Subscribe to Updates
Get the latest creative news from FooBar about art, design and business.
Author: kannadanewsnow05
ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಳ್ಳಾರಿ ಜಿಲ್ಲೆಗೆ ಕೊಲೆ ಆರೋಪಿ ಆಗಿರುವಂತಹ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಹಾಗೂ ನಟ ದರ್ಶನ್ ಸಹೋದರಿ, ಭಾವ ಭೇಟಿ ನೀಡಿದ್ದರು. ಈ ವೇಳೆ ವಿನೀಶ್ ದರ್ಶನ್ ಅವರನ್ನು ತಬ್ಬಿಕೊಂಡು ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಬಿಕ್ಕಿ ಬಿಕ್ಕಿ ಅತ್ತಿರುವ ಪ್ರಸಂಗ ನಡೆಯಿತು. ಇಂದು ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್ ಭೇಟಿಯಾದರು. ಅಪ್ಪನ ಮುಖ ನೋಡುತ್ತಿದ್ದಂತೆ ಪುತ್ರ ವಿನೇಶ್ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಈ ವೇಳೆ ಮಗನನ್ನು ತಬ್ಬಿ ದರ್ಶನ್ ಸಂತೈಸಿದ್ದಾರೆ. ಇದೆ ಸಂದರ್ಭದಲ್ಲಿ ಸೆಂಟ್ರಲ್ ಜೈಲಿನಲ್ಲಿರುವ ಅಪ್ಪನ ಆರೋಗ್ಯವನ್ನು ವಿನೀಶ್ ವಿಚಾರಿಸಿದ. ಆದಷ್ಟು ಬೇಗ ಹೊರ ಬರುತ್ತೇನೆ ಆರಾಮಾಗಿರು ಎಂದು ದರ್ಶನ್ ಪುತ್ರನಿಗೆ ತಿಳಿಸಿದ್ದಾರೆ. ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಪುತ್ರ ವಿನೀಶ್ ಕಣ್ಣೀರಿಟ್ಟಿದ್ದಾನೇ. ಮಗ ಅಳುವುದನ್ನು ಕಂಡು ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಭಾವುಕರಾಗಿದ್ರು. ವಿಜಯಲಕ್ಷ್ಮಿ…
ಮೈಸೂರು : ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಅವರು ಮೈಸೂರಿನಲ್ಲಿ ನಾಡಹಬ್ಬ ವಿಶ್ವವಿಖ್ಯಾತ ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲಾ 5 ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.…
ಮೈಸೂರು : ಒಂದು ಕಡೆಗೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದರೆ, ಇನ್ನೊಂದೆಡೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ವಿಪಕ್ಷಗಳು ಆಗ್ರಹಿಸುತ್ತಿವೆ. ಇದರ ಮಧ್ಯ ಕಾಂಗ್ರೆಸ್ಸಿನ ಹಲವು ನಾಯಕರು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ. ಇದೀಗ ಇಂದು ದಸರಾ ಮಹೋತ್ಸವದ ವೇದಿಕೆಯಲ್ಲಿ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಇನ್ನೊಂದು ವರ್ಷ ದೇವಿ ನನಗೆ ಅಧಿಕಾರ ನಡೆಸಲು ಆರ್ಶೀವಾದ ಮಾಡಲಿ ಎಂದು ತಿಳಿಸಿದ್ದಾರೆ. ಹೌದು ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು,ಇನ್ನೊಂದು ವರ್ಷ ದೇವಿ ನನಗೆ ಅಧಿಕಾರ ನಡೆಸಲು ಆರ್ಶೀವಾದ ಮಾಡಲಿ. ಉತ್ತಮ ಕೆಲಸ ಮಾಡಲು ದೇವಿ ಇನ್ನೊಂದು ವರ್ಷವಾದರೂ ಆಶೀರ್ವದಿಸಲಿ. ಜನರ ಸೇವೆ ಮಾಡಲು ಆ ತಾಯಿ ಚಾಮುಂಡಿ ಶಕ್ತಿ ಕೊಡಲಿ ಎಂದು ಬೇಡಿಕೊಳ್ಳುವೆ ಎಂದಿದ್ದಾರೆ. ಇನ್ನೊಂದು ವರ್ಷದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿದು, ರಾಜ್ಯಕ್ಕೆ ಹೊಸ ಸಿಎಂ ಆಯ್ಕೆ ಆಗಲಿದ್ದಾರೆ ಎಂಬ ಮಾತಿಗೆ ಇದೀಗ ಖುದ್ದು ಸಿದ್ದರಾಮಯ್ಯ ಅವರ ಹೇಳಿಕೆಗಳಿಗೆ ರೆಕ್ಕೆ ಪುಕ್ಕ ಬಂದಂತಾಗಿದೆ.