Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಮಹಿಷಾ ದಸರಾ ಆಚರಣೆಗೆ ಅವಕಾಶ ಇಲ್ಲ ಎಂದು ಈಗಾಗಲೇ ತಿಳಿಸಿತ್ತು. ಆದರೂ ಇಂದು ಮೈಸೂರಿನ ಟೌನ್ ಹಾಲ್ ಬಳಿ ಮಹಿಷ ದಸರಾ ಸಮಿತಿಯ ಸದಸ್ಯರು ಮಹಿಷ ಪುಷ್ಪಾರ್ಚನೆಗೆ ಅವಕಾಶ ಮಾಡಿಕೊಡಿ ಎಂದು ದಿಢೀರ್ ಪ್ರತಿಭಟನೆ ಮಾಡಿರುವ ಘಟನೆ ನಡೆದಿದೆ. ಹೌದು ಮಹಿಷ ಮೂರ್ತಿ ಪುಷ್ಪಾರ್ಚನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪುಷ್ಪಾರ್ಚನೆಗೆ ಅವಕಾಶ ಮಾಡಿಕೊಡಿ ಎಂದು ದಿಢೀರ್ ಎಂದು ಭಾರಿ ಪ್ರತಿಭಟನೆ ನಡೆಸಲಾಗಿದೆ. ಮೈಸೂರಿನ ಟೌನ್ ಹಾಲ್ನಲ್ಲಿ ಸಮಿತಿಯ ಸದಸ್ಯರಿಂದ ಹೈಡ್ರಾಮ ನಡೆದಿದೆ. ಈ ವೇಳೆ ಪೊಲೀಸರ ಜೊತೆ ಮತ್ತು ಮಹಿಷ ದಸರಾ ಸಮಿತಿ ಸದಸ್ಯರ ನಡುವೆ ಚಾಮುಂಡಿ ಬೆಟ್ಟದಲ್ಲಿ ವಾಗ್ವಾದ ನಡೆದಿದೆ.
ದಾವಣಗೆರೆ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮತ್ತೊಂದು ಬಿಗ್ ಪ್ಲಾನ್ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಠಾವೋ ಎಂಬ ಅಭಿಯಾನ ಆರಂಭ ಮಾಡುವ ಕುರಿತು ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹೌದು ದಾವಣಗೆರೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹಠಾವೋ ಆರಂಭದ ಕುರಿತು ಯತ್ನಾಳ ನೇತ್ರತ್ವದಲ್ಲಿ ಜೆಐಎಂಟಿ ಸಭಾಂಗಣದಲ್ಲಿ ಸಭೆ ನಡೆಯುತ್ತಿದೆ. ಬಿಜೆಪಿ ಮಾಜಿ ಸಂಸಾರದ ಪ್ರತಾಪ್ ಸಿಂಹ, ಜಿ.ಎಂ ಸಿದ್ದೇಶ್ವರ ಹಾಗೂ ಹರಿಹರದ ಬಿಜೆಪಿ ಶಾಸಕ ಹರೀಶ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಜಿಎಂಐಟಿ ಅತಿಥಿ ಗೃಹದ ವಿಐಪಿ ರೂಮ್ನಲ್ಲಿ ಗುಪ್ತವಾಗಿ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಒಂದು ಬಂಡಾಯ ನಾಯಕರ ಸಭೆಗೆ ರಮೇಶ್ ಜಾರಕಿಹೊಳಿ ಗೈರಾಗಿದ್ದಾರೆ.ಈಗಾಗಲೇ ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವು ಕಡೆ ಸಭೆ ನಡದಿತ್ತು. ದಾವಣಗೆರೆಯಲ್ಲಿ ಬಿಜೆಪಿ ಬಂಡಾಯ…
