Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಹಾಲಿನ ದರ, ವಿದ್ಯುತ್ ದರ ಸೇರಿ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಬೆಲೆ ಏರಿಕೆ ಖಂಡಿಸಿ ಮುಖ್ಯಮಂತ್ರಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ನಿನ್ನೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.ಹೀಗಾಗಿ, ನೂರಾರು ಕಾರ್ಯಕರ್ತರೊಂದಿಗೆ ರಸ್ತೆಗಿಳಿದು ಸಿಎಂ ಮನೆ ಕಡೆ ತೆರಳಲು ಮುಂದಾದರು. ಅಷ್ಟರಲ್ಲೇ ಬ್ಯಾರಿಕೇಡ್ ಹಾಕಿದ ಪೊಲೀಸರು, ಬಿಜೆಪಿ ಕಾರ್ಯಕರ್ತರನ್ನು ತಡೆದರು. ಬ್ಯಾರಿಕೇಡ್ ಮೇಲೆಯೇ ಹತ್ತಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಪ್ರತಿಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಸಿ.ಟಿ. ರವಿ, ಎಸ್.ಆರ್. ವಿಶ್ವನಾಥ್, ಸಿ.ಕೆ. ರಾಮಮೂರ್ತಿ, ಮುನಿರತ್ನ, ಬೈರತಿ ಬಸವರಾಜ್, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ ಸೇರಿದಂತೆ ಬಿಜೆಪಿ ಮುಖಂಡರು…
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರು ನಗರದ ಹಲವು ಪ್ರದೇಶಗಳು ಸೇರಿದಂತೆ ಚಿಕ್ಕಮಂಗಳೂರು ನಗರದಲ್ಲಿ ಕೂಡ ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು ಭಾರಿ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಹೌದು ಚಿಕ್ಕಮಂಗಳೂರು ನಗರದಾದ್ಯಂತ ಇಂದು ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು, ದಿಡೀರ್ ಮಳೆಗೆ ಚಿಕ್ಕಮಂಗಳೂರಿನಲ್ಲಿ ವಾಹನ ಸವಾರರು ಪರದಾಟ ನಡೆಸಿದರು. ಬಿರುಗಾಳಿ ಸಹಿತ ವರುಣ ಅಬ್ಬರಿಸುತ್ತಿದ್ದಾನೆ. ಅಲ್ಲದೆ ಭಾರಿ ಮಳೆಯಿಂದಾಗಿ ಕೆಲವು ಕಡೆ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಇನ್ನು ಬೆಂಗಳೂರು ಮಹಾನಗರದಲ್ಲು ಸಹ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ.ಬಿಟಿಎಂ ಲೇಔಟ್, ತಾವರೆಕೆರೆ ಮುಖ್ಯ ರಸ್ತೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಳೆಯಿಂದ ಬಿಟಿಎಂ ಲೇಔಟಿನ ರಸ್ತೆಗಳು ಕೆರೆಯಂತೆ ಆಗಿವೆ.ರಸ್ತೆ ಜಲಾವೃತ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಇನ್ನು ಬೆಂಗಳೂರಿನ ರಾಜಾಜಿನಗರದಲ್ಲಿ ಮಳೆಯಿಂದಾಗಿ…
ಚಾಮರಾಜನಗರ : ಯಾವುದೇ ಸರ್ಕಾರ ಬರಲಿ ಹೋಗಲಿ ಆದರೆ ವ್ಯವಸ್ಥೆ ಮಾತ್ರ ಬದಲಾಗಲ್ಲ ಎನ್ನುವುದಕ್ಕೆ ಈ ಒಂದು ಘಟನೆಯೆ ಸಾಕ್ಷಿ. ಹೌದು ಅನಾರೋಗ್ಯ ಪೀಡಿತನನ್ನು ಡೋಲಿಯ ಮೂಲಕ ಆಸ್ಪತ್ರೆಗೆ ಸಾಗಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತುಳಸಿಕೆರೆ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ರಸ್ತೆ ಇಲ್ಲದೆ ಅಂಬುಲೆನ್ಸ್ ಬಾರದ ಕಾರಣ ರೋಗಿ ಮತ್ತು ಸ್ಥಳೀಯರು ಪರದಾಟ ನಡೆಸಿದ್ದಾರೆ. ಹನೂರು ತಾಲೂಕಿನ ತುಳಸಿಕೆರೆ ಗ್ರಾಮದಲ್ಲಿ ಈ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಬಳಲಿ ನಿತ್ರಾಣರಾಗಿದ್ದ ಪುಟ್ಟ ಎಂಬ ವ್ಯಕ್ತಿಯನ್ನು 8 ಕಿಲೋಮೀಟರ್ ವರೆಗೂ ಹೊತ್ತುಕೊಂಡು ಜನರು ತಮಿಳುನಾಡಿನ ಗೋಳಮತ್ತುರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗ್ರಾಮಕ್ಕೆ ಸೌಕರ್ಯ ಕಲ್ಪಿಸುವಂತೆ ಇದೀಗ ಜನರು ಒತ್ತಾಯಿಸುತ್ತಿದ್ದಾರೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು ಹೈಕೋರ್ಟಿಗೆ ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿದ್ದ ಬಿ ರಿಪೋರ್ಟ್ ಅರ್ಜಿಯನ್ನು ತಿರಸ್ಕರಿಸುವಂತೆ ಇದೀಗ ಜಾರಿ ನಿರ್ದೇಶನಾಲಯ (ED) ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಹೌದು ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ ಎದುರಾಗಿದ್ದು, ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ಇದೀಗ ಇಡಿ ತಕರಾರು ಅರ್ಜಿ ಸಲ್ಲಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ (ED) ತಕರಾರು ಅರ್ಜಿ ಸಲ್ಲಿಸಿದೆ ಒಟ್ಟು ಎಂಟು ಪುಟಗಳ ತಕರಾರು ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಸಿಎಂ ಮತ್ತು ಅವರ ಕುಟುಂಬದ ವಿರುದ್ಧ ಸಾಕಷ್ಟು ಸಾಕ್ಷಿಗಳಿವೆ. ನಮ್ಮ ತನಿಖೆಯಲ್ಲಿ ಅವರ ತಪ್ಪುಗಳು ಸಾಬೀತಾಗಿವೆ. ಹೀಗಿದ್ದರೂ ಅವರು ಯಾವ ತಪ್ಪು ಮಾಡಿಲ್ಲ ಎನ್ನಲಾಗಿದೆ. ಯಾವ ತಪ್ಪು ಮಾಡಿಲ್ಲ ಎಂದು ಹೇಳಿರುವುದು ಸರಿಯಲ್ಲ ಹೀಗಾಗಿ ಲೋಕಾಯುಕ್ತ ವರದಿಯನ್ನು ತಿರಸ್ಕರಿಸಬೇಕು ಹೀಗಂತ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ತಕರಾರು ಅರ್ಜಿಯಲ್ಲಿ ಇಡಿ ಉಲ್ಲೇಖಿಸಿದೆ.
ಉತ್ತರಕನ್ನಡ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಆರು ವರ್ಷದ ಬಾಲಕಿಯನ್ನು ತಿಂಡಿ ಕೊಡುವುದಾಗಿ ಪುಸಲಾಯಿಸಿ ಮುಸ್ಲಿಂ ಬಾಲಕನೊಬ್ಬ ಪಾಳುಬಿದ್ದ ದೇವಸ್ಥಾನದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಸಮೀಪದ ಮದನೂರಿನಲ್ಲಿ ನಡೆದಿದೆ. ಆರೋಪಿ, 17 ವರ್ಷದ ಬಾಲಕ ಯಲ್ಲಾಪುರಕ್ಕೆ ಕುಟುಂಬಸ್ಥರ ಮನೆಗೆ ಬಂದಿದ್ದ ವೇಳೆ ಈ ಬಾಲಕಿಯನ್ನು ಪುಸಲಾಯಿಸಿ ಊರಿನ ಪಾಳು ಬಿದ್ದ ದೇವಸ್ಥಾನಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಛಲವಾದಿ ಸಮುದಾಯಕ್ಕೆ ಸೇರಿದ 1ನೇ ತರಗತಿಯ ವಿದ್ಯಾರ್ಥಿ ಅತ್ಯಾಚಾರಕ್ಕೆ ಒಳಗಾದ ಬಾಲಕಿಯಾಗಿದ್ದಾಳೆ. ಅತ್ಯಾಚಾರ ಬಾಲಕ ಹಳಿಯಾಳ ಭಾಗವತಿಯ 17 ವರ್ಷದ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕ ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಅಳುತ್ತ ಮನೆಗೆ ಹೋದಾಗ ಪೋಷಕರು ಬಾಲಕಿಯನ್ನು ವಿಚಾರಿಸಿದ್ದಾರೆ.ತಕ್ಷಣ ಆತನನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದು, ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಳೆದ ಮಾರ್ಚ್ 21ರಂದು ಬಿಬಿಎಂಪಿ ಕಸದ ಲಾರಿ ಬೈಕ್ಗೆ ಗುದ್ದಿದ ಪರಿಣಾಮ 10 ವರ್ಷದ ಬಾಲಕ ಸ್ಥಳದಲ್ಲೇ ಸಾವನಪ್ಪಿದ್ದ ಬಳಿಕ ಸ್ಥಳೀಯರು ಆಕ್ರೋಶ ಕಂಡು ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ 10ಕ್ಕೂ ಹೆಚ್ಚು ಜನರ ವಿರುದ್ಧ FIR ದಾಖಲಾಗಿದೆ. ಹೌದು ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 10ಕ್ಕೂ ಹೆಚ್ಚು ಜನರ ವಿರುದ್ಧ FIR ದಾಖಲಾಗಿದೆ. ಮಾರ್ಚ್ 29 ರಂದು ಕಸದ ಲಾರಿ ಬೈಕಿಗೆ ಗುದ್ಧಿದ್ದರಿಂದ 10 ವರ್ಷದ ಬಾಲಕ ಮೃತಪಟ್ಟಿದ್ದ. ಇದರಿಂದ ಆಕ್ರೋಶಗೊಂಡು ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿದ್ದರು. ಹಾಗಾಗಿ ಹತ್ತಕ್ಕೂ ಹೆಚ್ಚು ಜನರ ವಿರುದ್ಧ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ
ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾರಾವ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಇತ್ತೀಚಿಗೆ ಕೋರ್ಟ್ ವಜಾ ಗೊಳಿಸಿತ್ತು. ಇದರ ಬೆನ್ನಲ್ಲೇ ರನ್ಯಾರಾವ್ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು ಪತಿ ಜತಿನ್ ಹುಕ್ಕೇರಿ ನಟಿ ರನ್ಯಾರಾವ್ ಳಿಂದ ದೂರವಾಗಿದ್ದು ವಿಚ್ಛೇದನ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ವಿಚ್ಚೇದನ ಕೋರಿ ಪತಿ ಜತಿನ್ ಹುಕ್ಕೇರಿ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಇದೀಗ ಅವರಿಗೆ ಮತ್ತೊಂದು ಶಾಕ್ ಎದುರಾಗಿದೆ. ಜಾಮೀನು ಅರ್ಜಿ ವಜಾ ಬೆನ್ನಲ್ಲೇ ರನ್ಯಾಗೆ ಮತ್ತೊಂದು ಶಾಕ್ ಎದುರಾಗಿದೆ. ರನ್ಯಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಪತಿ ಜತೀನ್ ಹುಕ್ಕೇರಿ ರನ್ಯಾಳಿಂದ ದೂರವಾಗಲು ವಿಚ್ಛೇದನ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮದುವೆಯಾದಗಿನಿಂದ ರನ್ಯಾ ಜೊತೆಗೆ…
ಬೆಳಗಾವಿ : ಬೆಳಗಾವಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ರಜೆ ಕೊಡದಿದ್ದಕ್ಕೆ ಮನನೊಂದ ಕೆಎಸ್ಆರ್ಟಿಸಿ ಚಾಲಕನೊಬ್ಬ ಬಸ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಇಲ್ಲಿನ ಹಳೆ ಗಾಂಧಿನಗರದ ನಿವಾಸಿ ಬಾಲಚಂದ್ರ ಶಿವಪ್ಪ ಹುಕ್ಕೋಜಿ (47) ಸಾವಿಗೆ ಶರಣಾದವರು. ಶಹಾಪುರ ನಾಕಾದಿಂದ ವಡಗಾವಿಗೆ ಸಂಚರಿಸುವ ಬಸ್ಸಿನಲ್ಲಿ ಅವರು ಚಾಲಕರಾಗಿದ್ದರು. ಮನೆಯಲ್ಲಿ ಬಾಲಚಂದ್ರ ಅವರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ ಕೊಡುವಂತೆ ಡಿಪೊ ಮ್ಯಾನೇಜರ್ ಬಳಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ರಜೆ ಕೊಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಅಮಾನವೀಯ ಘಟನೆ ನಡೆದಿದ್ದು ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದಾರೆ ಎಂದು ಪೋಷಕರು ಮುಖ್ಯ ಶಿಕ್ಷಕ ಅಭಿವ್ರಿದ್ದ ಆಕ್ರೋಶ ಹೊರಹಾಕಿದ್ದು, ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ.
ದಾವಣಗೆರೆ : ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿ ಗಲಾಟೆ ವೇಳೆ ಚಾಕುವಿನಿಂದ ಇರಿದು ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಬಳಿಯ ಅಡಿಕೆ ತೋಟದಲ್ಲಿ ಈ ಒಂದು ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಶುರುವಾಗಿ, ಬಳಿಕ ಮೊಹಮ್ಮದ್ ಜಾವೇದ್ (25) ಎನ್ನುವ ಯುವಕ ಕೊಲೆಯಾಗಿದ್ದಾನೆ. ಘಟನೆ ಸಂಭಂದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಕುರಿತು ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














