Author: kannadanewsnow05

ವಿಜಯಪುರ : ಮಹಾತ್ಮ ಗಾಂಧೀಜಿಯ ವಿರುದ್ಧ ವಿಜಯಪುರ ನಗರ ಉಚ್ಛಾಟಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಇದೀಗ, ವಿಜಯಪುರದ ಆದರ್ಶ ನಗರ ಪೊಲೀಸ್ ಠಾಣೆಗೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ನೀಡಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಗಾಂಧೀಜಿಯನ್ನು ಪಾಕಿಸ್ತಾನದ ಪಿತಾಮಹ ಎಂದಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇದೀಗ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದಾರೆ. ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಳೆದ ಮೇ 11ರಂದು ಮಹಾತ್ಮ ಗಾಂಧೀಜಿ ಕುರಿತಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಒಂದು ಹೇಳಿಕೆ ನೀಡಿದ್ದರು. ಭಾರತ ಇಬ್ಬಾಗ ಮಾಡಿದ್ದರ ಬಗ್ಗೆ ಯತ್ನಾಳ್ ಮಾತನಾಡುವ ವೇಳೆ ಮಹಾತ್ಮಾ ಗಾಂಧೀಜಿ ಪಾಕಿಸ್ತಾನದ ಪಿತಾಮಹ ಎಂದು ಹೇಳಿಕೆ ನೀಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರು ಇದೀಗ ವಿಜಯಪುರದ ಆದರ್ಶ ನಗರ ಪೊಲೀಸ್…

Read More

ಮೈಸೂರು : ಒಂದೆಡೆ ಸರ್ಕಾರ ಸಾಧನಾ ಸಮಾವೇಶ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸರ್ಕಾರ ಸಾಧನಾ ಸಮಾವೇಶ ಮಾಡುತ್ತಿದೆ ಇದರ ಮಧ್ಯ ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ರಾಜ್ಯ ಸಚಿವ ಸಂಪುಟ ಪುನಃ ರಚನೆ ಕುರಿತಂತೆ ಸುಳಿವು ನೀಡಿದ್ದಾರೆ. ಕಾಂಗ್ರೆಸ್ನ ಹಿರಿಯ ಶಾಸಕರಿಗೆ ಸಚಿವ ಸ್ಥಾನದ ವಿಚಾರವಾಗಿ ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮಾತನಾಡಿ, ಶಾಸಕರಿಗೆ ಸಚಿವರಾಗುವ ಆಸೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಕಾರ್ಯಕರ್ತರಿಗಂತು ಆ ಆಸೆ ಇದೆ. ನಮ್ಮ ನಾಯಕರು ಮಂತ್ರಿ ಆಗಬೇಕು ಎಂಬ ಆಸೆ ಇದೆ. ಶೀಘ್ರದಲ್ಲೇ ಪಕ್ಷದ ಕಾರ್ಯಕರ್ತರ ಆಸೆ ನೆರವೇರಲಿದೆ ಎಂದು ಸಂಪುಟ ಪುನಾರಚನೆಯ ಕುರಿತು ಶಾಸಕ ತನ್ವೀರ್ ಸೇಠ್ ಸುಳಿವು ನೀಡಿದ್ದಾರೆ.

Read More

ಬೆಂಗಳೂರು : ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆಗೆ ಕಮಿಟಿ ರಚನೆ ಮಾಡಲಾಗಿದೆ. ಪ್ರಗತಿ ಪರಿಶೀಲನೆಗೆ ರಚಿಸಿರುವ ಕಮಿಟಿ ಅಧ್ಯಕ್ಷ ನಾನು ಆಗಿರುತ್ತೇನೆ ಎಂದು ವಿಧಾನಸೌಧದಲ್ಲಿ ದಿಶಾ ಸಮಿತಿ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ದಿಶಾ ಸಮಿತಿ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಪುರಸ್ಕೃತ 67 ಯೋಜನೆಗಳಿವೆ. ಎಲ್ಲವನ್ನು ಪರಿಶೀಲಿಸಿದ್ದೇವೆ. ಈ ಕಾರ್ಯಕ್ರಮಗಳಿಗೆ ಕೇಂದ್ರ ಹಾಗೂ ರಾಜ್ಯದಿಂದ ಹಣ ಖರ್ಚಾಗುತ್ತದೆ. ಇದಕ್ಕಾಗಿ ಎರಡು ಸರ್ಕಾರಗಳು ಹಣ ಮೀಸಲಿಟ್ಟಿರುತ್ತವೆ. ಆಯಾ ಯೋಜನೆಗಳ ಮೇಲೆ ಹಣ ಡಿಸೈಡ್ ಆಗುತ್ತದೆ. ಕೆಲವೊಂದು ಯೋಜನೆಗೆ ಕೇಂದ್ರ 50 % ರಾಜ್ಯ 50% ಹಣ ಕೊಟ್ಟರೆ, ಕೆಲವೊಂದು ಯೋಜನೆಗಳಲ್ಲಿ 30 ಮತ್ತು 70 ಪರ್ಸೆಂಟ್ ಶೇರಿಂಗ್ ಇರುತ್ತದೆ. ಕೇಂದ್ರ ಸರ್ಕಾರ ಪ್ರಾಯೋಗಿಕ ಯೋಜನೆಗಳಿಗೆ. ರಾಜ್ಯ ಸರ್ಕಾರ ಒಟ್ಟು 46,856 ಕೋಟಿ ಹಣ ಖರ್ಚು ಮಾಡುತ್ತಿದೆ. ಕೇಂದ್ರ ಸರ್ಕಾರ ಖರ್ಚು ಮಾಡುತ್ತಿರುವುದು 22,785 ಕೋಟಿ ರೂಪಾಯಿ ಹಣ ಎಂದು ವಿಧಾನಸೌಧದಲ್ಲಿ ದಿಶಾ ಸಭೆಯ…

Read More

ದಕ್ಷಿಣಕನ್ನಡ : ವಿಧವೆ ಬಳಿ 5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಖಜಾನೆಯ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಖಜಾನೆ ಮುಖ್ಯ ಲೆಕ್ಕಿಗ ಹಾಗು FDA ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಧವೆಯಿಂದ 5000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೂರುದಾರ ಮಹಿಳೆಯ ಪತಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆಗಿದ್ದರು. ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯದರ್ಶಿಯಾಗಿದ್ದರು. 2023 ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿದ್ದು, ಮಹಿಳೆಯ ಪತಿ 2024 ಜೂನ್ ತಿಂಗಳಲ್ಲಿ ಮೃತಪಟ್ಟಿದ್ದಾರೆ. ಮುಖ್ಯ ಲೆಕ್ಕಿಗರ ಬಳಿ ಮರಣ ಉಪದಾನ ನೀಡುವಂತೆ ಕೇಳಿದ್ದಾರೆ. ಗಂಡನ ಮರಣ ಉಪದಾನ ನೀಡುವಂತೆ ವಿಧವೆ ಮಹಿಳೆ ಕೇಳಿದ್ದಾರೆ. ಎರಡು ಬಾರಿ ಖಜಾನೆಗೆ ಹೋಗಿ ವಿಚಾರಿಸಿದರೂ ಕೂಡ ಕೆಲಸ ಮಾಡಿಕೊಟ್ಟಿಲ್ಲ. ಹಣ ಜಮೆ ಮಾಡಲು ಖಜಾನೆಯ ಮುಖ್ಯ ಲೇಕ್ಕಿಗ ಭಾಸ್ಕರ್, ಹಾಗೂ ಎಫ್ಡಿಎ ಬಸವೇಗೌಡ 5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ವಿಧವೆ ಮಹಿಳೆ ಮಂಗಳೂರು ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದಾರೆ.…

Read More

ಇಸ್ಲಾಮಾಬಾದ್ : ಜಮ್ಮು ಕಾಶ್ಮೀರದಲ್ಲಿ ಏಪ್ರಿಲ್ 22ರಂದು ಪಹಲ್ಗಾಮ್ ನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿ, 26 ಅಮಾಯಕ ರನ್ನು ಬಲಿಪಡೆದಿದ್ದರು. ಇದಕ್ಕೆ ಪ್ರತಿಯಾಗಿ ಭಾರತ ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನದ ಮೇಲೆ ದಾಳಿ ಮಾಡಿ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದರು. ಇದೀಗ ಧ್ವಂಸವಾಗಿರೋ ಉಗ್ರರ ಅಡಗುತಾಣಗಳನ್ನು ಮತ್ತೆ ಕಟ್ಟಲು ಪಾಕಿಸ್ತಾನ್ ಹೆಚ್ಚಿಸುತ್ತಿದೆ ಎಂದು ತಿಳಿದು ಬಂದಿದೆ. ಭಯೋತ್ಪಾದಾಕರ ಬೆಂಬಲಕ್ಕೆ ಪಾಕಿಸ್ತಾನ ಸರಕಾರ ಇದೀಗ ನಿಂತಿದೆ. ಉಗ್ರರ ನೆಲೆಗಳು ಮತ್ತು ಉಗ್ರರ ಸಂಬಂಧಿಕರ ಮನೆಗಳನ್ನು ಪುನಃ ಕಟ್ಟಲು ಪಾಕಿಸ್ತಾನ ಯತ್ನಿಸುತ್ತಿದ್ದೆ. ಈಗಾಗಲೇ ಭಾರತ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ 11 ವಾಯು ನೆಲೆಗಳು ಸೇರಿದಂತೆ ಒಟ್ಟು ನೂರಕ್ಕೂ ಅಧಿಕ ಉಗ್ರರನ್ನು ಹತ್ಯೆಗೈದಿದೆ.

