Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಲಂಚ ಪಡೆಯುವ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಲೋಕಾಯುಕ್ತ ಅಧಿಕಾರಿಯೇ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವುದು ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ ತಂದಿದೆ. ಸರ್ಕಾರಿ ನೌಕರರನ್ನು ಬೆದರಿಸಿ ಕೋಟ್ಯಾಂತರ ರೂಪಾಯಿ ಹಣ ವಸೂಲಿ ಮಾಡಿದ್ದ ಆರೋಪದ ಮೇಲೆ ಇದೀಗ ಲೋಕಾಯುಕ್ತ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಶ್ರೀನಾಥ್ ಜೋಶಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ಹೌದು ಲೋಕಾಯುಕ್ತ ಪೊಲೀಸರಿಂದ ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ ಮಾಡಲಾಗಿದೆ. ಲೋಕಾಯುಕ್ತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿರುವ ಹಿನ್ನೆಲೆಯಲ್ಲಿ ಇದೀಗ ಶ್ರೀನಾಥ್ ಜೋಶಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ನೀಡಿದೆ. ಆದರೆ ವಿಚಾರಣೆಗೆ ಹಾಜರಾಗುವುದಕ್ಕೂ ಮುನ್ನ ಶ್ರೀನಾಥ್ ಜೋಶಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಆಗಿ ಶ್ರೀನಾಜೋಷಿ ಸೇವೆ ಸಲ್ಲಿಸುತ್ತಿದ್ದರು. ನಿರೀಕ್ಷಣಾ ಜಾಮಿನ ಕೋರಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ನಾಳೆ ನಿಗದಿ ಮಾಡಿದೆ. ಇದೆ ವೇಳೆ ಲೋಕಾಯುಕ್ತ ಪೊಲೀಸರಿಗು ನೋಟಿಸ್ ನೀಡಿದೆ.
ಬೆಳಗಾವಿ : ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದಾಗಿನಿಂದಲೂ, ಪುರುಷರಿಗೆ ಬಸ್ನಲ್ಲಿ ಕುಳಿತುಕೊಳ್ಳಲು ಸೀಟ್ ಸಿಗುವುದೇ ಅಪರೂಪ ಅಂತದರಲ್ಲಿ ಇದೀಗ ಬಸ್ ನಲ್ಲಿ ಕಿಟಕಿ ಪಕ್ಕ ಸೀಟ್ ಗಾಗಿ ಯುವಕರ ಮಧ್ಯ ಗಲಾಟೆ ನಡೆದು ಓರ್ವ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೌದು ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಬಿಟಿಗೆ ಬರುತ್ತಿದ್ದ ಬಸ್ನಲ್ಲಿ ಕಿಟಕಿ ಪಕ್ಕದ ಸೀಟ್ಗಾಗಿ ಯುವಕರ ಮಧ್ಯೆ ಗಲಾಟೆ ನಡೆದಿದ್ದು, ಓರ್ವ ಯುವಕನಿಗೆ ಚಾಕು ಇರಿಯಲಾಗಿದೆ.ಗ್ರಾಮದ ಮಜ್ಜು ಸನದಿ(20) ಎಂಬ ಯುವಕ ಎದೆ ಭಾಗಕ್ಕೆ ಯುವಕರ ಗ್ಯಾಂಗ್ ಒಂದು ಚಾಕು ಇರಿದು ಪರಾರಿ ಆಗಿದೆ. ಹೊಟ್ಟೆಯ ಭಾಗಕ್ಕೆ ಚಾಕು ಇರಿದಿದ್ದರಿಂದ ತೀವ್ರವಾಗಿ ರಕ್ತಸ್ರಾವ ಆಗಿತ್ತು. ತಕ್ಷಣ ಗಾಯಾಳು ಯುವಕನನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆ ಐಸಿಯುನಲ್ಲಿ ಮಜ್ಜುಗೆ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆ ನಡೆದಿದ್ದು, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ 13ನೇ ಕ್ರಾಸ್ ನಲ್ಲಿರುವ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಟ್ಟಡದಿಂದ ಕೆಳಗೆ ಬಿದ್ದಿದ್ದರಿಂದ ವಿದ್ಯಾರ್ಥಿನಿಯ ತಲೆಗೆ ಗಂಭೀರವಾದ ಗಾಯಗಳಾಗಿವೆ. ವಿದ್ಯಾರ್ಥಿನಿಯನ್ನು ತಕ್ಷಣ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಿಗ್ಗೆ ತಿಂಡಿ ತಿನ್ನದೇ ಬಾಲಕಿ ಶಾಲೆಗೆ ಬಂದಿದ್ದಾಳೆ ಈ ವೇಳೆ ಕಟ್ಟಡದಿಂದ ಕೆಳಗೆ ನೋಡಿದಾಗ ತಲೆ ಸುತ್ತಿ ಕಟ್ಟಡದಿಂದ ಬಿದ್ದಿದ್ದಾಳೆ ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಆಸ್ಪತ್ರೆಗೆ ಸ್ಥಳೀಯ ಶಾಸಕ ಡಾ. ಅಶ್ವತ್ ನಾರಾಯಣ ಭೇಟಿ ನೀಡಿ, ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರು : ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ಇದೀಗ ಮತ್ತೊಂದು ಬಲಿಯಾಗಿದೆ. ವಿದ್ಯುತ್ ಶಾಕ್ ನಿಂದ ವ್ಯಕ್ತಿ ಒಬ್ಬರು ಸಾವನ್ನಪ್ಪಿದ್ದಾರೆ. ವಿದ್ಯುತ್ ದುರಸ್ತಿ ಮಾಡುತ್ತಿದ್ದ ಜಯರಾಮ್ ಎನ್ನುವವರು ಇದೀಗ ಸಾವನಪ್ಪಿದ್ದಾರೆ. ಬೆಂಗಳೂರಿನ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಸ್ಕಾಂ ಅಧಿಕಾರಿಗಳಿಂದ ಇದೀಗ ಮತ್ತೊಂದು ಎಡವಟ್ಟು ಸಂಭವಿಸಿದ್ದು, ಪದೇ ಪದೇ ವಿದ್ಯುತ್ ಕೈ ಕೊಟ್ಟಾಗ ಬೆಸ್ಕಾಂ ಸಿಬ್ಬಂದಿಗಳು ಮಾಡಬೇಕಾದ ಅಂತಹ ಕೆಲಸವನ್ನು ಜಯರಾಮ್ ಮಾಡಿದ್ದಾರೆ. ಆದರೆ ಜಯರಾಮ್ ಲೈಟ್ ಕಂಬ ದುರಸ್ತಿ ಮಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಘಟನೆ ಸಂಭಂದ ಸಾರ್ವಜನಿಕರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಬಳ್ಳಾರಿ : ಆತನ ಬಳಿ ಸುಮಾರು 90ಕ್ಕೂ ಹೆಚ್ಚು ಇಮೇಲ್ ಐಡಿ ಇತ್ತು. 10 ನಕಲಿ ಕಾರ್ಡ್ ಗಳು ಸಹ ಇದ್ದವು ಅಲ್ಲದೇ ಕಾಮುಕನ ಮೊಬೈಲ್ ನಲ್ಲಿ 13500 ಮಹಿಳೆಯರ ಅಶ್ಲೀಲ ಫೋಟೋ ಇತ್ತು. ಹೌದು ಬಳ್ಳಾರಿಯಲ್ಲಿ ಇದೀಗ ಮೋಸ್ಟ್ ವಾಂಟೆಡ್ ಕಾಮುಕನನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತ ಆರೋಪಿಯನ್ನು ಸಂಡೂರು ಪಟ್ಟಣದಲ್ಲಿ ಖಾಸಗಿ ಕಂಪನಿಯ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಕಾಮುಕ ಶುಭಂ ಕುಮಾರ್ ಎಂದು ತಿಳಿದುಬಂದಿದೆ. ಬಂಧಿತ ಶುಭಂ ನಗ್ನ ವಿಡಿಯೋ ಕರೆ ಮಾಡುವಂತೆ ಮಹಿಳೆಯರಿಗೆ ಆತ ಕಿರುಕುಳ ನೀಡುತ್ತಿದ್ದ. ಒಪ್ಪದಿದ್ದಾಗ ನಕಲಿ ಖಾತೆ ಸೃಷ್ಟಿಸಿ ಮಾನ ಹಾನಿ ಮಾಡುತ್ತಿದ್ದ. ಮಹಿಳೆಯರಿಗೆ ವಿಡಿಯೋ ಕರೆ ಮಾಡಿ ಎಡಿಟ್ ಮಾಡುತ್ತಿದ್ದ. ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಪೋಸ್ಟ್ ಮಾಡುತ್ತಿದ್ದ. ಶುಭ ಕುಮಾರ್ ನನ್ನು ಇದೀಗ ಅರೆಸ್ಟ್ ಮಾಡಲಾಗಿದೆ.ಕಳೆದ ಎರಡು ವರ್ಷದಿಂದ ಮುಂಬೈ ಪೊಲೀಸರು ಈತನ ಹಿಂದೆ ಬಿದ್ದಿದ್ದರು. ಬಂಧಿತ ಆರೋಪಿ ದೆಹಲಿಯಲ್ಲಿ ಆರೋಪಿ ಶುಭಂ ಕುಮಾರ್ ಡಿಪ್ಲೋಮಾ ಓದಿದ್ದ. ಬಳಿಕ ಬಳ್ಳಾರಿಯ…
