Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಇದೀಗ ಕರ್ನಾಟಕ ಲೋಕಸೇವಾ ಆಯೋಗವು ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಮತ್ತು ಈ ಹಿಂದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಕನ್ನಡ ಕಡ್ಡಾಯ ಪರೀಕ್ಷೆ ಬರೆದಿರುವಂತಹ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ‘ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ’ ವಿನಾಯಿತಿ ನೀಡಿರುವುದಾಗಿ ಪ್ರಕಟಿಸಿದೆ. ಎಸ್ಸೆಸ್ಸೆಲ್ಸಿ ಅಥವಾ ರಾಜ್ಯ ಸರ್ಕಾರವು ಅದಕ್ಕೆ ತತ್ಸಮಾನವೆಂದು ಘೋಷಿಸಿದ ಯಾವುದೇ ಪರೀಕ್ಷೆಯಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿರುವ, ಈ ಹಿಂದೆ ಆಯೋಗ ಅಥವಾ ಯಾವುದೇ ಆಯ್ಕೆ ಪ್ರಾಧಿಕಾರವು ನಡೆಸಿದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದೆ. ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರು ಉಳಿಕೆ ಮೂಲವೃಂದದ 70 ಮತ್ತು ಹೈದರಾಬಾದ್ ಕರ್ನಾಟಕ ವೃಂದದ 6 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯ ಟ್ಯಾಬ್‌ನಲ್ಲಿ ಏ.24ರೊಳಗೆ ಮಾಹಿತಿ…
ಶ್ರೀನಗರ : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಜಮ್ಮು ಕಾಶ್ಮೀರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಭಯೋತ್ಪಾದಕರ ನಿವಾಸಗಳನ್ನು ಭಾರತೀಯ ಸೇನೆ ದ್ವಂಸಗೊಳಿಸಿದೆ. ಹೌದು ಕಳೆದ ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಉಗ್ರರ ದಾಳಿಯಲ್ಲಿ ಆದಿಲ್ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದ್ದು, ಪಾಕಿಸ್ತಾನದಲ್ಲಿ ಭಯೋತ್ಪಾದಕ ಆದಿಲ್ ಉಗ್ರ ತರಬೇತಿ ಪಡೆದಿದ್ದ. 2018 ರಲ್ಲಿ ಆದಿಲ್ ಪಾಕಿಸ್ತಾನಕ್ಕೆ ತೆರಳಿದ್ದ. ಇದೀಗ ಆತನ ಮನೆಯನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಅದೇ ರೀತಿಯಾಗಿ ದಕ್ಷಿಣ ಕಾಶ್ಮೀರದಲ್ಲಿರುವ ಮತ್ತೋರ್ವ ಉಗ್ರ ಆಸಿಫ್ ಶೇಕ್ ನಿವಾಸವನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಲಷ್ಕರ್ ಉಗ್ರರಾದ ಆದಿಲ್ ಹಾಗು ಆಸಿಫ್ ಶೇಕ್ ನಿವಾಸವನ್ನು ಧ್ವಂಸಗೊಳಿಸಲಾಗಿದೆ. ದಕ್ಷಿಣ ಕಾಶ್ಮೀರದಲ್ಲಿ ಇರುವಂತಹ ಜಿಲ್ಲೆಯಲ್ಲಿ ಬಿಜ್ ಬೆಹರಾದಲ್ಲಿರುವ ಆದಿಲ್ ನಿವಾಸ ಧ್ವಂಸಗೊಳಿಸಲಾಗಿದೆ. ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಈ ಇಬ್ಬರು ಉಗ್ರರು ಪ್ರಮುಖ ಪಾತ್ರ ವಹಿಸಿದ್ದರು.
