Author: kannadanewsnow05

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೇಗೂರಿನ ಅಪಾರ್ಟ್​​ಮೆಂಟ್​​ ಒಂದರಲ್ಲಿ ಶೌಚಗುಂಡಿ ಸ್ವಚ್ಛಗೊಳಿಸುವಾಗ ಅಸ್ಥಿಪಂಜರ ಪತ್ತೆಯಾಗಿದೆ. ಎಂಎನ್ ಕ್ರೆಡೆನ್ಸ್ ಫ್ಲೋರಾ ಅಪಾರ್ಟ್‌ಮೆಂಟ್ಸ್‌ನ ಬಳಿ ಮೂಳೆಗಳು ಮತ್ತು ತಲೆಬುರುಡೆ ಸಿಕ್ಕಿವೆ. ಇದೀಗ ಈ ಒಂದು ಅಸ್ತಿಪಂಜರ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದು ಪುರುಷನ ಅಸ್ತಿ ಪಂಜರವಾಗಿದೆ ಎಂದು ತಿಳಿದುಬಂದಿದೆ. ಹೌದು ಜೂನ್ 20 ರಂದು ಕಾರ್ಮಿಕರು ಶೌಚಗುಂಡಿ ಸ್ವಚ್ಛ ಮಾಡುವಾಗ ಮೂಳೆಗಳು ಮತ್ತು ತಲೆಬುರುಡೆ ಸಿಕ್ಕಿವೆ. ಇದು ಮನುಷ್ಯನ ಅಸ್ಥಿಪಂಜರವೋ ಅಥವಾ ಪ್ರಾಣಿಯದೋ ಎಂದು ತಿಳಿಯಲು ಪೊಲೀಸರು ಎಫ್‌ಎಸ್‌ಎಲ್ ಲ್ಯಾಬ್‌ಗೆ ಕಳುಹಿಸಿದ್ದರು. ಇದೀಗ ಇಂಗು ಗುಂಡಿಯಲ್ಲಿ ಪತ್ತೆಯಾಗಿರುವುದು ಪುರುಷನ ಅಸ್ತಿಪಂಜರ ಎಂದು ತಿಳಿದುಬಂದಿದೆ. ಸುಮಾರು 153 ಸೆಂಟಿಮೀಟರ್ ಉದ್ದವುಳ್ಳ 30 ರಿಂದ 35 ವರ್ಷದ ವ್ಯಕ್ತಿ ಅಸ್ತಿ ಪಂಜರ ಪತ್ತೆಯಾಗಿದೆ. ಪ್ರಾಥಮಿಕ ಪರೀಕ್ಷೆಯಲ್ಲಿ ಕೊಲೆ ಶಂಕೆ ಇಲ್ಲ ಎಂದು ವರದಿ ಬಂದಿದೆ. ಅಷ್ಟೇ ಅಲ್ಲದೇ ಪಂಜರದ ಮೇಲೆ ಯಾವುದೇ ಗಾಯದ ಗುರುತು ಪತ್ತೆಯಾಗಿಲ್ಲ. ಹೀಗಾಗಿ ವ್ಯಕ್ತಿ ಆಯತಪ್ಪಿ ಇಂಗು ಗುಂಡಿಗೆ ಬಿದ್ದು…

Read More

ಬೆಂಗಳೂರು : ರಾಜ್ಯದಲ್ಲಿ ಹೃದಯಘಾತದಿಂದ ಸಾವನ್ನುಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ. ಇಂದು ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಹಾಸನದಲ್ಲಿ ಇಬ್ಬರು, ಬಳಿಕ ಶಿವಮೊಗ್ಗ, ದಕ್ಷಿಣ ಕನ್ನಡ, ತುಮಕೂರು, ಹಾಗು ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಆರು ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಇದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಮದುವೆಯಾದ ಎರಡೇ ತಿಂಗಳಿಗೆ ಯುವಕ ಸಾವು! ಹಾಸನ ಜಿಲ್ಲೆಯ ಸೋಮನಹಳ್ಳಿಯ ಸಂಜಯ್ (25) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ಎದೆನೋವು ಎಂದು ಆಸ್ಪತ್ರೆಗೆ ಹೋಗಿದ್ದರು.ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಿದ್ದರು. ಈ ವೇಳೆ ಬೇರೆ ಆಸ್ಪತ್ರೆಗೆ ಹೋಗುವಾಗ ಮೃತಪಟ್ಟಿದ್ದಾರೆ. ಸಂಜಯ್ ಕಳೆದ ಎರಡು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿತ್ತು ಇದೀಗ ಇವರ ಸಾವಿನಿಂದ ಸಂಜೆ ಕುಟುಂಬಸ್ಥರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಒಂದುವರೆ ತಿಂಗಳ ಬಾಣಂತಿ ಬಲಿ! ಇನ್ನು ಇದೆ ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಒಂದೂವರೆ ತಿಂಗಳ ಬಾಣಂತಿ ಸಾವನನಪ್ಪಿದ್ದಾರೆ. ಬಾಣಂತನಕ್ಕೆ ಆಯನೂರು…

