Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಪ್ರದೇಶಗಳನ್ನು ಗುರಿಯಾಗಿಸಿ ಭಾರತದಿಂದ ಆಪರೇಷನ್ ಸಿಂದೂರ ಕಾರ್ಯಾಚರಣೆ ಬೆನ್ನಲ್ಲೇ ಶ್ರೀನಗರ, ಪಠಾಣ್ ಕೋಟ್, ಲೇಹ್, ಜಮ್ಮು, ಚಂಡೀಗಢ, ಜೋಧಪುರ, ಶಿಮ್ಲಾ ಸೇರಿ 25 ವಿಮಾನ ನಿಲ್ದಾಣಗಳನ್ನು ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕ ಬಂದ್ ಮಾಡಲಾಗಿದೆ. ಇದರ ಜತೆಗೇ ವಿಮಾನಯಾನ ಸಂಸ್ಥೆಗಳು ಕೂಡ ಅನೇಕ ಮಾರ್ಗಗಳಲ್ಲಿ ಹಾರಾಟ ನಿಲ್ಲಿಸಿವೆ. ಇದರಿಂದ 300 ವಿಮಾನಗಳ ಸಂಚಾರ ರದ್ದಾಗಿದೆ. ಪಾಕಿಸ್ತಾನದಲ್ಲಿನ ಭಯೋತ್ಪಾದಕ ದಾಳಿ ಬೆನ್ನಲ್ಲೇ ಭಾರತೀಯ ವಿಮಾನಯಾನ ಸಂಸ್ಥೆಯು ಶ್ರೀನಗರ ಸೇರಿದಂತೆ ಉತ್ತರ ಭಾರತದ ಕೆಲವು ನಿಲ್ದಾಣಗಳನ್ನು ಸೇನಾ ಕಾರ್ಯಾಚರಣೆಗಾಗಿ ಮುಚ್ಚಲಾಗಿದೆ. ಇನ್ನು ದೆಹಲಿ ವಿಮಾನ ನಿಲ್ದಾಣದಿಂದ ಕನಿಚ್ಛ 35 ವಿಮಾನಗಳು ರದ್ದಾಗಿವೆ. ಅಮೆರಿಕನ್ ಏರ್‌ಲೈನ್ಸ್ ಸೇರಿದಂತೆ ವಿದೇಶಿ ವಿಮಾನಯಾನ ಸಂಸ್ಥೆಗಳು ದೆಹಲಿ ವಿಮಾನ ನಿಲ್ದಾಣದಿಂದ ತಮ್ಮ ಸೇವೆಗಳನ್ನು ರದ್ದುಗೊಳಿಸಿದೆ. ಸೈಸ್‌ಜೆಟ್ ಸದ್ಯದ ಪರಿಸ್ಥಿತಿಯ ಕಾರಣದಿಂದ ಧರ್ಮಶಾಲಾ, ಲೇಹ್, ಜಮ್ಮು, ಶ್ರೀನಗರ ಮತ್ತ ಅಮೃತಸರ ನಿಲ್ದಾಣಗಳು ಮುಂದಿನ ಸೂಚನೆ ಬರುವ ತನಕ ಮುಚ್ಚಲಾಗಿದೆ ಎಂದು ಹೇಳಿದೆ. ಮೇ 10ರ ತನಕ…
ಬೆಂಗಳೂರು : ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರವಾಗಿ ಪಾಕ್ ಉಗ್ರರ ವಿರುದ್ಧ ನಡೆಸಲಾದ ‘ಆಪರೇಷನ್ ಸಿಂದೂರ’ ಹಿನ್ನೆಲೆಯಲ್ಲಿ ದೇಶದ ವಿವಿಧ ನಗರಗಳಲ್ಲಿ ವಾಯುಯಾನ ನಿಷೇಧಿಸಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಲವು ವಿಮಾನಗಳ ಕಾರ್ಯಾಚರ ಣೆಯಲ್ಲಿ ವ್ಯತ್ಯಯವಾಗಿದೆ. ಈ ಬಗ್ಗೆ ವಿಮಾನಯಾನ ಸಂಸ್ಥೆಗಳು ತಮ್ಮ ಪ್ರಯಾಣಿಕರಿಗೆ ಸೂಚನೆ ನೀಡಿದ್ದು, ನಿಗದಿತ ವಿಮಾನ ನಿಲ್ದಾಣಗಳಿಗೆ ಮೇ 10ರ ಬೆಳಗ್ಗೆ 5.30ರವರೆಗೆ ಸೇವೆ ಇರುವುದಿಲ್ಲ ಎಂದು ಪ್ರಕಟಿಸಿವೆ. ಹಾಗೆಯೇ, ಬೆಂಗಳೂರು’ ವಿಮಾನನಿಲ್ದಾಣನಿಲ್ದಾಣದಿಂದ ಅನೇಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಲಿದ್ದು, ಪ್ರಯಾಣಿಕರು ಈ ಬಗ್ಗೆ ಗಮನಿಸುವಂತೆ ಸೂಚನೆ ನೀಡಿದೆ. ಇದರಿಂದ 20ಕ್ಕೂ ಹೆಚ್ಚಿನ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ‘ಆಪರೇಷನ್ ಸಿಂದೂರ’ ಹಿನ್ನೆಲೆಯಲ್ಲಿ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರವಹಿಸಲಾಗಿದ್ದು, ಕೆಲ ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿದೆ. ಕೆಲ ವಿಮಾನನಿಲ್ದಾಣಗಳ ಬಳಿ ವಾಯುಯಾನಕ್ಕೆ ನಿಷೇಧ ಹೇರಲಾಗಿದೆ. ಪ್ರಮುಖವಾಗಿ ಜಮ್ಮು, ಶ್ರೀನಗರ, ಪಂಜಾಬ್‌ನ ಅಮೃತಸರ, ಮಧ್ಯಪ್ರದೇಶದ ಗ್ವಾಲಿಯರ್, ಉತ್ತರಪ್ರದೇಶದ ಗಾಜಿಯಾಬಾದ್‌ನ ಹಿಂಡನ್ ವಿಮಾನ ನಿಲ್ದಾಣಕ್ಕೆ ಸೇವೆ ನಿಷೇಧಿಸಲಾಗಿದೆ.
ಬೆಂಗಳೂರು: ಭಾರತೀಯ ಸೇನೆಯ ನಡೆಸಿದಂತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿಯಾಗಿದ್ದರಿಂದಾಗಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವಂತ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದೆ. ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ದಿನಾಂಕ:22.04.2025ರಂದು ಕಾಶ್ಮೀರದ ಪಹಲ್ಕಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ, ದಿನಾಂಕ:07.05.2025ರಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್, ಸಿಂಧೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ ಎಂದಿದ್ದಾರೆ. ಆದ್ದರಿಂದ ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಭಾರತೀಯ ಸೇನೆಯ ಕಾರ್ಯಾಚರಣೆಗೆ ಶುಭಾಶಯವನ್ನು ಸಲ್ಲಿಸಿರುತ್ತಾರೆ ಎಂದು ತಿಳಿಸಿದ್ದಾರೆ. ನಮ್ಮ ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಸಚಿವರ ಸೂಚನೆಯ ಮೇರೆಗೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತಾ, ಭಾರತೀಯ ಸೇನೆಗೆ…
ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ತಡರಾತ್ರಿ ಭಾರತ ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಒಂದು ಕ್ಷಿಪಣಿ ದಾಳಿಯಿಂದ 100ಕ್ಕೂ ಅಧಿಕ ಉಗ್ರರು ಸಾವನ್ನಪ್ಪಿದ್ದಾರೆ. ಇದೀಗ ಭಾರತ ಸಮರಾಭ್ಯಾಸ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಇದೀಗ ಬ್ಲಾಕ್ ಔಟ್ ಅಣುಕು ಪ್ರದರ್ಶನ ನಡೆಸಿದೆ. ಹೌದು ಪಾಕಿಸ್ತಾನ ವಿರುದ್ಧ ಭಾರತ ಸಮರಾಭ್ಯಾಸ ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಬ್ಲಾಕ್ ಔಟ್ ಅಣುಕು ಪ್ರದರ್ಶನ ನಡೆಸಿದೆ. ಬ್ಲ್ಯಾಕ್ ಔಟ್ ಮಾಡಿ ಎಲ್ಲಾ ಕಡೆಗೂ ಏಕ ಕಾಲದಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ಬ್ಲ್ಯಾಕ್ ಔಟ್ ಅಣುಕು ಪ್ರದರ್ಶನ ಮಾಡಲಾಯಿತು. ದೆಹಲಿ, ಬಿಹಾರ್ ಹಾಗು ಉತ್ತರಪ್ರದೇಶದಲ್ಲೂ ಬ್ಲಾಕ್ ಔಟ್ ಅಣುಕು ಪ್ರದರ್ಶನ ಮಾಡಲಾಗಿದ್ದು, ಬೆಂಗಳೂರಿನ ಹಲಸೂರಿನ ಮಾತ್ರ ಬ್ಲಾಕ್ ಔಟ್ ಮಾಡಲಾಗಿದೆ. ಹಲಸೂರಲ್ಲಿ ಬ್ಲಾಕ್ ಔಟ್ ಗೆ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದರ ಹಿನ್ನೆಲೆ ಅಲ್ಲಿ ಮಾತ್ರ ಬ್ಲ್ಯಾಕ್ ಔಟ್ ಮಾಡಲಾಗಿದೆ. ಸಾರ್ವಜನಿಕರಿಗೆ ತೊಂದರೆ ಕಾರಣಕ್ಕೆ ಹಲಸೂರಲ್ಲಿ ಮಾತ್ರ…
ನವದೆಹಲಿ : ಮಧ್ಯರಾತ್ರಿ ಭಾರತೀಯ ಸೈನಿಕರು ಪಾಕಿಸ್ತಾನದ ಉಗ್ರರ ಕ್ಯಾಂಪ್ ಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದಾರೆ. ಈ ಒಂದು ಕ್ಷಿಪಣಿ ದಾಳಿಗೆ 100ಕ್ಕೂ ಹೆಚ್ಚು ಉಗ್ರರು ಸಾವನಪ್ಪಿದ್ದಾರೆ. ಇನ್ನು ಭಾರತೀಯ ಸೈನಿಕರ ಈ ಒಂದು ಕಾರ್ಯಕ್ಕೆ ಭಾರತ ದೇಶದಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತಪಡಿಸಲಾಗುತ್ತಿದೆ. ಇನ್ನು ಪಾಕಿಸ್ತಾನದ ಉಗ್ರರ ಕ್ಯಾಂಪ್ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ್ದರ ಹಿನ್ನೆಲೆಯಲ್ಲಿ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಶರೀಫ್ ಪಾಕಿಸ್ತಾನ ಸೇನೆಗೆ ಪ್ರತಿ ದಾಳಿ ನಡೆಸಲು ಪರಮಾಧಿಕಾರ ನೀಡಿದ್ದಾರೆ. ಪ್ರಧಾನಿ ಮೋದಿ ಭಾರತೀಯ ಸೈನಿಕರಿಗೆ ಯಾವ ರೀತಿ ಸ್ವತಂತ್ರ ನೀಡಿದ್ದರೂ ಅದೇ ರೀತಿ ಪಾಕಿಸ್ತಾನದ ಪ್ರಧಾನಿ ಪಾರ್ಕ್ ಸೈನಿಕರಿಗೆ ಫ್ರೀ ಹ್ಯಾಂಡ್ ನೀಡಿದ್ದಾರೆ. ಈ ವಿಚಾರವಾಗಿ, ಭಾರತದ ಮೇಲೆ ಪ್ರತಿ ದಾಳಿ ನಡೆಸಿದರೆ ಆಪರೇಷನ್ ಸಿಂಧೂರ್ ವಿಸ್ತರಣೆ ಮಾಡಲಾಗುತ್ತದೆ.