Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಲೋಕಾಯುಕ್ತ ಹಾಗೂ ಎಸ್ಐಟಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದರೆ ಅವರದ್ದೇ ಆದ ಕೆಲವು ಕ್ರಮಗಳನ್ನು ಪೊಲೀಸ್ನವರು ತೆಗೆದುಕೊಳುತ್ತಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಇಂದು ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ. ಪರಮೇಶ್ವರ್, ಎಚ್.ಡಿ. ಕುಮಾರಸ್ವಾಮಿ ಮತ್ತು ಎಡಿಜಿಪಿ ಚಂದ್ರಶೇಖರ್ ಜಟಾಪಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಡಿಜಿಪಿ ಚಂದ್ರಶೇಖರ್ ಗಾದೆಯ ಅರ್ಥದಲ್ಲಿ ಹೇಳಿದ್ದಾರೆ ಆದರೆ ಕುಮಾರಸ್ವಾಮಿ ಅವರು ನನಗೆ ಅಂದಿದ್ದಾರೆ ಅಂತ ಯಾಕೆ ಅನ್ಕೋ ಬೇಕು? ಅವರು ಹೇಳಿದ್ದು ಬರ್ನಾಡ್ ಷಾ ಬಗ್ಗೆ ಆದರೆ ಕುಮಾರಸ್ವಾಮಿ ನನಗೆ ಹೇಳಿದ್ದಾರೆ ಅಂತ ತಿಳಿದುಕೊಳ್ಳುವುದು ತಪ್ಪು ಎಂದು ತಿಳಿಸಿದರು. ಚಂದ್ರಶೇಖರ್ ನೇತೃತ್ವದ ಎಸ್ಐಟಿಯನ್ನು ಕಾನೂನು ಪ್ರಕಾರವೇ ರಚಿಸಲಾಗಿದೆ.ಅವರು ಅವರ ಕೆಲಸ ಮಾಡ್ತಾರೆ. ಕೆಲಸಕ್ಕೆ ಅಡ್ಡಿಪಡಿಸಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು. ಎಡಿಜಿಪಿ ಚಂದ್ರಶೇಖರ ಅವರ ಮೇಲೆ ಎಚ್ಡಿ ಕುಮಾರಸ್ವಾಮಿ ಗಂಭೀರವಾದ ಆರೋಪ ಮಾಡಿದ್ದರು. ಇದಕ್ಕೆ ಚಂದ್ರಶೇಖರ್ ಅವರು ತಮ್ಮ ಸಿಬ್ಬಂದಿಗೆ ಪತ್ರ ಬರೆಯುವ ಮೂಲಕ ಹೆಚ್ಡಿ ಕುಮಾರಸ್ವಾಮಿಯವರಿಗೆ ತಿರುಗೇಟು…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಉಳಿಸಲು ಈಗಾಗಲೇ ಹಲವರು ಸಾವಿರಾರು ಕೋಟಿ ರೂಪಾಯಿ ರೆಡಿ ಮಾಡಿ ಇಟ್ಟುಕೊಂಡಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕವಾದ ಹೇಳಿಕೆ ನೀಡಿದ್ದರು. ಯತ್ನಾಳ್ ಹೇಳಿಕೆಗೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಹೇಳಿಕೆ ಕುರಿತಾಗಿ ಐಟಿ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ಹೇಳಿಕೆ ಕುರಿತು ಚರ್ಚಿಸಲು ಕಾಂಗ್ರೆಸ್ ಕಾನೂನು ತಂಡದ ಸಭೆ ಕರೆದಿದ್ದೇನೆ. 1,200 ಕೋಟಿ ರೂಪಾಯಿ ರೆಡಿಯಾಗಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿ ಕಡೆಯಿಂದ ಈ ಹಣ ರೆಡಿಯಾಗಿದೆ ಎಂಬ ಮಾಹಿತಿ ಇದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಈ ಮಾಹಿತಿಯನ್ನು ತಿಳಿಸಿದ್ದೇನೆ. ಇದು ತೆರಿಗೆ ಇಲಾಖೆ (IT) ಹಾಗೂ ಇಡಿ (ED) ತನಿಖೆಯ ವ್ಯಾಪ್ತಿಗೆ ಬರುವ ವಿಚಾರ. ದೂರು ನೀಡುವ ಸಂಬಂಧ ಇಂದು ಚರ್ಚೆ ಮಾಡಲಿದ್ದೇನೆ ಎಂದರು. ಯತ್ನಾಳ್ ಹೇಳಿದ್ದೇನು? ಇತ್ತೀಚೆಗೆ ದಾವಣಗೆರೆಯಲ್ಲಿ ಬಿಜೆಪಿ ಬಂಡಾಯ ನಾಯಕರ ಗುಪ್ತಸಭೆ…
