Subscribe to Updates
Get the latest creative news from FooBar about art, design and business.
Author: kannadanewsnow05
ಜಾರ್ಖಂಡ್ : ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು ಸೇರಿದಂತೆ ಒಟ್ಟು 26 ಅಮಾಯಕ ಪ್ರವಾಸಿಗರು ಬಲಿಯಾಗಿದ್ದಾರೆ. ಈ ಒಂದು ದಾಳಿಯ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಹಲ್ಗಾಮ್ ದಾಳಿಯ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮೊದಲೇ ತಿಳಿದಿತ್ತು ಎಂದು ಗಂಭೀರವಾದ ಆರೋಪ ಮಾಡಿದ್ದಾರೆ. ಜಾರ್ಖಂಡ್ ನಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಉಗ್ರರ ದಾಳಿಯ ಬಗ್ಗೆ ಮೋದಿಗೆ ಮೊದಲೇ ಮಾಹಿತಿ ಇತ್ತು. ಮೋದಿ ಪ್ರವಾಸದ ವೇಳೆ ಉಗ್ರರ ದಾಳಿಯ ಬಗ್ಗೆ ಎಚ್ಚರಿಕೆ ಕೊಡಲಾಗಿತ್ತು. ಮೂರು ದಿನದ ಮೊದಲೇ ಗುಪ್ತಚರ ಇಲಾಖೆಗೆ ಮಾಹಿತಿ ಇತ್ತು. ಏಪ್ರಿಲ್ 19 ರಂದು ಮೋದಿ ಪ್ರವಾಸ ರದ್ದು ಮಾಡಿದ್ದರು ಬಳಿಕ 22ರಂದು ಪಹಲ್ಗಾಮ್ ನಲ್ಲಿ ಉಗ್ರರಿಂದ ದಾಳಿ ನಡೆದಿದೆ. ಪಹಲ್ಗಾಮ್ ಗುಂಡಿನ ದಾಳಿಯಲ್ಲಿ 26 ಅಮಾಯಕ ರನ್ನು ಉಗ್ರರು ಕೊಂದರು. ದಾಳಿಯ ಬಗ್ಗೆ ಮೋದಿಗೆ ಮೊದಲೇ ಗೊತ್ತಿದ್ದರೂ ಭದ್ರತೆ ಯಾಕೆ ಹೆಚ್ಚಿಸಿಲ್ಲ? ಗುಪ್ತಚರ ಇಲಾಖೆಯ ವೈಫಲ್ಯದಿಂದ ಈ ಒಂದು ದಾಳಿ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿ, ಬಾಯಿಗೆ ಬಂದಂತೆ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಕೇಂದ್ರ ಕಾರಾಗೃಹ ವೀಕ್ಷಣೆಗಾರನನ್ನು ಅಮನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೇಂದ್ರ ಕಾರಾಗೃಹ ವೀಕ್ಷಣೆಗಾರ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ. ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ ಬಗ್ಗೆ ಏ.28 ರಂದು ಎಚ್.ಎನ್.ಮಧು ಕುಮಾರ್ ವಿಡಿಯೊ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.ಆ ವಿಡಿಯೊ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ತಕ್ಷಣ ಅವರನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖಾ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ರಮೇಶ್ ತಿಳಿಸಿದರು. ಅಲ್ಲದೆ ನಿನ್ನೆ ತಾನೆ ಉಡುಪಿಯಲ್ಲಿ ಹೋಂ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತ ಸಮಾಜಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯನನ್ನು ಕೊಂದರೆ ಮಾತ್ರ ಹಿಂದೂಗಳಿಗೆ ನೆಮ್ಮದಿ ಎಂದು ಪೋಸ್ಟ್ ಒಂದಕ್ಕೆ ಕಮೆಂಟ ಹಾಕಿದ್ದ. ಈ ಒಂದು ಕಮೆಂಟ್ ಆಧರಿಸಿ ಕಾರ್ಕಳ ಪೊಲೀಸರು…
