Author: kannadanewsnow05

ತುಮಕೂರು : ನಿನ್ನೆ ಗದಗ ಜಿಲ್ಲಾ ಆಡಳಿತ ಭವನ ಮಂಗಳೂರು ಆರ್ ಟಿ ಓ ಕಚೇರಿಗೆ ಬಾಂಬ್ ಇಟ್ಟು ಸ್ಪೋಟಿಸಲಾಗುತ್ತದೆ ಎಂದು ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಇದೀಗ ತುಮಕೂರು ಜಿಲ್ಲಾಧಿಕಾರಿ ಕಚೇರಿಗೂ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇಂದು ಬೆಳಿಗ್ಗೆ 7 ಗಂಟೆಗೆ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ ಅಧಿಕೃತ ಇ-ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ಬಾಂಬ್ ಸ್ಪೋಟಗೊಳ್ಳಲಿದೆ ಎಂಬ ಸಂದೇಶ ಬಂದಿದೆ ಕೂಡಲೇ ಜಿಲ್ಲಾಧಿಕಾರಿ ಕಚೇರಿಗೆ ಪೊಲೀಸರು ದೌಡಯಿಸಿದ್ದಾರೆ. ಬಾಂಬ್ ನಿಷ್ಕ್ರಿಯದಳ, ಶ್ವಾನ ದಳ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಸದ್ಯ ಜಿಲ್ಲಾಧಿಕಾರಿ ಕಚೇರಿ ಒಳಗಡೆ ಯಾರನ್ನು ಬಿಡದೆ ತಪಾಸಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : PSI ವಿರುದ್ಧ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದ್ದು, ಪಿಎಸ್ಐ ಹರೀಶ್ ಗೆ ತಲೆದಂಡ ಆಗಿದೆ. ಅಂಗಡಿ ಮಾಲೀಕನಿಂದ ಹಣ ವಸೂಲಿ ಇದೀಗ ಸಾಬೀತು ಆಗಿದೆ. ಕಗ್ಗಲಿಪುರ ಠಾಣೆಯ ಪಿಎಸ್ಐ ಹರೀಶ್ ಇದೀಗ ಅಮಾನತುಗೊಂಡಿದ್ದಾರೆ. ಅಮಾನತು ಮಾಡಿ ಎಸ್ಪಿ ಶ್ರೀನಿವಾಸ್ ಗೌಡ ಆದೇಶ ಹೊರಡಿಸಿದ್ದಾರೆ. ಅಂಗಡಿ ಮಾಲೀಕ ರಾಜೇಶ್ ಅವರ ಬಲಿಬಳಿ ಸುಳ್ಳು ಪ್ರಕರಣವನ್ನು ದಾಖಲಿಸುವುದಾಗಿ ಹೇಳಿ 1.60 ಲಕ್ಷ ಹಣ ವಸೂಲಿ ಮಾಡಿರುವ ಆರೋಪ ಕೇಳಿ ಬಂದಿದೆ. ಜ್ಯೂಸ್ ಅಂಗಡಿ ಜೆರಾಕ್ಸ್ ಅಂಗಡಿ ಇಟ್ಟುಕೊಂಡಿರುವ ರಾಜೇಶ್ ನಕಲಿ ಆಧಾರ್ ಕಾರ್ಡ್ ಮಾಡಿ ಕೊಡುತ್ತಿದ್ದೀಯಾ ಎಂದು ಆರೋಪಿಸಿ ಪಿಎಸ್ಐ ಹರೀಶ್ 1.60 ಲಕ್ಷ ಹಣ ವಸೂಲಿ ಮಾಡಿದ್ದಾರೆ ಅಕ್ಟೋಬರ್ 29ರಂದು ಹಣ ವಸೂಲಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಆರೋಪಕ್ಕೆ ಸಂಬಂಧಪಟ್ಟಂತೆ ಸಾಕ್ಷಿಗಳು ಕೂಡ ಲಭ್ಯವಾಗಿದ್ದು ಈ ಹಿನ್ನೆಲೆ ಹರೀಶ್ ನನ್ನು ಸಸ್ಪೆಂಡ್ ಮಾಡಲಾಗಿದೆ.

