Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಇಂದು ಕಟ್ಟಡದ ಮಹಡಿಯಲ್ಲಿರುವ ಕೆಫೆ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಖರ್ಗೆ ಸರ್ಕಲ್ ಬಳಿ ಇರುವ ಕಟ್ಟಡ ಒಂದರಲ್ಲೇ ಮೂರನೆ ಮಹಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾದಂತಹ ಪ್ರಾಣಾಪಾಯ ಸಂಭವಿಸಿಲ್ಲ. ಖರ್ಗೆ ಸರ್ಕಲ್ ಬಳಿ ಇರುವ ಕಟ್ಟಡ ಒಂದರಲ್ಲಿ ಕಾಫಿಜಾ ಕೆಫೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಟ್ಟಡವನ್ನು ಆವರಿಸಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಂಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಆಹಾರ ಸುರಕ್ಷತೆ ಗುಣಮಟ್ಟ & ಔಷಧ ನಿಯಂತ್ರಣ ಈ ಎರಡು ಇಲಾಖೆಗಳನ್ನು ವಿಲೀನಗೊಳಿಸಿ ಹೊಸ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಿದೆ. ರಾಜ್ಯ ಸರ್ಕಾರವು ಆಹಾರ ಸರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೆ ಮುಖ್ಯಸ್ಥರಾಗಿ ನೇಮಕವಾಗಿದ್ದು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಮುಖ್ಯಸ್ಥರಾಗಿ ನೇಮಕರಾಗಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತರ ನಿಯಂತ್ರಣದಲ್ಲಿಯೇ ಕೆಲಸ ನಿರ್ವಹಿಸಲಿದ್ದು, ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಣೆಗೆ ರಾಜ್ಯ ಸರ್ಕಾರ ಸೂಚಿಸಿದೆ.ಈ ಮೂಲಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇವರ ಆಡಳಿತಾತ್ಮಕ ನಿಯಂತ್ರಣದಡಿಯಲ್ಲಿ ಎರಡು ಇಲಾಖೆಗಳ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂಬ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಔಷಧ ನಿಯಂತ್ರಣ ಇಲಾಖೆ…
ರಾಯಚೂರು : ಇತ್ತೀಚಿಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ವಯಸ್ಕರು ಎನ್ನದೆ ಎಲ್ಲರ ಮೇಲು ನಾಯಿಗಳು ದಾಳಿ ಮಾಡುತ್ತಿವೆ. ಇದೀಗ ರಾಯಚೂರಿನಲ್ಲಿ ಬೀದಿ ನಾಯಿಗಳು ದಾಳಿ ಮಾಡಿದಾಗ ಅವುಗಳಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿ ಯುವತಿ ಒಬ್ಬಳು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ನಡೆದಿತ್ತು. ಇದೀಗ ಚಿಕಿತ್ಸೆಫಲ್ಲಿಸದೆ ಯುವತಿ ಸಾವನಪ್ಪಿದ್ದಾಳೆ. ಹೌದು ರಾಯಚೂರಿನ ಬಡ್ಡಿಪೇಟೆಯಲ್ಲಿ ಈ ಒಂದು ಘಟನೆ ನಡೆದಿತ್ತು. ಕೋಮಾ ಸ್ಥಿತಿ ತಲುಪಿದ್ದ ಯುವತಿಯನ್ನು ಮಹಾದೇವಿ (20) ಎಂದು ತಿಳಿದುಬಂದಿದೆ. ಡಿಸೆಂಬರ್ 4 ರಂದು ಈ ಘಟನೆ ನಡೆದಿತ್ತು.ದೇವಾಲಯಕ್ಕೆ ಹೋಗುವ ವೇಳೆ ನಾಯಿಗಳು ದಾಳಿ ಮಾಡಿವೆ. ನಾಯಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿದೆ. ಕೆಳಗೆ ಬಿದ್ದ ಯುವತಿಯನ್ನು ನಾಯಿಗಳು ಎಳೆದಾಡಿವೆ. ಯುವತಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು. ಯುವತಿಯ ತಲೆಗೆ ಬಲವಾಗಿ ಪೆಟ್ಟು ಬಿದ್ದಿರುವುದರಿಂದ ರಕ್ತ ಹೆಪ್ಪುಗಟ್ಟಿದ್ದು, ಪ್ರಜ್ಞೆ ಕಳೆದುಕೊಂಡಿರುವ ಯುವತಿ ಕೋಮಾ ಸ್ಥಿತಿ ತಲುಪಿದ್ದರು. ರಿಮ್ಸ್…
ಹೈದ್ರಾಬಾದ್ : ಹೈದರಾಬಾದ್ ನಲ್ಲಿ ಪುಷ್ಪ 2 ಸಿನಿಮಾ ವೀಕ್ಷಣೆ ವೇಳೆ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಜೈಲಿಂದ ಬಿಡುಗಡೆಯಾಗಿ ಬಂದಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ರೇವತಿ ಕುಟುಂಬಕ್ಕೆ ಕ್ಷಮೆ ಕೇಳುತ್ತೇನೆ ಎಂದು ಪ್ರತಿಕ್ರಿಯಿಸಿದರು. ಹೈದ್ರಾಬಾದ್ ನ ಜುಬ್ಲಿಹಿಲ್ಸ್ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಲ್ತುಳಿತ ಪ್ರಕರಣಕ್ಕೆ ನಾನು ಕ್ಷಮೆ ಕೇಳುತ್ತೇನೆ. ನಾನು ಪ್ರಕರಣದ ಬಗ್ಗೆ ಹೆಚ್ಚಿಗೆ ಏನು ಮಾತನಾಡಲ್ಲ. ಈ ಒಂದು ಘಟನೆಯಿಂದ ನನಗೆ ತುಂಬಾ ನೋವಾಗಿದೆ. ಹಾಗಾಗಿ ರೇವತಿ ಕುಟುಂಬಕ್ಕೆ ನಾನು ಕ್ಷಮೆ ಕೇಳುತ್ತೇನೆ. 20 ವರ್ಷಗಳಿಂದ ನಾನು ಆ ಥಿಯೇಟರಿಗೆ ಹೋಗುತ್ತಿದ್ದೇನೆ. ಅಲ್ಲದೆ 30ಕ್ಕೂ ಹೆಚ್ಚು ಬಾರಿ ಅಲ್ಲಿಗೆ ನಾನು ಭೇಟಿ ಮಾಡಿದ್ದೇನೆ. ಆದರೆ ಇಂತಹ ಘಟನೆ ಯಾವತ್ತೂ ನಡೆದಿರಲಿಲ್ಲ. ನಾನು ಚಿತ್ರ ನೋಡಲು ಬಂದಾಗ ಆಕಸ್ಮಿಕವಾಗಿ ಈ ಘಟನೆ ನಡೆದಿದೆ ರೇವತಿ ಕುಟುಂಬಕ್ಕೆ ನಾನು…
ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ನಾಳೆ ಹುಣ್ಣಿಮೆಯಂದು ಮತ್ತು ಮುಂಬರುವ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಹೌದು ವಾಯುವ್ಯ ಕರ್ನಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಇಂದ ಹುಬ್ಬಳ್ಳಿಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಕಳೆದ ಶೀಗೆ ಹುಣ್ಣಿಮೆ, ದೀಪಾವಳಿ ಅಮವಾಸ್ಯೆ ಹಾಗೂ ನಂತರದ ಹುಣ್ಣಿಮೆಗಳ ಸಮಯದಲ್ಲಿ ಸವದತ್ತಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಈ ನೇರ ಬಸ್ ಗಳಿಂದಾಗಿ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದ್ದು, ಹಾಗಾಗಿ ಈಗಲು ಬಸ್ ವ್ಯವಸ್ಥೆ ಮುಂದುವರೆಸಲಾಗುತ್ತಿದೆ. ಭಕ್ತರು, ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹುಣ್ಣಿಮೆಯ ದಿನ ಡಿಸೆಂಬರ್ 15ರಂದು ಭಾನುವಾರ ಹಾಗೂ ಮುಂದಿನ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರಗಳಂದು ಬಸ್ಗಳು ಸಂಚರಿಸಲಿವೆ. ಅಂದರೆ, ಡಿಸೆಂಬರ್ 17, 20, 24 ಹಾಗೂ 27ರಂದು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ನೇರ ಬಸ್ ವ್ಯವಸ್ಥೆ…
ಕಲಬುರ್ಗಿ : ಕೋವಿಡ್ ಹಗರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ. ಕೋವಿಡ್ ಕಾಲದಲ್ಲಿ ಹಗರಣ ನಡೆದಿತ್ತು. ಆ ಪ್ರಕರಣ ಸಂಬಂಧ ಈಗ ಎಫ್ಐಆರ್ ದಾಖಲಾಗಿದೆ. ಎಸ್ಐಟಿ ರಚನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಿರ್ಧರಿಸುತ್ತಾರೆ. ಈ ಒಂದು ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಇದ್ದರೂ ಕೂಡ ನಾವು ಯಾರನ್ನು ಬಿಡುವುದಿಲ್ಲ.ತನಿಖೆ ಮಾಡಲು ಪೊಲೀಸರಿಗೆ ಸಂಪೂರ್ಣವಾಗಿ ಸ್ವಾತಂತ್ರ್ಯ ನೀಡಿದ್ದೇವೆ ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದರು. ತನಿಖೆ ಮಾಡುತ್ತಿದ್ದ ವೇಳೆ ನಾನು ಹೆಸರು ಹೇಳಿದರೆ ತಪ್ಪಾಗುತ್ತದೆ. ಅವ್ಯವಹಾರ ಆಗಿದೆ ಎಂದು ನ್ಯಾ. ಕುನ್ಹಾ ವರದಿಯಲ್ಲಿ ಉಲ್ಲೇಖ ಆಗಿದೆ ಅದರ ಆಧಾರದ ಮೇಲೆ ಎಫ್ಐಆರ್ ದಾಖಲಾಗುತ್ತದೆ. ಇದಕ್ಕೆ ಬಿಜೆಪಿಯವರು ಯಾಕೆ ಭಯ ಪಡಬೇಕು? ಯಾರನ್ನು ಭಯ ಬೀಳಿಸುವುದಕ್ಕೆ ನಾವು ತನಿಖೆ ಮಾಡಿಸುತ್ತಿಲ್ಲ. ಕೋವಿಡ್ ವೇಳೆ ಆಕ್ಸಿಜನ್ ಇಲ್ಲದೆ ಜನ ಬೀದಿಯಲ್ಲಿ ಹೆಣವಾಗಿದ್ದಾರೆ ಯಾರ ವಿರುದ್ಧವೂ ಸೇಡಿನ ರಾಜಕಾರಣ ಮಾಡುತ್ತಿಲ್ಲ. ರಾಜ್ಯದ ಜನರಿಗೆ ಮಾತು ಕೊಟ್ಟಂತೆ ನಾವು ತನಿಖೆ ಮಾಡಿಸುತ್ತೇವೆ ಎಂದು ಹೇಳಿಕೆ…
ಹೈದ್ರಾಬಾದ್ : ಹೈದರಾಬಾದ್ ಪುಷ್ಪ 2 ಸಿನಿಮಾ ವೀಕ್ಷಣೆಯ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಇಂದು ಜೈಲಿನಿಂದ ಬಿಡುಗಡೆಯಾಗಿ ತಮ್ಮ ನಿವಾಸಕ್ಕೆ ತೆರಳಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಮೃತ ರೇವತಿ ಅವರ ಕುಟುಂಬಕ್ಕೆ ನನ್ನಿಂದ ಆಗುವ ಸಹಾಯ ಮಾಡುತ್ತೇನೆ.