Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ವಿವಾಹವಾಗುವುದಾಗಿ ವಿಚ್ಛೇದಿತ ಮಹಿಳೆಯನ್ನು ನಂಬಿಸಿ ಆಕೆಯೊಂದಿಗಿನ ಖಾಸಗಿ ವಿಡಿಯೋ ಸೆರೆಹಿಡಿದು ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಯುವಕನನ್ನು ಬೆಂಗಳೂರಿನ ಕಾಡುಗೋಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಯುವಕನನ್ನು ಕಾಡುಗೋಡಿಯ ಶ್ರೀನಿವಾಸ್‌ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಆಂಧ್ರಪ್ರದೇಶ ಮೂಲದ ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಶ್ರೀನಿವಾಸ್‌ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂತ್ರಸ್ತೆಯು 2014ರಲ್ಲಿ ವಿವಾಹವಾಗಿದ್ದು, 2 ವರ್ಷ ಪತಿಯೊಂದಿಗೆ ಸಂಸಾರ ನಡೆಸಿದ್ದರು.ಕೌಟುಂಬಿಕ ಕಲಹದಿಂದ ದಂಪತಿ ನಡುವೆ ವೈಮನಸ್ಸು ಉಂಟಾಗಿತ್ತು. 2016ರಿಂದ ಪತಿಯಿಂದ ದೂರವಾಗಿದ್ದ ಸಂತ್ರಸ್ತೆ ವಿಚ್ಛೇದನ ಪಡೆದುಕೊಂಡಿದ್ದರು. ಇನ್ನು ಆರೋಪಿಯು ಕಾಡುಗೋಡಿಯಲ್ಲಿ ಡಿಜಿಟಲ್‌ ಸೇವಾ ಕೇಂದ್ರ ನಡೆಸುತ್ತಿದ್ದ. ಪತಿಯಿಂದ ದೂರವಾದ ನಂತರ ಜೀವನ ನಿರ್ವಹಣೆಗಾಗಿ ಕೆಲಸ ಹುಡುಕುತ್ತಿದ್ದ ಸಂತ್ರಸ್ತೆಗೆ ಆರೋಪಿಯ ಕೇಂದ್ರದಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ದೊರೆತಿತ್ತು. ಇತ್ತ ಶ್ರೀನಿವಾಸ್‌ ಮಹಿಳೆಯನ್ನು ಪರಿಚಯಿಸಿಕೊಂಡು ಅವರ ಜೊತೆಗೆ ಸಲುಗೆ ಬೆಳೆಸಿ ವಿವಾಹವಾಗುವುದಾಗಿ ನಂಬಿಸಿದ್ದ. ಬಾಡಿಗೆ ಮನೆ ಮಾಡಿ ಆಕೆಯೊಂದಿಗೆ ವಾಸಿಸುತ್ತಿದ್ದ. ಈ ನಡುವೆ ಮಹಿಳೆಯ ಗಮನಕ್ಕೆ ಬಾರದಂತೆ ಖಾಸಗಿ…

Read More

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಘೋರ ಘಟನೆ ನಡೆದಿದ್ದು, ಯುವಕನೊಬ್ಬ ಯುವತಿ‌ ಕಿರುಕುಳ ತಾಳಲಾರದೆ ವಿಷ ಸೇವಿಸಿ ಸೆಲ್ಫಿ ವಿಡಿಯೋ‌ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ‌ ರಾಜಘಟ್ಟ ಕೆರೆಯ ಬಳಿ ನಡೆದಿದೆ. ಮೃತ ಯುವಕನನ್ನು ಮಂಜುನಾಥ್ ಎಂದು ತಿಳಿದುಬಂದಿದೆ. ಸಾವಿಗೆ ಗಗನ ಎಂಬ ಯುವತಿ ಕಾರಣ ಎಂದು ಜೂ 13ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವತಿ ನಂಬಿಸಿ ಮೋಸ ಮಾಡಿದ್ದಾಳೆ. ಆಕೆಗೆ ಬೇರೋಬ್ಬನ‌ ಜೊತೆಯಲ್ಲಿ ಸಂಬಂಧವಿತ್ತು. ಆದ್ರೂ ಕೂಡ ನಾನು ಮದುವೆ ಆಗಲು ತೀರ್ಮಾನ‌ ಮಾಡಿದ್ದೆ. ಆದರೆ ಆಕೆ‌ ನನ್ನನ್ನು ಜೈಲಿಗೆ ಕಳಿಸಿದ್ದಳು. ಕಳೆದ ಫೆಬ್ರವರಿಯಲ್ಲಿ ಕುಂಬಳಗೋಡು ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಅದಲ್ಲದೆ ಬೇಲ್‌ ವಿಚಾರವಾಗಿ ಹಣ ಪಡೆದಿದ್ದಳು. ಹಣಕ್ಕೆ ಹೆಚ್ಚು ಬೇಡಿಕೆ‌ ಇಟ್ಟು ಕಿರುಕುಳ ನೀಡಿದ್ದಾಳೆ ಎಂದು ವಿಡಿಯೋದಲ್ಲಿ ಆತ್ಮಹತ್ಯೆಗೆ ಶರಣಾದ ಮಂಜುನಾಥ್ ಆರೋಪ ಮಾಡಿದ್ದಾನೆ. ವಿಷದ ಮಾತ್ರೆಗಳನ್ನು ಸೇವಿಸಿದ ಮಂಜುನಾಥ್ ನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.ಆದ್ರೆ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದು, ಮಂಜುನಾಥ್ ಕುಟುಂಬಸ್ಥರಿಂದ ಬೆಂಗಳೂರು…

