Author: kannadanewsnow05

ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಕವಿಯುತ್ತಿದ್ದಂತೆ, ಇತ್ತ ಕೇಂದ್ರ ಸರ್ಕಾರ ಅಲರ್ಟ್ ಆಗಿ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ. ಜಲಾಶಯಗಳು, ಅಣೆಕಟ್ಟುಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದೆ. ಹೀಗಾಗಿ ಕೇಂದ್ರ ಸರ್ಕಾರದ ಸೂಚನೆಯಂತೆ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯತಿಳಿಸಿದರು. ಮಂಡ್ಯ ಜಿಲ್ಲಾ ಪ್ರವಾಸದ ವೇಳೆ ಬೆಂಗಳೂರಿಂದ ತಾಲೂಕಿನ ಗೆಜ್ಜೆಲಗೆರೆ ಗ್ರಾಮದ ಸಮೀಪದ ಹೆಲಿಪ್ಯಾಡ್ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಭಾರತೀಯ ಸೇನೆ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸುವ ಮೂಲಕ ಭಯೋತ್ಪಾದಕರ ಅಡಗು ತಾಣಗಳನ್ನು ಧ್ವಂಸಗೊಳಿಸಿದೆ ಎಂದರು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಜಲಾಶಯಗಳು, ರೈಲು ನಿಲ್ದಾಣ ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಜೊತೆಗೆ ರಾಜ್ಯಾದ್ಯಂತ ಇರುವ ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲಾಗುತ್ತಿದೆ. ಮೈಸೂರಿನ ನ್ಯಾಯಾಲಯದ ಮೊರೆ ಹೋಗಿದ್ದಾರೆ. ರಾಜ್ಯದಲ್ಲಿ ಎಷ್ಟು ಜನರಿದ್ದಾರೆ ಎನ್ನುವ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು. ನಮ್ಮ ದೇಶದ ಸೈನಿಕರ…

Read More

ವಾಷಿಂಗ್ಟನ್ : ಭಾರತದ ಜೊತೆಗೆ ಯಾವ ವಿರೋಧ ಇಲ್ಲದೆ ಅಮೆರಿಕ ನಿಲ್ಲಬೇಕು. ನಾಯಕನ ಕೆಲಸವು ನಾಗರೀಕರನ್ನು ರಕ್ಷಿಸುವುದು ಆಸಿಮ್ ಹಿಂದೂ ಮುಸ್ಲಿಂ ಒಟ್ಟಿಗೆ ಇರಲಾಗಲ್ಲ ಎಂದು ಪಾಕಿಸ್ತಾನ ವಿರುದ್ಧ ಮಾಜಿ ಪೆಂಟಗನ್ ಅಧಿಕಾರಿ ಮತ್ತು ಅಮೇರಿಕನ್ ಎಂಟರ್‌ಪ್ರೈಸ್ ಇನ್‌ಸ್ಟಿಟ್ಯೂಟ್‌ನ ಹಿರಿಯ ಸಹೋದ್ಯೋಗಿ, (NSA) ಮೈಕಲ್ ರೂಬಿನ್ ಗರಂ ಆಗಿದ್ದಾರೆ. ಪಾಕಿಸ್ತಾನ ತನ್ನ ವಿಫಲತೆ ಮುಚ್ಚಿಕೊಳ್ಳಲು ಧರ್ಮ ತರುತ್ತದೆ. ಪಾಕಿಸ್ತಾನ ಭ್ರಷ್ಟಾಚಾರ, ಆರ್ಥಿಕತೆ ವಿಷಯದಲ್ಲಿ ಧರ್ಮ ತರುತ್ತದೆ. ವೈಫಲ್ಯಗಳನ್ನು ಶಿಫ್ಟ್ ಮಾಡಲು ಜನರನ್ನು ಎತ್ತಿ ಕಟ್ಟುತ್ತದೆ ಅಲ್ಪಸಂಖ್ಯಾತರ ವಿರುದ್ಧ ಬಲಿಷ್ಠ ಸಮುದಾಯ ತರುತ್ತದೆ ಆದರೆ ಭಾರತದಲ್ಲಿ ಎಲ್ಲಾ ಧರ್ಮಿಯರು ಒಂದಾಗಿ ವಾಹಿಸುತ್ತಾರೆ. ಭಾರತೀಯರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಚರ್ಚಿಸುತ್ತಾರೆ ಎಂದರು. ಪಾಕಿಸ್ತಾನ ಭಯೋತ್ಪಾದಾನೆಗೆ ಸಹಕರಿಸಿ ಸಂಘರ್ಷ ಆರಂಭಿಸಿದೆ ಎಂದು ಪಾಕಿಸ್ತಾನಕ್ಕೆ ಅಮೆರಿಕ ಎನ್ ಎಸ್ ಎ ಮೈಕಲ್ ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡಿದ್ದಾರೆ. ಭಾರತವು ಭಯೋತ್ಪಾದನೆಯ ಬಲಿಪಶುವಾಗಿದೆ. ಪಾಕಿಸ್ತಾನದ ಈ ಸ್ಥಿತಿಗೆ ಪಾಕಿಸ್ತಾನ ನಾಯಕರೇ ಕಾರಣರಾಗಿದ್ದಾರೆ. ಪಾಕಿಸ್ತಾನ ತನ್ನ ಮುಖ ಉಳಿಸಿಕೊಳ್ಳಲು ದಾರಿ ಹುಡುಕುತ್ತಿದೆ…

