Author: kannadanewsnow05

ಮಂಡ್ಯ : ಮಂಗಳೂರಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸುಹಾಸ್ ಶೆಟ್ಟಿ ಹಂತಕರು ಯಾರೇ ಇರಲಿ, ಶೀಘ್ರದಲ್ಲಿ ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗುತ್ತೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಪಟ್ಟಂತೆ ನಿನ್ನೆಯೇ ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರಿಗೆ ಮಂಗಳೂರಿಗೆ ಹೋಗಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಕೊಲೆ ಯಾರದ್ದೇ ಆಗಿರಲಿ, ಯಾವ ಕಾರಣಕ್ಕೆ ಆಗಿರಲಿ, ನಮಗೆ ಪ್ರತಿ ಜೀವವೂ ಮುಖ್ಯ. ಈ ಹೀನ ಕೃತ್ಯ ಎಸಗಿರುವ ಅಪರಾಧಿಗಳ ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಹೇಳಿದ್ದಾರೆ. ಸುಹಾಸ್​ ಶೆಟ್ಟಿ ಹತ್ಯೆ ಯಾಕೆ ನಡೆದಿದೆ ಗೊತ್ತಿಲ್ಲ. ಹಂತಕರು ಯಾರೇ ಆಗಿದ್ದರೂ ಕೂಡಲೇ ಕ್ರಮ ಆಗಬೇಕು. ಯಾರೇ ಆದ್ರೂ ಮನಷ್ಯರ ಪ್ರಾಣ ಮುಖ್ಯ.ಮೃತ ವ್ಯಕ್ತಿ ರೌಡಿಶೀಟರ್ ಅಂತ ಹೇಳುತ್ತಿದ್ದಾರೆ. ಹಂತಕರು ಯಾರೇ ಆಗಿದ್ದರೂ ಕೂಡಲೇ ಕ್ರಮ ಆಗಬೇಕು. ಶೀಘ್ರ ಆರೋಪಿಗಳ ಪತ್ತೆಗೆ ಕ್ರಮವಹಿಸಬೇಕು. ಇಂತಹ ಘಟನೆಗಳಿಗಾಗಿಯೇ ಬಿಜೆಪಿಯವರು ಕಾಯುತ್ತಿದ್ದಾರೆ…

Read More

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರನ ಪರವಾಗಿ ಹೈಕೋರ್ಟ್ ಗೆ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದರು.ಇದೀಗ ಭವಾನಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಇದೀಗ ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿದೆ. ಹೌದು ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ರನ ಪರವಾಗಿ ಸಲ್ಲಿಸಿದ್ದ ಭವಾನಿ ರೇವಣ್ಣ ಅರ್ಜಿ ಇದೀಗ ವಜಾಗೊಳಿಸಲಾಗಿದೆ. ಹೊಸ ವಕೀಲರ ನೇಮಕಕ್ಕೆ ಭವಾನಿ ರೇವಣ್ಣ ಕಾಲಾವಕಾಶ ಕೋರಿ ಹೈಕೋರ್ಟ್ ಗೆ 7 ದಿನಗಳ ಕಾಲ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು. ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಗೆ ಎಸ್‌ಪಿಪಿ ಪ್ರೊ.ರವಿವರ್ಮ ಕುಮಾರ್ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ನ್ಯಾ.ಎಸ್ ವಿಶ್ವದಿತ್ ಶೆಟ್ಟಿ ಅವರಿಂದ ಹೈಕೋರ್ಟ್ ಪೀಠ ಭವಾನಿ ರೇವಣ್ಣ ಅವರು ಸಲ್ಲಿಸಿದ ಅರ್ಜಿಯನ್ನು ವಜಾ ಗೊಳಿಸಿ ಆದೇಶಿಸಿದೆ. ಹೊಸ ವಕೀಲರ ನೇಮಕಕ್ಕೆ ಕನಿಷ್ಟ 7…