Read More

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳು ಆಗುತ್ತಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ತೀವ್ರ ಕಳವಳ ವ್ಯಕ್ತಪಡಿಸಿದ್ದಾ. ಈ ಪ್ರಕರಣ ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ಹಾಸನದಲ್ಲಿ ಕಳೆದ 40 ದಿನಗಳಲ್ಲಿ ಇವತ್ತಿನವರೆಗೂ ಒಟ್ಟು 25 ಜನರು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಗಾಗಿ ಇದಕ್ಕೆ ನಿಖರ ಕಾರಣ ಪತ್ತೆ ಹಚ್ಚಲು ಈಗಾಗಲೇ ತಜ್ಞರ ಸಮಿತಿ ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಸಮಾಜಿಕ ಜಾಲತಾಣ X ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ದಿನದಿಂದ ದಿನಕ್ಕೆ ಹಲವಾರು ಬೆಳವಣಿಗೆಗಳು ಆಗುತ್ತಿದ್ದು, ನಿನ್ನೆ ರಾಜ್ಯಕ್ಕೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಭೇಟಿ ನೀಡಿದ್ದು, ರಾಜ್ಯದ ಹಲವು ಕಾಂಗ್ರೆಸ್ ಶಾಸಕರ ಕುಂದುಕೊರತೆಗಳನ್ನು ತಿಳಿದುಕೊಳ್ಳಲು ಆಗಮಿಸಿದ್ದಾರೆ. ಇದರ ಮಧ್ಯ ಬಿಆರ್ ಪಾಟೀಲ್ ಅವರ ಮಾತನಾಡಿರುವ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಸಿದ್ದರಾಮಯ್ಯ ಅದೃಷ್ಟವಂತ ಅದಕ್ಕೆ ಸಿಎಂ ಆದ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ. ಅದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಿ ಆರ್ ಪಾಟೀಲ್ ಅವರು ಸಿದ್ದರಾಮಯ್ಯ ಅದೃಷ್ಟವಂತ ಅದಕ್ಕೆ ಸಿಎಂ ಆದ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹೌದು ನಾನು ಅದೃಷ್ಟವಂತ ಹಾಗಾಗಿಯೇ ಸಿಎಂ ಆಗಿದ್ದೇನೆ ಎಂದು ಬಿಆರ್ ಪಾಟೀಲ್ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾನು ಮತ್ತು ಬಿ ಆರ್ ಪಾಟೀಲ್ ಒಟ್ಟಿಗೆ ಎಂಎಲ್ಎ ಆಗಿದ್ವಿ.ಅದಕ್ಕಾಗಿ ಬಿ.ಆರ್ ಪಾಟೀಲ್ ಹೇಳಿರಬಹುದು ನಾನು ಏನು ಆಗಿಲ್ಲ ಎಂಬ ಬಿ ಆರ್ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಅದಕ್ಕೆ…