Read More

ಬೆಂಗಳೂರು : ಓಬಳಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್​​ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದರಿಂದ ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ. ಏಳು ವರ್ಷ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹರಗೊಂಡಿದ್ದಾರೆ. ಇದರಿಂದ ಗಂಗಾವತಿ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಹೌದು ಶಾಸಕ ಸ್ಥಾನದಿಂದ ಗಾಲಿ ಜನಾರ್ಧನ ರೆಡ್ಡಿಯನ್ನು ಅನರ್ಹಗೊಳಿಸಲಾಗಿದೆ. ಈ ಮೂಲಕ ಸಿಬಿಐ ಸ್ಪೆಷಲ್ ಕೋರ್ಟ್ ನಿಂದ ಶಿಕ್ಷೆಗೆ ಒಳಗಾಗಿರುವಂತ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.ಶಾಸಕ ಸ್ಥಾನದಿಂದ ಜನಾರ್ಧನ ರೆಡ್ಡಿ ಮುಂದಿನ 6 ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂ ಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ…

Read More

ಸಾಂಬಾ : ನಿನ್ನೆ ಜಮ್ಮು ಕಾಶ್ಮೀರದ ಸಾಂಬಾದಲ್ಲಿ ಭದ್ರತಾ ಪಡೆ ಮತ್ತು ಪಾಕಿಸ್ತಾನ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಹಲವು ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ ಎಂದು ಹೇಳಿದೆ. ಸಾಂಬಾದಲ್ಲಿ ಹಲವು ಪಾಕ್‌ ಉಗ್ರರ ಹತ್ಯೆ ಮಾಡಲಾಗಿದೆ ಎಂದು ಭಾರತದ ಗಡಿ ಭದ್ರತಾ ಪಡೆ ತಿಳಿಸಿದೆ.ಸಾಂಬಾದ ಅಂತರರಾಷ್ಟ್ರೀಯ ಗಡಿಯಲ್ಲಿ ಅನೇಕ ಪಾಕಿಸ್ತಾನಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಜಮ್ಮು, ರಾಜಸ್ಥಾನ ಮತ್ತು ಪಂಜಾಬ್‌ನ ಅಮೃತಸರ ಸೇರಿ ಹಲವೆಡೆ ಭಾರತೀಯ ಸೇನಾ ನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಮಿಸೈಲ್‌, ಡ್ರೋನ್‌ ದಾಳಿ ನಡೆಸಿತು. ಭಾರತೀಯ ಸೇನೆ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಪಾಕ್‌ನ ಎಲ್ಲಾ ಮಿಸೈಲ್‌ಗಳನ್ನು ಹೊಡೆದುರುಳಿಸಿದೆ.

Read More

ಜಮ್ಮು ಕಾಶ್ಮೀರ : ಪಾಕಿಸ್ತಾನದ ಮೇಲೆ ಭಾರತ ಈಗಾಗಲೇ ಭಾರಿ ದಾಳಿ ನಡೆಸಿದ್ದು, ಇಷ್ಟಾದರೂ ಸಹ ಬುದ್ಧಿ ಕಲಿಯದ ಪಾಕಿಸ್ತಾನ ಜಮ್ಮು ಕಾಶ್ಮೀರದ ಉರಿಯಲ್ಲಿ ಮತ್ತೆ ಗುಂಡಿನ ದಾಳಿ ನಡೆಸಿದೆ. ಈ ಒಂದು ಗುಂಡಿನ ದಾಳಿಯಲ್ಲಿ ಭಾರತ ಮೂಲದ ಮಹಿಳೆ ಒಬ್ಬರು ಸಾವನಪ್ಪಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೌದು ಜಮ್ಮು ಕಾಶ್ಮೀರದ ಉರಿಯಲ್ಲಿ ಪಾಕಿಸ್ತಾನ ಫೈರಿಂಗ್ ನಡೆಸಿದೆ. ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಭಾರತದ ಮಹಿಳೆ ಸಾವನಪ್ಪಿದ್ದಾಳೆ. ಪಾಕಿಸ್ತಾನ ಫೈರಿಂಗ್ ನಲ್ಲಿ ಭಾರತ ಮೂಲದ ಮಹಿಳೆ ಇದೀಗ ಸಾವನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಾರಾಮುಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ತಿಳಿದುಬಂದಿದೆ.

