Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕರ್ನಾಟಕದ ಇತಿಹಾಸದಲ್ಲಿ ದೇವರಾಜು ಅರಸು ಬಳಿಕ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ಇಂದು ದಾಖಲೆ ಮುರಿದಿದ್ದಾರೆ. ನಿನ್ನೆ ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ ಎಂದು ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ ಇಂದು ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೆ ಎಂದು ಗೊತ್ತಿಲ್ಲ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆಯು ಇದೀಗ ಸಂಚಲನ ಸೃಷ್ಟಿಸಿದೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಆಗಿ ದಾಖಲೆ ವಿಚಾರವಾಗಿ ಜನರ ಆಶೀರ್ವಾದದಿಂದ ನಾನು ಇಲ್ಲಿಯವರೆಗೂ ಬಂದಿದ್ದೇನೆ. ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೋ ನನಗೆ ಗೊತ್ತಿಲ್ಲ. ಜನರ ಆಶೀರ್ವಾದ ಇರುವವರೆಗೂ ನಾನು ಕೆಲಸ ಮಾಡುತ್ತೇನೆ. ರಾಜಕೀಯದಲ್ಲಿ ಇದುವರೆಗೂ ನಾನು ಮಾಡಿದ ಕೆಲಸ ತೃಪ್ತಿ ತಂದಿದೆ ಎಂದು ಹಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು : ಬೆಂಗಳೂರಲ್ಲಿ ಕೋಗಿಲು ಲೇಔಟ್ ಅನಧಿಕೃತ ಮನೆ ತೆರವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಅತಿಕ್ರಮಣ ಮಾಡಿದವರ ವಿರುದ್ಧ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ಬೆಂಗಳೂರಿನ ಶ್ರೀನಿವಾಸಪುರದ ಬಳಿ ಇರುವ ಕೋಗಿಲು ಲೇಔಟ್ ನಲ್ಲಿ ಅನಧಿಕೃತ ಮನೆಗಳನ್ನು ತೆರವುಗೊಳಿಸಲಾಗಿದ್ದು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ವಿಜಯ್, ವಾಸಿಂ ಉಲ್ಲಾಬೇಗ್ ಸೇರಿದಂತೆ ನಾಲ್ವರ ವಿರುದ್ಧ FIR ದಾಖಲಾಗಿದೆ. A1 ವಿಜಯ್, A2 ವಾಸಿಂ ಉಲ್ಲಾಬೇಗ್, A3 ಅಂಜಿನಪ್ಪ, A4 ರಾಬೀನ್ ಎನ್ನುವವರ ವಿರುದ್ಧ ಇದೀಗ ಯಲಹಂಕ ಠಾಣೆ ಪೋಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ನಾಲ್ಕು ಎಕರೆ ಪ್ರದೇಶದಲ್ಲಿ ಅತಿಕ್ರಮಣ ಮಾಡಿ ಕಚ್ಚಾಮನೆ ನಿರ್ಮಾಣ ಮಾಡಿದ್ದಾರೆ 160 ಮನೆಗಳನ್ನು ನಿರ್ಮಾಣ ಮಾಡಿ ಹಣ ಪಡೆದು, ಹಂಚಿಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನ ಜಯನಗರ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಫೇಸ್ ಬುಕ್, ಇನ್ಸ್ಟಾ ಖಾತೆ ಸೃಷ್ಟಿಸಿ ಮಾಡಿ ಹಲವರಿಗೆ ಮೆಸೇಜ್ ಕಳುಹಿಸಲಾಗಿದೆ. ಶಾಸಕ ಸಿ.