Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ಆಡಳಿತಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಪಕ್ಷ ಜನರ ಸಮಸ್ಯೆಯನ್ನು ಆಲಿಸಲು ಜನಸ್ಪಂದನ ಕಾರ್ಯಕ್ರಮ ಆರಂಭಿಸಿತ್ತು. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಒಂದು ದಿನ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದು ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎರಡನೇ ಹಂತದ ಜನಸ್ಪಂದನ ಕಾರ್ಯಕ್ರಮ ಇಂದು ನಡೆಸಲಿದ್ದಾರೆ. ಈಗಾಗಲೇ ಒಂದನೇ ಹಂತದಲ್ಲಿ ದಿನಸ್ಪಂದನ ಕಾರ್ಯಕ್ರಮ ನಡೆಸಿರುವ ಡಿಸಿಎಂ ಡಿಕೆ ಶಿವಕುಮಾರ್, ಇಂದಿನಿಂದ ಎರಡನೇ ಹಂತದ ಜನ ಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದು, ವಲಯವಾರು ಜನಸ್ಪಂದನಾ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿಗೆ ಶಿವಕುಮಾರ್ ನಡೆಸುತ್ತಿದ್ದಾರೆ. ಅದೇ ರೀತಿಯಾಗಿ ಇಂದು ಬೊಮ್ಮನಹಳ್ಳಿ ವಲಯದಲ್ಲಿ ಡಿಕೆ ಶಿವಕುಮಾರ್ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದ್ದಾರೆ. ಜರಗನಹಳ್ಳಿಯ ಸರ್ಕಾರಿ ಶಾಲೆಯ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಇಂದು ಬೆಳಿಗ್ಗೆ 9:30ಕ್ಕೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ಆರಂಭವಾಗಲಿದೆ ಸ್ಥಳೀಯ ಜನರಿಂದ ಉಪಮುಖ್ಯಮಂತ್ರಿ ಎ ಡಿ ಕೆ ಶಿವಕುಮಾರ್ ಅ ಹವಾಲು ಸ್ವೀಕರಿಸಲಿದ್ದಾರೆ ಜನಸ್ಪಂದನ ಕಾರ್ಯಕ್ರಮದಲ್ಲಿ…
ಬೆಂಗಳೂರು : ದೆಹಲಿಯಲ್ಲಿ ಸಚಿವರ ಜೊತೆ ಹೈಕಮಾಂಡ್ ನಾಯಕರ ಸಭೆ ಹಿನ್ನೆಲೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕಾಂಗ್ರೆಸ್ ಸಚಿವರು ದೆಹಲಿಗೆ ತೆರಳಿದ್ದಾರೆ. ಸಚಿವರಾದ ಜಮೀರ್ ಅಹ್ಮದ್ ಖಾನ್, ಕೆ ಎನ್ ರಾಜಣ್ಣ ಹಾಗೂ ಆರ್ಬಿ ತಿಮಾಪೂರ ಪ್ರಯಾಣ ಬೆಳೆಸಿದ್ದಾರೆ. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ ಏನ್ ರಾಜಣ್ಣ ಚುನಾವಣೆಗು ಮುನ್ನ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಿದರೆ ಒಳ್ಳೆಯದಾಗುತ್ತದೆ ಎಂದು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ತೆರಳುವ ಮುಂಚೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೂ ಮುನ್ನ ಹೆಚ್ಚುವರಿ ಡಿಸಿಎಂ ಮಾಡಿದ್ರೆ ಒಳ್ಳೆಯದಾಗುತ್ತದೆ. ಈಗಾಗಲೇ ಆ ಬಗ್ಗೆ ಹೈಕಮಾಂಡ್ಗೆ ಸಲಹೆಯನ್ನು ನೀಡಿದ್ದೇವೆ.ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ವರಿಷ್ಠರು 28 ಕ್ಷೇತ್ರಗಳ ಉಸ್ತುವಾರಿ ಸಚಿವರ ಸಭೆಯನ್ನು ಕರೆದಿದ್ದಾರೆ.28 ಕ್ಷೇತ್ರಗಳ ಉಸ್ತುವಾರಿ ಸಚಿವರು ಸಭೆಯಲ್ಲಿ ಭಾಗವಹಿಸುತ್ತಾರೆ ಎಂದು ಸಚಿವರು ತಿಳಿಸಿದರು. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರು ವಿಚಾರವಾಗಿ ಮಾತನಾಡಿದ…
