Author: kannadanewsnow05

ಬೆಂಗಳೂರು : ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇಕಡ 15ರಷ್ಟು ಮೀಸಲಾತಿ ಹೆಚ್ಚಳ ಮಾಡಿದ ವಿಚಾರವಾಗಿ, ಗ್ರಾಮೀಣ ಭಾಗದಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳು ಕಡಿಮೆ ಇರುವ ಕಾರಣಕ್ಕೆ ವಸತಿ ಸಚಿವರು ಮನೆ ಹಂಚಿಕೆ ಮೀಸಲಾತಿಯನ್ನು ನಗರ ಪ್ರದೇಶಕ್ಕೆ ವರ್ಗಾವಣೆ ಮಾಡಿದ್ದಾರೆ. ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ ಎಂದು ಡಿಸಿಎಂ ಸ್ಪಷ್ಟನೆ ನೀಡಿದರು. ಸಾಚಾರ್ ವರದಿಗೆ ಅನುಗುಣವಾಗಿ ಗ್ರಾಮೀಣ ಪ್ರದೇಶಕ್ಕೂ ಶೇ.10 ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ ಗ್ರಾಮೀಣ ಭಾಗದಲ್ಲಿ ಕಡಿಮೆ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಇರುವ ಕಾರಣಕ್ಕೆ ಸೌಲಭ್ಯ ರದ್ದಾಗುತ್ತಿತ್ತು. ನಾವೇನೂ ಹೊಸದಾಗಿ ಮೀಸಲಾತಿ ಸೃಷ್ಟಿ ಮಾಡಿ ನೀಡುತ್ತಿಲ್ಲ. ಪರಿಶಿಷ್ಟ ವರ್ಗ ಮತ್ತು ಜಾತಿಗಳಲ್ಲಿ ಶೇ.90 ರಷ್ಟು ಜನರಿಗೆ ಅನುಕೂಲ ಮಾಡಿಕೊಡಲಾಗಿದೆ. ಹೊಸದಾಗಿ ಮನೆ ಬೇಕಾಗಿರುವವರು ಅಡಿಪಾಯ ಹಾಕಿದರೆ ಮಾತ್ರ ಅವರಿಗೆ ಅನುಕೂಲ ಮಾಡಲು ಸಾಧ್ಯ. ಅಡಿಪಾಯ ಹಾಕದೇ ಹಣ ನೀಡಲು ಸಾಧ್ಯವಿಲ್ಲ ಎಂದರು. ವಿಪಕ್ಷಗಳು ರಾಜಕೀಯ ಮಾಡುತ್ತವೆ, ಮಾಡಲಿ. ಸರ್ಕಾರ ಮನೆಗಳನ್ನು ಕಟ್ಟಿ ನಷ್ಟ ಮಾಡಿಕೊಳ್ಳಬೇಕೆ? ಪರಿಶಿಷ್ಟರಿಗೆ ಅವಕಾಶ ಮಾಡಿಕೊಡಲಾಗಿತ್ತು, ಆದರೆ,…

Read More

ಬೆಂಗಳೂರು : ಡಿ.ಕೆ.ಶಿವಕುಮಾರ್ ಬಳಿ ಬಟ್ಟೆ ಹೊಲಿಸಿಕೊಳ್ಳುವಷ್ಟು ದರಿದ್ರ ನನಗಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕುಮಾಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಏನು ಹೇಳಿದ್ದರು?. ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಬರುತ್ತದೆ, ಎಲ್ಲ ತಯಾರಾಗಿ ಎಂದು ಹೇಳಿದ್ದರು. ಆಗ ಅದಕ್ಕೆ ನಾನು ಉಡುಗೊರೆ ನೀಡುತ್ತೇನೆ ಎಂದು ಹೇಳಿದ್ದೆ. ಕುಮಾಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ ಎಂದು ವ್ಯಂಗ್ಯವಾಡಿದರು.

