Author: kannadanewsnow05

ದಕ್ಷಿಣ ಕನ್ನಡ : ಹಿಂದೂಗಳು ಕೇವಲ ಒಂದೋ ಎರಡೋ ಮಕ್ಕಳಿಗೆ ಜನ್ಮ ನೀಡಿದರೆ ಸಾಕಾಗೋದಿಲ್ಲ. ಇದರಿಂದ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆಯು ಹಿಂದೂಗಳ ಜನಸಂಖ್ಯೆಗಿಂತ ಹೆಚ್ಚಾಗುತ್ತದೆ ಎಂದು ಉಡುಪಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜನವರಿ 7ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಹೇಳಿಕೆ ನೀಡಿದ್ದಾರೆ. ಭಾರತದಲ್ಲಿ ಹಿಂದೂಗಳ ಜನಸಂಖ್ಯೆ 80 ಕೋಟಿ ಮತ್ತು ಮುಸ್ಲಿಮರು ಕೇವಲ 20 ಕೋಟಿ ಇದ್ದಾರೆ ಎಂದು ಕೆಲವರು ಭಾವಿಸುತ್ತಾರೆ. ಆದರೆ, ನೀವು ಇನ್ನೊಂದು ದಿಕ್ಕಿನಲ್ಲಿ ಯೋಚಿಸಬೇಕಿದೆ ಎಂದು ಹೇಳಿದ್ದಾರೆ. ಮುಸ್ಲಿಮರು ಸಂಖ್ಯೆಯಲ್ಲಿ ಕಡಿಮೆಯಿದ್ದಾರೆ ಮತ್ತು ಅವರು ಯಾವುದೇ ಹಾನಿ ಮಾಡುವುದಿಲ್ಲ ಎಂಬುದು ನಮ್ಮ ನಂಬಿಕೆ. ಆದರೆ, ಮುಸ್ಲಿಮರು ತಲಾ ನಾಲ್ಕು ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ ಮತ್ತು ಹಿಂದೂಗಳು ಹೆಚ್ಚಾಗಿ ಒಂದು ಅಥವಾ ಎರಡು ಮಕ್ಕಳನ್ನು ಹೊಂದಿದ್ದಾರೆ. 20 ಕೋಟಿ ಇರುವ ಮುಸ್ಲಿಮರು ತಲಾ ನಾಲ್ಕು ಮಕ್ಕಳಿಗೆ ಜನ್ಮ ನೀಡಿದರೆ ಅವರ…

Read More

ಬೆಂಗಳೂರು : ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ನಡೆಸಿದ ಅಧ್ಯಯನದ ಆಧಾರದ ಮೇಲೆ ರಾಜ್ಯದಲ್ಲಿ 16,000ಕ್ಕೂ ಹೆಚ್ಚು ವೈದ್ಯಕೀಯ ವೃತ್ತಿಪರರ ಕೊರತೆ ಇದೆ ವರದಿಯಾಗಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ಎಫ್‌ಐಸಿಸಿಐ ನಡೆಸಿದ ಅಧ್ಯಯನದ ಆಧಾರದ ಮೇಲೆ ಪತ್ರಿಕೆ ಪ್ರಕಟಿಸಿದ್ದ ವರದಿಯನ್ನು ಆಧರಿಸಿ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಪೀಠ, ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ. ಕರ್ನಾಟಕದಲ್ಲಿ ಆರೋಗ್ಯ ಸೇವೆಗಳು ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ತೀವ್ರ ಸಂಕಷ್ಟದಲ್ಲಿದ್ದು, ಸಾಂಕ್ರಾಮಿಕ ರೋಗಗಳ ಆತಂಕಕಾರಿ ಏರಿಕೆಯೊಂದಿಗೆ, ಕಡಿಮೆ ಸಿಬ್ಬಂದಿ ಮತ್ತು ರೋಗಿಗಳ ಹೆಚ್ಚಳವನ್ನು ನಿಭಾಯಿಸಲು ಆರೋಗ್ಯ ಇಲಾಖೆ ಅಸಮರ್ಥವಾಗಿದೆ ಎಂದು ಪಿಐಎಲ್ ಹೇಳಿದೆ. FICCI ಕಳೆದ ವರ್ಷ ಅಕ್ಟೋಬರ್ 11…