ಕೆ. ರಾಮಮೂರ್ತಿ ಹೆಸರಿನಲ್ಲಿ ಮೆಸೇಜ್ ಹಿನ್ನೆಲೆ ಬೆಂ.ದಕ್ಷಿಣ ಸೈಬರ್ ಪೊಲೀಸ್ ಠಾಣೆಗೆ ಶಾಸಕ ದೂರು ನೀಡಿದ್ದಾರೆ. ಹೌದು ಫೇಸ್ಬುಕ್, ಇನ್ಸ್ಟಾಗ್ರಾಂ ಖಾತೆಯನ್ನು ಹ್ಯಾಕ್ ಮಾಡಿ ಯುವತಿಯೊಬ್ಬರಿಗೆ ಸಂದೇಶ ಕಳುಹಿಸಿರುವ ಕುರಿತು ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ. ಶಾಸಕರ ಅಧಿಕೃತ ಇನ್ಸ್ಟಾ ಪೇಜ್ನಿಂದ ಯುವತಿಗೆ ಹಾಯ್, ಹಲೋ ಗುಡ್ ಮಾರ್ನಿಂಗ್, ಗುಡ್ ಈವ್ನಿಂಗ್, ರೀಲ್ಸ್ ಸೂಪರ್ ಅಂತಾ ಸಂದೇಶ ರವಾನಿಸಲಾಗಿದೆ. ಸದ್ಯ ಈ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಗಲಾಟೆ ನಡೆದು ಓರ್ವ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾಗಿರುವ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರಾಜಶೇಖರ್ ಗೆ ಗುಂಡೆಟು ತಗುಲಿದ್ದು, ಶಾಸಕ ಜನಾರ್ಧನ ರೆಡ್ಡಿ ಅವರು ಈ ಒಂದು ವಿಡಿಯೋ ವೈರಲ್ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗೆ ತಗುಲಿದ ಗುಂಡೇಟಿನ ವಿಡಿಯೋ ಇದೀಗ ವೈರಲ್ ಆಗಿದೆ. ರಸ್ತೆಯಲ್ಲಿರುವ ಡಿವೈಡರ್ ಮರ ನಿಂತು ರಾಜಶೇಖರ್ ಶಾಸಕ ಜನಾರ್ಧನ್ ರೆಡ್ಡಿ ಮನೆಯ ಮೇಲೆ ಕಲ್ಲು ಎಸೆಡಿದ್ದಾನೆ. ಈ ವೇಳೆ ಪೊಲೀಸರು ರಾಜಶೇಖರ್ ಗೆ ಲಾಠಿ ಏಟು ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ರಾಜಶೇಖರ್ ಓಡುತ್ತಿರುವಾಗ ಸತೀಶ್ ರೆಡ್ಡಿ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದು ಆ ಗುಂಡು ರಾಜಶೇಖರಿಗೆ ತಗುಲಿರುವ ವಿಡಿಯೋವನ್ನು ಶಾಸಕ ಜನಾರ್ಧನ ರೆಡ್ಡಿ ಇದೀಗ ರಿಲೀಸ್ ಮಾಡಿದ್ದಾರೆ. ಜನಾರ್ದನ ರೆಡ್ಡಿ ಕಡೆಯವರಿಂದಲೂ ಫೈರಿಂಗ್ ಆಗಿದೆ ಎನ್ನುವ ಆರೋಪಕ್ಕೆ ಶಾಸಕ ಜನಾರ್ದನ ರೆಡ್ಡಿ ಸ್ಪಷ್ಟನೆ ನೀಡಿದ್ದು, ಜನಾರ್ದನ ರೆಡ್ಡಿ ಮನೆಯ ಮೇಲೆ ಗನ್ ಮ್ಯಾನ್…
