Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಇದೀಗ ಹೈಕೋರ್ಟ್ ರದ್ದುಗೊಳಿಸಿದೆ. ಹೌದು 2022 ನವೆಂಬರ್ 9 ರಂದು ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ಸತೀಶ ಜಾರಕಿಹೋಳಿ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ವಕೀಲ ದಿಲೀಪ್ ಕುಮಾರ್ ಎಂಬುವರು ಐಪಿಸಿ ಸೆಕ್ಷನ್ 153, 500ರ ಅಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರು ದಾಖಲಿಸಿದ್ದರು. ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇಂದು ಹೈಕೋರ್ಟ್ ವಿಚಾರಣೆ ನಡೆಸಿ ಪ್ರಕರಣವನ್ನು ರದ್ದುಗೊಳಿಸಿದೆ. ಸತೀಶ್ ಜಾರಕಿಹೊಳಿ ಹೇಳಿದ್ದೇನು? ‘ಹಿಂದೂ’ ಎಂಬ ಪದಕ್ಕೆ ಅಸಭ್ಯ ಅರ್ಥವಿದ್ದು, ಅದರ ಮೂಲ ಭಾರತದಲ್ಲ ಎಂದು ಸಚ್ಚುವ ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ ಹೇಳಿರುವುದು ವಿವಾದಕ್ಕೀಡಾಗಿದೆ. ಹಿಂದೂ ಎಂಬ ಪದ ಇದು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ?…
ಚಿಕ್ಕಬಳ್ಳಾಪುರ : ಹಣಕಾಸಿನ ವಿಚಾರವಾಗಿ ಸ್ನೇಹಿತರ ನಡುವೆ ಗಲಾಟೆ ನಡೆದು, ಸ್ನೇಹಿತನೊಬ್ಬ ತನ್ನ ಇನ್ನೊಬ್ಬ ಸ್ನೇಹಿತನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಆರ್‌ಟಿಓ ಕಚೇರಿ ಬಳಿ ಒಂದು ಕೃತ್ಯ ನಡೆದಿದೆ. ಬೆಂಗಳೂರು ಮೂಲದ ಆನಂದ್ ಎನ್ನುವವನಿಗೆ ಸುರೇಶ ಎನ್ನುವ ಸ್ನೇಹಿತ ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಗಾಯಾಳು ಆನಂದನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದೇವರಬಿಸನಹಳ್ಳಿಯ ಆದರ್ಶ ಟ್ರೀ ಫಾರಂನಲ್ಲಿ ಇವರಿಬ್ಬರು ಚಾಲಕರಾಗಿದ್ದರು. ಚಿಕ್ಕಬಳ್ಳಾಪುರ ತಾಲೂಕಿನ ಸಪ್ಪಂಗಿಹಳ್ಳಿಗೆ ಆನಂದ ಮತ್ತು ಸುರೇಶ್ ಬಂದಿದ್ದರು. ಈ ವೇಳೆ ಚಂದ್ರು ಮನೆಗೆ ತೆರಳುತ್ತಿದ್ದಾಗ ಆನಂದಗೆ ಸುರೇಶ ಚಾಕು ಇರದಿದ್ದಾನೆ ಹಣಕಾಸು ವಿಚಾರವಾಗಿ ಜಗಳವಾಗಿ ಚಾಕು ಇರಿದಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಘಟನೆ ಕುರಿತಂತೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸುಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೈ ಕೋರ್ಟ್ ಈ ಒಂದು ಪ್ರಕರಣದ ತನಿಖೆಗೆ ಸೂಚನೆ ನೀಡಿದ್ದು, ಹೈಕೋರ್ಟಿನ ಈ ಒಂದು ಆದೇಶದ ಹಿನ್ನೆಲೆ, ಇದರಿಂದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ತೀವ್ರ ಸಂಕಷ್ಟ ಎದುರಾಗಿದೆ. ಹೌದು ಇಂದು ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ ರದ್ದುಕೋರಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದೆ. ಎಫ್ಐಆರ್ ರದ್ದುಪಡಿಸಲು ನಿರಾಕರಿಸಿದೆ. ಅಲ್ಲದೇ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಆದೇಶಿಸಿದೆ. ಕೇಸ್ ಹಿನ್ನೆಲೆ ಏನು? ತಾವು ಪರಿಶಿಷ್ಟ ಜಾತಿಗಳ ಪಟ್ಟಿಗೆ ಬರುವ ಬುಡುಗ ಜಂಗಮ ಜಾತಿಗೆ ಸೇರಿದವರೆಂದು ಘೋಷಿಸಿಕೊಂಡು ಜಿ.ಮಂಜುನಾಥ್ ಅವರು 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು.…
ಮೈಸೂರು : ಮೈಸೂರಿನ ಆರ್ ಟಿ ಓ ಕಚೇರಿಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ಮೈಸೂರಿನ ಆರ್ ಟಿ ಓ ಕಚೇರಿ ಮೇಲೆ ದಿಢೀರ್ ಎಂದು ಏಕಾಏಕಿ ದಾಳಿ ಮಾಡಿ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ನೇತೃತ್ವದ ತಂಡದಿಂದ ಕಾರ್ಯಚರಣೆ ನಡೆಸಲಾಗುತ್ತಿದ್ದು ಐದು ವಾಹನಗಳಲ್ಲಿ ಆಗಮಿಸಿ ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ ನಡೆಸಲಾಗುತ್ತಿದೆ. ಸಾರ್ವಜನಿಕ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರನೆ ದಾಳಿ ಮಾಡಿದ್ದಾರೆ ದಾಖಲೆ ಮತ್ತು ಹಣ ಪರಿಶೀಲನೆ ಮಾಡುತ್ತಿದ್ದಾರೆ.
