Author: kannadanewsnow05

ಬೆಂಗಳೂರು : ಇಂದು ನಾಡು ಕಂಡ ಅತ್ಯಂತ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವರಾದಂತಹ ಎಸ್ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 92 ವಯಸ್ಸಿನ ಎಸ್ಎಂ ಕೃಷ್ಣ ಅವರು ತಮ್ಮ ರಾಜಕೀಯ ಜೀವನದಲ್ಲಿ ರಾಜ್ಯಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅದರಲ್ಲೂ ಬಹಳ ಪ್ರಮುಖವಾದಂತಹ ಯೋಜನೆಯಾದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಇವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿಗೊಳಿಸಲಾಯಿತು. ರಾಜ್ಯದ ಹಿಂದುಳಿದ ಪ್ರದೇಶವಾದ ರಾಯಚೂರಿನಲ್ಲಿ 2001ರಲ್ಲಿ ಈ ಒಂದು ಯೋಜನೆಗೆ ಚಾಲನೆ ನೀಡಲಾಯಿತು. ಹೌದು ರಾಜ್ಯದಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆಯನ್ನು ಜಾರಿಗೆ ತಂದರು. ಈ ಮೂಲಕ ಮೊದಲ ಬಾರಿಗೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅರಕೇರಾದಲ್ಲಿ ಬಿಸಿಯೂಟ ಯೋಜನೆಗೆ ಚಾಲನೆ ನೀಡಿದರು.ಸಿಎಂ ಎಸ್.ಎಂ ಕೃಷ್ಣ ಅವರಿಗೆ ಅಂದಿನ ಶಿಕ್ಷಣ ಸಚಿವ ಹೆಚ್.ವಿಶ್ವನಾಥ್, ರಾಯಚೂರು ಸಂಸದ ವೆಂಕಟೇಶ ನಾಯಕ ಅವರು ಸಾಥ್ ನೀಡಿದ್ದರು. 2001ರಲ್ಲಿ ಆಗಿನ ಸಿಎಂ ಆಗಿದ್ದ ಎಸ್‌ಎಂ ಕೃಷ್ಣ ಅವರು…

Read More

ಬೀದರ್ : ಮನೆಯಲ್ಲಿ ನೀರಿನ ಮೋಟಾರ್ ಆನ್ ಮಾಡುವ ವೇಳೆ ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪುರ ಎಂಬ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.. ಮೃತ ಯುವಕನನ್ನು ನಾರಾಯಣಪುರ ಗ್ರಾಮದ ಕಲ್ಲಪ್ಪ ಬಸವರಾಜ ಮೇತ್ರೆ (30) ಎಂದು ತಿಳಿದುಬಂದಿದೆ. ಕಲ್ಲಪ್ಪ ಮನೆಯಲ್ಲಿನ ನೀರಿನ ಮೋಟರ್ ಆನ್ ಮಾಡಲು ತೆರಳಿದ ಸಂದರ್ಭದಲ್ಲಿ ವಿದ್ಯುತ್ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ತಡರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ತಮ್ಮ ಸದಾಶಿವನಗರದಲ್ಲಿ ಸಾವನ್ನಪ್ಪಿದ್ದಾರೆ. ಇವಳೇ ಬೆಳಗಾವಿಯ ಅಧಿವೇಶನದ ಕಲಾಪದಲ್ಲಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಸಂತಾಪಟ್ಟಿಸಿ ವಿಧಾನಸೌಧದಲ್ಲಿ ಎಸ್ಎಂ ಕೃಷ್ಣ ಅವರ ಥಳಿ ನಿರ್ಮಾಣ ಆಗಬೇಕು ಎಂದು ತಿಳಿಸಿದರು. ಸಂತಾಪ ಸೂಚನೆಯ ನಿರ್ಣಯದ ಮೇಲೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಎಸ್.ಎಮ್ ಕೃಷ್ಣ ಪುತ್ತಳಿ ಆಗಬೇಕು ಎಂದು ವಿಧಾನಸಭೆ ಕಲಾಪದಲ್ಲಿ ಸಚಿವ ಎಚ್ ಕೆ ಪಾಟೀಲ್ ಪ್ರಸ್ತಾಪಿಸಿದ್ದಾರೆ. ಕೃಷ್ಣ ನೀರಾವರಿ ಯೋಜನೆ ಪ್ರದೇಶದಲ್ಲಿ ಸ್ಮಾರಕ ಆಗಬೇಕು. ಆಲಮಟ್ಟಿ ಕೃಷ್ಣ ನೀರಾವರಿ ಯೋಜನೆ ಪ್ರದೇಶದಲ್ಲಿ ಪುತ್ಥಳಿ ನಿರ್ಮಾಣ ಆಗಬೇಕು. ಎಸ್ಎಮ್ ಕೃಷ್ಣ ಅವರ ನೆನಪು ನಮಗೆ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ ಕೆ ಪಾಟೀಲ್ ಮನವಿ ಮಾಡಿದರು.