Read More

ಬೆಂಗಳೂರು : ನಾಲ್ಕು ವರ್ಷದ ಮಗುವನ್ನು ಕೊಂದು ಸೂಟ್ ಕೇಸ್ ನಲ್ಲಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ಮುಗಿಸಿ ಐಮಂಗಲ ಠಾಣೆಯಿಂದ ಬೆಂಗಳೂರಿಗೆ ಮಗುವಿನ ಮೃತ ದೇಹ ರವಾನಿಸಲಾಗಿದೆ. ಬೆಂಗಳೂರಿಗೆ ಮಧ್ಯರಾತ್ರಿ 1:30ಕ್ಕೆ ಮಗುವಿನ ಮೃತದೇಹ ಆಗಮಿಸಿದ್ದು, ಯಶವಂತಪುರ ಬಳಿಯ ಬ್ರಿಗೇಡ್ ಗೇಟ್ ವೇ ರೆಸಿಡೆನ್ಸಿಯ ತಂದೆಯ ನಿವಾಸಕ್ಕೆ ಮಗುವಿನ ಮೃತದೇಹ ಆಗಮಿಸಿ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ಇಂದು ಮಧ್ಯಾಹ್ನದವರೆಗೆ ಕುಟುಂಬಸ್ಥರಿಗೆ ಮಗುವಿನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ನಿನ್ನೆ ಗೋವಾದಿಂದ ತಾಯಿ ಸುಚನ ಮಗುವನ್ನು ಕೊಂದು ಸೂಟ್ಕೇಸ್ ನಲ್ಲಿ ಕಾರಿನಲ್ಲಿ ಸಾಗಿಸುತ್ತಿರುವಾಗ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಪೊಲೀಸರ ಕೈಗೆ ಸಿಗಿ ಬಿದ್ದಿದ್ದಾಳೆ ಈ ವೇಳೆ ತಪಾಸಣೆಯ ವೇಳೆ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಸುಚನ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸುಚನಾ ಹಾಗೂ ಪತಿ ವೆಂಕಟರಮಣ ವಿಚ್ಛೇದನ ಗೊಂಡಿರುವ ದಂಪತಿಗಳಾಗಿದ್ದಾರೆ. ವಿಚ್ಛೇದನ ಪಡೆದ ನಂತರ ಕೋರ್ಟ್ ತಂದೆಗೆ…

Read More

ತುಮಕೂರು : ಸ್ವ ಪಕ್ಷದ ವಿರುದ್ಧವೇ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಅಸಮಾಧಾನಗೊಂಡಿರುವ ಬಿಜೆಪಿಯ ಮಾಜಿ ಸಚಿವ ವಿ ಸೋಮಣ್ಣ ವರಿಷ್ಠರನ್ನು ಭೇಟಿಯಾಗಲು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಅಲ್ಲದೆ ನಿನ್ನೆ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಮಾಜಿ ಸಚಿವ ವಿ ಸೋಮಣ್ಣ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ ಅಲ್ಲದೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೋಮಣ್ಣ ಅವರು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಇತ್ತ ತುಮಕೂರಿನಲ್ಲಿ ವಿ ಸೋಮಣ್ಣಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೊಡಿಸಲು ಯತ್ನಿಸಲಾಗುತ್ತಿದ್ದೂ, ಹಾಲಿ ಸಂಸದ ಬಿಎಸ್ ಬಸವರಾಜು ಸೋಮಣ್ಣಗೆ ಟಿಕೆಟ್ ಕೊಡಿಸಲು ಲಾಬಿ ಮಾಡುತ್ತಿದ್ದು ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಬಿಎಸ್ ಬಸವರಾಜು ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ. ವಿ. ಸೋಮಣ್ಣ ಪರ ಹಾಲಿ ಸಂಸದ ಬಿಎಸ್ ಬಸವರಾಜು ಬ್ಯಾಟ್ ಬೀಸುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಸೇರಿದಂತ್ವ…