ಬೆಂಗಳೂರು : ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ಹೈಕೋರ್ಟ್ ಯತ್ನಾಳ್ ವಿರುದ್ಧ ದಾಖಲಾಗಿದ್ದ FIR ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಹೌದು ಕಳೆದ ಸೆಪ್ಟೆಂಬರ್ 18 ರಂದು ಈ ಕುರಿತು ಬೆಂಗಳೂರಿನ ಹೈ ಗ್ರೌಂಡ್ಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡ ಎಸ್ ಮನೋಹರ್ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR ದಾಖಲಿಸಿದ್ದರು. ಇದೀಗ FIR ಅನ್ನು ಹೈಕೋರ್ಟ್ ರದ್ದುಪಡಿಸಿದೆ. FIR ನಲ್ಲಿ ಏನಿತ್ತು? ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿ ಬಾರಿಯೂ ಕೇವಲ ತನ್ನ ರಾಜಕೀಯ ಹಾಗೂ ಪ್ರಚಾರಕ್ಕೋಸ್ಕರ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಟೀಕೆ ನಡೆಸುತ್ತಿರುತ್ತಾರೆ. ಜೊತೆಗೆ ರಾಹುಲ್ ಗಾಂಧಿ ಅವರ ಬಗ್ಗೆ ಈಗಾಗಲೆ ಅನೇಕ ಬಾರಿ ಇಂತಹ ಟೀಕೆಗಳನ್ನು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ತಮಗೆ ದೂರನ್ನು ಸಲ್ಲಿಸಿದ್ದೇವೆ. ಆದರೂ ಸಹ…
ಬೆಳಗಾವಿ : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ನವದೆಹಲಿ : ಲೋಕಸಭೆ, ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಿಂಕ್ರೊನೈಸ್ ಮಾಡುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಲು ಯೋಜಿಸಲಾಗಿದೆ. ಕೇಂದ್ರ ಸಚಿವ ಸಂಪುಟ ಗುರುವಾರ ‘ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವು ಇದೇ ಕುರಿತು ಸಮಗ್ರ ಮಸೂದೆಯನ್ನು ತರುವ ಸಾಧ್ಯತೆಯಿದೆ. ಬುಧವಾರ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಗಾಗಿ ಬಲವಾದ ಪಿಚ್ ಮಾಡಿದರು ಮತ್ತು ಆಗಾಗ್ಗೆ ಚುನಾವಣೆಗಳು ರಾಷ್ಟ್ರದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತಿವೆ ಎಂದು ಪ್ರತಿಪಾದಿಸಿದರು.
ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ವಿಧಾನ ಪರಿಷತ್ ನಲ್ಲಿ ಆಡಳಿತ ಮತ್ತು ವಿಪಕ್ಷ ನಾಯಕರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪರಿಷತ್ ನಲ್ಲಿ ಮೀಸಲಾತಿ ಹೋರಾಟದ ಕೋಲಹಲ ಆರಂಭವಯಿತು. ಈ ವೇಳೆ ಸದನದ ಬಾವಿಗೆಳಿದು ಬಿಜೆಪಿ ಸದಸ್ಯರಿಂದ ಪ್ರತಿಭಟನೆ ನಡೆಸಲಾಯಿತು. ಆಡಳಿತ ಮತ್ತು ವಿಪಕ್ಷ ನಾಯಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದರಿಂದ ಗದ್ದಲ ಕೋಲಾಹಲ ಹಿನ್ನೆಲೆ ಸದನವನ್ನು ಮುಂದೂಡಿಕೆ ಮಾಡಲಾಯಿತು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಮಧ್ಯಾಹ್ನ 3 ಗಂಟೆಗೆ ಕಲಾಪ ಮುಂದೂಡಿದರು.