Read More

ಚಾಮರಾಜನಗರ : ಕೊಳ್ಳೇಗಾಲದ ಮಾಜಿ ಶಾಸಕರು ಹಾಗೂ ಉಗ್ರಾಣ ನಿಗಮದ ಅಧ್ಯಕ್ಷರು ಆಗಿದಂತಹ ಎಸ್ ಜಯಣ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಅವರು ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಉಸಿರಾಟದ ತೊಂದರೆ ಇತ್ತು ಎಂದು ಸಹ ಅವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು ಈ ವೇಳೆ ಆಸ್ಪತ್ರೆಗೆ ಕರೆದುಕೊಂಡು ಹೋಗೋ ಮಾರ್ಗ ಮಧ್ಯದಲ್ಲಿ ಅವರು ನಿಧನರಾಗಿದ್ದಾರೆ. ಎಸ್ ಜಯಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬಹಳ ಆಪ್ತರಾಗಿದ್ದರು ಎನ್ನಲಾಗಿದೆ.

Read More

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಇಂದು ಅವರ ನಿವಾಸಕ್ಕೆ ತೆರಳಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂತಿಮ ನಮನ ಸಲ್ಲಿಸಿ ಸಂತಾಪ ಸೂಚಿಸಿದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವರು ಎಸ್.ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ತಡರಾತ್ರಿ ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ತಡರಾತ್ರಿ 2.45 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 3 ಗಂಟೆಗೆ ವೈದ್ಯರು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಬಳಿಕ ಸಾವನ್ನಪ್ಪಿರುವುಗಿ ಘೋಷಿಸಿದ್ದಾರೆ. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

Read More

ಮಂಗಳೂರು : ಮಂಗಳೂರಿನಲ್ಲಿ ಭೀಕರವಾದಂತಹ ರಸ್ತೆ ಅಪಘಾತವಾಗಿದ್ದು, ವೇಗವಾಗಿ ಹೋಗುತ್ತಿದ್ದ ಬೈಕ್ ಒಂದು ಸ್ಕಿಡ್ ಆಗಿ ಬಿದ್ದಿದೆ. ಈ ವೇಳೆ ಹಿಂದಿನಿಂದ ಬಂದಂತಹ ಲಾರಿ ಬೈಕ್ ಸವಾರ ಮೇಲೆ ಹರಿದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಕಾವೂರು ಜಂಕ್ಷನ್ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಪ್ರಕಾಶ್ ಅಂಚನ್ ಎಂದು ಗುರುತಿಸಲಾಗಿದೆ. ಪ್ರಕಾಶ್ ಬೈಕ್ ಮೇಲೆ ಮರಕಡ ಕಡೆಯಿಂದ ಕಾವೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಹಿಂದಿನಿಂದ ವೇಗವಾಗಿ ಬಂದಂತಹ ಲಾರಿ ಅವರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಅಪಘಾತದ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ನಟ ಶಿವರಾಜ್ ಕುಮಾರ್ ಅವರು ಅಂತಿಮ ದರ್ಶನ ಪಡೆದಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಆಗಮಿಸಿದ ನಟ ಶಿವರಾಜ್ ಕುಮಾರ್ ಅವರು ಎಸ್.ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ತಡರಾತ್ರಿ ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ತಡರಾತ್ರಿ 2.45 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 3 ಗಂಟೆಗೆ ವೈದ್ಯರು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಬಳಿಕ ಸಾವನ್ನಪ್ಪಿರುವುಗಿ ಘೋಷಿಸಿದ್ದಾರೆ. ಶಿಸ್ತು ಅವರು ಮಾಡುವ ಕೆಲಸದಲ್ಲಿ ಇರುತ್ತಿತ್ತು. ನಮ್ಮ ಕುಟುಂಬಕ್ಕೂ ಅವರಿಗೂ ತುಂಬಾ ಆತ್ಮೀಯತೆ ಇತ್ತು. ವೀರಪ್ಪನ್ ಘಟನೆ ಆದಾಗ ಅವರು ನಮ್ಮ ಜೊತೆಗೆ ನಿಂತಿದ್ದರು. ಎಸ್.ಎಂ. ಕೃಷ್ಣಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಬೆಂಗಳೂರಿನಲ್ಲಿ ನಟ ಶಿವರಾಜ್ ಕುಮಾರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.