Read More

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ನಿಖರ ಮತ್ತು ಸಂಘಟಿತ ಮಿಲಿಟರಿ ಪ್ರತಿಕ್ರಿಯೆಯಾದ ಆಪರೇಷನ್ ಸಿಂಧೂರ್ ನಂತರ ಒಗ್ಗಟ್ಟನ್ನು ಪ್ರಸ್ತುತಪಡಿಸಬೇಕು. ಈ ನಿರ್ಣಾಯಕ ಕ್ಷಣದಲ್ಲಿ ಪ್ರತಿಯೊಬ್ಬ ಭಾರತೀಯರು ಒಗ್ಗಟ್ಟಿನಿಂದ ನಿಲ್ಲಬೇಕಾಗಿದೆ ಎಂದು ಪ್ರಧಾನಿ ಒತ್ತಿ ಹೇಳಿದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಬಳಿಕ ಸಚಿವ ರಾಜನಾಥ ಸಿಂಗ್ ಆಪರೇಷನ್ ಸಿಂಧೂರ ಕುರಿತು ಮಾಹಿತಿ ನೀಡಿದ್ದು, ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಗಿದಿಲ್ಲ ಇನ್ನೂ ಇದೆ ಎಂದು ಸರ್ವಪಕ್ಷಗಳ ಸಭೆಯಲ್ಲಿ ಸಚಿವ ರಾಜನಾಥ ಸಿಂಗ್ ಮಾಹಿತಿ ನೀಡಿದರು. ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಮತ್ತಷ್ಟು ದಾಳಿ ನಡೆಸುವ ಸಾಧ್ಯತೆ ಇದೆ. ಸಿಂಧೂರ ಕಾರ್ಯಾಚರಣೆ ಅಡಿ ಮತ್ತಷ್ಟು ಕ್ಷಿಪಣಿ ದಾಳಿ ಸಾಧ್ಯತೆ ಇದೆ. ಆಪರೇಷನ್ ಸಿಂಧೂರ ಕಾರ್ಯಚರಣೆ ಮುಂದುವರೆಯುತ್ತೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಮಾಹಿತಿ ನೀಡಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ಗೃಹ ಸಚಿವ ಅಮಿತ್ ಶಾ, ಹಣಕಾಸು…

Read More

ಬೆಂಗಳೂರು : ಪಹಲ್ಗಾಂ ನಲ್ಲಿ ಉಗ್ರರು 26 ಜನ ಪ್ರವಾಸಿಗರನ್ನು ಬಲಿಪಡೆದಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚಾರಣೆ ಮೂಲಕ ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ಕ್ಷಿಪಣಿದಾಳಿ ನಡೆಸಿ ಧ್ವಂಸಗೊಳಿಸಿದ್ದು, ಕಾರ್ಯಾಚಾರಣೆಯಲ್ಲಿ ಹಲವು ಉಗ್ರರು ಸಾವನ್ನಪ್ಪಿದ್ದಾರೆ. ಇದೀಗ ಉಗ್ರರ ದಾಳಿ ಭೀತಿ ಹಿನ್ನೆಲೆ ದೇಶಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು ರಾಜ್ಯದಲ್ಲೂ ಕೂಡ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್ ಅವರು, ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ, ಕರ್ನಾಟಕ ಕೂಡ ಅಲರ್ಟ್ ಆಗಿದ್ದು, ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕರಾವಳಿ ಪ್ರದೇಶ, ಜನನಿಬಿಡ ಪ್ರದೇಶ ಸೇರಿದಂತೆ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರಾಜ್ಯದ ಒಳಗಡೆ ಕೆಲ ಸ್ಲೀಪರ್ ಸೆಲ್ ಗಳು ಆಕ್ಟೀವ್ ಆಗಿವೆ. ಹೀಗಾಗಿ ಹೆಚ್ಚಿನ ನಿಗಾ ವಹಿಸಲು ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದ್ದು, ಈ ನಿಟ್ತಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದರು. ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ.…

