Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೃದಯಘಾತ ಎನ್ನುವುದು ಸಾಮಾನ್ಯ ಕಾಯಿಲೆಯಾಗಿದೆ. ಇದೀಗ ಸ್ಯಾಂಡಲ್ ವುಡ್ ನಟ ದರ್ಶನ್ ಅವರಿಗೆ ಮೇಕಪ್ ಮಾಡುತ್ತಿದ್ದ ಮೇಕಪ್ ಆರ್ಟಿಸ್ಟ್ ಒಬ್ಬರು ಹೃದಯಘಾತದಿಂದ ಸಾವನಪ್ಪಿರುವ ಘಟನೆ ನಡೆದಿದೆ. ಹೌದು ಕನ್ನಡ ಚಿತ್ರರಂಗದ ಹಿರಿಯ ಮೇಕಪ್ ಕಲಾವಿದರಾದ ಹೊನ್ನೇಗೌಡ (54) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರೆ. ಖ್ಯಾತ ನಟ ದರ್ಶನ್ ತೂಗುದೀಪ ಅವರ ಬಹುತೇಕ ಚಿತ್ರಗಳಿಗೆ ಮೇಕಪ್ ಕಲಾವಿದರಾಗಿ ಕೆಲಸ ಮಾಡಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿಕೊಂಡ ಹೊನ್ನೇಗೌಡ ಅವರಿಗೆ ಹೃದಯಘಾತವಾಗಿದೆ. ಇಂದು ಬೆಳಿಗ್ಗೆ ಅವರು ಮೃತಪಟ್ಟಿರುವುದು ಖಚಿತವಾಗಿದೆ. 2002ರಲ್ಲಿ ನಟ ದರ್ಶನ್ ಅವರ ಮೆಜೆಸ್ಟಿಕ್ ಸಿನಿಮಾದಿಂದ ಹಿಡಿದು ಇವತ್ತಿನ ಡೆವಿಲ್ ಸಿನಿಮಾ ವರೆಗೂ ಬಹುತೇಕ ದರ್ಶನ್ ಅವರ ಎಲ್ಲ ಚಿತ್ರಗಳಲ್ಲೂ ಹೊನ್ನೇಗೌಡ ಮೇಕಪ್ ಕಲಾವಿದರಗಿ ಕೆಲಸ ಮಾಡಿದ್ದರು.
ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಯಶಸ್ವಿಯಾಗಿ ಪೂರೈಸಿದ್ದಕ್ಕೆ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಯೋಜನೆ ಮಾಡಲಾಗಿದೆ. ಈ ಒಂದು ಸಾಧನಾ ಸಮಾವೇಶದಲ್ಲಿ ಖರ್ಗೆ ಪಹಲ್ಗಾಮ್ ಘಟನೆ ಕುರಿತು ಮಾತನಾಡಿ ಮೋದಿ ಸರ್ಕಾರ ಭದ್ರತೆ ಕೊಡದಿದ್ದಕ್ಕೆ ಅಲ್ಲಿ 26 ಜನರ ಅಮಾಯಕರ ಕೊಲೆಯಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 17ರಂದು ಕಾಶ್ಮೀರಕ್ಕೆ ಹೋಗುವವರಿದ್ರು. ಆದರೆ ಬೇಹುಗಾರಿಕೆ, ಗುಪ್ತಚರ ದಳದವರು ಹೋಗಬೇಡಿ ಎಂದಿದ್ದರು. ಅದೇ ಕಾರಣಕ್ಕೆ ಮೋದಿ ಕಾಶ್ಮೀರ ಪ್ರವಾಸ ರದ್ದು ಮಾಡಿಸಿದ್ರು. ಇದೆಲ್ಲಾ ಮೋದಿಗೆ ಗೊತ್ತಿತ್ತು, ಹಾಗಿದ್ದರೂ ಯಾಕೆ ಹೇಳಲಿಲ್ಲ. ಮೋದಿ ಅಂದೇ ಹೇಳಿದ್ದರೆ 26 ಪ್ರಾಣ ಉಳಿಯುತ್ತಿದ್ದವು ಎಂದು ಹೇಳಿದರು. ಆದರೆ ಈ ವೇಳೆ ಸರ್ಕಾರ, ಮಿಲಿಟರಿ ಯಾರೂ ಜನರಿಗೆ ಸಹಕಾರ ಕೊಟ್ಟಿಲ್ಲ ಎಂದು ಖರ್ಗೆ ಆರೋಪಿಸಿದ್ದಾರೆ. ಪಾಕಿಸ್ತಾನದ ಕೆಲಸ ಯಾವಾಗಲೂ ನಮ್ಮ ದೇಶದ ಮೇಲೆ ಗೂಬೆ ಕೂಡಿಸೋದು. ಪಾಕಿಸ್ತಾನಕ್ಕೆ ಶಕ್ತಿ ಇಲ್ಲ. ಹೀಗಾಗಿ ಭಯೋತ್ಪಾದಕರಿಂದ ದಾಳಿ…