ಈ ಒಂದು ಘಟನೆ ನಡೆಯಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು. ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ 2 ಸಿನಿಮಾ ವೀಕ್ಷಣೆ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ ರೇವತಿ ಎನ್ನುವ ಮಹಿಳೆ ಸಾವನ್ನಪ್ಪಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಯ ಬಳಿಕ ಅರೆಸ್ಟ್ ಮಾಡಿದ್ದರು. ಬಳಿಕ ನಾಂಪಲ್ಲಿ ಕೋರ್ಟಿಗೆ ಹಾಜರು ಪಡಿಸಿದ ನಂತರ ವಿಚಾರಣೆಯ ನಂತರ ಕೋರ್ಟ್ 14 ದಿನ ನ್ಯಾಯಾಂಗ ಬಂದನ ವಿಧಿಸಿ ಆದೇಶ ಹೊರಡಿಸಿತ್ತು. ಈ ವೇಳೆ ನಟ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟಿಗೆ ನನ್ನ ವಿರುದ್ಧ ದಾಖಲಾದ ಎಫ್ ಐ ಆರ್…
BREAKING : ಬಾಣಂತಿಯರ ಸಾವಿಗೆ ‘IV’ ದ್ರಾವಣ ಅಷ್ಟೆ ಅಲ್ಲ, ಇದು ಕೂಡ ಕಾರಣ : ಮಹಿಳಾ ಆಯೋಗದ ಅಧ್ಯಕ್ಷೆ ಸ್ಫೋಟಕ ಹೇಳಿಕೆ
ಬಳ್ಳಾರಿ : ಕಳೆದ ತಿಂಗಳಲ್ಲಿ ಬಳ್ಳಾರಿಯಲಿ ಬಾಣಂತಿಯರ ಸೌರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಪರಿಶೀಲನಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಾಣಂತಿಯರ ಸಾವಿಗೆ ಐವಿ ದ್ರಾವಣ ಅಷ್ಟೇ ಅಲ್ಲ ಶಸ್ತ್ರಚಿಕಿತ್ಸೆಯ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಅನುಮಾನ ವ್ಯಕ್ತಪಡಿಸಿದ್ದಾರೆ. ನಿನ್ನೆ ಜಿಲ್ಲಾಸ್ಪತ್ರೆಗೆ ನಾಗಲಕ್ಷ್ಮಿ ಚೌಧರಿ ಅವರು ಭೇಟಿ ನೀಡಿದರು. ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್, ಶಸ್ತ್ರಚಿಕಿತ್ಸಾ ಕೊಠಡಿ, ಆಸ್ಪತ್ರೆಗೆ ಸರಬರಾಜು ಆಗುವ ನೀರಿನ ಟ್ಯಾಂಕ್‌ಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ. ಹೆರಿಗೆಯಾದ ಶಸ್ತ್ರಚಿಕಿತ್ಸಾ ಕೊಠಡಿ ಕೂಡ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು. ಶಸ್ತ್ರಚಿಕಿತ್ಸೆಯ ಬಳಿಕ ಬ್ಯಾಕ್ಟೀರಿಯಾದಿಂದ ಇನ್ಫೆಕ್ಷನ್ ಸಾಧ್ಯತೆ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಶಸ್ತ್ರಚಿಕಿತ್ಸೆ ಕೊಠಡಿ ಹಾಗೂ ಲ್ಯಾಬ್ ಗಳನ್ನು ಎಲ್ಲವನ್ನು ಪರಿಶೀಲನೆ…