ಮೈಸೂರು : ಹಂದಿ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಕೇರಳ ಮೂಲದ ಮ್ಯಾನೇಜರ್ ನನ್ನು ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡಿಗೆ ಸಮೀಪದ ಹೆಬ್ಬಳ್ಳ ಗ್ರಾಮದಲ್ಲಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿಯನ್ನು ಕೇರಳದ ವಯನಾಡ್ ಜಿಲ್ಲೆಯ ಗಿರೀಶ್ ಅಬ್ರಹಂ(38) ಎಂದು ತಿಳಿದುಬಂದಿದೆ.ಹಂತಕನನ್ನು ಶಂಸುದ್ದಿನ್ ಎಂದು ಹೇಳಲಾಗುತ್ತಿದ್ದು, ಇಬ್ಬರು ಕೂಡ ಒಂದೇ ಹಂದಿ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದರು.ಆರೋಪಿ ಶಂಸುದ್ದೀನ್ ತನಗೆ ಹೆಚ್ಚಿನ ಕೆಲಸ ಹೇಳುವುದು, ತನ್ನ ವಿರುದ್ದ ಮಾಲಕರಿಗೆ ಚಾಡಿ ಹೇಳುತ್ತಾನೆಂಬ ಕಾರಣಕ್ಕೆ ಶುಕ್ರವಾರ ರಾತ್ರಿ ಶೆಡ್‌ನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಶಂಸುದ್ದೀನ್ ಚಾಕುವಿನಿಂದ ಗಿರೀಶ್ ಬೆನ್ನಿಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುವನ್ನು ಸಹಕಾರ್ಮಿಕರು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಗಿರಿಶ್ ಅಬ್ರಹಂ ಕೊಲೆ ಸಂಬಂಧ ಸಹೋದರ ವಿನೋದ್ ಅಬ್ರಹಂ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…
ಬೆಂಗಳೂರು : ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅವರ ಅಕ್ರಮಗಳ ಕುರಿತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಇಂದು ಆರೋಪ ಮಾಡಿದ್ದರು ಇವರ ಒಂದು ಆರೋಪಕ್ಕೆ ಇದೀಗ ಎಡಿಜಿಪಿ ಚಂದ್ರಶೇಖರ್ ಅವರು ಏಕವಚನದಲ್ಲಿರುವ ವಾಗ್ದಾಳಿ ನಡೆಸಿದ್ದು ಅವನು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಆತನೊಬ್ಬ ಆರೋಪಿ ಎಂದು ವಾಗ್ದಾಳಿ ನಡೆಸಿದ್ದಾರೆ. ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಗಂಭೀರವಾದಂತಹ ಆರೋಪ ಮಾಡಿದ್ದರು. ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಆರೋಪಕ್ಕೆ ಇದೀಗ ಚಂದ್ರಶೇಖರ್ ಟಾಂಗ್ ನೀಡಿದ್ದಾರೆ. ತಮ್ಮ ಸಿಬ್ಬಂದಿಗೆ ಪತ್ರದ ಮೂಲಕ ಎಡಿಜಿಪಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ. ಪ್ರಕರಣ ಒಂದರ ಆರೋಪಿ ಎಂದು ಪತ್ರ ಪ್ರಾರಂಭಿಸಿರುವ ಚಂದ್ರಶೇಖರ್, ಇಂದು ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ನನ್ನ ಮೇಲೆ ಹೆಚ್‍ಡಿ ಕುಮಾರಸ್ವಾಮಿ ಸುಳ್ಳು ಆರೋಪದ ಜೊತೆಗೆ ಬೆದರಿಕೆ ಹಾಕಿದ್ದಾರೆ.ಎಸ್ಐಟಿ ಸಮಕ್ಷಮ ಪ್ರಾಧಿಕಾರದಿಂದ ಪ್ರಾಸಿಕ್ಯೂಷನ್ ಮಂಜೂರಾತಿ ಕೋರಿದೆ. ಆರೋಪಿ ಹೆಚ್‍ಡಿ ಕುಮಾರಸ್ವಾಮಿ ಜಾಮೀನು ಪಡೆದಿದ್ದಾರೆ.ನಮ್ಮನ್ನು ಕುಗ್ಗಿಸುವ ಪ್ರಯತ್ನ ಹಾಗೂ ಭಯ ಹುಟ್ಟಿಸುವ ಉದ್ದೇಶ…