ಬೆಂಗಳೂರು : ಕಲಬುರ್ಗಿಯ ಮಹದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಸ್ಟೈಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ದಾಳಿ ವೇಳೆ 81.21 ಕೋಟಿ ರೂ. ದುರುಪಯೋಗಪಡಿಸಿಕೊಂಡಿದ್ದು ಸಾಬೀತಾಗಿದೆ. ಹೌದು ಈ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಕಲಬುರಗಿಯ 7 ಕಡೆ ದಾಳಿ ನಡೆಸಿದ್ದರು. ಹೆಚ್ಕೆಇ ಮಾಜಿ ಅಧ್ಯಕ್ಷ ಭೀಮಾಶಂಕರ್ ಬಿಲ್ಗುಂಡಿ, ಎಮ್ಆರ್ಎಮ್ಸಿ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಎಸ್ ಎಂ ಪಟೇಲ್, ಲೆಕ್ಕಪರಿಶೋಧಕ ಸುಭಾಷ್ ಚಂದ್ರ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದರು. ಇದೀಗ ಕಲಬುರ್ಗಿಯ HKE ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗು ಕಾಂಗ್ರೆಸ್ ಮುಖಂಡ ಭೀಮಾಶಂಕರ ಬಿಲಗುಂದಿ, ಎಸ್ ಎಂ ಪಾಟೀಲ್, ಸುಭಾಷ್ ಜಗನ್ನಾಥ್ ಅವರು 282 ಪಿಜಿ ವಿದ್ಯಾರ್ಥಿಗಳ 81.21 ಕೋಟಿ ರೂ. ಹಣವನ್ನು ದುರುಪಯೋಗ ಪಡಿಸಕೊಂಡಿರುವುದು ಇಡಿ ತನಿಖೆ ವೇಳೆ ತಿಳಿದುಬಂದಿದೆ. ಕಳೆದ 2018 ರಿಂದ 2024 ರ ವರೆಗೆ ಹೈದರಾಬಾದ್ ಶಿಕ್ಷಣ ಸಂಸ್ಥೆಯ ಎರಡು ಅವಧಿಗೆ ಅಧ್ಯಕ್ಷರಾಗಿದ್ದ ಭೀಮಾಶಂಕರ್ ಬಿಲಗುಂದಿ…
ಶಿವಮೊಗ್ಗ : ಇತ್ತೀಚ್ಚಿಗೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಕ್ರಿಕೆಟ್ ಆಡುವ ವಿಚಾರವಾಗಿ ಕಿರಿಕ್ ನಡೆದು ಯುವಕನೋರ್ವನ ಕೊಲೆ ಮಾಡಲಾಗಿದ್ದು, ಮತ್ತೋರ್ವನಿಗೆ ಗಾಯಗಳಾದ ಘಟನೆ ಜಿಲ್ಲೆಯ ಭದ್ರಾವತಿಯ ಹೊಸಮನೆ ಬಡಾವಣೆಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಕೇಶವಪುರ ಬಡಾವಣೆಯ ಅರುಣ್ (23) ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆಯಲ್ಲಿ, ಸಂಜಯ್(20) ಎಂಬಾತ ಗಾಯಗೊಂಡಿದ್ದಾನೆ. ನಿನ್ನೆ ಸಂಜೆ ಕ್ರಿಕೆಟ್ ವಿಚಾರವಾಗಿ ಅರುಣ್ ಹಾಗೂ ಇತರರ ನಡುವೆ ಗಲಾಟೆ ನಡೆದಿದೆ. ರಾತ್ರಿ ಕೇಶವಪುರ ಬಡಾವಣೆಯ ನೀರಿನ ಟ್ಯಾಂಕ್ ಕೆಳಗೆ ಕುಳಿತು ಮದ್ಯ ಸೇವಿಸುತ್ತಿರುವಾಗ ಮತ್ತೆ ಯುವಕರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿದೆ. ಈ ವೇಳೆ, ಅರುಣ್ ಎಂಬಾತನಿಗೆ ಲಾಂಗ್ಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ವಿಷಯ ತಿಳಿಯುತ್ತಿದ್ದಂತೆ, ಹೊಸಮನೆ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್…
