Subscribe to Updates
Get the latest creative news from FooBar about art, design and business.
Author: kannadanewsnow05
ಯಾದಗಿರಿ : ಬಾಕಿ ಬಿಲ್ ಬಿಡುಗಡೆಗಾಗಿ ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಸರ್ಕಾರ ಎಂದು ಕಾಂಗ್ರೆಸ್ ಆರೋಪಿಸಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರದಲ್ಲೂ ಕೂಡ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಹೌದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಯಾದಗಿರಿ ಜಿಲ್ಲೆಯ ಪಿಡಬ್ಲ್ಯೂಡಿ ಅಧಿಕಾರಿಗಳ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಅಧಿಕಾರಿಗಳು ಲಂಚ ಪಡೆದಿರುವ ಬಗ್ಗೆ ಆಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪಿಡಬ್ಲ್ಯೂಡಿ ಅಧಿಕಾರಿಗಳ ವಸೂಲಿ ದಂಧೆಯ ಕರಾಳ ಮುಖ ಇದೀಗ ಬಯಲಾಗಿದೆ. ಬಾಕಿ ಹೆಣ ಬಿಡುಗಡೆಗಾಗಿ ಫೈಲ್ ಗೆ ಸಹಿ ಮಾಡಲು ಹಂಚಿಕೆ ಬೇಡಿಕೆ ಇಟ್ಟಿದ್ದಾರೆ ಐದಾರು ಅಧಿಕಾರಿಗಳು ಹಣ ವಸೂಲಿಗೆ ಎಳೆದಿದ್ದಾರೆ ಲಂಚ ಕೊಟ್ಟರೆ ಬಿಡುಗಡೆ ಮಾಡುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶಿ ವ್ಯಕ್ತಿಯಿಂದ ಡ್ರಗ್ಸ್ ತಂದು ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಬ್ಲಡ್ಲರ್‌ಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬಂಧಿತ ಆರೋಪಿಗಳನ್ನು ಸೈಯದ್ ಹಾಗೂ ದಾಹುದ್ ಪರ್ವೆಜ್ ತಿಳಿದು ಬಂದಿದೆ. ನೈಜೀರಿಯಾ ವ್ಯಕ್ತಿಯಿಂದ ಆರೋಪಿಗಳು ಡ್ರಗ್ಸ್ ತಂದು ಮಾರಾಟ ಮಾಡುತ್ತಿದ್ದರು. ಎಂದು ಹೇಳಲಾಗುತ್ತಿದೆ. ಬಂಧಿತ ಆರೋಪಿಗಳ ಬಳಿ ಇದ್ದ 225 ಗ್ರಾಂ MDMA ಕ್ರಿಸ್ಟಲ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ನೈಜೀರಿಯಾ ಮೂಲದ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿ ಸಂಬಂಧ ಈಗಾಗಲೇ ಪರ ವಿರೋಧ ವಿಚಾರವಾಗಿ ಬಹಳ ಚರ್ಚೆಯಾಗುತ್ತಿದೆ. ಜಾತಿ ಗಣತಿಯನ್ನು ವರದಿ ಪ್ರಶ್ನಿಸಿ ಕೆಲವರು ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ವಿಚಾರಣೆ ಬಳಿಕ ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ಜುಲೈ 17 ಕ್ಕೆ ಮುಂದೂಡಿತು. ಈ ಸಂಬಂಧ ಏನಿದ್ದರೂ ಪ್ರತ್ಯೇಕ ಮಧ್ಯಂತರ ಅರ್ಜಿ ಸಲ್ಲಿಸಿ ಎಂದು ಅರ್ಜಿದಾರರಿಗೆ ಸೂಚಿಸಿದೆ. ಬೀದರ್‌ನ ಶಿವರಾಜ ಕಣಶೆಟ್ಟಿ, ಕೆ.ಸಿ. ಶಿವರಾಂ, ಬೆಂಗಳೂರಿನ ಬುಜೇಂದ್ರ, ನಟ ಮುಖ್ಯಮಂತ್ರಿ ಚಂದ್ರು ಹಾಗೂ ಬೆಂಗಳೂರಿನ ‘ಸಮಾಜ ಸಂಪರ್ಕ ವೇದಿಕೆ’ ಅಧ್ಯಕ್ಷ ಜಿ.ಎನ್.ಶ್ರೀಕಂಠಯ್ಯ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯ ಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಾದ ಪ್ರತಿವಾದ ಬಳಿಕ ನ್ಯಾಯಪೀಠ ಎರಡು ಕಡೆಯ ವಕೀಲರ ವಿವರಣೆಯನ್ನು ಲೆಕ್ಕಿಸದೆ ವಿಚಾರಣೆಯನ್ನು ಜುಲೈ 17 ಕ್ಕೆ ಮುಂದೂಡಿತು. ಕಳೆದ ವಿಚಾರಣೆ ವೇಳೆ ನ್ಯಾಯಾಲಯ, ‘ರಾಜಕೀಯ ಮತ್ತು ಸಾಮಾಜಿಕ…