Read More

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಕೊಲೆ, ದರೋಡೆ, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ರೌಡಿಗಳಿಗೆ, ಕಾಮುಕರಿಗೆ ಪೋಲೀಸರ ಭಯವೆ ಇಲ್ಲದಂತಾಗಿದೆ.ಇದೀಗ ನಿನ್ನೆ ಮಂಗಳೂರಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಲಾಂಗು ಮಚ್ಚುಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈಯ್ಯಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆ ಮಾಹಿತಿ ಪೊಲೀಸರಿಗೆ ಮೊದಲೇ ತಿಳಿದಿತ್ತು. ಅತೀಯಾದ ಮುಸ್ಲಿಮರ ಒಲೈಕೆಯಿಂದ ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿದೆ ಎಂದಿದ್ದಾರೆ. ಮುಸಲ್ಮಾನರ ಸೋಶಿಯಲ್ ಮೀಡಿಯಾದಲ್ಲಿ ಹತ್ಯೆಯ ಸಂದೇಶ ಹರಿದಾಡಿತ್ತು. ಪೊಲೀಸರಿಗೆ ಮೊದಲೇ ಗೊತ್ತಿದ್ದರೂ ಸುಮ್ಮನಾಗಿದ್ದಾರೆ ಎಂದು ಸನೀಲ್ ಕುಮಾರ್ ಹೇಳಿದ್ದಾರೆ. ಮುಸ್ಲಿಮರನ್ನು ಕೇಂದ್ರವಾಗಿಟ್ಟು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಶವದ ಮೇಲೆ ಕಾಂಗ್ರೆಸ್ ರಾಜಕಾರಣ ರಾಜ್ಯವನ್ನು ಈ ಪರಿಸ್ಥಿತಿಗೆ ತಂದು ನಿಲ್ಲಿಸಿದೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.

Read More

ಮಂಗಳೂರು : ಮಂಗಳೂರಿನ ಕುಡುಪು ಬಳಿ ನಡೆದಿದ್ದ ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದಡಿ ಇನ್ಸ್‌ಪೆಕ್ಟರ್‌ ಶಿವಕುಮಾರ್, ಹೆಡ್ ಕಾನ್ಸ್‌ಟೇಬಲ್ ಚಂದ್ರ.ಪಿ ಮತ್ತು ಕಾನ್ಸ್‌ಟೇಬಲ್‌ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಮೂವರ ವಿರುದ್ಧ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಆರೋಪ ಕೇಳಿ ಬಂದಿತ್ತು.ಶಿವಕುಮಾರ್ ಆರಂಭದಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು. ವಿವಾದ ದೊಡ್ಡದಾದ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದರು. ಇದಾದ ಬಳಿಕ ಶಿವಕುಮಾರ್ ಅವರನ್ನು ಅಮಾನತು ಮಾಡುವಂತೆ ಗೃಹ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದರು. ಪ್ರಕರಣ ಹಿನ್ನೆಲೆ? ಏ.27ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಈ ಸಂದರ್ಭ ವಿಚಾರವೊಂದಕ್ಕೆ ಮೃತ ವ್ಯಕ್ತಿಗೆ ಅಲ್ಲಿದ್ದ ಸಚಿನ್ ಎಂಬಾತನೊಂದಿಗೆ ವಾಗ್ವಾದ ನಡೆದಿತ್ತು. ಈ ಸಂದರ್ಭ…

Read More

ಗದಗ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಪ್ರೀತಿಯ ನಾಟಕವಾಡಿ ಇಬ್ಬರು ಮುಸ್ಲಿಂ ಯುವಕರು ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್ ಗೆ ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಗದಗದಲ್ಲಿ ನಡೆದಿದೆ. ಹೌದು ಬಾಲಕಿಯ ಜೊತೆ ಪ್ರೀತಿ ಮಾಡುವ ನಾಟಕವಾಗಿ ದುರುಳರಿಂದ ಅತ್ಯಾಚಾರ ನಡೆದಿದೆ ಎಂದು ಗದಗದಲ್ಲಿ ಎಸ್ಪಿ ಬಿಎಸ್ ನೇಮಗೌಡ ಹೇಳಿಕೆ ನೀಡಿದ್ದಾರೆ. ಏಪ್ರಿಲ್ 19 ರಂದು ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್ ಗೆ ಕರೆದುಕೊಂಡು ಹೋಗಿದ್ದಾರೆ. ಸಮೀರ್ ಎಂಬ ಯುವಕ ಬಾಲಕಿಗೆ ಪ್ರೀತಿ ಮಾಡುವ ನಾಟಕವಾಡಿದ್ದಾನೆ. ಈ ವೇಳೆ ಬಾಲಕಿ ಮೇಲೆ ಸಮೀರ್ ಅತ್ಯಾಚಾರ ಮಾಡಿದ ಬಳಿಕ ಸ್ನೇಹಿತ ಉಮರ್ ನಿಂದ ಅತ್ಯಾಚಾರ ನಡೆದಿದೆ. ಆರೋಪಿಗಳಿಗೆ ಲಾಡ್ಜ್ ಬುಕ್ ಮಾಡಲು ಜಾಕೀರ್ ಹುಸೇಲ್ ಎಂಬಾತ ಸಹಕರಿಸಿದ ಎನ್ನಲಾಗಿದೆ.ಘಟನೆಯ ಬಳಿಕ ಬಾಲಕಿಯ ತಾಯಿ ದೂರು ನೀಡಿದ ಹಿನ್ನೆಲೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳ ಬಂಧನಕ್ಕೆ ಬಲೇ ಬೀಸಲಾಗಿದೆ ಎಂದು ಎಸ್ ಪಿ ಬಿಎಸ್ ನೇಮಗೌಡ ಅವರು…

Read More

ಮೈಸೂರು: ದೇಶದಲ್ಲಿದ್ದುಕೊಂಡು ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ವಿಧಾನಪರಿಷತ್‌ ಸದಸ್ಯ ಎ.ಎಚ್‌. ವಿಶ್ವನಾಥ್ ಒತ್ತಾಯಿಸಿದರು. ಇಂದು ಮೈಸೂರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಪಾಕಿಸ್ತಾನ್ ಜಿಂದಾಬಾದ್ ಎನ್ನುವವರನ್ನು ದೇಶದ್ರೋಹಿಗಳೆಂದು ಘೋಷಿಸಿ ಶಿಕ್ಷೆ ವಿಧಿಸಬೇಕು. ಶತ್ರು ರಾಷ್ಟ್ರದ ಪರ ಜೈಕಾರ ಕೂಗಿದವರನ್ನು ಸುಮ್ಮನೆ ಬಿಟ್ಟು ಕಳುಹಿಸುವುದು ಸರಿಯಲ್ಲ. ನಮ್ಮ ದೇಶದ ಅನ್ನ ತಿಂದು, ನಮ್ಮ ನೀರು ಕುಡಿದು ಶತ್ರುಗಳಿಗೆ ಜೈ ಎನ್ನುವವರನ್ನು ಒಪ್ಪಲು ಸಾಧ್ಯವಿಲ್ಲ ಎಂದರು. ಇನ್ನು ಜನಗಣತಿ ಜೊತೆ ಜಾತಿ ಗಣತಿಯನ್ನೂ ನಡೆಸಲು ಕೇಂದ್ರ ಸರ್ಕಾರ ನಿರ್ಣಯ ಕೈಗೊಂಡಿರುವುದು ಸ್ವಾಗತಾರ್ಹ. ಎಲ್ಲಾ ಜಾತಿಯ ಮುಖಂಡರೂ ಇದನ್ನು ಸ್ವಾಗತಿಸಿದ್ದಾರೆ. ಈಗ, ರಾಜ್ಯದಲ್ಲಿ ನಡೆಸಲಾದ ಸಮೀಕ್ಷಾ ವರದಿಯನ್ನು ಸರ್ಕಾರ ಅಧಿಕೃತವಾಗಿ ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.

