Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ಹೆರಿಗೆ ಆದಮೇಲೆ ತಾಯಿ ಒಬ್ಬಳು ಮಗುವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೊಲದ ಬೀಬಿಜಾನ್ ಎನ್ನುವ ಮಹಿಳೆಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಕಳೆದ ಡಿಸೆಂಬರ್ ಹತ್ತರಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿತ್ತು ಹೆರಿಗೆ ಆದ ಬಳಿಕ ತಾಯಿ ಬೀಬಿಜಾನ್ ನವಜಾತ ಹೆಣ್ಣು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದಳು, ಸರಿಯಾದ ರೀತಿ ಆರೈಕೆ ಸಿಗದೇ ನವಜಾತ ಹೆಣ್ಣು ಮಗು ಸಾವನ್ನಪ್ಪಿತ್ತು. ಗರ್ಭದಲ್ಲಿ ಮಗು ಅಡ್ಡಲಾಗಿ ಮಲಗಿದ್ದ ಹಿನ್ನೆಲೆಯಲ್ಲಿ ಇದರಿಂದ ಕುಟುಂಬಕ್ಕೆ ಕೇಡಾಗುತ್ತೆ ಎಂದು ತಾಯಿ ಮಗುವನ್ನು ಬಿಟ್ಟು ಪರಾರಿಯಾಗಿದ್ದಾಳೆ.ಸದ್ಯ ಪರಾರಿ ಆಗಿದ್ದ ತಾಯಿ ಬೀಬಿಜಾನ್ ಎನ್ನುವ ಮಹಿಳೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರು : ಸಾಮಾನ್ಯವಾಗಿ ಹುಡುಗರು ಬರ್ತಡೇ, ಮದುವೆ ಇನ್ಯಾವುದೇ ಸಮಾರಂಭಕ್ಕೆ ತಮ್ಮ ಆತ್ಮೀಯ ಗೆಳೆಯರನ್ನು ಮುಂಚಿತವಾಗಿ ಕರಿಸುತ್ತಾರೆ. ಅದೇ ರೀತಿಯಾಗಿ ಬೆಂಗಳೂರಿನಲ್ಲಿ ಬರ್ತಡೆಗೆ ಎಂದು ಸ್ನೇಹಿತ ಒಬ್ಬ ತನ್ನ ಗೆಳೆಯನಿಗೆ ಆಹ್ವಾನ ನೀಡಿದ್ದಾನೆ. ಆದರೆ ಆತ ಬರ್ತಡೇಗೆ ಎಂದು ಬಂದು ಸ್ನೇಹಿತನ ಮದುವೆಗೆ ಎಂದು ತೆಗೆದಿಟ್ಟಿದ ಚಿನ್ನಾಭರಣವನ್ನೇ ಕದ್ದಿರುವ ಘಟನೆ ಬೆಂಗಳೂರಿನ ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಚಿನ್ನಾಭರಣ ಕದ್ದ ಆರೋಪಿಯನ್ನು ಭರತ್ ಎಂದು ಗುರುತಿಸಲಾಗಿದ್ದು, ಭರತ್ , ಸ್ನೇಹಿತ ಮಣಿ ಇಬ್ಬರು ಆತ್ಮೀಯ ಸ್ನೇಹಿತರು .ಏರೋನಾಟಿಕ್ಸ್ ಇಂಜಿನಿಯರ್ ವ್ಯಾಸಂಗ ಮಾಡಿದ್ದ ಭರತ್, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿ ಕೈ ತುಂಬಾ ಸಂಬಳ ಪಡೆಯುತ್ತಿದ್ದ. ಉತ್ತರಹಳ್ಳಿಯ ಮೂಕಾಂಬಿಕ ನಗರದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಡಿಸೆಂಬರ್ 4 ರಂದು ಭರತ್ ಬರ್ತಡೇ ಇದ್ದು ಮಣಿ ಮನೆಯಲ್ಲಿ ಯೇ ಸೆಲೆಬ್ರೇಷನ್ ಮಾಡೋದಕ್ಕೆ ಪ್ಲಾನ್ ಮಾಡಿದ್ದಾರೆ. ಭರತ್ ರಾತ್ರಿ ಮಣಿಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದ. ಮಣಿಗೆ ಮದುವೆ ನಿಗದಿಯಾಗಿದ್ದು ಇದಕ್ಕಾಗಿ ಮನೆಯವರು…
