Author: kannadanewsnow05

ಕಲಬುರ್ಗಿ : ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸುಲಭವಾಗುತ್ತದೆ ಎಂದು ಸಿದ್ದರಾಮಯ್ಯ ಬಣದ ಹಲವು ಕಾಂಗ್ರೆಸ್ ನಾಯಕರು ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವಂತೆ ಒತ್ತಡ ಹೇರುತ್ತಿದ್ದದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಸ್ಪಷ್ಟನೆ ನೀಡಿದ್ದು ಮೂರು ಡಿಸಿಎಂ ಹುದ್ದೆ ವಿಚಾರ ಹೈಕಮಾಂಡ್ ಮುಂದೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಲೋಕಸಭೆ ಚುನಾವಣೆಗೆ ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಗೆ ವಿಚಾರವಾಗಿ ನಾಳೆ (ಜ.10) ರಂದು ಸಭೆ ನಡೆಯಲಿದೆ. ಯಾರನ್ನು ಕಣಕ್ಕಿಳಿಸಬೇಕು ಎಂದು ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಇಂಡಿಯಾ ಒಕ್ಕೂಟ ಒಟ್ಟಾಗಿ ಹೋಗುವ ನಿರ್ಣಯ ಕೈಗೊಂಡಿದ್ದೇವೆ. ಬುಧವಾರ ದೆಹಲಿಯಲ್ಲಿ ಅನೇಕ ಘಟಕಗಳ ಸಭೆ ಕೂಡ ಕರೆದಿದ್ದೇವೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಿದ್ದೇವೆ ಎಂದು ತಿಳಿಸಿದರು. ಹೆಚ್ಚುವರಿ ಡಿಸಿಎಂ ವಿಚಾರವಾಗಿ ನಮ್ಮ ಮುಂದೆ ಪ್ರಸ್ತಾವನೆ ಇಲ್ಲ. ಹೆಚ್ಚುವರಿ ಡಿಸಿಎಂ ಉಹಾಪೋಹ. ಎಲೆಕ್ಷನ್ ಸಂದರ್ಭದಲ್ಲಿ…

Read More

ಮೈಸೂರು : ರಾಮನ ಪೇಟೆಂಟ್ ಅನ್ನು ಬಿಜೆಪಿಗೆ ಕೊಟ್ಟಿದ್ದೆ ಕಾಂಗ್ರೆಸ್. ಕಾಂಗ್ರೆಸ್ಸಿಗರೇ ಪೂಜಿಸಿದ್ದರೆ ಬಿಜೆಪಿಗೆ ಈ ಪೇಟೆಂಟ್ ಸಿಗುತ್ತಿತ್ತು. ಕಾಂಗ್ರೆಸ್ನವರಿಗೆ ರಾಮ ರಾಜ್ಯದ ಮೇಲೆ ನಂಬಿಕೆ ಇದೆಯಾ ಅಥವಾ ರಾವಣ ರಾಜ್ಯದ ಮೇಲೆ ನಂಬಿಕೆ ಇದೆಯಾ ಅವರನ್ನೇ ಕೇಳಿ ಕಾಂಗ್ರೆಸ್ ಗೆ ಗಾಂಧೀಜಿ ರಾಮರಾಜ್ಯದ ಮೇಲೆ ನಂಬಿಕೆ ಇಲ್ಲ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಾಕ್ಷತೆಗೆ ಅನ್ನ ಭಾಗ್ಯ ಅಕ್ಕಿ ಬಳಸಿದ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ ಅವರು, ಮಂತ್ರಾಕ್ಷತೆ ಸ್ವೀಕರಿಸಿದವರಿಗೆ ಅಕ್ಕಿ ಕೊಡಲು ಮನಸ್ಸು ಬರುತ್ತಾ ಅಕ್ಷತೆ ಬಗ್ಗೆ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯಗೆ ನಂಬಿಕೆ ಇಲ್ಲ ಅಯೋಧ್ಯೆಗೆ ಹೋಗುವುದು ಬಿಡುವುದು ಸಿಎಂ ಗೆ ಬಿಟ್ಟ ವಿಚಾರ ಎಂದು ಕಿಡಿಕಾರಿದರು. ಪ್ರತಾಪ್ ಸಿಂಹ ನ್ಯಾಷನಲ್ ಲೀಡರ್ ಎಂಬ ಯತಿಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಖಂಡಿತ ನಾನು ನ್ಯಾಷನಲ್ ಲೀಡರ್ ಅಲ್ಲ ಎಂದು ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.ಬರವಣಿಗೆಯ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ಮಹದೇವಪುರದಲ್ಲಿ ನಿರ್ವಣ ಸ್ಪ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೀದಿಯಾನಂದ ಪ್ರತಿಕ್ರಿಯೆ ನೀಡಿ ಈ ಪ್ರಕರಣದಲ್ಲಿ ಕೆಲವು ಪೊಲೀಸ್ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತಂತೆ ಮಾತನಾಡಿದ ಅವರು, ಮಾದೇವಪುರದ ನಿರ್ವಾಣ ಸ್ಪಾ ಮೇಲೆ ಸಿಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 40 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದರು. 33 ಭಾರತೀಯರು ಹಾಗೂ 7 ಜನ ವಿದೇಶಿ ಮಹಿಳೆಯರನ್ನು ಸಿಸಿಬಿ ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಸಿಸಿಬಿ ದಾಳಿಯಲ್ಲಿ 47 ಗ್ರಾಹಕರು ಸಿಗಿಬಿದ್ದಿದ್ದಾರೆ.23 ಜನ ಕೆಲಸಗಾರರನ್ನು ಈಗಾಗಲೇ ವಿಚಾರಣೆ ಮಾಡಲಾಗಿದೆ. ಸ್ಪ ಮಾಲಿಕ ಅನಿಲ್ ರೆಡ್ಡಿ ಬಂಧಿಸಿ 5.18 ಲಕ್ಷ ಜಪ್ತಿ ಮಾಡಿದ್ದೇವೆ ಎಂದು ಹೇಳಿದರು. ಪ್ರಕರಣ ಕುರಿತಂತೆ ಮಾರತಹಳ್ಳಿ ಎಸಿಪಿ…

