Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಯುವತಿ ಗರ್ಭವತಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿಗೆ. ಬಿಜೆಪು ಮುಖಂಡನ ಪುತ್ರ ಕೃಷ್ಣ ಜೆ ರಾವ್ ನಿಂದ ಗರ್ಭವತಿಯಾಗಿದ್ದಂತ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಎಂಬುವರಿಂದ ಗರ್ಭವತಿಯಾಗಿರುವುದಾಗಿ ಸಂತ್ರಸ್ತ ಯುವತಿಯೊಬ್ಬಳು ದೂರು ನೀಡಿದ್ದಳು. ಈ ದೂರು ಆಧರಿಸಿ ಪ್ರಕರಣ ಕೂಡ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಕೃಷ್ಣ ಜೆ ರಾವ್ ನಾಪತ್ತೆಯಾಗಿದ್ದಾರೆ. ಯುವಕ ಕೃಷ್ಣ ಜೆ ರಾವ್ ವಿರುದ್ಧ ಲವ್ ಸೆಕ್ಸ್ ದೋಖಾ ಆರೋಪವನ್ನು ಸಂತ್ರಸ್ತ ಯುವತಿ ಮಾಡಿದ್ದಳು. ಹೈಸ್ಕೂಲ್ ನಲ್ಲಿ ಓದುತ್ತಿದ್ದಾಗವೇ ಕೃಷ್ಣ, ಸಂತ್ರಸ್ತೆ ನಡುವೆ ಪ್ರೇಮಾಂಕುರವಾಗಿತ್ತಂತೆ. ಇಂತಗ ಕೃಷ್ಣ ತನ್ನ ಮನೆಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದರು. ಅಕ್ಟೋಬರ್.11, 2024ರಂದು ದೈಹಿಕ ಸಂಪರ್ಕ ಬೆಳೆಸಿದ್ದನು. ಹೀಗಾಗಿ ತಾನು ಗರ್ಭವತಿಯಾಗಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದರು. ಇಂತಹ…
ಬೆಂಗಳೂರು : ನಿಗದಿ ಮಾಡಿದ ದರಕ್ಕಿಂತಲೂ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಟೋ ಚಾಲಕರಿಗೆ ಸಾರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ನಿಯಮ ಉಲ್ಲಂಘಿಸಿದ 15 ಆಟೋಗಳನ್ನು ಇದೀಗ RTO ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಹೌದು ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಪ್ರಯಾಣಿಕರಿಂದ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಹೆಚ್ಚು ದರ ವಸೂಲಿ ಮಾಡುತ್ತಿರುವ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಲ್ಲದೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರಗಿಸುವಂತೆ ಸಾರಿಗೆ ಇಲಾಖೆ ಕಮಿಷನರ್ ಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಚೀಟಿ ವಂಚಕರ ಹಾವಳಿ ಹೆಚ್ಚುತ್ತಿದ್ದು, ಚೀಟಿ ಹಾಕುವ ವ್ಯಕ್ತಿಯೊಬ್ಬ ಸುಮಾರು ನಲವತ್ತಕ್ಕೂ ಹೆಚ್ಚು ಜನರಿಗೆ ಒಂದೂವರೆ ಕೋಟಿಗೂ ಅಧಿಕ ಹಣ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.