Read More

ಕಾಸರಗೋಡು : ಪೋಷಕರು ಎಷ್ಟೇ ಎಚ್ಚರವಹಿಸಿದರು ಮಕ್ಕಳು ಅರಿವಿಲ್ಲದೆ ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಾರೆ. ಇದೀಗ ಕಾಸರಗೋಡಿನಲ್ಲಿ ಕೂಡ ಅಂತಹದ್ದೆ ಘಟನೆ ನಡೆದಿದ್ದು, ಹಲಸಿನ ಹಣ್ಣು ಕತ್ತರಿಸುವಾಗ ಆಕಸ್ಮಿಕವಾಗಿ ಕತ್ತಿ ತಲೆಗೆ ಬಡಿದು 8 ವರ್ಷದ ಬಾಲಕ ಸಾವನ್ನಪ್ಪಿರುವ ಘೋರ ದುರಂತ ಸಂಭವಿಸಿದೆ. ಕಾಸರಗೋಡಿನ ವಿದ್ಯಾನಗರ ಠಾಣಾ ವ್ಯಾಪ್ತಿಯ ಪಾಡಿ ಬೆಳ್ಳೂರಡ್ಕ ಎಂಬಲ್ಲಿ ಈ ಘಟನೆ ನಡೆದಿದೆ.ಮೃತನನ್ನು ಹುಸೈನ್ ಶಹಬಾಸ್ (8) ಎಂದು ತಿಳಿದುಬಂದಿದೆ.ತಾಯಿ ಜೊತೆ ಆಲಂಪಾಡಿ ಬೆಳ್ಳೂರಡ್ಕದಲ್ಲಿರುವ ಅಜ್ಜಿ ಮನೆಗೆ ಹುಸೈನ್ ಬಂದಿದ್ದನು. ತಾಯಿ ಅಡುಗೆ ಕೋಣೆ ಹೊರಗಡೆ ಮುಟ್ಟು ಕತ್ತಿ ಯಲ್ಲಿ ಹಲಸಿನ ಹಣ್ಣು ತುಂಡರಿಸುತ್ತಿದ್ದರು. ಈ ವೇಳೆ ಹೊರಗಡೆಯಿಂದ ಆಟವಾಡುತ್ತಿದ್ದ ಹುಸೈನ್ ಓಡಿ ಕೊಂಡುಬಂದಾಗ ಆಕಸ್ಮಿಕವಾಗಿ ಕಾಲು ಜಾರಿ ಮುಟ್ಟು ಕತ್ತಿಯ ಮೇಲೆ ಬಿದ್ದಿದ್ದಾನೆ.ಗಂಭೀರ ಗಾಯಗೊಂಡ ಬಾಲಕನನ್ನು ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ದರೂ ಸಹ ಬಾಲಕ ಉಳಿಯಲಿಲ್ಲ. ವಿದ್ಯಾನಗರ ಠಾಣಾ ಪೊಲೀಸರು ಅಸಹಜ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು : ಕೇಂದ್ರ ಸರ್ಕಾರ ಜನಗಣತಿಯ ಜೊತೆಗೆ ಜಾತಿಗಣತಿ ನಡೆಸೋದಾಗಿ ಹೇಳಿದೆ. ಇದೆ ವಿಚಾರವಾಗಿ ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇಕಡ 50ರಷ್ಟು ಮೀಸಲಾತಿ ಮಿತಿಯನ್ನು ತೆಗೆದು ಹಾಕಬೇಕು ಎಂದು ಆಗ್ರಹಿಸಿದ್ದಾರೆ . ಜನಗಣತಿ ಜೊತೆಗೆ ಜಾತಿಗಣತಿ ಕೂಡ ನಡೆಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ರಾಹುಲ್ ಗಾಂಧಿ ಹಾಗೂ ಕೇಂದ್ರ ಸರ್ಕಾರವನ್ನು ನಾನು ಅಭಿನಂದಿಸುವೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಪ್ರಧಾನಿ ಮೋದಿ ಅವರಿಗಿಂತ ರಾಹುಲ್ ಗಾಂಧಿಯನ್ನು ನಾನು ಅಭಿನಂದಿಸುತ್ತೇನೆ. ಕಳೆದ ಎರಡುವರೆ ವರ್ಷಗಳಿಂದ ಜಾತಿ ಗಣತಿಗೆ ರಾಹುಲ್ ಗಾಂಧಿ ಒತ್ತಾಯಿಸಿದ್ದರು. ಹೀಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಅಭಿನಂದಿಸುವೆ. ರಾಹುಲ್ ಗಾಂಧಿ ಒತ್ತಡ ಹಾಕಿದ್ದರಿಂದ ಕೇಂದ್ರ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಆತುರವಾಗಿ ನಿರ್ಧಾರ ಕೈಗೊಂಡಿದೆ.ಕೇವಲ ಜನಗಣತಿಯ ಜೊತೆಗೆ ಜಾತಿಗಣತಿ ನಡೆಸಿದರೆ ಸಾಲದು. ಆರ್ಥಿಕ, ಸಾಮಾಜಿಕ ಹಾಗು ಶೈಕ್ಷಣಿಕ ಸಮೀಕ್ಷೆ ಕೂಡ ನಡೆಸಲಿ ಎಂದು…