ಕಾಸರಗೋಡು : ಪಹಲ್ಗಾಮ್ ದಾಳಿಯ ವೇಳೆ ಉಗ್ರರಿಗೆ ತಲ್ವಾರ್ ತೋರಿಸಿದ್ರೆ ಸಾಕಿತ್ತು. ಹಿಂದೂಗಳು ಕೇವಲ ತಲ್ವಾರ್ ತೋರಿಸಿದರೆ ಕಥೆ ಬೇರೆಯಾಗುತ್ತಿತ್ತು. ಇನ್ಮುಂದೆ ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗ್ ನಲ್ಲಿ ಚೂರಿ ಇಟ್ಕೊಳ್ಳಿ ಎಂದು RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ. ವರ್ಕಾಡಿಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಈ ಕುರಿತು ಹೇಳಿಕೆ ನೀಡಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲೂ ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗ್ ನಲ್ಲಿ ಚೂರಿ ಇಟ್ಕೊಳ್ಳಿ. ಪೌಡರ್ ಬಾಚಣಿಗೆ ಜೊತೆಗೆ ಚಾಕು ಇಟ್ಟುಕೊಳ್ಳಿ. ಆರು ಇಂಚಿನ ಚೂರಿ ಇಟ್ಕೊಳ್ಳಲು ಯಾವುದೇ ಲೈಸೆನ್ಸ್ ಬೇಡ. ಸಂಜೆ ಮೇಲೆ ಓಡಾಡಿದರೆ ನಿಮ್ಮ ಮೇಲೆ ಖಂಡಿತಾ ಆಕ್ರಮಣ ಮಾಡುತ್ತಾರೆ. ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡರೆ ನಿಮ್ಮ ಕಥೆ ಮುಗೀತು. ಅದರ ಬದಲು ಚೂರಿ ತೋರಿಸಿ ಸಾಕು ಹೆದರಿ ಓಡುತ್ತಾರೆ. ಮುಸ್ಲಿಮರು ಹೊಡಿತಾರೆ ಹಿಂದೂಗಳು ಓಡುತ್ತಾರೆ ಅಂತ ಇತ್ತು. ಈಗ ಹಿಂದೂ ತಿರುಗಿ ಬಿದ್ದಿದ್ದಾನೆ…
ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ನಿಮ್ಮ ಕನ್ನಡ ನ್ಯೂಸ್ ನೌ ಸುದ್ದಿ ಪ್ರಕಟಿಸಿತ್ತು. ಆದರೆ ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ ಎಂಬುದಾಗಿ ಜೆಡಿಎಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇಂದು ನಿಮ್ಮ ಕನ್ನಡ ನ್ಯೂಸ್ ನೌ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ಸುದ್ದಿ ಪ್ರಕಟಿಸಿತ್ತು. ಆದರೆ ಅವರು ಆರೋಗ್ಯವಾಗಿದ್ದಾರೆ. ಯಾವುದೇ ಅನಾರೋಗ್ಯಕ್ಕೆ ಒಳಗಾಗಿಲ್ಲ ಎಂಬುದಾಗಿ ಜೆಡಿಎಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಇನ್ನೂ ಹೊರ ರಾಜ್ಯದ ಪ್ರವಾಸದಲ್ಲಿ ಇರುವಂತ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಇಂದು ಬೆಂಗಳೂರಿಗೆ ಮರಳಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
ಬೆಂಗಳೂರು : ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಾತನಾಡಿ, ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಮಾಡಿದ ತ್ಯಾಗ ಬಹಳ ದೊಡ್ಡದು ಎಂದು ಅವರು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ದೇಶದ ಭದ್ರತೆಗೆ ಮಾಡಿದ್ದಷ್ಟು ತ್ಯಾಗ ಯಾರು ಮಾಡಿಲ್ಲ. ಆ ಬಗ್ಗೆ ನಾವು ಬೇರೆಯವರಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯ ಇಲ್ಲ. ನಾವೇನು ಪಹಲ್ಗಾಮ್ ದುರ್ಘಟನೆಯ ಬಗ್ಗೆ ಮೃದು ಧೋರಣೆ ತೋರಿಲ್ಲ ಎಂದು ಅವರು ತಿಳಿಸಿದರು. ನಮ್ಮ ನಾಯಕರು ಸರ್ವ ಪಕ್ಷದ ಸಭೆಯಲ್ಲಿ ಅಭಿಪ್ರಾಯ ಹೇಳಿದ್ದಾರೆ. ಇದು ದೇಶದ ಭದ್ರತೆಯ ವಿಚಾರ ಎಚ್ಚರಿಕೆಯಿಂದ ಮಾತನಾಡಬೇಕು. ಈ ವಿಚಾರದಲ್ಲಿ ಪಕ್ಷಾತೀತವಾಗಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.
