Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ಮಂಗಳೂರಿನ ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ದೊಡ್ಡ ತಿರುವು ದೊರೆತಿದೆ. ಪ್ರಕರಣಕ್ಕೆ ಸಂಬಂಧಿಸಿದ ಈವರೆಗೆ ಬಂಧಿಸಲಾಗಿರುವ 8 ಮಂದಿಯ ಪೈಕಿ ಇಬ್ಬರು ಹಿಂದೂಗಳು ಇರೋದು ಗೊತ್ತಾಗಿದೆ. ಆದರೆ, ಈ ಹಿಂದೆ ಹತ್ಯೆಯಾಗಿದ್ದ ಫಾಜಿಲ್ ತಮ್ಮ ಸುಹಾಸ್ ಹತ್ಯೆಗೆ ಹಣ ನೀಡಿದ್ದೂ ಬಯಲಾಗಿದೆ. ಹೌದು ಫಾಜಿಲ್ ಸಹೋದರನಿಂದಲೂ ಕೊಲೆಗೆ ಸುಪಾರಿ ನೀಡಲಾಗಿತ್ತು ಎನ್ನಲಾಗಿದೆ. ಸಫ್ವಾನ್ ವೈಯಕ್ತಿಕ ದ್ವೇಷ ಇಟ್ಟುಕೊಂಡಿದ್ದರೆ, ಇನ್ನು ಫಾಜಿಲ್ ಸಹೋದರ ಅಣ್ಣನ ಕೊಲೆಗೆ ಪ್ರತೀಕಾರಕ್ಕಾಗಿ ಇಬ್ಬರು ಸೇರಿ ಸುಹಾಸ್ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾವಾಲ್ ಅವರು ತಿಳಿಸಿದರು. ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದು, ಬಂಧಿತರ ವಿವರ ನೀಡಿದ್ದಾರೆ. ಈ ಪೈಕಿ ಇಬ್ಬರು ಹಿಂದುಗಳು ಇರುವುದು ದೃಢಪಟ್ಟಿದೆ. ಆದರೆ, ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ತಮ್ಮ ಆದಿಲ್ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ ಫಂಡಿಂಗ್ ಮಾಡಿದ್ದಾಗಿಯೂ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಇದರೊಂದಿಗೆ,…
ರಾಮನಗರ : ಕಳೆದ ಎರಡು ದಿನಗಳ ಹಿಂದೆ ಅಷ್ಟೇ, ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಈ ಘಟನೆ ಮಾಸುವ ಮುನ್ನವೇ ರಾಮನಗರದಲ್ಲಿ ಮತ್ತೊರ್ವ ರೌಡಿಶೀಟರ್ ನ ಕೊಲೆಯಾಗಿದ್ದು ಕಾರಿನಲ್ಲಿ ಹಿಂಬದಿಯಿಂದ ಬಂದು ನಂತರ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಹೌದು ಹಳೆ ವೈಷಮ್ಯಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೆಎಸ್ಆರ್ಟಿಸಿ ಬಸ್ ಡಿಪೋ ಬಳಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ರೌಡಿಶೀಟರ್ ಸಂತೋಷ (33) ಅಲಿಯಾಸ್ ಕರಡಿ ಎನ್ನುವ ವ್ಯಕ್ತಿಯ ಹತ್ಯೆಯಾಗಿದೆ. ಹತ್ಯೆಯಾದ ಸಂತೋಷ ಬೆಂಗಳೂರಿನ ಕೋಣನಕುಂಟೆ ನಿವಾಸಿ ಎಂದು ತಿಳಿದು ಬಂದಿದೆ. ಸಂತೋಷ್ ಎಂದಿನಂತೆ ಬೈಕ್ ನಲ್ಲಿ ತೆರುಳುತ್ತಿದ್ದಾಗ ದುಷ್ಕರ್ಮಿಗಳು ಕಾರಿನಲ್ಲಿ ಹಿಂಬದಿಯಿಂದ ಬಂದು ಗುದ್ದಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಆತನ ಮೇಲೆ ದಾಳಿ ಮಾಡಿ ಕೊಲೆ ಮಾಡಲಾಗಿದೆ. ಹಾರೋಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ ಪ್ರಕರಣ ಬೆಳಕಿಗೆ ಬಂದಿದ್ದು, ಕಾರು ಖರೀದಿಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ, ಕಾರು ಚಾಲಕಾನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತನನ್ನು ಕಲಬುರ್ಗಿ ಮೂಲದ ದೇವರಾಜ್ (21) ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.ದೇವರಾಜ್ ಕಳೆದ ವರ್ಷ ಕಾರು ಖರೀದಿಸಿದ್ದರು ಮತ್ತು ಅದರ EMI ಪಾವತಿ ಮಾಡುವ ಉದ್ದೇಶದಿಂದ ಅದನ್ನು ಬಾಡಿಗೆಗೆ ನೀಡುವ ಯೋಜನೆ ಮಾಡಿಕೊಂಡಿದ್ದರು. ಆದರೆ ಇತ್ತೀಚಿನ ತಿಂಗಳುಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಬಾಡಿಗೆ ಸಿಗದೆ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದರು. ಈ ವೇಳೆ ಬ್ಯಾಂಕ್‌ನಿಂದ ಎರಡು ತಿಂಗಳ EMI ಬಾಕಿಯಿದ್ದು, ನೋಟಿಸ್ ಕೂಡಾ ಬಂದಿದ್ದಲ್ಲದೆ, ಸಾಲದ ಒತ್ತಡದಿಂದ ದೇವರಾಜ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಚಿಕ್ಕಬಾಣಾವರದ ತಾವು ವಾಸ ಮಾಡುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಾಳೆ ಮಂಗಳೂರಿಗೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಲಿದ್ದಾರೆ. ನಾಳೆ ಬೆಳಿಗ್ಗೆ ಕಮಿಷನರ್ ಕಚೇರಿಯಲ್ಲಿ 11ಗಂಟೆಗೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತಂತೆ ಪೊಲೀಸರ ಜೊತೆಗೆ ಜಿ ಪರಮೇಶ್ವರ್ ಅವರು ಸಭೆ ನಡೆಸಲಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪರಮೇಶ್ವರ್ ಸಭೆ ನಡೆಸಲಿದ್ದು, ಗೃಹ ಸಚಿವ ಜಿ ಪರಮೇಶ್ವರ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಂಟಿಯಾಗಿ ಸಭೆ ನಡೆಸಲಿದ್ದಾರೆ. ಎಡಿಜಿಪಿ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಕಮಿಷನರ್ ಹಾಗು ಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳು ಈ ಸಭೆಯಲ್ಲಿ ಹಾಜರಿರಲಿದ್ದಾರೆ.
ವಿಜಯಪುರ : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ವಿಜಯಪುರದ ಹಝ್ರತ್ ಹಾಶಿಂಪೀರ್ ದರ್ಗಾದ ಧರ್ಮಾಧಿಕಾರಿ ಸೈಯದ್ ಮೊಹಮ್ಮದ್ ತನ್ವೀರ್ ಪೀರ್ ಹಾಸಿಂ ಹೇಳಿಕೆ ನೀಡಿದರು. ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, 2014 ರಿಂದ ನಡೆದಿರುವ ನಿಮ್ಮ ಎಲ್ಲಾ ರೆಕಾರ್ಡ್ ನಮ್ಮ ಬಳಿ ಇದೆ. ಸಿಎಎ ಕೂಡ ಪಾಸ್ ಮಾಡಲು ನಾವು ಬಿಡಲಿಲ್ಲ. ನೀವು ಮಾಡಿರೋ ಆಕ್ಟ್ ಹಿಂಪಡೆಯುವಂತೆ ಹೋರಾಟ ಮಾಡುತ್ತೇವೆ. ನಮ್ಮ ಧರ್ಮಕ್ಕಾಗಿ ನಾವು ಯಾವ ಹೋರಾಟಕ್ಕೂ ಸಿದ್ಧರಾಗಿದ್ದೇವೆ ಎಂದರು. ದೇಶದ ಕಾನೂನಿನ ಚೌಕಟ್ಟಿನಲ್ಲಿ ನಮ್ಮ ಹೋರಾಟ ನಡೆಯಲಿದೆ. ಪಾರ್ಲಿಮೆಂಟ್ ಪಾಸ್ ಮಾಡುವ ಕಾಯ್ದೆ ಒಪಬೇಕೆಂದು ಹೇಳುತ್ತಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಈ ರೀತಿ ಹೇಳುತ್ತಾರೆ. ಆದರೆ ನಾವು ಒಪ್ಪಲ್ಲ ನೀವು ಮತ್ತೆ ಇದನ್ನು ಪಾರ್ಲಿಮೆಂಟ್ ನಲ್ಲಿ ತರಬೇಕು. ಮೋದಿ ಮುಸ್ಲಿಮರ ಪರವಾಗಿ ಒಂದೇ ಒಂದು ಕಾನೂನು ಮಾಡಿಲ್ಲ. ವಕ್ಫ್ ಬಿಲ್ ತರುವ ಮೊದಲು ಮುಸ್ಲಿಮರನ್ನು…
ಕೋಲಾರ : ಕೋಲಾರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗೊರವನಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಲಾರಿ ಚಾಲಕ ಹನುಮಂತ (55) ಕಾರ್ಮಿಕ ನಾಗರಾಜ್ ಸಾವನ್ನಪ್ಪಿದ್ದಾರೆ. ಟಿಪ್ಪರ್ ನಲ್ಲಿದ್ದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಹನುಮಂತ ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ನಿವಾಸಿ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ನಿನ್ನೆ ರಾತ್ರಿ ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಲಾಂಗು ಮಚ್ಚುಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಅದರ ಬೆನ್ನಲ್ಲೇ ಇಂದು ಮಂಗಳೂರು ಸುತ್ತಮುತ್ತ ಭಾಗದಲ್ಲಿ ಮೂವರ ಮೇಲೆ ಚಾಕುವಿನಿಂದ ದಾಳಿ ನಡೆಸಲಾಗಿತ್ತು. ಇದೀಗ ಮಂಗಳೂರಿನಲ್ಲಿ ಮತ್ತೋರ್ವ ಯುವಕನ ಮೇಲೆ ತಲ್ವಾರ್ ನಿಂದ ದಾಳಿಗೆ ಯತ್ನ ನಡೆದಿದೆ. ಹೌದು ಮಂಗಳೂರಿನಲ್ಲಿ ಮತ್ತೆ ಯುವಕನೋರ್ವನ ಮೇಲೆ ದಾಳಿಗೆ ಯತ್ನಿಸಲಾಗಿದ್ದು, ಪಂಜಿಮೊಗೇರು ಬಳಿ ತಲ್ವಾರ್ ನಿಂದ ದುಷ್ಕರ್ಮಿಗಳು ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರು ದುಷ್ಕರ್ಮಿಗಳು ತಲ್ವಾರ್ ಹಿಡಿದು ಯುವಕನನ್ನು ಅಟ್ಟಾಡಿಸಿದ್ದಾರೆ. ತಲ್ವಾರ್ ಬೀಸಿದ ತಕ್ಷಣ ಯುವಕ ಬೈಕ್ ಹತ್ತಿ, ಎಸ್ಕೇಪ್ ಆಗಿದ್ದಾನೆ. ಮಂಗಳೂರು ಹೊರವಲಯದಲ್ಲಿರುವ ಪಂಜಿಮೊಗೆರೆ ಬಳಿ ಈ ಒಂದು ಘಟನೆ ನಡೆದಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ ಬೇಸಿಗೆ ಮುಗಿಯೋಕು ಮುನ್ನ ರಾಜ್ಯದಲ್ಲಿ ಮಳೆ ಸುರಿಯುತ್ತಿದ್ದು ಇದೀಗ ಎಂದು ಬೆಂಗಳೂರಿನಲ್ಲಿ ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಬೆಂಗಳೂರು ನಗರದ ಹಲವಡೆ ಮತ್ತೆ ಧಾರಾಕಾರ ಮಳೆ ಸುರಿದಿದೆ. ರಾಜಾಜಿನಗರ, ಮೆಜೆಸ್ಟಿಕ್, ರೇಸ್ ಕೋರ್ಸ್ ರಸ್ತೆ, ಕಾರ್ಪೊರೇಷನ್, ರಿಚ್ಮಂಡ್ ಸರ್ಕಲ್, ಶಾಂತಿನಗರ, ಅಶೋಕ ನಗರ ಹಾಗು ಕಬ್ಬನ್ ಪಾರ್ಕ್ ಸುತ್ತಮುತ್ತಲು ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲ್ಲಿ ಎಂದು ಶಾಸಕ ಬಸನಗೌಡ ಪಾಟೀಲ ಸಚಿವ ಶಿವಾನಂದ ಪಾಟೀಲ್ ಅವರಿಗೆ ಸವಾಲು ಹಾಕಿದ್ದು, ಈ ಹಿನ್ನೆಲೆ ಸಚಿವ ಶಿವಾನಂದ ಪಾಟೀಲ್ ಇಂದು ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಸ್ಪೀಕರ್ ಯುಟಿ ಖಾದರ್ ಶಿವಾನಂದ್ ಪಾಟೀಲ್ ಅವರ ರಾಜಿನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಇದೇ ವಿಚಾರವಾಗಿ ಮಾತನಾಡಿದ ಸ್ವೀಕರಿಟಿ ಖಾದರ್, ಸಚಿವ ಶಿವಾನಂದ್ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಅವರ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ. ಸಚಿವ ಶಿವಾನಂದ್ ಪಾಟೀಲ್ ಷರತ್ತುಬದ್ಧ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಶಾಸಕ ಸ್ಥಾನಕ್ಕೆ ಇನ್ನು ರಾಜಿನಾಮೆ ನೀಡಿಲ್ಲ. ಹಾಗಾಗಿ ಶಿವಾನಂದ್ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಅದು ಸ್ಪೀಕರ್ ಯುಟಿ ಖಾದರ್ ಸ್ಪಷ್ಟಪಡಿಸಿದರು.
ದಕ್ಷಿಣಕನ್ನಡ : ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೃತ ಸುಹಾಸ್ ಶೆಟ್ಟಿ ಅಂತ್ಯಕ್ರಿಯೆಯಲ್ಲಿ ಬಿಜೆಪಿ ಹಲವು ನಾಯಕರು ಭಾಗಿಯಾಗಿದ್ದರು. ಈ ವೇಳೆ ಸುಹಾಸ್ ಶೆಟ್ಟಿ ಕುಟುಂಬಕ್ಕೆ ವೈಯಕ್ತಿಕವಾಗಿ 5 ಲಕ್ಷ ಕೊಡುತ್ತೇನೆ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಿಸಿದರು. ಈ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿ ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದು, ಹಿಂದೂ ಧರ್ಮ ಉಳಿಸಲು ಹೋರಾಟ ನಡೆಸುವವರನ್ನು ಮುಸ್ಲಿಂ ಭಯೋತ್ಪಾದಕರು ಕೊಂದು ಹಾಕುತ್ತಿದ್ದಾರೆ. ಇಂತಹವರನ್ನು ಸ್ಪಾಟ್ ನಲ್ಲಿ ಗುಂಡು ಹಾರಿಸುವ ಕೆಲಸ ಆಗಬೇಕಿದೆ. ಇಲ್ಲದಿದ್ದರೆ ದೇಶಕ್ಕಾಗಿ ದುಡಿಯುವವರಿಗೆ ಭಯದ ವಾತಾವರಣ ನಿರ್ಮಾಣವಾಗುತ್ತದೆ. ಬಿಜೆಪಿ ಸರ್ಕಾರ ಇದ್ದಾಗಲೂ ಕಾರ್ಯಕರ್ತರಿಗೆ ರಕ್ಷಣೆ ಇರಲಿಲ್ಲ. ಹಿಂದೂ ಯುವಕರು ರಾತ್ರಿ ಹೊತ್ತು ಒಬ್ಬಂಟಿಯಾಗಿ ಓಡಾಡಬೇಡಿ. ಕರಾವಳಿಯಲ್ಲಿ ಆತ್ಮ ರಕ್ಷಣೆಗೆ ಆಯುಧ ಇಟ್ಟುಕೊಳ್ಳುವುದು ಅಗತ್ಯ. ಹಿಂದೂ ರಾಜ್ಯದಲ್ಲಿ ಬದುಕಲು ಕಷ್ಟವಾಗುತ್ತಿದೆ ಎಂದು ಶಾಸಕ…