ಅಧಿಕಾರದ ಹಂಚಿಕೆ ಬಗ್ಗೆಯೇ ಸಿಎಂ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಇಡಿ ಹಾಗೂ ಲೋಕಾಯುಕ್ತ ತನಿಖೆಯನ್ನು ಆರಂಭಿಸಿದ್ದು ಅಲ್ಲದೆ, ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾದ 14 ಸೈಟ್ಗಳನ್ನು ಸಹ ವಾಪಸ್ ನೀಡಿದ್ದಾರೆ. ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದು, ಮುಡಾ ಸೈಟ್ ಹಂಚಿಕೆಯಾಗಿದ್ದು ಬಿಜೆಪಿ ಕಾಲದಲ್ಲಿ ಆಗ ಅವರು ಏನು ಲಡ್ಡು ತಿನ್ನುತ್ತಿದ್ದರ? ಎಂದು ಸಚಿವ ಜಮೀರ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಕೇಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿಲ್ಲ ಅದು ಬಿಜೆಪಿ ಕಾಲದಲ್ಲಿ ನಡೆದಿರುವಂತದ್ದು. ಸೈಡ್ ಕೊಟ್ಟಿರುವುದು ಬಿಜೆಪಿ ಕಾಲದಲ್ಲಿ ಆಗ ನಮ್ಮ ಸರ್ಕಾರ ಇರಲಿಲ್ಲ. ಆಗ ಬಿಜೆಪಿ ನಾಯಕರು ಏನು ಮಾಡುತ್ತಿದ್ದರು ಲಡ್ಡು ತಿನ್ನುತ್ತಿದ್ದಾರಾ? ಕೋರ್ಟ್ ನ ತೀರ್ಪು ಸ್ವಾಗತಿಸುವೆ. ತನಿಖೆ ಬಳಿಕ ಸತ್ಯಾಂಶ ಗೊತ್ತಾಗುತ್ತದೆ ಎಂದರು. ಇನ್ನು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು ಎಂದು ಜಿ ಟಿ ದೇವೇಗೌಡ ಹೇಳಿಕೆಗೆ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿ, ಜಿ ಟಿ…
ಬೆಂಗಳೂರು : ಇತ್ತೀಚಿಗೆ ಕಲ್ಬುರ್ಗಿಯಲ್ಲಿ ಉದ್ಯಮಿಗಳ ಮೇಲೆ 2 ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಅವರನ್ನು ಹನಿಟ್ರ್ಯಾಪ್ಗೆ ಸಿಲುಕಿಸಲು ಯತ್ನಿಸಿ, 6 ಕೋಟಿ ನೀಡುವಂತೆ ಒತ್ತಾಯಿಸಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ ಮೂವರು ಆರೋಪಿಗಳನ್ನು ವಿದ್ಯಾ ಬಿರಾದರ್ ಪಾಟೀಲ್, ಗಗನ್ ಹಾಗೂ ಸೂರ್ಯನಾರಾಯಣ್ ಎಂದು ತಿಳಿದುಬಂದಿದೆ. ಕಳೆದ ಆಗಸ್ಟ್ 31ರಂದು ಸ್ಬಾಮೀಜಿಗೆ ಕರೆ ಮಾಡಿದ ಆರೋಪಿತೆ ವಿದ್ಯಾ, ತಾನು ರಾಜ್ಯ ಮಾಹಿತಿ ಹಕ್ಕು ಆಯೋಗದ ಅಧ್ಯಕ್ಷೆ ಹಾಗೂ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ ಅವರ ಸಹೋದರಿಯಾಗಿದ್ದೇನೆ ಎಂದು ಹೇಳಿದ್ದಾಳೆ. ಬಳಿಕ ನಿಮಗೆ ಸಂಬಂಧಿಸಿ, ಮಹಿಳೆಯೊಂದಿಗಿನ ಆಶ್ಲೀಲ ವಿಡಿಯೋ ಕಳುಹಿಸಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಹೀಗಾಗಿ, ಕೂಡಲೇ ಭೇಟಿಯಾಗುವಂತೆ ಹೇಳಿದ್ದರು.ಇದರಂತೆ ಭೇಟಿಯಾದಾಗ ಸ್ವಾಮೀಜಿಯವರಿಗೆ ಸಂಬಂಧಿಸಿದ ಆಶ್ಲೀಲ ವಿಡಿಯೊಗಳಿವೆ ಎಂದು ಆರೋಪಿಗಳು ತಿಳಿಸಿದ್ದಾರೆ. ಈ ವಿಡಿಯೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಬಾರದು ಎಂದರೆ 6 ಕೋಟಿ ರೂ. ಹಣ…