ಗದಗ : ಇತ್ತೀಚಿಗೆ ಕೋಡಿ ಮಠದ ಶ್ರೀಗಳು ರಾಜ್ಯ ರಾಜಕಾರಣದ ಬಗ್ಗೆ ಸ್ಪೋಟಕವಾದ ಭವಿಷ್ಯ ನುಡಿದಿದ್ದರು. ಮುಂದಿನ ಸಂಕ್ರಾಂತಿಯವರಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ ಇದೀಗ ನೊಣವಿನಕೆರೆ ಶ್ರೀಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಯೇ ಮಾಡುತ್ತೇವೆ ಎಂದು ಶಪಥ ಮಾಡಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸಿ, ಅವರಿಂದಲೇ ಲಕ್ಷ್ಮೀಶ್ವರ ತಾಲ್ಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ತ್ರಿಕೋಟಿ ಶಿವಲಿಂಗ ಸ್ಥಾಪಿಸುವೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯರ ಸ್ವಾಮೀಜಿ ಹೇಳಿದರು. ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸುವುದು ಶತಸಿದ್ದ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹೇಳಿದ್ದನ್ನೇ ಮತ್ತೊಮ್ಮೆ ಹೇಳಿರುವೆ. ಲಿಂ. ವೀರಗಂಗಾಧರ ಜಗದ್ಗುರು ಮೇಲೆ ಅಪಾರ ಭಕ್ತಿ ನಂಬಿಕೆ ಹೊಂದಿರುವ ಶಿವಕುಮಾರ್ ಅವರು ನನೆಗುದಿಗೆ ಬಿದ್ದಿರುವ ತ್ರಿಕೋಟಿ ಲಿಂಗ ಸ್ಥಾಪನೆಗೆ ಬೇಕಾದ ಕೋಟ್ಯಂತರ ರೂಪಾಯಿ ಅನುದಾನ ಕಲ್ಪಿಸಿದ್ದಾರೆ. ಆದಷ್ಟು ಬೇಗ ಶಿವಕುಮಾರ ಮುಖ್ಯಮಂತ್ರಿ ಆಗುವರು ಎಂದು ಅವರು ಹೇಳಿದರು. ಈ…
ಬೆಂಗಳೂರು : ಕಾರ್ಯಕ್ರಮ ಒಂದರಲ್ಲಿ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಖ್ಯಾತ ಗಾಯಕ ಸೋನು ನಿಗಮ್ ಕೊನೆಗೂ ಕನ್ನಡಿಗರ ಮುಂದೆ ಮಂಡಿಯೂರಿದ್ಧು, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕ್ಷಮಿಸು ಕರ್ನಾಟಕ ಎಂದು ಪೋಸ್ಟ್ ಹಾಕಿದ್ದಾರೆ ಕೊನೆಗೂ ಕನ್ನಡಿಗರಿಗೆ ಸೋನು ನಿಗಮ್ ಕ್ಷಮೆ ಕೇಳಿದ್ದಾರೆ. ಹೌದು ಕನ್ನಡಿಗರ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದರು ಈ ವಿಚಾರವಾಗಿ ಸೋನು ನಿಗಮ್ ಇದೀಗ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿ ಸೋನು ನಿಗಮ್ ಕೊನೆಗೂ ಕ್ಷಮೆ ಕೇಳಿದ್ದಾರೆ. ಕನ್ನಡಿಗರ ಪ್ರೀತಿಗಿಂತ ನನ್ನ ಅಹಂ ದೊಡ್ಡದಲ್ಲ ಎಂದು ಬರೆದುಕೊಂಡಿದ್ದಾರೆ. ಇದೇ ವಿಚಾರವಾಗಿ ಬೆಂಗಳೂರಲ್ಲಿ ಇಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮಹತ್ವದ ಸಭೆ ನಡೆಸಿತ್ತು. ಈ ಒಂದು ಸಭೆಯಲ್ಲಿ ಸೋನು ನಿಗಮ್ ಅವರನ್ನು ಕನ್ನಡ ಚಲನಚಿತ್ರ ರಂಗದಿಂದ ಬ್ಯಾನ್ ಮಾಡಿ ನಿರ್ಧರಿಸಲಾಗಿತ್ತು. ಕರ್ನಾಟಕದ ಯಾವುದೇ ಕಾರ್ಯಕ್ರಮಗಳಿಗೆ ಸೋನು ನಿಗಮ್ ಕನ್ನಡ ಹಾಡು ಹಾಡುವಂತಿಲ್ಲ. ಹಾಗೂ ಅವರ ಜೊತೆಗೆ ಯಾರು ಯಾವುದೇ ಚಟುವಟಿಕೆ…