Read More

ಬಾಗಲಕೋಟೆ : ಉತ್ತರ ಕರ್ನಾಟಕ ಭಾಗದಲ್ಲಿ ಅನೇಕ ಪ್ರಖ್ಯಾತ ಜಾನಪದ ಗಾಯಕರಿದ್ದಾರೆ.ಅದರಲ್ಲೂ ಬಿಗ್ ಬಾಸ್ ಸೀಸನ್ 12 ರಲ್ಲಿ ಉತ್ತರ ಕರ್ನಾಟಕದ ಖ್ಯಾತ ಜಾನಪದ ಗಾಯಕ ಮಾಳು ನಿಪನಾಳ್ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಇದೀಗ ಉತ್ತರ ಕರ್ನಾಟಕದ ಯೂಟ್ಯೂಬರ್ ಸ್ಟಾರ್ ಗಾಯಕ ಒಬ್ಬನ ವಿರುದ್ಧ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಹೌದು ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರಿದಂತೆ 7 ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ, ಅತ್ಯಾಚಾರ…

Read More

ಹಾವೇರಿ : ಇತ್ತೀಚಿಗೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಠಾಣೆಗೆ ಪೋಷಕರು ಕರೆದುಕೊಂಡು ಹೋಗಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸವನೂರು ಸಿಪಿಐ ಹಾಗೂ ಸರ್ವ ಹೆಡ್ ಕಾನ್ಸ್ಟೇಬಲ್ ಅನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ. ಸವಣೂರಿನ ಸಿಪಿಐ ದೇವಾನಂದ ಹಾಗೂ ಹೆಡ್ ಕಾನ್‌ಸ್ಟೆಬಲ್ ಮಲ್ಲಿಕಾರ್ಜುನ ಅವರನ್ನು ಅಮಾನತು ಮಾಡಲಾಗಿದೆ. ಡಿ.10 ರಂದು ಸವಣೂರು ಪಟ್ಟಣದಲ್ಲಿ ಶಿಕ್ಷಕ ಜಗದೀಶ್ ಎಂಬಾತನ ಮೇಲೆ ರ್ವಜನಿಕವಾಗಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮತ್ತು ಧರ್ಮದೇಟು ನೀಡಿ ಹಲ್ಲೆ ನಡೆಸಲಾಗಿತ್ತು. ಸ್ಥಳೀಯರು ಬೀದಿ ಬೀದಿಯಲ್ಲಿ ಹಲ್ಲೆ ಮಾಡಿ ಮೆರವಣಿಗೆ ಮಾಡಿದ್ದರು. ಈ ಸಂಬಂಧ ಸವಣೂರಿನ ಪೋಲಿಸರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಶಿಕ್ಷಕನಿಗೆ ಧರ್ಮದೇಟು ನೀಡಿ ಚಪ್ಪಲಿ ಹಾರ ಹಾಕಿ ಸ್ಥಳೀಯರು ಮೆರವಣಿಗೆ ಮಾಡಿದ್ದರು. ಕರ್ತವ್ಯದಲ್ಲಿ ನಿರ್ಲಕ್ಷ್ಯ ‌ಮಾಡಿದ ಆರೋಪದಡಿ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಿ…

Read More

ಬೆಂಗಳೂರು : ಗೃಹ ಇಲಾಖೆ ಇದೀಗ ಬೆಚ್ಚಿ ಬೀಳಿಸುವ ಅಂಕಿ ಅಂಶ ಬಹಿರಂಗಗೊಳಿಸಿದ್ದು ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 9369 ಮಕ್ಕಳು ಅಪಹರಣಕ್ಕೆ ಒಳಗಾಗಿದ್ದಾರೆ ಇನ್ನು ಆತಂಕಕಾರಿ ವಿಚಾರ ಏನೆಂದರೆ ಅದರಲ್ಲಿ ಶೇಕಡ 71 ರಷ್ಟು ಬಾಲಕೇರಿ ಇದ್ದಾರೆ ಎನ್ನುವುದು ತೀವ್ರ ಕಳವಳಕಾರಿಯಾಗಿದೆ. ಹೌದು ಕಳೆದ ಮೂರು ವರ್ಷಗಳಲ್ಲಿ, 2023, 2024 ಹಾಗೂ 2025ರ ನವೆಂಬರ್ 15ರ ವರೆಗೆ ರಾಜ್ಯದಲ್ಲಿ ಒಟ್ಟು 9,639 ಮಕ್ಕಳು ಅಪಹರಣಕ್ಕೊಳಗಾಗಿರುವ ವರದಿಯಾಗಿದೆ ಎಂದು ಗೃಹ ಇಲಾಖೆ ಅಂಕಿ-ಅಂಶ ನೀಡಿದೆ. 2023ರಲ್ಲಿ ರಾಜ್ಯದಲ್ಲಿ 3,039 ಮಕ್ಕಳು, 2024ರಲ್ಲಿ 3,411 ಮಕ್ಕಳು ಹಾಗೂ 2025ರಲ್ಲಿ ಇದುವರೆಗೆ 3,189 ಮಕ್ಕಳು ಅಪಹರಣಕ್ಕೊಳಗಾಗಿದ್ದಾರೆ. ಮೂರು ವರ್ಷ ವರದಿಯಾಗಿರುವ ಅಪಹರಣ, ನಾಪತ್ತೆಯಾದ ಒಟ್ಟು ಮಕ್ಕಳಲ್ಲಿ ಹೆಣ್ಣುಮಕ್ಕಳ ಪ್ರಮಾಣವೇ ಹೆಚ್ಚಿರುವುದು ಆಘಾತಕಾರಿ ವಿಚಾರವಾಗಿದೆ. ಈ ಅವಧಿಯಲ್ಲಿ ಸುಮಾರು 6,891 ಬಾಲಕಿಯರು ಅಪಹರಣ, ನಾಪತ್ತೆಯಾಗಿದ್ದಾರೆ. ಅಂದರೆ ಒಟ್ಟಾರೆ ಮಕ್ಕಳ ಅಪಹರಣದಲ್ಲಿ 71.50%ರಷ್ಟು ಬಾಲಕಿಯರಿದ್ದಾರೆ. ಅಲ್ಲದೆ, ಒಟ್ಟು 2,748 ಗಂಡು ಮಕ್ಳಳು ಕಣ್ಮರೆ, ಅಪಹರಣಗೊಂಡಿದ್ದಾರೆ ಎಂದು ಗೃಹ…

