Author: kannadanewsnow05

ಹುಬ್ಬಳ್ಳಿ : ಮಂಗಳೂರಿನಲ್ಲಿ ಸುಹಾಸ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಗೃಹ ಸಚಿವ ಪರಮೇಶ್ವರ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಕರಾವಳಿ ಕೋಮು ವಿರೋಧಿ ಕಾರ್ಯಪಡೆ ತೀರ್ಮಾನಿಸಲಾಗಿದ್ದು, ಸಮಯ ನೋಡಿಕೊಂಡು ಕೋಮು ವಿರೋಧಿ ಕಾರ್ಯಪಡೆ ರಚನೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳೂರಲ್ಲಿ ಕೋಮು ಹತ್ತಿಕ್ಕಲು ಕ್ರಮ ಕೈಗೊಳ್ಳುತ್ತೇವೆ. ನಾನು ಯಾರ ಬಗ್ಗೆಯೂ ಆರೋಪ ಮಾಡುವುದಿಲ್ಲ. ಕಾನೂನು ಮೀರಿ ಕೆಲಸ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ. ಕೆಲವರಿಗೆ ಬೆದರಿಕೆ ವಿಚಾರದ ಬಗ್ಗೆ ಪರಿಶೀಲನೆ ಮಾಡುತ್ತೇವೆ. ವಿಶೇಷ ಪಡೆಯ ರಚನೆ ಕುರಿತು ಇನ್ನು ನಿರ್ಧಾರ ಮಾಡಿಲ್ಲ. ಟೈಮ್ ನೋಡಿಕೊಂಡು ಕೋಮು ವಿರೋಧಿ ಕಾರ್ಯಪಡೆ ರಚನೆ ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಬೇಕು ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಗೃಹ ಸಚಿವ…

Read More

ಬೆಂಗಳೂರು : ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗಿದ್ದು, ಗುಡುಗು ಸಿಡಿಲಿಗೆ ಕೆಲವರು ಬಲಿಯಾಗಿದ್ದಾರೆ. ಇದೀಗ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮುಂದಿನ 1 ವಾರ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 7ರಿಂದ 10 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಬೀದರ್, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಗುಡುಗು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿಯೂ ಮಳೆಯಾಗಲಿದೆ…

Read More

ಚಾಮರಾಜನಗರ : ಅಕ್ರಮವಾಗಿ ತಮಿಳುನಾಡಿಗೆ ಪಡಿತರ ಅಕ್ಕಿ ಸಾಗಾಟ ಹಿನ್ನೆಲೆಯಲ್ಲಿ ಒಂದು ಲೋಡ್ ಪಡಿತರ ಅಕ್ಕಿಯನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪೊಲೀಸ್ ಠಾಣೆಯ ಮುಂದೆ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರು ಹಾಗು ಆಹಾರ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ನಡೆಸಿದ್ದು ಶಿಗ್ಗಾವಿಯಿಂದ ತಮಿಳುನಾಡಿಗೆ ಲಾರಿ ತೆರಳುತ್ತಿತ್ತು. ಲಾರಿಯಲ್ಲಿ ಸಾಗಿಸುತ್ತಿದ್ದ 500 ಚೀಲ ಪಡಿತರ ಅಕ್ಕಿಯನ್ನು ಹಾಗೂ ಡ್ರೈವರ್ ನನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ.

Read More

ಬೆಂಗಳೂರು : ರೌಡಿಶೀಟರ್ ಹಾಗೂ ಸುಹಾಸ ಶೆಟ್ಟಿ ಹತ್ಯೆಯ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಆದರೆ ಸಭೆಯ ನಂತರ ಜಿ ಪರಮೇಶ್ವರ್ ಅವರು ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿರಲಿಲ್ಲ. ಈ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು ಹತ್ಯೆಯಾದ ಸುಹಾಸ್ ಶೆಟ್ಟಿ ಮೇಲೆ 5 ಕೇಸ್​ಗಳಿವೆ, ಹಾಗಾಗಿ ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿ. ಪರಮೇಶ್ವರ್, ಮಂಗಳೂರಿನ ಬಜಪೆ ಬಳಿ ಕೊಲೆಯಾದ ಸುಹಾಸ್ ಶೆಟ್ಟಿ ಮೇಲೆ ಐದು ಕೇಸ್​ಗಳಿವೆ. ಹಾಗಾಗಿ ನಾವು ಯಾರೂ ಅವರ ಮನೆಗೆ ಭೇಟಿ ಕೊಟ್ಟಿಲ್ಲ.ಇದೊಂದು ಕೊಲೆ ಪ್ರಕರಣ ಆಗಿರುವುದರಿಂದ, ಸುಹಾಸ್ ಶೆಟ್ಟಿ ಮನೆಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದರು. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡ್ತಿದೆ.…