Read More

ಬೆಂಗಳೂರು : ಸ್ವಾತಂತ್ರ್ಯ ಪೂರ್ವದಿಂದಲೂ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅರಣ್ಯ ಭೂಮಿಯನ್ನು ಗುತ್ತಿಗೆಗೆ ಪಡೆದು ಕಾಫಿ, ಟೀ, ರಬ್ಬರ್‌ ಬೆಳೆಯುತ್ತಿರುವ ಪ್ರತಿಷ್ಠಿತ ಕಂಪನಿಗಳಿಂದ ಸರ್ಕಾರಕ್ಕೆ ಸುಮಾರು 2000 ಕೋಟಿ ರು. ಗುತ್ತಿಗೆ ಹಣ ಮತ್ತು ಬಡ್ಡಿ ಬಾಕಿ ಬರಬೇಕಿದೆ ಎಂದು ಅರಣ್ಯ ಸಚಿವ ಈಶ್ವ‌ರ್ ಖಂಡ್ರೆ ಹೇಳಿದ್ದಾರೆ. ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, 2000 ಕೋಟಿ ರು. ವಸೂಲಿ ಮಾಡಲು ಪರಿಸರ ಇಲಾಖೆಯ ಪ್ರಧಾನ ಕಾರ್ಯ ದರ್ಶಿ ಬಿ.ಪಿ.ರವಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲು ತೀರ್ಮಾನಿಸಲಾಗಿದೆ. ಅಲ್ಲದೇ, ಕೋರ್ಟ್‌ನಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕಾನೂನು ಹೋರಾಟ ನಡೆಸಲು ವಿಶೇಷ ಕಾನೂನು ಕೋಶ ರಚಿಸಲಾಗುವುದು ಎಂದು ತಿಳಿಸಿದರು. ಹುಲಿ, ಚಿರತೆ ಉಗುರು, ಜಿಂಕೆ ಕೊಂಬು, ಆನೆ ದಂತ, ಕೂದಲು ಇತ್ಯಾದಿ ವನ್ಯಜೀವಿ ಅಂಗಾಂಗಗಳನ್ನು ಅಕ್ರಮವಾಗಿ ಸಂಗ್ರಹಿಸಿ ಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ. ಇವುಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ ಕಲ್ಪಿಸಲಾಗಿದ್ದು, ಜ.16ರಿಂದ 3 ತಿಂಗಳುಗಳ ಕಾಲ ಈ ವಸ್ತುಗಳನ್ನು ಹತ್ತಿರದ ಅರಣ್ಯ ಇಲಾಖೆಯ ಕಚೇರಿಗೆ…

Read More

ಬೆಂಗಳೂರು: ಈ ಬಾರಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಎನ್‌ಡಿಎ ಜತೆಗಿನ ಮೈತ್ರಿ ಬಳಿಕ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬಣ ದೊಂದಿಗೆ ಮುನಿಸಿಕೊಂಡು ತಮ್ಮದೇ ಅಸಲಿ ಜೆಡಿಎಸ್‌ ಎಂದು ಪ್ರತ್ಯೇಕ ಬಣ ಕಟ್ಟಿಕೊ೦ಡಿರುವ ಉಚ್ಚಾಟಿತ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ತಮ್ಮ ಪಕ್ಷಕ್ಕೆ ಪದಾಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಮತ್ತೊಮ್ಮೆ ಸಡ್ಡು ಹೊಡೆದಿದ್ದಾರೆ. ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲ ಲೋಕಸಭಾ ಕ್ಷೇತ್ರಗಳಿಗೆ ಅಧ್ಯಕ್ಷರನ್ನು, ಪಕ್ಷದ ವಕ್ತಾರರನ್ನು ನೇಮಕ ಮಾಡಿಕೊಂಡಿದ್ದಾರೆ. ಅಲ್ಲದೇ, ಅವರಿಗೆ ಖುದ್ದಾಗಿ ನೇಮಕದ ಆದೇಶ ಪತ್ರವನ್ನು ಸಹ ವಿತರಿಸಿದ್ದಾರೆ. ಈ ಮೂಲಕ ದಳಪತಿಗಳಿಗೆ ಶಾಕ್ ನೀಡಿದ್ದಾರೆ. ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷರು ಎಂದು ಘೋಷಿಸಿ ಕೊಂಡಿದ್ದು, ಬಿಬಿಎಂಪಿ ಮಾಜಿ ಸದಸ್ಯ ಇಮ್ರಾನ್ ಪಾಷಾ ಅವರನ್ನು ಜೆಡಿಎಸ್‌ನ ರಾಜ್ಯ ವಕ್ತಾರರನ್ನಾಗಿ ನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ. ಮಹಿಳಾ ವಿಭಾಗದ ರಾಜ್ಯ ಸಂಚಾಲಕರ ನ್ನಾಗಿ ಹೆನ್ರಿಟಾ ಮಾರಿಯಾ ಅವರನ್ನು ನೇಮಕ ಮಾಡಲಾಗಿದೆ. ಇನ್ನುಳಿದಂತೆಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಮಹಿಳಾವಿಭಾಗಅಧ್ಯಕ್ಷೆಯಾಗಿ ಉಮಾದೇವಿ ಅವರನ್ನು ನೇಮಕ ಮಾಡಿದ್ದಾರೆ. ಬೆಂಗಳೂರು ದಕ್ಷಿಣ…