Read More

ಕಲಬುರ್ಗಿ : ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆ ಅದರ ದೃಢಿಕರಣ ಪತ್ರಕ್ಕೆ ಗುತ್ತಿಗೆದಾರನ ಬಳಿ 1 ಲಕ್ಷ ಪಡೆಯುವ ವೇಳೆ ತಹಸೀಲ್ದಾರ್ ಕಚೇರಿಯ ಮುಜರಾಯಿ ವಿಭಾಗದ ಎಸ್ ಡಿ ಎ ನೌಕರನೊಬ್ಬ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಕಾಳಗಿಯಲ್ಲಿ ನಡೆದಿದೆ. ಕಾಳಗಿ ತಾಲೂಕಿನ ಕೋರವಾರ ಅಣವೀರಭದ್ರೇಶ್ವರ ದೇವಸ್ಥಾನದ ಪಕ್ಕದಲ್ಲಿ ಪಂಚಾಯತ್ ರಾಜ್ ಇಲಾಖೆಯ 8 ಲಕ್ಷ ರೂ. ಅನುದಾನದಡಿ ನಿರ್ಮಿಸಲಾದ ಸಿಸಿ ರಸ್ತೆ ಕಾಮಗಾರಿ ಪೂರ್ಣಗೊಂಡಿರುವ ಬಗ್ಗೆ ದೃಢೀಕರಣ ಪತ್ರ ನೀಡಲು ಒಂದು ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಗುತ್ತಿಗೆದಾರ ಅಣವೀರಯ್ಯ ಹಿರೇಮಠ ಅವರು ಕಾಮಗಾರಿ ಪೂರ್ಣಗೊಳಿಸಿರುವ ಪ್ರಮಾಣ ಪತ್ರ ನೀಡುವಂತೆ ತಹಸಿಲ್ ಕಚೇರಿಗೆ ಅಲೆದಾಡುತ್ತಿದ್ದ. ಆದರೆ ವಿಳಂಬ ಧೋರಣೆಯಿಂದ ಸುಸ್ತಾಗಿ ಲಕ್ಷ ರೂ. ಲಂಚ ಕೊಡಲು ದೂರುದಾರ ಒಪ್ಪಿದ್ದರು. ಲೋಕಾಯುಕ್ತ ಎಸ್‌ಪಿ ಬಿ.ಕೆ. ಉಮೇಶ ನೇತೃತ್ವದಲ್ಲಿ ಡಿವೈಎಸ್ಪಿ ಗೀತಾ ಬೇನಹಾಳ, ಶೀಲವಂತ ಹೊಸಮನಿ, ಪಿಐ ರಾಜಶೇಖರ ಅವರಿದ್ದ ತಂಡ ಕಾರ್ಯಾಚರಣೆಯಲ್ಲಿ…