ಒಂದು ವೇಳೆ ಪ್ರತಿ ದಾಳಿ ಏನಾದರು ಮಾಡಿದ್ರೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಮತ್ತೆ ದಾಳಿ ನಡೆಸಲಾಗುತ್ತದೆ ಎಂದು ಪಾಕಿಸ್ತಾನಕ್ಕೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್…
ಇಸ್ಲಾಮಾಬಾದ್ : ತಡರಾತ್ರಿ ಪಾಕಿಸ್ತಾನದ ಉಗ್ರರ ಕ್ಯಾಂಪ್ ಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಈ ಒಂದು ಕ್ಷಿಪಣಿ ದಾಳಿಗೆ ಸುಮಾರು 100ಕ್ಕೂ ಹೆಚ್ಚು ಉಗ್ರರು ಸಾವನಪ್ಪಿದ್ದಾರೆ. ಇದೀಗ ಉಗ್ರರ ಶವಗಳನ್ನು ಪಾಕಿಸ್ತಾನಿಯರು ಟ್ರ್ಯಾಕ್ಟರ್ ನಲ್ಲಿ ಸಾಗಿಸುತ್ತಿರುವ ಫೋಟೋ ವೈರಲ್ ಆಗಿದೆ. ಹೌದು ಭಾರತ ಸೇನೆಯ ಆಪರೇಷನ್ ಸಿಂಧೂರಕ್ಕೆ ತತ್ತರಿಸಿರುವ ಪಾಕ್, ಉಗ್ರರ ಶವಗಳಿಗೆ ಧ್ವಜ ಹೊದಿಸಿ ಟ್ರ್ಯಾಕ್ಟರ್‌ನಲ್ಲಿ ಸಾಗಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ವೀಡಿಯೋ ಕ್ಲಿಪ್‌ನಲ್ಲಿ, ಭಯೋತ್ಪಾದಕರ ಶವಗಳಿಗೆ ಪಾಕ್ ಧ್ವಜ ಹೊದಿಸಿ ಗೌರವ ಸೂಚಿಸಲಾಗಿದೆ. ಈ ಶವಗಳನ್ನು ಬಹಾವಲ್ಪುರದ ಅಂತ್ಯಕ್ರಿಯೆಗೆ ಕೊಂಡೊಯ್ಯಲಾಗುತ್ತಿತ್ತು. ಉಗ್ರರ ಶವಗಳ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನೆಯ ಅಧಿಕಾರಿಗಳು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದ್ದಾರೆ. ನಿಷೇಧಿತ ಜೈಶ್ -ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳ ನೆಲೆಯಿರುವ ಬಹವಾಲ್‍ಪುರದಲ್ಲಿ ಮರ್ಕಜ್ ಸುಭಾನ್ ಅಲ್ಲಾ ಮಸೀದಿ, ತೆಹ್ರಾ ಕಲಾನ್‍ನಲ್ಲಿನ ಸರ್ಜಾಲ್, ಕೋಟಿಯ ಮರ್ಕಜ್ ಅಬ್ಬಾಸ್ ಮತ್ತು ಮುಜಫರಾಬಾದ್‍ನ ಸೈಯನ್ನಾ ಬಿಲಾಲ್ ಕ್ಯಾಂಪ್‍ಗಳ ಮೇಲೆ ಭಾರತ…