ಚಾಮರಾಜನಗರ : ಸಂಬಂಧಿ ಮಗುವಿನೊಂದಿಗೆ ಆಟವಾಡುತ್ತಿದ್ದ ವೇಳೆ ಕಾಲಿಗೆ ಪೆಟ್ಟಾಗಿದೆ. ಈ ವೇಳೆ ಮಗುವಿಗೆ ಏನಾಗಿದೆಯೋ ಏನೋ ಎಂಬ ಭೀತಿಯಲ್ಲಿ 12 ವರ್ಷದ ಬಾಲಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರಜ್ವಲ್ (12) ಎಂದು ತಿಳಿದುಬಂದಿದ್ದು, ಬಾಲಕ ಪ್ರಜ್ವಲ್ ಲೊಕ್ಕನಹಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಬಿಲ್ ಕಲೆಕ್ಟರ್ ಶೀಲಾ ರವರ ಪುತ್ರ ಪ್ರಜ್ವಲ್ ಎಂದು ಗುರುತಿಸಲಾಗಿದೆ.ಪ್ರಜ್ವಲ್ ತನ್ನ ಸಂಬಂಧಿಕರ ಮಗುವಾದ ಅಭಿಷೇಕ್ ಜೊತೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಆ ಮಗುವಿನ ಕಾಲಿಗೆ ಪೆಟ್ಟಾಗಿದ್ದು, ಈ ವೇಳೆ ಮಗುವಿನ ಪೋಷಕರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗುವಿಗೆ ಏನಾದರೂ ಆಗಿದೆಯೇ ಎಂಬ ಭೀತಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಘಟನೆ ತಿಳಿದು ಅಕ್ಕಪಕ್ಕದ ಮನೆಯವರು ತಕ್ಷಣ ಪ್ರಜ್ವಲ್ ನನ್ನು ಲೊಕ್ಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ…
ಮಂಡ್ಯ : ತನ್ನ ಇಬ್ಬರು ಮಕ್ಕಳೊಂದಿಗೆ ತಂದೆ ಒಬ್ಬರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಮಂಡ್ಯ ಜಿಲ್ಲೆಯ ವಿ ಸಿ ನಾಲೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತಂದೆ ಕುಮಾರಸ್ವಾಮಿ (36) ಹಾಗು ಮಕ್ಕಳಾದ ಅದ್ವೈತ, ಅಕ್ಷರ ಮೃತರು ಎಂದು ತಿಳಿದುಬಂದಿದೆ. ಮೃತರು ಮೈಸೂರು ಜಿಲ್ಲೆಯ ಕೆ.ಆರ್ ನಗರ ಮೂಲದವರು ಎಂದು ತಿಳಿದುಬಂದಿದೆ. ಏಪ್ರಿಲ್ 17 ರಂದು ಕೆ ಆರ್ ಎಸ್ ನಲ್ಲಿ ಇದ್ದೇನೆ ಎಂದು ಹೇಳಿ ಕುಮಾರಸ್ವಾಮಿ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಇಂದು KRS ನಾರ್ತ್ ಬ್ಯಾಂಕ್ ಬಳಿಯ ವಿ.ಸಿ ನಾಲೆಯಲ್ಲಿ ಶವ ಪತ್ತೆಯಾಗಿದೆ. ಕಾರು ಸಮೇತ ನಾಲೆಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಕೃಷ್ಣರಾಜಸಾಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ನವದೆಹಲಿ : ಪಹಲ್ಗಾಮ್ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡ ಇರುವುದು ಇದೀಗ ಮತ್ತೊಮ್ಮೆ ಬಯಲಾಗಿದೆ. ಹೌದು ಗಡಿ ಭಾಗದಲ್ಲಿ ಸೇನಾವಾಹನಗಳ ಚಲನವಲನಗಳ ಕುರಿತಂತೆ ಭಾರತೀಯ ಸೇನಾಧಿಕಾರಿಯಂತೆ ಗಡಿಭಾಗದ ಟೋಲ್ ಪ್ಲಾಜ ಗಳಿಗೆ ನಿರಂತರವಾಗಿ ಕರೆ ಬರುತ್ತಿದ್ದು, ಐಎಸ್ಐ ಕರೆ ಮಾಡಿ ಮಾಹಿತಿ ಕೇಳುತ್ತಿದೆ ಎನ್ನಲಾಗಿದೆ. ಸೇನಾ ವಾಹನಗಳ ಚಲನವಲನಗಳನ್ನು ಕೇಳುತ್ತಿರುವ ಐಎಸ್ಐ ಭಾರತೀಯ ಸೇನೆಗೆ ನಿರಂತರವಾಗಿ ಕರೆಗಳು ಬರುತ್ತಿವೆ. ಪಾಕಿಸ್ತಾನದ ಮತ್ತೊಂದು ಕುತಂತ್ರ ಈ ಮೂಲಕ ಬಟಾ ಬಯಲಾಗಿದೆ. ಗಡಿಭಾಗದ ಟೋಲ್ ಪ್ಲಾಜಗಳಿಗೆ ಐಎಸ್ಐ ನಿರಂತರವಾಗಿ ಕರೆ ಮಾಡುತ್ತಿದೆ. ಭಾರತೀಯ ಸೇನಾಧಿಕಾರಿಗಳಂತೆ ಫೋನ್ ಕರೆ ಮಾಡಿ ಸೇನಾ ವಾಹನಗಳ ಚಲನೆಯ ಮಾಹಿತಿ ಕೇಳುತ್ತಿದೆ ಎನ್ನಲಾಗಿದೆ. ಇನ್ನು ಉಗ್ರ ಮನೆಗಳನ್ನು ದ್ವಂಸ ಮಾಡಿದ್ದರ ಹಿನ್ನೆಲೆಯಲ್ಲಿ ಅಧಿಕಾರ ತಿಳಿಸಿಕೊಳ್ಳುವುದಕ್ಕೆ ಉಗ್ರರು ಮತ್ತೆ ಜಮ್ಮು ಕಾಶ್ಮೀರದ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದಲ್ಲಿ 84 ಪ್ರವಾಸಿ ತಾಣಗಳ ಪೈಕಿ…
ರಾಯಚೂರು : ಕೋರ್ಟ್ನಲ್ಲಿ ಪೋಕ್ಸೋ ಪ್ರಕರಣದ ವಿಚಾರಣೆಯ ವೇಳೆ ಮರ್ಯಾದ ಹತ್ಯೆ ಬೆಳಕಿಗೆ ಬಂದಿದೆ. ಅನ್ಯ ಜಾತಿಯ ಯುವಕನನ್ನು ಪ್ರೀತಿ ಮಾಡಿದ್ದಕ್ಕೆ ತಂದೆಯೇ ಮಗಳನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳನ್ನು ತಂದೆ ಕೊಲೆ ಮಾಡಿ ಶವವನ್ನು ನದಿಗೆ ಎಸೆದಿದ್ದ ಘಟನೆ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿತ್ತು. ಪುತ್ರಿ ರೇಣುಕಾ (18) ಕೊಲೆ ಮಾಡಿದ್ದ ತಂದೆ ಲಕ್ಕಪ್ಪ ಕಂಬಳಿ. 2024 ಸೆಪ್ಟೆಂಬರ್ 21ರನ್ನು ಮಗಳನ್ನು ಕೊಲೆ ಮಾಡಿ ಲಕ್ಕಪ್ಪ ಶವವನ್ನು ಕೃಷ್ಣಾ ನದಿಗೆ ಎಸೆದಿದ್ದ ಮಗಳ ಶವವನ್ನು ಮೂಟೆ ಕಟ್ಟಿ ನದಿಗೆ ಎಸೆದಿದ್ದ. ಈ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗ್ರಾಮದ ಅನ್ಯ ಜಾತಿಯ ಯುವಕ ಹನುಮಂತನನ್ನು ರೇಣುಕಾ ಪ್ರೀತಿಸುತ್ತಿದ್ದಳು. ಮದುವೆಗೆ ವಿರೋಧ ಮಾಡಿದ್ದಕ್ಕೆ ಇಬ್ಬರು ಗ್ರಾಮವನ್ನು ಬಿಟ್ಟು ಓಡಿ ಹೋಗಿದ್ದರು. ಮಗಳು 17 ವರ್ಷದವಳಾಗಿದ್ದರಿಂದ ತಂದೆ ಲಕ್ಕಪ್ಪ ಠಾಣೆಗೆ ದೂರು ನೀಡಿದ್ದರು. ಹನುಮಂತನ ವಿರುದ್ಧ ಪೋಕ್ಸೋ ಪ್ರಕರಣದ ಅಡಿ ತಂದೆ ದೂರು…













