Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಹುಬ್ಬಳ್ಳಿ: ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಫ್ರಿಡ್ಜ್​​, ವಾಷಿಂಗ್​​​ ಮಷಿನ್​​, ಹೊಲಿಗೆ ಯಂತ್ರ, ಬೀದಿಬದಿ ವ್ಯಾಪಾರ, ಆಸ್ಪತ್ರೆ ಖರ್ಚು, ಬಂಗಾರ ಹೀಗೆ ನಾನಾ ಕಾರ್ಯಗಳಿಗೆ ಬಳಕೆ ಮಾಡಿಕೊಂಡಿದ್ದನ್ನು ಕೇಳಿದ್ದೇವೆ. ಆದರೆ, ಇಲ್ಲೊಬ್ಬ ಗೃಹಿಣಿ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 29 ಕಂತುಗಳ ಹಣದಿಂದ ಹೊಲದಲ್ಲಿ ಬೋರ್‌ವೆಲ್​ ಕೊರೆಸಿ ಬದುಕು ಹಸನಾಗಿಸಿಕೊಂಡಿದ್ದಾರೆ. ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮದ ರೈತ ಮಹಿಳೆ ಈರವ್ವ ಅಂಗಡಿ ಗೃಹಲಕ್ಷ್ಮಿ ಯೋಜನೆ ಹಣವನ್ನು ಸದ್ಬಳಕೆ ಮಾಡಿಕೊಂಡು ಮಾದರಿಯಾಗಿದ್ದಾರೆ. ಏ.28ರಂದು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ 2.5 ಎಕರೆ ಹೊಲದಲ್ಲಿ ಬೋರ್ ವೆಲ್ ಕೊರೆಸಿದ್ದು, ಇದರ ಫಲವಾಗಿ 5 ಇಂಚು ನೀರು ದೊರೆತಿದೆ. ಇದು ಈರವ್ವ ಕುಟುಂಬದ ಸಂತಸಕ್ಕೆ ಕಾರಣವಾಗಿದೆ. ಗೃಹಲಕ್ಷ್ಮಿಯಿಂದ ಬಂದ ಹಣದಲ್ಲಿ ₹4000 ಉಳಿದಿದ್ದು ಮೋಟಾರ್ ಅಳವಡಿಸಲು ₹ 80,000 ವೆಚ್ಚ ತಗುಲಿದ್ದು ವಿವಿಧೆಡೆ ಸಾಲ ಮಾಡಿದ್ದಾರೆ. ನೀರಾವರಿ ಮಾಡಿ ಉತ್ತಮ ಬೆಳೆ ಬೆಳೆದು ಈ ಸಾಲ ತೀರಿಸುತ್ತೇವೆ ಎನ್ನುತ್ತಾರೆ ಈರವ್ವ ಹಾಗೂ ಆಕೆಯ ಪತಿ ಭರಮಣ್ಣ. ಗೃಹಲಕ್ಷ್ಮಿ…

Read More

ಮೈಸೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದೆಹಲಿ ಭೇಟಿಯ ಬಗ್ಗೆ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. “ಇದೇ ತಿಂಗಳ 15ನೇ ತಾರೀಖು ನಾನು ದೆಹಲಿಗೆ ಹೋಗುತ್ತಿಲ್ಲ, ಹೈಕಮಾಂಡ್‌ನಿಂದ ಅಧಿಕೃತ ಕರೆ ಬಂದರೆ ಮಾತ್ರ ನಾನು ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸುತ್ತೇನೆ” ಎಂದು ಅವರು ತಿಳಿಸಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿರುವೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸದ್ಯಕ್ಕೆ ದೆಹಲಿಗೆ ಹೋಗುವ ಯಾವುದೇ ಪೂರ್ವನಿರ್ಧರಿತ ಕಾರ್ಯಕ್ರಮಗಳಿಲ್ಲ ಎಂದು ಸ್ಪಷ್ಟಪಡಿಸಿದರು. ಒಂದು ವೇಳೆ ಪಕ್ಷದ ವರಿಷ್ಠರು ಚರ್ಚೆಗೆ ಬರುವಂತೆ ಸೂಚಿಸಿದರೆ ಮಾತ್ರ ಭೇಟಿ ನೀಡುವುದಾಗಿ ಹೇಳುವ ಮೂಲಕ, ಎಲ್ಲ ನಿರ್ಧಾರಗಳನ್ನು ಹೈಕಮಾಂಡ್ ವಿವೇಚನೆಗೆ ಬಿಟ್ಟಿರುವುದಾಗಿ ಅವರು ಸೂಚ್ಯವಾಗಿ ತಿಳಿಸಿದರು. ಸಂಪುಟ ಪುನಾರಚನೆಯ ಸುಳಿವು ಇದೇ ಸಂದರ್ಭದಲ್ಲಿ ಆಡಳಿತ ಯಂತ್ರಕ್ಕೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಸಚಿವ ಸಂಪುಟ ಪುನಾರಚನೆ ಮಾಡಬೇಕಾದ ಅಗತ್ಯವಿದೆ ಎಂದು ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಸಂಪುಟದಲ್ಲಿ ಬದಲಾವಣೆ ತರುವ ಮೂಲಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ…