ಬೆಂಗಳೂರು, ಜನವರಿ 7: ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಕೀರ್ತಿಗೆ ಭಾಜನರಾದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಕಾರ್ಮಿಕ ಸಚಿವರು, ಸಿಎಂ ಆಪ್ತ ಭಂಟ ಸಂತೋಷ್ ಎಸ್ ಲಾಡ್ ಅವರು ಶುಭ ಹಾರೈಸಿದ್ದಾರೆ. ಧೀಮಂತ ನಾಯಕ, ಬಡವರ ಭಾಗ್ಯವಿಧಾತ ಸಿದ್ದರಾಮಯ್ಯ ಅವರು, ಸಾಮಾಜಿಕ ನ್ಯಾಯದ ಹರಿಕಾರರಾಗಿ, ಅಹಿಂದ ವರ್ಗಗಳ ಮೇರು ನೇತಾರರಾಗಿ, ದಿಟ್ಟ ಆಡಳಿತಗಾರರಾಗಿ ಮಾಡುತ್ತಿರುವ ಸೇವೆ, ನಾಡು-ನುಡಿ-ಜಲ-ಗಡಿಗಳ ವಿಚಾರವಾಗಿ ಅವರ ಬದ್ಧತೆ ನಮ್ಮೆಲ್ಲರಿಗೆ ಸದಾ ಮಾರ್ಗದರ್ಶಿಯಾಗಿದೆ ಎಂದು ಹೇಳಿದ್ದಾರೆ. “ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಎಂಬುದು ಅತ್ಯಂತ ಖುಷಿ ತಂದಿದೆ. ಶೋಷಿತರ ಪರವಾಗಿ, ಬಡವರು ಮತ್ತು ಕೂಲಿ ಕಾರ್ಮಿಕರ ಪರವಾಗಿ ದುಡಿಯುತ್ತಿದ್ದಾರೆ. ದಾಖಲೆ ಸಂಖ್ಯೆಯ ಬಜೆಟ್ ಮಂಡಿಸಿದ್ದಾರೆ. ಅವರು ನನಗೆ ತಂದೆ ಸಮಾನ. ತಾಯಿ ಚಾಮುಂಡೇಶ್ವರಿಯ ಅನುಗ್ರಹ ಅವರ ಮೇಲೆ ಸದಾ ಇರಲಿ, ಬಡವರಿಗೆ ಇನ್ನಷ್ಟು ಜನಸೇವೆ, ಸಹಾಯ ಮಾಡುವ ಶಕ್ತಿಯನ್ನು ಕೊಡಲಿ. ಆರೋಗ್ಯ, ಶಕ್ತಿಯನ್ನು ನೀಡಲಿ” ಎಂದು ಹಾರೈಸಿದ್ದಾರೆ.
ಬಳ್ಳಾರಿ : ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಕಾರ್ಯಕರ್ತ ಫೈರಿಂಗ್ ವೇಳೆ ಸಾವನಪ್ಪಿದ್ದ ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಅಧಿಕಾರಿ ವರ್ಗಾವಣೆಯಾಗಿದ್ದು ಡಿಐಜಿಬಿ ವರ್ತಿಕ ಕಟಿಯಾರ್ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ. ಹೌದು ಬಳ್ಳಾರಿ ಡಿಐಜಿಪಿ ಆಗಿರುವ ವರ್ತಿಕ ಕಟಿಯಾರ್ ಅನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ ಡಿಐಜಿಪಿ ವರ್ತಿಕ ಕಟಿಆರ್ ವರ್ಗಾವಣೆಯಾಗಿದ್ದು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಸರ್ಕಾರ ವರ್ತಿಕ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿದೆ. ಸಿವಿಲ್ ರೈಟ್ಸ್ ಮತ್ತು ಎನ್ ಫೋರ್ಸ್ಮೆಂಟ್ ವಿಭಾಗಕ್ಕೆ ವರ್ಗಾವಣೆ ಮಾಡಿದ್ದು ಇನ್ನು ನೂತನ ಐಜಿಪಿಯಾಗಿ ಡಾ. ಬಿ ಎಸ್ ಹರ್ಷ ಅವರನ್ನು ಸರ್ಕಾರ ನೇಮಕ ಮಾಡಿದೆ. ಇದೇ ಪ್ರಕರಣದಲ್ಲಿ ಈ ಹಿಂದೆ ಎಸ್ಪಿ ಪವನ್ ನಜೂರ್ ಅವರನ್ನು ಸರ್ಕಾರ ಅಮಾನತುಗೊಳಿಸಿತ್ತು. ಬಳಿಕ ಅವರು ತಮ್ಮ ಸ್ನೇಹಿತನ ಫಾರ್ಮ್ ಹೌಸ್ ನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ…
SHOCKING : ತಾಯಿಯ ಮೇಲಿನ ದ್ವೇಷಕ್ಕೆ ಮಗಳ ಕತ್ತು ಹಿಸುಕಿ ಕೊಲೆ : ಬ್ಯಾಗ್ ನಲ್ಲಿ ಶವ ತುಂಬಿ ಚರಂಡಿಗೆ ಎಸೆದ ಪಾಪಿಗಳು!
ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ತಾಯಿಯ ಮೇಲಿನ ದ್ವೇಷಕ್ಕೆ ಆಕೆಯ 6 ವರ್ಷದ ಮುಗ್ಧ ಮಗಳನ್ನು ಕತ್ತು ಹಿಸುಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ನಲ್ಲೂರಳ್ಳಿಯ ಬಳಿ ಈ ಒಂದು ಕೊಲೆ ನಡೆದಿದೆ. ಕೊಲ್ಕತ್ತಾ ಮೂಲದ ಶಹಜಾನ್ ಕಥೂನ್ (6) ಎನ್ನುವ ಬಾಲಕಿಯನ್ನು ಕತ್ತುಹಿಸಿ ಕೊಲೆ ಮಾಡಲಾಗಿದೆ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ ಬ್ಯಾಗಿನಲ್ಲಿ ಶವ ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಲ್ಲದೆ ಶವವನ್ನು ಚರಂಡಿಗೆ ಎಸೆದು ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ಅಕ್ಕ ಪಕ್ಕದ ಮನೆಯವರನ್ನೆ ಬಾಲಕಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಮಗುವಿನ ತಾಯಿ ಹಾಗೂ ಅಕ್ಕಪಕ್ಕದವರ ಜೊತೆಗೆ ಜಗಳ ಆಗಿತ್ತು. ತಾಯಿಯ ಮೇಲಿನ ದ್ವೇಷದಿಂದ ಬಾಲಕಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ಇದೀಗ ಹುಡುಕಾಟ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನ ಶ್ರೀನಿವಾಸಪುರದ ಬಳಿ ಇರುವ ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳ ತೆರವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುನರ್ವಸತಿ ಪರಿಹಾರ ಕೋರಿ ಹೈಕೋರ್ಟಿಗೆ ಜೈಬಾ ತಬಸುಮ್ ಮತ್ತಿತರರು ಪಿಐಎಲ್ ಸಲ್ಲಿಸಿದ್ದು ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ವಿಚಾರಣೆಯ ವೇಳೆ 28 ವರ್ಷಗಳಿಂದ ಇಲ್ಲಿ 3 ಸಾವಿರ ಜನರು ವಾಸಿಸುತ್ತಿದ್ದರು ಎಂದು ವಾದ ಮಡಿಸಲಾಯಿತು. ಈ ವೇಳೆ ಎಜಿ ಶಶಿಕಿರಣಶೆಟ್ಟಿ ಅವರು 28 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದಾರೆ ಎಂಬುವುದು ಸುಳ್ಳು ಹೇಳಿಕೆ. ಪ್ರತಿ ಅಕ್ರಮ ಮನೆಯ ಬಗ್ಗೆ ಉಪಗ್ರಹ ಫೋಟೋ ಹಾಜರುಪಡಿಸಲಾಗುತ್ತದೆ. ಸುಪ್ರೀಂಕೋರ್ಟ್ ತೀರ್ಪು ಈ ಪ್ರಕರಣಕ್ಕೆ ಅನ್ವಯ ಆಗುವುದಿಲ್ಲ ನಿರ್ವಸತಿಕರಾದವರಿಗೆ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸರ್ಕಾರದಿಂದ ಊಟ ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಾಗಿದೆ ಅಕ್ಷೇಪಣೆ ಸಲ್ಲಿಸಲು ಒಂದು ವಾರ ರಾಜ್ಯ ಸರ್ಕಾರ ಕಾಲಾವಕಾಶ ಕೋರಿತು. ಈ ವೇಳೆ ಹೈಕೋರ್ಟ್ ವಿಚಾರಣೆಯನ್ನು ಜನವರಿ 22ಕ್ಕೆ ನಿಗದಿಪಡಿಸಿತು.
