಮನಗೂಳಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿತು ಇದನ್ನು ಬಿಜೆಪಿಯವರು…
BREAKING : ಕಲಬುರ್ಗಿಯಲ್ಲಿ ಇನ್ಶೂರೆನ್ಸ್ ಹಣಕ್ಕಾಗಿ ಹೆತ್ತ ತಂದೆಯನ್ನೇ ಕೊಂದ ಪಾಪಿ ಮಗ : ಪುತ್ರ ಸೇರಿ ನಾಲ್ವರ ಬಂಧನ!
ಕಲಬುರ್ಗಿ : ತಾನು ಮಾಡಿದಂತಹ ಸಾಲವನ್ನು ತೀರಿಸಲಾಗದೆ ತಂದೆಯ ಹೆಸರಲ್ಲಿ ಇನ್ಶೂರೆನ್ಸ್ ಮಾಡಿಸಿ, ಬಳಿಕ ತಂದೆಯನ್ನು ಹತ್ಯೆಗೈದು ಇನ್ಸೂರೆನ್ಸ್ ಹಣದಿಂದ ಸಾಲ ತೀರಿಸಲು ಪುತ್ರನೊಬ್ಬ ಟ್ರಾಕ್ಟರ್ ನಿಂದ ಡಿಕ್ಕಿ ಹೊಡೆಸಿ ಕೊಲೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಬೆಣ್ಣೂರ್ (ಬಿ) ಗ್ರಾಮದಲ್ಲಿ ನಡೆದಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ತಾನು ಮಾಡಿದ್ದ ಸಾಲ ತೀರಿಸಲು ಐಡಿಯಾ ಮಾಡಿದ ಪುತ್ರನೊಬ್ಬ ತಂದೆ ಹೆಸರಿನಲ್ಲಿ ಇನ್ಸೂರೆನ್ಸ್ ಮಾಡಿಸಿ ಪುತ್ರನೇ ಹತ್ಯೆಗೈದಿರುವ ಘಟನೆ ನಡೆದಿದೆ. ಆಕ್ಸಿಡೆಂಟ್ ನಲ್ಲಿ ತಂದೆಯನ್ನು ಸಾಯಿಸಿದ ಪುತ್ರ. ಮೃತರನ್ನು ಕಾಳಿಂಗರಾವ್ ಎಂದು ಹೇಳಲಾಗುತ್ತಿದೆ. ಜುಲೈ 8 ಕ್ಕೆ ಕಾಳಿಂಗರಾವ್ ಸ್ಕೂಟಿಯಲ್ಲಿ ಬರುವಾಗ ಅಪಘಾತವಾಗಿತ್ತು. ಕಲ್ಬುರ್ಗಿ ಚಿತ್ತಾಪುರ ಬೆಣ್ಣೂರ್ (ಬಿ) ಕ್ರಾಸ್ ಬಳಿ ಒಂದು ಅಪಘಾತ ನಡೆದಿತ್ತು. ಕಳೆದ ವರ್ಷ ಜುಲೈ 8ರಂದು ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಬೆಣ್ಣೂರು (ಬಿ) ಗ್ರಾಮದಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಕಾಳಿಂಗರಾವ್ ಅವರಿಗೆ ಅವರ…
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾಲಿಟಿಕ್ಸ್ ಹೆಚ್ಚಾಗಿದ್ದು ಕಳೆದ ಕೆಲವು ದಿನಗಳ ಹಿಂದೆ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು. ಡಿಸಿಎಂ ಡಿಕೆ ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿ ಇರುವಾಗಲೇ ಈ ಒಂದು ಔತಣಕೂಟ ಆಯೋಜನೆ ಮಾಡಿದ್ದು, ತೀವ್ರ ಕುತೂಹಲ ಮೂಡಿಸಿತು. ಇದರ ಬೆನ್ನಲ್ಲೇ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಔತಣಕೂಟ ಆಯೋಜನೆ ಮಾಡಿದ್ದಾರೆ. ಹೌದು ನಾಳೆ ರಾತ್ರಿ ಖಾಸಗಿ ಹೋಟೆಲ್ ನಲ್ಲಿ ಜಿ ಪರಮೇಶ್ವರ್ ಅವರ ವತಿಯಿಂದ ಔತಣಕೂಟ ಏರ್ಪಡಿಸಲಾಗಿದೆ.ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಈ ಒಂದು ಔತಣಕೂಟ ನಡೆಯಲಿದೆ. ಸಚಿವರು ಹಾಗೂ ಶಾಸಕರಿಗೆ ಜಿ ಪರಮೇಶ್ವರ್ ಅವರು ಆಹ್ವಾನ ನೀಡಿರುವ ಮಾಹಿತಿ ತಿಳಿದು ಬಂದಿದೆ. ವಿದೇಶ ಪ್ರವಾಸದಿಂದ ವಾಪಸ್ ಆದ ಬಳಿಕ ಜಿ. ಪರಮೇಶ್ವರ್ ಡಿನ್ನರ್ ಆಯೋಜನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಅಹಿಂದ ಸಚಿವರು ಹಾಗೂ ಎಲ್ಲಾ ಶಾಸಕರು ಭಾಗಿಯಾಗುವ ಸಾಧ್ಯತೆ…
ಗುಜರಾತ್ : ಕಳೆದ ಕೆಲವು ದಿನಗಳ ಹಿಂದೆ ರಾಜಸ್ಥಾನದಲ್ಲಿ 150 ಅಡಿ ಬೋರ್ವೆಲ್ ಗೆ ಬಿದ್ದಂತಹ ಬಾಲಕಿಯನ್ನು ಜೀವಂತವಾಗಿ ರಕ್ಷಿಸಲಾಗಿತ್ತು.ರಕ್ಷಣೆ ಮಾಡಿದಾಗ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಳು. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆ ಒಂದು ಬಾಲಕಿ ಸಾವನ್ನಪ್ಪಿದ್ದಳು. ಇದೀಗ ಅಂತದ್ದೇ ಘಟನೆ ಗುಜರಾತ್ ನಲ್ಲಿ ನಡೆದಿದ್ದು ಸುಮಾರು 540 ಕ್ಕೂ ಹೆಚ್ಚು ಅಡಿ ಆಳವಿರುವ ಬೋರ್ವೆಲ್ ಗೆ 18 ವರ್ಷದ ಯುವತಿ ಬಿದ್ದಿರುವ ಘಟನೆ ಗುಜರಾತ್ನ ಕಛ್ ಜಿಲ್ಲೆಯಲ್ಲಿ ನಡೆದಿದೆ. ಹೌದು ಈ ಘಟನೆಯು ಗುಜರಾತ್ನ ಕಛ್ ಜಿಲ್ಲೆಯ ಭುಜ್ ತಾಲೂಕಿನ ಕಂಡೆರೈ ಗ್ರಾಮದಲ್ಲಿ ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ.18 ವರ್ಷದ ಯುವತಿಯೊಬ್ಬಳು 540 ಅಡಿ ಆಳದ ಬೋರ್ವೆಲ್ಗೆ ಬಿದ್ದಿರುವ ಘಟನೆ ನಡೆದಿದೆ. 540 ಅಡಿ ಆಳದ ಕೊಳವೆಬಾವಿಯಲ್ಲಿ ಬಾಲಕಿ 490 ಅಡಿ ಆಳದಲ್ಲಿ ಸಿಲುಕಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಆಮ್ಲಜನಕ ಪೂರೈಸಲಾಗುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದು…
ಮೈಸೂರು : ರಾಜ್ಯದಲ್ಲೊಂದು ಅಮಾನವೀಯ ಘಟನೆ ನಡೆದಿದ್ದು, ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ರಾಜೇಗೌಡನ ಹುಂಡಿ ಎಂಬ ಗ್ರಾಮದಲ್ಲಿ ಚರಂಡಿಯಲ್ಲಿ ಯಾರೋ ಪಾಪಿಗಳು ನವಜಾತ ಶಿಶುವನ್ನು ಬಿಸಾಡಿ ಹೋಗಿದ್ದಾರೆ. ಅದೃಷ್ಟವಶಾತ್ ತಕ್ಷಣ ಸ್ಥಳೀಯರು ಶಿಶುವನ್ನು ರಕ್ಷಣೆ ಮಾಡಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಹೌದು ಇಂದು ಮುಂಜಾನೆ ಗ್ರಾಮಸ್ಥರು ತಮ್ಮ ಹೊಲಗಳಿಗೆ ಹೋಗುವ ಸಂದರ್ಭದಲ್ಲಿ ಚರಂಡಿಯಿಂದ ಮಗುವೊಂದು ಅಳುವ ಶಬ್ಧ ಕೇಳಿಸಿದೆ. ಕೂಡಲೇ ಗ್ರಾಮಸ್ಥರು ಸ್ಥಳೀಯ ಆಶಾ ಕಾರ್ಯಕರ್ತರಿಗೆ ಈ ವಿಚಾರ ತಿಳಿಸಿದ್ದಾರೆ. ತಕ್ಷಣ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಥಳಕ್ಕೆ ಬಂದು ಮಗುವನ್ನ ಹೆಚ್. ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್ ಅವರು ಕರ್ನಾಟಕ ಹೈಕೋರ್ಟ್ ನಿಂದ ರೆಗ್ಯುಲರ್ ಬೇಲ್ ಪಡೆದು ಬಿಡುಗಡೆಯಾಗಿದ್ದಾರೆ. ಆದರೆ ರಾಜ್ಯ ಪೊಲೀಸರು ಜಾಮೀನು ರದ್ದು ಕೋರಿ ಇದೀಗ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ದರ್ಶನ್ ಜಾಮೀನು ರದ್ದು ಕೋರಿ ಪೊಲೀಸರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ 7 ಆರೋಪಿಗಳ ಜಾಮೀನು ರದ್ದು ಪಡಿಸುವಂತೆ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಬಹುಷಃ ಮುಂದಿನವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು, ಮಧ್ಯಂತರ ಜಾಮಿನಿನ ಮೇಲೆ ಹೊರಗಡೆ ಇದ್ದರೂ ಬಳಿಕ ಬೆಂಗಳೂರಿನ ಬಿ ಡಿ ಎಸ್ ಆಸ್ಪತ್ರೆಗೆ ದಾಖಲಾಗಿದ್ದರು ಇದೇ ಸಂದರ್ಭದಲ್ಲಿ ಹೈ ಕೋರ್ಟ್ ನಿಂದ ನಟ ದರ್ಶನ್ ಅವರಿಗೆ ರೆಗ್ಯುಲರ್ ನೀಡಿ ಆದೇಶಿಸಿತ್ತು. ಇದರ ಜೊತೆಗೆ ಪ್ರಕರಣದ A1 ಆರೋಪಿ ಪವಿತ್ರ ಗೌಡg ಕೂಡ ರೆಗುಲರ್…
ರಾಯಚೂರು : ಮುಂದಿನ 2028 ರಲ್ಲಿ ಬರುವ ವಿಧಾನಸಭೆ ಚುನಾವಣೆಯಲ್ಲಿ ನಾನೇ ಮುಖ್ಯಮಂತ್ರಿ ಅಭ್ಯರ್ಥಿಯೆಂದು ಹೇಳಿದ್ದೇನೆ. ಆದರೆ ಸದ್ಯಕ್ಕೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದು ಸಿಎಂ ಬದಲಾವಣೆ ವಿಚಾರ ಸದ್ಯಕ್ಕೆ ಇಲ್ಲ ಎಂದು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ನಮ್ಮ ಸರ್ಕಾರ ಬಂದ ಬಳಿಕ ಅಭಿವೃದ್ಧಿ ಕೆಲಸಗಳು ನಡೆದಿವೆ. ರಾಜ್ಯದಲ್ಲಿ ಶೇ.60ರಷ್ಟು ಪರ್ಸೆಂಟೇಸ್ ಸರ್ಕಾರ ಎಂದು ಬಿಜೆಪಿಯವರು ಆರೋಪ ಮಾಡುತ್ತಾರೆ. ಬರೀ ಆರೋಪ ಮಾಡುವುದಲ್ಲ. ಅದನ್ನು ಸಾಬೀತು ಮಾಡಬೇಕು. ಸುಮ್ಮನೇ ಹೇಳುವುದು ಆಗುವುದಿಲ್ಲ ಎಂದರು. ಪತ್ರದಲ್ಲಿ ಪ್ರಿಯಾಂಕ ಖರ್ಗೆ ಆಪ್ತನ ಹೆಸರಿದೆ. ಈಶ್ವರಪ್ಪನದ್ದು ನೇರವಾಗಿ ಪತ್ರದಲ್ಲಿ ಹೆಸರು ಉಲ್ಲೇಖವಾಗಿತ್ತು. ಆಪ್ತರು, ಪಿಎಗಳ ಹೆಸರು ಇದ್ದರೆ ಸಚಿವರು ನೇರವಾಗಿ ಹೊಣೆಗಾರರು ಆಗಲ್ಲ. ತನಿಖೆ ನಡೆಯುತ್ತಿದೆ ನಡೆಯಲಿ ಎಂದರು.