Read More

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ನಟ, ರಾಜಕಾರಣಿ ಜೋಸೆಫ್ ವಿಜಯ್ ಅವರು ರಾಜ್ಯದಲ್ಲಿ ಮದ್ಯಪಾನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕ್ರಾಂತಿಕಾರಿ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಸಾರ್ವಜನಿಕ ಕಲ್ಯಾಣ ಮತ್ತು ಯುವ ಪೀಳಿಗೆಯ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು, ಮದ್ಯ ಖರೀದಿ ಮತ್ತು ಮಾರಾಟಕ್ಕೆ ಇರಬೇಕಾದ ಕನಿಷ್ಠ ವಯೋಮಿತಿಯನ್ನು 21 ವರ್ಷಕ್ಕೆ ನಿಗದಿಪಡಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಯುವ ಪೀಳಿಗೆಯ ಹಿತದೃಷ್ಟಿಯಿಂದ ನಿರ್ಧಾರ ರಾಜ್ಯದಲ್ಲಿ ಈ ಹಿಂದೆ ಮದ್ಯಪಾನಕ್ಕೆ ಸಂಬಂಧಿಸಿದ ವಯೋಮಿತಿಯ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದಿರುವ ಸರ್ಕಾರ, ಈಗ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಘೋಷಿಸಲಾಗಿದೆ. ಯುವ ಸಮೂಹವು ಅಮಲು ಪದಾರ್ಥಗಳ ವ್ಯಸನಕ್ಕೆ ಬಲಿಯಾಗುವುದನ್ನು ತಡೆಯಲು ಮತ್ತು ಶಿಸ್ತುಬದ್ಧ ಸಮಾಜ ನಿರ್ಮಾಣ ಮಾಡಲು ಈ ಕ್ರಮ ಅನಿವಾರ್ಯ ಎಂದು ಮುಖ್ಯಮಂತ್ರಿ ವಿಜಯ್ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. 717 ಮದ್ಯದಂಗಡಿಗಳಿಗೆ ಬೀಗ ಕೇವಲ ವಯೋಮಿತಿ ನಿಗದಿ ಮಾತ್ರವಲ್ಲದೆ,…

Read More

ಬೀದರ್: ತಾಯಿಯನ್ನು ಕಳೆದುಕೊಂಡು ಅನಾಥಪ್ರಜ್ಞೆಯಲ್ಲಿದ್ದ ಎಂಟು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ ಅಮಾನವೀಯವಾಗಿ ಅತ್ಯಾಚಾರ ಎಸಗಿರುವ ಘಟನೆ ಬೀದರ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿರುವ ಈ ಕೃತ್ಯವು ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತಂದೆ ಕೆಲಸಕ್ಕೆ ಹೋದಾಗ ಕೃತ್ಯ: ಮೂಲಗಳ ಪ್ರಕಾರ, ಈ ಬಾಲಕಿಯು ಇತ್ತೀಚೆಗಷ್ಟೇ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು. ಬಾಲಕಿಯ ತಂದೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ಎಂದಿನಂತೆ ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಹೊಂಚು ಹಾಕಿದ್ದ ನೆರೆಮನೆಯ 35 ವರ್ಷದ ಆರೋಪಿ ಧನರಾಜ್ ಕಾಂಬಳೆ ಎಂಬಾತ, ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದಿದ್ದಾನೆ. ಬಾಲಕಿಯ ಮೇಲೆ ಅಮಾನವೀಯ ಕ್ರೌರ್ಯ: ತನ್ನ ಮೇಲೆ ನಂಬಿಕೆ ಇಟ್ಟಿದ್ದ ಮಗುವಿನ ಮೇಲೆ ಆರೋಪಿ ಧನರಾಜ್ ಅತ್ಯಂತ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿಯ ಕಿರುಚಾಟ ಯಾರಿಗೂ ಕೇಳದಂತೆ ಆತ ಅಮಾನವೀಯವಾಗಿ ವರ್ತಿಸಿದ್ದು, ಮಗುವಿನ ದೈಹಿಕ ಸ್ಥಿತಿ ಗಂಭೀರಗೊಂಡಿದೆ.…