Read More

ಬೆಂಗಳೂರು : ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ದಾಖಲಿಸಿರುವ ಎಫ್ಐಆರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಎಚ್ ಡಿ ಕುಮಾರಸ್ವಾಮಿ ಅವರ ಜಾಮೀನು ರದ್ದು ಕೋರಿ ಲೋಕಾಯುಕ್ತ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತಡೆಯಾಜ್ಞೆ ಇರುವ ‘FIR’ ಆಧರಿಸಿ ಜಾಮೀನು ರದ್ದು ಕೇಳುವಂತಿಲ್ಲ ಎಂದು ಆದೇಶ ನೀಡಿತು. 2014ರ ಸಾಯಿ ವೆಂಕಟೇಶ್ವರ ಮೀನರಲ್ಸ್ ಕೇಸ್ ಗೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಜಾಮೀನು ರದ್ದು ಕೋರಿ ಲೋಕಾಯುಕ್ತ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ರದ್ದುಗೊಳಿಸುವಂತೆ ಕೋರಿ ಮನವಿ ಮಾಡಲಾಗಿದ್ದು, ಲೋಕಾಯುಕ್ತ ಪೊಲೀಸರ ಅರ್ಜಿ ಪ್ರಶ್ನಿಸಿ ಎಚ್ ಡಿ ಕುಮಾರಸ್ವಾಮಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಎಫ್ಐಆರ್‌ ಗೆ ಹೈಕೋರ್ಟ್ ಈಗಾಗಲೇ ತಡೆ ನೀಡಿದೆ. ಇದೀಗ ಅದೇ ಕೇಸ್ ಗೆ ಸಂಬಂಧಿಸಿದಂತೆ ಜಾಮೀನು ರದ್ದುಗೊಳಿಸುವಂತೆ ಲೋಕಾಯುಕ್ತ ಪೊಲೀಸರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಲೋಕಾಯುಕ್ತ ಪೊಲೀಸರ ಅರ್ಜಿ…

Read More

ಪಂಜಾಬ್ : ಭಾರತ ಮತ್ತು ಪಾಕಿಸ್ತಾನದ ಮಧ್ಯ ಯುದ್ಧದ ಉದ್ವಿಗ್ನತೆ ತೀವ್ರವಾಗಿದ್ದು, ಇದರ ಮಧ್ಯೆ ನಿನ್ನೆ ಆಪರೇಷನ್ ಸಿಂಧೂರ್ ಮೂಲಕ ಉಗ್ರರ ನೆಲೆಗಳನ್ನು ಭಾರತೀಯ ಸೇನೆ ನಾಶಮಾಡಿದೆ. ಇದೀಗ ಅಕ್ರಮವಾಗಿ ಭಾರತಕ್ಕೆ ನುಸುಳಲು ಯತ್ನಿಸಿದ್ದ ಪಾಕಿಸ್ತಾನ ಪ್ರಜೆಯನ್ನು ಬಿಎಸ್ಎಫ್ ಯೋಧರು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಭಾರತಕ್ಕೆ ನುಸುಳಲು ಯತ್ನಿಸಿದವನಿಗೆ ಗುಂಡಿಕ್ಕಿ ಬಿಎಸ್ಎಫ್ ಯೋದರು ಅಂತರಾಷ್ಟ್ರೀಯ ಗಡಿ ಫಿರೋಜ್ ಪುರ ಬಳಿ ಪಾಕಿಸ್ತಾನ ಪ್ರಜೆಯನ್ನು ಇದೀಗ ಗುಂಡಿಕ್ಕಿ ಹತ್ಯೆಗೈದಿದೆ. ಪಂಜಾಬ್ ನ ಫಿರೋಜ್ ಪುರ ಬಳಿ ನುಸುಳುಕೋರನ ಹತ್ತೆಯಾಗಿದೆ ರಾತ್ರಿ 2:30 ಸುಮಾರಿಗೆ ಗಡಿ ನುಸುಳಲು ಪ್ರಯತ್ನಿಸಿದ್ದ. ನುಸುಳುಕೋರನನ್ನು ತಡೆಯಲು ಬಿಎಸ್ಎಫ್ ಯೋಧರು ಯತ್ನಿಸಿದ್ದರು. ನಿಲ್ಲುವಂತೆ ಎಚ್ಚರಿಕೆ ನೀಡಿದ್ದ ಗಡಿ ಭದ್ರತಾ ಪಡೆ, ಬಿಎಸ್ಎಫ್ ಸಿಬ್ಬಂದಿ ಸೂಚನೆಯನ್ನು ನಿರ್ಲಕ್ಷಿಸಿ ಪಾಕಿಸ್ತಾನ ಪ್ರಜೆ ಮುನ್ನುಗ್ಗಿದ್ದಾನೆ. ಈ ವೇಳೆ ಬಿಎಸ್ಎಫ್ ನುಸುಳುಕೋರನಿಗೆ ಗುಂಡಿಕ್ಕಿದಿದ್ದಾರೆ.

Read More

ಹಾವೇರಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿಗೆ ಹಿಂದಿನಿಂದ ವೇಗವಾಗಿ ಬಂದಂತಹ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೂಟೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹರಿಯಾಣ ಮೂಲದ ಆಡಿ ಎ6 ಕಾರಿನಲ್ಲಿದ್ದ ಆರು ಜನರು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ಅಪಘಾತ ಸಂಭವಿಸಿದೆ.ಇನ್ನು ಅಪಘಾತದಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಿಗೆ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More