Read More

ಬೆಂಗಳೂರು : ರೈತ ವಿರೋಧಿ ಸರ್ಕಾರದ ವಿರುದ್ಧ ರಾಜಭವನದಲ್ಲಿ ರಾಜ್ಯಪಾಲ ಗೆಹಲೋಟ್ ಅವರಿಗೆ ಬಿಜೆಪಿ ನಿಯೋಗ ದೂರು ನೀಡಿದೆ ರೈತ ಹಾಗೂ ಕೃಷಿ ಕಾರ್ಮಿಕ ವಿರೋಧಿ ನೀತಿಗಳ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಬೇಜವಾಬ್ದಾರಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದೇವೆ. ಬರ ಬಂದರು ಸರ್ಕಾರ ರೈತರಿಗೆ ಸರಿಯಾದ ರೀತಿಯಲ್ಲಿ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಮುಖ್ಯಮಂತ್ರಿ ಉಪಮುಖ್ಯಮಂತ್ರಿ ರೈತರ ಸಾವಿಗೆ ಕಿಂಚಿತ್ತು ಬೆಲೆ ಕೊಟ್ಟಿಲ್ಲ.ಕೇಂದ್ರ ನಮ್ಮ ನೆರವಿಗೆ ಬರುತ್ತಿಲ್ಲ ಅಂತ ಬರೀ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ.ನಾವು ಅಧಿಕಾರದಲ್ಲಿದ್ದಾಗ 3000 ಕೋಟಿ ಪರಿಹಾರ ನೀಡಿದ್ದೇವೆ ಎಂದು ಹೇಳಿದರು. ರೈತರ ಸಮಸ್ಯೆಗೆ ಸ್ಪಂದಿಸದಿದ್ದರೆ ಸರ್ಕಾರ ಸತ್ತಂತೆ ಎಂದು ಬೆಂಗಳೂರಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು.18 ಸಾವಿರ ಕೋಟಿ ನಷ್ಟ ಆಗಿದೆ ಎಂದು ಕೇಂದ್ರಕ್ಕೆ ಮನವಿ ಸಲ್ಲಿಕೆಯಾಗಿದೆ.ಆದರೆ ರಾಜ್ಯ ಸರ್ಕಾರದಿಂದ…

Read More

ನವದೆಹಲಿ : ಸ್ವ ಪಕ್ಷದ ವಿರುದ್ಧವೇ ತಮ್ಮ ಅಸಮಾಧಾನವನ್ನು ಆಗಾಗ ಹೊರ ಹಾಕುತ್ತಿರುವ ಬಿಜೆಪಿಯ ಮಾಜಿ ಸಚಿವ ವಿ ಸೋಮಣ್ಣ ಇಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾದ ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿರುವ ಬಿಎಲ್ ಸಂತೋಷರನ್ನು ಭೇಟಿ ಮಾಡಿದ್ದಾರೆ.ವರಿಷ್ಟರ ಭೇಟಿ ಮಾಡಲು ಮಾಜಿ ಸಚಿವ ವಿ.ಸೋಮಣ್ಣ ನಿನ್ನೆ ದೆಹಲಿಗೆ ತೆರಳಿದ್ದಾರೆ. ಇಂದು ಬಿ ಎಲ್ ಸಂತೋಷರನ್ನು ಭೇಟಿ ಮಾಡಿದ್ದೂ, ಕೇಂದ್ರ ಸಚಿವ ಅಮಿತ್ ಶಾ ಬೇಟಿಗೆ ವಿ. ಸೋಮಣ್ಣ ಅವಕಾಶ ಕೇಳಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಅಥವಾ ನಾಳೆ ಈ ಸೋಮಣ್ಣ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ರಾಜ್ಯದ ಬಿಜೆಪಿ ಘಟಕದ ನೂತನ ಅಧ್ಯಕ್ಷ ಹಾಗೂ ಪಕ್ಷ ನಾಯಕ ಕುರಿತು ವಿ ಸೋಮಣ್ಣ ಸೇರಿದಂತೆ ಬಿಜೆಪಿಯ ಹಲವು ನಾಯಕರಲ್ಲಿ ಅಸಮಾಧಾನ ಭಗಿಲೆದ್ದಿತ್ತು. ಇದೇ ವಿಷಯವಾಗಿ ಬಸನಗೌಡ ಪಾಟೀಲ್ ಯತ್ನಾಳ ಕೂಡ ವಿಶ್ವ ಪಕ್ಷ ಬಿಜೆಪಿ…