Read More

ಬೆಳಗಾವಿ : ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಇತ್ತೀಚಿಗೆ ಕೈಯಲ್ಲಿ ಲಾಂಗ್ ಹಿಡಿದು ಮಾಡಿದ ಪ್ರಕರಣ ನಡೆದಿತ್ತು. ಬಳಿಕ ಬೆಳಗಾವಿಯಲ್ಲಿ ಕೂಡ ಇಬ್ಬರು ಪುಂಡರು ಕೈಯಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿದ್ದರು. ಇದೀಗ ಇಬ್ಬರು ಪುಂಡರನ್ನು ಯಮುಕನಮರಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯಮಕನಮರಡಿ ಠಾಣೆ ಪೋಲಿಸರು ಇಬ್ಬರು ಕಿಡಿಗೇಡಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ ಇಬ್ಬರು ಕಿಡಿಗೇಡಿಗಳು ಕೈಯಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿ ಪೋಸ್ಟ್ ಮಾಡಿದ್ದರು. ಬಳಿಕ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದರು. ಹಾಲಪ್ಪ ದ್ಯಾಮಪ್ಪ ಕಟಾವಳಿ (25) ನಾಗರಾಜ್ ದ್ಯಾಮಣ್ಣ (21) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಇಬ್ಬರನ್ನು ಬಂಧಿಸಿ ಪೊಲೀಸರು ತಹಶೀಲ್ದಾರ್ ಮುಂದೆ ಹಾಜರುಪಡಿಸಿದ್ದಾರೆ.

Read More

ಮಂಗಳೂರು : ಸುಹಾಸ್ ಶೆಟ್ಟಿ ಅತ್ತೆ ಬಳಿಕ ಇದೀಗ ಮಂಗಳೂರಿನ ಜನತೆ ಭಯದಲ್ಲಿ ಜೀವಿಸುತ್ತಿದ್ದು, ಸುಹಾಸ್ ಹತ್ಯೆಯ ಬಳಿಕ ಮಂಗಳೂರಿನಲ್ಲಿ ಪ್ರತಿಕಾರದ ಸಂದೇಶಗಳು ಇದೀಗ ಮುಂದುವರೆದಿದೆ. ಸುಹಾಸ್ ಶೆಟ್ಟಿಯನ್ನು ಕೊಂದವರು ಕೊಂದವರ ಮನೆಯವರು ಅಲ್ಲಿ ಯಾರು ಸಿಗುತ್ತಾರೋ ಅವರನ್ನು ಕೊಚ್ಚಿ ಕೊಲ್ಲುತ್ತೇವೆ ಎಂದು ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿ ಬಿಡಲಾಗಿದೆ. ಧನುಷ್ ಎಂಬಾತ ಫೇಸ್‌ಬುಕ್ ಲೈವ್ ಬಂದು ಕೊಲೆ ಬೆದರಿಕೆ ಹಾಕಿದ್ದಾನೆ. ಜಾಸ್ತಿ ದಿನ ತೆಗೆದುಕೊಳ್ಳಲ್ಲ ತಕ್ಷಣವೇ ರಿವೇಂಜ್ ಅಂತ ತೆಗೆದುಕೊಳ್ಳುತ್ತೇವೆ. ಸುಹಾಸ್ ಶೆಟ್ಟಿ ಕೊಂದವರ ಮೇಲೆ ರಿವೆಂಜ್ ತೆಗೆದುಕೊಳ್ಳುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ನಿವಾಸಿ ಧನುಷ್ ಪಕ್ಕಳ ಕೊಲೆ ಬೆದರಿಕೆ ಹಾಕಿದ್ದು ಇದೀಗ ಆತನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಧನುಷ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋಮು ದ್ವೇಷ ಹರಡಿ ಕಾನೂನು ಸುವ್ಯವಸ್ಥೆಗೆ ಯಾಕೆ ಆಗುವಂತಹ ಹಾಗೂ ಪ್ರಚೋದನಾತ್ಮಕ ವಿಡಿಯೋವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ…