ಶ್ರೀನಗರ : ಕಳೆದ ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಂ ಬಳಿ 26 ಪ್ರವಾಸಿಗರ ಮೇಲೆ ಉಗ್ರರು ಭೀಕರವಾದ ಗುಂಡಿನ ದಾಳಿ ನಡೆಸಿದ್ದರು. ಇದೀಗ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಅಲೆಮಾರಿ ಮಹಿಳೆಯ ಮೇಲೆ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಹೌದು ಅಲೆಮಾರಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಶ್ರೀನಗರದ ಹೊರವಲಯದ ನಿಶಾತ್ ಪ್ರದೇಶದಲ್ಲಿ ನಡೆದಿದೆ. ಐವರು ಮಕ್ಕಳ ತಾಯಿಯಾಗಿದ್ದ ಮಹಿಳೆ ಅಲೆಮಾರಿ ಬಕರವಾಲ್ ಸಮುದಾಯಕ್ಕೆ ಸೇರಿದ್ದು, ಆಕೆ ಮತ್ತು ಸಮುದಾಯದ ಸದಸ್ಯರು ವಾರದ ಹಿಂದೆ ತಮ್ಮ ಜಾನುವಾರುಗಳೊಂದಿಗೆ ರಿಯಾಸಿ ಜಿಲ್ಲೆಯಿಂದ ವಲಸೆ ಬಂದಿದ್ದರು. ಮಹಿಳೆ ಹತ್ತಿರದ ಪ್ರದೇಶದಲ್ಲಿ ದನಗಳನ್ನು ಮೇಯಿಸಲು ಸಂಜೆ ಐದು ಗಂಟೆಯ ಸುಮಾರಿಗೆ ತನ್ನ ಟೆಂಟ್‌ನಿಂದ ಹೊರಬಂದಿದ್ದರು. ರಾತ್ರಿಯಾದರೂ ಅವರು ಜಾನುವಾರುಗಳೊಂದಿಗೆ ಮರಳದಿದ್ದಾಗ ನಾವು ಹುಡುಕಾಟ ಆರಂಭಿಸಿದ್ದೆವು. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಅಸ್ವಸ್ಥಳಾಗಿ ಪತ್ತೆಯಾಗಿದ್ದಾಳೆ. ತಕ್ಷಣ ಆಸ್ಪತ್ರೆಗೆ ಸಾಗಿಸಿತ್ತಾದರು ಉಳಿಯಲಿಲ್ಲ ಎಂದು…
ದಕ್ಷಿಣಕನ್ನಡ : ರೌಡಿಶೀಟರ್ ಹಾಗೂ ಸುಹಾಸ್ ಶೆಟ್ಟಿ ಅತ್ತೆಯ ಬಳಿಕ ತಕ್ಷಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಬಂದ್ ಕರೆ ನೀಡಿದ್ದ ಹಿನ್ನೆಲೆ ಇದೀಗ VHP ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ FIR ದಾಖಲಾಗಿದೆ. ಹೌದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಕರೆ ನೀಡಿದ್ದ ಹಿನ್ನೆಲೆ ಇದೀಗ VHP ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ವಿರುದ್ಧ FIR ದಾಖಲಾಗಿದೆ. ದಕ್ಷಿಣಕನ್ನಡ ಜಿಲ್ಲೆ ಬಂದ್ ದಿನದಂದು ಸರ್ಕಾರಿ ಬಸ್ ಗಳಿಗೆ ಕಲ್ಲೇಸೆದು ಹಾನಿ ಮಾಡಲಾಗಿತ್ತು. ಹಾಗಾಹಿ BNS ಕಾಯ್ದೆ 353 (2) 196 (b) (1) 49 ಹಾಗೂ 324 (2) (4) (5) ರಡಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಉತ್ತರಪ್ರದೇಶ : ಒಂದು ಮದುವೆ ಎಂದರೆ ಪ್ರತಿಯೊಂದು ಅಚ್ಚುಕಟ್ಟಾಗಿ ನಡೆಯಬೇಕು. ವಧುವಿನ ಕಡೆಯವರಾಗಲಿ ಅಥವಾ ವರನ ಕಡೆಯವರಾಗಲಿ ಒಂದು ಸಣ್ಣ ತಪ್ಪು ಮಾಡಿದರೂ ಸಹ ಎಷ್ಟೋ ಮದುವೆಗಳು ಮುರಿದು ಬಿದ್ದಿರುವ ಘಟನೆ ಕೇಳಿದ್ದೇವೆ. ಈಗ ಉತ್ತರ ಪ್ರದೇಶದಲ್ಲಿ ಕೇವಲ ತಂದೂರಿ ರೊಟ್ಟಿಗಾಗಿ ಗಲಾಟೆ ನಡೆದು ಓರ್ವ ಅಪ್ರಾಪ್ತ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಕೇವಲ ತಂದೂರಿ ರೊಟ್ಟಿಗಾಗಿ ಪರಸ್ಪರ ಹೊಡೆದಾಟ ನಡೆದಾಗ ಓರ್ವ ಅಪ್ರಾಪ್ತ ಸೇರಿ ಇಬ್ಬರು ಸಾವನಪ್ಪಿದ್ದಾರೆ. ಉತ್ತರ ಪ್ರದೇಶದ ಅಮೇಥಿಯ ಒಂದು ಸಣ್ಣ ಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.ರವಿಕುಮಾರ್ ಅಲಿಯಾಸ್ ಕಲ್ಲು ಎಂಬ 18 ವರ್ಷದ ಯುವಕ ಮತ್ತು 17 ವರ್ಷದ ಆಶಿಶ್ ನಡುವೆ ತಂದೂರಿ ರೊಟ್ಟಿ ಯಾರು ಮೊದಲು ತೆಗೆದುಕೊಂಡಿದ್ದಾರೆ ಎಂಬ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿದ್ದು, ಇಬ್ಬರೂ ಪರಸ್ಪರ ಕಬ್ಬಿಣದ ರಾಡ್‍ಗಳಿಂದ ಹೊಡೆದಾಡಿಕೊಂಡಿದ್ದಾರೆ. ಇದರಿಂದ ಇಬ್ಬರಿಗೂ ತೀವ್ರ ಗಾಯಗಳಾಗಿವೆ. ಅಪ್ರಾಪ್ತ ಬಾಲಕ ಸ್ಥಳದಲ್ಲೇ ಮೃತಪಟ್ಟರೆ, ರವಿಯನ್ನು ಚಿಕಿತ್ಸೆಗಾಗಿ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.ಮೃತರ…
ಮಂಡ್ಯ : ಇಂದು ಮಂಡ್ಯ ಮೈಸೂರು ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು, ಗುಡುಗು ಮಿಂಚು, ಆಲಿಕಲ್ಲು ಸಹಿತ ವರುಣ ಅಬ್ಬರಿಸಿದ್ದಾನೆ. ಬಿಸಿಲಿನಿಂದ ಬಸವಳಿದಿದ್ದ ಮಂಡ್ಯ ಮೈಸೂರು ಜನತೆಗೆ ಇದೀಗ ವರುಣ ತಂಪೆರೆದಿದ್ದಾನೆ. ಹೌದು ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ರಾಯಸಮುದ್ರ, ಶೀಳನೆರೆ, ಹರಳಹಳ್ಳಿ ಹಾಗು ನೀತಿಮಂಗಲ ಸುತ್ತಮುತ್ತ ಆಲಿಕಲ್ಲು ಮಳೆಯಾಗಿದೆ. ಬಿಸಿಲಿನ ಜಳಕ್ಕೆ ಬಳಲಿ ಬೆಂಡಾಗಿದ್ದವರಿಗೆ ಇದೀಗ ವರುಣ ತಂಪೆರಿದಿದ್ದಾನೆ. ಮಳೆಯ ಆಗಮನದಿಂದ ರೈತರ ಮುಖದಲ್ಲಿ ಇದೀಗ ಮಂದಹಾಸ ಮೂಡಿದೆ. ಬಿರುಗಾಳಿ ಸಹಿತ ಭಾರಿ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದಿದೆ. ಮೈಸೂರು ಮತ್ತು ಅರಸಿಕೆರೆ ರಾಜ್ಯ ಹೆದ್ದಾರಿಯಲ್ಲಿ ಈ ಒಂದು ಘಟನೆ ನಡೆದಿದೆ. ಹಾದನೂರು ಗ್ರಾಮದ ಬಳಿ ಗಾತ್ರದ ಮರ ಒಂದು ಧರೆಗೆ ಉರುಳಿದೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹಾದನೂರಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ರಸ್ತೆಯಲ್ಲಿ ಬಿದ್ದಿದ್ದ ಮರವನ್ನು ಸ್ಥಳೀಯ ನಿವಾಸಿಗಳು ತೆರವುಗೊಳಿಸಿದ್ದಾರೆ.