Read More

ಬೆಂಗಳೂರು : ರಾಜ್ಯ ಸರ್ಕಾರ ವಿಜಾಬ್ ನಿಷೇಧ ಆದೇಶವನ್ನು ಪಡೆದಿದ್ದು ಇನ್ಮುಂದೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಜನಿವಾರ, ರುದ್ರಾಕ್ಷಿ, ಶಿವದಾರ ಹಾಗೂ ಇಜಾಬ್ ಧರಿಸಿ ಹೋಗಬಹುದು ಎಂದು ಆದೇಶ ಹೊರಡಿಸಿದ್ದು ಈ ವಿಚಾರವಾಗಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು. ಟ್ವೀಟ್ ನಲ್ಲಿ ಈ ಕುರಿತು ಹೇಳಿದ ಅವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ತುಷ್ಠಿಕರಣ ರಾಜಕಾರಣ ಶಿಕ್ಷಣದ ಅಂಗಳಕ್ಕೂ ಕಾಲಿಟ್ಟಿರುವುದು ಅತ್ಯಂತ ದುರದೃಷ್ಟಕರ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳು ಇನ್ನೂ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಮುಂದೆ ಬಾಕಿ ಇರುವಾಗಲೇ, ನ್ಯಾಯಾಂಗದ ಪ್ರಕ್ರಿಯೆಯನ್ನು ಕಡೆಗಣಿಸಿ ಹಿಜಾಬ್ ನಿಷೇಧವನ್ನು ಸರ್ಕಾರ ಹಿಂಪಡೆದಿರುವುದು ನ್ಯಾಯಾಂಗ ವ್ಯವಸ್ಥೆಗೆ ಮಾಡುವ ಅಪಮಾನ. ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆಯ ಮೂಲ ಉದ್ದೇಶವೇ ವಿದ್ಯಾರ್ಥಿಗಳಲ್ಲಿ ಸಮಾನತೆ ಬೆಳೆಸುವುದು. ಆದರೆ ಕಾಂಗ್ರೆಸ್ ಸರ್ಕಾರವೇ ಈ ರೀತಿ ಧರ್ಮದ ಆಧಾರದ ಮೇಲೆ ತಾರತಮ್ಯ ಎಸಗುತ್ತಿರುವುದು…

Read More

ನವದೆಹಲಿ: ಕೇರಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಹತ್ತು ದಿನಗಳು ಕಳೆದರೂ ತೀವ್ರ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಆಯ್ಕೆಯ ಕಸರತ್ತಿಗೆ ಕೊನೆಗೂ ತೆರೆ ಬಿದ್ದಿದೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹಿರಿಯ ನಾಯಕರ ಮಹತ್ವದ ಸುದ್ದಿಗೋಷ್ಠಿಯಲ್ಲಿ, ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಈ ನಿರ್ಧಾರದೊಂದಿಗೆ ಸಿಎಂ ರೇಸ್‌ನಲ್ಲಿದ್ದ ಪ್ರಭಾವಿ ನಾಯಕ ಕೆ.ಸಿ. ವೇಣುಗೋಪಾಲ್ ಅವರಿಗೆ ಸದ್ಯಕ್ಕೆ ಹಿನ್ನಡೆಯಾದಂತಾಗಿದೆ. ಆದರೆ, ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಕೆ.ಸಿ. ವೇಣುಗೋಪಾಲ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ‘ಬಿಗ್ ಆಫರ್’ ಒಂದನ್ನು ನೀಡಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಸ್ತುತ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ವೇಣುಗೋಪಾಲ್ ಅವರಿಗೆ ಮುಂದಿನ ದಿನಗಳಲ್ಲಿ ಪಕ್ಷದ ಅತ್ಯುನ್ನತ ಸ್ಥಾನವಾದ ಎಐಸಿಸಿ ಅಧ್ಯಕ್ಷ ಪಟ್ಟವನ್ನು ನೀಡುವ ಭರವಸೆಯನ್ನು ಹಿರಿಯ ನಾಯಕರು ನೀಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಪ್ರಸ್ತುತ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿಯು ಇನ್ನೊಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಖರ್ಗೆ ಅವರ…