ಬೆಂಗಳೂರು : ಗೂಂಡಾಗಳನ್ನು ಕರೆಸಿ, ಹಲ್ಲೆ ಮಾಡಿ ಕೊಲರ್ ಬೆದರಿಕೆ ಹಾಕಿದ್ದಾಳೆ ಎಂದು ಪತ್ನಿಯ ವಿರುದ್ಧ ನಟ ಧನುಷ್ ದೂರು ನೀಡಿದ್ದಾರೆ. ಪತ್ನಿ ಅರ್ಷಿತಾ ವಿರುದ್ಧ ನಟ ಧನುಷ್ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಿವಾಜಿ ಸೂರತ್ಕಲ್ ಸಿನಿಮಾದ ನಾಯಕ ನಟನಾಗಿರುವ ಧನುಷ್ ಪತ್ನಿ ಅನುಮಾನ ವ್ಯಕ್ತಪಡಿಸಿ ಹಲ್ಲೆ ಮಾಡಿದ್ದಾಳೆ ಎಂದು ಆರೋಪಿಸಿ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪತ್ನಿ ಅನುಮಾನ ವ್ಯಕ್ತಪಡಿಸಿ ಹಲ್ಲೆ ಮಾಡಿದ್ದಾಳೆ ಎಂದು ಧನುಷ್ ದೂರು ನೀಡಿದ್ದಾರೆ. ಸುಳ್ಳು ಹೇಳಿ ಬೇರೆಯವರ ಜೊತೆಗೆ ವಿದೇಶ ಪ್ರವಾಸ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದ್ದು, ಕೆಲಸದ ಮೇಲೆ ವಿದೇಶಕ್ಕೆ ಹೋಗಿದ್ದರು ಪತ್ನಿ ಅರ್ಷಿತಾ ಕಿರಿಕ್ ಮಾಡಿದ್ದಾರೆ. ಗೂಂಡಾಗಳನ್ನು ಕರೆಸಿ ಹಲ್ಲೆ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಚಲನಚಿತ್ರ ಹಾಗೂ ಧಾರಾವಾಹಿಗಳಲ್ಲಿ ಇದೀಗ ಧನುಷ್ ನಟಿಸುತ್ತಿದ್ದು, ಶಿವಾಜಿ ಸೂರತ್ಕಲ್ ಸಿನಿಮಾ ಸೇರಿದಂತೆ ಹಲವು ಚಲನಚಿತ್ರ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ, ಪುರುಷ ಪೊಲೀಸ್ ಸಿಬ್ಬಂದಿ ಮುಂದೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದ್ದು ಇದೀಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಮಹಿಳೆ ತಾನಾಗಿಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತೆಯ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿರುವ ಆರೋಪ ವಿಚಾರವಾಗಿ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು ಆಕೆಯೇ ನಾಲ್ವರು ಪೊಲೀಸ್ ಬಂದಿಯ ಮೇಲೆ ಹಲ್ಲೆ ಮಾಡಿದ್ದಾಳೆ . ಜನವರಿ 1ರಂದು ಮತದಾರರ ಸಮೀಕ್ಷೆಯ ವೇಳೆ ಗಲಾಟೆ ನಡೆದಿತ್ತು. ಹುಬ್ಬಳ್ಳಿಯ ಚಾಲುಕ್ಯ ನಗರದಲ್ಲಿ ಗಲಾಟೆ ಆಗಿತ್ತು. ಸುಜಾತ ವಿರುದ್ಧ ಪ್ರಶಾಂತ್ ದೂರನ್ನ ಆಧರಿಸಿ ಜನವರಿ 5ರಂದು ಆಕೆಯನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಬಂಧಿಸಿ ವಾಹನ ಹತ್ತಿಸಿದ್ದಾಗ ಆಕೆಯ ಬಟ್ಟೆ ಬಿಚ್ಚಿಕೊಂಡಿದ್ದಾಳೆ. ನಾಲ್ವರು ಪೊಲೀಸ್ ಸಿಬ್ಬಂದಿ ಮೇಲು ಹಲ್ಲೆ ಮಾಡಿದ್ದಾಳೆ. ನಮ್ಮ ಸಿಬ್ಬಂದಿ ಆಕೆಗೆ ಬಟ್ಟೆ ಹಾಕಿ ಬಂಧಿಸಿ ಕರೆತಂದಿದ್ದಾರೆ. ಸದ್ಯ ಸುಜಾತ ನ್ಯಾಯಾಂಗ ಬಂಧನದಲ್ಲಿ ಇದ್ದಾಳೆ…