ಧಾರವಾಡ: ಸೇನೆಯಲ್ಲಿ ನರ್ಸಿಂಗ್ ಸೇವೆಗೆ ಮಹಿಳೆಯರಿಗೆ ಮಾತ್ರ ಅವಕಾಶ ಕಲ್ಪಿಸಿದ್ದ ಭಾರತೀಯ ಮಿಲಟರಿ ನರ್ಸಿಂಗ್ ಸೇವೆಗಳ ಸುಗ್ರೀವಾಜ್ಞೆ 1943ರ ಸೆಕ್ಷನ್ 6 ರಲ್ಲಿದ್ದ ‘ಮಹಿಳೆಯಾಗಿದ್ದರೆ’ ಎಂಬ ಪದವನ್ನು ಅಸಾಂವಿಧಾನಿಕ ಎಂದು ಹೈಕೊರ್ಟ್ ಘೋಷಣೆ ಮಾಡಿದೆ. ಈ ರೀತಿಯ ಮೀಸಲಾತಿ ನೀಡುವುದು ಸಂವಿಧಾನದ ಪರಿಚ್ಛೇದ 14(ಸಮಾನತೆ), 16(2) (ಲಿಂಗ ತಾರತಮ್ಯ) ಹಾಗೂ 21 (ಜೀವ ಮತ್ತು ವ್ಯಕ್ತಿ ಸ್ವಾತಂತ್ರ್ಯದ ಹಕ್ಕು) ಉಲ್ಲಂಘಿಸಿದಂತಾಗಲಿದೆ ಎಂದು ಧಾರವಾಡ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು, 81 ವರ್ಷಗಳ ಹಳೆಯ ಕಾನೂನನ್ನು ರದ್ದುಗೊಳಿಸಿ ಆದೇಶಿಸಿದೆ. ಹುಬ್ಬಳ್ಳಿಯ ಕೆಎಲ್ಇ ನರ್ಸಿಂಗ್ ಸಂಸ್ಥೆಯ ಪ್ರಾಂಶುಪಾಲ ಹಾಗೂ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಂಜಯ್ ಎಂ ಪೀರಾಪುರ, ಕರ್ನಾಟಕ ಶುಶೂಷಕರ ಸಂಘ ಮತ್ತಿತರರು ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಧಾರವಾಡದ ನ್ಯಾಯಪೀಠ ಈ ಆದೇಶ ನೀಡಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು1943ರಲ್ಲಿ ಸುಗ್ರೀವಾಜ್ಞೆಯನ್ನು ಜಾರಿ ಮಾಡಿದ್ದರು. ಅದನ್ನು ಸಂವಿಧಾನದ ಅಡಿಯಲ್ಲಿ ಅಳವಡಿಸಿಕೊಂಡು ರಾಷ್ಟ್ರಪತಿಗಳು ಒಪ್ಪಿಗೆ ನೀಡಿದ್ದಾರೆ. ಆದರೆ, ಈ…
ತುಮಕೂರು : ತುಮಕೂರಿನಲ್ಲಿ ಅಘಾತಕಾರಿ ಘಟನೆಯೊಂದು ನಡೆದಿದ್ದು, 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ವಿದ್ಯಾರ್ಥಿನಿಯು ಹಾಸ್ಟೆಲ್ನಲ್ಲಿಓದುತ್ತಿದ್ದಳು. ಈ ವೇಳೆ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತು ಮಾಡಲಾಗಿದೆ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಿವಾಸಿಯಾಗಿರುವ ಬಾಲಕಿ ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಸದ್ಯ ಈಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಹೊಟ್ಟೆ ನೋವಿನಿಂದ ತಾಯಿಯ ಜೊತೆಗೆ ಬಾಗೆಪಲ್ಲಿ ಆಸ್ಪತ್ರೆಗೆ ತೆರಳಿದ್ದಾಗಿ ಪ್ರಕರಣ ಬೆಳಕಿಗೆ ಬಂದಿದೆ. ಆಸ್ಪತ್ರೆ ಸಿಬ್ಬಂದಿ ಸ್ಕ್ಯಾನಿಂಗ್ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಸ್ಥಳೀಯ ಯುವಕನ ಜೊತೆ ಬಾಲಕಿ ಲೈಗಿಂಕ ಸಂರ್ಪಕದಲ್ಲಿದ್ದಳು ಎನ್ನಲಾಗುತ್ತಿದೆ. ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ತವ್ಯಲೋಪದಡಿ ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು…
ಹಾಸನ : ಕಳೆದ ನವೆಂಬರ್ 23ರಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದವಳೆಕಟ್ಟೆ ಅರಣ್ಯ ವಲಯ ಪ್ರದೇಶದಲ್ಲಿ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆ ವೇಳೆಯಲ್ಲಿ ದಸರಾ ಆನೆ ಅರ್ಜುನ ಹೋರಾಡಿ ವೀರಮರಣ ಹೊಂದಿದ್ದ. ಈ ನೆಲೆಯಲ್ಲಿ ಇದೀಗ ಹಾಸನ ಜಿಲ್ಲೆಯ ಬೇಲೂರು ಭಾಗದಲ್ಲಿ ಇಂದಿನಿಂದ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಲಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಸಕಲ ಸಿದ್ಧತೆ ಮಾಡಿಕೊಂಡಿವೆ.ಡಿಸೆಂಬರ್ 4 ರಂದು ಕಾಡಾನೇ ಸೆರೆಯಲ್ಲಿ ಅರ್ಜುನ ಸಾವನ್ನಪ್ಪಿದ್ದ. ಅರ್ಜುನನನ್ನು ಕೊಂದ ಕಾಡಾನೆ ಸೆರೆ ಹಿಡಿಯುವುದಾಗಿ ಮಾವುತರು ಶಪಥ ಮಾಡಿದ್ದಾರೆ. ಈಗಾಗಲೇ ಕ್ಯಾಂಪ್ಗೆ ನಾಲ್ಕು ಸಾಕಾನೆಗಳು ಬಂದಿವೆ.ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕೋಡಿ ಆನೆ ಕ್ಯಾಂಪ್ ಗೆ ಹರ್ಷ, ಸುಗ್ರೀವ, ಧನಂಜಯ,ಅಶ್ವತ್ಥಮ ಹಾಗೂ ಪ್ರಶಾಂತ್ ಆನೆಗಳು ಈಗಾಗಲೇ ಬಂದಿವೆ.ಇಂದು ಭೀಮ ಅಭಿಮನ್ಯು ಸೇರಿದಂತೆ ಮತ್ತಷ್ಟು ಆನೆಗಳು ಬರುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.ಈ ಬಾರಿ 10 ಸಾಕಾಣಿ ಬಳಸಿ ಕಾಡಾನೆ ಸೆರೆ ಹಿಡಿಯುವ ಕಾರ್ಯಚರಣೆ ನಡೆಸಲಾಗುತ್ತದೆ. ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ ಕಾಡಾನೆ ಸರಿ…
ಚಿಕ್ಕಮಗಳೂರು : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಜೆಡಿಎಸ್ ಮೈತ್ರಿ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚಿಕ್ಕಮಂಗಳೂರಿನ ರಿಸಲ್ಟ್ ನಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ನಾಯಕರುಗಳೊಂದಿಗೆ ಸಮಾಲೋಚನೆ ನಡೆಸಿದ್ದು ಇದೀಗ ಇಂದು ಬೆಳಿಗ್ಗೆ 9:00 ಗಂಟೆಗೆ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಮಗಳೂರಿನ ಹನಿಡೈಯೋ ಹೋಟೆಲ್ ರೆಸಾರ್ಟ್ ನಲ್ಲಿ ಎಚ್. ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈಗಾಗಲೇ ಮಂಡ್ಯ ಮೈಸೂರು ಜೆಡಿಎಸ್ ನಾಯಕರ ಜೊತೆ ಎಚ್ ಡಿ ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದು ಮಂಡ್ಯ ಮೈಸೂರು ಲೋಕಸಭಾ ಕ್ಷೇತ್ರದ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. ರೆಸಾರ್ಟ್ ನಲ್ಲಿ ಕುಮಾರಸ್ವಾಮಿ ವಾಸ್ತವ್ಯಹೂಡಿ ಚರ್ಚೆ ನಡೆಸಿದ್ದಾರೆ. ಎನ್ನಲಾಗುತ್ತಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಚಿಕ್ಕಮಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ನಾಯಕರು ವಾಸ್ತವ ಹುಟ್ಟಿದ್ದು ಲೋಕಸಭೆ ಚುನಾವಣೆ ತಯಾರಿಗಾಗಿ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ
ಬೆಂಗಳೂರು : ಚಾಲಕನಿಗೆ ತಲೆ ಸುತ್ತು ಬಂದಿದ್ದರಿಂದ ಬಿಎಂಟಿಸಿ ಬಸ್ ಒಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಆರ್ ಟಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಕೊನೆಯ ಟ್ರಿಪ್ ಆಗಿದ್ದರಿಂದ ಈ ವೇಳೆ ಬಸ್ ನಲ್ಲಿ 15 ಪ್ರಯಾಣಿಕರು ಸಂಚರಿಸುತ್ತಿದ್ದರು ಇದೆ ವೇಳೆ 3 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಪ್ರಾಣಾಯಪಾಯ ಸಂಭವಿಸಿಲ್ಲ. ಬಸ್ ಚಾಲನೆ ವೇಳೆ ಚಾಲಕನಿಗೆ ತಲೆ ಸುತ್ತು ಬಂದ ಹಿನ್ನೆಲೆ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆರ್ ಟಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ. ಇ ವೇಳೆ ಮೂರು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಿಂದ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ. ಚಾಲಕನಿಗೆ ತಲೆ ಸುತ್ತು ಬಂದಿದ್ದರಿಂದ ಮರಕೆ ಡಿಕ್ಕಿ ಹೊಡೆದಿದೆ. ಬಸ್ಸಿನ ಲಾಸ್ಟ್ ಟ್ರಿಪ್ ಆಗಿರುವುದರಿಂದ ಕೇವಲ 15 ಜನ ಮಾತ್ರ ಪ್ರಯಾಣಿಕರು ಸಂಚರಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.