Read More

ಕೋಲಾರ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಕರ್ತವ್ಯದಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಸುಬ್ರಮಣಿ ಮೃತಪಟ್ಟ ನಂಗಲಿ ಪೊಲೀಸ್ ಠಾಣೆ ಮುಖ್ಯಪೇದೆ. ಭಾನುವಾರ ರಾತ್ರಿ ಸುಬ್ರಮಣಿ 112 ವಾಹನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಸುಬ್ರಮಣಿ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟರುವ ಶಂಕೆ ವ್ಯಕ್ತವಾಗಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ದಾವಣಗೆರೆ : ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (95) ಇಂದು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಅವರು, ಕುಟುಂಬಸ್ಥರು, ಅಪಾರ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಇದೀಗ ದಾವಣಗೆರೆಯ ಕಲ್ಲೇಶ್ವರ ಮಿಲ್ ನಲ್ಲಿ ಸಕಲ ಸರ್ಕಾರಿ ಗೌರವ ಹಾಗು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪನವರ ಅಂತ್ಯಕ್ರಿಯೆ ನೆರವೇರಿತು. ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ನಗರದ ಕಲ್ಲೇಶ್ವರ ಮಿಲ್ ನಲ್ಲಿ ಅಂತ್ಯ ಸಂಸ್ಕಾರ ನೆರವೇರಿತು. ಪತ್ನಿ ಸಮಾಧಿಯ ಪಕ್ಕದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ನೆರವೇರಿತು. ವೀರಶೈವ ಲಿಂಗಾಯತ ವಿಧಿ ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಿತು ಪಂಚಪೀಠಾಧಿಶ್ವರರ ಪಾದೋಧಕ ಮೂಲಕ ಪೂಜೆ ಮಾಡಿ, ಕ್ರಿಯಾ ಸಮಾಧಿ ಬಳಿಕ ಶಿವಶಂಕರಪ್ಪ ಪಾರ್ಥಿವ ಶರೀರಕ್ಕೆ ಅಭಿಷೇಕ ಮಾಡಲಾಯಿತು. ಮಣ್ಣು ಹಾಕದೆ ಕ್ರಿಯಾ ಸಮಾಧಿಯಲ್ಲಿ ವಿಭೂತಿ ಹಾಕಲಾಯಿತು. ಇದೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,…

