Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : ದರೋಡೆಕೋರರು ED ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ 30 ಲಕ್ಷ ನಗದು ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿನ ನಿವಾಸಿ ಸುಲೈಮಾನ್ ಹಾಜಿ ಎಂಬವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ನಿನ್ನೆ ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡವೊಂದು ದಾಳಿ ನಡೆಸಿದಂತೆ ನಟಿಸಿದೆ. ನಾವು ಇಡಿ ಅಧಿಕಾರಿಗಳು ಎಂದು ಸುಲೈಮಾನ್ ಹಾಜಿ ಅವರನ್ನು ನಂಬಿಸಿ ಸುಮಾರು ಎರಡು ಗಂಟೆಗಳವರೆಗೆ ಮನೆಯಲ್ಲ ಪರಿಶೀಲಿಸಿದ್ದಾರೆ. ಕೊನೆಗೆ ಮನೆಯಲ್ಲಿದ್ದ ಸುಮಾರು 30 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ. ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಭೇಟಿ ನೀಡಿ ಪರಿಶೀಲನೆ…
ಬಳ್ಳಾರಿ : ಭಗ್ನಪ್ರೇಮಿಯೊಬ್ಬ ಪ್ರೇಯಸಿ ಹಾಗೂ ಆಕೆಯ ಕುಟುಂಬಸ್ಥರ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ಮಾಡಿ, ಬಳಿಕ ಇಂದು ತಾನು ಕೂಡ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದ ಚರ್ಚ್ ಶಾಲಾ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಹೊಸಪೇಟೆ ಮೂಲದ ನವೀನ್ ಕುಮಾರ್ ಎಂದು ತಿಳಿದುಬಂದಿದೆ. ಯುವತಿ ಸೇರಿ ಕುಟುಂಬದ ಮೇಲೆ ಯುವಕ ಮಚ್ಚಿನಿಂದ ಹಲ್ಲೆ ಮಾಡಿದ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ನವೀನ್ ಕುಮಾರ್. ಗಾಯಾಳುಗಳನ್ನು ತೋರಣಗಲ್ಲು ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ ಪ್ರೇಯಸಿ ಸೇರಿ ಮೂವರ ಮೇಲೆ ಮಚ್ಚಿನಿಂದ ದಾಳಿ ಮಾಡಿದ್ದ. ಪರಸ್ಪರ ನವೀನ್ ಹಾಗೂ ಯುವತಿ ಪ್ರೀತಿಸುತ್ತಿದ್ದರು. ನವೀನ್ ಕುಮಾರ್ ಬಾಳೆಹಣ್ಣು ವ್ಯಾಪಾರ ಮಾಡಿಕೊಂಡಿದ್ದ. ಯುವತಿ ಕಾಲೇಜು ಹೋಗುವಾಗಲೇ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಎಂಸಿಎ ಓದಬೇಕು ಅಂತ ಯುವತಿ ಪ್ರೀತಿಗೆ ಬ್ರೇಕ್ ಹಾಕಿದ್ದಾಳೆ, ಇದರಿಂದ ಭಗ್ನ ಪ್ರೇಮಿ ನವೀನ್ ಕುಮಾರ್…
