Author: kannadanewsnow05

ಬೆಳಗಾವಿ : ಇದು ಬೆಲೆ ಏರಿಕೆ ವಿರೋಧಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದು ಈ ಒಂದು ಸಮಾ ವೇಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಗೆ ಕಪ್ಪು ಬಾವುಟ ಪ್ರದರ್ಶಿಸಿ ಕೆಲಕಾಲ ಸಿಎಂ ಭಾಷಣಕ್ಕೆ ಅಡ್ಡಿಪಡಿಸಿದರು ದಕ್ಷಿಣ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡು ಬೆಳಗಾವಿಯ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು ಇದೀಗ ಕೋರ್ಟ್ ಆರು ಜನ ಬಿಜೆಪಿ ಕಾರ್ಯಕರ್ತರಿಗೆ ಜಾಮೀನು ಮಂಜೂರು ಮಾಡಿದೆ. ಹೌದು ಇಂದು ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಬಾವುಟ ಬ್ರದರ್ ಸಿಸಿದ್ದರು ತಕ್ಷಣ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು. ಇದೀಗ ಕಪ್ಪು ಬಾವುಟ ಪ್ರದರ್ಶಿಸಿದ ಆರು ಮಹಿಳೆಯರಿಗೆ ಜಾಮೀನು ಬಿಜೆಪಿ ಕಾರ್ಯಕರ್ತೆರಿಗೆ ಬೆಳಗಾವಿ ಕೋರ್ಟಿನಿಂದ ಇದೀಗ ಜಾಮೀನು ಮಂಜೂರು ಮಾಡಲಾಗಿದೆ. ಬೆಳಗಾವಿ ಜಿಲ್ಲಾ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷ ಶಿಲ್ಪಾ ಕೇಕಾರೆ, ಪವಿತ್ರ ಹಿರೇಮಠ, ಸುಮಿತ್ರ ಜಾಲಗಾರ, ರೇಷ್ಮಾ ಬಾರಮುತೆ, ಅನ್ನಪೂರ್ಣ ಹಾವಳ ಹಾಗು…

Read More

ಬೆಂಗಳೂರು : ಬಿಬಿಎಂಪಿ ಜಾಹಿರಾತು ಶುಲ್ಕ ಪಾವತಿಸಿದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ವಿರುದ್ಧ ಬಿಜೆಪಿಯ ಎನ್.ಆರ್ ರಮೇಶ ಅವರು ಖಾಸಗಿ ದೂರು ಸಲ್ಲಿಸಿದ್ದರು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ಬಳಿಕ ಸಂತೋಷ್ ಗಜಾನನ ಭಟ್ ವಿಚಾರಣೆ ಬಳಿಕ ಖಾಸಗಿ ದೂರು ವಜಾಗೊಳಿಸಿ ಆದೇಶ ನೀಡಿದ್ದಾರೆ. ಹೌದು ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಖಾಸಗಿ ದೂರು ವಜಾಗೊಂಡಿದ್ದು, ಈ ಕುರಿತು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ. ಬಿಜೆಪಿಯ ಎನ್ ಆರ್ ರಮೇಶ್ ಕುರಿತು ಖಾಸಗಿ ದೂರು ದಾಖಲಿಸಿದ್ದರು. 2013-2018ರ ಅವಧಿಯಲ್ಲಿ ಬಿಬಿಎಂಪಿಗೆ ಜಾಹೀರಾತು ಶುಲ್ಕ ಪಾವತಿಸಿದ ಆರೋಪದ ಹಿನ್ನೆಲೆ ದೂರು ದಾಖಲಿಸಿದ್ದರು. ಅಲ್ಲದೇ ಲೋಕಾಯುಕ್ತ ಕೂಡ ಪ್ರಕರಣ ಮುಕ್ತಾಯಗೊಳಿಸಿತ್ತು. ಇದೀಗ ಜನಪ್ರತಿನಿಧಿಗಳ ನ್ಯಾಯಾಲಯ ಕೂಡ ಈ ಒಂದು ಖಾಸಗಿ ದೂರು ವಜಾ ಗೊಳಿಸಿದೆ

