Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : ನೂರಾರು ವಿದ್ಯಾರ್ಥಿನಿಯರು ಹಾಗೂ ಯುವತಿಯರೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ವೀಡಿಯೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೂರಾರು ವಿದ್ಯಾರ್ಥಿನಿಯರು ಹಾಗೂ ಯುವತಿಯರೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ವೀಡಿಯೋಗಳು ಪತ್ತೆಯಾಗಿವೆ. ಬಂಧಿತನನ್ನು ಕಾರ್ಕಳ ನಿವಾಸಿ ಸೈಯದ್ ಎಂದು ಗುರುತಿಸಲಾಗಿದೆ. ಆರೋಪಿ ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶ ಕಳಿಸಿ ಕಿರುಕುಳ ಕೊಡುತ್ತಿದ್ದ. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಥಳಿಸಿ, ಮೊಬೈಲ್ ಪರಿಶೀಲಿಸಿದ್ದಾರೆ. ಈ ವೇಳೆ ನೂರಾರು ವಿದ್ಯಾರ್ಥಿನಿಯರು ಹಾಗೂ ಯುವತಿಯರೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ವೀಡಿಯೋಗಳು ಪತ್ತೆಯಾಗಿವೆ.ಸದ್ಯ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಇಂದು ಘೋರವಾದ ದುರಂತ ಸಂಭಾವಿಸಿದ್ದು, ಪಾಲಿಕೆಯ ತ್ಯಾಜ್ಯ ಸಂಗ್ರಹಿಸುವ ವಾಹನ ಹರಿದು 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾ ಗಾಂಧಿನಗರದಲ್ಲಿ ಇಂದು ನಡೆದಿದೆ. ವೇಗವಾಗಿ ಬಂದ ವಾಹನ ಹರಿದು ಹಮೀದಾ ಬಾನು ಕಬ್ಬಾಡೆ (6) ಎನ್ನುವ ಬಾಲಕಿ ಸ್ಥಳದಲ್ಲೇ ಸಾವನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ವಾಹನದ ಚಾಲಕನ ನಿರ್ಲಕ್ಷದಿಂದಲೇ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಲಾಗುತ್ತಿದ್ದು, ಹುಬ್ಬಳ್ಳಿ ಧಾರವಾಡ ಪಾಲಿಕೆ ಸಿಬ್ಬಂದಿ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಬಾಲಕಿ ಶವವನ್ನು ಪೊಲೀಸರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಈಗಾಗಲೇ ಕಲ್ಬುರ್ಗಿ ಹಾಗೂ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಇತ್ತೀಚಿಗೆ ಸಂಪುಟ ಸಭೆ ನಡೆಸಿದ್ದೇವೆ. ಹಾಗಾಗಿ ಮುಂದಿನ ಸಂಪುಟ ಸಭೆಯನ್ನು ನಂದಿ ಬೆಟ್ಟ ಹಾಗೂ ವಿಜಯಪುರದಲ್ಲಿ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೈರದೇನಹಳ್ಳಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೈರದೇನಹಳ್ಳಿ ಸರ್ಕಾರದ ಸಾಧನ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದಿನ ಸಂಪುಟ ಸಭೆಯನ್ನು ನಂದಿಬೆಟ್ಟ ಹಾಗು ವಿಜಯಪುರದಲ್ಲಿ ಬೆಳಗಾವಿ ವಿಭಾಗದ ಸಚಿವ ಸಂಪುಟ ಸಭೆ ಮಾಡುತ್ತೇವೆ. ಈಗಾಗಲೇ ಕಲಬುರ್ಗಿ ಹಾಗು ಮಲೆಮಾದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ಮಾಡಿದ್ದೇವೆ ಎಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ-2025ರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಭೌತಶಾಸ್ತ್ರದಲ್ಲಿ ಒಂದು ಪ್ರಶ್ನೆಗೆ ಕೃಪಾಂಕ ನೀಡಲಾಗಿದ್ದು, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರದಲ್ಲಿ ಕೆಲವು ಉತ್ತರಗಳನ್ನು ಪರಿಷ್ಕರಿಸಲಾಗಿದೆ. ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ. ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ಏ.16 ಮತ್ತು ಏ.17ರಂದು ಪರೀಕ್ಷೆಗಳನ್ನು ನಡೆಸಲಾಗಿದೆ. ಸದರಿ ಪರೀಕ್ಷೆಗಳ 16 ವರ್ಷನ್‌ಗಳ ಕೀ ಉತ್ತರಗಳನ್ನು ಏ.18ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ಜೊತೆಗೆ, ಸದರಿ ಕೀ-ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಏ.22ರ ಒಳಗಾಗಿ ಸಲ್ಲಿಕೆ ಮಾಡುವುದಕ್ಕೆ ಕಾಲಾವಕಾಶ ನೀಡಲಾಗಿತ್ತು. ಅದರಂತೆ ಇದೀಗ ವಿಷಯ ತಜ್ಞರ ಸಮಿತಿಗಳ ಪರಿಶೀಲನೆ ನಂತರ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರದ ವಿಷಯಗಳಲ್ಲಿ ಬದಲಾದ ಪ್ರಶ್ನೆಗಳ ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದೆ. ಸ್ವೀಕೃತವಾದ ಆಕ್ಷೇಪಣೆಗಳನ್ನು ತಜ್ಞರ ಸಮಿತಿ ಪರಿಶೀಲಿಸಿ ಇದೀಗ ಕೀ ಉತ್ತರಗಳನ್ನು ಪ್ರಕಟಿಸಿದೆ. ಗಣಿತ ಶಾಸ್ತ್ರದ ಕೀ ಉತ್ತರಗಳಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲವೆಂಬ ಮಾಹಿತಿಯನ್ನೂ ಕೆಇಎ ಪ್ರಕಟಣೆ ಮೂಲಕ ತಿಳಿಸಿದೆ.…
ಕೋಲಾರ : ಇಂದು ಕೋಲಾರದಲ್ಲಿ ಭೀಕರ ವಾದಂತಹ ಸರಣಿ ಅಪಘಾತ ಸಂಭವಿಸಿದ್ದು ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ, ಇವಂದು ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೋಲಾರ್ ಜಿಲ್ಲೆಯ ನರಸಾಪುರ ತಾಲೂಕಿನ ಬೆಳ್ಳೂರು ಬ್ರಿಡ್ಜ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರಿನ ಆರ್.ಟಿ ನಗರದ ನಿವಾಸಿ ಅಫ್ರೋಜ್ ಎಂದು ತಿಳಿದುಬಂದಿದೆ. ಬೆಳ್ಳೂರು ಗೇಟ್ ಬಳಿಯ ಚೆನ್ನೈ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 76ರಲ್ಲಿ ಇಂಡಿಕಾ, ಫಾರ್ಚುನರ್ ಹಾಗೂ ಪೊಲೋ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.ಘಟನೆಯಲ್ಲಿ ಗಾಯಗೊಂಡ ಐವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ವೇಮಗಲ್ ಠಾಣೆಯ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ
ಕೊಪ್ಪಳ : ಬೇಸಿಗೆಯ ಬಿಸಿಲಿನಿಂದ ಬಸವಳೆದಿದ್ದ ಜನರಿಗೆ ಇದೀಗ ವರುಣ ತಂಪಿರೆದಿದ್ದು ಇಂದಿನಿಂದ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದೀಗ ಚಿತ್ರದುರ್ಗ, ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ವರುಣ ಅಬ್ಬರಿಸುತ್ತಿದ್ದು ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಹೌದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಬಿರುಗಾಳಿ ಹಾಗೂ ಜೋರಾದ ಮಳೆಯಿಂದ ವಿದ್ಯುತ್ ಕಂಬಗಳು ದೊರೆಗೆ ಉರಳಿವೆ ಇನ್ನು ಕೆಲವೇ ಮರಗಳು ಸಹ ಧರೆಗೆ ಉರುಳಿವೆ ಎಂದು ತಿಳಿದು ಬಂದಿದೆ. ಬಿಂಜವಾಡಗಿ ಘಟ್ಟಿಗನೂರು ಸುತ್ತಮುತ್ತ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಬಿರುಗಾಳಿ ಹಾಗೂ ಮಳೆಗೆ ಮನೆಯ ಮೇಲ್ಚಾವಣಿಗಳು ಹಾರಿ ಹೋಗಿರುವ ಘಟನೆ ನಡೆದಿದೆ. ಗುಡುಗು ಮಿಂಚು ಸಹಿತ ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದೆ. ಅದೇ ರೀತಿ ಚಿತ್ರದುರ್ಗದಲ್ಲಿ ಕಳೆದ ಒಂದು ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ ಗುಡುಗು ಮಿಂಚು ಸಹಿತ ಮಳೆ ಸುರಿಯುತ್ತಿದೆ.…
ನವದೆಹಲಿ : ಜಮ್ಮು ಕಾಶ್ಮೀರದ ಪಹಲ್ಗಾನ್ ನಲ್ಲಿ ನಡೆದ ಉಗ್ರರ ನರಮೇಧದಲ್ಲಿ ಇಬ್ಬರು ಕನ್ನಡಿಗರು ಸೇರಿ 22 ಜನ ಬಲಿಯಾಗಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ತನಿಖೆ ಆರಂಭಿಸಿದ್ದು ತನಿಖೆಯಲ್ಲಿ ಸ್ಫೋಟಕವಾದ ವಿಷಯ ಬಹಿರಂಗವಾಗಿದೆ. ಹೌದು ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗೂಡಿನ ದಾಳಿ ನಡೆಸಿದರು ಈ ಒಂದು ಘಟನೆಗೆ ಸಂಬಂಧಿಸಿದಂತೆ ಎನ್ಐಎ ಇದೀಗ ತನಿಖೆ ಕೈಗೊಂಡಿದ್ದು ಉಗ್ರರ ಜೊತೆಗೆ ವಿದೇಶಿ ಉಗ್ರರೂ ಸಹ ಕೈಜೋಡಿಸಿರುವ ಶಂಕೆ ವ್ಯಕ್ತವಾಗುತ್ತಿದೆ. ಹಾಗಾಗಿ ಎನ್ಐಎ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಇನ್ನಷ್ಟು ಮಾಹಿತಿಯನ್ನು ಕಲೆ ಹಾಕುತ್ತಿದೆ.
ವಿಜಯನಗರ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮದಲ್ಲಿ ಸಿಡಿಲು ಬಡಿದು ಓರ್ವ ಕೂಲಿ ಕಾರ್ಮಿಕ ಹಾಗೂ ಆಕಳು ಸಾವನ್ನಪ್ಪಿದೆ. ಸಿಡಿಲಿಗೆ ಕೂಲಿಕಾರ್ಮಿಕ ಬೆಂಡಿಗೇರಿ ಹಾಲೇಶಪ್ಪ (48) ಸಾವನ್ನಪ್ಪಿದ್ದು ಕೊಳದಲ್ಲಿ ಆಗುವ ಮೀಸಲು ಹೋಗಿದ್ದಾಗ ಈ ಒಂದು ದುರ್ಘಟನೆ ಸಂಭವಿಸಿದೆ. ಇನ್ನು ರಾಯಚೂರಿನಲ್ಲಿ ಕೂಡ ದೇವಸ್ಥಾನಕ್ಕೆ ಇಂದು ಕುಟುಂಬದ ಸಮೇತ ಬಂದಿದ್ದ ಸಾಯಣ್ಣ ಎಂಬ ವ್ಯಕ್ತಿ ಸಿಡಿಲು ಬಡಿದು ಸಾವನ್ನಪ್ಪಿದ್ದು, ಅವರ ಪತ್ನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆ.ಗುಡದಿನ್ನಿ ಎಂಬಲ್ಲಿ ನಡೆದಿದೆ. ಸದ್ಯ ಮಾನ್ವಿ ಸರ್ಕಾರಿ ಆಸ್ಪತ್ರೆಯಲ್ಲಿ ಅವರ ಪತ್ನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಬೀದರ್ : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಗುಂಡಿನ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ 26 ಜನ ಬಲಿಯಾಗಿದ್ದಾರೆ. ಇದೆ ವಿಚಾರವಾಗಿ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಶ್ಮೀರಕ್ಕೆ ಸಿಎಂ ಸಿದ್ದರಾಮಯ್ಯ ಪುತ್ರ ಸಚಿವರಾದ ಮಹದೇವಪ್ಪ ಪುತ್ರ, ಜಮೀರ್ ಪುತ್ರ ಹೋಗಿದ್ರೆ ಜಮೀರ್ ಪುತ್ರ ಮಾತ್ರ ವಾಪಸ್ ಬರ್ತಿದ್ದ ಎಂದು ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ಯಾವ ಧರ್ಮದವರು ಎಂದು ಹೇಳಿ ಗುಂಡು ಹಾರಿಸಿದ್ದಾರೆ. ಹಾಗಾಗಿ ಇದೀಗ ಎಲ್ಲ ಹಿಂದೂಗಳು ಒಂದಾಗುವ ಸಮಯ ಬಂದಿದೆ. ಕಾಶ್ಮೀರಕ್ಕೆ ಸಿಎಂ ಸಿದ್ದರಾಮಯ್ಯ ಪುತ್ರ ಸಚಿವರಾದ ಮಹದೇವಪ್ಪ ಪುತ್ರ, ಜಮೀರ್ ಪುತ್ರ ಹೋಗಿದ್ರೆ ಜಮೀರ್ ಪುತ್ರ ಮಾತ್ರ ವಾಪಸ್ ಬರ್ತಿದ್ದ. ಸಿಎಂ ಸಿದ್ದರಾಮಯ್ಯ ಮಾದೇವಪ್ಪ ಪುತ್ರರಿಗೆ ಗುಂಡು ಹೊಡೆಯುತ್ತಿದ್ದರು. ಯಾಕಂದ್ರೆ ಸಿದ್ದರಾಮಯ್ಯ ಮಹಾದೇವಪ್ಪ ಮಕ್ಕಳು ಹಿಂದೂಗಳು. ಸಿಎಂ ಸಿದ್ದರಾಮಯ್ಯಗೆ ಮಾನ ಮರ್ಯಾದೆ ಇಲ್ಲ. ಪಾಕಿಸ್ತಾನ ಏಜೆಂಟರಂತೆ ವರ್ತಿಸುತ್ತಾರೆ. ಯುದ್ಧ ಬೇಕಾಗಿಲ್ಲ ಎಂದು ಹೇಳೋಕೆ ಸಿದ್ದರಾಮಯ್ಯ ಯಾರು? ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ…
ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಏಪ್ರಿಲ್ 22 ರಂದು ನಡೆದಿದ್ದ ಉಗ್ರರ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಇದೀಗ NIA ತನಿಖೆ ಆರಂಭಿಸಿದ್ದು, ದಾಳಿಯ ಕುರಿತು ತನಿಖೆ ಶುರು ಮಾಡಿರುವ NIA ಗೆ ಪ್ರಮುಖ ಸಾಕ್ಷಿ ಸಿಕ್ಕಿದೆ. ದಾಳಿ ನಡೆಯುವ ವೇಳೆ ಬೈಸರನ್‌ನಲ್ಲಿ ಪ್ರವಾಸಿಗರಿಗಾಗಿ ರೀಲ್ಸ್ ಚಿತ್ರೀಕರಿಸುತ್ತಿದ್ದ ಸ್ಥಳೀಯ ವಿಡಿಯೋ ಗ್ರಾಫರ್ ಪ್ರಮುಖ ಸಾಕ್ಷಿದಾರನಾಗಿ ಮುಂದೆ ಬಂದಿದ್ದಾರೆ ಎನ್ನಲಾಗಿದೆ. ಹೌದು ಕೇಂದ್ರ ಗೃಹಸಚಿವಾಲಯ ನೀಡಿದ ನಿರ್ದೇಶದ ಮೇರೆಗೆ ಏ.22ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿದೆ. ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳ ತಂಡದೊಂದಿಗೆ ಘಟನಾ ಸ್ಥಳದಲ್ಲೇ ಬೀಡುಬಿಟ್ಟಿರುವ ಎನ್‌ಐಎ ಸಾಕ್ಷ್ಯ ಹುಡುಕಾಟವನ್ನು ತೀವ್ರಗೊಳಿಸಿದೆ. ಈ ಮಧ್ಯೆ ಪ್ರಮುಖ ಸಾಕ್ಷಿಯೊಂದು ಎನ್‌ಐಎಗೆ ಸಿಕ್ಕಿದೆ. ಸದ್ಯ ಲಭ್ಯವಾಗಿರುವ ವಿಡಿಯೋ ಪ್ರಕಾರ, ನಾಲ್ವರು ಉಗ್ರರು ಎರಡು ಗುಂಪುಗಳಾಗಿ ಬೇರ್ಪಟ್ಟಿದ್ದರು. ಇಬ್ಬರು ಹುಲ್ಲುಗಾವಲು ಪ್ರದೇಶದ ಎರಡೂ ಬದಿ ಅವಿತುಕೊಂಡಿದ್ದರೆ, ಮತ್ತಿಬ್ಬರು ಅಲ್ಲೇ ಇದ್ದ ತಿಂಡಿ ಅಂಗಡಿ ಬಳಿ ಅವಿತಿದ್ದರು. ಮಧ್ಯಾಹ್ನ 2.30ರ ಸುಮಾರಿಗೆ, ಅಂಗಡಿಗಳ…