ದಾವಣಗೆರೆ : ವಿದ್ಯುತ್ ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುತ್ತಿರುವ ವೇಳೆ ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿಯ ಮಳಲಕೆರೆ ಗ್ರಾಮದಲ್ಲಿ ನಡೆದಿದೆ. ಮೃತ ಲೈನ್ ಮ್ಯಾನ್ ಅನ್ನು ಮುತ್ತು(32) ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ಟಿಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ವಿದ್ಯುತ್ ಸಮಸ್ಯೆ ಎದುರಾಗಿತ್ತು ಹಾಗಾಗಿ ಗ್ರಾಮಸ್ಥರು ಕೆಇಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಇಂದು ಲೈನ್ ಮ್ಯಾನ್ ದುರಸ್ಥಿಗೆ ಎಂದು ಆಗಮಿಸಿದ್ದ. ಈ ವೇಳೆ ಹೈ ವೋಲ್ಟೇಜ್ ವಿದ್ಯುತ್ ನಿಂದಾಗಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಲೈನ್ಮ್ಯಾನ್ಗೆ ಕೈಗವಸು, ಶೂ, ಇತರೆ ಜೀವ ರಕ್ಷಕ ಅಗತ್ಯ ಸಲಕರಣೆಗಳಿರಬೇಕು ಆದರೆ ಕೆಇಬಿ ಸಿಬ್ಬಂದಿ ಯಾವುದೇ ಕೈಗವಸು ಶೂ ಇಲ್ಲ. ಲೈನ್ ಮ್ಯಾನ್ ಸಾವಿಗೆ ಕೆಇಬಿ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಯಚೂರು : ಜೀವನದಲ್ಲಿ ಮಾನಸಿಕವಾಗಿ ನೊಂದಿದ್ದರಿಂದ ದೇವಸ್ಥಾನದ ಮಹಿಳಾ ಅರ್ಚಕಿಯೊಬ್ಬರು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಡೊಂಗರಾಂಪೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದಲ್ಲಿ ಅರ್ಚಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಜುಳಾ (42) ಎನ್ನುವವರು ಒಂಟಿಯಾಗಿ ವಾಸಿಸುತ್ತಿದ್ದರು. ಜೀವನದಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತಂತೆ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಈಗಾಗಲೇ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಸ್ನೇಹಮಯಿ ಕೃಷ್ಣ ಅವರು ಇಡಿಗೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಬಳಿಕ ಇತ್ತೀಚಿಗೆ ಸಿಎಂ ಪತ್ನಿ ಪಾರ್ವತಿಯವರು ಮುಡಾದ 14 ಸೈಟ್ ಗಳನ್ನು ವಾಪಾಸ್ ನೀಡಿದ್ದರು. ಈ ವಿಚಾರವಾಗಿ ಇದರಲ್ಲಿ ಯತಿಂದ್ರ ಸಿದ್ದರಾಮಯ್ಯ ಅವರು ಪಾಲುದಾರರಾಗಿದ್ದಾರೆ ಎಂದು ದೂರುದಾರ ಪ್ರದೀಪ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು ದೂರುದಾರ ಪ್ರದೀಪ್ ಎನ್ನುವವರು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ನಾಶಪಡಿಸುವ ಸಾಧ್ಯತೆ ಇದೆ ಎಂದು ಆರೋಪಿಸಲಾಗಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಅಧಿಕಾರಿಗಳಿಗೆ ಮತ್ತೊಂದು ಮನವಿ ನೀಡಿದ್ದಾರೆ. ಹಾಗಾಗಿ ತನಿಖೆ ನಡೆಸುವಂತೆ ಇಡಿಗೆ ದೂರುದಾರ ಪ್ರದೀಪ್ ಮನವಿ ಮಾಡಿದ್ದಾರೆ. ಮುಡಾದ 14 ಸೈಟ್ ಸಂಬಂಧ ತನಿಖೆಗೆ ದೂರುದಾರ ಮನವಿ ಮಾಡಿದ್ದಾರೆ.ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಕೂಡ ಇದರಲ್ಲಿ ಪಾಲುದಾರರಾಗಿದ್ದಾರೆ.ಸೈಟ್ ವಾಪಸ್ ಪಡೆಯುವ ಮೂಲಕ ಸಾಕ್ಷ್ಯ ನಾಶ ಮಾಡುವ ಪ್ರಯತ್ನ ಮಾಡಲಾಗಿದೆ…