Read More

ಶ್ರೀನಗರ : ಪಹಲ್ ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಭೀಕರ ಗುಂಡಿನ ದಾಳಿ ನಡೆಸಿದ ಪರಿಣಾಮ 26 ಜನ ಪ್ರವಾಸಿಗರು ಬಲಿಯಾಗಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಪ್ರವಾಸಿಗನೊಬ್ಬ ಜಿಪ್ ಲೈನ್ ಕ್ರಾಸ್ ಮಾಡುವಾಗಲೇ ಇನ್ನೊಬ್ಬ ಪ್ರವಾಸಿಗ ಕುಸಿದು ಬೀಳುತ್ತಿರುವ ಸರೆಯಾಗಿದೆ. ಹೌದು ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ಮಾಡುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಕುಸಿದು ಬೀಳುತ್ತಿರುವ ದೃಶ್ಯ ಸೆರೆಯಾಗಿದೆ. ಪ್ರವಾಸಿಗರೊಬ್ಬರ ಕ್ಯಾಮೆರಾದಲ್ಲಿ ದಾಳಿಯ ಭೀಕರ ದೃಶ್ಯ ಸೆರೆಯಾಗಿದೆ. ಜಿಪ್ ಲೈನ್ ಕ್ರಾಸ್ ಮಾಡುತ್ತಿದ್ದ ಪ್ರವಾಸಿಗನ ಮೊಬೈಲ್ ನಲ್ಲಿ ಗುಡ್ಡದಲ್ಲಿ ಓಡುತ್ತಿರುವಾಗ ವ್ಯಕ್ತಿ ಕುಸಿದು ಬಿದ್ದ ದೃಶ್ಯ ಸೆರೆಯಾಗಿದೆ.

Read More

ಬೀದರ್ : ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ಬಳಿಕ ಭಾರತ ಪಾಕಿಸ್ತಾನದ ವಿರುದ್ಧ ದಿಟ್ಟ ಕ್ರಮ ಕೈಗೊಂಡಿದ್ದು, ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಿದೆ. ಈ ವಿಚಾರವಾಗಿ ಸಚಿವ ರಹೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದು ಸಿಂಧೂ ನದಿ ನೈಸರ್ಗಿಕವಾಗಿ ಹರಿಯುತ್ತಿದ್ದು ಆ ನೀರನ್ನು ನಿಲ್ಲಿಸಲು ಪ್ರಧಾನಿ ಮೋದಿಗೆ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೈಸರ್ಗಿಕವಾಗಿ ಸಿಂಧೂ ನದಿಯ ನೀರು ಪಾಕಿಸ್ತಾನಕ್ಕೆ ಹರಿದು ಹೋಗುತ್ತಿದೆ. ಹಿಗಾಗಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಸಿಂಧೂ ನದಿ ನೀರು ಪಾಕಿಸ್ತಾನಕ್ಕೆ ಹರಿದು ಹೋಗುವುದನ್ನು ನಿಲ್ಲಿಸೋಕೆ ಆಗುವುದಿಲ್ಲ ಎಂದು ಸಚಿವ ರಹೀಂ ಖಾನ್ ಹೇಳಿದ್ದಾರೆ. ಸಿಂಧೂ ನದಿಯ ನೀರು ಪಾಕಿಸ್ತಾನಕ್ಕೆ ಹರಿಯುವುದನ್ನು ಬಂದ್ ಮಾಡಲು ಮೋದಿಗೆ ಬರಲ್ಲ. ಸಿಂಧೂ ನದಿ ನೀರು ಬಂದ್ ಮಾಡಬೇಕು ಎಂದರೆ 20 ವರ್ಷ ಬೇಕು. ವಾಟರ್ ಹಿಸಾಬ್ ಮಾಡಬೇಕು ಎದರೆ ಅದಕ್ಕೆ ಬೇಕಾದ ಡ್ಯಾಂ ಮತ್ತು ಕೆನಾಲ್‌ಗಳನ್ನು ನಿರ್ಮಾಣ ಮಾಡಬೇಕು. ನಾವು ಯಾವುದು ಕೆಲಸ ಮಾಡೋದಕ್ಕೆ ಸಾಧ್ಯವಾಗುತ್ತದೆಯೋ…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಇಂದು ಘೋರವಾದ ದುರಂತ ಸಂಭಾವಿಸಿದ್ದು, ಪಾಲಿಕೆಯ ತ್ಯಾಜ್ಯ ಸಂಗ್ರಹಿಸುವ ವಾಹನ ಹರಿದು 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾ ಗಾಂಧಿನಗರದಲ್ಲಿ ಇಂದು ನಡೆದಿದೆ. ವೇಗವಾಗಿ ಬಂದ ವಾಹನ ಹರಿದು ಹಮೀದಾ ಬಾನು ಕಬ್ಬಾಡೆ (6) ಎನ್ನುವ ಬಾಲಕಿ ಸ್ಥಳದಲ್ಲೇ ಸಾವನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ವಾಹನದ ಚಾಲಕನ ನಿರ್ಲಕ್ಷದಿಂದಲೇ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಲಾಗುತ್ತಿದ್ದು, ಹುಬ್ಬಳ್ಳಿ ಧಾರವಾಡ ಪಾಲಿಕೆ ಸಿಬ್ಬಂದಿ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಬಾಲಕಿ ಶವವನ್ನು ಪೊಲೀಸರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರೈಲ್ವೆ ಪರೀಕ್ಷೆಗೆ ಮಂಗಳಸೂತ್ರ ಧರಿಸಿದಂತೆ ನಿರ್ಬಂಧ ವಿಧಿಸಿದ ವಿಚಾರವಾಗಿ ನಿರ್ಬಂಧ ವಾಪಸ್ ಪಡೆದು ರೈಲ್ವೆ ಸಚಿವಾಲಯ ಇದೀಗ ಆದೇಶ ಹೊರಡಿಸಿದೆ. ನೇಮಕಾತಿ ಮಂಡಳಿಗಳಿಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ. ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಸೂಚನೆ ಹಿನ್ನೆಲೆಯಲ್ಲಿ ಬದಲಾವಣೆ ಮಾಡಲಾಗಿದೆ. ವಿವಾದದ ಬೆನ್ನೆಲೆ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಇದೀಗ ನಿರ್ಬಂಧ ವಾಪಸ್ ಪಡೆದುಕೊಳ್ಳಲಾಗಿದೆ.ಈ ಕುರಿತು ಸಚಿವ ವಿ. ಸೋಮಣ್ಣ X ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 28, 29 ಮತ್ತು 30 ಏಪ್ರಿಲ್ 2025ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ. ಈ ಬಗ್ಗೆ, ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು…