ಕೋಲಾರ : ಸಾಲಗಾರರ ಕಾಟಕ್ಕೆ ಮನನೊಂದ ಮಹಿಳೆಯೊಬ್ಬರು ನಿದ್ದೆ ಮಾತ್ರೆಯನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಎಂಬಲ್ಲಿ ನಡೆದಿದೆ. ಸಾಲಗಾರರ ಕಾಟ ತಾಳಲಾಗದೆ ಕೋಮಲದೇವಿ ಎನ್ನುವ ಮಹಿಳೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪುತ್ರಿಯ ವಿದ್ಯಾಭ್ಯಾಸ ಕುಟುಂಬ ನಿರ್ವಹಣೆಗೆ ಸಾಲ ಮಾಡಿದ್ದರು. ಸಾಲ ಕೊಟ್ಟಿರುವವರು ಮನೆಯ ಬಳಿ ಗಲಾಟೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ನಿದ್ದೆ ಮಾತ್ರ ಸೇವಿಸಿ ಕೋಮಲದೇವಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಕೋಮಲ ದೇವಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿ ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಕೋರರಿಗೆ ಹಾಗೂ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಿದವರಿಗೆ ಕಾಂಗ್ರೆಸ್ ಮತ್ತು ಕೊಡುತ್ತೆ. ಆದರೆ ಮೀಸಲಾತಿಗಾಗಿ ಶಾಂತಿಯುತವಾಗಿ ಹೋರಾಟ ಮಾಡಿದ ನಮಗೆ ಲಾಠಿಚಾರ್ಜ್ ಮಾಡುತ್ತದೆ ಎಂದು ವ್ಯಂಗ್ಯವಾಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಠಾಣೆಗೆ ಬೆಂಕಿ ಹಚ್ಚಿದ ವರಿಗೆ ಇವರು ಮುತ್ತು ಕೊಡುತ್ತಾರೆ. ಡಿಜೆ ಹಳ್ಳಿ ಕೇಜಿಹಳ್ಳಿ ಗಲಭೆ ಕೋರರಿಗೆ ಇವರು ಮುತ್ತು ಕೊಡುತ್ತಾರೆ. ಕುಕ್ಕರ್ ಬಾಂಬ್ ಇಟ್ಟವರಿಗೂ ಕಾಂಗ್ರೆಸ್ನವರು ಮತ್ತು ಕೊಡುತ್ತಾರೆ. ಆದರೆ ಶಾಂತಿಯುತ ಹೋರಾಟ ಮಾಡಿದ ನಮಗೆ ಮಾತ್ರ ಲಾಠಿ ಚಾರ್ಜ್ ಮಾಡುತ್ತಾರೆ ಎಂದು ಬೆಲ್ಲದ್ ವ್ಯಂಗ್ಯವಾಡಿದರು. ಸುಳ್ಳು ಹೇಳುವುದರಲ್ಲಿ ಸಿಎಂ ಸಿದ್ದರಾಮಯ್ಯ ನಿಸ್ಸಿಮರು. ಮೀಸಲಾತಿ ಕೊಡುವುದು ಹೇಗೆ ಸಂವಿಧಾನ ವಿರೋಧವಾಗುತ್ತೆ? ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಶ್ವೇತ ಪತ್ರ ಹೊರಡಿಸಲಿ. ಲಿಂಗಾಯತರು, ಒಕ್ಕಲಿಗರು,…
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ದುರಂತ ಸಂಭವಿಸಿದ್ದು, ಅಪಾರ್ಟ್ಮೆಂಟ್ ಒಂದರ 16ನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕದ ಸಮೀಪ RMZ ಗ್ಯಾಲರಿಯ ಅಪಾರ್ಟ್ಮೆಂಟಲ್ಲಿ ನಡೆದಿದೆ. ಬೆಂಗಳೂರಿನ ಯಲಹಂಕದ RMZ ಗ್ಯಾಲರಿಯ ಅಪಾರ್ಟ್ಮೆಂಟಲ್ಲಿ ಘಟನೆ 16ನೇ ಫ್ಲೋರ್ ನಿಂದ ಹಾರಿ ರವಿಕುಮಾರ್ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರವಿಕುಮಾರ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಯಲಹಂಕ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಸಾಮಾನ್ಯವಾಗಿ ಬಸ್ ನಿಲ್ದಾಣ, ದೇವಸ್ಥಾನ ಸೇರಿದಂತೆ ಹಲವು ಜನನಿಬೀಡ ಪ್ರದೇಶಗಳಲ್ಲಿ ಭಿಕ್ಷಾಟನೆ ಮಾಡುವುದನ್ನು ನಾವು ನೋಡಿರುತ್ತೇವೆ ಆದರೆ ಇದೀಗ ಬೆಂಗಳೂರಿನ ನಮ್ಮ ಮೆಟ್ರೋದಲ್ಲೂ ಕೂಡ ವ್ಯಕ್ತಿ ಒಬ್ಬ ಭಿಕ್ಷೆ ಬೇಡುತ್ತಿರುವುದು ಕಂಡು ಬಂದಿದೆ. ಹೌದು ನಮ್ಮ ಮೆಟ್ರೋ ಟ್ರೈನ್ ನಲ್ಲಿ ವಿಶೇಷ ಚೇತನ ವ್ಯಕ್ತಿ ಒಬ್ಬ ಸಹ ಪ್ರಯಾಣಿಕರ ಬಳಿ ಭಿಕ್ಷೆ ಬೇಡಿರುವ ಘಟನೆ ನಡೆದಿದೆ. ಚೆಲ್ಲಕಟ್ಟದಿಂದ ವೈಟ್ಫೀಲ್ಡ್ ವರೆಗೆ ಮೆಟ್ರೋ ಟ್ರೈನ್ ಸಂಚರಿಸುತ್ತಿತ್ತು ಈ ವೇಳೆ ಪ್ರಯಾಣಿಕರ ಸೋಗಿನಲ್ಲಿ ಬಂದಂತಹ ವಿಶೇಷ ಚೇತನ ವ್ಯಕ್ತಿ ಒಬ್ಬ ಸಹಪ್ರಾಣಿಕರ ಬಳಿ ಭಿಕ್ಷೆ ಬೇಡಿದ್ದಾನೆ. ತನ್ನ ದೈಹಿಕ ಊನವನ್ನು ತೋರಿಸಿ ಭಿಕ್ಷಾಟನೆ ಮಾಡಿದ್ದನ್ನು ಕಂಡು ಪ್ರಯಾಣಿಕರು ದಂಗಾಗಿದ್ದಾರೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಪಡೆದು ಭಿಕ್ಷೆ ಬೇಡಿದ್ದು ಹಲವರ ಅಚ್ಚರಿಗೆ ಕಾರಣವಾಗಿದೆ. ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಈಗ ನಮ್ಮ ಮೆಟ್ರೋದಲ್ಲೂ ಭಿಕ್ಷಾಟನೆ ಶುರುವಾಯಿತಾ ಎಂದು ಪ್ರಶ್ನಿಸಿದ್ದಾರೆ.
ಬೀದರ್ : ವೇಗವಾಗಿ ಚಲಿಸುತ್ತಿದ್ದಂತಹ ಕಾರು ಒಂದು ನಿಯಂತ್ರಣ ಕಳೆದುಕೊಂಡು ಪಲ್ಟಿ ಆಗಿದ್ದ ಪರಿಣಾಮ ಕಾರಿನಲ್ಲಿ ಚಲಿಸುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಧರಿಹನುಮಾನ್ ಕ್ರಾಸ್ ಬಳಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮಶಿವಕುಮಾರ್ ಪೊಲೀಸ್ ಪಾಟೀಲ್ (47) ಎನ್ನುವ ವ್ಯಕ್ತಿ ಸ್ಥಳದಲ್ಲಿ ಸಾವನಪ್ಪಿದ್ದಾರೆ.ಮೃತರು ಔರಾದ್ ತಾಲೂಕಿನ ಧೂಪತ್ ಮಹಾಗಾಂವ್ ಗ್ರಾಮದವರಾದ ವ್ಯಕ್ತಿ ಸಂತಪೂರ್ ಕಡೆಯಿಂದ ಸ್ವ ಗ್ರಾಮಕ್ಕೆ ತೆರಳುತ್ತಿದ್ದಾಗ ಕಾರು ಪಲ್ಟಿಯಾಗಿದೆ.ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ : ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟಿದ್ದಕ್ಕೆ ಅಪಘಾತ ನಡೆದಿದ್ದು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಂದೆಗೆ 27 ಸಾವಿರ ರೂಪಾಯಿ ದಂಡ ವಿಧಿಸಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಜೆಎಂಎಫ್ಸಿ ಕೋರ್ಟ್ ಆದೇಶ ಹೊರಡಿಸಿದೆ. ಹೌದು ಮಗನಿಗೆ ಬೈಕ್ ಕೊಟ್ಟಿದ್ದಕ್ಕೆ ಇದೀಗ ತಂದೆಗೆ ಕೋರ್ಟ್ 27,000 ದಂಡ ಹಾಕಿದೆ. ತಂದೆಯೊಬ್ಬರು ತಮ್ಮ ಮಗನಿಗೆ ಬೈಕ್ ನೀಡಿದ್ದರು. ಈ ವೇಳೆ ಅಪಘಾತ ಒಂದು ನಡೆದಿತ್ತು. ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಬೈಕ್ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪ್ರಾಪ್ತ ಮಗನಿಗೆ ಬೈಕ್ ಅಪಘಾತ ನೀಡಿದ್ದರಿಂದ ಕೇಸ್ ದಾಖಲಾಗಿತ್ತು. ರಾಣೆಬೆನ್ನೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಗದಗ : ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದೆ. ಅವುಗಳಲ್ಲಿ ಪ್ರಮುಖವಾದಂತದ್ದು ಗೃಹಲಕ್ಷ್ಮಿ ಯೋಜನೆ, ಈ ಒಂದು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಸರ್ಕಾರವು ಮನೆಯ ಯಜಮಾನಿಗೆ 2,000 ಹಣ ಅವರ ಖಾತೆಗೆ ಹಾಕುತ್ತಿದೆ. ಈ ಒಂದು ಹಣದಿಂದ ಈಗಾಗಲೇ ಮಹಿಳೆಯರು ಹಲವಾರು ರೀತಿ ಪ್ರಯೋಜನ ಪಡೆದುಕೊಂಡಿದ್ದು, ಇದೀಗ ಗದಗದಲ್ಲಿ ಬೋರ್ವೆಲ್ ಕೊರೆಸಿ ಅತ್ತೆ, ಸೊಸೆ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೌದು ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಕೊಳವೆ ಬಾವಿ ಕೊರೆಸಿದ್ದಾರೆ. ಬೋರ್ವೆಲ್ನಲ್ಲಿ ಅವರಿಗೆ ನೀರು ಕೂಡ ದೊರೆತಿದೆ. ಇದೀಗ ಈ ಬಗ್ಗೆ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಹರ್ಷ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರ ನೀಡುವ ಗ್ರಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅತ್ತೆ ಮತ್ತು ಸೊಸೆ ಇಬ್ಬರು ಈ ಒಂದು ಯೋಜನೆಯ ಹಣವನ್ನು…
ಬೆಂಗಳೂರು : ಪತ್ನಿಯ ಕಿರುಕುಳಕ್ಕೆ ಬೇಸತ್ತು ಇತ್ತೀಚಿಗೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಅವರು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ, ಅದು ಸುಭಾಷ್ ಪತ್ನಿಗೆ ಬಂಧನದ ಭೇಟಿ ಯದುರಾದ ಹಿನ್ನೆಲೆಯಲ್ಲಿ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಅತುಲ್ ಪತ್ನಿ, ಹಾಗೂ ಕುಟುಂಬಸ್ಥರಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ತಲೆಮರಿಸಿಕೊಂಡ ಅತುಲ್ ಪತ್ನಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ. ಅಲಹಾಬಾದ್ ಹೈಕೋರ್ಟಿಗೆ ಅತುಲ್ ಪತ್ನಿ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದರೆ. ಪತ್ನಿ ನಿಕಿತಾ ಸೇರಿದಂತೆ ಇತರೆ ಆರೋಪಿಗಳು ಕೂಡ ನಿರೀಕ್ಷಣಾ ಜಾಮಿನಿಗೆ ಅರ್ಜಿ ಸಲ್ಲಿಸಿದ್ದಾರೆ. ಉತ್ತರ ಪ್ರದೇಶ ಬಿಟ್ಟು ಬೇರೆ ಕಡೆಗೆ ಆರೋಪಿಗಳು ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಾಸ ಸ್ಥಳ ಬದಲಾವಣೆ ಮಾಡಿಕೊಂಡು ಆರೋಪಿಗಳು ಓಡಾಡುತ್ತಿರುವ ಬಗ್ಗೆ ಪೊಲೀಸರಿಗೆ…