ಬೆಂಗಳೂರು : ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿ, ಉಗ್ರರ ಹುಟ್ಟಡಗಿಸಿದೆ. ಭಾರತೀಯ ಸೇನೆಯ ಈ ದಿಟ್ಟ ಆಪರೇಷನ್ ಸಿಂಧೂರ ದಾಳಿಯ ಬಗ್ಗೆ ಇಡೀ ದೇಶವೆ ಹೆಮ್ಮೆ ಪಡುತ್ತಿದೆ. ಕನ್ನಡ ಚಿತ್ರರಂಗದ ಕೆಲ ಗಣ್ಯರು ಸಹ ಸೇನೆಯ ಈ ದಿಟ್ಟ ಉತ್ತರವನ್ನು ಮನಸಾರೆ ಕೊಂಡಾಡಿದ್ದಾರೆ. ಇದೀಗ ಕನ್ನಡ ಚಿತ್ರರಂಗದ ಕೆಲ ಗಣ್ಯರು ಸಹ ಸೇನೆಯ ಈ ದಿಟ್ಟ ಉತ್ತರವನ್ನು ಮನಸಾರೆ ಕೊಂಡಾಡಿದ್ದಾರೆ. ನಟ ಪ್ರೇಮ್ ಸಹ ಈ ಬಗ್ಗೆ ಮಾತನಾಡಿದ್ದು, ಸೇನೆಗೆ ಅಭಿನಂದನೆ ಸಲ್ಲಿಸಿರುವ ಜೊತೆಗೆ ಪಾಕಿಸ್ತಾನವು ಮರಳಿ ಭಾರತದ ಮೇಲೆ ಆಕ್ರಮಣ ಮಾಡುವ ಉದ್ಧಟತನ ಪ್ರದರ್ಶಿಸಬಾರದು ಎಂದಿದ್ದಾರೆ. ಹೆಂಡತಿ ಮಕ್ಕಳೊಂದಿಗೆ ಕಾಲ ಕಳೆದು ಎಂಜಾಯ್ ಮಾಡಲು ಪ್ರವಾಸಕ್ಕೆ ಹೋದಾಗ ನಿನ್ನ ಧರ್ಮ ಯಾವುದು ಎಂದು ಹೇಳಿ ಕೊಲೆ ಮಾಡುತ್ತಾರೆ ಅಂದರೆ ಇದಕ್ಕಿಂತ ದೊಡ್ಡದಾದ ಕ್ರೈಂ ಜಗತ್ತಿನಲ್ಲಿ ಯಾವುದು ಇಲ್ಲ. ಪಾಕಿಸ್ತಾನ ಅಷ್ಟೇ ಅಲ್ಲ ಪ್ರಪಂಚದ ಯಾವುದೇ ದೇಶ ಭಾರತದ ಮೇಲೆ ಯುದ್ಧ ಮಾಡಲಿ…
ಬೆಂಗಳೂರು : ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಇತ್ತೀಚಿಗೆ ಅವರ ವಿರುದ್ಧ FIR ದಾಖಲಾಗಿತ್ತು. ಇದೀಗ ಎಫ್ಐಆರ್ ರದ್ದು ಪಡಿಸುವಂತೆ ಹೈಕೋರ್ಟಿಗೆ ಶಾಸಕ ಹರೀಶ್ ಪೂಂಜಾ ಅರ್ಜಿ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಸಂಬಂಧಿಸಿದ ವಿಚಾರಣಾ ಪ್ರಕ್ರಿಯೆ ರದ್ಧತಿ ಕೋರಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಹರೀಶ್ ಪೂಂಜಾ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವಂತೆ ಅವರ ಪರ ವಕೀಲರು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ಮುಂದೆ ಪ್ರಸ್ತಾಪಿಸಿದರು. ಇದಕ್ಕೆ ಪೀಠ, ಇದು ಜನಪ್ರತಿನಿಧಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ನ್ಯಾಯಾಲಯಕ್ಕೆ ಆ ವ್ಯಾಪ್ತಿ ಇಲ್ಲ. ಈ ಸಂಬಂಧ ಮುಖ್ಯ ನ್ಯಾಯಮೂರ್ತಿಗಳಿಂದ ನಿರ್ದೇಶನ ಪಡೆದು, ಆದೇಶವಾದರೆ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿ ವಿಚಾರಣೆ ಮುಂದೂಡಿತು.