ಧಾರವಾಡ : ಬಡ್ಡಿಯ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ : ಆರೋಪಿಗಳ ಬಂಧನಕ್ಕೆ ಕುಟುಂಬಸ್ಥರ ಆಗ್ರಹ
ಧಾರವಾಡ : ಧಾರವಾಡದಲ್ಲಿ ಬಡ್ಡಿ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವ್ಯಕ್ತಿ ಒಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನಜೀರ್ ಸಾಬ್ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡ ನಜೀರ್ ಸಾಬ್ ಮಂಡಕ್ಕಿ ವ್ಯಾಪಾರ ಮಾಡುತ್ತಿದ್ದರು. ವ್ಯಕ್ತಿ ಒಬ್ಬರಿಂದ 1. 20 ಲಕ್ಷ ಸಾಲ ಪಡೆದಿದ್ದ ನಜೀರ್, ಎರಡು ವರ್ಷದಿಂದ 2.50 ಲಕ್ಷ ರೂಪಾಯಿ ಬಡ್ಡಿ ಕಟ್ಟುತ್ತಾ ಬಂದಿದ್ದಾರೆ. ಎರಡು ತಿಂಗಳಿಂದ ಬಡ್ಡಿ ಕಟ್ಟದಿದ್ದಕ್ಕೆ ವ್ಯಕ್ತಿ ಗಲಾಟೆ ಮಾಡಿದ್ದಾನೆ.ಮನೆ ಖಾಲಿ ಮಾಡಿಸುವುದಾಗಿ ಕೂಡ ವಾರ್ನಿಂಗ್ ಮಾಡಿದ್ದ. ಇದರಿಂದ ನಜೀರ್ ಸಾಬ್ ಮನನೊಂದು ವಿಷ ಸೇವಿಸಿದ್ದ ಸೆಪ್ಟೆಂಬರ್ 26ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಕೂಡಲೇ ನಜೀರ್ ಸಾಬ್ ನನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸಿದೆ ನಜೀರ್ ಸಾವನಪ್ಪಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ.
ಚಿತ್ರದುರ್ಗ : ಇತ್ತೀಚಿಗೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಪ್ರಕರಣ ಇನ್ನೂ ಮಾಸುವ ಮುನ್ನವೇ ಚಿತ್ರದುರ್ಗದಲ್ಲಿ ಮತ್ತೊಂದು ಗಲಾಟೆ ನಡೆದಿದೆ. ಆದರೆ ಇದು ಹಿಂದೂ ಮುಸ್ಲಿಂ ಗಲಾಟೆಯಲ್ಲ ಬದಲಾಗಿ, ಹಿಂದೂ ಕಾರ್ಯಕರ್ತರು ಹಾಗೂ ನಟ ದರ್ಶನ್ ಅವರ ಅಭಿಮಾನಿಗಳ ನಡುವೆ ನಡೆದಿದ್ದ ಗಲಾಟೆ ಎಂದು ತಿಳಿದುಬಂದಿದೆ. ಇಡೀ ಕರ್ನಾಟಕ ರಾಜ್ಯದಲ್ಲಿ ಅತ್ಯಂತ ದೊಡ್ಡ ಮೆರವಣಿಗೆ ಎಂದು ಹೆಸರುವಾಸಿಯಾಗಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರು ಹಾಗೂ ನಟ ದರ್ಶನ್ ಅವರ ಅಭಿಮಾನಿಗಳ ನಡುವೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಹೌದು ಇಂದು ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ನಟ ದರ್ಶನ್ ಅವರ ಭಾವಚಿತ್ರ ಇರುವ ಬಾವುಟ ಹಾರಾಡಿದೆ. ಈ ಕಾರಣಕ್ಕೆ ಮೆರವಣಿಗೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅಷ್ಟೇ ಅಲ್ಲ, ಈ ಸಂದರ್ಭದಲ್ಲಿ ಹಿಂದೂ ಮಹಾಗಣಪತಿ ಕಾರ್ಯಕ್ರಮ ಆಯೋಜಿಸಿರುವ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಹಾಗು ದರ್ಶನ್…