Read More

ಕೋಲಾರ : ಆಕಸ್ಮಿಕ ಬೆಂಕಿಯಿಂದ ಪೈಂಟ್ ಕಾರ್ಖಾನೆ ಒಂದು ಹೊತ್ತಿ ಉರಿದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಘಟನೆಯಲ್ಲಿ ಕೂಟ್ಯಾಂತರ ರೂಪಾಯಿ ವಸ್ತುಗಳು ಸುಟ್ಟು ಕರಗಲಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ಸೌತ್ ಫೀಲ್ಡ್ ಪೈಂಟ್ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ.ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಆದರೆ ಕೋಟ್ಯಂತರ ರೂಪಾಯಿ ಬೆಲೆಯ ದಾಸ್ತಾನು ಹಾಗೂ ಉಪಕರಣಗಳು ಬೆಂಕಿಗಗಾಹುತಿಯಾಗಿದೆ. ಬೆಂಕಿಯಿಂದಾಗಿ ಕೈಗಾರಿಕಾ ವಲಯದಲ್ಲಿ ದಟ್ಟವಾದ ಹೊಗೆ ಏರಿಯಾ ತುಂಬಾ ಅವರಿಸಿಕೊಂಡಿದೆ.ಮಾಹಿತಿ ತಿಳಿಯುತ್ತಿದ್ದಂತೆಯೇ ಕೋಲಾರ ಮತ್ತು ಮಾಲೂರಿ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

Read More

ಬೆಂಗಳೂರು : ಕಾಶ್ಮೀರದ ಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯಿಂದ 26 ಜನ ಪ್ರವಾಸಿಗರು ಬಲಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿಕೆ ನೀಡಿದ್ದು, ಭಾರತ ಏನಾದರೂ ಪಾಕಿಸ್ತಾನದ ಮೇಲೆ ಯುದ್ಧ ಮಾಡಿದರೆ ಒಂದೇ ವಾರದಲ್ಲಿ ಸರ್ವನಾಶವಾಗುತ್ತದೆ ಎಂದು ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏಕಾಏಕಿ ಪಾಕಿಸ್ತಾನ ಉಗ್ರರು ನಮ್ಮ ದೇಶಕ್ಕೆ ನುಗ್ಗಿ ದಾಳಿ ಮಾಡಿದ್ದಾರೆ. ನಾವೆಲ್ಲರೂ ಈ ಒಂದು ಘಟನೆ ಖಂಡಿಸಬೇಕಾದ ವಿಚಾರ. ಕೇಂದ್ರಕ್ಕೆ ನಮ್ಮ ನಾಯಕರು ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಮೊದಲು ಭದ್ರತೆ ಸರಿ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್ ಅಶೋಕ್ ಬಿ ವೈ ವಿಜಯೇಂದ್ರ ಮಾತನಾಡುತ್ತಿದ್ದಾರೆ. ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯ ಅಂತ ಒಪ್ಪಿಕೊಂಡಿದೆ. ಅನಿವಾರ್ಯ ಇದ್ದರೆ ಯುದ್ಧ ಮಾಡಿ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾಳೆ ಇಂದಲೇ ಯುದ್ಧ ಶುರು ಮಾಡಿ ಯಾರು ಬೇಡ ಅಂದ್ರು? ಉಗ್ರರ ಕ್ಯಾಂಪ್ ಮೇಲೆ ಬಾಂಬ್…