Read More

ಬೆಂಗಳೂರು : ಇತ್ತೀಚಿಗೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಮೂರು ಸಮುದಾಯಗಳ ನಾಯಕರನ್ನು ಹೆಚ್ಚುವರಿ ಡಿಸಿಎಂ ಹುದ್ದೆಗೆ ನೇಮಕ ಮಾಡಬೇಕು ಎಂದು ಹೇಳಿಕೆ ನೀಡಿರುವ ವಿಚಾರ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಈಗ ಈ ವಿಚಾರಕ್ಕೆ ಪುಷ್ಟಿ ನೀಡುವಂತೆ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲ, ಈ ವಿಷಯದ ಕುರಿತು ಚರ್ಚಿಸಿದ್ದಾರೆ ಎಂದು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಜೊತೆ ಕಾಂಗ್ರೆಸ್ ಉಸ್ತುವಾರಿ ಸುರಜೆವಾಲ ಚರ್ಚೆ ವಿಚಾರ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಚರ್ಚೆಯಾಗಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಎಷ್ಟು ಸಮುದಾಯಗಳಿಗೆ ಕೊಡಬೇಕು ಅಂತ ಚರ್ಚೆ ಮಾಡಿಲ್ಲ ಎಂದು ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ವೇಣುಗೋಪಾಲ್ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ. ಹೆಚ್ಚುವರಿ ಡಿಸಿಎಂ ಸೃಷ್ಟಿಯಾದರೂ ಡಿಕೆಶಿ ಡಿಸಿಎಂ ಆಗಿರುತ್ತಾರೆ.ಅದು ಅವರ ಹುದ್ದೆ ನಾವು ನಮ್ಮ ಬೇಡಿಕೆಯನ್ನು ಹೇಳಿದ್ದೇವೆ.ಪಕ್ಷದ ಹೈಕಮಾಂಡ್ ಈ…