Read More

ಬೆಂಗಳೂರು : ಸಾಲ ಮರು ಪಾವತಿ ತಡವಾಗಿದ್ದಕ್ಕೆ ಮನೆಯಲ್ಲಿದ್ದ ಮಗುವನ್ನು ಮೈಕ್ರೋಫೈನಾನ್ಸ್ ಸಿಬ್ಬಂದಿಗಳು ಕರೆದೊಯ್ದ ಪ್ರಕರಣ ಇದೀಗ ಸಾಕಷ್ಟು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕಲು ಈಗಾಗಲೇ ಕಠಿಣ ಕಾನೂನು ತಂದಿದ್ದೇವೆ. ಆದರೂ ಕೆಲವೆಡೆ ಇಂತಹ ದುರ್ವರ್ತನೆ ನಡೆಯುತ್ತಿದೆ. ಇದು ಸರಿಯಲ್ಲ. ಮಗುವನ್ನು ಕರೆದೊಯ್ದವರು ಕಠಿಣ ಹೃದಯಿಗಳು. ಮಾನವೀಯತೆ ಇಲ್ಲದವರು ಮಗುವನ್ನು ಅಪಹರಣ ಮಾಡಿದ್ದಾರೆ. ಈ ಬಗ್ಗೆ ಇಂದು ಮೈಸೂರು ಪೊಲೀಸ್‌ ಕಮಿಷನರ್‌ ಅಥವಾ ಐಜಿ ಬಳಿ ಮಾತನಾಡುತ್ತೇನೆ. ಇದಕ್ಕೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಪೊಲೀಸರಿಗೆ ಸೂಚನೆ ನೀಡುತ್ತೇನೆ ಎಂದರು. ಘಟನೆ ಹಿನ್ನೆಲೆ? ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಮಗುವನ್ನು ಕರೆದೊಯ್ದಿದ್ದರು. ಈ…

Read More

ನವದೆಹಲಿ : ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಆಡಿಯೋ ವಿಚಾರವಾಗಿ, ಕಾಂಗ್ರೆಸ್, ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಕೆಟ್ಟದಾಗಿ ಮಾಡುತ್ತಿದೆ. ಬಿಜೆಪಿ ಮುಸ್ಲಿಂ ಧರ್ಮಕ್ಕೆ ವಿರೋಧವಿಲ್ಲ ಧರ್ಮ ಬಿಡಿ ಅಂತ ಹೇಳಿಲ್ಲ ಎಂದು ನವದೆಹಲಿಯಲ್ಲಿ ಬಿಜೆಪಿಯ ಸಂಸದ ರಮೇಶ್ ಜಿಗಜಣಗಿ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಮುಸ್ಲಿಂ ಧರ್ಮಕ್ಕೆ ವಿರೋಧವಿಲ್ಲ ಧರ್ಮ ಬಿಡಿ ಅಂತಾನು ಹೇಳಿಲ್ಲ. ಕಾಂಗ್ರೆಸ್ ನಾಯಕರು ಮುಸ್ಲಿಮರ ತಲೆ ಕೆಡಿಸುತ್ತಿದ್ದಾರೆ ದಲಿತರ ತಲೆಕೆಡಿಸುವ ರೀತಿ ಅಲ್ಪಸಂಖ್ಯಾತರಿಗೂ ತಲೆ ಕೆಡಿಸುತ್ತಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ನೂರಕ್ಕೆ ನೂರರಷ್ಟು ನಡೆಯುತ್ತಿರುವುದು ಸತ್ಯ. ರಾಮಕೃಷ್ಣ ಹೆಗಡೆ, ಬಸವರಾಜ ಬೊಮ್ಮಾಯಿ, ಎಚ್ಡಿ ದೇವೇಗೌಡರ ಜೊತೆ ಕೆಲಸ ಮಾಡಿದ್ದೇನೆ ಆದ್ರೆ ಇಷ್ಟು ಗಲೀಜು ಸರ್ಕಾರ ಎಂದು ನೋಡಿರಲಿಲ್ಲ. ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಸಂಸದ ರಮೇಶ್ ಜಿಗಿಜಣಗಿ ವಾಗ್ದಾಳಿ ನಡೆಸಿದರು. ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಏನು ಮಾಡಿದ್ದಾರೆ ಎಂದು ಕೇಳುತ್ತಾರೆ. ವಿಜಯಪುರಕ್ಕೆ ಬಂದು ನೋಡಿ ಪ್ರಧಾನಿ ಮೋದಿಯವರು ಎಂತಹ ಕೆಲಸ ಮಾಡಿದ್ದಾರೆ…