Read More

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಸರಿನಲ್ಲಿ ಸುಳ್ಳು ಪ್ರಚಾರ ನಡೆಸಿದ ಪ್ರಕರಣದಲ್ಲಿ ರಾಜ್ಯದ ಸರ್ಕಾರಿ ಶಾಲೆಯ ಶಿಕ್ಷಕಿ ಪವಿತ್ರಾ ಎಂಬುವವರನ್ನು ರಾಮನಗರ ಸೆನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಡಿಕೆ ಸುರೇಶ್ ಅವರ ಹೆಸರಿನಲ್ಲಿ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಾಕಿ ‘ನಾನು ಅವರ ಪತ್ನಿ’ ಎಂದು ಸುಳ್ಳು ವದಂತಿಯನ್ನೂ ಹರಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮಾಜಿ ಸಂಸದ ಡಿಕೆ ಸುರೇಶ್ ಅವರ ಪತ್ನಿ ಎಂದು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆಯ ವಿರುದ್ಧ ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪವಿತ್ರ ಎಂಬ ಮಹಿಳೆಯ ವಿರುದ್ಧ ಡಿಕೆ ಸುರೇಶ್ ಅವರ ವಕೀಲ ಪ್ರದೀಪ್ ದೂರು ದಾಖಲಿಸಿದ್ದರು. ಏಪ್ರಿಲ್ 8, 2025 ರಂದು ಆರೋಪಿ ಮಹಿಳೆ, ಡಿಕೆ ಸುರೇಶ್ ಅವರ ಫೋಟೊದೊಂದಿಗೆ ತನ್ನ ಫೋಟೊವನ್ನು ಎಡಿಟ್ ಮಾಡಿ, ತಾನು ಅವರ ಪತ್ನಿ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಕೃತ್ಯವನ್ನು ದುರುದ್ದೇಶದಿಂದ…

Read More

ಬೆಂಗಳೂರು: ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಖರೀದಿ ಅವಧಿ ಇಂದಿಗೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ ಇನ್ನೂ ಆಗದ ಕಾರಣ ಖರೀದಿ ಅವಧಿ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಒಂದು ತಿಂಗಳು ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಪ್ರತಿ ಟನ್​ಗೆ 7,550 ರೂ. ನಿಗದಿಪಡಿಸಿದ್ದು, ಈ ಬೆಲೆ ಕಡಿಮೆಯಾಗಿದೆ. ಹೆಚ್ಚಳ ಮಾಡಬೇಕು ಎಂದು ರೈತರು ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಪ್ರೋತ್ಸಾಹ ಧನ ಘೋಷಣೆ ಮಾಡಲು ಮನವಿ ಮಾಡಿದಾಗ ಬೇಡಿಕೆಗೆ ಸ್ಪಂದಿಸಿ ಪ್ರತಿ ಕ್ವಿಂಟಾಲ್‌ಗೆ ರೂ. 450 ಪ್ರೋತ್ಸಾಹ ಧನ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ 3.06 ಲಕ್ಷ ಮೆಟ್ರಿಕ್​​​​ ಟನ್​​​ ತೊಗರಿ ಖರೀದಿಗೆ ಅನುಮತಿ ನೀಡಿದ್ದು, ಇದುವರೆಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ 1.83…

Read More