Read More

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದಿಲ್ಲ ಈ ಅಭಿಪ್ರಾಯ ಸಂಗ್ರಹಕ್ಕೆ ನಾವು ಮುಂದಾಗಿಲ್ಲ ಶಾಸಕರು ಬಹಿರಂಗವಾಗಿ ಕೆಲವರು ಮಾತನಾಡಿದ್ದಾರೆ ಪಕ್ಷದ ಚೌಕಟ್ಟಿದೆ ಅಲ್ಲೇ ಅಭಿಪ್ರಾಯ ಹಂಚಿಕೊಳ್ಳಬೇಕು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸ್ಪಷ್ಟನೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮಾತನಾಡಿ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಅಭಿಪ್ರಾಯ ಸಂಗ್ರಹ ಮಾಡಿಲ್ಲ. ಪಕ್ಷದ ಶಾಸಕರ ರಿಪೋರ್ಟ್ ಕಾರ್ಡ್ ಪಡೆಯುತ್ತಿದ್ದೇನೆ. 2 ವರ್ಷದಿಂದ ಕ್ಷೇತ್ರದಲ್ಲಿ ಏನು ಕೆಲಸ ಮಾಡಿದ್ದಾರೆಂಬ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಕಮಿಟಿ, ಅಸೆಂಬ್ಲಿ ಕಮಿಟಿಯ ಸಂಘಟನೆ ಹೇಗಿದೆ ಎಂಬುದಾಗಿಯೂ ವಿವರ ಪಡೆಯುತ್ತಿದ್ದೇನೆ. ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆ, ಬೇಡಿಕೆಗಳ ಬಗ್ಗೆಯೂ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಮುಂಚೂಣಿ ಘಟಕಗಳ ಕಾರ್ಯದ ಬಗ್ಗೆಯೂ ಮಾಹಿತಿ ಪಡೆಯುತ್ತಿದ್ದೇನೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಕೂಲತೆ ಬಗ್ಗೆ ಮಾಹಿತಿ, ಜನರ ಬದುಕು ಹೇಗೆ ಬದಲಾಯಿಸುತ್ತಿದೆ ಎಂಬ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದರು.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರುರಾಜ್ಯಕ್ಕೆ ಭೇಟಿ ನೀಡಿದ್ದು, ಶಾಸಕರ ಕುಂದು ಕೊರತೆಗಳನ್ನು ಆಲಿಸಲು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಹಲವು ಶಾಸಕರು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದಾರೆ ಈ ವಿಚಾರವಾಗಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕರ ವಿರುದ್ಧ ಗರಂ ಆಗಿದ್ದು ಯಾರೂ ಮಧ್ಯಮಗಳ ಮುಂದೆ ಹೋಗ್ಬಾರ್ದು ಎಂದು ಖಡಕ್ ವಾರ್ನಿಂಗ್ ಕೊಟ್ಟಿದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದಲ್ಲಿ ಯಾವ ನಾಯಕತ್ವ ಕೂಡ ಬದಲಾವಣೆ ಇಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸುತ್ತೇವೆ. ಮುಖ್ಯಮಂತ್ರಿ ಸ್ಥಾನದ ಕುರಿತು ಮಾತನಾಡಿರುವ ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್ ಕೊಡುತ್ತೇವೆ. ಅಲ್ಲದೇ ಶಾಸಕರಾದ ಬಿ.ಆರ್ ಪಾಟೀಲ್ ಇರಲಿ HC ಬಾಲಕೃಷ್ಣ ಯಾರೇ ಆಗಿರಲಿ ಮಾಧ್ಯಮಗಳ ಮುಂದೆ ಹೋಗಬಾರ್ದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾರ್ನಿಂಗ್ ನೀಡಿದ್ದಾರೆ.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಭೇಟಿ ನೀಡಿದ್ದು ಶಾಸಕರ ಕುಂದು ಕೊರತೆಗಳನ್ನು ಆಲಿಸಲು ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಇದರ ಬೆನ್ನಲ್ಲೇ ಕಾಂಗ್ರೆಸ್ ಹಲವು ಶಾಸಕರು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದಾರೆ ಈ ವಿಚಾರವಾಗಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕರ ವಿರುದ್ಧ ಗರಂ ಆಗಿದ್ದು ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದಲ್ಲಿ ಯಾವ ನಾಯಕತ್ವ ಕೂಡ ಬದಲಾವಣೆ ಇಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸುತ್ತೇವೆ. ಮುಖ್ಯಮಂತ್ರಿ ಸ್ಥಾನದ ಕುರಿತು ಮಾತನಾಡಿರುವ ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್ ಕೊಡುತ್ತೇವೆ. ಅಲ್ಲದೇ ಶಾಸಕರಾದ ಬಿ.ಆರ್ ಪಾಟೀಲ್ ಇರಲಿ HC ಬಾಲಕೃಷ್ಣ ಯಾರೇ ಆಗಿರಲಿ ಮಾಧ್ಯಮಗಳ ಮುಂದೆ ಹೋಗಬಾರ್ದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾರ್ನಿಂಗ್ ನೀಡಿದ್ದಾರೆ.