Read More

ಕಲಬುರ್ಗಿ : ಕಳೆದ ಏಪ್ರಿಲ್ 16 ರಂದು ಸಿಇಟಿ ಪರೀಕ್ಷೆಯ ವೇಳೆ ರಾಜ್ಯದ ಬೀದರ್, ಶಿವಮೊಗ್ಗ ಹಾಗೂ ಧಾರವಾಡದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಇಡೀ ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಇದೀಗ ನೀಟ್ ಪರೀಕ್ಷೆಯಲ್ಲೂ ಕೂಡ ಅಧಿಕಾರಿಗಳು ಜನಿವಾರ ತೆಗೆಸಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಹೌದು ಕಲ್ಬುರ್ಗಿಯ ಸೇಂಟ್ ಮೇರಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ವಿದ್ಯಾರ್ಥಿಯ ಬಳಿಯಿಂದ ಜನಿವಾರ ತೆಗೆಸಿದ್ದಾರೆ. ವಿದ್ಯಾರ್ಥಿಯಾದ ಶ್ರೀಪಾದ್ ಪಾಟೀಲ್ ಎನ್ನುವ ನಿಂದ ಅಧಿಕಾರಿಗಳು ಜನಿವಾರ ತೆಗೆಸಿದ್ದಾರೆ ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆಯುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಸಿಇಟಿ ಪರೀಕ್ಷೆಯಲ್ಲೂ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆ ನಡೆದಿತ್ತು. ಬಳಿಕ ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದಾದ ಬಳಿಕ ಜನಿವಾರ ತೆಗೆಸಿದ ಅಧಿಕಾರಿಗಳು ಸಿಬ್ಬಂದಿಗಳು ಸಸ್ಪೆಂಡ್ ಕೂಡ ಆಗಿದ್ದರು. ಇದೀಗ ಕಲ್ಬುರ್ಗಿಯಲ್ಲಿ ಜನಿವಾರ ತೆಗೆಸಿದ…

Read More

ದಕ್ಷಿಣಕನ್ನಡ : ಅವಹೇಳನಕಾರಿ ಹೇಳಿಕೆ ಹಾಗೂ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಜಾ ವಿರುದ್ಧ ಇದೀಗ FIR ದಾಖಲಾಗಿದೆ. ಹೌದು ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲಾಗಿದೆ. ತೆಕ್ಕಾರಿ ಗ್ರಾಮದ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅವಹೇಳನಕಾರಿ ಹಾಗೂ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ತೆಕ್ಕಾರು ನಿವಾಸಿ ಎಸ್ ಬಿ ಇಬ್ರಾಹಿಂ ಅವರು ದೂರು ನೀಡಿದ್ದರು. ಇದೀಗ ಅವರ ದೂರಿನ ಅನ್ವಯ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

Read More

ಬೆಂಗಳೂರು : ಸಾಮಾನ್ಯವಾಗಿ ನಾವೇ ಸಿನೆಮಾದಲ್ಲಿ ನೋಡಿರುವಂತೆ ಈ ಕೊಲೆ ದರೋಡೆ ಪ್ರಕರಣಗಳಲ್ಲಿ ಜೈಲು ಸೇರಿರುವ ಅಪರಾಧಿಗಳು ಆರೋಗ್ಯ ಸಮಸ್ಯೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಬಳಿಕ ಪೊಲೀಸರ ಕಣ್ತಪ್ಪಿಸಿ ಆಸ್ಪತ್ರೆಯಿಂದ ಪರಾರಿಯಾಗಿರುವ ದೃಶ್ಯಗಳನ್ನು ಸಿನಿಮಾ ಗಳಲ್ಲಿ ನೋಡಿರುತ್ತೇವೆ.ಆದರೆ ಇದೀಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂತಹದ್ದೇ ಘಟನೆ ನಡೆದಿದೆ. ಹೌದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿಯಾಗಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ ನಿಂದ ಚಂದ್ರಶೇಖರ್ ಎನ್ನುವ ಕೈದಿ ಪರಾರಿಯಾಗಿದ್ದಾನೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿ ಮತ್ತು ವೈದಾಧಿಕಾರಿಗಳಿಂದ ಮಾಹಿತಿ ತಿಳಿದು ಬಂದಿದೆ. ಈ ಕುರಿತು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ಮುಂಜಾನೆ 5:30 ರ ಸುಮಾರಿಗೆ ವಿಚಾರಣಾಧೀನ ಕೈದಿ ಚಂದ್ರಶೇಖರ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಪರಪ್ಪನ ಅಗ್ರಹಾರನಿಂದ ವಿಚಾರಣಾ ಪೊಲೀಸರು ಆಸ್ಪತ್ರೆಗೆ ಕರೆತಂದಿದ್ದರು. ಎದೆ ನೋವು ಎಂದು ವಿಚಾರಣಾಧೀನ ಕೈದಿ ಚಂದ್ರಶೇಖರ್ ಆಸ್ಪತ್ರೆಗೆ ದಾಖಲಾಗಿದ್ದ. ಮೇ 2 ರಂದು ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್…