ಆಯುಷ್ ಸಚಿವಾಲಯದ(Ministry of Ayush)ಅಡಿಯಲ್ಲಿ “ದೇಶ್ ಕಾ ಪ್ರಕೃತಿ ಪರೀಕ್ಷಣ್ ” ಎಂಬ ಅಭಿಯಾನವನ್ನು ರೂಪಿಸಿದ್ದು,ಇದರಿಂದ ಪ್ರತಿಯೊಬ್ಬ ವ್ಯಕ್ತಿಗೂ ಆಯುರ್ವೇದ ಆಧಾರಿತ ಜೀವನ ಶೈಲಿಯನ್ನು ರೂಢಿಸಿಕೊಳ್ಳಲು ಪ್ರೇರಣೆಯಾಗಲಿದೆ.ನಮ್ಮ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯೊಂದಿಗೆ ಮತ್ತು ಆಯುಷ್ ರಾಜ್ಯ ಸಚಿವರಾದ (Union minister of state, IC) ಶ್ರೀ ಪ್ರತಾಪ್ ರಾವ್ ಜಾಧವ್ ರವರ ಮಾರ್ಗದರ್ಶನದೊಂದಿಗೆ ಈ ರಾಷ್ಟ್ರೀಯ ಅಭಿಯಾನವನ್ನು ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗ ( NCISM) ನಿರ್ವಹಿಸುತ್ತಿದೆ. ಪ್ರಕೃತಿ ಎಂದರೇನು? ಪ್ರಕೃತಿ: ಶರೀರ ಸ್ವಭಾವಂ || (ಅಷ್ಟಾಂಗ ಹೃದಯ) ಪ್ರಕೃತಿ ಮಿತಿ ಸ್ವಭಾವಂ || (ಚರಕ). ಪ್ರಕೃತಿ ಎಂದರೆ ಶರೀರದ ಸ್ವಭಾವ.ಹೀಗಾಗಿ ಮನುಷ್ಯನ ಸ್ವಭಾವ,ಸ್ವರೂಪ ಮತ್ತು ಗುಣಗಳು ಒಬ್ಬರಿಗಿಂತ ಒಬ್ಬರಲ್ಲಿ ವಿಭಿನ್ನವಾಗಿರುತ್ತದೆ.ಆಯುರ್ವೇದದಲ್ಲಿ ವಾತ, ಪಿತ್ತ ಮತ್ತು ಕಫ ಎಂಬ ತ್ರಿದೋಷಗಳನ್ನು ತಿಳಿಸಿದ್ದು ಹುಟ್ಟಿನಿಂದ ಮರಣದವರೆಗೆ ಪ್ರಾಕೃತಾವಸ್ಥೆಯಲ್ಲಿನ ಮತ್ತು ಬದಲಾಯಿಸಲಾಗದ ದೋಷಗಳ (unchangeable dosic dominance)ಪ್ರಾಧಾನ್ಯತೆಯೇ ಪ್ರಕೃತಿ. ಪ್ರಕೃತಿಯ ರಚನೆ ಮತ್ತು ನಿರ್ಣಯ. ಪ್ರಕೃತಿಯು ಗರ್ಭಧಾರಣೆಯ…
ಬೆಂಗಳೂರು : ಕೋವಿಡ್-19 ಸಂದರ್ಭದಲ್ಲಿ ಮಾಸ್ಕ್, ಪಿಪಿಇ ಕಿಟ್ ಹಾಗೂ ಇತರೆ ಸಲಕರಣೆಗಳ ಖರೀದಿಯಲ್ಲಿ ಸುಮಾರು 167 ಕೋಟಿ ರು. ಅವ್ಯವಹಾರ ನಡೆದಿರುವ ಆರೋಪ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದು ಈ ಅಕ್ರಮ ಸಂಬಂಧ ದಾಖಲಾದ ಮೊದಲ ಎಫ್‌ಐಆರ್ ಆಗಿದೆ ಎನ್ನಲಾಗಿದೆ. ಹೌದು ಸದ್ಯ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ವಕ್ಫ್, ಪಂಚಮಸಾಲಿ ಮೀಸಲಾತಿ ವಿಚಾರಗಳು ಆಡಳಿತ-ವಿರೋಧ ಪಕ್ಷಗಳ ನಡುವೆ ಗದ್ದಲ ಗಲಾಟೆ ಕೋಲಾಹಲದ ನಡುವೆ ಕೋವಿಡ್ ಸಂದರ್ಭದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅವ್ಯವಹಾರ ಇದೀಗ ಮುನ್ನೆಲೆಗೆ ಬಂದಿದೆ. ಈ ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಮೊದಲ fir ದಾಖಲಾಗಿದೆ. ಕೋವಿಡ್-19 ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಮುಖಾಂತರ ಕೋವಿಡ್ ನಿವಾರಣೆಗಾಗಿ ಅತ್ಯವಶ್ಯವಿದ್ದ ಎನ್ 95 ಮಾಸ್ಕ್, ಪಿಪಿಇ ಕಿಟ್ ಹಾಗೂ ಇತರೆ ಸಾಮಗ್ರಿಗಳ ಖರೀದಿ ವೇಳೆ ಸರ್ಕಾರ ನೇಮಿಸಿದ್ದ ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು ಹಾಗೂ ಇತರರು ಸೇರಿ ಕೊಂಡು ಕೆಟಿಟಿಪಿ ಕಾನೂನು…