ಬೆಂಗಳೂರು : ನಿರ್ಲಕ್ಷದ ಚಾಲನೆ ಹಾಗೂ ಅತಿ ವೇಗದ ಚಾಲನೆಯಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಅನೇಕರು ಬಲಿಯಾಗುತ್ತಿರುತ್ತಾರೆ. ಇದೀಗ ಇಂದು ಬಿಎಂಟಿಸಿಗೆ ಮತ್ತೊಂದು ಜೀವ ಹೋಗಿದ್ದು, ಬಿಎಂಟಿಸಿ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ಸಾವನಪ್ಪಿರುವ ಘಟನೆ ಬೆಂಗಳೂರಿನ ಯಶವಂತಪುರದ ಬಳಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಯಶವಂತಪುರದ ಮಾರಮ್ಮ ದೇವಸ್ಥಾನದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಎಂಎಸ್ ಪಾಳ್ಯದಿಂದ ಯಶವಂತಪುರ ಕಡೆಗೆ ಬಿಎಂಟಿಸಿ ಬಸ್ ಬರುತ್ತಿತ್ತು, ಈ ವೇಳೆ ಬೈಕ್ ಸವಾರನೊಬ್ಬ ಕಾರಿಗೆ ತನ್ನ ಬೈಕ್ ಟಚ್ ಮಾಡಿದ್ದರಿಂದ ಬಸ್ ಚಕ್ರದ ಕೆಳಗೆ ಬೈಕ್ ಸವಾರ ಬಿದ್ದಿದ್ದಾನೆ. ಈ ವೇಳೆ ಬಿಎಂಟಿಸಿ ಬಸ್ ಬೈಕ್ ಸವಾರನ ಮೇಲೆ ಹರಿದು ಸ್ಥಳದಲ್ಲೇ ಸವಾರ ಮೃತಾಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಯಶವಂತಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಎಡಿಜಿಪಿ ಚಂದ್ರಶೇಖರ್ ನಡುವೆ ಇದೀಗ ವಾಕ್ಸಮರ ತಾರಕಕ್ಕೆ ಏರಿದ್ದು, ಇದರ ಮಧ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಹಾಗೂ ಎಸ್ಐಟಿ ಅಧಿಕಾರಿಗಳು ಎಚ್ ಡಿ ಕುಮಾರಸ್ವಾಮಿ ಅವರ ಜಾಮೀನು ರದ್ದತಿಗೆ ಕೋರ್ಟಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೌದು ಕುಮಾರಸ್ವಾಮಿಯವರ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸದ್ಯ ಶ್ರೀ ಸಾಯಿ ಮಿನರಲ್ಸ್ ಪ್ರಕರಣದಲ್ಲಿ ಎಚ್ ಡಿ ಕುಮಾರಸ್ವಾಮಿ ಜಾಮೀನೀನಲ್ಲಿ ಹೊರಗಡೆ ಇದ್ದಾರೆ. ಹೀಗಾಗಿ ಈ ಒಂದು ಜಾಮೀನನ್ನು ರದ್ದುಗೊಳಿಸಿ ಎಂದು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಲೋಕಾಯುಕ್ತ ಹಾಗೂ ಎಸ್ಐಟಿ ಇಂದ ಹೆಚ್ಡಿ ಕುಮಾರಸ್ವಾಮಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾಮೀನು ರದ್ದು ಕೋರಿ ಲೋಕಾಯುಕ್ತ ಅಧಿಕಾರಿಗಳು ಹಾಗೂ ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತಹ ಸಾಧ್ಯತೆ ಇದೆ ಎಂದು ತಿಳಿದು…
ಬೆಂಗಳೂರು : ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಅವಾಚ್ಯ, ಅಸಭ್ಯ ಮತ್ತು ಅವಹೇಳನಕಾರಿ ಪದಬಳಕೆ ಮಾಡಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ನೇತೃತ್ವದ ಜೆಡಿಎಸ್ ನಿಯೋಗ ಮುಖ್ಯ ಕಾರ್ಯದರ್ಶಿ ಅವರಿಗೆ ದೂರು ನೀಡಿ, ಅಮಾನತುಗೊಳಿಸುವಂತೆ ಒತ್ತಾಯಿಸಿದೆ. ಹೌದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಅವಾಚ್ಯ, ಅಸಭ್ಯ ಮತ್ತು ಅವಹೇಳನಕಾರಿ ಪದಬಳಕೆ ಮಾಡಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಪೊಲೀಸ್ ಸೇವೆಯಿಂದ ಅಮಾನತ್ತುಗೊಳಿಸಿ ಎಂದು ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರದಲ್ಲಿ ಎಂ.ಚಂದ್ರಶೇಖರ್ ಮೂಲತಃ ಹಿಮಾಚಲ ಪ್ರದೇಶ ಐ.ಪಿ.ಎಸ್ ಕೇಡರ್ಗೆ ಸೇರಿದವರಾಗಿದ್ದಾರೆ. ನಂತರ, ತನ್ನ ಪತ್ನಿಯ ಅನಾರೋಗ್ಯ ಮತ್ತು ಹಿಮಾಚಲ ಪ್ರದೇಶದ ವಾತಾವರಣ ಮತ್ತು ಹವಾಗುಣ ಹೊಂದುವುದಿಲ್ಲ ಎನ್ನುವ ಕುಂಟು ನೆಪ ಹೇಳಿ ಮತ್ತು ಸುಳ್ಳು…
ಮೈಸೂರು : ಇಂದು ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಶೋಕಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ 245 ವೀಳ್ಯದೆಲೆ ಬೆಳೆಗಾರರಿಗೆ ತಲಾ 0.5 ಗುಂಟೆ ಜಾಗ ನೀಡುವುದು ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಡಾ ಹಗರಣದಲ್ಲಿ ಒಂದೆರಡು ತಿಂಗಳು ತೊಂದ್ರೆ ಕೊಡಬಹುದು ಅಷ್ಟೆ ಆದರೆ ಯಾವುದೇ ಷಡ್ಯಂತ್ರಗಳಿಗೆ ಹೆದರಲ್ಲ ಎಂದು ಗುಡುಗಿದರು. ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ. ಆತ್ಮಸಾಕ್ಷಿಯಾಗಿ ನಾನು ಸರಿಯಾಗಿದ್ದೀನಿ. ಹೀಗಾಗಿ ನಾನು ಹೆದರುವ, ಜಗ್ಗುವ-ಬಗ್ಗುವ ಪ್ರಶ್ನೆಯೇ ಇಲ್ಲ. ಜನರ ಆಶೀರ್ವಾದ, ನಿಮ್ಮೆಲ್ಲರ ಬೆಂಬಲ ಇರುವವರೆಗೂ ನಾನು ಅಲ್ಲಾಡುವುದಿಲ್ಲ. ಬಹಳ ಜನ ಬಂದು ಬಂದು ನನಗೆ, ಧೈರ್ಯವಾಗಿರಿ, ರಾಜೀನಾಮೆ ಕೊಡಬೇಡಿ ಅಂತಾರೆ. ನಾನು ಷಡ್ಯಂತ್ರಗಳಿಗೆ ಹೆದರುವವನೇ ಅಲ್ಲ. ರಾಜಕೀಯವಾಗಿ ನನಗೆ ಒಂದೆರಡು ತಿಂಗಳು ತೊಂದರೆ ಕೊಡಬಹುದು. ಆದ್ರೆ, ಕಾನೂನಾತ್ಮಕವಾಗಿ ನಾನು ಗೆದ್ದೇ ಗೆಲ್ಲುತ್ತೇನೆ. ರಾಜಕೀಯವಾಗಿ ಇದನ್ನೆಲ್ಲಾ ಎದುರಿಸಿ ನಿಲ್ಲೋದು ನನಗೆ ಗೊತ್ತಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಅಶೋಕಪುರಂನ ಅಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲಾ ಕಾರ್ಯಕ್ರಮಗಳ…
