Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅಕ್ರಮವಾಗಿ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಕೋಲಾರ ದಾವಣಗೆರೆ ಸೇರಿದಂತೆ ಹಲವು ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಸರ್ವೇ ಸೂಪರ್ವೈಸರ್ ನಿವಾಸದ ಮೇಲೆ ದಾಳಿ ಕೋಲಾರ ಜಿಲ್ಲೆಯ ಹಲವೆಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿದ್ರೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂ ಬೆಳ್ಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.ಕೋಲಾರದ ಸರ್ವೆ ಸೂಪರ್ವೈಸರ್ ಸುರೇಶ್ ಬಾಬು ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ವೆ ಇಲಾಖೆ ಅಧಿಕಾರಿ ಸುರೇಶ್ ಬಾಬು ಸೇರಿದಂತೆ ಒಟ್ಟು 6 ಕಡೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಕೋಲಾರ ನಗರದ ಮನೆ, ಮಾಲೂರು ಪಟ್ಟಣದ ಮನೆ. ನಿಡಘಟ್ಟ ಗ್ರಾಮದ ಮನೆ ಕಚೇರಿಗಳು ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೂರು ತಿಂಗಳ ಹಿಂದೆಯೂ ಸುರೇಶ್ ಬಾಬು ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು. ಹಲವು ಸ್ಥಳಗಳ…
ರಾಯಚೂರು : ರಾಯಚೂರಿನಲ್ಲಿ ಘೋರವಾದ ದುರಂತ ಸಂಭವಿಸಿದ್ದು, RTPS ಘಟಕದಲ್ಲಿ ವಿದ್ಯುತ್ ಸ್ಪರ್ಶಿಸಿ ಓರ್ವ ಕಾರ್ಮಿಕ ಸಾವನಪ್ಪಿದ್ದಾನೆ. ರಾಯಚೂರು ತಾಲೂಕಿನ ಶಕ್ತಿನಗರ ಬಳಿ ಇರುವ ಆರ್ ಟಿ ಪಿ ಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಈ ಘಟನೆ ನಡೆದಿದೆ. ವಾಟರ್ ಕ್ಲಾರಿಫೈರ್ ಕ್ಲೀನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಮಿಕ ತಿಮ್ಮಾರೆಡ್ಡಿ (28) ಸಾವನಪ್ಪಿದ್ದು ಇನ್ನುಳಿದ ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ರಂಗಪ್ಪ ಹನುಮೇಶ್ ಮತ್ತು ವೀರೇಶ್ ಗೆ ಆರ್‌ಟಿಪಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಯಾವುದೇ ಸುರಕ್ಷತೆ ನೀಡದೆ ಕೆಲಸಕ್ಕೆ ಹಚ್ಚಿದ್ದಾರೆ. ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೃತ ತಿಮ್ಮಾರೆಡ್ಡಿ ಕಾರ್ಮಿಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ. ರಾಯಚೂರು ತಾಲೂಕಿನ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಕೋಲಾರ : ಕೋಲಾರ ಜಿಲ್ಲೆಯ ಹಲವೆಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿದ್ರೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂ ಬೆಳ್ಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೋಲಾರದ ಸರ್ವೆ ಸೂಪರ್ವೈಸರ್ ಸುರೇಶ್ ಬಾಬು ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಸರ್ವೆ ಇಲಾಖೆ ಅಧಿಕಾರಿ ಸುರೇಶ್ ಬಾಬು ಸೇರಿದಂತೆ ಒಟ್ಟು 6 ಕಡೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಕೋಲಾರ ನಗರದ ಮನೆ, ಮಾಲೂರು ಪಟ್ಟಣದ ಮನೆ. ನಿಡಘಟ್ಟ ಗ್ರಾಮದ ಮನೆ ಕಚೇರಿಗಳು ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ. ಅಕ್ರಮವಾಗಿ ಸರ್ಕಾರಿ ದಾಖಲೆ ತಿದ್ದಿ ಸರ್ಕಾರಿ ಭೂಮಿ ಕಬಳಿಕೆ ಮಾಡಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಆಸ್ತಿಗಳಿಗೆ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸದ್ಯ ಲೋಕಾಯುಕ್ತ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕರ್ತವ್ಯ ನಿರತ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆದಿದ್ದು, ಬೈಕ್ ಸವಾರನೊಬ್ಬ ಕಪಾಳಕ್ಕೆ ಹೊಡೆದು ಪರಾರಿಯಾಗಿರುವ ಘಟನೆ ಹೆಬ್ಬಾಳ ಸಂಚಾರ ವಿಭಾಗದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಂಬರ್ ಇಲ್ಲದ ಬೈಕ್ ಚಲಾಯಿಸುತ್ತಿದ್ದ ಸವಾರನನ್ನು ಹೋಂ ಗಾರ್ಡ್ ಯಾಕೆ ನಂಬರ್ ಪ್ಲೇಟ್ ಇಲ್ಲ ಎಂದು ಪ್ರಶ್ನಿಸಿದ್ದಾರೆ. ಒನ್ ವೇ ಅಲ್ಲಿ ಯುಟರ್ನ್ ತೆಗೆದುಕೊಳ್ಳುತ್ತೇನೆ ಎಂದು ಬೈಕ್ ಸವಾರ ತಿಳಿಸಿದ್ದಾನೆ. ಈ ವೇಳೆ ಹೋಂ ಗಾರ್ಡ್ ಬೈಕ್ ಸವಾರ ನಡುವೆ ವಾಗ್ವಾದ ನಡೆದಿದೆ. ವಾಗ್ವಾದದ ವೇಳೆ ಹೋಮ್ ಗಾರ್ಡ್ ಕಪಾಳಕ್ಕೆ ಹೊಡೆದು ಸವಾರ ಪರಾರಿಯಾಗಿದ್ದಾನೆ. ಮೇ 4ರಂದು ಸಂಜೆ 56 ಸುಮಾರಿಗೆ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ದೃಶ್ಯ ಬೈಕ್ ಹಿಂದೆ ಇದ್ದ ವಾಹನದ ಕ್ಯಾಮರಾದಲ್ಲಿ ಸರಿಯಾಗಿದೆ. ದೃಶ್ಯವನ್ನು ನಗರ ಪೊಲೀಸರಿಗೆ ಟ್ಯಾಗ್ ಮಾಡಿ ಪೀಟರ್ ನಲ್ಲಿ ಪೋಸ್ಟ್ ಮಾಡಲಾಗಿದೆ ಹೆಬ್ಬಾಳ ಸಂಚಾರ ವಿಭಾಗ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
ನವದೆಹಲಿ : ಹಲ್ಗಾಮ್ ಉಗ್ರರ ದಾಳಿಯ ಪ್ರತೀಕಾರವಾಗಿ ನೆನ್ನೆ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ಕ್ಯಾಂಪ್ ಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು ಈ ಒಂದು ದಾಳಿಯಲ್ಲಿ ನೂರಕ್ಕೂ ಅಧಿಕ ಉಗ್ರರು ಸಾವನಪ್ಪಿದ್ದಾರೆ.ಇದೀಗ ಭಾರತದ ಏರ್ ಸ್ಟ್ರೈಕ್ ಹೊಡೆತಕ್ಕೆ ಪಾಕಿಸ್ತಾನದ ಬಹವಾಲ್ಪುರದಲ್ಲಿರುವ ಜಾಮಿಯಾ ಮಸೀದಿಯ ಗುಂಬಜವೇ ಇದೀಗ ಮಾಯವಾಗಿದೆ. ಹೌದು ನಿನ್ನೆ ತಡರಾತ್ರಿ ಭಾರತೀಯ ಸೇನೆ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿತ್ತು ಈ ಒಂದು ದಾಳಿಯಲ್ಲಿ ಪಾಕಿಸ್ತಾನದ ಬಹವಾಲ್ಪುರದಲ್ಲಿರುವ ಜಾಮಿಯಾ ಮಸೀದಿಯ ಗುಂಬಜವೇ ಇದೀಗ ಮಾಯವಾಗಿದೆ. ದಾಳಿಗೂ ಮುನ್ನ ಹಸಿರಿನಿಂದ ಕೂಡಿದ್ದ ಮಸೀದಿ ಏರ್ ಸ್ಟ್ರೈಕ್ ನಲ್ಲಿ ಸುಟ್ಟು ಕರಕಲಾಗಿದೆ. ಅಲ್ಲದೇ ಉಗ್ರರ ನೆಲೆಗಳ ಮೇಲೆ ಭಾರತದ ಸೇನೆ ದಾಳಿ ನಡೆಸಿದ್ದು JEM ಕೇಂದ್ರ ಕಚೇರಿ ಕೂಡ ದ್ವಂಸವಾಗಿದೆ. ಬಹವಾಲ್ಪುರದ ಮಾರ್ಕರ್ ಸುಭಾನಲ್ಲ ಕಚೇರಿ ಮಿರಿ ಮಿರಿ ಮಿಂಚುತ್ತಿದ್ದ ಕಟ್ಟಡ ಸಂಪೂರ್ಣ ಇದೀಗ ನೆಲ ಸಮವಾಗಿದೆ ಮಿಸ್ಸೇಲ್ ಹೊಡೆತಕ್ಕೆ ಗೋಡೆ ಕಾಂಕ್ರೀಟ್ ಕಿತ್ತು ಬಂದಿದೆ. https://twitter.com/ANI/status/1920282136889762207?t=nZoe51QMyRsWm5OAC9AmyQ&s=19
ಕೊಪ್ಪಳ : ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಇದೀಗ ಅಧಿಕಾರಿಗಳ ವರ್ಗಾವಣೆ ಜೋರಾಗಿದೆ ಎಂದು ಸಿಎಂ ಆಪ್ತ ಸಲಹೆಗಾರ ಬಸವರಾಜ ರಾಯರೆಡ್ಡಿ ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಅಧಿಕಾರಿಗಳ ವರ್ಗಾವಣೆ ಕುರಿತಂತೆ ಸ್ವಪಕ್ಷದ ವಿರುದ್ಧವೇ ಬಸವರಾಜ ರಾಯರೆಡ್ಡಿ ಈ ರೀತಿ ಹೇಳಿಕೆ ನೀಡಿದ್ದು ಸಂಚಲನ ಸೃಷ್ಟಿಸಿದೆ. ನಿನ್ನೆ ಕೊಪ್ಪಳದಲ್ಲಿ ರಾಜ್ಯ ಸರಕಾರಿ ನೌಕರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕ, ಸಂಸದರು ಹಾಗೂ ಸಚಿವರು ಅಧಿ ಕಾರಿಗಳನ್ನು ಬಳಸಿಕೊಂಡು ಅಥವಾ ಹಣದ ಮೂಲಕ ತಮ್ಮ ಕೆಲಸವನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಇದರಿಂದ ಜನಪರ ಕೆಲಸಗಳಿಗೆ ಹೊಡೆತ ಬೀಳುತ್ತಿದೆ. ಹೀಗಾಗಿ ವರ್ಗಾವಣೆ ದಂಧೆಗೆ ಕಡಿವಾಣ ಹಾಕಲು ಎಲ್ಲ ಇಲಾಖೆಗಳಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವ ವ್ಯವಸ್ಥೆ ಜಾರಿಯಾಗಬೇಕಿದೆ ಎಂದರು. ಈಗಾಗಲೇ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆಯಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಅದರಂತೆ ಹೆಚ್ಚು ಹಣ ವರ್ಗಾವಣೆಯಾಗುವ ಇಲಾಖೆಗಳಲ್ಲಿ ಇದೇ ರೀತಿ ಕೌನ್ಸೆಲಿಂಗ್ ಮೂಲಕ ಅಧಿಕಾರಿಗಳನ್ನು ವರ್ಗಾಯಿಸಬೇಕೆಂಬ ಚಿಂತನೆ…
ದಾವಣಗೆರೆ : ರೌಡಿಶೀಟರ್ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಹತ್ಯೆಯ ಪ್ರಮುಖ ಆರೋಪಿ ಚಾವಳಿ ಸಂತೋಷ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬುಧವಾರ ಸ್ಥಳ ಮಹಜರ್ ವೇಳೆ ಬಾಲ ಬಿಚ್ಚಿದ್ದ ಚಾವಳಿ ಸಂತೋಷ್ ಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ನಗರದ ಆವರಗೆರೆ ಹೈಸ್ಕೂಲ್ ಬಳಿ ಈ ಘಟನೆ ನಡೆದಿದೆ. ಇತ್ತೀಚಿಗೆ ನಡೆದಿದ್ದ ರೌಡಿಶೀಟರ್ ಕಣುಮಾ ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಈ ಘಟನೆ ನಡೆದಿದೆ.ಕಣುಮಾ ಸಂತೋಷ್ ನ ಮರ್ಡರ್ ಮಾಡಲು ಉಪಯೋಗಿಸಿದ್ದ ಮೊಬೈಲ್ ನ್ನು ಆವರಗೆರೆ ಬಳಿಯ ಪ್ರದೇಶವೊಂದರ ಬಳಿ ಆರೋಪಿಗಳು ಎಸೆದು ಪರಾರಿ ಆಗಿದ್ದರು. ಸಿಟಿ ಡಿವೈಎಸ್ಪಿ ಶರಣ ಬಸವೇಶ್ವರ ಬಿ. ಅವರು ಸಿಬ್ಬಂದಿಯೊಂದಿಗೆ ಆವರಗೆರೆ ಬಳಿಯ ನಿರ್ಜನ ಪ್ರದೇಶದಲ್ಲಿ ಚಾವಳಿ ಸಂತೋಷ್ನನ್ನು ಸ್ಥಳ ಮಹಜರ್ ಗೆ ಕರೆದುಕೊಂಡು ತೆರಳಿದ್ದರು. ಈ ವೇಳೆ ಚಾವಳಿ ಸಂತೋಷ್ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆಗ ಗಾಳಿಯಲ್ಲಿ ಗುಂಡು…
ಬೆಂಗಳೂರು : ಪಹಲ್ಗಾಮ್ ಉಗ್ರ ದಾಳಿಯ ಪ್ರತಿಕಾರವಾಗಿ ನಿನ್ನೆ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ ಇದರಲ್ಲಿ ನೂರಕ್ಕೂ ಅಧಿಕ ಉಗ್ರರು ಸಾವನಪ್ಪಿದ್ದಾರೆ. ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ತಕ್ಷಣ ಭದ್ರತೆ ಒದಗಿಸುವಂತೆ ಜಲಸಂಪನ್ಮೂಲ ಇಲಾಖೆಯ ಅಪರ ಕಾರ್ಯದರ್ಶಿ, ಈ ಕುರಿತು ಆದೇಶ ಹೊರಡಿಸಿದ್ದಾರೆ. ಹೌದು ರಾಜ್ಯದ ಎಲ್ಲಾ ಆಣೆಕಟ್ಟುಗಳಿಗೆ ಭದ್ರತೆಗೆ ಸೂಚನೆ ನೀಡಲಾಗಿದೆ. ಅಣೆಕಟ್ಟುಗಳಿಗೆ ತಕ್ಷಣ ಭದ್ರತೆ ಒದಗಿಸಲು ಜಲಸಂಪನ್ಮೂಲ ಇಲಾಖೆಯ ಅಪರ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.ರಾಜ್ಯದ ಎಲ್ಲಾ ಆಣೆಕಟ್ಟುಗಳ ಭದ್ರತಾ ನಿರ್ವಹಣಾ ಸಂಸ್ಥೆಗಳು, ನಿಗಮಗಳಿಗೆ ಸೂಚಿಸಿ ಜಲಸಂಪನ್ಮೂಲ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಪೊಲೀಸ್ ಇಲಾಖೆ ಸಮನ್ವಯದೊಂದಿಗೆ ಭದ್ರತೆ ಒದಗಿಸುವಂತೆ ಸಂಪೂರ್ಣ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ದೇವದತ್ತ ಪಡಿಕ್ಕಲ್ ಅವರು ಗಾಯಗೊಂಡಿದ್ದಾರೆ. ಅವರ ಬದಲಿಗೆ ಕರ್ನಾಟಕ ತಂಡದ ನಾಯಕ ಮಯಂಕ್ ಅಗರವಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ಬಲಗಾಲಿನ ಸ್ನಾಯುಸೆಳೆತದಿಂದಾಗಿ ಪಡಿಕ್ಕಲ್ ಅವರು ತಂಡದಿಂದ ಹೊರಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಮಯಂಕ್ ಅವರು ದಶಕದ ಹಿಂದೆ ಆರ್‌ಸಿಬಿ ಮೂಲಕವೇ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು. ಬಲಗೈ ಬ್ಯಾಟರ್ ಮಯಂಕ್ ಅವರು ಐಪಿಎಲ್‌ನಲ್ಲಿ ಒಟ್ಟು 127 ಪಂದ್ಯಗಳನ್ನು ಆಡಿರುವ ಅನುಭವಿ. 2661 ರನ್ ಪೇರಿಸಿದ್ದಾರೆ. ಅದರಲ್ಲಿ ಒಂದು ಶತಕ ಮತ್ತು 13 ಅರ್ಧಶತಕಗಳು ಇವೆ. ಇದೀಗ ಅವರನ್ನು ಆರ್‌ಸಿಬಿಯು 1 ಕೋಟಿ ನೀಡಿ ಖರೀದಿಸಿದೆ.ಈ ಕುರಿತು ತಂಡದ ನಿರ್ದೇಶಕ ಮೊ ಬೊಬಾಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಡಿಕ್ಕಲ್ ಈ ಋತುವಿನಲ್ಲಿ ಆರ್‌ಸಿಬಿ ಪರ 10 ಪಂದ್ಯಗಳಲ್ಲಿ ಆಡಿದ್ದು, ಎರಡು ನಿರ್ಣಾಯಕ ಅರ್ಧಶತಕಗಳು ಸೇರಿದಂತೆ 247 ರನ್ ಗಳಿಸಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ 61 ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ 50 ರನ್ ಗಳಿಸುವ ಮೂಲಕ ಮಿಶ್ರ…
ನವದೆಹಲಿ : ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ಭಾಗಗಳಲ್ಲಿ ಪಾಕಿಸ್ತಾನದ ಸೇನಾ ಪಡೆಯು ಬುಧವಾರ ತೀವ್ರ ಗುಂಡಿನದಾಳಿ ನಡೆಸಿದೆ. ಘಟನೆಯಲ್ಲಿ 12 ನಾಗರಿಕರು ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಮೃತರ ಪೈಕಿ 4 ಮಕ್ಕಳು, ಇಬ್ಬರು ಮಹಿಳೆಯರೂ ಇದ್ದಾರೆ. ನಿನ್ನೆ ನಸುಕಿನಲ್ಲಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮೂಲಕ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿದ್ದ (ಪಿಒಕೆ) ಭಯೋತ್ಪಾದಕ ನೆಲೆಗಳನ್ನು ಭಾರತೀಯ ಪಡೆಗಳು ಧ್ವಂಸಗೊಳಿಸಿದ್ದವು.ಇದರ ಬೆನ್ನಲ್ಲೇ ಜಮ್ಮು-ಕಾಶ್ಮೀರ ಗಡಿ ಜಿಲ್ಲೆಗಳಲ್ಲಿ ಪಾಕ್‌ನಿಂದ ಗುಂಡಿನ ದಾಳಿ ಶುರುವಾಗಿದೆ. ಪಾಕಿಸ್ತಾನಿ ಪಡೆಗಳು ನಡೆಸಿದ ದಾಳಿಯಲ್ಲಿ ಪೂಂಚ್ ಸೆಕ್ಟರ್‌ನಲ್ಲಿದ್ದ ಗುರದ್ವಾರ ಸಾಹಿಬ್ ಕೂಡ ಹಾನಿಗೊಳಗಾಗಿದೆ. ಘಟನೆಯಲ್ಲಿ 4 ಮಂದಿ ಸಿಖ್ಖರು ಮೃತಪಟ್ಟಿದ್ದಾರೆ. ಮೃತರನ್ನು ಭಜ್ ಅಮ್ರಿಕ್ ಸಿಂಗ್, ಅಮರಜಿತ್ ಸಿಂಗ್, ರಂಜಿತ್ ಸಿಂಗ್, ರುಬಿ ಕೌರ್ ಎಂದು ಗುರುತಿಸಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಈ ಘಟನೆಯನ್ನು ಖಂಡಿಸಿದ್ದಾರೆ. ಪೂಂಚ್ ಮಾತ್ರವಲ್ಲದೆ ರಜೌರಿ ಜಿಲ್ಲೆ ಹಾಗೂ ಕುಪ್ವಾಡ ಜಿಲ್ಲೆಯ ಉರಿ, ಕರ್ನಾಹ್, ತಂಗಧರ್ ಸೆಕ್ಟರ್‌ಗಳಲ್ಲಿಯೂ ತೀವ್ರ…