Read More

ವಿಜಯನಗರ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರ ಸ್ಟೈರ್ ಕಾರಿಗೆ ಬೆಂಗಾಗಲು ಪಡೆ ವಾಹನ ಡಿಕ್ಕಿ ಹೊಡೆದಿರುವ ವಿಜಯನಗರ ಜಿಲ್ಲೆಯ ಕಾನಹೊಸಳ್ಳಿ ಬಳಿ ನಡೆದಿದೆ. ಆದರೆ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೆಂಗಾವಲು ಪಡೆಯ ಎ ಎಸ್ ಐ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಸ್ಥಾನ ಆಗ ಬದಲಾಗುತ್ತೆ ಈಗ ಬದಲಾಗುತ್ತೆ ಅಂತ ಹೇಳ್ತ ಎರಡುವರೆ ವರ್ಷ ಕಳೆಯಿತು. ಇದೀಗ ನವೆಂಬರ್ ನಲ್ಲಿ ಸಿಎಂ ಬದ್ಲಾಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ, ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳದೆ ಕಷ್ಟ ಆಗಿದೆ. ಸಿಎಂ ಬದಲಾವಣೆ ಅಂದ್ರೆ ಏನು ಹೇಳಬೇಕು ಎಂದು ಹೇಳಿಕೆ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸಚಿವ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟ ಆಗಿದೆ. ಸಿಎಂ ಬದಲಾವಣೆ ಆಗುತ್ತಾರೆ ಅಂದರೆ ನಾವೇನು ಹೇಳೋದು? ಸಿಎಂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮುಗಿದ ಅಧ್ಯಾಯವಾಗಿದೆ. ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ತೀರ್ಮಾನಿಸುತ್ತೆ ಎಂದು ಹೇಳಿಕೆ ನೀಡಿದರು.

Read More

ಬೆಂಗಳೂರು : ಇತ್ತೀಚಿಗೆ ನಟ ಶ್ರೀನಗರ ಕಿಟ್ಟಿ ಹಾಗೂ ನಟಿ ರಚಿತಾ ರಾಮ್ ಅವರ ನಟನೆಯ ಸಂಜು ವೆಡ್ಸ್ ಗೀತಾ-2 ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಈ ಒಂದು ಚಿತ್ರದ ಪ್ರಚಾರಕ್ಕೆ ನಟಿ ರಚಿತಾ ರಾಮ್ ಪ್ರಚಾರಕ್ಕೆ ಬರಲಿಲ್ಲ ಎಂದು ಇದೀಗ ಫಿಲಂ ಚೇಂಬರ್‌ಗೆ ನಟಿ ರಚಿತಾ ರಾಮ್ ವಿರುದ್ಧ ದೂರು ಸಲ್ಲಿಕೆಯಾಗಿದೆ. ಹೌದು ಚಿತ್ರದ ಪ್ರಚಾರಕ್ಕೆ ಬಾರದ ಹಿನ್ನೆಲೆಯಲ್ಲಿ ನಟಿ ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರಿಗೆ ದೂರು ನೀಡಲಾಗಿದೆ. ನಿರ್ದೇಶಕ ನಾಗಶೇಖರ್ ಹಾಗೂ ನಟ ಶ್ರೀನಗರ ಕಿಟ್ಟಿಯಿಂದ ಅದ್ದೂರಿ ಸಲ್ಲಿಕೆಯಾಗಿದೆ ನಾವು ಇಂತಹ ಕಲಾವಿದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಮ್ಮ ಸಿನಿಮಾಕ್ಕೆ ಒಂಚೂರು ಸಹಕಾರ ಕೊಟ್ಟಿಲ್ಲ ಎಂದು ಫಿಲಂ ಚೇಂಬರ್ ಗೆ ದೂರು ನೀಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ಮನವೊಲಿಸಿದರೂ ಸಹ ಚಿತ್ರ ಪ್ರಚಾರಕ್ಕೆ ಅವರು ಒಪ್ಪಿಲ್ಲ. ನಟ ಶಿವರಾಜ್ ಕುಮಾರ್, ಉಪೇಂದ್ರ, ಸುದೀಪ್ ಅವರೆಲ್ಲರೂ ಸಹ ಚಿತ್ರಕ್ಕೆ ಸಪೋರ್ಟ್ ಕೊಟ್ಟಿದ್ದಾರೆ. ಆದರೆ ನಟಿ ರಚಿತಾ ರಾಮ್ ಚಿತ್ರದ…