ಶ್ರೀನಗರ : ಇಂದು ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಎಐಸಿಸಿ ಮಲ್ಲಿಕಾರ್ಜುನ ಖರ್ಗೆಯವರು, ಅಸ್ವಸ್ಥರಾಗಿ ಕುಸಿದು ಬಿದ್ದಿರುವ ಘಟನೆ ನಡೆದಿತ್ತು. ಇದೇ ವೇಳೆ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತದೆ ಎಂಬ ಹೇಳಿದ್ದು ಕೂಡ ಭಾರೀ ವೈರಲ್ ಆಗುತ್ತಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ವಿಡಿಯೋ ಸದ್ಯ ಬಾರಿ ವೈರಲ್ ಆಗಿದೆ.ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದರು.ಬಳಿಕ ಸುಧಾರಿಸಿಕೊಂಡು ಮಾತನಾಡಲು ಶುರು ಮಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತೆ ಎಂದು ಹೇಳಿದ್ದು, ಈ ಹೇಳಿಕೆ ಸದ್ಯ ವೈರಲ್ ಆಗಿದೆ. ಅಸ್ವಸ್ಥಗೊಂಡಿದ್ದ ಅವರು ಬಳಿಕ ಸುಧಾರಿಸಿಕೊಂಡು ಮತ್ತೆ ಭಾಷಣ ಆರಂಭಿಸಿದರು. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಈ ಹೇಳಿಕೆಯು ಬಾಯಿತಪ್ಪಿನಿಂದ ಬಂದದ್ದು ಅಥವಾ ಉದ್ದೇಶಪೂರ್ವಕವಾಗಿ ಹೇಳಿದ್ದಾರಾ ಎಂದು ಚರ್ಚೆಗಳು ನಡೆಯುತ್ತಿದೆ.ದೌರ್ಬಲ್ಯದ ಕ್ಷಣದಲ್ಲಿ ಸತ್ಯ ಹೊರಬರುತ್ತದೆ…
ಬೆಂಗಳೂರು :ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ಪ್ರೌಢಶಾಲೆ ವಿಭಾಗ ಫಲಿತಾಂಶ : ದಿವ್ಯಾ ಶ್ರೀಶೈಲ ಗಾಣಿಗೇರ,ಸರ್ಕಾರಿ ಪ್ರೌಢಶಾಲೆ, ಕೆಎಸ್ಆರ್ಪಿ,ಮಚ್ಚೆ,ಬೆಳಗಾವಿ(ಪ್ರಥಮ),ಸಮರ್ಥ ನಾಗರಾಜ ಅರ್ಕಸಾಲಿ ,ಸರ್ಕಾರಿ ಪ್ರೌಢಶಾಲೆ,ಹುನಗುಂದ,ತಾ.ಮುಂಡಗೋಡ,ಉತ್ತರ ಕನ್ನಡ ಜಿಲ್ಲೆ(ದ್ವಿತೀಯ), ಚೈತನ್ಯ ಕೆ.ಎಂ.ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ, ಕೊಡಗು ಜಿಲ್ಲೆ(ತೃತೀಯ) ಪದವಿಪೂರ್ವ ಕಾಲೇಜು ವಿಭಾಗ ಫಲಿತಾಂಶ : ವಿಜಯಕುಮಾರ್ ಬ.ದೊಡ್ಡಮನಿ,ಸರ್ಕಾರಿ ಪ.ಪೂ.ಕಾಲೇಜು, ಮುಳಗುಂದ,ಗದಗ ಜಿಲ್ಲೆ (ಪ್ರಥಮ), ಪರೀಕ್ಷಾನಂದ್, ಮರಿಮಲ್ಲಪ್ಪ ಪ.ಪೂ.ಕಾಲೇಜು,ಮೈಸೂರು (ದ್ವಿತೀಯ),ಗೋರಮ್ಮ,ಬಾಲಕಿಯರ ಸರ್ಕಾರಿ ಪ.ಪೂ.ಕಾಲೇಜು,ಕೋಲಾರ(ತೃತೀಯ) ಪದವಿ/ಸ್ನಾತಕೋತ್ತರ ವಿಭಾಗ : ಫಲಿತಾಂಶ ಪ್ರವೀಣ್ ನಿಂಗಪ್ಪ ಕಿತ್ನೂರ,ಕನ್ನಡ ವಿ.ವಿ.ಹಂಪಿ,ವಿಜಯನಗರ ಜಿಲ್ಲೆ (ಪ್ರಥಮ), ಶರಣಪ್ಪ,ತುಮಕೂರು ವಿ.ವಿ.ತುಮಕೂರು(ದ್ವಿತೀಯ), ನಸೀಮಾ ಇ.ಚಪ್ಪರಬಂದ್,ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿಜಯಪುರ (ತೃತೀಯ) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ,ಗಾಂಧೀಜಿ ವಿಚಾರದಲ್ಲಿ ಸತ್ಯಾಗ್ರಹ,ಅಸ್ಪೃಶ್ಯತೆ ನಿವಾರಣೆಗೆ ಗಾಂಧೀಜಿಯವರ ಪ್ರಯೋಗಗಳು,ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ಸ್ವರಾಜ್, ಆರ್ಥಿಕ…