Read More

ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ನಾನು ಯಾರಿಗೂ ಮೋಸ ಮಾಡಿಲ್ಲ ಎಂದು ಡೆತ್ ನೋಟ್ ಅಲ್ಲಿ ಸಂಪೂರ್ಣವಾಗಿ ವಿವರವಾಗಿ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತ್ಯಾಗರಾಜ ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಜಾನ್ಸಿ ಎಂದು ಗುರುತಿಸಲಾಗಿದ್ದು, ದ್ವಿತೀಯ ಪಿಯುಸಿ ಅಧ್ಯಯನ ಮಾಡುತ್ತಿದ್ದಾಳೆ. ಆತ್ಮಹತ್ಯೆಗು ಮುನ್ನ ಡೆತ್ ನೋಟ್ ಅಲ್ಲಿ ಸಂಪೂರ್ಣವಾಗಿ ವಿವರ ಬರೆದಿಟ್ಟು ವಿದ್ಯಾರ್ಥಿನಿ ಜಾನ್ಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜಿನಿಂದ ಬಂದು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತ್ಯಾಗರಾಜನಗರದಲ್ಲಿ ಘಟನೆ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ.ನಾನು ಯಾರಿಗೂ ಮೋಸ ಮಾಡಿಲ್ಲ ಎಂದು ಸಂಪೂರ್ಣವಾಗಿ ವಿವರ ಬರೆದು ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್ ಯು ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ ಕುರಿತಂತೆ ದೊಡ್ಡಬಳ್ಳಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಗದಗ : ರಾಕಿಂಗ್ ಸ್ಟಾರ್ ಯಶ್, ಹುಟ್ಟು ಹಬ್ಬದ ದಿನದಂದು ಅತ್ಯಂತ ಘೋರ ದುರಂತ ಸಂಭವಿಸಿದೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸುಣದೂರು ಗ್ರಾಮದಲ್ಲಿ ನಟ ಯಶ್ ಅವರ ಇಪ್ಪತೈದು ಅಡಿ ಕಟೌಟ್ ಕಟ್ಟುವ ವೇಳೆ ವಿದ್ಯುತ್ ಶಾಕ್ ತಗುಲಿ ಮೂವರು ಯುವಕರು ಸಾವನಪ್ಪಿದ್ದು ನಾಲ್ವರು ಯುವಕರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಸಂಭವಿಸಿದೆ. ಘಟನೆಯ ನಂತರ ನಟ ಯಶ್ ಅವರು ನಿನ್ನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುಣ್ಣದೂರು ಗ್ರಾಮಕ್ಕೆ ಭೇಟಿ ನೀಡಿ ಮೃತ ಯುವಕರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ತಾವು ಕೂಡ ಭಾವುಕರಾಗಿರುವಂತಹ ಸನ್ನಿವೇಶ ಜರುಗಿತು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಈ ರೀತಿ ಕಟ್ ಔಟ್ ನೀಲ್ಲಿಸುವುದು ಆಗಲಿ ಇನ್ಯಾವುದೋ ಮಾಡುವುದಾಗಲಿ ಮಾಡಬೇಡಿ ಅಭಿಮಾನ ಪ್ರೀತಿಯಿಂದ ಇರಲಿ ಆದರೆ ಈ ರೀತಿ ಘಟನೆಗಳಿಂದ ನನಗೆ ಹುಟ್ಟುಹಬ್ಬದ ಮೇಲೆ ಅಸಹ್ಯ ಹುಟ್ಟಿಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು. ನಂತರ ಅವರು ಗಂಭೀರವಾಗಿ ಗಾಯಗೊಂಡಂತಹ ಉಳಿದ ನಾಲ್ವರು ಯುವಕರನ್ನು ಭೇಟಿಯಾಗಲು ಗದಗ ಜಿಲ್ಲೆಯ ಜೇಮ್ಸ್…

Read More

ಗದಗ : ಯಶ್ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್ ತಗೋಳಿ ಮೂರು ಯುವಕರು ಮೃತಪಟ್ಟು ನಾಲ್ವರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುಣದೂರು ಗ್ರಾಮದಲ್ಲಿ ನಿನ್ನೆ ನಡೆದಿರುವಂತಹ ದುರಂತ ಘಟನೆ ಯಾಗಿತ್ತು. ಘಟನೆಯ ನಂತರ ನಿನ್ನೆ ಸಾಯಂಕಾಲ ನಟ ಯಶ್ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು ನಂತರ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಅಭಿಮಾನಿಗಳನ್ನು ಭೇಟಿ ಮಾಡಿ ಆರೋಗ್ಯವನ್ನು ವಿಚಾರಿಸಿ ವಾಪಸ್ ತೆರಳುತ್ತಿದ್ದ ಸಂದರ್ಭ ವೇಳೆ ನಿಖಿಲ್ ಎನ್ನುವ ಯುವಕ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡು ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾನೆ. ಆದರೆ ಈ ಕುರಿತಂತೆ ಗದಗ ಎಸ್ ಪಿ ಬಿಎಸ್ ನೇಮಗೌಡ ಅವರು ಪ್ರತಿಕ್ರಿಯೆ ನೀಡಿದ್ದು, ಯಶ್ ಬೆಂಗವಲು ವಾಹನಕ್ಕೆ ಬೈಕ್ ಡಿಕ್ಕಿಯಾಗಿಲ್ಲ.ಪೊಲೀಸ್ ಠಾಣೆಗೆ ಹೋಗೋ ಜೀಪ್ಗೆ ಬೈಕ್ ಡಿಕ್ಕಿಯಾಗಿದೆ ಎಂದು ಗದಗ ಎಸ್ ಪಿ ಬಿ ಎಸ್ ನೇಮಗೌಡ ಸ್ಪಷ್ಟನೆ ನೀಡಿದ್ದಾರೆ.ಪೊಲೀಸ್ ಜೀಪಿಗೆ ಬೈಕ್ ಡಿಕ್ಕಿ ಹೊಡೆದಿದೆ…