ದೇವರ ಚಿಕ್ಕನಹಳ್ಳಿಯ ಶ್ರೀನಿವಾಸ ಲೇಔಟ್ ನ ಪಾಂಡುರಂಗ ಎಂಬ ವ್ಯಕ್ತಿ ಒಂದೂವರೆ ಕೋಟಿಗೂ ಅಧಿಕ ವಂಚನೆಯ ಎಸಗಿದ್ದಾನೆ. ಕಳೆದ 20 ವರ್ಷಗಳಿಂದ ಪಾಂಡುರಂಗ ಚೀಟಿ ವ್ಯವಹಾರ ನಡೆಸುತ್ತಿದ್ದ ಎನ್ನಲಾಗಿದೆ. ಹಣ ಪಡೆದು ರಾತ್ರೋರಾತ್ರಿ ಪಾಂಡುರಂಗ ಮನೆ ಖಾಲಿ ಮಾಡಿಕೊಂಡು ಪರಾರಿಯಾಗಿದ್ದಾನೆ. ಮನೆ ಲೀಸ್ ಗೆ ನೀಡಿ ಬ್ಯಾಂಕಿನಿಂದ ಪಾಂಡುರಂಗ ಲೋನ್ ಪಡೆದಿದ್ದ. ಲೀಸ್ ಗೆ ಇದ್ದವರನ್ನು ಪೊಲೀಸರು ಮತ್ತು ಬ್ಯಾಂಕ್ ನವರು ಇದೀಗ ಮನೆ ಖಾಲಿ ಮಾಡಿಸಿದ್ದಾರೆ. ಇಂದು ತಮಿಳುನಾಡಿಗೆ ಓಡಿ ಹೋಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆ ಸಂಭಂದ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಲೋಕದಲ್ಲಿ ಹುಟ್ಟಿದ ಯಾರೂ ಬಡತನದಲ್ಲಿ ಬದುಕಲು ಬಯಸುವುದಿಲ್ಲ. ಅವರು ತಮ್ಮ ಆದಾಯವನ್ನು ಹೆಚ್ಚಿಸಿಕೊಂಡು ಚೆನ್ನಾಗಿ ಬದುಕಲು ಮಾತ್ರ ಬಯಸುತ್ತಾರೆ. ಆರಾಮವಾಗಿ ಬದುಕಲು ಬಯಸುವವರೂ ಇದ್ದಾರೆ. ಈ ಅವಕಾಶ ಮತ್ತು ಸಂತೋಷದ ಅಧಿಪತಿ ಶುಕ್ರ. ಒಬ್ಬ ವ್ಯಕ್ತಿಯು ಶುಕ್ರನ ಕೃಪೆಯನ್ನು ಪಡೆದರೆ, ಅವನು ಯಾವುದೇ ರೀತಿಯಲ್ಲಿ ಕಷ್ಟಪಡುವುದಿಲ್ಲ ಮತ್ತು ಸಂತೋಷದ ಜೀವನವನ್ನು ನಡೆಸುತ್ತಾನೆ ಎಂದು ಹೇಳಲಾಗುತ್ತದೆ. ಈ ಪೋಸ್ಟ್‌ನಲ್ಲಿ, ಶುಕ್ರನ ಕೃಪೆಯನ್ನು ಪಡೆಯಲು ಮತ್ತು ಆದಾಯವನ್ನು ಹೆಚ್ಚಿಸಲು ಪಠಿಸಬೇಕಾದ ಮಂತ್ರವನ್ನು ನಾವು ನೋಡಲಿದ್ದೇವೆ . ಶ್ರೀ ಸಿಂಗದೂರು ಚೌಡಮ್ಮನವರ ದೇವಿ ಜ್ಯೋತಿಷ್ಯ ಪೀಠ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ಕೇಶವ ಕೃಷ್ಣ ಭಟ್ ತಂತ್ರಿ ನಂ:- 8971498358 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು,…
ಹಾಸನ : ಹಾಸನದಲ್ಲಿ ಹೃದಯಾಘಾತದಿಂದ ಮರಣ ಮೃದಂಗ ಮುಂದುವರೆದಿದ್ದು ಕಳೆದ 40 ದಿನಗಳಲ್ಲಿ ಇದುವರೆಗೂ 20 ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮಹಿಳೆ ಒಬ್ಬರು ಮನೆಯಲ್ಲಿಯೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಹೌದು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ ಎನ್ನುವವರು ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಸುಸ್ತು ಎಂದು ಕುಸಿದು ಬಿದಿದ್ದರು. ಲೇಪಾಕ್ಷಿ ಅವರನ್ನು ತಕ್ಷಣ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಲೇಪಾಕ್ಷಿ ಸಾವನ್ನಪ್ಪಿದ್ದಾರೆ.ಹಾಸನ ಜಿಲ್ಲೆಯಲ್ಲಿ 40 ದಿನಗಳಲ್ಲಿ ಇದುವರೆಗು 20 ಜನ ಬಲಿಯಾಗಿದ್ದಾರೆ.