Read More

ಮೈಸೂರು : ಮೈಸೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, KSRTC ಬಸ್ ಒಂದು ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಮಂಚನಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಮೃತ ಕಾರು ಚಾಲಕನನ್ನು ಮೈಸೂರಿನ ಕನಕದಾಸ ನಗರದ ಸುನಿಲ್ (34) ಎಂದು ತಿಳಿದುಬಂದಿದೆ. ಸುನಿಲ್ ಮೂಲತಃ ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಎಂದು ತಿಳಿದು ಬಂದಿದೆ ಇನ್ನು ಕಾರಿನಲ್ಲಿ ಇದ್ದ ಮತ್ತೊರ್ವ ರಮೇಶ್ ಎನ್ನುವವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರುನಿಂದ ಕಾರು ಹಾಸನದ ಕಡೆಗೆ ತೆರಳುತ್ತಿತ್ತು. ಹಾಗೆಯೇ ಚಿಕ್ಕಮಗಳೂರಿನಿಂದ ಮೈಸೂರು ಕಡೆಗೆ ಕೆಎಸ್ಆರ್ಟಿಸಿ ಬಸ್ ಚಲಿಸುತ್ತಿತ್ತು.ಈ ವೇಳೆ ಈ ಒಂದು ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದಿಶಾ ಸಮಿತಿಯ ಸಭೆ ನಡೆಯಿತು. ಈ ಒಂದು ಪ್ರಮುಖ ಸಭೆಯಲ್ಲಿ ಕೇಂದ್ರ ಸರ್ಕಾರದಿಂದ ಬರುವ ಪಿಂಚಣಿ, 15ನೇ ಹಣಕಾಸಿನ ಆಯೋಗ ಸೇರಿದಂತೆ ಹಲವು ವಿಷಯಗಳ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚಿಸಿದರು. ರಾಜ್ಯಮಟ್ಟದ ದಿಶಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರ ಮಾತುಗಳು ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಈವರೆಗೆ ಕೇಂದ್ರದಿಂದ ಹಣ ಬರಲಿಲ್ಲ. ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ? 15 ನೇ ಹಣಕಾಸು ಆಯೋಗದಲ್ಲಿ 5,495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11,495 ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡುತ್ತಿಲ್ಲ. ನಾವು ರಾಜ್ಯದಿಂದ 4.5…

Read More

ನವದೆಹಲಿ : ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಹಾಗೂ ಸಿಬಿಐ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಜುಲೈಗೆ ಮುಂದೂಡಿ ಆದೇಶಿಸಿದೆ. ಸುಪ್ರೀಂ ಕೋರ್ಟ್ ನಲ್ಲಿ ಸಿಬಿಐ ಪರವಾಗಿ ಎ ಎಸ್ ಜಿ ಎಸ್. ವಿ ರಾಜು ಅವರು ವಾದ ಮಂಡಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ರಾಜಕೀಯವಾಗಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟದ ಭಾಗವಾಗಿದ್ದಾರೆ. ಭ್ರಷ್ಟಾಚಾರ ಪ್ರಕರಣ ಹೊರ ಬಿದ್ದಿದೆ. ಅಧಿಕಾರದ ದುರುಪಯೋಗ ಇಲ್ಲಿ ಒಂದು ಸಮಸ್ಯೆಯಾಗಿದೆ ಎಂದು ಸುಪ್ರೀಂ ಕೋರ್ಟ್ ನಲ್ಲಿ ಸಿಬಿಐ ಪರವಾಗಿ ಎಎಸ್ಜಿ ಎಸ್ ವಿ ರಾಜು ಅವರು ವಾದ ಮಂಡಿಸಿದರು. ಬಳಿಕ ಡಿಕೆ ಶಿವಕುಮಾರ್ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘವಿ ಅವರು ವಾದ ಮಂಡಿಸಿ ವಿಷಯ ನ್ಯಾಯ ವ್ಯಾಪ್ತಿಗೆ ಒಳಪಟ್ಟಿದೆ. ರಿಟ್ ಅರ್ಜಿ ಉಳಿಸಿಕೊಳ್ಳಲಾಗುವುದಿಲ್ಲ ಎಂದು…