ಬೆಳಗಾವಿ : ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿರುವ ಕುರಿತಂತೆ ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದಕ್ಕೆ ಖಂಡನೆ ವ್ಯಕ್ತವಾಯಿತು. ವಿಧಾನ ಪರಿಷತ್ ಕಲಾಪ ಆರಂಭವಾದ ಕೂಡಲೇ ವಿಪಕ್ಷ ಸದಸ್ಯರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಪಂಚಮಸಾಲಿ ಮೀಸಲಾತಿ ಹೋರಾಟ ಮಾಡುವವರ ಮೇಲೆ ಲಾಠಿಚಾರ್ಜ್ ಬೀಸಿದ್ದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದು ಅಲ್ಲದೆ ಕೂಡಲೇ ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಭಮಯಾಚಿಸುವಂತೆ ಒತ್ತಾಯಪಡಿಸಿತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಪಂಚಮಸಾಲಿ ನಾಯಕರ ಒತ್ತಾಯ ಸಂವಿಧಾನಕ್ಕೆ ವಿರುದ್ಧವಾಗಿ ಹೋಗೋದಕ್ಕೆ ಆಗಲ್ಲ ಎಂದು ವಿಧಾನ ಪರಿಷತ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಹಿಂದುಳಿದ ವರ್ಗದ ಅಡಿ ಅವಕಾಶ ಪಡೆದುಕೊಳ್ಳಬೇಕಾದರೆ ಸಂವಿಧಾನದ ಪ್ರಕಾರವೇ ಆಗಬೇಕು.ಯಾರೇ ಹಿಂದುಳಿದ ವರ್ಗಕ್ಕೆ ಸೇರಿಸಬೇಕಾದರೆ ಶಾಶ್ವತ ಹಿಂದುಳಿದ ಆಯೋಗದ ವರದಿ ಬೇಕು ಎಂದು ಇದೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣವು ರಾಷ್ಟ್ರದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನ ಮಾರತಹಳ್ಳಿ ಇನ್ಸ್ಪೆಕ್ಟರ್ ಅವರನ್ನು ಈ ಒಂದು ಪ್ರಕರಣದ ತಡಿ ಖಾದಿಕಾರಿಯಾಗಿ ನೇಮಕ ಮಾಡಲಾಗಿದೆ. ಹೌದು ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಮಾರತಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ಅವರನ್ನು ನೇಮಕ ಮಾಡಲಾಗಿದೆ. ಅತುಲ ಆತ್ಮಹತ್ಯೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗಿರುವ ಹಿನ್ನೆಲೆಯಲ್ಲಿ ತನಿಖಾಧಿಕಾರಿಯಾಗಿ ಇನ್ಸ್ಪೆಕ್ಟರ್ ದರ್ಜೆ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಪ್ರಕರಣ ಹಿನ್ನೆಲೆ? ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ 24 ಪುಟಗಳ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತುಲ್ ವಿರುದ್ಧ ಪತ್ನಿ ನಿಕಿತಾ ಸಿಂಘಾನಿಯಾ ವರದಕ್ಷಿಣೆ ಸೇರಿ 9 ಪ್ರಕರಣಗಳನ್ನು ದಾಖಲಿಸಿದ್ದಳು. ಪತಿಯ ಕಡೆಯವರು ತನಗೆ 10 ಲಕ್ಷ ರೂ. ವರದಕ್ಷಿಣೆ ಕೇಳಿದ್ದರಿಂದಲೇ ತನ್ನ ತಂದೆ ಆಘಾತದಿಂದ ಸಾವನ್ನಪ್ಪಿದ್ದರು ಎಂದು ಆಕೆ ಆರೋಪಿಸಿದ್ದಳು. ಹಾಗಾಗಿ ಈ ವರದಕ್ಷಿಣೆ ಪ್ರಕರಣ ಮತ್ತಷ್ಟು ಗಟ್ಟಿಯಾಗಿ ನ್ಯಾಯಾಲಯದಲ್ಲಿ ನಿಂತಿತ್ತು,…
 
		



 