ಮಂಡ್ಯ : ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕೆ ಆರ್ ಎಸ್ ಜಲಾಶಯ ಭರ್ತಿಯಾಗಿದ್ದು, ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಇಂದು ಸಿಎಂ ಸಿದ್ದರಾಮಯ್ಯ ಜೂನ್ ತಿಂಗಳಲ್ಲಿ ಕೆ ಆರ್ ಎಸ್ ಜಲಾಶಯ ಬರ್ತೀಯಾಗಿದ್ದಕ್ಕೆ ಬಾಗಿನ ಅರ್ಪಿಸುವ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ. ಹೌದು ಜೂನ್ 28ರ ಶನಿವಾರವೇ ಡ್ಯಾಂ ಭರ್ತಿಯಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಅರ್ಪಿಸಲಿದ್ದಾರೆ. ವೇದಬ್ರಹ್ಮ ಡಾ.ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಬೆಳಗ್ಗೆ 11:30ರ ಅಭಿಜಿನ್ ಮೂಹೂರ್ತದಲ್ಲಿ ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಯಲಿದೆ. ಜೂನ್ ಆರಂಭದಿಂದ ಅಬ್ಬರಿಸುತ್ತಿರುವ ಮುಂಗಾರು ಮಳೆಯಿಂದಾಗಿ ಜೂನ್ ತಿಂಗಳಲ್ಲೇ ಕೆಆರ್‌ಎಸ್ ಭರ್ತಿಯಾಗಿದೆ. ಜಲಾಶಯ ಭರ್ತಿಯಾದ ಹಿನ್ನೆಲೆ ಇಂದು ಕಾವೇರಿ ಬಾಗಿನ ಅರ್ಪಿಸುವ ಮೂಲಕ ಜೂನ್‌ನಲ್ಲಿ ಬಾಗಿನ ಅರ್ಪಿಸಿದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಲಿದ್ದಾರೆ. ಬಾಗಿನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆ ಕೆಆರ್‌ಎಸ್ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಅಣೆಕಟ್ಟಿನ ಗೋಡೆಗಳಿಗೆ…
ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ವಿಜಾಪುರ ಗ್ರಾಮದ ತೋಟದಕೊಪ್ಪ ಎಂಬಲ್ಲಿ ಶನಿವಾರ ನಡೆದಿದೆ. ಹಸುವಿನ ಮಾಲೀಕ ವಿಜಯಕುಮಾರ್ ಎಂಬವರು ಹೊಸನಗರ ಠಾಣೆಗೆ ದೂರು ನೀಡಿದ್ದಾರೆ. ಹೌದು ಹಸುವಿನ ಕೆಚ್ಚಲು ಕೊಯ್ದು ಪಾಪಿಗಳು ಕ್ರೌರ್ಯ ಮೆರೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿಜಾಪುರದಲ್ಲಿ ಒಂದು ರಾಕ್ಷಸಿಯ ಕೃತ್ಯ ನಡೆದಿದೆ. ರಾಕ್ಷಸರು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದಾರೆ. ಹಸು ಮೇಯ್ಯುತ್ತಿದ್ದಾಗ ಕೃತ್ಯ ನಡೆದಿದೆ. ವಿಜಯಕುಮಾರ್ ಗೆ ಸೇರಿದ ಹಸು ರಕ್ತಸ್ರಾವದಿಂದ ತೀವ್ರ ನರಳಾಟ ನಡೆಸುತ್ತಿದೆ. ರಕ್ತಸ್ರಾವದಿಂದ ನರಳುತ್ತಿದ್ದ ಹಸುವಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳ ಪ್ರಕರಣಗಳ ಸಂಖ್ಯೆ ಮುಂದುವರೆದಿದ್ದು, ಇದೀಗ ಗಡಿ ಕಾಯುವ ಯೋಧ ರಜೆಗೆ ಎಂದು ಊರಿಗೆ ಬಂದಾಗ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯೋಧನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಎಂದು ತಿಳಿದುಬಂದಿದೆ. 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೋಹಿತ್ ರಜೆಗೆಂದು ಊರಿಗೆ ತೆರಳಿದ್ದಾಗ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ. ಜೂ.28ರಂದು ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಜಮೀನನ್ನು ಉಳುಮೆ ಮಾಡುವ ವೇಳೆ ಹೃದಯಾಘಾತವಾಗಿತ್ತು. ಆಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಹಿನ್ನೆಲೆ ಲೋಹಿತ್ ಅವರಿಗೆ ಸಣ್ಣಪುಟ್ಟ ಗಾಯಗಳೂ ಆಗಿದ್ದವು. ತಕ್ಷಣ ಸ್ಥಳೀಯರು ಲೋಹಿತ್ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದ್ರೆ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಲೋಹಿತ್…
GOOD NEWS : ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ : ರಿಯಾಯಿತಿ ದರದಲ್ಲಿ ಆನ್ಲೈನ್ ಟಿಕೆಟ್ ಪಡಿಯೋದು ಮತ್ತಷ್ಟು ಸುಲಭ!
ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ BMRCL ಸಿಹಿ ಸುದ್ದಿಯೊಂದನ್ನು ನೀಡಿದ್ದು, ಪ್ರಯಾಣಿಕರು ಸುಲಭವಾಗಿ ಟಿಕೆಟ್ ಪಡೆದುಕೊಳ್ಳುವ ಉದ್ದೇಶದಿಂದ ನಮ್ಮ ಮೆಟ್ರೋ ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ ಮೂಲಕ ಟಿಕೆಟ್ ಸೌಲಭ್ಯ ಕಲ್ಪಿಸಿದೆ. ಹೌದು ಇದುವರೆಗೆ ವಾಟ್ಸಾಪ್ ಮತ್ತು ಪೇಟಿಎಂನಲ್ಲಿ ಮಾತ್ರ ಮೆಟ್ರೋ ಟಿಕೆಟ್ ಗಳನ್ನು ಪಡೆದುಕೊಳ್ಳಲು ಅವಕಾಶವಿದ್ದು, ಇತ್ತೀಚೆಗೆ ಆ ರೀತಿಯ ಟಿಕೆಟ್ ಖರೀದಿಸುವಲ್ಲಿ ಹಲವು ಸಮಸ್ಯೆಗಳು ಇರುವುದರಿಂದ ಸಾರ್ವಜನಿಕರಿಂದ ದೂರು ಕೇಳಿಬಂದಿದ್ದವು. ಈಗ ಇನ್ನೂ 5 ಆಯಪ್ ಗಳಲ್ಲಿ ಟಿಕೆಟ್ ಪಡೆಯಬಹುದಾಗಿದೆ. ಯಾವ್ಯಾವ ಆಪ್ ಗಳನ್ನು ಬಳಸಬಹುದು? ನಮ್ಮ ಮೆಟ್ರೋ ಪ್ರಯಾಣಿಕರಿಗೆ ಟಿಕೆಟ್ ಪಡೆಯೋದು ಸುಲಭವಾಗಲೆಂದು, ಮೈಲ್ಸ್ ಅಂಡ್ ಕಿಲೋಮೀಟರ್ಸ್, ಟು ಮ್ಯಾಕ್, ಔಟ್ ಪಾಥ್, ರೆಡ್ ಬಸ್, ಹೈವೇ ಡಿ ಲೈಟ್ ಆಯಪ್ ಗಳನ್ನು ಬಳಸಿಕೊಂಡು ಪ್ರಯಾಣಿಕರು ಮೆಟ್ರೋ ಟಿಕೆಟ್ ಗಳನ್ನು ಖರೀದಿಸಬಹುದಾಗಿದೆ. ಅಲ್ಲದೇ ಆನ್ಲೈನ್ ಬುಕಿಂಗ್ ಗೆ ವಿವಿಧ ಆಯಪ್ ಗಳಲ್ಲಿ ಶೇಕಡ 10 ರಿಂದ 30 ರಷ್ಟು ರಿಯಾಯಿತಿ ಕೂಡ…
ಚಿತ್ರದುರ್ಗ : ಒಂದೆಡೆ ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದು ಇನ್ನೊಂದು ಕಡೆ ವಿಪಕ್ಷ ಬಿಜೆಪಿ ನಾಯಕರು ಶೀಘ್ರದಲ್ಲಿ ಸರ್ಕಾರ ಪತನವಾಗಲಿದ್ದು ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದೀಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರ ಪತನಗೊಂಡು 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ 2028ಕ್ಕೆ ವಿಧಾನಸಭೆ ಚುನಾವಣೆ ಬರುತ್ತೆ ಅಂತ ನಾನು ಹೇಳುವುದಿಲ್ಲ. ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಬಹುದು. 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ. ಕಾಂಗ್ರೆಸ್ ಸರ್ಕಾರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಉಸ್ತುವಾರಿ ಸಚಿವರಿಗೆ ಜನರು ಶಾಪ ಹಾಕುತ್ತಿದ್ದಾರೆ ಎಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೇಳಿಕೆ ನೀಡಿದರು.