Read More

ಕೇರಳ : ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತಿಸನ್ ಆಯ್ಕೆ ಆಯ್ಕೆಯಾಗಿದ್ದಾರೆ. ಕ್ಲೈಮಾಕ್ಸ್ ಹಂತಕ್ಕೆ ತಲುಪಿದ ಸಿಎಂ ಆಯ್ಕೆ ಕಸರತ್ತು. ಇದೀಗ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು,. ಅಜಯ್ ಮೇಕನ್, ಮುಕುಲ್ ವಾಸ್ನೆಕ್, ದೀಪಾದಾಸ್ ಮುನ್ಶಿ, AICC ವೀಕ್ಷಕರಿಂದ ಮಹತ್ವದ ಸುದ್ದಿಗೋಷ್ಠಿಯಲ್ಲಿ ವಿಡಿ ಸತೀಶನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ . ಕಳೆದ ಕೆಲವು ದಿನಗಳಿಂದ ಕೇರಳ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಅಂತಿಮವಾಗಿ ಸುಖಾಂತ್ಯ ಕಂಡಿದೆ. ಕಾಂಗ್ರೆಸ್ ಹೈಕಮಾಂಡ್ ಕೇರಳದ ನೂತನ ಮುಖ್ಯಮಂತ್ರಿಯಾಗಿ ಹಿರಿಯ ನಾಯಕ ವಿ.ಡಿ. ಸತೀಶನ್ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಿದೆ. ಈ ಮೂಲಕ ಹಲವು ದಿನಗಳ ಕಾಲ ನಡೆದ ಸಮಾಲೋಚನೆ ಮತ್ತು ಬಿಕ್ಕಟ್ಟಿಗೆ ತೆರೆ ಬಿದ್ದಂತಾಗಿದ್ದು, ಕೇರಳ ಕಾಂಗ್ರೆಸ್‌ನಲ್ಲಿ ಹೊಸ ಪರ್ವ ಆರಂಭವಾದಂತಾಗಿದೆ. ದೆಹಲಿಯಲ್ಲಿ ನಡೆದ ಮಹತ್ವದ ಸುದ್ದಿಗೋಷ್ಠಿ ನವದೆಹಲಿಯಲ್ಲಿ ಇಂದು ಎಐಸಿಸಿ (AICC) ವೀಕ್ಷಕರು ಹಮ್ಮಿಕೊಂಡಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಲಾಯಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಅಜಯ್…

Read More

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ, ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಭೇಟಿ ಮಾಡುವ ವಿಚಾರವಾಗಿ, ಸದ್ಯಕ್ಕೆ ಹೈಕಮಾಂಡ್ ಕರೆದಿಲ್ಲ ಹಾಗಾಗಿ ದೆಹಲಿಗೆ ಹೋಗಲ್ಲ ಎಂದು ಸ್ಪಷ್ಟನೆ ನೀಡಿದರು. ಮೈಸೂರಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮೇ 15 ರಂದು ದೆಹಲಿಗೆ ಹೋಗುತ್ತೇನೆ ಎಂದು ಹೇಳಿದವರು ಯಾರು? ಮೇ 15 ಎಂಬ ದಿನಾಂಕ ನೀವೇ ಯಾಕೆ ನಿಗದಿ ಮಾಡಿದ್ದೀರಿ? ಹೈಕಮಾಂಡ್ ಕರೆದಾಗ ದೆಹಲಿಗೆ ಹೋಗುತ್ತೇನೆ. ಸಚಿವ ಸಂಪುಟ ಪುನಾರಚನೆ ಮಾಡುತ್ತೇನೇ ಆ ಬಗ್ಗೆ ಚರ್ಚೆಗೆ ಹೈಕಮಾಂಡ್ ಕರೆದಾಗ ಹೋಗ್ತೇನೆ. ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಾಬ್ ಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಇದೇ ವಿಚಾರವಾಗಿ,  ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಸರಿ ಶಾಲು ಹಾಕಿಕೊಂಡು ಬರಲು ಅವಕಾಶ ಇಲ್ಲ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಜನಿವಾರ, ಶಿವದಾರ, ಟರ್ಬನ್, ರುದ್ರಾಕ್ಷಿ ಹಾಗೂ ಹಿಜಾಬ್ ಹಾಕಿಕೊಳ್ಳಬಹುದು ಆದರೆ ಕೇಸರಿ ಶಾಲುಗಳನ್ನು ಹಾಕಿಕೊಳ್ಳಲು ಅವಕಾಶ ಇಲ್ಲ. ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಗೆ…