Read More

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಸಂಜೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಸ್ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಇಂದು ಸಂಜೆ ಕೆಪಿಸಿಸಿ ಕಚೇರಿಯಲ್ಲಿ 5:30ಕ್ಕೆ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಈ ಒಂದು ಶ್ರದ್ಧಾಂಜಲಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸೇರಿದಂತೆ ಪಕ್ಷದ ನಾಯಕರು ಸಚಿವರು, ಶಾಸಕರು,ಹಾಗೂ ಕಾರ್ಯಕರ್ತರು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

Read More

ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಸಂಬಂಧ ಬೆಸ್ಕಾಂ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರ ಮನೆ ಮತ್ತು ಇತರೆಡೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಹೌದು ಇಂದು ಬೆಳಂಬೆಳಗ್ಗೆ ಬೆಂಗಳೂರು, ಕೊಪ್ಪಳ ಸೇರಿದಂತೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರುಗಿ, ರಾಯಚೂರು, ಚಿತ್ರದುರ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ದಾಳಿ ನಡೆಸಿ ಮನೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. 10 ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಈಸ್ಟ್ ಸರ್ಕಲ್‌ ಬೆಸ್ಕಾಂನ ಸೂಪರಿಂಟೆಂಡೆಂಟ್ ಎಂಜಿನಿಯರ್ ಲೋಕೇಶ್ ಬಾಬು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಸಂತಪುರ ವಾರ್ಡ್ ಸಂಖ್ಯೆ 197 ರ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಬಿಬಿಎಂಪಿಯ ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ. ಸುನೀಲ್…

Read More

ಬೆಳಗಾವಿ : ರಾಜ್ಯದ ಎಲ್ಲಾ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ವೇತನ ಹೆಚ್ಚಳಕ್ಕೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಇಲಾಖೆಯ ಈ ಒಂದು ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಮೆಲ್ಮನೆಯಲ್ಲಿ ಬಿಜೆಪಿಯ ಡಾ. ಧನಂಜಯ ಸರ್ಜೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವ ಧನ ಮೊತ್ತವನ್ನು 2022ರಲ್ಲಿ ಆರ್ಥಿಕ ಇಲಾಖೆಯು ಪರಿಷ್ಕರಿಸಲು ಅನುಮತಿ ನೀಡಿತ್ತು. ಈಗ ಮತ್ತೆ ಪರಿಷ್ಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಆದರೆ ಈಗ ಮರು ಪರಿಶೀಲನೆಗಾಗಿ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದಾಗ, 48 ಸಾವಿರ ಅತಿಥಿ ಶಿಕ್ಷಕರಿದ್ದಾರೆ. ಕನಿಷ್ಠ ವೇತನಕ್ಕೆ ಅನುಗುಣವಾಗಿಯೂ ವೇತನ ನೀಡುತ್ತಿಲ್ಲ ಹೀಗಿರುವಾಗ ಗುಣಮಟ್ಟದ ಶಿಕ್ಷಣ ಹೇಗೆ ಸಾಧ್ಯ ಎಂದು ಡಾ. ಸರ್ಜಿ ಸಚಿವರಿಗೆ ಪ್ರಶ್ನಿಸಿದರು.

Read More