ಪಶ್ಚಿಮ ಬಂಗಾಳ : ಚೀನಾದಲ್ಲಿ ಅಬ್ಬರಿಸುತ್ತಿರುವ ಮಾರಕ ಎಚ್ ಎಂ ಪಿ ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ.ಇಂದು ಬೆಂಗಳೂರಿನ 8 ವರ್ಷದ ಹಾಗೂ 3 ವರ್ಷದ ಮಗುವಿನಲ್ಲಿ ಈ ಒಂದು ವೈರಸ್ ಪತ್ತೆಯಾಗಿತ್ತು. ಬಳಿಕ ಗುಜರಾತ್ ಈ ಒಂದು ವೈರಸ್ ಪಟ್ಟೆಯಾಗಿದ್ದು, ಇದೀಗ ಕೊಲ್ಕತ್ತಾದಲ್ಲಿ 5 ವರ್ಷದ ಮಗುವಿನಲ್ಲಿ ಈ ಒಂದು ವೈರಸ್ ಪತ್ತೆಯಾಗಿದೆ. ಹೌದು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲೂ ಎಚ್ ಎಂ ಪಿ ವೈರಸ್ ಇದೀಗ ಪತ್ತೆಯಾಗಿದೆ. ಐದು ತಿಂಗಳ ಮಗುವಿನಲ್ಲಿ ಎಚ್ಎಂಪಿ ವೈರಸ್ ಪತ್ತೆಯಾಗಿದೆ. ನವೆಂಬರ್ 12ರಂದು ಐದು ತಿಂಗಳ ಮಗು ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಮಗುವಿನಲ್ಲಿ ಎಚ್ ಎಂ ಪಿ ವೈರಸ್ ಪತ್ತೆಯಾಗಿದೆ. ಇದಕ್ಕೂ ಮುನ್ನ ಗುಜರಾತ್’ನ ಅಹಮದಾಬಾದ್ ನಲ್ಲಿ 2 ತಿಂಗಳ ಮಗುವಿಗೆ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಲ್ಲಿ ಇಬ್ಬರು ಹಸುಗೂಸುಗಳು ಹಾಗೂ ಗುಜರಾತ್ ನಲ್ಲಿ ಓರ್ವ ಹಸುಗೂಸಿಗೆ ಸೋಂಕು ತಗುಲಿರುವುದು ಧೃಡವಾಗಿದೆ.
ದಾವಣಗೆರೆ : ಮನೆಯಲ್ಲಿ ನೀರು ತುಂಬುವ ವೇಳೆ ತಾಯಿ ಮೋಟರ್ ಆನ್ ಮಾಡಿದ್ದಾಳೆ, ಈ ವೇಳೆ ವಿದ್ಯುತ್ ಶಾಕ್ ತಗುಲಿ ಒಂದುವರೆ ವರ್ಷದ ಮಗು ದಾರುಣವಾಗಿ ಸಾವನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ನಡೆದಿದೆ ಹೌದು ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ಒಂದುವರೆ ವರ್ಷದ ಮಗು ಮಂಜು ಎನ್ನುವ ಬಾಲಕ ಮೃತಪಟ್ಟಿದ್ದಾನೆ. ಮನೆಯಲ್ಲಿ ಆಟವಾಡುತ್ತಾ ನೀರಿನ ಮೋಟಾರ್ ಹಿಡಿದು ಸಾವನ್ನಪ್ಪಿದ್ದಾನೆ. ತಾಯಿ ಮೋಟರ್ ಆನ್ ಮಾಡಿ ನೀರು ತುಂಬಿಸುವಾಗ ಈ ಒಂದು ಘೋರ ದುರಂತ ಸಂಭವಿಸಿದೆ. ಮಗು ಸಾವಿನಿಂದ ನಿಂದ ಇದೀಗ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು : ಪೊಲೀಸ್ ಇಲಾಖೆಗೆ ನಕಲಿ ದಾಖಲೆ ಪ್ರಮಾಣ ಪತ್ರ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆಯ ಪಿಎಸ್ಐ ಕಾಶಿಲಿಂಗೇಗೌಡ ಸಸ್ಪೆಂಡ್ ಮಾಡಿ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರು ಆದೇಶ ಹೊರಡಿಸಿದ್ದಾರೆ. ನಕಲಿ ದಾಖಲೆ ನೀಡಿದ ಸಂಬಂಧ ವಿಧಾನಸೌಧ ಠಾಣೆಯಲ್ಲಿ PSI ಕಾಶಿಲಿಂಗೇಗೌಡನ ವಿರುದ್ಧ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಪಿಎಸ್ಐ ಜಾಮೀನು ಪಡೆದುಕೊಂಡಿದ್ದ ನಂತರ ಪೊಲೀಸ್ ಠಾಣೆಗೆ ಪಿಎಸ್ಐ ಕರ್ತವ್ಯಕ್ಕೆ ಹಾಜರಾಗಿದ್ದ, ಇದೀಗ ಪಿಎಸ್ಐ ಅಮಾನತು ಮಾಡಿ ಡಿಸಿಪಿ ಗಿರೀಶ್ ಆದೇಶ ಹೊರಡಿಸಿದ್ದಾರೆ.