Read More

ಬೆಂಗಳೂರು: ಕರ್ನಾಟಕದ ಉಪ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಾಗಲಕೋಟೆ ಕ್ಷೇತ್ರದ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಸಮರ್ಥ ಶಾಮನೂರು ಅವರು ಇಂದು ಅಧಿಕೃತವಾಗಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರಳ ಹಾಗೂ ಗೌರವಾನ್ವಿತ ಸಮಾರಂಭದಲ್ಲಿ ಇಬ್ಬರೂ ನಾಯಕರು ಜನಪ್ರತಿನಿಧಿಗಳಾಗಿ ಪದಗ್ರಹಣ ಮಾಡಿದರು. ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಉಮೇಶ್ ಮೇಟಿ ಅವರು ಭಾರಿ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದರು. ಇತ್ತ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಯುವ ನಾಯಕ ಸಮರ್ಥ ಶಾಮನೂರು ಅವರು ಕೂಡ ಗೆಲುವಿನ ನಗೆ ಬೀರಿದ್ದರು. ಮಾಜಿ ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಶೋಕಾಚರಣೆಯ ರೂಪವಾಗಿ ಈ ಹಿಂದೆ ನಿಗದಿಯಾಗಿದ್ದ ಇವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ನೂತನ ಶಾಸಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಉಮೇಶ್…

Read More

ಮೈಸೂರು : ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಾಬ್ ಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಬಿಜೆಪಿ ಆಡಳಿತದಲ್ಲಿ ಇದ್ದಾಗ ಮಾಡಿದ ನಿಷೇಧವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಯಾವುದೇ ಸಾಂಪ್ರದಾಯಿಕ ಸಂಕೇತವನ್ನು ಧರಿಸಬಹುದು. ಅದು ಪೇಟ ಆಗಿರಲಿ, ಟರ್ಬನ್ ಆಗಿರಲಿ, ಜನಿವಾರ ಆಗಿರಲಿ, ಪವಿತ್ರದಾರ, ಶಿವಧಾರ, ರುದ್ರಾಕ್ಷಿ ಅಥವಾ ಹಿಜಾಬ್ ಅನ್ನು ಧರಿಸಿ ಬರುವುದಕ್ಕೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಇದಕ್ಕೆ ಇದೀಗ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಇದೇ ವಿಚಾರವಾಗಿ, ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಸರಿ ಶಾಲು ಹಾಕಿಕೊಂಡು ಬರಲು ಅವಕಾಶ ಇಲ್ಲ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಜನಿವಾರ, ಶಿವದಾರ, ಟರ್ಬನ್, ರುದ್ರಾಕ್ಷಿ ಹಾಗೂ ಹಿಜಾಬ್ ಹಾಕಿಕೊಳ್ಳಬಹುದು ಆದರೆ ಕೇಸರಿ ಶಾಲುಗಳನ್ನು ಹಾಕಿಕೊಳ್ಳಲು ಅವಕಾಶ ಇಲ್ಲ. ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಧಾರ್ಮಿಕ ಸಂಕೇತಗಳಿಗೆ ಮುಕ್ತ ಅವಕಾಶ: ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ಧಾರ್ಮಿಕ…

Read More