Read More

ಮಂಗಳೂರು : ಕಳೆದ ಒಂದು ಗಂಟೆಯ ಹಿಂದೆ ಗದಗ ಜಿಲ್ಲಾಡಳಿತ ಭವನ ಸ್ಪೋಟಿಸುವುದಾಗಿ ಕಿಡಿಗೇಡಿಗಳಿಂದ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಅದರ ಬೆನ್ನಲ್ಲೇ ಇದೀಗ ಮಂಗಳೂರು ಆರ್‌ಟಿಓ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. aarna aswin sekar@outlook.com ನಿಂದ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದೆ ಪಾಕಿಸ್ತಾನ ಐಎಸ್ಐ, ಎಲ್ ಟಿ ಟಿ ಇ ಯಿಂದ ರಿಮೋಟ್ ಆಪರೇಷನ್ ಮಾಡಲಾಗುತ್ತೆ ಎಂದು ಉಲ್ಲೇಖಿಸಿ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ ತಮಿಳುನಾಡು ರಾಜಕೀಯ ವಿಚಾರವಾಗಿ ಕಿಡಿಗೇಡಿಗಳು ಇ-ಮೇಲ್ ಸಂದೇಶ ಕಳುಹಿಸಿದ್ದಾರೆ. ಸಜ್ಜನ್ ಹೈದರ್ ಪಿಎಎಫ್ ಗೆ ಜಿಂದಾಬಾದ್ ಎಂದು ಘೋಷಣೆ ಇದ್ದು, ತಮಿಳುನಾಡಿನ ಐಪಿಎಸ್ ಅಧಿಕಾರಿಗಳ ಹೆಸರು ಉಲ್ಲೇಖಿಸಿ ಇ-ಮೇಲ್ ಕಳುಹಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದ ಬಳಿ ನಡು ರಸ್ತೆಯಲ್ಲಿಯೇ ಏಕಾಏಕಿ ಕಾರೊಂದು ಆಕಸ್ಮಿಕವಾಗಿ ಹೊತ್ತಿ ಉರಿದಿರುವ ಘಟನೆ ಇದೀಗ ವರದಿಯಾಗಿದೆ. ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ತಗುಲಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಹೌದು ಬೆಂಗಳೂರಿನ ವಿಜಯನಗರ ಮುಖ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದು ಏಕಾಏಕಿ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಗೆ ತಾಂತ್ರಿಕ ದೋಷ ಕಾರಣವಿರಬಹುದೆಂದು ಶಂಕಿಸಲಾಗಿದೆ.ಘಟನೆಯಿಂದಾಗಿ ವಿಜಯನಗರ ಮುಖ್ಯರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಈ ಘಟನೆ ವಿಜಯನಗರದ ಮುಖ್ಯರಸ್ತೆಯಲ್ಲಿರುವ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ಸಮೀಪ ನಡೆದಿದೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಒಂದು ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಕಾರನ್ನು ಆವರಿಸಿದ್ದು, ಕಾರು ಧಗಧಗನೆ ಉರಿಯಲು ಶುರು ಮಾಡಿದೆ.…

Read More

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ವೃದ್ಧರೊಬ್ಬರು ಸೈಬರ್ ವಾಂಚನಿಗೆ ಒಳಗಾಗಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡಿದ್ದರು. ಇದೀಗ ಅಂತದ್ದೇ ಘಟನೆ ಮತ್ತೊಂದು ವರದಿಯಾಗಿದ್ದು, ಬೆಂಗಳೂರಿನ ಹಿರಿಯ ಉದ್ಯಮಿ, ರಾಮ ಭಕ್ತರಾದ ರಾಜೇಂದ್ರ ನಾಯ್ಡು ಅವರನ್ನು ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವಂಚಿಸಿರುವ ಸೈಬರ್ ಖದೀಮರು, 8.3 ಕೋಟಿ ರೂ. ಎಗರಿಸಿದ್ದಾರೆ. ಹೂಡಿಕೆಯಿಂದ ಬಂದ ಲಾಭದ ಹಣವನ್ನು ದಾನ ಮಾಡಲು ಉದ್ದೇಶಿಸಿದ್ದ ರಾಜೇಂದ್ರ ನಾಯ್ಡು ಇದ್ದ ಹಣವನ್ನೂ ಕಳೆದು ಕೈಸುಟ್ಟುಕೊಂಡಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ಸೈಬರ್ ವಚಕರು ಅವರಿಂದ ಹಣ ಪೀಕಿಸಿದ್ದಾರೆ. ವಂಚನೆಗೆ ಒಳಗಾದವರು ರಾಜೇಂದ್ರ ನಾಯ್ಡು (71) ಎಂಬ ಉದ್ಯಮಿಯಾಗಿದ್ದು, ಅಯೋಧ್ಯೆಯ ರಾಮ ಭಕ್ತರಾಗಿದ್ದಾರೆ. ಅವರು ಅಯೋಧ್ಯೆಯ ರಾಮಮಂದಿರಕ್ಕೆ ಬೆಳ್ಳಿ ಪೂಜಾ ಸಾಮಾಗ್ರಿಗಳನ್ನು ದೇಣಿಗೆ ನೀಡಿದ್ದರು. ಈ ಹಿಂದೆ ರಿಲಯನ್ಸ್ ಕ್ಯಾಪಿಟಲ್‌ನಲ್ಲಿ ಸಾಲ ಪಡೆದು ಅದನ್ನು ಸಂಪೂರ್ಣವಾಗಿ ತೀರಿಸಿದ್ದರು. ರಿಲಯನ್ಸ್ ಕಂಪನಿಯ ಹೆಸರನ್ನು ಬಳಸಿ ನಂಬಿಕೆ ಮೂಡಿಸಿದ ವಂಚಕರು, RARCLLPRO ಎಂಬ ಮೊಬೈಲ್ ಆ್ಯಪ್…

Read More