ವಿಜಯನಗರ : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಇವಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ನಾವು ಕೊಟ್ಟ 593 ಭರವಸೆಗಳಲ್ಲಿ 242 ಭರವಸೆ ಈಗಾಗಲೇ ಈಡೇರಿಸಿದ್ದೇವೆ ಎಂದು ತಿಳಿಸಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಆಯಿತು ಕೊಟ್ಟ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿಯವರು ಹಕ್ಕು ಪತ್ರ ವಿತರಿಸಿದ್ದಾರೆ. ಹೊಸಪೇಟೆಯ ಈ ಕಾರ್ಯಕ್ರಮ ಯಶಸ್ವಿಯಾಗಿದೆ. ಜನರಿಗೆ 2 ವರ್ಷಗಳ ಹಿಂದೆ ಹಲವು ಭರವಸೆಗಳನ್ನು ನೀಡಿದ್ವಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ಪ್ರಣಾಳಿಕೆ ನೀಡಿದ್ದೆವು. 593 ಭರವಸೆಗಳನ್ನು ರಾಜ್ಯದ ಜನರಿಗೆ ಕೊಟ್ಟಿದ್ದೆವು ಎರಡು ವರ್ಷದಲ್ಲಿ 242 ಬರವಸೆಗಳನ್ನು ಈಡೇರಿಸಿದ್ದೇವೆ. ಉಳಿದ ಭರವಸೆಗಳನ್ನು ಮುಂದಿನ ಎರಡು ವರ್ಷದಲ್ಲಿ ಈಡೇರಿಸುತ್ತೇವೆ ಎಂದರು. ರಾಜ್ಯದ ಜನರಿಗಾಗಿ ನಾವು ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ ಕಳೆದ…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಆಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ವಿಚಾರಣೆ ಮುಂದುವರಿದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ಇಂದು ನ್ಯಾಯಾಲಯದೆದುರು ಹಾಜರಾಗಿದ್ದಾರೆ. ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ವಿಚಾರಣೆ ನಡೆಯಿತು. ಕಳೆದ ಬಾರಿ ವಿಚಾರಣೆಗೆ ನಟ ದರ್ಶನ್ ಗೈರಾಗಿದ್ದರು. ಹೀಗಾಗಿ, ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಲಯ, ಆರೋಪಿಗಳು ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗಬೇಕು ಎಂದು ದರ್ಶನ್ ಪರ ವಕೀಲರಿಗೆ ಸೂಚಿಸಿತ್ತು. ಅದರಂತೆ, ಇಂದಿನ ವಿಚಾರಣೆಗೆ ನಟ ದರ್ಶನ್ ಅವರು ಖುದ್ದು ಹಾಜರಾಗಿದ್ದಾರೆ. ಮತ್ತೊಂದೆಡೆ, ಆರೋಪಿ ಪವಿತ್ರಾ ಗೌಡ ಸಹ ವಿಚಾರಣೆಗೆ ಹಾಜರಾಗಿದ್ದಾರೆ. ಜುಲೈ 10ಕ್ಕೆ ವಿಚಾರಣೆ ಮುಂದೂಡಿರುವ ನ್ಯಾಯಾಲಯ, ಅಂದು ಎಲ್ಲಾ ಆರೋಪಿಗಳಿಗೂ ಹಾಜರಾಗುವಂತೆ ಸೂಚಿಸಿದೆ.