Read More

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಎಂದು ಹೇಳಿ ಚಿನ್ನಾಭರಣ ವಂಚನೆ ಎಸಗಿದ್ದ ಐಶ್ವರ್ಯಗೌಡ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕಾಯಿದೆಯಡಿ ED ಜಾರಿ ಮಾಡಿರುವ ಸಮನ್ಸ್ ಪ್ರಶ್ನಿಸಿ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಏಪ್ರಿಲ್ 24 ಮತ್ತು 25ರಂದು ತಮ್ಮ ವಿರುದ್ಧ ನಡೆಸಿರುವ ಶೋಧ ಕಾರ್ಯಾಚರಣೆ, ಜಪ್ತಿ ಹಾಗೂ ಪಿಎಂಎಲ್ಎ ಕಾಯಿದೆ ಸೆಕ್ಷನ್​ 17ರ ಅಡಿ ಹೇಳಿಕೆ ದಾಖಲಿಸಿಕೊಂಡಿರುವುದು ಕಾನೂನುಬಾಹಿರ ಎಂದು ಘೋಷಿಸುವಂತೆ ಕೋರಿ ವಿನಯ್ ಕುಲಕರ್ಣಿ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರಿದ್ದ ರಜಾಕಾಲೀನ ಏಕಸದಸ್ಯ ಪೀಠ ನಡೆಸಿತು. ED ಪರ ವಕೀಲರು, ED ಸಮನ್ಸ್ ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್‌ಗೆ ವಿಭಾಗೀಯ ಪೀಠ ಆದೇಶಿಸಿದೆ. ಪಿಎಂಎಲ್ಎ ಅಡಿ ತನಿಖೆ ಮುಂದುವರಿಸಲು ಮುಖ್ಯ ನ್ಯಾಯಮೂರ್ತಿಗಳ ಪೀಠವು ಸ್ವಾತಂತ್ರ್ಯ ಕಲ್ಪಿಸಿದೆ. ಹೀಗಾಗಿ, ಮಧ್ಯಂತರ ಪರಿಹಾರ ನೀಡುವುದನ್ನು ಪರಿಗಣಿಸುವುದಾದರೆ ನಮ್ಮ ವಾದವನ್ನು ಆಲಿಸಬೇಕು. ವಿನಯ್…

Read More

ಬೆಂಗಳೂರು : ಜಮ್ಮು ಕಾಶ್ಮೀರದ ಹಲ್ಗಾಂನಲ್ಲಿ ಉಗ್ರರ ದಾಳಿಗೆ 26 ಅಮಾಯಕರು ಬಲಿಯಾಗಿದ್ದಾರೆ. ಇದಕ್ಕೆ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪ್ರತಿಕಾರ ತೀರಿಸಿಕೊಂಡಿದೆ. ಅದಾದ ಮೇಲೆ ನಮ್ಮಲ್ಲೆ ಕಲಾ ಕಿಡಿಗೇಡಿಗಳು ಪಾಕಿಸ್ತಾನದ ಪರವಾಗಿ ಕೋಡಿಯ ಮೇಲೆ ಬರಹ ಬರೆಯುವುದು ಪಾಕಿಸ್ತಾನದ ಪರ ಘೋಷಣೆ ಕೂಗುವುದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವುದು ನಡೆದಿತ್ತು. ಇದೀಗ ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಶಿವಕುಮಾರ್ ಗುಣಾರೆ ಅವರು ಪ್ರತಿಕ್ರಿಯೆ ನೀಡಿ, ವೈಟ್ ಫೀಲ್ಡ್ ವ್ಯಾಪ್ತಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರ ಕುರಿತು ನಮಗೆ ರಾತ್ರಿ 11 ಗಂಟೆಗೆ ಕರೆ ಮಾಡಿ ದೂರು ನೀಡಲಾಗಿದೆ. ದೂರು ಆಧರಿಸಿ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ. ಛತ್ತೀಸ್ಗಡ ಮೂಲದ ಆರೋಪಿ ಪಿಜಿಯಲ್ಲಿ ನೆಲೆಸಿದ್ದ. ಬಂಧಿತ ಆರೋಪಿ ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಪಿಜಿ ಗ್ಯಾಲರಿಯಲ್ಲಿದ್ದ ಇಬ್ಬರ ಪೈಕಿ ಓರ್ವ ಪಾಕಿಸ್ತಾನದ ಪರವಾಗಿ ಘೋಷಣೆ…

Read More