ಮೈಸೂರು : ರೋಗಿಯ ಜೀವಗಳನ್ನು ಉಳಿಸುವ, ಕಾಪಾಡುವ ವೈದ್ಯರನ್ನು ವೈದ್ಯೋ ನಾರಾಯಣ ಹರಿ ಎಂದು ಕರೆಯುತ್ತಾರೆ.ಈ ಪದದ ಮಹತ್ವ ಕಡಿಮೆ ಆಗಬಾರದು ಎಂದು ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು. ಇಂದು ಮೈಸೂರು ಮೆಡಿಕಲ್ ಕಾಲೇಜುಗೆ ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಈ ಒಂದು ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿ, ವೈದ್ಯೋ ನಾರಾಯಣ ಹರಿ ಎಂದು ವೈದ್ಯರನ್ನು ಕರೆಯುತ್ತಾರೆ. ಈ ಪದದ ಮಹತ್ವ ಕಡಿಮೆಯಾಗಬಾರದು ಎಂದು ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು ಹೇಳಿದರು. ಕೆಲವು ವೈದ್ಯರು ಸ್ಟಿಫ್ ಆಗಿರುತ್ತಾರೆ. ನನ್ನ ತಾಯಿಗೆ ಕ್ಯಾನ್ಸರ್ ಕಾಯಿಲೆ ಬಂದಿತ್ತು ಆಗ ವೈದ್ಯರನ್ನು ಭೇಟಿಯಾಗಲು ಹೋದರೆ ಸ್ಟಿಫ್ ಆಗಿದ್ದರು ವೈದ್ಯರು ಸ್ಟೀಫ್ ಆಗಿ ಇರಬಾರದು. ಜನರ ಜೊತೆ ಬೆರೆಯಬೇಕು ವೈದ್ಯರು ಈ ಸಮಾಜಕ್ಕೆ ಆಸ್ತಿ ಇದ್ದಂತೆ ಎಂದು ಸಿಎಂ ಸಿದ್ದರಾಮಯ್ಯ ವೈದ್ಯರಿಗೆ ಸಲಹೆ ನೀಡಿದರು.
ಮೈಸೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮಾಡಿದ ತಪ್ಪಿನಿಂದ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳು ಬಂದವು.ಒಳ್ಳೆಯ ಆಡಳಿತ ಕೊಡುತ್ತೆ ಅಂತ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದರು ಆದರೆ ಕಾಂಗ್ರೆಸ್ ಮಾಡುತ್ತಿರುವುದು ಏನು? ಎಂದು ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು. ಮೈಸೂರಿನಲ್ಲಿ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾದ FIR ವಿಚಾರವಾಗಿ ಪ್ರತಿಕ್ರಿಯೆ ನೀಡಿದರು ಅವರು, ಸೈಟ್ ವಾಪಸ್ ಕೊಟ್ಟು ತನಿಖೆ ಮಾಡಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಹೇಳಿದ್ದೆ, 14 ಸೇಟು ಅಕ್ರಮವಾಗಿ ಪಡೆದು 62 ಕೋಟಿ ಕೊಡಲಿ ವಾಪಸ್ ಕೊಡುತ್ತೀನಿ ಅಂತ ಹೇಳಿದ್ದರು. ಇಷ್ಟು ವರ್ಷ ಸಂಪಾದನೆ ಮಾಡಿದ ಹೆಸರಿಗೆ ಕಳಂಕ ಬಂದಿದೆ. ಅವರೇ ಕಳಂಕ ತಂದುಕೊಂಡಿದ್ದಾರೆ. ಒಳ್ಳೆಯ ಅಡ್ವೈಸರ್ ಇಟ್ಕೋಬೇಕು. ಬಿಜೆಪಿಯ ತಪ್ಪಿನಿಂದ ಕಾಂಗ್ರೆಸ್ ಗೆ 136 ಸೀಟ್ ಬಂದಿದೆ ಕಾಂಗ್ರೆಸ್ ಒಳ್ಳೆಯ ಆಡಳಿತ ಕೊಡುತ್ತೆ ಅಂತ ರಾಜ್ಯದ ಜನ ಗೆಲ್ಲಿಸಿದ್ದರು ಆದರೆ ಕಾಂಗ್ರೆಸ್ ಮಾಡುತ್ತಿರುವುದು ಏನು? ಎಂದು ಪ್ರಶ್ನಿಸಿದರು. ನಾಳೆ ಚಾಮುಂಡಿ…