ರಾಮನಗರ : ಬೆಂಗಳೂರಿನ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಉತ್ತರ ರಿಕ್ಕಿ ರೈ ಮೇಲೆ ಇತ್ತೀಚಿಗೆ ಬಿಡದಿಯ ಬಳಿ ಫೈರಿಂಗ್ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೃಕ್ಕಿರೈ ಗನ್ ಮ್ಯಾನ್ ವಿಠ್ಠಲ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎನ್ನಲಾಗಿದೆ. ಹೌದು ರಿಕ್ಕಿ ರೈ ಮೇಲೆ ಫೈರಿಂಗ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗನ್ ಮ್ಯಾನ್ ಅರೆಸ್ಟ್ ಆಗಿದ್ದು, ಬಂಧಿತ ಆರೋಪಿಯನ್ನು ರಾಮನಗರ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ರಿಕ್ಕಿ ರೈ ಗನ್ ಮ್ಯಾನ್ ವಿಠ್ಠಲ್ ಬಂಧಿತ ಆರೋಪಿಯಾಗಿದ್ದು, ಅವರನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಕರಣದ ಹಿನ್ನೆಲೆ? ಬೆಂಗಳೂರಿನ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಕಿರಿಯ ಪುತ್ರ ಹಾಗೂ ಉದ್ಯಮಿ ರಿಕ್ಕಿ ರೈ ಅವರ ಮೇಲೆ ಕಳೆದ ಏಪ್ರಿಲ್ 18 ರಂದು ರಾಮನಗರದ ಬಿಡದಿ ಬಳಿ ಫೈರಿಂಗ್ ನಡೆದಿತ್ತು. ರಾತ್ರಿ 11:30ರ ಸುಮಾರಿಗೆ…
ಬೆಂಗಳೂರು : ಅಧಿಕಾರದಲ್ಲಿ ಇಲ್ಲದೆ ಇದ್ದರೂ ಕೂಡ ಮಾಜಿ ಶಾಸಕರು ಸಂಸದರು ರಾಷ್ಟ್ರೀಯ ಲಾಂಛನ, ರಾಷ್ಟ್ರೀಯ ಧ್ವಜ ಹಾಗೂ ಸರ್ಕಾರದ ಲೆಟರ್ ಹೆಡ್ ಗಳನ್ನು ಬಳಸುತ್ತಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಆಕ್ರೋಶ ಹೊರ ಹಾಕಿದ್ದು, ಇದೀಗ ರಾಷ್ಟ್ರೀಯ ಲಾಂಛನಗಳ ಬಳಕೆಗೆ ಸಂಬಂಧಿಸಿದಂತೆ ಹಲವು ಮಾರ್ಗಸೂಚಿಗಳನ್ನು ರಚಿಸಿ ಆದೇಶ ಹೊರಡಿಸಿದೆ. ಮಾಜಿ ಶಾಸಕರು, ಸಂಸದರು ರಾಷ್ಟ್ರೀಯ ಲಾಂಛನಗಳು ಮತ್ತು ಧ್ವಜಗಳನ್ನು ತಮ್ಮ ಲೆಟರ್‌ಹೆಡ್ ಹಾಗೂ ವಾಹನಗಳಿಗೆ ಬಳಕೆ ಮಾಡುತ್ತಿರುವುದು ನಿಜಕ್ಕೂ ದುರುದೃಷ್ಠಕರ ಎಂದಿರುವ ಹೈಕೋರ್ಟ್, ರಾಷ್ಟ್ರೀಯ ಲಾಂಚನಗಳು ಮತ್ತು ಧ್ವಜದ ಹೆಸರುಗಳನ್ನು ಬಳಕೆ ತಡೆಯಲು ಕೋರಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಸಾರ್ವಜನಿಕ ಸ್ಥಳಗಳು ಮತ್ತು ವಾಹನಗಳಲ್ಲಿ ರಾಷ್ಟ್ರೀಯ ಚಿಹ್ನೆಗಳು ಮತ್ತು ಲಾಂಛನಗಳನ್ನು ಅನಧಿಕೃತ ಬಳಕೆ ಮತ್ತು ದುರುಪಯೋಗ ತಡೆಗಟ್ಟಲು 1950ರ ಲಾಂಛನಗಳು ಮತ್ತು ಹೆಸರುಗಳ (ಅನುಚಿತ ಬಳಕೆ ತಡೆಗಟ್ಟುವಿಕೆ)…
ನವದೆಹಲಿ : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯಿಂದ ಇಬ್ಬರು ಕನ್ನಡಿಗರು ಸೇರಿದಂತೆ 30ಕ್ಕೂ ಹೆಚ್ಚು ಪ್ರವಾಸಿಗರು ಬಲಿಯಾಗಿದ್ದಾರೆ ಘಟನೆ ಬೆನ್ನಲ್ಲೇ ಭಾರತ ಪಾಕಿಸ್ತಾನದ ವಿರುದ್ಧ ಹಲವು ಕಠಿಣ ಕ್ರಮ ಕೈಗೊಂಡಿದ್ದು, ಇದೀಗ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಬಾಲ ಬಿಚ್ಚಿದ್ದು, ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ. ಹೌದು ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಭಾರತ ಮತ್ತು ಪಾಕಿಸ್ತಾನದ ಗಡಿ ಭಾಗದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಮಾಹಿತಿ ಪ್ರಕಾರ ಎಲ್ ಓ ಸಿ ಯಲ್ಲಿ ಪಾಕ್ ಸೇನೆಯಿಂದ ಗುಂಡಿನ ದಾಳಿ ನಡೆದಿದ್ದು, ಪಾಕ್ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯಿಂದಲೂ ಫೈರಿಂಗ್ ನಡೆಸಲಾಗಿದೆ. ಪಾಕ್ ಸೇನಾ ಶಿಬಿರಗಳ ಮೇಲೆ ಭಾರತ ಫೈರಿಂಗ್ ಮಾಡಿದೆ ಎಂದು ತಿಳಿದುಬಂದಿದೆ. ನಿಯಂತ್ರಣ ರೇಖೆಯ ಕೆಲವು ಸ್ಥಳಗಳಲ್ಲಿ ಪಾಕಿಸ್ತಾನ ಸೇನೆಯು ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿತು. ಭಾರತೀಯ ಸೇನೆಯು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿತು. ಯಾವುದೇ ಸಾವುನೋವು ಸಂಭವಿಸಿಲ್ಲ. ಹೆಚ್ಚಿನ ವಿವರಗಳನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ…
ಕೊಡಗು : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಕಾಡಾನೆ ದಾಳಿಯಿಂದ ಸೊಳ್ಳೆಕೊಡಿ, ಚಿನ್ನಪ್ಪ (70) ಇದೀಗ ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಬಹಿರ್ದೆಸೆಗೆ ತೆರಳಿದ್ದಾಗ ವೃದ್ಧನ ಮೇಲೆ ಕಾಡಾನೆ ದಾಳಿ ಮಾಡಿದೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ ಪುವಯ್ಯ ಭೇಟಿ ನೀಡಿದ್ದಾರೆ. ಎರಡು ದಿನಗಳಲ್ಲಿ ಕಾಡಾನೆಗಳಿಗೆ ಇಬ್ಬರು ಬಲಿಯಾಗಿದ್ದಾರೆ. ಪಾಲಿ ಬೆಟ್ಟದಲ್ಲಿ ನಿನ್ನೆ ಕಾಡಾನೆ ವ್ಯಕ್ತಿ ಒಬ್ಬನನ್ನು ಬಲಿ ಪಡೆದಿತ್ತು.
ಬೆಂಗಳೂರು : ಸರಕು ಸಾಗಣೆ ಮಾಡಲು 20 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯೊಬ್ಬರು ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ವಾಣಿಜ್ಯ ತೆರಿಗೆ ಪರಿವೀಕ್ಷಕ ಎಂ.ಆರ್. ನಿಜಾನಂದಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಖಾಸಗಿ ವ್ಯಕ್ತಿ ಮನೋಜ್ ಎಂಬುವವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ನಗರದ ನಾಗರಭಾವಿ ಬಳಿಯ ನಮ್ಮೂರ ತಿಂಡಿ ಹೊಟೇಲ್ ಬಳಿ ಮನೋಜ್ ಅವರಿಂದ ಆರೋಪಿ 20 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ಅಧಿಕಾರಿಗಳು ಸರಕು ಸಾಗಾಣಿಕೆ ಕಂಪನಿಗಳ ಮಾಲೀಕರ ಕಡೆಯಿಂದ ಪ್ರತಿ ತಿಂಗಳು ಲಂಚದ ಹಣವನ್ನು ಪಡೆದುಕೊಂಡು, ದೆಹಲಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆದ್ದಾರಿ ಮಾರ್ಗವಾಗಿ ಪಾನ್ ಮಸಾಲವನ್ನು ಸಾಗಾಣಿಕೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದರು. ಕಾನೂನನ್ನು ಪಾಲಿಸದೆ ಖಾಸಗಿ ಕಂಪನಿ ಹಾಗೂ ಖಾಸಗಿ ಜನರಿಗೆ ಕಾನೂನು ಬಾಹಿರ ಲಾಭ…
ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಹೆಸರು ಬಳಸಿ ಐಶ್ವರ್ಯಗೌಡ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ನಿವಾಸದ ಮೇಲೆ ದಾಳಿ ಮಾಡಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದೀಗ ಇಂದು ಕೂಡ ಇಡಿ ಅಧಿಕಾರಿಗಳ ಶೋಧ ಮುಂದುವರೆದಿದೆ. ಹೌದು ಇಡಿ ಅಧಿಕಾರಿಗಳು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದಲ್ಲಿ ಪರಿಶೀಲನೆ ಇಂದು ಕೂಡ ಮುಂದುವರಿಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಶಾಸಕ ವಿನಯ್ ಕುಲಕರ್ಣಿ ನಿವಾಸದಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ. ಬ್ಯಾಂಕ್, ಆಸ್ತಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಶಾಸಕ ವಿನಯ್ ಕುಲಕರ್ಣಿ ಮನೆಯಲ್ಲಿಯೇ ಇದ್ದಾರೆ. ಐಶ್ವರ್ಯ ಗೌಡ ವಂಚನೆ ಕೇಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರುವ ಶಂಕೆ ವ್ಯಕ್ತವಾಗಿದ್ದು, ಐಶ್ವರ್ಯ ಗೌಡ ಐಶಾರಾಮಿ ಕಾರು ಶಾಸಕ ವಿನಯ್ ಕುಲಕರ್ಣಿ ಮನೆಯಲ್ಲಿ ಪತ್ತೆಯಾಗಿತ್ತು.…
ಬೆಳಗಾವಿ : ಬಡ್ಡಿ ವ್ಯವಹಾರಕ್ಕಾಗಿ ಇಬ್ಬರು ಸಹೋದರರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ತಾಲೂಕಿನ ಮುಚ್ಚಂಡಿಯಲ್ಲಿ ನಡೆದಿದೆ. ಬಡ್ಡಿ ವ್ಯವಹಾರಕ್ಕಾಗಿ ಸಹೋದರರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಬಸವರಾಜ ಬಿರಾದಾರ್ ಹಾಗೂ ಜಗದೀಶ್ ಬಿರಾದಾರ್ ಎನ್ನುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಚೇತನ್ ಗುಡದೇವ್ವಗೋಳನಿಂದ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ. ಈ ಒಂದು ಗಲಾಟೆಯಲ್ಲಿ ಎರಡು ಕಡೆಯವರಿಗೂ ತಲೆಗೆ ಗಾಯಗಳಾಗಿವೆ. ಮೂರು ತಿಂಗಳ ಹಿಂದೆ ಬಸವರಾಜ್ ಚೇತನ್ ಎನ್ನುವ ವ್ಯಕ್ತಿಯ ಬಳಿ ಹಣ ಪಡೆದಿದ್ದ. 10 ಸಾವಿರ ಸಾಲ ಪಡೆದಿದ್ದ. ಬಡ್ಡಿ ಹಣ ಕೊಡಲಿಲ್ಲ ಎಂದು ಮಾರಕಾಸ್ತ್ರಗಳಿಂದ ಇದೀಗ ಹಲ್ಲೆ ನಡೆಸಿದ್ದಾರೆ. ಬಸವರಾಜ ಮತ್ತು ಜಗದೀಶ್ ತಲೆಗೆ ಗಂಭೀರವಾದ ಗಾಯಗಳಾಗಿವೆ. ಚೇತನ್ ಗುಡದೇವ್ವಗೋಳ ತಲೆಗೂ ಗಾಯಗಳಾಗಿದ್ದು ಎಲ್ಲರನ್ನೂ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು : ಭತ್ತದ ರಾಶಿ ಮಾಡಲು ಕೂಲಿಕಾರರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಒಂದು ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ಎಡದಂಡೆ ಉಪ ಕಾಲುವೆಯಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 6 ಜನರಿಗೆ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗಂಗಮ್ಮ (40) ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡ ಆರು ಜನರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ರಾಯಚೂರಿಗೆ ದಾಖಲಿಸಲಾಗಿದೆ.ಭತ್ತದ ರಾಶಿ ಮಾಡಲು ಕೂಲಿಕಾರರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಘಟನೆ ತಿಳಿಯುತ್ತಲೇ ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿಗಳ ಜೊತೆ ದೂರವಾಣಿಯಲ್ಲಿ ಮಾತನಾಡಿ ರಾಯಚೂರಿಗೆ ಬಂದ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.