Read More

ಹಾವೇರಿ : ಸಾಂಬಾರ್ ಮೈ ಮೇಲೆ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ರಾಮಪುರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ರುಕ್ಸಾನಾ ಬಾನು ಶೇಖ್ ಸನದಿ ಎನ್ನುವ ಬಾಲಕಿ ಸಾವನಪ್ಪಿದ್ದಾಳೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ರಾಮಾಪುರ ಎಂಬ ಗ್ರಾಮದಲ್ಲಿ ಈ ಒಂದು ದುರಂತ ನಡೆದಿದೆ. ಪೋಷಕರ ಜೊತೆಗೆ ಬಾಲಕಿ ಸಂಬಂಧಿಕರ ವಿವಾಹಕ್ಕೆ ಹೋಗಿದ್ದಳು. ಮದುವೆಯ ಮನೆಯಲ್ಲಿ ಬಾಲಕಿಯ ಮೇಲೆ ಬಿಸಿ ಸಾಂಬಾರ್ ಬಿದ್ದಿದೆ. ತಕ್ಷಣ ಬಾಲಕಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನದ ಹಿಂದೆ ಅಷ್ಟೇ ಬಾಲಕಿಯನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಇಂದು ಮತ್ತೆ ಬಾಲಕೀಯ ಮೈ ಮೇಲೆ ಗುಳ್ಳೆಗಳು ಆಗಿದ್ದವು. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ.

Read More

ಶಿವಮೊಗ್ಗ : ಇಂದು ಶಿವಮೊಗ್ಗದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವೈದ್ಯ ದಂಪತಿಯ ಪುತ್ರಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ಯುವತಿ ಸಹ ಇತ್ತೀಚಿಗಷ್ಟೇ ಎಂಬಿಬಿಎಸ್ ಮುಗಿಸಿ ವೈದ್ಯೇಯಾಗಿದ್ದಳು ಎಂದು ತಿಳಿದುಬಂದಿದೆ. ಇತ್ತೀಚಿಗಷ್ಟೇ ಮೃತ ಡಾ. ಸಾನಾ ವೈದ್ಯೆಯಾಗಿದ್ದರು. ಕಳೆದ ತಿಂಗಳು ಅಷ್ಟೇ ಎಂಬಿಬಿಎಸ್ ಮುಗಿಸಿ ಬಂದಿದ್ದರು. ಶಿವಮೊಗ್ಗದ ಸಿನ್ಸ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿದ್ದರು. ಶಿವಮೊಗ್ಗದ ತಾವರೆಕೊಪ್ಪದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಶಿವಮೊಗ್ಗದ ಟ್ಯಾಂಕ್ ಮೊಹಲ್ಲ ನಿವಾಸಿಯಾಗಿರುವ ಸಾನಾ ಈ ಒಂದು ಅಪಘಾತದಲ್ಲಿ ಸಾವನಪ್ಪಿದ್ದಾರೆ. ಘಟನೆ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಉಡುಪಿ : ಪತ್ನಿ ಅತಿಯಾದ ಮೊಬೈಲ್ ಬಳಸ್ತಿಯ ಎಂದು ಪತಿಯೊಬ್ಬ ಪತ್ನಿಯ ಜೊತೆಗೆ ಗಲಾಟೆ ತೆಗೆದು ಕತ್ತಿಯಿಂದ ಕೊಚ್ಚಿ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಈ ಒಂದು ಘಟನೆ ನಡೆದಿದೆ.ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಪತ್ನಿ ರೇಖಾ (28) ಎನ್ನುವ ಪತ್ನಿಯನ್ನು ಪತಿ ಗಣೇಶ್ ಭೀಕರವಾಗಿ ಕೊಲೆ ಮಾಡಿದ್ದಾನೆ. ಮದ್ಯ ವ್ಯಸನಿಯಾಗಿರುವ ಗಣೇಶ್ ಪೂಜಾರಿ ಇಂದ ಈ ಒಂದು ಕೃತ್ಯ ನಡೆದಿದೆ. ವಿಪರೀತ ಮೊಬೈಲ್ ಬಳಸುತ್ತೀಯಾ ಎಂದು ಪತ್ನಿಯ ಜೊತೆಗೆ ಗಣೇಶ್ ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ಕತ್ತಿಯಿಂದ ಕೊಚ್ಚಿ ಪತ್ನಿಯ ಭೀಕರ ಕೊಲೆ ಮಾಡಿದ್ದಾನೆ.ಸದ್ಯ ಪೊಲೀಸರು ಆರೋಪಿ ಗಣೇಶನನ್ನು ಅರೆಸ್ಟ್ ಮಾಡಿದ್ದಾರೆ. ಕೊಲೆ ಕುರಿತಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣದಲ್ಲಿ ಜೂನ್ 22 ರಂದು ಸಂಚಾರದಲ್ಲಿ ವ್ಯತ್ಯಯ ಇರಲಿದೆ. ಭಾನುವಾರ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಇರಲಿದ್ದು, ಎಂ. ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವಿನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಜೂನ್ 22 ರಂದು ಟ್ರಿನಿಟಿ ಸರ್ಕಲ್, ಹಲಸೂರು ನಡುವೆ ನಿರ್ವಹಣಾ ಕಾಮಗಾರಿ ಹಿನ್ನಲೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರ ಇರುವುದಿಲ್ಲ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸಂಚಾರ ಇರುವುದಿಲ್ಲ.ಆದರೆ ಬೈಯಪ್ಪನಹಳ್ಳಿಯಿಂದ ಕಾಡುಗೋಡಿಯವರೆಗೂ ಮೆಟ್ರೋ ಸಂಚಾರ ಇರುತ್ತದೆ. ಅಲ್ಲದೇ ಚಲಘಟ್ಟದಿಂದ ಎಂ. ಜಿ ರಸ್ತೆ ಅವರಿಗೆ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ. ಆದರೆ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿಯ ನಡುವೆ ಮಾತ್ರ ಸಂಚಾರ ಇರುವುದಿಲ್ಲ. ಹಸಿರು ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ ಎಂದು ಬಿಎಂಆರ್‌ಸಿಎಲ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಬೆಂಗಳೂರು : ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಜೂನ್ ನಾಲ್ಕರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಸುವ ವೇಳೆ ಕಾಲ್ತುಳಿತದಿಂದ 11 ಜನರು ಸಾವನಪ್ಪಿದ್ದರು. ಈ ಒಂದು ಪ್ರಕರಣದಿಂದ ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ್ ಅಮಾನತುಕೊಂಡಿದ್ದರು. ಇದೀಗ ವಿಚಾರಣೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಜಗದೀಶ್ ಅವರು ಬಿ.ದಯಾನಂದ್ ಗೆ ನೋಟಿಸ್ ನೀಡಿದ್ದಾರೆ. ಹೌದು ಕಳೆದ ಜೂನ್ 4 ರಂದು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಚಾರಣೆಗೆ ಹಾಜರಾಗುವಂತೆ ಬಿ.ದಯಾನಂದ್ ಅವರಿಗೆಗೆ ನೋಟಿಸ್ ನೀಡಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ದಯಾನಂದ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಈ ಒಂದು ಕಾಲ್ತುಳಿದ ಪ್ರಕರಣದಲ್ಲಿ ಸದ್ಯ ಬಿ.ದಯಾನಂದ ಅವರು ಅಮಾನತ್ತಿನಲ್ಲಿದ್ದಾರೆ.

Read More

ಬೆಂಗಳೂರು : ಇಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಗೆ ಏಕಾಏಕಿ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿದ್ದಾನೆ. ಏರ್ಪೋರ್ಟ್ ಟರ್ಮಿನಲ್ ಗೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ತಕ್ಷಣ CISF ಸಿಬ್ಬಂದಿಗಳು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.ಪಾಸ್ ಪೋರ್ಟ್ ಇಲ್ಲದೆ ಏಕಾಏಕಿ ಟರ್ಮಿನಲ್ ಗೆ ನುಗ್ಗಿದ್ದಾನೆ. ಸದ್ಯ ವಶಕ್ಕೆ ಪಡೆದ ವ್ಯಕ್ತಿಯನ್ನು ಸದಾದ್ ಮಹಮ್ಮದ್ ಬಾಬಾ ಎಂದು ತಿಳಿದುಬಂದಿದೆ. ಮಹಮದ್ ಬಾಬಾ ಜಮ್ಮು ಕಾಶ್ಮೀರದ ಶ್ರೀನಗರ ಮೂಲದ ನಿವಾಸಿ ಎನ್ನಲಾಗಿದ್ದು, ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

Read More