Read More

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಹೆಣ್ಣು ಮಕ್ಕಳಿಗೆ ಸೇಫ್ ಅಲ್ಲ ಎನ್ನುವ ವಾತಾವರಣ ನಿರ್ಮಾಣವಾಗಿದೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಮಹಿಳೆಯರಿಗೆ, ಯುವತಿಯರಿಗೆ ಕಾಮುಕರ ಕಾಟ ಹೆಚ್ಚಾಗಿದ್ದು ಇದೀಗ ಮಹಿಳೆಯ ಖಾಸಗಿ ಭಾಗದ ಫೋಟೋ ತೆಗೆಯಲು ಹೊಂಚು ಹಾಕುತ್ತಿದ್ದ ಪುಂಡನನ್ನು ಸಾರ್ವಜನಿಕರು ರೆಡ್‌ಹ್ಯಾಂಡೆಡ್‌ ಆಗಿ ಹಿಡಿದು ಥಳಿಸಿದ್ದಾರೆ. ಹೌದು ಬೆಂಗಳೂರಿನ ಹೃದಯಭಾಗವಾದ ಟೌನ್​ಹಾಲ್ ಬಳಿ ಈ ಒಂದು ಘಟನೆ ನಡೆದಿದ್ದು, ಮಹಿಳೆಯರನ್ನು ಚುಡಾಯಿಸುತ್ತಾ, ಅವರ ಫೋಟೋಗಳನ್ನು ತೆಗೆಯುತ್ತಿದ್ದ ಬೀದಿ ಕಾಮುಕನನ್ನು ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮಹಿಳೆಯ ಖಾಸಗಿ ಫೋಟೋಗಳನ್ನು ತೆಗೆಯುತ್ತಿದ್ದಾಗ ಈತ ಸಿಕ್ಕಿಬಿದ್ದಿದ್ದಾನೆ. ಮಹಿಳಾ ಹೋಂಗಾರ್ಡ್ ಸೇರಿದಂತೆ ಸಾರ್ವಜನಿಕರು ಸೇರಿ ಕಾಮುಕನನ್ನು ರೆಡ್ ಹ್ಯಾಂಡ್ ಆಗಿ ಲಾಕ್ ಮಾಡಿದ್ದಾರೆ. ಕಾಮುಕನ ಮೊಬೈಲ್ ಪರಿಶೀಲಿಸಿದಾಗ ಅದರಲ್ಲಿ ನೂರಾರು ಅಶ್ಲೀಲ ಫೋಟೋಗಳು ಇರುವುದನ್ನು ಕಂಡು ಜನರು ಬೆಚ್ಚಿಬಿದ್ದರು. ಟೌನ್ ಹಾಲ್‌ನಿಂದ ಕೆ.ಆರ್ ಮಾರ್ಕೆಟ್‌ಗೆ ಹೋಗುವ ರಸ್ತೆಯ ಅಂಡರ್ ಪಾಸ್ ಸಬ್ ವೇನಲ್ಲಿ ಕೂತು ಈತ ಹುಡುಗಿಯರ ಫೋಟೋಗಳನ್ನು ತೆಗೆಯುತ್ತಿದ್ದ ಎಂದು ತಿಳಿದುಬಂದಿದ್ದು, ಈತನನ್ನು…

Read More