ಮೈಸೂರು : ಮೈಸೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಖಾಸಗಿ ಶಾಲೆಯ ವಾಹನ ಪಂಚರಾಗಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿದೆ. ಪರಿಣಾಮ ವಾಹನದಲ್ಲಿದ್ದ 16 ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಇಂದು ಬೆಳಗ್ಗೆ ಪಿರಿಯಾಪಟ್ಟಣ ಬಳಿಯ ಕಂಪಲಪುರದ ಖಾಸಗಿ ಶಾಲೆಯ ವ್ಯಾನ್ ವಿವಿಧ ಗ್ರಾಮಗಳಿಂದ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೊರಟಿತ್ತು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಪಿರಿಯಾಪಟ್ಟಣ ತಾಲೂಕಿನ ಹಬ್ಬನಕುಪ್ಪೆ ಗ್ರಾಮದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿದೆ. ಗಾಯಗೊಂಡ ಮಕ್ಕಳಿಗೆ ಹುಣಸೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ಗ್ರಾಮಸ್ಥರು ಆಗಮಿಸಿ ಮಕ್ಕಳನ್ನು ಆಸ್ಪತ್ರೆಗೆ ಸೇರಿಸಿದರು.
ಬೆಳಗಾವಿ : ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣನ ಅಬ್ಬರದಿಂದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಅಲ್ಲದೆ ಇದುವರೆಗೂ ಭಾರಿ ಮಳೆಯಿಂದಾಗಿ ಅನೇಕರು ಬಲಿಯಾಗಿದ್ದಾರೆ. ಇದೀಗ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆ ನೀರು ಪಾಲಾಗಿದ್ದಾರೆ. ಹೌದು ಅಪಾಯ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದ ಕೃಷ್ಣ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆಯೊಬ್ಬರು ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಮಾಂಜರಿ ಗ್ರಾಮದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಮಾಂಜರಿ ಗ್ರಾಮದ ಸಂಗೀತಾ ಶಿವಾಜಿ ಮಾಂಜರೇಕರ್ (40) ಎಂದು ಗುರುತಿಸಲಾಗಿದೆ. ಕೆಲವು ದಿನಗಳಿಂದ ಕೃಷ್ಣಾ ನದಿ ತುಂಬಿ ಹರಿಯುತ್ತಿತ್ತು ಈ ಹಿನ್ನೆಲೆಯಲ್ಲಿ ಮಹಿಳೆ ಬಾಗಿನ ಅರ್ಪಿಸಲು ತೆರಳಿದ್ದರು. ಬಾಗಿನ ಅರ್ಪಿಸುವ ವೇಳೆ ಕಾಲು ಜಾರಿ ನದಿಗೆ ಬಿದ್ದಿದ್ದು, ನೀರು ರಭಸವಾಗಿ ಹರಿತ್ತಿದ್ದ ಪರಿಣಾಮ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯ ಅಂಕಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ನಟ ಶ್ರೀನಗರ ಕಿಟ್ಟಿ ಹಾಗೂ ನಟಿ ರಚಿತಾ ರಾಮ್ ಅವರ ನಟನೆಯ ಸಂಜು ವೆಡ್ಸ್ ಗೀತಾ-2 ಸಿನಿಮಾ ರಿಲೀಸ್ ಆಗಿತ್ತು. ಆದರೆ ಈ ಒಂದು ಚಿತ್ರದ ಪ್ರಚಾರಕ್ಕೆ ರಚಿತಾ ರಾಮ್ ಅವರು ಪ್ರಚಾರಕ್ಕೆ ಬರಲಿಲ್ಲ ಎಂದು ಚಿತ್ರದ ನಿರ್ದೇಶಕ ಫಿಲಂ ಚೇಂಬರಿಗೆ ದೂರ ನೀಡಿದರು ಇದೀಗ ನಟಿ ರಚಿತಾ ರಾಮ್ ಚಿತ್ರವೊಂದರ ಅಡ್ವಾನ್ಸ್ ಹಣ ಪಡೆದು ವಾಪಸ್ ನೀಡದ ಹಿನ್ನೆಲೆ ಫಿಲಂ ಚೇಂಬರ್ ನಲ್ಲಿ ಮತ್ತೊಂದು ದೂರು ದಾಖಲಾಗಿದೆ. ಹೌದು ಫಿಲಂ ಚೇಂಬರ್ ನಲ್ಲಿ ನಟಿ ರಚಿತಾ ರಾಮ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ‘ಉಪ್ಪಿ ರುಪ್ಪಿ’ ಸಿನೆಮಾಗಾಗಿ ನಟಿ ಅಡ್ವಾನ್ಸ್ ಪಡೆದಿದ್ದರು. ಹಣ ವಾಪಸ್ ನೀಡದ ಹಿನ್ನೆಲೆ ದೂರು ದಾಖಲಾಗಿದೆ. ಕಳೆದ 2 ತಿಂಗಳ ಹಿಂದೆಯೇ ದೂರು ದಾಖಲಾಗಿದೆ. 8 ವರ್ಷದ ಹಿಂದೆ ಉಪೇಂದ್ರ ರಚಿತಾ ನಟನೆಯಲ್ಲಿ ಈ ಒಂದು ಚಿತ್ರ ಮೂಡಿ ಬರಬೇಕಿತ್ತು. ಉಪ್ಪಿ ರಪ್ಪಿ ಚಿತ್ರದಲ್ಲಿ ಉಪೇಂದ್ರ ಜೊತೆಗೆ…
ಮೈಸೂರು : ಹೈದರಾಬಾದ್ ನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೈಸೂರಿನಲ್ಲಿರುವ ಜ್ಞಾನ ಸರೋವರ ಇಂಟರ್ನ್ಯಾಷನಲ್ ವಸತಿ ಶಾಲೆಗೆ ಬೆದರಿಕೆ ಕರೆ ಬಂದಿದೆ. ಮೈಸೂರು ತಾಲೂಕು ಭುಗತಹಳ್ಳಿ ಗ್ರಾಮದಲ್ಲಿರುವ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಹೈದರಾಬಾದಲ್ಲಿ ನಡೆದ ರೇಪ್ ಕೇಸ್ ಸಂಬಂಧ ದುಷ್ಕರ್ಮಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಹೆಸರು ಮತ್ತು ಫೋನ್ ನಂಬರ್ ನೀಡಿ ಬೆದರಿಕೆ ಮೇಲ್ ಸಂದೇಶ ಕಳುಹಿಸಿದ್ದಾನೆ. ಈ ಕುರಿತು ಶಾಲಾ ಆಡಳಿತ ಮಂಡಳಿ, ಮೈಸೂರು ಎಸ್ಪಿಗೆ ದೂರು ನೀಡಿದ್ದಾರೆ.
ತುಮಕೂರು : ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಇಂದು ತುಮಕೂರಿನಲ್ಲಿ ಒಂದೇ ದಿನ ಇಬ್ಬರು ವ್ಯಕ್ತಿಗಳು ಹೃದಯಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಹೃದಯಘಾತದಿಂದ ಓರ್ವ ಅರಣ್ಯಪಾಲಕ ಸಾವನ್ನಪ್ಪಿದ್ದರೆ, ಇನ್ನು ತುಮಕೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಹೃದಯಾಘಾತದಿಂದ ಅರಣ್ಯ ಪಾಲಕ ನವೀನ್ (31) ಸಾವನ್ನಪ್ಪಿದ್ದಾರೆ. ಬುಕ್ಕಾಪಟ್ಟಣದ ಅರಣ್ಯ ಪ್ರದೇಶದ ದಸೂಡಿಯಲ್ಲಿ ಈ ಒಂದು ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದಲ್ಲಿ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ನವೀನ್ ಸಾವನ್ನಪ್ಪಿದ್ದಾರೆ. ಇತ್ತೀಚಿಗೆ ಅಷ್ಟೇ ಮೃತ ನವೀನ್ ತುಮಕೂರಿಗೆ ವರ್ಗಾವಣೆಯಾಗಿದ್ದರು. ಮೂಲತಃ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಸಿಂಗಟಗೆರೆ ನಿವಾಸಿ ಎಂದು ತಿಳಿದುಬಂದಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಇನ್ನು ಮತ್ತೋರ್ವ ವ್ಯಕ್ತಿ ನ್ಯಾಯಾಲಯ ಆವರಣದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ನ್ಯಾಯಾಲಯ ಆವರಣದಲ್ಲಿ ಈ ಒಂದು ಘಟನೆ ನಡೆದಿದೆ. ಹೃದಯಘಾತದಿಂದ ತರಕಾರಿ ವ್ಯಾಪಾರಿ ರಂಗನಾಥ (35) ನ್ಯಾಯಾಲಯದ ಆವರಣದಲ್ಲಿ ಸಾವನ್ನಪ್ಪಿದ್ದಾರೆ.