Read More

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಶಾಸಕರು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕುತ್ತಿದ್ದಾರೆ ಅದರಲ್ಲೂ ಕಲಬುರ್ಗಿ ಜಿಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿ.ಆರ್ ಪಾಟೀಲ್ ವಸತಿ ಯೋಜನೆಯಲ್ಲಿನ ಭ್ರಷ್ಟಾಚಾರ ಕುರಿತು ಸ್ವಪಕ್ಷದ ವಿರುದ್ಧವೇ ಆಕ್ರೋಶ ಹೊರಹಾಕಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ಬಿ ಆರ್ ಪಾಟೀಲ್ ದೂರು ನೀಡಿದ್ರಾ? ಎನ್ನುವ ಸುದ್ದಿ ಹರಿದಾಡುತ್ತಿದ್ದು ಈ ಕುರಿತು ಬಿಆರ್ ಪಾಟೀಲ್ ಮಾತನಾಡಿರುವ ಮತ್ತೊಂದು ವಿಡಿಯೋ ವೈರಲಾಗಿದೆ. ಹೌದು ಸಿದ್ದರಾಮಯ್ಯ ವಿರುದ್ಧವೇ ಶಾಸಕ ಬಿಆರ್ ಪಾಟೀಲ್ ದೂರು ನೀಡಿದ್ರಾ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಬಿ ಆರ್ ಪಾಟೀಲ್ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಕೆ.ಆರ್ ಪೇಟೆಗೆ ಬಂದಿದ್ದಾಗ ಶಾಸಕ ಬಿ.ಆರ್ ಪಾಟೀಲ್ ಅವರು l ಯಾರದ್ದೋ ಜೊತೆಗೆ ಫೋನಲ್ಲಿ ಮಾತನಾಡುವಾಗ ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದೆ. ಸಿದ್ದರಾಮಯ್ಯಗೆ ಸೋನಿಯಾ ಗಾಂಧಿಗೆ ಮೊದಲು ಭೇಟಿ ಮಾಡಿಸಿದ್ದೆ ನಾನು. ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ ಎಂದು ಹೇಳಿದ್ದಾರೆ. ಮುಂದುವರೆದು ಸಿದ್ದರಾಮಯ್ಯನ…

Read More

ಬೆಂಗಳೂರು : ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, 18ನೇ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಈ ಒಂದು ಕಾರ್ಯಕ್ರಮದಲ್ಲಿ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು ಬಳಿಕ ರಾಜ್ಯ ಸರ್ಕಾರ ಬೆಂಗಳೂರು ಕಮಿಷನರ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಆದೇಶ ಹೊರಡಿಸಿದೆ. ನ್ಯಾ.ಬಿ ಕೆ ಶ್ರೀನಿವಾತ್ಸವ ಹಾಗು ನ್ಯಾ. ಸಂತೋಷ ಮೆಹ್ರಾ ಅವರಿದ್ದ ಪೀಠ ಈ ಕುರಿತು ಆದೇಶ ಹೊರಡಿಸಿದೆ. ಹಿಂದಿನ ಎಲ್ಲಾ ಭತ್ಯೆ ಮತ್ತು ಸೌಲಭ್ಯ ಒದಗಿಸಲು ಆದೇಶ ಹೊರಡಿಸಲಾಗಿದೆ. ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ ಚಿನ್ನಪ್ಪ ವಾದಿಸಿದ್ದರು. ಅಮಾನತು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇದೀಗ ಆದೇಶ ಹೊರಡಿಸಿದೆ. 3 ರಿಂದ 5 ಲಕ್ಷ ಜನ ಸೇರಲು ಆರ್‌ಸಿಬಿಎ ಕಾರಣ. ಕಾರ್ಯಕ್ರಮಕ್ಕೆ ಪೊಲೀಸರ…

Read More

ಬೆಳಗಾವಿ : ಬೆಳಗಾವಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಆಟೋದಲ್ಲೆ ನೇಣು ಬಿಗಿದುಕೊಂಡು ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳನ್ನು ರಾಘವೇಂದ್ರ ಜಾಧವ್ (28) ಹಾಗು ರಂಜಿತಾ (26) ಎಂದು ತಿಳಿದುಬಂದಿದೆ. ಪ್ರಿಯತಮ ತಾನು ಓಡಿಸುತ್ತಿದ್ದ ಆಟೋದಲ್ಲಿಯೇ ಪ್ರಿಯತಮೆಯ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನ ಮನುವಳ್ಳಿ ಪಟ್ಟಣದ ರಾಘವೇಂದ್ರ ಮತ್ತು ರಂಜಿತ ಆತ್ಮಹತ್ಯೆಗೆ ಶರಣಾಗಿರುವ ಪ್ರೇಮಿಗಳು ಎಂದು ತಿಳಿದುಬಂದಿದೆ. ರಾಘವೇಂದ್ರ ಮತ್ತು ರಂಜಿತಾ ಆಟೋದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಘವೇಂದ್ರ ಮತ್ತು ರಂಜಿತ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರವಾಗಿ ಪ್ರೀತಿಸುತ್ತಿದ್ದ ವಿಚಾರ ತಿಳಿದು ಮದುವೆಗೆ ಮನೆಯಲ್ಲಿ ಒಪ್ಪದ ಹಿನ್ನೆಲೆ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಳದಿ ಕಳೆದ 15 ದಿನಗಳ ಹಿಂದೆ ರಂಜಿತಾಗೆ ಬೇರೊಬ್ಬನ ಜೊತೆಗೆ ನಿಶ್ಚಿತಾರ್ಥ ಕೂಡ ಆಗಿತ್ತು ಎಂದು ತಿಳಿದು ಬಂದಿದೆ ಹಾಗಾಗಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.…

Read More