ವಿಜಯನಗರ : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಈ ವೇಳೆ ಡಿಕೆ ಶಿವಕುಮಾರ್ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಇರುವವರೆಗೂ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ತಿಳಿಸಿದರು. ಸಮಾವೇಶದ ಕುರಿತಂತೆ ಡಿಕೆ ಶಿವಕುಮಾರ್ ಅವರು ಮಾತನಾಡಿ ವಿಪಕ್ಷದವರು ನಮ್ಮ ಬಗ್ಗೆ ಟೀಕೆಗಳನ್ನು ಮಾಡುತ್ತಿದ್ದಾರೆ. ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ. ಉದ್ಯೋಗ ಹೆಚ್ಚಳಕ್ಕೆ ನಾವು ಕ್ರಮ ಕೈಗೊಂಡಿದ್ದೇವೆ. ಕೊಟ್ಟ ಭರವಸೆಯಂತೆ 5 ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ರಾಜ್ಯದ ಜನರ ಋಣ ತೀರಿಸಲು ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ನಮ್ಮನ್ನು ನಂಬಿ 136 ಸ್ಥಾನಗಳನ್ನು ಕೊಟ್ಟಿದ್ದೀರಿ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದರು. ಈ ಪಕ್ಷದವರು ಟೀಕೆಗಳನ್ನು ಮಾಡ್ತಾ ಇರಲಿ 5 ಗ್ಯಾರಂಟಿಗಳ ಜೊತೆಗೆ ಇಂದು ಆರನೇ ಗ್ಯಾರಂಟಿ ಕೊಟ್ಟಿದ್ದೇವೆ. ಇಂದು ಭೂ ಗ್ಯಾರಂಟಿ ಕೊಟ್ಟಿದ್ದೇವೆ. ಪ್ರವಾಸೋದ್ಯಮ ಸಂಸ್ಕೃತಿ ಕನ್ನಡ ಇಲಾಖೆಯಲ್ಲಿ ಹೊಸ ಯೋಜನೆ, ಜನರ…
ಧಾರವಾಡ : ಇತ್ತೀಚಿಗೆ ಹೃದಯಘಾತದ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಯುವಜನತೆ ಈ ಒಂದು ಹೃದಯಘಾತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದಾರೆ. ಇದೀಗ ಬೈಕ್ ನಲ್ಲಿ ತೆರಳುತ್ತಿರುವಾಗಲೇ ವ್ಯಕ್ತಿಗೆ ಹೃದಯಘಾತವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ನಡೆದಿದೆ. ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯನ್ನು, ದುರ್ಗಪ್ಪ (43) ಹರಿಜನ, ಎಂದು ತಿಳಿದುಬಂದಿದ್ದು ಮೃತ ದುರ್ಗಪ್ಪ ಹರಿಜನ ಕುರುಬಗಟ್ಟಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಬಂದ ಧಾರವಾಡ ಗ್ರಾಮೀಣ ಪೋಲಿಸರು ಮಾಹಿತಿಯನ್ನ ಪಡೆದುಕೊಂಡು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. ಇನ್ನು ಕಳೆದ ಎರಡು ದಿನಗಳ ಹಿಂದೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಮನಕಲಕುವ ಘಟನೆ ಎಂದು ನಡೆದಿತ್ತು. ವರನೊಬ್ಬ ವಧುವಿಗೆ ತಾಳಿ ಕಟ್ಟಿದ 10 ನಿಮಿಷದಲ್ಲಿಯೇ ಹೃದಯಘಾತದಲ್ಲಿ ಕಲ್ಯಾಣ ಮಂಟಪದಲ್ಲಿ ಸಾವನಪ್ಪಿದ್ದ. ಮದುವೆ ಸಂಭ್ರಮ ತುಂಬಿದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.