ಬೆಂಗಳೂರು : ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಬಳಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವುದು ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಡಿ.28ರಿಂದ ಬಂಧನಕ್ಕೆ ಒಳಗಾಗಿ ಜೈಲಿನಲ್ಲಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎನ್. ನಾರಾಯಣ ಗೌಡ ಅವರು ಕೊನೆಗೂ ಬಂಧಮುಕ್ತರಾಗಿದ್ದಾರೆ. ಈ ನಡುವೆ ಜೈಲಿನಿಂದ ಬಿಡುಗಡೆಯಾದ ನಂತರ ಗೌಡರು ಕಾಲು ನೋವಿನಿಂದ ಬಳಲುತ್ತಿದ್ದ ಕಾರಣ ಚಿಕಿತ್ಸೆ ಪಡೆಯಲು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ತಮ್ಮ ನಾಯಕ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಕರವೇ ಕಾರ್ಯಕರ್ತರು ಸಂಭ್ರಮಿಸಿ ಸಿಹಿ ವಿತರಿಸಿದರು. ಇದೆ ವೇಳೆ ನಾರಾಯಣಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಹೋರಾಟಕ್ಕೆ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದು, ಕನ್ನಡ ನಾಮಫಲಕ ಆಂದೋಲನ ಯಶಸ್ವಿಯಾಗಿದೆ. ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಇದು ಕನ್ನಡಿಗರ ಜಯ, ಕರ್ನಾಟಕ ರಕ್ಷಣಾ ವೇದಿಕೆಯ ಜಯ. ಈ ಹೋರಾಟವನ್ನು ಬೆಂಬಲಿಸಿದ ಎಲ್ಲ ಕನ್ನಡಪರ ಚಳವಳಿಗಾರರಿಗೆ, ಮಾಧ್ಯಮಮಿತ್ರರಿಗೆ, ಕರವೇ ಮುಖಂಡರು, ಕಾರ್ಯಕರ್ತರಿಗೆ, ಜನಸಾಮಾನ್ಯರಿಗೆ ಕೃತಜ್ಞತೆಗಳು ಎಂದು ಫೇಸ್ಬುಕ್ ಮೂಲಕ ಧನ್ಯವಾದ ತಿಳಿಸಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ಮಾಡುವುದು…
ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯದಲ್ಲಿ ಮಾಡಲಾಗಿದ್ದ ಬದಲಾವಣೆಗೆಳನ್ನು ಪರಿಷ್ಕರಿಸಲು ರಚಿಸಲಾಗಿದ್ದ ಪ್ರೊ. ಮಂಜುನಾಥ ಹೆಗಡೆ ನೇತೃತ್ವದ ಸಮಿತಿಯು ಜ.17ರೊಳಗೆ ವರದಿ ಸಲ್ಲಿಸಲು ಕ್ರಮ ವಹಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಸಂಬಂಧ ಬುಧವಾರ ಇಲಾಖೆ ಅಧಿ ಕಾರಿಗಳೊಂದಿಗೆ ಸಭೆ ನಡೆಸಿ ಎಸ್ಸೆಸ್ಸೆಲ್ಸಿ, ದ್ವಿತೀಯು ಪಿಯುಸಿ ಪರೀಕ್ಷಾ ಸಿದ್ಧತೆಗಳು ಮತ್ತು ಪುಸ್ತಕ ಪರಿಷ್ಕರಣೆ ಕುರಿತು ಸುದೀರ್ಘ ವಾಗಿ ಚರ್ಚೆಸಿದರು. ಇದೇವೇಳೆ, ಮುಂದಿನ ವರ್ಷಕ್ಕೆ ಪುಸ್ತಕಗಳ ಮುದ್ರಣಾ ಕಾರ್ಯ ಆರಂಭಿಸಬೇಕಿರುವ ಕಾರಣ ಆದಷ್ಟು ಬೇಗ ಶಾಲಾ ಪಠ್ಯ ಪರಿಷ್ಕರಣಾ ಸಮಿತಿ ವರದಿ ನೀಡಬೇಕು. ಜ.17ರೊಳಗೆ ವರದಿ ಸಲ್ಲಿಸಲು ಕ್ರಮ ವಹಿಸುವಂತೆ ಸೂಚಿಸಿದರು. ಇದೇ ವೇಳೆ ಈಗಾಗಲೇ ಎಸ್ಸೆಸ್ಸೆಲ್ಸಿ, ದ್ವಿತೀಯು ಪಿಯುಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಇದೇ ವಾರದಲ್ಲಿ ಅಂತಿಮ ವರದಿ ವೇಳಾಪಟ್ಟಿ ಪ್ರಕಟಿಸುವುದಾಗಿ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರೆಂದು ತಿಳಿದು ಬಂದಿದೆ. ಸಭೆಯಲ್ಲಿ ಇಲಾಖೆ ಪ್ರಧಾನ ಕಾಠ್ಯದರ್ಶಿ ರಿತೇಶ್ ಕುಮಾರ್ಸಿಂಗ್,…
ಬೆಂಗಳೂರು : ಬೆಂಗಳೂರಿನಲ್ಲಿ ವಾರದ ರಜೆಯನ್ನು ಹೊರತು ಮಾಡಿಸಿ ವಿಶೇಷ ರಜೆ ತೆಗೆದುಕೊಳ್ಳದೆ ಒಂದು ತಿಂಗಳು ಪೂರ್ತಿ ಕಾರ್ಯ ನಿರ್ವಹಿಸುವ ಚಾಲಕರಿಗೆ ಬಿಎಂಟಿಸಿ ಮಾಸಿಕವಾಗಿ ವಿಶೇಷ ರಜೆ ಭತ್ಯೆಯಾಗಿ 500 ರೂ. ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ. ಚಾಲನಾ ಸಿಬ್ಬಂದಿ ಗೈರಿನಿಂದ ಸಮರ್ಪಕವಾಗಿ ಬಸ್ ಸೇವೆ ನೀಡಲು ಆಗುತ್ತಿರುವ ಸಮಸ್ಯೆ ನಿವಾರಿಸಲು ವಾರದ ರಜೆ ಹೊರತುಪಡಿಸಿ ಬೇರೆ ರಜೆಯನ್ನು ತೆಗೆದುಕೊಳ್ಳದೆ ಕೆಲಸ ಮಾಡುವ ಚಾಲನಾ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡಲು ಬಿಎಂಟಿಸಿ ನಿರ್ಧರಿಸಿದೆ. ಬಿಎಂಟಿಸಿಯ ಚಾಲನಾ ಸಿಬ್ಬಂದಿ ಪೈಕಿ ಪ್ರತಿದಿನ ಶೇಕಡ 6.8 ರಷ್ಟು ಸಿಬ್ಬಂದಿ ದೈನಂದಿನ ಅಥವಾ ಧೀರ್ಘಾವಧಿ ರಜೆಯಲ್ಲಿರುತ್ತಾರೆ. ಚಾಲನಾ ಸಿಬ್ಬಂದಿ ಪದೇಪದೆ ರಜೆ ಪಡೆಯುವು ದರಿಂದಾಗಿ ಬಿಎಂಟಿಸಿ ಸಮರ್ಪಕವಾಗಿ ಬಸ್ ಸೇವೆ ನೀಡಲಾಗುತ್ತಿಲ್ಲ. ನಿಗಮದ ಅಂಕಿ ಅಂಶದ ಪ್ರಕಾರ ಚಾಲನಾ ಸಿಬ್ಬಂದಿ ಗೈರಿನಿಂದ 2023ರ ಏಪ್ರಿಲ್ನಿಂದ 2023ರ ಅಕ್ಟೋಬರ್ ವರೆಗೆ 44.27 ಲಕ್ಷ ಅನುಸೂಚಿ (ಶೆಡ್ಯೂಲ್) ರದ್ದಾಗಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ ಪರಿಹರಿಸಲು ಚಾಲನಾ ಸಿಬ್ಬಂದಿಗೆ ವಿಶೇಷ…