Read More

ಉತ್ತರಕನ್ನಡ : ಮೋಸ್ಟ ವಾಂಟೆಡ್ ಕ್ರಿಮಿನಲ್ ಹಾಗೂ ಭಯೋತ್ಪಾದಕರ ಜೊತೆಗೆ ಸಂಪರ್ಕ ಹೊಂದಿದ್ದ ಎನ್ನಲಾದ ಉತ್ತರ ಕನ್ನಡ ಜಿಲ್ಲೆಯ ಮೌಸಿನ್ ಶುಕುರ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಇದೀಗ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 1ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಆದೇಶ ನೀಡಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದ್ದು, ಉಳಿದ ಪ್ರಕರಣಗಳಲ್ಲಿ ಬಾಡಿ ವಾರೆಂಟ್ ಪಡೆಯಲು ಪೊಲೀಸರು ಸಜ್ಜಗಿದ್ದಾರೆ. ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿರುವ ಮೌಸಿನ್ ಶುಕುರ್ ಈತನ ವಿರುದ್ಧ ಉತ್ತರಕನ್ನಡ, ಬೆಂಗಳೂರು, ಮಂಗಳೂರಿನಲ್ಲಿ ಹಲವು ಕೇಸ್ಗಳಿವೆ ಭಯೋತ್ಪಾದಕ ಜೊತೆ ಮೋಸಿನ್ ಸಂಪರ್ಕ ಹೊಂದಿದ್ದ ಬಗ್ಗೆ ಮಾಹಿತಿ ಇದೆ. ಹೀಗಾಗಿ ಮೌಸಿನ್ ಶುಕುರ್ ನನ್ನು ವಿಚಾರಣೆ ಮಾಡಲು ಪೊಲೀಸರು ಹಾಗೂ ಎನ್ಐಎ ತಂಡ ಮುಂದಾಗಿದೆ. ಅಲ್ಲದೇ ಆತನಿಗೆ ಆಶ್ರಯ ಕೊಟ್ಟು ಸುಳ್ಳು ಮಾಹಿತಿ ನೀಡಿದವರನ್ನು ಕೂಡ ಬಂಧನ ಮಾಡಲಾಗಿದೆ. ಮೌಸಿನ್ ತಾಯಿ ಮತ್ತು ನಾಲ್ವರು ಸಹೋದರ ಸಂಬಂಧಿಗಳನ್ನು ಅರೆಸ್ಟ್ ಮಾಡಲಾಗಿದೆ. ಇದೀಗ…

Read More

ಬಾಗಲಕೋಟೆ: ಶಾಸಕ ವಿಜಯಾನಂದ ಕಾಶಪ್ಪನವರ್ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಯತ್ನಾಳ ವಿವಾದಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ. ಯತ್ನಾಳ್ ಒಬ್ಬ ಹುಚ್ಚು ನಾಯಿ, ಆತನಿಗೆ ದಯೆಯೂ ಇಲ್ಲ ಧರ್ಮವು ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ.ದಯವೇ ಧರ್ಮದ ಮೂಲವಯ್ಯ ಎಂದು ಬಸವಣ್ಣನವರ ವಚನ ಹೇಳಿ ಯತ್ನಾಳ್ ವಿರುದ್ಧ ಶಾಸಕ ವಿಜಯಾನಂದ ಕಾಶಪ್ಪನವರ ಆಕ್ರೋಶ ಹೊರ ಹಾಕಿದರು. ಯತ್ನಾಳ್ ಒಬ್ಬ ನರಪಿಳ್ಳೆ, ಯತ್ನಾಳ್ ಗೆ ದಯೆಯೂ ಇಲ್ಲ ಧರ್ಮವೂ ಇಲ್ಲ ಯತ್ನಾಳ್ ಒಬ್ಬ ಹುಚ್ಚು ನಾಯಿ ಗೊಡ್ಡು ಎಮ್ಮೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಕಿಡಿಕಾರಿದರು.

Read More