Read More

ಶಿವಮೊಗ್ಗ : ಕಾಮಗಾರಿಯೊಂದರ ಬಿಲ್ ಬಿಡುಗಡೆಗಾಗಿ 30 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಶಿವಮೊಗ್ಗ ಜಿಲ್ಲೆಯ ಸೊರಬ ಉಪ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ (RDWSD) ಸೆಕ್ಷನ್ ಆಫೀಸರ್ ಪರಶುರಾಮ ಎಚ್.ನಾಗರಾಳ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಿಲ್ ಬಿಡುಗಡೆ ಮಾಡಲು ಶೇ 3ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದ ಪರಶುರಾಮ ನಾಗರಾಳ, ಗುತ್ತಿಗೆದಾರರಿಂದ ಈಗಾಗಲೇ 1, 63 ಲಕ್ಷ ಪಡೆದಿದ್ದರು. ಇನ್ನೂ 70,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಗುತ್ತಿಗೆದಾರ ಲಿಂಗರಾಜ ಉಳ್ಳಾಗಡ್ಡಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿ, 30,000 ನೀಡುವಾಗ ದಾಳಿ ನಡೆದಿದೆ. ಗುತ್ತಿಗೆದಾರ, ಸೊರಬ ತಾಲ್ಲೂಕಿನ ಹಸವಿ ಗ್ರಾಮದ ಲಿಂಗರಾಜ ಉಳ್ಳಾಗಡ್ಡಿ ಅವರು ಚೀಲನೂರು ಹಾಗೂ ಕಣ್ಣೂರು ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತು ಪಿಎಂಶ್ರೀ ಯೋಜನೆಯಡಿ ಎಣ್ಣೆಕೊಪ್ಪ ಗ್ರಾಮದ ಶಾಲೆಯ ದುರಸ್ತಿ ಕಾಮಗಾರಿ ಕೈಗೊಂಡಿದ್ದರು.

Read More

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಪ್ರಕರಣಗಳ ಸಂಖ್ಯೆ 2,000 ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಟ್ಟು 56 ಹೊಸ ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 56 ಕೊರೊನ ಕೇಸ್ ಪತ್ತೆಯಾಗಿದ್ದು, ಇದುವರೆಗೂ ರಾಜ್ಯದಲ್ಲಿ ಕೋರೋನ ಸೋಂಕಿತರ ಸಂಖ್ಯೆ 2045 ಕ್ಕೆ ಏರಿಕೆಯಾಗಿದೆ. ಇನ್ನು ಕರೋನ ಆಕ್ಟಿವ್ ಪ್ರಕರಣಗಳ ಸಂಖ್ಯೆ 653 ಇವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭಾರಿ ಮಳೆ ಆಗುತ್ತಿದ್ದು, ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಮನೆಯೊಂದು ಖುಷಿ ಬಿದ್ದಿದೆ ಪರಿಣಾಮ ಪೂರ್ವ ಬಾಲಕ ಸಾವನ್ನಪ್ಪಿದ್ದು ಮಹಿಳೆಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಜೇವರ್ಗಿ ತಾಲೂಕಿನ ಗುಡೂರು ಎಂಬ ಗ್ರಾಮದಲ್ಲಿ ನಡೆದಿದೆ. ಮನೆ ಕುಸಿದು ಮೃತಪಟ್ಟ ಬಾಲಕನನ್ನು ಶಿವಪ್ಪ (10) ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ ಭಾಗಮ್ಮ (60) ಎನ್ನುವ ಮಹಿಳೆಗೆ ಗಂಭೀರವಾದ ಗಾಯಗಳಾಗಿವೆ. ಮಹಿಳೆನು ತಕ್ಷಣ ಕಲ್ಬುರ್ಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಕ್ಷಿಣಕನ್ನಡ : ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆಯಾಗಿತ್ತು. ಅದಾದ ನಂತರ ಕೆಲವೇ ದಿನಗಳಲ್ಲಿ ರೆಹಿಮಾನ್ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಹೀಗಾಗಿ ಈ ಪ್ರಕರಣಗಳಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಮಧ್ಯಪ್ರವೇಶಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೋಲೀಸರ ವಿರುದ್ಧ ತನಿಖೆ ನಡೆಸಿ 2 ವಾರದಲ್ಲಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತನಿಖಾ ವಿಭಾಗದ ಡಿಜಿಗೆ ಸೂಚಿಸಲಾಗಿದೆ. ಹೌದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಮನೆಗೆ ಇದೀಗ ಪೊಲೀಸರು ಭೇಟಿ ನೀಡಿದ್ದಾರೆ. ಅಲ್ಲದೆ ಈ ಒಂದು ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕೂಡ ಮಧ್ಯ ಪ್ರವೇಶ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಸರಾ ವಿರುದ್ಧ ತನಿಖೆಗೆ ಆದೇಶಿಸಿದೆ. ಪ್ರಕರಣದ ಸಮಗ್ರ ತನಿಖೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಇದೀಗ ಆದೇಶ ನೀಡಿದೆ. ರಾಷ್ಟ್ರೀಯ ಮಾನವ ಹಕ್ಕು ಆಯೋಗದ ತನಿಖಾ ವಿಭಾಗದ…

Read More