ವಿಜಯಪುರ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿ, ಹೋರಾಟ ಪ್ರತಿಭಟನೆ ನಡೆಸುತ್ತಿವೆ ಇದರ ಮಧ್ಯ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪಕ್ಷಾತೀತವಾಗಿ ಬೆಂಬಲಿಸುತ್ತೇನೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ಅವರಿಗೆ ನಾನು ಪಕ್ಷಾತೀತವಾಗಿ ಬೆಂಬಲ ನೀಡುತ್ತೇನೆ. ಅವರ ನೇತೃತ್ವದಲ್ಲಿ ಎಲ್ಲ ಜನಾಂಗದವರಿಗೆ ನ್ಯಾಯ ಕೊಡುವ ಹೋರಾಟ ನಡೆದರೆ, ನಾವು ಅವರೊಂದಿಗೆ ಪಕ್ಷಾತೀತವಾಗಿ ಹೋಗಿ ಸಂಪೂರ್ಣ ಬೆಂಬಲಿಸುತ್ತೇವೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಒಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಸುಮಾರು 82 ಕೋಟಿ ರೂಪಾಯಿಗಳನ್ನು ಸರ್ಕಾರ ತಿಂದು ಹಾಕಿದೆ. ಈ ಒಂದು ಪ್ರಕರಣದ ವಿರುದ್ಧ ನಾವು ಬಸವಕಲ್ಯಾಣದಿಂದ ಬಳ್ಳಾರಿಯವರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಹೈಕಮಾಂಡ್ ಅನುಮತಿ ಮಾತ್ರ ಬೇಕಾಗಿದೆ.ಸಿದ್ದರಾಮಯ್ಯ ಅವರು ಈ ಹಿಂದೆ ಅಹಿಂದ ಮಾಡಿದಾಗ…
ಬೆಂಗಳೂರು : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿರುವ ವಿಚಾರವಾಗಿ ಇದೀಗ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ಸಲ್ಲಿಸಿದ್ದಾರೆ. ಹೌದು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಜಾರಿ ನಿರ್ದೇಶನಲಯಕ್ಕೂ ದೂರು ನೀಡಿದ್ದಾರೆ. ಇ-ಮೇಲ್ ಹಾಗೂ ಪತ್ರ ಬರೆದು ದೂರು ನೀಡಿದ್ದಾರೆ. ಜಾರಿ ನಿರ್ದೇಶನಲಯದ ಬೆಂಗಳೂರು ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಮುಖ್ಯಮಂತ್ರಿಗಳ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು. ಇಂದು ಲೋಕಾಯುಕ್ತ ಎಸ್ ಪಿ ಉದೇಶ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಾಲ್ಕು ತಂಡಗಳ ರಚನೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ED ಗೂ ದೂರು ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ.