Author: kannadanewsnow05

ಬೆಂಗಳೂರು : ಸೆಪ್ಟಂಬರ್​ ನಂತರ ಭಾರಿ ಬದಲಾವಣೆ ಆಗಲಿದೆ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ವಿಚಾರವಾಗಿ, ರಾಜಣ್ಣ ಅವರಿಗೆ ಯಾವ ಮಾಹಿತಿ ಇದೆ ಗೊತ್ತಿಲ್ಲ.‌ ಸೆಪ್ಟೆಂಬರ್​ನಲ್ಲಿ ಕ್ರಾಂತಿಯಾಗುತ್ತೆ ಅಂದಿದ್ದಾರೆ. ಅವರಿಗೆ ಯಾವುದೋ ಮಾಹಿತಿ ಇರಬೇಕು. ಇಲ್ಲದಿದ್ದರೆ ಆ ರೀತಿ ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹೇಳುತ್ತಿರಲಿಲ್ಲ. ಯಾವ ಕ್ರಾಂತಿ ಅನ್ನೋದನ್ನು ಅವರನ್ನೇ ಕೇಳಿ. ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಯಾವ ಪವರ್ ಸೆಂಟರ್ ನೋ ಇಲ್ಲ ಯಾವುದೇ ಕ್ರಾಂತಿ ಸಹ ಆಗಲ್ಲ. ಸೆಪ್ಟೆಂಬರ್​ನಲ್ಲಿ ಕ್ರಾಂತಿ ನಡೆಯುವ ಬಗ್ಗೆ ಕೆ.ಎನ್.ರಾಜಣ್ಣಗೆ ಮಾಹಿತಿ ಇರಬೇಕು. ಇಲ್ಲದಿದ್ದರೆ ಹಾಗೆ ಹೇಳುತ್ತಿರಲಿಲ್ಲಎಂದು ಗೃಹ ಸಚಿವ ಜಿ. ಪರಮೇಶ್ವರ್​ ಪ್ರತಿಕ್ರಿಯಿಸಿದರು. ಸಿಎಂ ಗ್ರಿಪ್​ ಕಳೆದುಕೊಂಡಿದ್ದಾರೆಂಬ ಆರೋಪ ವಿಚಾರವಾಗಿ ಮಾತನಾಡಿ, ಸಿಎಂ ಯಾವುದೇ ಗ್ರಿಪ್ ಕಳೆದುಕೊಂಡಿಲ್ಲ. ಸಿಎಂ ಈಗ ಆಡಳಿತ ನಡೆಸ್ತಾ ಇಲ್ವಾ?. ಸಣ್ಣಪುಟ್ಟ ವಿಚಾರಗಳಿರುತ್ತವೆ, ಬಗೆಹರಿಸುತ್ತಾರೆ. ಬಿಜೆಪಿಯವರು ಹಿಂದೆಯೂ ಟೀಕೆ…

Read More

ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬಳಿ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದು ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆ. ಹುಲಿಮರಿಗಳು ಯಾವ ಕಾರಣಕ್ಕೆ ಸತ್ತಿರುವುದು ಇನ್ನೂ ಮಾಹಿತಿ ಇಲ್ಲ. ತನಿಖಾ ವರದಿಯ ಬಂದ ಮೇಲೆ ಆ ಕುರಿತು ಚರ್ಚೆ ಮಾಡೋಣ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ಮುಂಬರುವ ಸೆಪ್ಟೆಂಬರ್ ನಲ್ಲಿ ಬದಲಾವಣೆಯ ಬಗ್ಗೆ ಸಚಿವ ರಾಜಣ್ಣ ಹೇಳಿಕೆಯ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರೋದು ಕ್ರಾಂತಿಯೋ ಅಥವಾ ಇನ್ಯಾವುದೋ ಗೊತ್ತಿಲ್ಲ. ಅದನ್ನು ಸಚಿವ ಕೆ.ಎನ್ ರಾಜಣ್ಣ ಅಥವಾ ಅವರ ಆಪ್ತ ಸಿಎಂ ಸಿದ್ದರಾಮಯ್ಯ ಅವರೇ ಹೇಳಬೇಕು. ಕಾಂಗ್ರೆಸ್ ಪಕ್ಷದ ಬೆಳವಣಿಗೆಗಳು ನನಗೆ ಹೇಗೆ ಗೊತ್ತಾಗುತ್ತೆ? ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.

Read More

ಬೆಂಗಳೂರು : KRS ಬಳಿ ಡಿಸ್ನಿಲ್ಯಾಂಡ್ ಮಾದರಿಯ ಮನರಂಜನಾ ಪಾರ್ಕ್ ಕಾಮಗಾರಿ ವಿಚಾರವಾಗಿ ಕಾವೇರಿ ಆರತಿಗೆ ನಿರ್ಮಾಣ ಕಾಮಗಾರಿ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದ್ದು, ರಾಜ್ಯ ಸರ್ಕಾರ ಮತ್ತು ಕಾವೇರಿ ನೀರಾವರಿ ನಿಗಮಕ್ಕೆ ಇದೀಗ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ ಡ್ಯಾಮ್ ಸುರಕ್ಷತಾ ಸಮಿತಿಗೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೌದು ಡ್ಯಾಮ್ ಬಳಿ 120 ಅಡಿಯಾ ಕಾವೇರಿ ವಿಗ್ರಹ ಸ್ಥಾಪಿಸಲಾಗುತ್ತಿದೆ. ಕಾಮಗಾರಿ ಯಂತ್ರಗಳನ್ನು ಉಪಯೋಗಿಸಿರುವ ಫೋಟೋಗಳನ್ನು ಹೈಕೋರ್ಟಿಗೆ ಸಲ್ಲಿಸಲಾಗಿದೆ. ಅರ್ಜಿದಾರರ ಪರ ವಕೀಲ ಎಂ ಶಿವಪ್ರಕಾಶ್ ಅವರು ಕೋರ್ಟಿಗೆ ಸಲ್ಲಿಸಿದ್ದಾರೆ. ಸದ್ಯಕ್ಕೆ ಕಾವೇರಿ ಪ್ರತಿಮೆ ಮಾತ್ರ ಸ್ಥಾಪಿಸಲು ಟೆಂಡರ್ ನೀಡಲಾಗಿದೆ ಕಾವೇರಿ ಪ್ರತಿಮೆ ಸ್ಥಾಪನೆಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆ ಮನೋರಂಜನ ಪಾರ್ಕ ಟೆಂಡರ್ ಪೂರ್ಣಗೊಂಡಿಲ್ಲವೆಂದು ಸರ್ಕಾರ ವಾದ ಮಂಡಿಸಿದೆ. ಕಾಮಗಾರಿಗೆ ಅಗೆಯುವುದರಿಂದ ಡ್ಯಾಮ್ ಗೆ ಹಾನಿ ಆಗುವುದಿಲ್ಲವೇ? ಡ್ಯಾಮ್ ಸುರಕ್ಷತೆ ಸಮಿತಿಯ ಅನುಮತಿ ಏಕೆ ಪಡೆದಿಲ್ಲ? ಮನರಂಜನ ಪಾರ್ಕ್ ಕಾಮಗಾರಿಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆಯೇ? ಕಾವೇರಿ…

Read More

ಚಾಮರಾಜನಗರ : ಮೀಣ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಷ ಪ್ರಾಷನದಿಂದಲೇ 5 ಹುಲಿಗಳು ಸಾವನ್ನಪ್ಪಿವೆ ಎಂದು ಮಲೆ ಮಹದೇಶ್ವರ ವನ್ಯಧಾಮದಲ್ಲಿ ಸಿಸಿಎಫ್ ಹಿರಲಾಲ್ ಹೇಳಿಕೆ ನೀಡಿದ್ದಾರೆ. ಹೌದು ಹಸುವಿಗೆ ಯಾರು ವಿಷಪ್ರಾಶನ ಮಾಡಿದ್ದಾರೆ. ವಿಷ ಪ್ರಾಶನ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಯಾರೇ ಮಾಡಿದರು ಸ್ಥಳೀಯರು ಮಾಹಿತಿ ನೀಡಿ. ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಆಗುತ್ತದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಇರಲಾಲ್ ಹೇಳಿಕೆ ನೀಡಿದ್ದಾರೆ. ಹುಲಿಗಳ ಪೋಸ್ಟ್ ಮಾಟಂ ಎಲ್ಲ ಮಾಡಿದ್ದೇವೆ ಕೆಲವು ಸ್ಯಾಂಪಲ್ಸ್ ಗಳನ್ನು ಪ್ರೊಸೆಸ್ ಪ್ರಕಾರ ಸಂಗ್ರಹ ಮಾಡಲಾಗಿದೆ. ಉಳಿದ ವರದಿಯನ್ನು ಬಂದ ನಂತರ ತಿಳಿಸಲಾಗುತ್ತದೆ ಎಂದು ತಿಳಿಸಿದರು. ಐದು ಹುಲಿಗಳ ಮರಣೋತ್ತರ ಪರೀಕ್ಷೆ ಇದೀಗ ಮುಕ್ತಾಯ ಆಗಿದ್ದು ನಿನ್ನೆ ತಾಯಿ ಹುಲಿ ಮರಣೋತ್ತರ ಪರೀಕ್ಷೆ ಆಗಿತ್ತು ಇಂದು ನಾಲ್ಕು ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ಆಗಿದ್ದು ಹುಲಿಗಳ ದೇಹದ ಪ್ರಮುಖ ಅಂಗಾಂಗ ಸಂಗ್ರಹ ಮಾಡಿಕೊಂಡು ಮೂರು ರೀತಿಯಲ್ಲಿ…

Read More

ಬೆಂಗಳೂರು : ಅಗಸ್ಟ್ ಮತ್ತು ಸೆಪ್ಟೆಂಬರ್ ಒಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ. ಇದೀಗ ತಣ್ಣಗೆ ಬದಲಾವಣೆ ಗಾಳಿ ಬೀಸಲಾರಂಭಿಸಿದ್ದು, ಸೆಪ್ಟೆಂಬರ್ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ನಿನ್ನೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದರು. ಇದೀಗ ಕಾಂಗ್ರೆಸ್ ಹೈಕಮಾಂಡ್ ಡಿಸೆಂಬರ್ ನಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತಂತೆ ಚಿಂತನೆ ನಡೆಸುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೌದು ನವೆಂಬರ್ ವೇಳೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಡಿಸೆಂಬರ್ ವೇಳೆಗೆ ಸರ್ಕಾರ ರಚನೆಯಾಗಿ 30 ತಿಂಗಳು ಭರ್ತಿಯಾಗಲಿದೆ. ಹಾಗಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಪೂರ್ಣಮಟ್ಟದ ಸಂಪುಟ ವಿಸ್ತರಣೆಯ ಬಗ್ಗೆ ಸಿಎಂ ಹಾಗೂ ಹೈಕಮಾಂಡ್ ಚಿಂತನೆ ನಡೆಸುತ್ತಿದ್ದಾರೆ. ಸಚಿವ ಸಂಪುಟ ಪುನಾರಚನೆ ಸಿದ್ಧತೆಯನ್ನು ಹೈಕೋರ್ಟ್ ಈಗಾಗಲೇ ಆರಂಭಿಸಿದೆ.ಕಾಂಗ್ರೆಸ್ ಪಕ್ಷದ ಮುಂದಿನ ನಾಯಕತ್ವಕ್ಕಾಗಿ ಅಳೆದು ತೂಗಿ…

Read More

ಹಾಸನ : ಹಾಸನ ಜಿಲ್ಲೆಯಲ್ಲಿ ಏನಾಗುತ್ತಿದೆ ಎಂದು ತಿಳಿಯುತ್ತಿಲ್ಲ ಏಕೆಂದರೆ ಕಳೆದ ಒಂದು ತಿಂಗಳಲ್ಲಿ ಇದುವರೆಗೂ ಹೃದಯಘಾತದಿಂದ 14 ಜನರು ಸಾವನ್ನಪ್ಪಿದ್ದಾರೆ. ಇದೀಗ ಮತ್ತೊಂದು ಘಟನೆ ನಡೆದಿದ್ದು, ಹೃದಯಾಘಾತದಿಂದ ಕಾರು ಚಾಲಕ ಮಂಜುನಾಥ್ (51) ಇದೀಗ ಸಾವನ್ನಪ್ಪಿದ್ದಾರೆ. ಹೌದು ಹಾಸನ ನಗರದ ಪೆನ್ಷನ್ ಮೊಹಲ್ಲಾದ ನಿವಾಸಿಯಾಗಿರುವ ಮಂಜುನಾಥ್ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಖಾಸಗಿ ವೈದ್ಯರ ಕಾರು ಚಾಲಕನಾಗಿದ್ದ ಮಂಜುನಾಥ್ ಬುಧವಾರ ತಡರಾತ್ರಿ ಮನೆಯಲ್ಲಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮಂಜುನಾಥ್ ಆಸ್ಪತ್ರೆಗೆ ದಾಖಲಾಗಿದ್ದರು. ಇಸಿಜಿ ಮಾಡಿ ವೈದ್ಯರಿಗೆ ಆಸ್ಪತ್ರೆ ಸಿಬ್ಬಂದಿ ಕರೆ ಮಾಡಿದ್ದಾರೆ. ಆದರೆ ವೈದ್ಯರು ಬರುವಷ್ಟರಲ್ಲಿ ಮಂಜುನಾಥ್ ಸಾವನಪ್ಪಿದ್ದಾರೆ. ಮಂಜುನಾಥ್ ಮೂಲತಹಃ ಆಲೂರು ತಾಲೂಕಿನ ಬಾವಿ ಕೊಪ್ಪಲು ಗ್ರಾಮದ ನಿವಾಸಿಯಾಗಿದ್ದರು. ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಹೃದಯಘಾತಕ್ಕೆ 15 ಜನರು ಬಲಿಯಾಗಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.

Read More

ಶಿವಮೊಗ್ಗ : ಮೆಡಿಕಲ್ ಕಾಲೇಜಿನ ಪಿಜಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಗಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಹ ಪ್ರಾಧ್ಯಾಪಕ ಹಾಗೂ ಶಸ್ತ್ರ ಚಿಕಿತ್ಸೆಕನಾಗಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯ ಅಶ್ವಿನ್ ಅನ್ನು ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನಲ್ಲಿ ಡಾ.ಅಶ್ವಿನ್ ಹೆಬ್ಬಾರ್ ನನ್ನು ಮಹಿಳಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಕೇಸ್ ನಲ್ಲಿ ಡಾ. ಅಶ್ವಿನ್ ಅರೆಸ್ಟ್ ಆಗಿದ್ದಾರೆ.ಲೈಂಗಿಕ ಕಿರುಕುಳ ಪ್ರಕರಣ ಸಿಮ್ಸ್ ಕಾಲೇಜಿನಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಜೂನ್ 20ರಂದು ಶಿವಮೊಗ್ಗದ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಕುರಿತಂತೆ ವಿದ್ಯಾರ್ಥಿನಿ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಅಲ್ಲದೆ ಕಾಲೇಜು ವಿದ್ಯಾರ್ಥಿಗಳು ಎರಡು ದಿನ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಿದ್ದರು. ಸಂಘ ಸಂಸ್ಥೆಗಳು ಆರೋಪಿಯ ಬಂದನಕ್ಕೆ ಗಡುಗು ಸಹ ನೀಡಿದ್ದವು ಇದೀಗ ಬೆಂಗಳೂರಿನಲ್ಲಿ ಇಂದು ಡಾ. ಅಶ್ವಿನ್ ಅನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

Read More

ವಿಜಯಪುರ : ಕಳೆದ ತಿಂಗಳು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ಕೆನರಾ ಬ್ಯಾಂಕ್ ನಲ್ಲಿ ಬೆಲೆ ಬಾಳುವ ಚಿನ್ನಾಭರಣ ಹಾಗೂ ನಗದು ಹಣ ದರೋಡೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಪ್ರಕರಣವನ್ನು ಬೇಧಿಸಿದ್ದು, ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ವ್ಯವಸ್ಥಾಪಕ ವಿಜಯಕುಮಾರ ಮಿರಿಯಾಲ(41), ಹುಬ್ಬಳ್ಳಿ ಜನತಾ ಕಾಲೊನಿಯ ಖಾಸಗಿ ಉದ್ಯೋಗಿ ಚಂದ್ರಶೇಖರ ನೆರೆಲ್ಲಾ(38) ಮತ್ತು ಹುಬ್ಬಳ್ಳಿ ಚಾಲುಕ್ಯ ನಗರದ ಸುನೀಲ ಮೋಕಾ(40) ಎಂಬುವವರನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು. ಆರೋಪಿಗಳು ವ್ಯವಸ್ಥಿತವಾಗಿ ಒಳಸಂಚು ಮಾಡಿ ಬ್ಯಾಂಕಿನಲ್ಲಿದ್ದ ಬೃಹತ್ ಮೊತ್ತದ ಬಂಗಾರದ ಆಭರಣಗಳನ್ನು ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದಲ್ಲದೆ, ತನಿಖೆಯ ದಿಕ್ಕು ತಪ್ಪಿಸುವಂತಹ ಹಲವಾರು ದೃಶ್ಯಾವಳಿಗಳನ್ನು ಸೃಷ್ಟಿಸಿದ್ದರೂ ಪ್ರಕರಣವನ್ನು ಭೇದಿಸಲಾಗಿದೆ ಎಂದು ತಿಳಿಸಿದರು. ಆರೋಪಿಗಳ ಬಳಿ ಇದ್ದ 10.75 ಕೋಟಿ ಮೌಲ್ಯದ…

Read More

ಬೆಂಗಳೂರು : ವಕ್ಫ್ ಕುರಿತಂತೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಇದೀಗ ಹೈಕೋರ್ಟ್ ಏಕ ಸದಸ್ಯ ಪೀಠ ರದ್ದೋಗೊಳಿಸಿ ಆದೇಶ ಹೊರಡಿಸಿದೆ. ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧದ ಎರಡು ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ.ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ವಕ್ಫ್ ಕುರಿತಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಚೋದನಕಾರಿ ಹೇಳಿಕೆಯ ಯಾವುದೇ ಅಂಶಗಳಿಲ್ಲ ಎಂದು ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದಿಸಿದರು. ಬಳಿಕ ಪ್ರಕರಣವನ್ನು ರದ್ದುಪಡಿಸಿ ನ್ಯಾ.ಎಸ್.ಆರ್ ಕೃಷ್ಣಕುಮಾರ್ ಅವರಿಂದ ಏಕ ಸದಸ್ಯ ಪೀಠ ಆದೇಶ ಹೊರಡಿಸಿತು.

Read More

ಬೆಂಗಳೂರು : ರಾಜ್ಯ ಪೊಲೀಸ್​ ಇಲಾಖೆಯ ಕಾನ್​ಸ್ಟೇಬಲ್‌ಗಳು ಧರಿಸುತ್ತಿರುವ ಬ್ರಿಟಿಷ್​ ಕಾಲದ ಟೋಪಿ ಬದಲಾವಣೆಯ ಕಾಲ ಸನ್ನಿಹಿತವಾಗಿದೆ. ಟೋಪಿ ಬದಲಿಸುವಂತೆ ಹಲವು ವರ್ಷಗಳಿಂದಲೂ ಪೊಲೀಸ್ ಸಿಬ್ಬಂದಿ ಬೇಡಿಕೆಯಿಡುತ್ತಲೇ ಬಂದಿದ್ದರಾದರೂ ಇದುವರೆಗೂ ಬೇಡಿಕೆ ಈಡೇರಿಲ್ಲ. ಇದೀಗ ಹಳೆಯ ಮಾದರಿಯ ಸ್ಲೋಚ್ ಹ್ಯಾಟ್ ಬದಲಿಗೆ ಪೀಕ್​ ಕ್ಯಾಪ್​ ನೀಡುವುದರ ಕುರಿತು ಚರ್ಚೆ ನಡೆಸಿ ನೂತನ ಕ್ಯಾಪ್ ಬಳಕೆಗೆ ಚಿಂತನೆ ನಡೆಸಲಾಗುತ್ತಿದೆ. ಹೌದು ಕರ್ನಾಟಕ ಪೊಲೀಸರ ಕ್ಯಾಪ್ ದಲಾವಣೆಗೆ ಇದೀಗ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ರಾಜ್ಯದಲ್ಲಿ ಸದ್ಯ ಪೊಲೀಸರು ಬಳಸುತ್ತಿರುವ ಕ್ಯಾಪ್ ಬದಲು ಮಾಡಲು ರಾಜ್ಯ ಸರ್ಕಾರ ಮಹತ್ವದ ಚಿಂತನೆ ನಡೆಸುತ್ತಿದೆ. ಹೊಸ ಮಾದರಿಯ ಪೊಲೀಸ್ ಕ್ಯಾಪ್ ಬಳಕೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಹೊಸ ಪ್ರಸ್ತಾಪಿತ ಕ್ಯಾಪ್ ಅನ್ನು ಗೃಹ ಸಚಿವ ಜಿ. ಪರಮೇಶ್ವರ್ ಅವರು ಇಂದು ವೀಕ್ಷಿಸಿದರು. ಬೇರೆ ರಾಜ್ಯಗಳ ಪೊಲೀಸರು ಬಳಸುತ್ತಿರುವ ಕ್ಯಾಪ್ ಗಳನ್ನು ಇದೇ ಸಂದರ್ಭದಲ್ಲಿ ವೀಕ್ಷಣೆ ಮಾಡಿದರು. ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್…

Read More