ಬೆಂಗಳೂರು : ನಿನ್ನೆ ಬೆಂಗಳೂರಲ್ಲಿ ಆಟೋ ಚಾಲಕನ ದುರ್ನಡತೆಯಿಂದ ಮಹಿಳೆ ಒಬ್ಬರು ಚಲಿಸುತ್ತಿದ್ದ ಆಟೋದಿಂದ ಜಿಗಿದು ಸೇಫ್ ಆದಂತಹ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಆಟೋ ಚಾಲಕ ಸುನಿಲ್ ಎಂಬಾತನನ್ನು ಅಮೃತ ಹಳ್ಳಿಯ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಥಣಿಸಂದ್ರದ ನಿವಾಸಿಯಾಗಿದ್ದ ಮಹಿಳೆ, ಗುರುವಾರ ರಾತ್ರಿ ಕೆಲಸದ ನಿಮಿತ್ತ ಹೊರ ಹೋಗಿದ್ದರು. ವಾಪಸ್ ಮನೆಗೆ ತೆರಳಲು ಹೊರಮಾವಿನಿಂದ ಥಣಿಸಂದ್ರಕ್ಕೆ ಆ್ಯಪ್ ಮೂಲಕ ಆಟೋ ಬುಕ್ ಮಾಡಿದ್ದರು. 8.55ರ ಸುಮಾರಿಗೆ ಪಿಕಪ್ ಲೊಕೇಷನ್ ಬಳಿ ಬಂದಿದ್ದ ಆಟೋ ಚಾಲಕನು ಮಹಿಳೆಯನ್ನ ಥಣಿಸಂದ್ರಕ್ಕೆ ಡ್ರಾಪ್ ಮಾಡದೇ ಹೆಬ್ಬಾಳ ಕಡೆ ಹೋಗಲಾರಂಭಿಸಿದ್ದ.ತಪ್ಪಾದ ದಾರಿಯಲ್ಲಿ ಹೋಗುತ್ತಿರುವುದನ್ನ ಗಮನಿಸಿದ ಮಹಿಳೆ, ಚಾಲಕನಿಗೆ ಹೇಳಿದರೂ ಸಹ ಆತ ಪ್ರತಿಕ್ರಿಯಿಸಿರಲಿರಲಿಲ್ಲ. ಆಟೋ ನಿಲ್ಲಿಸುವಂತೆ ಸೂಚಿಸಿದರೂ ಚಾಲನೆ ಮುಂದುವರಿಸಿದ್ದ. ಇದರಿಂದ ಆತಂಕಗೊಂಡ ಮಹಿಳೆ ಚಲಿಸುತ್ತಿರುವಾಗಲೇ ಆಟೋದಿಂದ ಜಿಗಿದಿದ್ದರು. ಘಟನೆಯ ಕುರಿತು ಮಹಿಳೆಯ ಪತಿ ಅಜರ್ ಖಾನ್ ಎಕ್ಸ್ ಆ್ಯಪ್ ಮೂಲಕ ಪೊಲೀಸರಿಗೆ ದೂರು ನೀಡಿದ್ದರು. ಅಜರ್ ಅವರು ನೀಡಿದ ದೂರಿನ ಮೇರೆಗೆ ಇದೀಗ ಆಟೋ…
ಬೆಂಗಳೂರು : ಬೆಂಗಳೂರಿನಲ್ಲಿ ಸೆಲ್ಫ್ ಆಕ್ಸಿಡೆಂಟ್ ಗೆ ಬೈಕ್ ಸವಾರಣೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಫ್ಲೈ ಓವರ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೌದು ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಹೆಬ್ಬಾಳ ಫ್ಲೈ ಓವರ್ ಮೇಲೆ ಸ್ಕೂಟರ್ ಅಪಘಾತ ಸಂಭವಿಸಿದೆ. ಸೆಲ್ಫ್ ಆಕ್ಸಿಡೆಂಟ್ ಗೆ ಸ್ಕೂಟರ್ ಸವಾರ ಸಾವನಪ್ಪಿದ್ದಾನೆ. ವೇಗವಾಗಿ ಬಂದ ಸವಾರ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆ ಕುರಿತು ಹೆಬ್ಬಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಂಗಳೂರು : ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಆಗಿರುವಂತಹ ಬಸವರಾಜ್ ಮುತ್ತಗಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದು, ಯೋಗೇಶ್ ಗೌಡ ಕೊಲೆ ಮಾಡಿಸಿದ್ದೆ ಶಾಸಕ ವಿನಯ್ ಕುಲಕರ್ಣಿ ಎಂದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಆಪ್ತನ ತಪ್ಪೊಪ್ಪಿಗೆಯಿಂದ ಶಾಸಕ ವಿನಯ್ ಕುಲಕರಣಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಬಸವರಾಜ್ ಮುತ್ತಗಿ ಹೇಳಿಕೆ ನೀಡಿದ್ದು, ಕೊಲೆ ಪ್ರಕರಣದ ಪ್ರಮುಖ ಆರೋಪಿ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಆಪ್ತನ ತಪೋಪಿಗೆಯಿಂದ ಶಾಸಕ ವಿನಯ್ ಕುಲಕರ್ಣಿಗೆ ಇದೀಗ ಮತ್ತಷ್ಟು ಸಂಕಷ್ಟ ಎದುರಾಗಿದೆ. ಶಾಸಕ ವಿನಯ್ ಕುಲಕರ್ಣಿ ಸೂಚನೆ ಮೇರೆಗೆ ಹಲವರು ಬಂದಿದ್ದರು. ಬೆಂಗಳೂರಿನಿಂದ ಕರೆಸಿದವರಿಂದಲೇ ಯೋಗೇಶ್ ಗೌಡ ಕೊಲೆ ನಡೆದಿದೆ. ತಪ್ಪೋಪ್ಪಿಗೆಯಲ್ಲಿ ವಿನಯ ಪಾತ್ರದ ಕುರಿತು ವಿಸ್ತೃತವಾಗಿ ಬಸವರಾಜ್ ಮುತ್ತಿಗಿ ಮಾಹಿತಿ ನೀಡಿದ್ದಾನೆ. ಮುತ್ತಗಿ ಹೇಳಿಕೆಯಿಂದ ವಿನಯ್ ಕುಲಕರ್ಣಿ ಮೇಲಿನ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗುವ ಸಾಧ್ಯತೆ ಇದೆ. ಧಾರವಾಡದ ವಿಕಾಸ್ ಕಲಬುರ್ಗಿ, ಕೀರ್ತಿ…
ಗದಗ : ರಸ್ತೆ ಬದಿಯ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹುಲಕೋಟಿಯಲ್ಲಿ ನಡೆದಿದೆ. ಹೌದು ಡಿವೈಡೆರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ಗದಗ ತಾಲೂಕಿನ ಹುಲಕೋಟೆ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಮೊಹಮ್ಮದ್ ಜಾಯಿದ್ ಹಾಗೂ ಸಂಜೀವ್ ಗಡ್ಡಿ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡಂತಹ ಆಶಿಶ್ ಗೂಡೂರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಲಕೋಟೆಯಿಂದ ಗದಗಕ್ಕೆ ಬರುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಘಟನೆ ಕುರಿತಂತು ಹುಲಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈ ಕೊಟ್ಟಿದ್ದಾರೆ.
ಕಲಬುರ್ಗಿ : ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಪಕ್ಷ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ಸಚಿವ ಪ್ರಿಯಾಂಕ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ ಎಂದು ಕಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈಗಾಗಲೇ ಕಲಬುರ್ಗಿ ನಗರಕ್ಕೆ ರಾಜ್ಯ ಬಿಜೆಪಿ ನಾಯಕರು ಆಗಮಿಸಿದ್ದು ಕಲ್ಬುರ್ಗಿ ನಗರದಲ್ಲಿರುವ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಪ್ಲಾನ್ ಮಾಡಿದ್ದಾರೆ. ಆದರೆ ಇದಕ್ಕೆ ಕೌಂಟರ್ ಕೊಡಲು ಕಾಂಗ್ರೆಸ್ ಕಾರ್ಯಕರ್ತರು ಕೂಡ ಸಜ್ಜಾಗಿದ್ದು ಕಲಬುರ್ಗಿ ನಗರಕ್ಕೆ ಪ್ರತಿಭಟನೆ ಮಾಡಲು ಆಗಮಿಸಿದ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಕಾರ್ಯಕರ್ತರು ಎಳನೀರು, ಮಜ್ಜಿಗೆ, ಜ್ಯೂಸ್ ಹಾಗೂ ಚಹಾ ಕಾಫಿ ವ್ಯವಸ್ಥೆ ಮಾಡಿ ಕೌಂಟರ್ ನೀಡಲು ಸಜ್ಜಾಗಿದ್ದಾರೆ. ನಗರದ ಜಗತ್ ವಿರುದ್ಧ ದಿಂದ ಎಸ್ ವಿ ಪಿ ವಿರುದ್ಧದ ವರೆಗೆ ಬೃಹತ್ ಪ್ರತಿಭಟನೆ ನಡೆಯಲಿದೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಂಚಾರ ನಿರ್ಭಂಧಿಸಲಾಗಿದ್ದು, ಬೇರೆ ರಸ್ತೆ ಮೂಲಕ ತೆರಳುವಂತೆ ವಾಹನ ಸವಾರರಿಗೆ ಸೂಚನೆ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಈಗಾಗಲೇ ರೆಗ್ಯುಲರ್ ಬೇಲ್ ಸಿಕ್ಕಿದ್ದು, ಸದ್ಯ ಅವರು ತಮ್ಮ ಪತ್ನಿ, ಮಗ ಹಾಗೂ ಕುಟುಂಬದ ಸ್ನೇಹಿತರೊಂದಿಗೆ ಕಾಲ ಕಳೆಯುತ್ತಿದ್ದಾರೆ.ಅಲ್ಲದೆ ಸಂಕ್ರಾಂತಿ ಹಬ್ಬದ ವೇಳೆ ನಟ ದರ್ಶನ್ ಅವರು ಆಪರೇಷನ್ ಗೆ ಒಳಗಾಗುವ ಸಾಧ್ಯತೆಯಿದ್ದು ಈಗಾಗಲೇ ಆಪರೇಷನ್ ಮಾಡಿಸಿಕೊಳ್ಳುವ ಕುರಿತು ಗ್ರೀನ್ ಸಿಗ್ನಲ್ ನೀಡಿದ್ದಾರೆ. ನಟ ದರ್ಶನ್ ಗೆ ಆಪರೇಷನ್ ಮಾಡುವ ವೈದ್ಯರಾದಂತಹ ಅಜಯ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಆಪರೇಷನ್ ಗೆ ನಟ ದರ್ಶನ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸಂಕ್ರಾಂತಿ ಹಬ್ಬದ ವೇಳೆ ದರ್ಶನ್ ಆಪರೇಷನ್ ಫಿಕ್ಸ್ ಆಗಿದೆ. ಆಪರೇಷನ್ ಬಳಿಕ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ಒಂದುವರೆ ತಿಂಗಳುವರೆಗೂ ಫೈಟ್ ದೃಶ್ಯದಲ್ಲಿ ಭಾಗಿ ಆಗುವಂತೆ ಇಲ್ಲ ಆದರೆ ಕೇವಲ ಚಿತ್ರಿಕರಣದಲ್ಲಿ ಮಾತ್ರ ಭಾಗಿಯಾಗಬಹುದು. ಬಳಿಕ ಫೆಬ್ರವರಿಯಲ್ಲಿ ಚಿತ್ರೀಕರಣದಲ್ಲಿ ನಟ ದರ್ಶನ್ ಅವರು ಭಾಗಿಯಾಗಲಿದ್ದಾರೆ. ಚಿತ್ರೀಕರಣಕ್ಕೂ ಮುನ್ನ ಅವರು ಆಪರೇಷನ್ ಮಾಡಿಸಿಕೊಳ್ಳಲು ನಿರ್ಧಾರ ಕೈಗೊಂಡಿದ್ದಾರೆ. ಆಪರೇಷನ್ ಮಾಡಿಸಿಕೊಂಡು…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ನಿನ್ನೆ ತಡರಾತ್ರಿ ಭೀಕರವಾದಂತಹ ಕೊಲೆಯಾಗಿದ್ದು, ಜೆಡಿಎಸ್ ಮುಖಂಡನನ್ನು ದುಷ್ಕರ್ಮಿಗಳು ಲಾಂಗು ಮತ್ತು ಮಚ್ಚುಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ತಮ್ಮನಾಯಕನಹಳ್ಳಿ ಗೇಟ್ ಬಳಿ ನಡೆದಿದೆ. ಕೊಲೆಯಾದ ಜೆಡಿಎಸ್ ಮುಖಂಡನನ್ನು ವೆಂಕಟೇಶ್ (50) ಹತ್ಯೆಗೀಡಾದ ದುರ್ದೈವಿ ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ವೆಂಕಟೇಶ್ ತಮ್ಮ ಸ್ವಗ್ರಾಮ ತಮ್ಮನಾಯಕನಹಳ್ಳಿಯಿಂದ ಬೈಕ್ ನಲ್ಲಿ ಗೇಟ್ ಬಳಿಗೆ ಬಂದು ಮೆಡಿಕಲ್ ನಲ್ಲಿ ಔಷಧಿ ತೆಗೆದುಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಸುಮಾರು ನಾಲ್ಕೈದು ದುಷ್ಕರ್ಮಿಗಳು ಅವರ ಬೈಕ್ ಗೆ ಅಡ್ಡ ಹಾಕಿ ಅವರನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಮಚ್ಚು, ಲಾಂಗ್‌ಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿದ್ದಾರೆ. ಯಾರು ಹಾಗೂ ಯಾವ ಕಾರಣಕ್ಕಾಗಿ ವೆಂಕಟೇಶ್ ಅವರ ಕೊಲೆಯಾಗಿದೆ ಎಂಬುದು ತನಿಖೆ ಬಳಿಕ ಅಷ್ಟೇ ಗೊತ್ತಾಗಲಿದೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ.
ರಾಮನಗರ : ಹೊಸ ವರ್ಷಕ್ಕೆ ಎಂದು ಪಾರ್ಟಿ ಮಾಡಲು ತೆರಳಿದ್ದ ವ್ಯಕ್ತಿಯನ್ನು ಭೀಕರವಾಗಿ ಕೊಂದು ದುಷ್ಕರ್ಮಿಗಳು ಬಾವಿಗೆ ಎಸೆದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಳೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಚನ್ನಪಟ್ಟಣ ತಾಲೂಕಿನ ಮಳೂರು ಪಟ್ಟಣ ಗ್ರಾಮದ ವಾಟರ್ ಮನ್ ಮಧುಕುಮಾರ್ (31) ಎಂದು ಗುರುತಿಸಲಾಗಿದ್ದು, ಮಧು ಕುಮಾರ್ ನನ್ನು ಕೊಲೆಮಾಡಿ ಬಾವಿಗೆ ಎಸೆಯಲಾಗಿದೆ. ಜನವರಿ 1ರಂದು ಈ ಒಂದು ಕೊಲೆ ನಡೆದಿದ್ದು, ಎಂದು ತಡವಾಗಿ ಬೆಳಕಿಗೆ ಬಂದಿದೆ. ಹೊಸವರ್ಷದ ಪಾರ್ಟಿ ಮಾಡಲೆಂದು ಹೆಂಡತಿಯ ದೊಡ್ಡಪ್ಪನ ಮಗ ಸಾಗರ್ ಎಂಬಾತನ ಜೊತೆ ತೆರಳಿದ್ದ ಮಧು, ಎರಡು ದಿನವಾದರೂ ಮನೆಗೆ ಬಾರದ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲು ಮಾಡಲಾಗಿತ್ತು. ಶುಕ್ರವಾರ ಬೆಳಿಗ್ಗೆ ಕೊಡ್ಲೂರು ತೊರೆ ಬಳಿ ಬಾವಿಯಲ್ಲಿ ಶವ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.