ಬೆಂಗಳೂರು : ಕಳೆದ ಸೋಮವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳ ಜೊತೆಗೆ ವಿದೇಶಿ ಪ್ರಜೆಗಳ ಬಂಧನವಾಗಿತ್ತು. ಇದೀಗ ಇಂದು ಮತ್ತೆ ಪೀಣ್ಯದಲ್ಲಿ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಬೆಂಗಳೂರಿನ ಪೀಣ್ಯದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಕುಟುಂಬವನ್ನು ಪೊಲೀಸರು ಪತ್ತೆಹಚ್ಚಿದ್ದು, ಮೂವರನ್ನು ಬಂಧಿಸಿದ್ದಾರೆ. ಇದರೊಂದಿಗೆ, ಕಳೆದ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿದಂತಾಗಿದೆ. ಹಿಂದೂ ಹೆಸರುಗಳನ್ನಿಟ್ಟುಕೊಂಡು ದಾವಣೆಗರೆಯಲ್ಲಿ ವಾಸವಿದ್ದ ಪಾಕಿಸ್ತಾನಿ ಪ್ರಜೆಗಳನ್ನು ನಿನ್ನೆ ತಾನೇ ಬಂಧಿಸಿದ್ದರು. ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ! ಇನ್ನು ಬಂಧಿತ ಪಾಕಿಸ್ತಾನ ಪ್ರಜೆಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಸ್ಪೋಟಕ ಮಾಹಿತಿ ಒಂದು ಹೊರಬಿದ್ದಿದ್ದು, ಪಾಕಿಸ್ತಾನದಿಂದ 15ಕ್ಕೂ ಹೆಚ್ಚು ಜನ ಭಾರತಕ್ಕೆ ಅಕ್ರಮವಾಗಿ ನುಸುಳಿ ಬಂದಿರುವುದು ಗೊತ್ತಾಗಿದೆ. ಹದಿನೈದಕ್ಕೂ ಅಧಿಕ ಮಂದಿ ಮೆಹದಿ ಫೌಂಡೇಷನ್ ಸೇರಿದ್ದರು. ಇವರೆಲ್ಲ ಯೂನಸ್ ಅಲ್ಗೋರ್ ಧರ್ಮ ಗುರುಗಳ ಪರ ಪ್ರಚಾರಕ್ಕಾಗಿ ಆಗಮಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್ ನೀಡಲಾಗಿದೆ ಎಂಬ ವಿಚಾರಕ್ಕೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ನನಗೆ ಇಡಿ ಆಗಲಿ ಇನ್ಯಾವುದೇ ತನಿಖಾ ಸಂಸ್ಥೆಯಿಂದ ನೋಟಿಸ್ ಬಂದಿಲ್ಲ ಎಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾಕೆ ನೋಟಿಸ್ ಬಂದಿದೆ ಅಂತ ಸುಳ್ಳು ಸುದ್ದಿ ಹರಡಿಸುತ್ತಿರಾ? ನಾನೇನು ಅಂತ ಪಾಪ ಮಾಡಿದೀನಿ ನನಗೆ ಗೊತ್ತಾಗ್ತಿಲ್ಲ ಈ ರೀತಿ ಸುಳ್ಳು ಸುದ್ದಿ ಹರಡಿಸಬಾರದು. ಸುಮ್ಮನೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಮನೆಗೆ ನೋಟಿಸ್ ಅಂಟಿಸೋಕೆ ಅದೇನೋ ಪೋಸ್ಟ್ ಆಫೀಸಾ? ಮನೆಯಿಂದ ನೇರವಾಗಿ ಇಲ್ಲಿಗೆ ಬಂದಿದ್ದೇನೆ ಈ ರೀತಿ ಒಬ್ಬ ವ್ಯಕ್ತಿಯ ತೇಜೋವಧೆ ಮಾಡಬಾರದು ಎಂದು ಮಾಧ್ಯಮಗಳಿಗೆ ಖಾರವಾಗಿ ಉತ್ತರ ನೀಡಿದರು.ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದರು. ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಚಿವ ಭೈರತಿ ಸುರೇಶ್ ಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.…