Read More

ಮಂಡ್ಯ :-ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸರ್ಕಾರಿ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶು ಇಲಾಖೆ ಸಹಾಯಕ ನಿರ್ದೇಶಕರೊಬ್ಬರನ್ನು ಅಮಾನತು ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಪಶು ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್ ಅಮಾನತುಗೊಂಡವರು.ಈ ಹಿಂದೆ ಪಾಂಡವಪುರದ ಪಶು ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದಾಗ 2018-19ನೇ ಸಾಲಿನ ಎಸ್ ಸಿಪಿ, ಟಿಎಸ್ ಪಿ ಯೋಜನೆಯಡಿಯಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಅಧೀನ ಕಾರ್ಯದರ್ಶಿ ಮದ್ದೂರು ಪಶು ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

Read More

ಉತ್ತರ ಕರ್ನಾಟಕದ ಅತ್ಯಂತ ಪ್ರಸಿದ್ಧ ಧಾರ್ಮಿಕ ಸ್ಥಳವಾಗಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಕೋಟ್ಯಂತರ ಜನರು ಭೇಟಿ ನೀಡುತ್ತಾರೆ. ಜಾತ್ರೆ ಸಂದರ್ಭದಲ್ಲಿ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಒದಗಿಸುವುದರ ಜತೆಗೆ ಲಕ್ಷಾಂತರ ಜನರಿಗೆ ಸುಗಮ ದರ್ಶನಕ್ಕೆ ಅನುಕೂಲವಾಗುವಂತೆ ಮಾಸ್ಟರ್ ಪ್ಲ್ಯಾನ್ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿ ದೇವಿ ದರ್ಶನ ಪಡೆದು ಅಧಿಕಾರಿಗಳ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷ ಕೋಟ್ಯಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಫ್ಲ್ಯಾನ್ ರೂಪಿಸಲಾಗುವುದು ಎಂದರು. ದೇವಸ್ಥಾನವು ಪ್ರತಿವರ್ಷ ಅಂದಾಜು ₹ 20 ಕೋಟಿ ಆದಾಯ ಹೊಂದಿದೆ. ಈ ಆದಾಯದಲ್ಲಿ ದೇವಸ್ಥಾನ ನಿರ್ವಹಣೆ ಬಳಿಕ ಉಳಿಯುವ ಹಣವನ್ನು ಮಾಸ್ಟರ್ ಪ್ಲ್ಯಾನ್ ಅನುಷ್ಠಾನಕ್ಕೆ ಬಳಸಬಹುದಾಗಿದೆ. ಇದಲ್ಲದೇ‌ ಸರಕಾರದಿಂದಲೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಬಹುದು. ಇದಲ್ಲದೇ ಪ್ರವಾಸೋದ್ಯಮ ಇಲಾಖೆಯ…

Read More

ಗದಗ : ಗದಗದಲ್ಲಿ ಮತ್ತೊಬ್ಬ ನಟ ಯಶ್ ಅಭಿಮಾನಿ ಸಾವನ್ನಪ್ಪಿದ್ದು, ಯಶ್ ಅಭಿಮಾನಿ ನಿಖಿಲ್ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಖಿಲ್ ಕೊನೆಯುಸಿರೆಳದಿದ್ದಾನೆ. ಎಂದು ಹೇಳಲಾಗುತ್ತಿದೆ ಯಶ್ ನೋಡಲು ಅಭಿಮಾನಿ ನಿಖಿಲ್ ಬೈಕ್ ನಲ್ಲಿ ಬಂದಿದ್ದ ಎಂದು ಹೇಳಲಾಗುತ್ತಿದೆ. ಈ ವೇಳೆ ಹಿಂಬಾಲಿಸುತ್ತಿದ್ದ ಅಭಿಮಾನಿ ನಿಖಿಲ್ ಬೈಕ್ ಗೆ ಈ ಸಂದರ್ಭದಲ್ಲಿ ಯಶ್ ಬೆಂಗಾವಲು ವಾಹನ ಡಿಕ್ಕಿಯಾಗಿದೆ. ತಕ್ಷಣ ಪೊಲೀಸರು ಉತ್ತಮ ವಾಹನದಲ್ಲೇ ನಿಖಿಲನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಗದಗದ ಮುಳಗುಂದ ನಾ ಕಾ ಬಳಿ ಈ ಪದದ ನಡೆದಿತ್ತು ಯಶ್ ವಾಪಸ್ ತೆರಳು ವೇಳೆ ನಡೆದ ದುರಂತವಾಗಿತ್ತು. ಇದಿಗnಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಗಾಯಾಳು ನಿಖಿಲ ಸಾವನ್ನಪ್ಪಿದ್ದಾರೆ, ನಿಖಿಲ್ ಗದಗ ತಾಲೂಕಿನ ಬಿಂಕದಕಟ್ಟೆ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದ್ದು, ಗದಗ ನಗರದ ಮುಳಗೊಂಡ ನಾಕಾ ಬಳಿ ನಿನ್ನೆ ಯಶ್ ಬೆಂಗಾವಲು ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದಿತ್ತು. ಯಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ಶಾಕ್ ನಿಂದ ಗದಗ…

Read More