ಧಾರವಾಡ : ಇಂದು ಧಾರವಾಡದಲ್ಲಿ ವರುಣ ಅಬ್ಬರಿಸಿದ್ದು, ಭಾರಿ ಮಳೆಯಿಂದಾಗಿ ಸಂಪೂರ್ಣವಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಅಲ್ಲದೆ ದೇವಸ್ಥಾನಕ್ಕೆ ನೀರು ನುಗ್ಗಿರುವ ಘಟನೆ ಕೂಡ ನಡೆದಿದೆ. ಹೌದು ಧಾರವಾಡದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ದೇಗುಲಕ್ಕೆ ನೀರು ನುಗ್ಗಿದೆ. ಶಿವಾಜಿ ವೃತ್ತದ ಬಳಿಯ ತುಳಜಾಭವಾನಿ ದೇಗುಲ ಸಂಪೂರ್ಣವಾಗಿ ಜಲಾವೃತವಾಗಿದೆ. ದೇವಸ್ಥಾನವನ್ನು ಸಂಪೂರ್ಣವಾಗಿ ಮಳೆಯ ನೀರು ಆವರಿಸಿಕೊಂಡಿದೆ. ಧಾರಾಕಾರ ಮಳೆಗೆ ಧಾರವಾಡದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಮೈಸೂರು : ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಹೊರವಲಯದ ಉತ್ತನಹಳ್ಳಿ ಸಮೀಪದಲ್ಲಿ ನಡೆಯುವ ಯುವ ದಸರಾ ಕಾರ್ಯಕ್ರಮ ಸ್ಥಳವನ್ನು ಇಂದು ಪರಿಶೀಲಿಸಿದರು. ಕಾರ್ಯಕ್ರಮದ ಆಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ನಾಡಹಬ್ಬ ದಸರಾ ಮಹೋತ್ಸವದಲ್ಲಿ ನಡೆಯುವ ಆಕರ್ಷಕ ಕಾರ್ಯಕ್ರಮಗಳಲ್ಲಿ “ಯುವ ದಸರಾ” ಪ್ರಮುಖವಾಗಿದ್ದು, ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಕಾರ್ಯಕ್ರಮ ವೀಕ್ಷಣೆಗೆ ಆಗಮಿಸುವರು. ಹೀಗಾಗಿ ಅಗತ್ಯ ಸೌಲಭ್ಯವನ್ನು ಕಲ್ಪಿಸುವಂತೆ ಸೂಚಿಸಿದರು. ಯುವ ದಸರಾಗೆ ಸಹಸ್ರಾರು ಸಂಖ್ಯೆಯಲ್ಲಿ ಯುವಜನರು ಆಗಮಿಸಿ ಸಂಭ್ರಮಿಸುತ್ತಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವುದರಿಂದ ಯಾವುದೇ ಅನಾನುಕೂಲ ಉಂಟಾಗದಂತೆ ಅಚ್ಚುಕಟ್ಟಾಗಿ ಎಲ್ಲಾ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸಲಹೆ ನೀಡಿದರು. ನಗರದಿಂದ ಬರುವ ದಾರಿಯುದ್ದಕ್ಕೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬೀದಿದೀಪದ ವ್ಯವಸ್ಥೆ ಮಾಡಬೇಕು. ವಾಹನ ಪಾರ್ಕಿಂಗ್ ಸ್ಥಳದಲ್ಲಿ ವ್ಯವಸ್ಥಿತವಾಗಿ ನಿಲ್ಲಿಸಲು ಸೂಚನಾ ಫಲಕ ಅಳವಡಿಸಿ ಮಾರ್ಗದರ್ಶನ ನೀಡಬೇಕು ಎಂದರು.ಬಹುಮುಖ್ಯವಾಗಿ ಮಹಿಳೆಯರು ಹೆಚ್ಚಿನ ಭದ್ರತೆ ಒದಗಿಸಬೇಕು. ರಾತ್ರಿ ವೇಳೆ ಕಾರ್ಯಕ್ರಮ…