Read More

ಬೆಂಗಳೂರು : ಕನ್ನಡ ನಾಮಫಲಕ ಅಳವಡಿಕೆ ಹೋರಾಟದಲ್ಲಿ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಗೊಂಡರು. ನಾರಾಯಣಗೌಡ ಬಿಡುಗಡೆಯಾಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ನ ಪೊಲೀಸರೂ ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ನಾರಾಯಣಗೌಡರನ್ನು ಮಾರ್ಥಾಸ್ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಎಂದು ಕರೆದುಕೊಂಡು ಹೋಗಲಾಗಿದ್ದು, ಇದೀಗ ಕುಮಾರಸ್ವಾಮಿ ಲೇಔಟ್ ಪೊಲೀಸ್ ಅಧಿಕಾರಿಗಳು ಅಲ್ಲಿಂದ ನೇರವಾಗಿ ಕೋರ್ಟಿಗೆ ಕರೆ ತಂದು ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಇದೆ ವೇಳೆ ಕೋರ್ಟ್ ನಾರಾಯಣಗೌಡರ ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಕೋರ್ಟ್ ಮುಂದೂಡಿತು. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಕೆಸ್ ವಾರೆಂಟ್ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಕರವೇ ಅಧ್ಯಕ್ಷ ನಾರಾಯಣಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇತ್ತೀಚೆಗೆ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ನಾಮಫಲಕ ರ್ಯಾಲಿ ನಡೆಸಿತ್ತು. ಅಂಗಡಿ ಮುಂಗಟ್ಟುಗಳು ನಾಮಫಲಕಗಳು ಶೇ 60ರಷ್ಟು ಕನ್ನಡದಲ್ಲಿ ಇರಬೇಕೆಂದು ಆಗ್ರಹಿಸಿತ್ತು. ಅಲ್ಲದೇ ರ್ಯಾಲಿ ವೇಳೆ ಬೇರೆ ಬೇರೆ…

Read More

ಬೆಂಗಳೂರು : ಇತ್ತೀಚಿಗೆ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು ಬೆಂಗಳೂರಿನಲ್ಲಿ ಖಾಸಗಿ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೇಲೆ ಇದೀಗ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿ, ಖಾಸಗಿ ಹೋಟೆಲ್ಗಳಿಗೆ ವಿದೇಶಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ಘಟನೆಗೆ ಸಂಬಂಧಿಸಿದಂತೆ ಮೂರು ವಿದೇಶಿ ಮೂಲದ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಇದೆ ಬವೇಳೆ ವೇಶ್ಯಾವಾಟಿಕೆಗೆ ಕರೆತಂದಿದ್ದ ಇವರು ವಿದೇಶಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.ಮಹಿಳೆಯರ ರಕ್ಷಣೆ ಮಾಡಿ ಎಫ್ ಆರ್ ಆರ್ ಓ ಅಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ.ಬೆಂಗಳೂರು, ಜೈಪುರ್, ಚೆನ್ನೈ, ಮೈಸೂರು, ದೆಹಲಿ, ಉದಯಪುರ ಹಾಗೂ ಮುಂಬೈ ಮುಂತಾದ ಕಡೆ ಆರೋಪಿಗಳು ಏಜೆಂಟ್ ಗಳನ್ನು ಇಟ್ಟುಕೊಂಡು ಈ ದಂಧೆ ನಡೆಸುತ್ತಿದ್ದರು. ಹೆಚ್ಚಿನ ಹಣದ ಆಮಿಷಗಳನ್ನು ತೋರಿಸಿ ಆರೋಪಿಗಳು ದಂದೆಗೆ ಕರೆಸಿಕೊಳ್ಳುತ್ತಿದ್ದರು. ಟೆಲಿಗ್ರಾಂ ಹಾಗೂ ವಾಟ್ಸಪ್…

Read More