ನವದೆಹಲಿ : ಧಾರವಾಡ ಐಐಟಿ ಸೇರಿದಂತೆ ಐದು ಐಐಟಿಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.ಇದರಿಂದ 6500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅವಕಾಶ ದೊರೆಯಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಬಳಿಕ ಮಾತನಾಡಿದ ಪ್ರಹ್ಲಾದ್ ಜೋಶಿ, ರಾಜ್ಯದ ಧಾರವಾಡ ಐಐಟಿ ಹಾಗೂ ಆಂಧ್ರಪ್ರದೇಶ ತಿರುಪತಿ ಐಐಟಿ, ಛತ್ತೀಸ್‌ಗಢದ ಭಿಲಾಯಿ ಐಐಟಿ, ಜಮ್ಮು-ಕಾಶ್ಮೀರದ ಜಮ್ಮು ಐಐಟಿ ಮತ್ತು ಕೇರಳದ ಪಾಲಕ್ಕಾಡ್‌ಗಳಲ್ಲಿ ಸ್ಥಾಪಿಸಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಅನುಮೋದನೆ ನೀಡಿತು ಎಂದಿದ್ದಾರೆ. ಧಾರವಾಡ ಐಐಟಿ ಸೇರಿದಂತೆ ಐದು ಐಐಟಿಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಒಪ್ಪಿಗೆ ನೀಡಿದೆ. ಇದರಿಂದ 6500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅವಕಾಶ ದೊರೆಯಲಿದೆ. ಹೊಸ ಸಂಶೋಧನಾ ಪಾರ್ಕ್‌ಗಳು ಮತ್ತು 130 ಅಧ್ಯಾಪಕರ ಹುದ್ದೆಗಳ ಸೃಷ್ಟಿಯೂ ಈ ಯೋಜನೆಯ…
ನವದೆಹಲಿ : ಪೆಹಲ್ಗಾಮ್ ಉಗ್ರರ ದಾಳಿಯ ಪ್ರತಿಕಾರಕ್ಕೆ ತಡರಾತ್ರಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ಎಲ್ಲಾ ಉಡೀಸ್ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಆಪರೇಷನ್ ಸಿಂಧೂರ್ ಬೆನ್ನಲ್ಲೇ ಪಾಕಿಸ್ತಾನ ಬೆದರಿದೆ. ಇದಕ್ಕೆ ಪೂಕರವೆಂಬಂತೆ ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಅಸಿಫ್ ಶಾಂತಿ ಪಠಣ ಮಾಡಿದ್ದಾರೆ. ಉಗ್ರದ ನೆಲೆ ಗುರಿಯಾಗಿಸಿ ಏರ್ಸ್ಟ್ರೈಕ್ ಮಾಡಿದ ನಂತರ ಪಾಕಿಸ್ತಾನ ರಕ್ಷಣಾ ಸಚಿವ ಅಸಿಫ್ ಪ್ರತಿಕ್ರಿಯಿಸಿದ್ದು, ಭಾರತ ದಾಳಿ ಮಾಡಿದರೆ ಮಾತ್ರ ಪಾಕಿಸ್ತಾನ ಪ್ರತಿಕ್ರಿಯಿಸುತ್ತದೆ. ಕಳೆದ ಹದಿನೈದು ದಿನಗಳಿಂದ ನಾವು ಭಾರತದ ವಿರುದ್ಧ ಯಾವುದೇ ಬಗೆಯ ಕ್ರಮಕೈಗೊಳ್ಳುವಿದಲ್ಲ ಎಂದು ಹೇಳುತ್ತಿದ್ದೇವೆ. ಆದರೆ ನಮ್ಮ ಮೇಲೆ ದಾಳಿ ನಡೆದರೆ, ನಾವು ಪ್ರತಿದಾಳಿ ಮಾಡುತ್ತೇವೆ. ಇನ್ನು ಒಂದು ವೇಳೆ ಭಾರತ ಹಿಂದೆ ಸರಿದರೆ ನಾವು ಸಹ ಖಂಡಿತವಾಗಿಯೂ ಈ ಉದ್ವಿಗ್ಬತೆಯನ್ನು ಶಮನಗೊಳಿಸುತ್ತೇವೆ ಎಂದಿದ್ದಾರೆ. ಇನ್ನು ಉಗ್ರರ ಮೇಲೆ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಏರ್ ಸ್ಟ್ರೈಕ್…