BREAKING : ಬೆಂಗಳೂರಲ್ಲಿ ಮಳೆಗೆ ಮತ್ತಿಬ್ಬರು ಬಲಿ : ಅಪಾರ್ಟ್ಮೆಂಟ್ನಿಂದ ನೀರು ಹೊರ ಹಾಕುವಾಗ ವಿದ್ಯುತ್ ತಗುಲಿ ಸಾವು!
ಬೆಂಗಳೂರು : ಬೆಂಗಳೂರಿನಲ್ಲಿ ಋಣಾನುಭಟ ಜೋರಾಗಿದ್ದು ಇಂದು ಬೆಳಿಗ್ಗೆ ತಾನೇ ಬೆಂಗಳೂರಿನ ವೈಟ್ ಫೀಲ್ಡ್ ಭಾಗದಲ್ಲಿ ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಮಹಿಳೆ ಒಬ್ಬರು ಸಾವನಪ್ಪಿದ್ದರು ಇದೀಗ ಬೆಂಗಳೂರಿನಲ್ಲಿ ಮಹಾಮಳೆಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಹೌದು ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಪ್ರಮುಖ ರಸ್ತೆಯಲ್ಲಿ ನೀರು ನಿಂತಿದ್ದು, ಜನರಿಗೆ ಮನೆಯಿಂದ ಹೊರಗಡೆ ಕಾಲಿಡಲು ಸಹ ಆಗುತ್ತಿಲ್ಲ. ಇದೀಗ ಬೆಂಗಳೂರಿನ ಮಹಾಮಳೆಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಮೃತರನ್ನು ಮನೋಹರ್ ಕಾಮತ್ (55) ಮತ್ತು ದಿನೇಶ್ (9) ಎನ್ನುವ ಬಾಲಕ ಬಲಿಯಾಗಿದ್ದಾರೆ. ಬಿಟಿಎಂ ಲೇಔಟ್ ನ 2 ನೇ ಹಂತದ ಎನ್ ಎಸ್ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಮಧುವನ ಅಪಾರ್ಟ್ಮೆಂಟ್ನ ಬೇಸ್ಮೆಂಟ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಾರ್ಟ್ಮೆಂಟ್ ನಿವಾಸಿ ಮನೋಹರ್ ಕಾಮತ್ ಹಾಗೂ ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ದುರ್ಮರಣ ಹೊಂದಿದ್ದಾರೆ. ಮಳೆಯಿಂದ ಸಂಪೂರ್ಣವಾಗಿ ಅಪಾರ್ಟ್ಮೆಂಟಿನ ಬೇಸ್ಮೆಂಟ್ ಜಲಾವೃತವಾಗಿತ್ತು. ಈ ವೇಳೆ…
ಚಿಕ್ಕಮಗಳೂರು : ಈಗಾಗಲೇ ರಾಜ್ಯದಲ್ಲಿ ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಅದರಲ್ಲೂ ಬೆಂಗಳೂರಿನ ಹಲವು ರಸ್ತೆಗಳಂತೂ ನದಿಯಂತೆ ಆಗಿವೆ. ಅದರಂತೆ ಇದೀಗ ಚಿಕ್ಕಮಂಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಚಿಕ್ಕಮಂಗಳೂರು ಜಿಲ್ಲೆಗೆ ನಾಳೆ ಮತ್ತು ನಾಡಿದ್ದು ರೆಡ್ ಅಲರ್ಟ್ ಘೋಷಿಸಿದೆ. ಹೌದು ಇಂದು ಚಿಕ್ಕಮಂಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆ ಆಗುತ್ತಿದೆ. ವರ್ಣನ ಅಬ್ಬರದಿಂದ ಚಿಕ್ಕಮಂಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಹಲವಾರು ಅವಾಂತರಗಳು ಸೃಷ್ಟಿಯಾಗಿವೆ. ಚಿಕ್ಕಮಂಗಳೂರು ನಗರ, ಕೊಪ್ಪ, ಕಳಸ, ಮೂಡಿಗೆರೆ ಹಾಗೂ ಶೃಂಗೇರಿ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಹಾಗಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಾಳೆ ಮತ್ತು ನಾಡಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯಿಂದ 2 ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾವೇರಿ : ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದನ್ನು ಕೇಳಿದ್ದೇವೆ. ಆದರೆ ವಿದ್ಯೆ ಕಲಿಸುವ ಗುರು ಒಬ್ಬ ವಿದ್ಯಾರ್ಥಿಯ ಶಾಲಾ ಪ್ರವೇಶಕ್ಕೆ 10 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬೆಲೆಗೆ ಬಿದ್ದಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹೌದು ಹಾವೇರಿ ಜಿಲ್ಲೆಯ ಸವಣೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಯೊಬ್ಬರಿಗೆ ಪ್ರವೇಶ ನೀಡಲು 10 ಸಾವಿರ ರೂ. ಲಂಚ ಪಡೆದ ಆರೋಪದ ಮೇಲೆ ಮಂಜುನಾಥ ಕಲ್ಲಪ್ಪ ಕಾಟೇನಹಳ್ಳಿ ಎಂಬ ಮುಖ್ಯ ಶಿಕ್ಷಕನನ್ನು ಆತನ ಮನೆಯಲ್ಲೇ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಪುತ್ರನ ಶಾಲಾ ಪ್ರವೇಶಕ್ಕೆ 50 ರೂ. ಸಾವಿರ ಲಂಚ ನೀಡುವಂತೆ ಸವಣೂರಿನ ಖಾದರಭಾಗ ಓಣಿಯ ನಿವಾಸಿ ಅಕ್ಬರ್ ಅವರಿಗೆ ಆರೋಪಿ ಮಂಜುನಾಥ ಬೇಡಿಕೆ ಇಟ್ಟಿದ್ದ. ಹಣ ಇಲ್ಲವೆಂದಾಗ, 10 ರೂ. ಸಾವಿರ ಕೊಡುವಂತೆ ಒತ್ತಾಯಿಸಿದ್ದ. ಮನೆಗೆ ಕರೆಸಿಕೊಂಡು 5 ಸಾವಿರ ರೂ. ಮುಂಗಡವಾಗಿ ಪಡೆದಿದ್ದ. ಈ ಬಗ್ಗೆ ಅಕ್ಬರ್ ಲೋಕಾಯುಕ್ತ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಂತ ಹಂತವಾಗಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಅದರಲ್ಲಿ ಮಹಿಳೆಯರಿಗೆ ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ಮಾಡಿತು. ಈಗ ಡಿಸಿಎಂ ಡಿಕೆ ಶಿವಕುಮಾರ್ ಗೃಹಲಕ್ಷ್ಮಿ ಯೋಜನೆ ಪ್ರತಿ ತಿಂಗಳು ಹಾಕುತ್ತೇವೆ ಅಂತ ಹೇಳಿಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ತಮ್ಮ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ನೀವು ಟ್ಯಾಕ್ಸ್ ಸರಿಯಾದ ಸಮಯಕ್ಕೆ ನೀಡಿದರೆ ನಾವು ಗೃಹಲಕ್ಷ್ಮಿ ಹಣ ಹಾಕ್ತೇವೆ ಸರಿಯಾಗಿ ನೀಡಿದರೆ ನಾವು ಗೃಹಲಕ್ಷ್ಮಿ ಹಣ ಸರಿಯಾಗಿ ಹಾಕ್ತೇವೆ ಎಂದು ಸಮರ್ಥಿಸಿಕೊಂಡಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಪ್ರತಿ ತಿಂಗಳು ಹಣ ಹಾಕಲ್ಲ ಎಂಬ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು. ನಾವು ಘೋಷಣೆ ಮಾಡಿದಂತೆ 2,000 ಹಣ ನೀಡುತ್ತಿದ್ದೇವೆ. ಆದರೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆ ಹಣ ಹಾಕುತ್ತೇವೆ ಎಂದು ಹೇಳಿಲ್ಲ. ನೀವು ಟ್ಯಾಕ್ಸ್ ಸರಿಯಾದ ಸಮಯಕ್ಕೆ ನೀಡಿ ಅದರಂತೆ ನಾವು ಹಾಕುತ್ತೇವೆ.…














